ಲೇಖಕ: admin

ಮಡಿಕೇರಿ ಡಿ.5 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ನಿವೇಶನದಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಂಬಂಧ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರ ನೇತೃತ್ವದಲ್ಲಿ ಭೇಟಿಯಾಗಿ ಭವನ ನಿರ್ಮಾಣ ಸಮಿತಿಯ ಮಹಾಪೋಷಕರಾಗಿ ಕಾರ್ಯನಿರ್ವಹಿಸುವಂತೆ ಮತ್ತು ಭವನ ನಿರ್ಮಾಣದ ಕಾರ್ಯದಲ್ಲಿ ಸಹಕರಿಸುವಂತೆ ಕೋರಿದರು. ಈ ಕುರಿತು ಪ್ರತಿಕ್ರಿಯಿಸಿದ ಶಾಸಕರುಗಳು ಸಾಹಿತ್ಯ ಪರಿಷತ್ತಿನ ಭವನಕ್ಕೆ ಸಂಪೂರ್ಣ ಸಹಕಾರ ನೀಡುವುದರೊಂದಿಗೆ ಸರಕಾರದ ಮಟ್ಟದಲ್ಲಿ ಮುಖ್ಯಮಂತ್ರಿಗಳಿಂದ ಅನುದಾನ ಕೊಡಿಸುವುದಲ್ಲದೆ ಜಿಲ್ಲಾ ಮಟ್ಟದಲ್ಲಿಯೂ ಸಂಪೂರ್ಣ ಸಹಕರಿಸುವುದಾಗಿ ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿ ಎಸ್.ಐ ಮುನಿರ್ ಅಹಮದ್, ಸಹ ಕಾರ್ಯದರ್ಶಿ…

Read More

ಮಡಿಕೇರಿ ಡಿ.4 NEWS DESK : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ‘ಅರೆ ವಿಶೇಷ ಕೊಠಡಿ’ಯನ್ನು ಶಾಸಕರಾದ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದ ಹಳೇ ಕಟ್ಟಡದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಅರೆ ವಿಶೇಷ ಕೊಠಡಿಯನ್ನು ಸ್ಥಾಪಿಸಲಾಗಿದ್ದು, ಆರೋಗ್ಯಕ್ಕೆ ಸಂಬಂಧಿಸಿದಂತೆ ವಿಶೇಷ ಆರೋಗ್ಯ ಸೇವೆ ಕಲ್ಪಿಸಲು ಮುಂದಾಗಲಾಗಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹೊಸದಾಗಿ ಒಳರೋಗಿಗಳಿಗೆ ಚೀಟಿ ಬದಲಾಗಿ ರೋಗಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಗೆ ಸಂಬಂಧಿಸಿದಂತೆ ಮಾಹಿತಿ ದೊರೆಯುವಂತಾಗಲು ‘ಪುಸ್ತಕ’ವನ್ನು ಶಾಸಕರು ಇದೇ ಸಂದರ್ಬದಲ್ಲಿ ಬಿಡುಗಡೆ ಮಾಡಿದರು. ಪುಸ್ತಕದಲ್ಲಿ ಪ್ರಯೋಗಾಲಯ ವರದಿ, ಎಕ್ಸ್‍ರೇ, ಯುಎಸ್‍ಜಿ ವರದಿ, ಸಿಟಿ ಸ್ಕ್ಯಾನ್ ವರದಿ, ಸಿಟಿ ಪಿಲ್ಮ್ ವರದಿ, ಎಂಆರ್‍ಐ ಪಿಲ್ಮ್ ವರದಿ, ವಾರ್ಡ್ ಆರೋಗ್ಯ ಸೇವೆ ಸಂಬಂಧಿಸಿದಂತೆ ಮಾಹಿತಿ ಒಳಗೊಂಡಿದೆ. ಸಾಮಾನ್ಯ ವಿಭಾಗ, ಒಟಿ, ವಾರ್ಡ್ ಸೇವಾ ಶುಲ್ಕಗಳು, ರೋಗಿಯ ಆರೋಗ್ಯ ಸಂಬಂಧ ಸಂಪೂರ್ಣ ವಿವರ,…

Read More

ಮಡಿಕೇರಿ ಡಿ.4 NEWS DESK : ಕೊಡಗಿನ ಪರಿಸರಕ್ಕೆ ಮಾರಕವಾಗಿರುವ ಬೃಹತ್ ಲೇಔಟ್ ಹಾಗೂ ಮೆಗಾ ಟೌನ್‍ಶಿಪ್ ಗಳಿಗಾಗಿ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮಾಡುವುದನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕಡಂಗದಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಸಿತು. ಜನಜಾಗೃತಿಯ ನೇತೃತ್ವ ವಹಿಸಿ ಮಾತನಾಡಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕರ್ನಾಟಕ ಭೂ ಸುಧಾರಣಾ ಕಾಯ್ದೆ 2020-21ರ ಲೋಪದೋಷಗಳ ದುರ್ಲಾಭ ಪಡೆದು ಕರ್ನಾಟಕದ 29 ಜಿಲ್ಲೆಗಳ, ಭಾರತದ 29 ರಾಜ್ಯಗಳ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ, ಜಗತ್ತಿನ 193 ದೇಶಗಳ ರಾಜಕಾರಣಿಗಳು, ಅಧಿಕಾರಶಾಹಿಗಳು ಹಾಗೂ ಆರ್ಥಿಕ ಅಪರಾಧಿಗಳು ಕೊಡವ ಲ್ಯಾಂಡ್‍ನಲ್ಲಿ ಬೇನಾಮಿ ಆಸ್ತಿಯನ್ನು ಹೊಂದಿದ್ದು, ಈ ಪವಿತ್ರ ನೆಲೆ, ನೆಲ, ಜಲಮೂಲ ಮತ್ತು ಪ್ರಕೃತಿಯನ್ನು ಲೂಟಿಮಾಡಿ ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು. ಮುಂದೊಂದು ದಿನ ಕಡಿಯತ್ ನಾಡಿನ ಪವಿತ್ರ ಮಲೆತಿರಿಕೆ ದೇವ ನೆಲೆಯ ಕುಂದ್ ಹಾಗೂ ಮನಮೋಹಕ ಚೋಮ ಕುಂದ್ ಮತ್ತು ನಯನ ಮನೋಹರ ಬೆಪ್ಪುನಾಡಿನ ಅಸ್ಮಿತೆ…

Read More

ಮಡಿಕೇರಿ ಡಿ.4 NEWS DESK : ಸಾರ್ವಜನಿಕ ಸೇವೆಗಾಗಿ ಡಿ.8 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನೂತನ ಕಚೇರಿ ಆರಂಭಗೊಳ್ಳಲಿದೆ.  

Read More

ಮಡಿಕೇರಿ ಡಿ.4 NEWS DESK : ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯು ಬಿರುನಾಣಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್  ಸಾಹಿತ್ಯ ಪರಿಷತ್ತಿನ ದ್ಯೆಯುದ್ದೇಶಗಳು, ಕೆಲಸ ಕಾರ್ಯಗಳು, ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾಹಿತಿ ನೀಡಿದರು. ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ಮಾತನಾಡಿ ಹುದಿಕೇರಿ ಹೋಬಳಿ ಜಿಲ್ಲೆಯಲ್ಲಿಯೇ ಒಂದು ಮಾದರಿ ಹೋಬಳಿಯಾಗಬೇಕು ಎಂದರು. ಹುದಿಕೇರಿ ಹೋಬಳಿಯ ಅಧ್ಯಕ್ಷರ ಬಾನಂಗಡ ಅರುಣ್ ಮಾತನಾಡಿ, ಹೋಬಳಿಯ ಕಾರ್ಯಕಾರಿ ಸಮಿತಿಯ ಆಯ್ಕೆ ಇಂದು ನಡೆಯಲಿದ್ದು ಎಲ್ಲರೂ ನನ್ನೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕು ಎಂದು ಕೋರಿಕೊಂಡರು. ನಂತರ ಜಿಲ್ಲಾಧ್ಯಕ್ಷರ ನಿರ್ದೇಶನದಲ್ಲಿ ನಡೆದ ಹೋಬಳಿ ಕಾರ್ಯ ಮಂಡಳಿಯ ಆಯ್ಕೆ ಪ್ರಕ್ರಿಯೆಯಲ್ಲಿ ಗೌರವ ಕಾರ್ಯದರ್ಶಿಯಾಗಿ ಕುಪ್ಪಣಮಾಡ ಬೇಬಿ ನಂಜಮ್ಮ ದೇವಯ್, ಗೌರವ ಕೋಶಾಧಿಕಾರಿಯಾಗಿ ಅಣ್ಣಳಮಾಡ ಭವ್ಯ, ಸಂಘಟನಾ ಕಾರ್ಯದರ್ಶಿಯಾಗಿ ಕರ್ತಮಾಡ ಪಾರ್ವತಿ ವಿಜಯ, ಮಹಿಳಾ ಪ್ರತಿನಿಧಿಯಾಗಿ ನೆಲ್ಲಿರ ಶ್ವೇತಾ…

Read More

ಮಡಿಕೇರಿ ಡಿ.4 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ “ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಪುರುಷ ಲೇಖಕರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಪುರುಷ ಲೇಖಕರು ತಾವು ರಚಿಸಿದ ಕಥೆ, ಕಾದಂಬರಿ, ಕವನ ಸಂಕಲನ ಕೃತಿಗಳ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿ ತಕ್ಕದ್ದು.  2019ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು, ಕಳುಹಿಸುವ ಕೃತಿಗೆ ಯಾವುದೇ ಪ್ರಶಸ್ತಿ ಬಂದಿರಕೂಡದು. ಓರ್ವ ಲೇಖಕ ಒಂದು ಕೃತಿಯನ್ನು ಮಾತ್ರ ಕಳುಹಿಸತಕ್ಕದ್ದು,  ಲಕೊಟೆಯ ಮೇಲೆ *ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಎಂದು ಬರೆಯಬೇಕು. ಕಳುಹಿಸಬೇಕಾದ ವಿಳಾಸ : : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ _94483 46276. ಇಲ್ಲಿಗೆ ದಿನಾಂಕ 25.12.2024 ರ ಒಳಗಾಗಿ ತಲುಪಿಸಬೇಕೆಂದು ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ…

Read More

ಮಡಿಕೇರಿ ಡಿ.4 NEWS DESK : ಕರಿಕೆ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಆಗಿ ಪಿ.ಎಂ.ನಂಜುಂಡ ಹಾಗೂ ಸಹ ಪ್ರಮುಖ್ ಆಗಿ ಜಯಪ್ರಕಾಶ್ ಆಯ್ಕೆಯಾಗಿದ್ದಾರೆ. 1ನೇ ವಾರ್ಡ್ ಅಧ್ಯಕ್ಷರಾಗಿ ಕೆ.ಜಿ.ರತೀಶ್, 2ನೇ ವಾರ್ಡ್ ಅಧ್ಯಕ್ಷರಾಗಿ ಮಧುಸೂದನ್, 3ನೇ ವಾರ್ಡ್ ಅಧ್ಯಕ್ಷರಾಗಿ ಕೆ.ಬಿ.ರಾಜೇಶ್ ಹಾಗೂ 4ನೇ ವಾರ್ಡ್ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ನೇಮಕಗೊಂಡಿದ್ದಾರೆ.  ಮಡಿಕೇರಿ ಗ್ರಾಮಾಂತರ ಬಿಜೆಪಿ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

Read More

ಮಡಿಕೇರಿ ಡಿ.4 NEWS DESK : ಸಾಮಾಜಿಕ ಜಾಲತಾಣದಲ್ಲಿ ವೀರ ಸೇನಾನಿಗಳಿಗೆ ಅವಹೇಳನ ಮಾಡಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಡಿ.6ರಂದು ಮಡಿಕೇರಿಯಲ್ಲಿ ಶಾಂತಿಯುತ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕದ ಅಧ್ಯಕ್ಷ ಕೊಟ್ಟುಕತ್ತಿರ ಪಿ.ಸೋಮಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಅಪಮಾನಿಸಿರುವ ಪ್ರಕರಣ ಒಂದು ಜನಾಂಗಕ್ಕೆ ಮಾತ್ರ ಸೀಮಿತವಾಗದೆ ಇಡೀ ರಾಷ್ಟ್ರಕ್ಕೆ ಹಾಗೂ ಮಾಜಿ ಸೈನಿಕರಿಗೆ ಮಾಡಿದ ಅವಮಾನವಾಗಿದೆ. ಇಬ್ಬರು ಮಹಾನ್ ಸೇನಾಧಿಕಾರಿಗಳು ಭಾರತೀಯ ಸೇನೆಗೆ ನೀಡಿದ ಕೊಡುಗೆಯನ್ನು ಮತ್ತು ರಕ್ಷಣಾ ಪಡೆಯಲ್ಲಿ ಸಲ್ಲಿಸಿದ ಸೇವೆಯನ್ನು ಸ್ಮರಿಸದೆ ಅಗೌರವ ತೋರಿರುವುದು ಮಾಜಿ ಸೈನಿಕರ ಮನಸ್ಸಿಗೆ ನೋವನ್ನುಂಟುಮಾಡಿದೆ ಎಂದರು. ತಮ್ಮ ಮೂಲ ಹೆಸರನ್ನು ಮರೆಮಾಚಿ ಬೇರೊಂದು ಜಾತಿಯ ಹೆಸರಿನಲ್ಲಿ ಸಂದೇಶ ಕಳುಹಿಸಿದ್ದು, ಅವರ ದುರುದ್ದೇಶ ಏನು ಎಂದು ಸಮಗ್ರ ತನಿಖೆಯಿಂದಷ್ಟೇ ತಿಳಿಯಲು ಸಾಧ್ಯ. ಆದ್ದರಿಂದ ಇದರ ಬಗ್ಗೆ ಸವಿಸ್ತಾರ ತನಿಖೆ ನಡೆಸಿ…

Read More

ಮಡಿಕೇರಿ ಡಿ.4 NEWS DESK : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಜನ ಕಲ್ಯಾಣ ಕಾರ್ಯಕ್ರಮಗಳು ಎಷ್ಟರ ಮಟ್ಟಿಗೆ ಜನ ಸಮುದಾಯವನ್ನು ತಲುಪಿದೆ ಎನ್ನುವುದನ್ನು ತಿಳಿಸುವ ನಿಟ್ಟಿನಲ್ಲಿ ಹಾಸನದಲ್ಲಿ ಡಿ.5 ರಂದು ಆಯೋಜಿತವಾಗಿರುವ ‘ಸ್ವಾಭಿಮಾನಿ’ ಸಮಾವೇಶಕ್ಕೆ ಕೊಡಗಿನಿಂದ 5 ರಿಂದ 8 ಸಾವಿರ ಮಂದಿ ತೆರಳುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಪಾಲ್ಗೊಳ್ಳುವುದಕ್ಕೆ ಪೂರಕವಾಗಿ ಕೊಡಗಿನಿಂದ 50 ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಮಟ್ಟ ಮತ್ತು ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಸೋಮವಾರಪೇಟೆ ಪಟ್ಟಣ ಪ್ರದೇಶಗಳಿಂದ ಹೆಚ್ಚಿನ ಬಸ್ ಗಳು ತೆರಳಲಿವೆ ಎಂದರು. ಕೊಡಗಿನ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಈಗಾಗಲೇ ಮನವಿ ಮಾಡಿಕೊಂಡಿದ್ದಾರೆ…

Read More

ಮಡಿಕೇರಿ ಡಿ.4 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪಾಲಿಬೆಟ್ಟದ ಚೇಶೈರ್ ಹೋಮ್ ಶಾಲೆಯ ಮುಖ್ಯಶಿಕ್ಷಕ ಶಿವರಾಜ್ ಅವರನ್ನು ಸನ್ಮಾನಿಸಲಾಯಿತು. ನಗರದ ಓಂಕಾರ ಸದನದಲ್ಲಿ ನಡೆದ “ವಿಶ್ವ ವಿಶೇಷ ಚೇತನರ ದಿನಾಚರಣೆ” ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಶುಭ ಹಾಗೂ ಗಣ್ಯರು ಶಿವರಾಜ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ವಿಮಲಾ, ಜಿಲ್ಲೆಯ ಎಲ್ಲಾ ವಿಶೇಷ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

Read More