ಲೇಖಕ: admin

ಮಡಿಕೇರಿ ನ.19 NEWS DESK : ರಾಜ್ಯ ಒಲಿಂಪಿಕ್ ಸಂಸ್ಥೆ, ರಾಜ್ಯ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನಲ್ಲಿ ನಡೆದ ಮಿನಿ ಒಲಿಂಪಿಕ್ಸ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಂಡರ್ 14 ಬಾಲಕರ ತಂಡವು ಫೈನಲ್ ಪಂದ್ಯದಲ್ಲಿ ಜಿದ್ದಾಜಿದ್ದಿನ ಹೋರಾಟ ನಡೆಸಿ ಹಾಸನ ತಂಡದ ವಿರುದ್ಧ 1-0 ಗೋಲುಗಳ ಅಂತರದಿಂದ ಪರಾಭವಗೊಂಡು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಬೆಂಗಳೂರಿನ ರಾಜ್ಯ ಫುಟ್ಬಾಲ್ ಸಂಸ್ಥೆಯ ಮೈದಾನದಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಬಾಲಕರ ತಂಡವು ಮೊದಲ ಪಂದ್ಯವನ್ನು 3-1 ಗೋಲುಗಳ ಅಂತರದಿಂದ ಮೈಸೂರು ತಂಡವನ್ನು ಮಣಿಸಿತು. ದ್ವಿತೀಯ ಪಂದ್ಯವನ್ನು ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು 3-1 ಗೋಲುಗಳ ಅಂತರದಿಂದ ಸೋಲಿಸಿತು.  ಮೂರನೇ ಪಂದ್ಯದಲ್ಲಿ ದಾವಣಗೆರೆ ಜಿಲ್ಲಾ ತಂಡವನ್ನು 4-1 ಗೋಲುಗಳ ಅಂತರದಿಂದ ಮಣಿಸಿ ಬಾಲಕರ ಎ ಗುಂಪಿನಲ್ಲಿ ಪ್ರಥಮ ಸ್ಥಾನಗಳಿಸಿ ಫೈನಲ್ ಗೆ ಲಗ್ಗೆ ಇಟ್ಟಿತ್ತು.ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್…

Read More

ನಾಪೋಕ್ಲು ನ.19 NEWS DESK : ಬಲ್ಲಮಾವಟಿ ಗ್ರಾಮದ ಭಜರಂಗಿ ಯೂತ್ ಕ್ಲಬ್ ವತಿಯಿಂದ ನೇತಾಜಿ ಪ್ರೌಢಶಾಲಾ ಆಟದ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ವರ್ಷದ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯು ಕ್ರೀಡಾ ಪ್ರೇಮಿಗಳಿಗೆ ಅತ್ಯಂತ ಕುತೂಹಲವನ್ನು ಕೆರಳಿಸಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೋರಂಗಲ ಜ್ಞಾನೋದಯ ಶಾಲೆಯ ಮುಖ್ಯಸ್ಥೆ ಶ್ವೇತಾ ಚಂಗಪ್ಪ, ಚಿಯಕ್‍ಪೂವಂಡ ಮಿಥುನ್ ಚಂಗಪ್ಪ, ನೇತಾಜಿ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಹಾಗೂ ಭಜರಂಗಿ ಯೂತ್ ಕ್ಲಬ್ ನ ಅಧ್ಯಕ್ಷ ಪ್ರಸನ್ನ ಹಾಗೂ ಕ್ರೀಡಾಪಟುಗಳನ್ನು ಪರಿಚಯಿಸಿಕೊಂಡು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ NEWS DESK ನ.18 : ಕೊಡಗು ಜಿಲ್ಲೆಯ ವಿವಿಧ ದೇವಾಯಗಳಲ್ಲಿ ಕಳ್ಳತನ ಮಾಡಿದ ಆರೋಪದಡಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನ ಶನಿವಾರಸಂತೆ ಪಟ್ಟಣದ ಪೇಟೆ ರಾಮ ಮಂದಿರ ದೇವಸ್ಥಾನ ಮತ್ತು ತ್ಯಾಗರಾಜ ಕಾಲೋನಿಯ ವಿಜಯ ವಿನಾಯಕ ದೇವಸ್ಥಾನಗಳಲ್ಲಿ ಹುಂಡಿಯ ಹಣವನ್ನು ಕಳ್ಳತನ ಮಾಡಿದ ಆರೋಪದಡಿ ಅಂತರ್ ಜಿಲ್ಲಾ ಆರೋಪಿ ಹಾಸನ ನಗರದ ತಣ್ಣಿರುಹಳ್ಳ-ವಿಜಯನಗರ ನಿವಾಸಿ ಮುಬಾರಕ್ ಪಾಷ (34) ಎಂಬಾತನನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆಯ ಶನಿವಾರವಾರಸಂತೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ವಿವಿಧ ದೇವಸ್ಥಾನಗಳ ಹುಂಡಿಯ ಹಣವನ್ನು ಕಳವು ಮಾಡಿದ ಪ್ರಕರಣ ದಾಖಲಾಗಿತ್ತು. ಡಿವೈಎಸ್‌ಪಿ ಗಂಗಾಧರಪ್ಪ ಆರ್.ವಿ, ಶನಿವಾರಸಂತೆ ಪೊಲೀಸ್ ಠಾಣೆಯ ಅಧಿಕಾರಿಗಳಾದ ರಾಜೇಶ್.ಕೆ, ಹೆಚ್.ಸಿ.ಗೋವಿಂದರಾಜು, ಚಂದ್ರ.ಹೆಚ್.ವೈ ಹಾಗೂ ಠಾಣೆಯ ಅಪರಾಧ ಪತ್ತೆ ದಳದ ಸಿಬ್ಬಂದಿಗಳು, ತಾಂತ್ರಿಕ ಸಿಬ್ಬಂದಿಗಳ ತನಿಖಾ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಲಾಯಿತು. ಆರೋಪಿ ಮುಬಾರಕ್ ಪಾಷನನ್ನು   ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಕೃತ್ಯಕ್ಕೆ ಬಳಸಿದ್ದ…

Read More

ಮಡಿಕೇರಿ NEWS DESK ನ.18 : ದಾಸಶ್ರೇಷ್ಠ, ಸಂತಕವಿ ಕನಕದಾಸರು  ತಮ್ಮ ಕೀರ್ತನೆಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ್ದಾರೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜದಲ್ಲಿನ ಅಸಮಾನತೆ, ಕಂದಾಚಾರ ಹಾಗೂ ಮೌಢ್ಯವನ್ನು ಕೀರ್ತನೆಗಳ ಮೂಲಕ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದು ಡಾ.ಮಂತರ್‌ ಗೌಡ ಅವರು ವಿವರಿಸಿದರು.     ಕನಕದಾಸರ ಕೀರ್ತನೆಗಳು ಸಾರ್ವಕಾಲಿಕವಾಗಿದ್ದು, ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಕನಕದಾಸರ ಕೀರ್ತನೆಗಳು ಮತ್ತು ಮಾರ್ಗದರ್ಶನವನ್ನು ಅಳವಡಿಸಿಕೊಳ್ಳು ವಂತಾಗಬೇಕು ಎಂದು ಡಾ.ಮಂತರ್ ಗೌಡ ಅವರು ಪ್ರತಿಪಾದಿಸಿದರು.       ಕನಕದಾಸರು ಸಮಾಜದಲ್ಲಿರುವ ತಾರತಮ್ಯ ಹೋಗಲಾಡಿಸಲು ಪ್ರಯತ್ನಿಸಿದ್ದಾರೆ. ಎಲ್ಲರೂ ಸಮಾನವಾಗಿ ಬದುಕಬೇಕು ಎಂಬುದನ್ನು ಒತ್ತಿ ಹೇಳಿದ್ದಾರೆ ಎಂದು ಶಾಸಕರು ನುಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಕನಕದಾಸರ ಪ್ರಸಿದ್ಧ ಕೀರ್ತನೆಯಾದ ಕುಲ-ಕುಲವೆಂದು ಹೊಡೆದಾಡದಿರಿ ನಿಮ್ಮ…

Read More

ಮಡಿಕೇರಿ NEWS DESK ನ.18 : 1965ರ ಇಂಡೋ-ಪಾಕಿಸ್ತಾನ ಯುದ್ದದಲ್ಲಿ ವೀರಮರಣನಪ್ಪಿದ ನಾಯಕ್ ಕೂಕಂಡ ಎನ್. ಪೊನ್ನಪ್ಪ ಅವರ ಹೆಸರನ್ನು ಸ್ಮರಣೆಗಾಗಿ ಪೊನ್ನಂಪೇಟೆಯ ಜೋಡುಬೀಟಿ- ಕುಂದ ಸಂಪರ್ಕ ರಸ್ತೆಗೆ ಇಡಲಾಗಿದೆ. ನೂತನ ನಾಮಕರಣದ ರಸ್ತೆ ಉದ್ಘಾಟನೆ ಮಾಡಿ ಮಾತನಾಡಿದ ಅಖಿಲ ಕರ್ನಾಟಕ ಮಾಜಿ ಯೋಧರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಕೊಟ್ಟುಕತ್ತಿರ ಸೋಮಣ್ಣ ಅದೆಷ್ಟೋ ವೀರಯೋಧರು ದೇಶಕ್ಕಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಹುತಾತ್ಮರಾಗಿದ್ದಾರೆ. ಎಲ್ಲೆಡೆ ವೀರಯೋಧರಿಗೆ ಗೌರವ ಸಲ್ಲಿಸುವ ಕಾರ್ಯವಾಗಬೇಕೆಂದರು. ಕೂಕಂಡ ಪೊನ್ನಪ್ಪ ಅವರು ಯುದ್ದದಲ್ಲಿ ಶತ್ರುಪಡೆ‌ಯೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದರು. ಅವರ ದೇಶಪ್ರೇಮ ಶ್ಲಾಘನೀಯವೆಂದರು. ಮಾಜಿ ಸೈನಿಕರ ಸಂಘದ ಪೊನ್ನಂಪೇಟೆ ಅಧ್ಯಕ್ಷ ಐನಂಡ ಸುಬ್ರಮಣಿ ಮಂದಣ್ಣ ಮಾತನಾಡಿ ವೀರಯೋಧ ಕೂಕಂಡ ಪೊನ್ನಪ್ಪ ಸ್ಮಾರಕ ಭವನ ನಿರ್ಮಿಸುವ ಬಗ್ಗೆ ಪ್ರಸ್ತಾಪಿಸಿದರು. ಊರಿನ ಹಿರಿಯರು, ಸಮಾಜ ಸೇವಕರು ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ  ಸದಸ್ಯರಾದ ಮೂಕಳೆರ ಕುಶಾಲಪ್ಪ ಮಾತನಾಡಿ ಕೂಕಂಡ ಪೊನ್ನಪ್ಪ ಅವರ ಸಾಹಸ ಹಾಗೂ ಸೇನಾ ಸೇವೆಯ ಬಗ್ಗೆ ವಿವರಿಸಿದರು. ಹಳ್ಳಿಗಟ್ಟು ದೇವಾಲಯ ಸಮಿತಿ ಅಧ್ಯಕ್ಷ ಚಮ್ಮಟ್ಟಿರ ಪ್ರವೀಣ್ ಉತ್ತಪ್ಪ‌ ಮಾತನಾಡಿ…

Read More

ವಿರಾಜಪೇಟೆ NEWS DESK ನ.18 : ವಿರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಗ್ಗಳಕ್ಕೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯು ಲಭಿಸಿದೆ. ಕರ್ನಾಟಕ ಚಲನಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ, ಧಾರವಾಡ ಹಾಗೂ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್, ಚೇತನ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸಹಭಾಗಿತ್ವದೊಂದಿಗೆ ಶಾಲೆಯ ಪ್ರಗತಿಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಭಾನುವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ನ ಶ್ರೀ ಕೃಷ್ಣರಾಜ ಪರಿಷನ್ ಮಂದಿರದಲ್ಲಿ ಜರುಗಿದ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಶಾಲೆಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಕಮಲಮ್ಮ ಅವರು ಪ್ರಶಸ್ತಿಯನ್ನು ಪಡೆದುಕೊಂಡರು. ಗ್ರಾಮಸ್ಥರು, ಪೋಷಕರು, ಇಲಾಖೆ ಹಾಗೂ ದಾನಿಗಳ ಸಹಕಾರದಿಂದ ಶಾಲೆ ಅಭಿವೃದ್ಧಿ ಕಂಡಿದ್ದು, ಶಾಲೆಗೆ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ ಎಂದು ಕಮಲಮ್ಮ ಪ್ರತಿಕ್ರಿಯೆ ಹರ್ಷ ವ್ಯಕ್ತಪಡಿಸಿದರು.

Read More

ಮಡಿಕೇರಿ NEWS DESK ನ.18 : ಮದ್ರಾಸ್ ಎಂಜಿನಿಯರಿಂಗ್ ಆರ್ಮಿ ಗ್ರೂಪ್‌ನ ಬೈಕ್ ರ್ರಾಲಿಯು ನ.19 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತಕ್ಕೆ ಆಗಮಿಸಲಿದೆ. ಈಗಾಗಲೇ ಬೆಳಗಾವಿಯಿಂದ ಹೊರಟು ಧಾರವಾಡ, ಹುಬ್ಬಳ್ಳಿ ಮೂಲಕ  ನವೆಂಬರ್ 19 ರಂದು ಬೆಳಿಗ್ಗೆ 9:30 ಗಂಟೆಗೆ ಮಡಿಕೇರಿಗೆ ತಲುಪಲಿದೆ. ನಂತರ ನಗರದ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ಮಾಜಿ ಸೈನಿಕ ಸಂಘದ ಅಧ್ಯಕ್ಷ ಪಿ.ಕೆ.ಕುಟ್ಟಪ್ಪ ಅವರು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

Read More

ಮಡಿಕೇರಿ NEWS DESK ನ.18 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಕಾಲೇಜು ಪ್ರಾಂಶುಪಾಲ ಮೇಜರ್ ಡಾ.ರಾಘವ ಬಿ. ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದಲು ಪ್ರಯತ್ನಿಸಿದರು. ಅವರ ಚಿಂತನೆಗಳು ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆಯಾಗಿದೆ ಎಂದರು. ದಾಸ ಸಾಹಿತ್ಯದ ಮೂಲಕ ಜಾತಿ, ಮತ, ಕುಲಗಳ ಬೇಧ, ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿದರು. ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಮಹಾನ್ ಸಂತ ಕನಕದಾಸರೆಂದು ಶ್ಲಾಘಿಸಿದರು. ಕಾಲೇಜ್ ನ ಸ್ನಾತಕೋತ್ತರ ಅರ್ಥಶಾಸ್ತç ವಿಭಾಗದ ಸಂಚಾಲಕರಾದ ಡಾ.ಹೆಚ್.ಕೆ.ರೇಣುಶ್ರೀ, ಹಿಂದಿ ಉಪನ್ಯಾಸಕಿ ಖುರ್ಷಿದ ಭಾನು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ನ.18 NEWS DESK : ಕೊಡಗು ಬ್ಲಡ್ ಡೋನರ್ಸ್‍ನ 7ನೇ ವಾರ್ಷಿಕೋತ್ಸವದ ಪ್ರಯುಕ್ತ ನ.21 ರಂದು ಮಡಿಕೇರಿಯಲ್ಲಿ ರಕ್ತದಾನ ಮತ್ತು ಕಣ್ಣು ತಪಾಸಣಾ ಶಿಬಿರ ನಡೆಯಲಿದೆ ಎಂದು ಬ್ಲಡ್ ಡೋನರ್ಸ್ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ರೋಟರಿ, ನೇತ್ರ ಆಫ್ಟಿಕಲ್ಸ್, ಹೆಚ್.ಡಿ.ಎಫ್.ಸಿ ಬ್ಯಾಂಕ್ ಸಹಭಾಗಿತ್ವದಲ್ಲಿ ನಗರದ ರೋಟರಿ ಹಾಲ್‍ನಲ್ಲಿ ಬೆಳಿಗ್ಗೆ 9.30 ರಿಂದ 1.30ರ ವರೆಗೆ ಶಿಬಿರ ನಡೆಯಲಿದ್ದು, ಜಿಲ್ಲೆಯ ಜನತೆ ಹಾಗೂ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಕಣ್ಣು ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡ ಅರ್ಹ ಪಲಾನುಭವಿಗಳಿಗೆ 199 ರೂ.ಗಳಿಗೆ ಕನ್ನಡಕ ನೀಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯದರ್ಶಿ ಮೈಕಲ್ ವೇಗಸ್ ಮಾತನಾಡಿ, ಅಂದು ಬೆಳಗ್ಗೆ 9.30 ಗಂಟೆಗೆ ನಡೆಯುವ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಲಡ್ ಡೋನರ್ಸ್ ಅಧ್ಯಕ್ಷ ಪಿ.ಪಿ.ಸುಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪತ್ರಕರ್ತ ಹೆಚ್.ಟಿ.ಅನಿಲ್, ಮಡಿಕೇರಿ ರೋಟರಿ ಅಧ್ಯಕ್ಷ ಸುದಯ್ ನಾಣಯ್ಯ, ಹೆಚ್.ಡಿ.ಎಫ್.ಸಿ…

Read More

ಮಡಿಕೇರಿ ನ.18 NEWS DESK :  ಕ್ರೀಡೆಯಲ್ಲಿ ತೋರಿಸುವ ಸ್ಫೂರ್ತಿ ಜೀವನದಲ್ಲಿಯೂ ಹಾಸುಹೊಕ್ಕಾಗಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದ್ದಾರೆ.  ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಮಡಿಕೇರಿ ವಕೀಲರ ಸಂಘದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕರು, ಸಮಾಜಕ್ಕೆ ಒಳಿತುಂಟು ಮಾಡುವ ವಿಚಾರಗಳಿಗೆ ಸಂಬಂಧಿಸಿದಂತೆ ವಕೀಲ ವೃಂದ ಕಾಳಜಿಯುತ ಕತ೯ವ್ಯ ತೋರುವ ಮೂಲಕ ಸಮಾಜಕ್ಕೆ ಮಾಗ೯ದಶ೯ನ ನೀಡುವಂತಾಗಬೇಕೆಂದು ಆಶಿಸಿದರು.  ಕ್ರೀಡಾಕೂಟಗಳು ಎಲ್ಲರನ್ನೂ ಒಗ್ಗೂಡಿಸುತ್ತದೆ, ಸ್ಫೂರ್ತಿಯ ಜತೇ ಉತ್ಸಾಹ ಕೂಡ ಎಲ್ಲರಲ್ಲಿಯೂ ಮೂಡುವಂತಾಗುತ್ತದೆ, ಇಂಥ ಕ್ರೀಡಾಕೂಟದ ಮೂಲಕ ವಕೀಲ ವೃಂದ ಒಗ್ಗಟ್ಟು ಪ್ರದಶಿ೯ಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.  ವಕೀಲರ ಸಂಘದ ಬೇಡಿಕೆಯಾಗಿರುವ ನ್ಯಾಯಾಲಯಕ್ಕೆ ಸೂಕ್ತ ತಡೆಗೋಡೆ ಮತ್ತು ನ್ಯಾಯಾಲಯದ ರಸ್ತೆ ದುರಸ್ಥಿಯನ್ನು ವಿಳಂಭರಹಿತವಾಗಿ ಕೈಗೊಳ್ಳುವುದಾಗಿ ಭರವಸೆ ನೀಡಿದರು. ತನ್ನ ಮಾವ ಹೆಚ್.ಎನ್. ]ನಂಜೇಗೌಡ ಮತ್ತು ತಂದೆ ಎ.ಮಂಜು ಕೂಡ ವಕೀಲರಾಗಿದ್ದದ್ದನ್ನು ಸ್ಮರಿಸಿಕೊಂಡ ಶಾಸಕ ಮಂಥರ್ ಗೌಡ, ವಕೀಲ ವೖತ್ತಿ ಸಮಾಜದಲ್ಲಿ ಇಂದಿಗೂ ಗೌರವವನ್ನು ಉಳಿಸಿಕೊಂಡು ಸಮಾಜದ ಆರೋಗ್ಯ ಕಾಪಾಡುವಲ್ಲಿ…

Read More