ಲೇಖಕ: admin

ಮಡಿಕೇರಿ ಅ.14 NEWS DESK : ಹುಲಿ ಸೆರೆ ಕಾರ್ಯಾಚರಣೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶ್ರೀಮಂಗಲ ಹೋಬಳಿ ವ್ಯಾಪ್ತಿಯಲ್ಲಿ ಜಾನುವಾರುಗಳ ಮೇಲೆ ಹುಲಿ ದಾಳಿಯಾದ ಸ್ಥಳಗಳಿಗೆ ಶಾಸಕರು ಭೇಟಿ ನೀಡಿ ಪರಿಸ್ಥಿತಿಯ ಗಂಭೀರತೆಯನ್ನು ಅರಿತರು. ನಂತರ ಅರಣ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು ಹುಲಿ ಸೆರೆಗೆ ನಿರ್ದೇಶನ ನೀಡಿದರು. ವನ್ಯಜೀವಿ ಪಿ.ಸಿ.ಸಿ.ಎಫ್ ಪುಷ್ಕರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಹುಲಿ ಸೆರೆ ಅನಿವಾರ್ಯ ಎಂದು ತಿಳಿಸಿದರು. ಪರಿಹಾರ ವಿತರಣೆ :: ಹುಲಿ ದಾಳಿಗೆ ಹಸು ಕಳೆದುಕೊಂಡ ಮಾಣೀರ ಕಿಶನ್ ಅವರಿಗೆ ಈಗಾಗಲೇ ರೂ.30 ಸಾವಿರ ಪರಿಹಾರವನ್ನು ಅರಣ್ಯ ಇಲಾಖೆ ನೀಡಿದೆ. ವಿಶೇಷ ಪ್ರಕರಣದಡಿ ಹೆಚ್ಚುವರಿ ಪರಿಹಾರವನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಸಿಎಫ್ ನೆಹರು ಅವರಿಗೆ ಶಾಸಕ ಪೊನ್ನಣ್ಣ ಸೂಚಿಸಿದರು. ಕೂಂಬಿಂಗ್ ಆರಂಭ :: ಶಾಸಕ ಎ.ಎಸ್.ಪೊನ್ನಣ್ಣ ಅವರ ನಿರ್ದೇಶನದಂತೆ ಶ್ರೀಮಂಗಲ ಹೋಬಳಿಯ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಹುಲಿ ಸೆರೆಗೆ…

Read More

ಸಿದ್ದಾಪುರ ಅ.14 NEWS DESK : ಸೂರ್ಯ ಫೌಂಡೇಶನ್ ಬೆಂಗಳೂರಿನ ಸ್ಪಾರ್ಕ್ ಅಕಾಡೆಮಿ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಸಹಯೋಗದಲ್ಲಿ ನೀಡಲಾಗುವ 2024-25ನೇ ಸಾಲಿನ ಉತ್ತಮ ಶಿಕ್ಷಕ ಶಿಕ್ಷಣ ಸಿಂಧು ಪ್ರಶಸ್ತಿಗೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಚನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕೆ.ಕೆ.ಸುಷಾ ಭಾಜನರಾಗಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪ್ರಗತಿಗೆ ಶಾಲಾ ಹಂತದಲ್ಲಿ ಕೈಗೊಂಡ ವಿಶಿಷ್ಟ ಕಾರ್ಯಕ್ರಮ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಇಂಡೋ ಗ್ಲೋಬ್ ಸಂಸ್ಥೆ ಚಿಕ್ಕ ಬಾಣಾವಾರದಲ್ಲಿ ನಡೆಯುವ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗವುದು ಎಂದು ಸೂರ್ಯ ಫೌಂಡೇಶನ್ ಹಾಗೂ ಸ್ಟಾರ್ಕ್ ಅಕಾಡೆಮಿಯ ಮುಖ್ಯಸ್ಥ ಸೋಮೇಶ್ ನಮೋದಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚನ್ನಂಗಿ ಶಾಲೆಯ ಮುಖ್ಯ ಶಿಕ್ಷಕಿ ಕೆ.ಕೆ.ಸುಷಾ ಗ್ರಾಮೀಣ ಭಾಗದ ಶಾಲೆಯಲ್ಲಿ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಪರಿಸರ ಕಾಳಜಿ, ವೃತ್ತಿ ಶಿಕ್ಷಣ, ಕಲಾ ಸಾಹಿತ್ಯ ಸಂಸ್ಕೃತಿ ಸೇರಿದಂತೆ ತಿಂಗಳಿಗೊಮ್ಮೆ…

Read More

ನಾಪೋಕ್ಲು ಅ.14 NEWS DESK : ಭಾರತೀಯ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಕೊಡಗಿನ ಕಕ್ಕಬೆಯ ಅರೆಯಡ ಕೃತಿಕ ದೇವಯ್ಯ ಪದೋನ್ನತಿ ಹೊಂದಿದ್ದಾರೆ. ಕೃತಿಕ ದೇವಯ್ಯ ಭಾರತೀಯ ಸೇನೆಯ ಆಫೀಸರ್ಸ್ ನೇಮಕಾತಿ ಪರೀಕ್ಷೆಯಲ್ಲಿ ಎರಡನೇ ರ್ಯಾಂಕ್ ಗಳಿಸಿದ್ದರು. ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡಿ ಬಳಿಕ ಬೆಂಗಳೂರಿನ ಆರ್.ವಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪೂರೈಸಿದ್ದರು. ಕೃತಿಕ ದೇವಯ್ಯ 2018 ರಲ್ಲಿ ಗಣರಾಜ್ಯೋತ್ಸವ ಸಮಾರಂಭದ ಎನ್‍ಸಿಸಿ ಪರೆಡ್ ನಲ್ಲಿ ಭಾಗವಹಿಸಿದ್ದರು. ವಿಯೆಟ್ನಾಂನಲ್ಲಿ ನಡೆದ ಎನ್ಸಿಸಿ ಯುವ ಸಮ್ಮೇಳನದಲ್ಲಿ ಭಾರತವನ್ನು ಪ್ರತಿನಿಧಿಸಿದ ಕೃತಿಕ ಮಡಿಕೇರಿ ತಾಲ್ಲೂಕಿನ ಕಕ್ಕಬೆಯ ಯವಕಪಾಡಿ ಗ್ರಾಮದ ಅರೆಯಡ ಜೀವನ್ ದೇವಯ್ಯ ಮತ್ತು ಬಬಿತಾ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ. 

Read More

ಸುಂಟಿಕೊಪ್ಪ ಅ.14 NEWS DESK : ಸುಂಟಿಕೊಪ್ಪದಲ್ಲಿರುವ ಇಮ್ಯಾನ್‍ವೆಲ್ ದೇವಾಲಯದಲ್ಲಿ ವಾರ್ಷಿಕ ಬೆಳೆಹಬ್ಬವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯ ಹಾಗೂ ಆವರಣವನ್ನು ಕಬ್ಬು, ಭತ್ತದ ಪೈರು, ಪುಷ್ಪಾಗಳಿಂದ ಅಲಂಕರಿಸಲಾಗಿತ್ತು. ಕೊಡಗು ವಲಯಾಧ್ಯಕ್ಷ ಮತ್ತು ಸಭಾಪಾಲಕ ರೆ.ಫಾ.ಜೈಸನ್‍ಗೌಡರ್, ರೇವರೆಂಡ್ ವಿನೋದ್‍ಐಸಾಕ್ ಹಾಗೂ ಸುಂಟಿಕೊಪ್ಪ ಸಭಾಪಾಲಕರಾದ ಮಧುಕಿರಣ್ ಪಾಲ್ಗೊಂಡು ಧಾರ್ಮಿಕ ವಿಧಿವಿಧಾನಗಳೊಂದಿಗೆ ಪ್ರಾರ್ಥನೆ, ಆರ್ಶಿವಚನ ನೀಡಿದರು. ಈ ಸಂದರ್ಭ ಮಾತನಾಡಿದ ಚರ್ಚ್ ಆಫ್ ಸೌತ್ ಇಂಡಿಯಾದ ದಕ್ಷಿಣ ಪ್ರಾಂತ್ಯದ ದೇವಾಲಯಗಳ ಕೊಡಗು ವಲಯಾಧ್ಯಕ್ಷ ಮತ್ತು ಸಭಾಪಾಲಕರಾದ ರೆ.ಫಾ.ಜೈಸನ್‍ಗೌಡರ್ ಮಾತನಾಡಿ, ನಮ್ಮ ದೇವಾಲಯಗಳ ವಾರ್ಷಿಕ ವಿಧಿವಿಧಾನಗಳಲ್ಲಿ ಬೆಳೆ ಹಬ್ಬವು ಪ್ರಮುಖವಾಗಿದ್ದು, ಸತ್ಯವೇದ ಅಥವಾ ಬೈಬಲಿನ ಪ್ರಕಾರ ಭಕ್ತರು ತಾವು ಬೆಳೆದ ಕೃಷಿ ಉತ್ಪಾನ ಮತ್ತು ಬೆಳೆದ ಫಲವಸ್ತುಗಳನ್ನು ಮೊದಲ ಕಾಣಿಕೆಯಾಗಿ ದೇವರಿಗೆ ಸರ್ಮಪಿಸುವುದು ಒಂದು ಪದ್ಧತಿ ಮತ್ತು ನಂಬಿಕೆಯ ನಡವಳಿಕೆಯಾಗಿದೆ. ಇದರ ಮೂಲಕ ನಮ್ಮನ್ನು ನಾವು ದೇವರಿಗೆ ಪುನಾರವರ್ತಿ ಕಾಣಿಕೆಯಾಗಿ ಸರ್ಮಪಿಸಿಕೊಳ್ಳುವದಾಗಿದೆ. ಇದರಿಂದ ನಮ್ಮ ಜೀವನದಲ್ಲಿ ಯೇಸುಸ್ವಾಮಿಯ ಕೃಷೆ ಮತ್ತು ಆರ್ಶಿವಾದಗಳಿಗೆ ಪಾತ್ರರಾಗಿ ಜೀವನವನ್ನು ಮುನ್ನಡೆಸುವುದಾಗಿದೆ ಎಂದು…

Read More

ಸುಂಟಿಕೊಪ್ಪ ಅ.14 NEWS DESK : ಕನ್ನಡ ಭಾಷೆ ನಮ್ಮ ಉಸಿರಾಗಿರಬೇಕು, ಕನ್ನಡ ಉಳಿಸಿ ಬೆಳೆಸುವ ಕೆಲಸದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸೋಮವಾರಪೇಟೆ ಕ.ಸಾ.ಪ ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ ಐಗೂರು ಕೇಂದ್ರದ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು ಕಚೇರಿ ಉದ್ಘಾಟಿಸಿದರೆ ಸಾಲದು ಪ್ರತಿದಿನ ಕಚೇರಿ ಬಾಗಿಲು ತೆರದಿಡಬೇಕು. ಹೋಬಳಿ ಕೇಂದ್ರದ ಶಾಲೆಗಳಲ್ಲಿ ಕನ್ನಡ ಭಾಷೆ ಸಾಹಿತ್ಯದ ಚಟುವಟಿಕೆಗಳನ್ನು ನಡೆಸಿಕೊಂಡು ಶಾಲಾ ಮಕ್ಕಳಲ್ಲಿ ಹಾಗೂ ಸ್ತ್ರೀಶಕ್ತಿ ಗುಂಪಿನವರಿಗೆ ಕನ್ನಡ ಜಾಗೃತಿ ಕೆಲಸ ಮಾಡಬೇಕು. ಮಹಿಳೆಯರಲ್ಲಿ ಆಡಗಿರುವ ಸಾಹಿತ್ಯ ಪ್ರತಿಭೆಗಳನ್ನು ಹೊರ ತರುವ ಕೆಲಸ ಸಾಹಿತ್ಯ ಪರಿಷತ್ ವತಿಯಿಂದ ಆಗಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್, ಕನ್ನಡಭಾಷೆ ಸಾಹಿತ್ಯ ಇನ್ನಷ್ಟು ಗಟ್ಟಿಯಾಗಿ…

Read More

ಮಡಿಕೇರಿ ಅ.14 NEWS DESK : ವಿಜಯದಶಮಿ ಪ್ರಯುಕ್ತ ನಗರದಲ್ಲಿ ದಶಮಂಟಪಗಳು ಪ್ರದರ್ಶಿಸಿದ ವಿವಿಧ ದೈವಿಕ ಕಥಾ ಸಾರಾಂಶಗಳಲ್ಲಿ ದೇವಾನುದೇವತೆಗಳಿಂದ ನಡೆದ ಅಸುರರ ಸಂಹಾರ ನೋಡುಗರನ್ನು ಗಮನ ಸೆಳೆಯಿತು. ಶೋಭಾಯಾತ್ರೆಯಲ್ಲಿ ಶ್ರೀ ಕೋಟೆ ಮಹಾಗಣಪತಿ ದೇವಾಲು ಪ್ರಥಮ, ಶ್ರೋ ಕೋಟೆ ಮಾರಿಯಮ್ಮ ದೇವಾಲಯ ದ್ವಿತೀಯ, ಶ್ರೀ ದಂಡಿನ ಮಾರಿಯಮ್ಮ ದೇವಾಲಯ ತೃತೀಯ ಬಹುಮಾನಕ್ಕೆ ಭಾಜನವಾಯಿತು. ಶ್ರೀ ಕೋಟೆ ಮಹಾಗಣಪತಿ ಮಂಟಪದ ಶ್ರೀ ಮಹಾಗಣಪತಿಯಿಂದ ಅಜಗರ-ಶಲಭಾಸುರ ದೈತ್ಯರ ಸಂಹಾರ ಕಥಾ ಸಾರಾಂಶ ಮೊದಲ ಬಹುಮಾನ ಪಡೆದರೆ, ಶ್ರೀ ಕೋಟೆ ಮಾರಿಯಮಮ್ಮ ಮಂಟಪದ ಶ್ರೀ ಕೃಷ್ಣನ ಬಾಲಲೀಲೆ-ಕಂಸವಧೆ ಕಥಾ ಸಾರಾಂಶ ದ್ವಿತೀಯ ಬಹುಮಾನಗಳಿಸಿತು.ಶ್ರೀ ದಂಡಿನ ಮಾರಿಯಮ್ಮ ಮಂಟಪದ ಕೌಶಿಕೆ ಮಹಾತ್ಮೆ ಕಥಾ ಸಾರಾಂಶ ತೃತೀಯ ಬಹುಮಾನಕ್ಕೆ ಭಾಜನವಾಯಿತು. ಮೊದಲ ಬಹುಮಾನ ಪಡೆದ ಮಂಟಪಕ್ಕೆ 24 ಗ್ರಾಂ, ದ್ವಿತೀಯ ಬಹುಮಾನ ಪಡೆದ ಮಂಟಪಕ್ಕೆ 20 ಗ್ರಾಂ, ತೃತೀಯ ಬಹುಮಾನ ಪಡೆದ ಮಂಟಪಕ್ಕೆ 16 ಗ್ರಾಂ ಚಿನ್ನದ ನಾಣ್ಯ ಒಳಗೊಂಡ ಫಲಕಗಳನ್ನು ಬಹುಮಾನವಾಗಿ ನೀಡಲಾಯಿತು. ಉಳಿದ ಮಂಟಪಗಳಿಗೆ…

Read More

ನಾಪೋಕ್ಲು NEWS DESK ಅ.11 : ಮಹಾರಾಷ್ಟ್ರದ ಮುಂಬೈನ ಅಂದೇರಿಯಲ್ಲಿ ಕೊಂಬೆಟ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ವತಿಯಿಂದ ನಡೆದ ಮೂರನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ನಾಪೋಕ್ಲು ಸಮೀಪದ ನೆಲಜಿ ಗ್ರಾಮದ ಚೆಟ್ಟಿಯಾರಂಡ ದಿಲನ್ ತಿಮಯ್ಯ ಹಾಗೂ ಧೀರಜ್ ಕಾರ್ಯಪ್ಪ ಸಹೋದರರು ಚಿನ್ನ ಮತ್ತು ಬೆಳ್ಳಿಯ ಪದಕ ಗೆದ್ದು ಸಾಧನೆ ಮಾಡಿದ್ದಾರೆ. ವಿರಾಜಪೇಟೆಯ ಕಾವೇರಿ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿ ಧೀರಜ್ ಕಾರ್ಯಪ್ಪ 16ನೇ ವಯೋಮಿತಿಯ ಬ್ಲಾಕ್ ಬೆಲ್ಟ್ ವಿಭಾಗದ ಕುಮಿಟೆಯಲ್ಲಿ ಚಿನ್ನದ ಪದಕ ಪಡೆದುಕೊಂಡರು. ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಬಿಕಾಂ ವಿದ್ಯಾರ್ಥಿಯಾಗಿರುವ ದಿಲನ್ ತಿಮ್ಮಯ್ಯ 19ನೇ ವಯೋಮಿತಿಯ ಕರಾಟೆ ಪಂದ್ಯಾವಳಿಯಲ್ಲಿ ಬ್ಲಾಕ್ ಬೆಲ್ಟ್ ವಿಭಾಗದ ಕುಮಿಟೆಯಲ್ಲಿ ಚಿನ್ನ ಮತ್ತು ಕಟ ವಿಭಾಗದಲ್ಲಿ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾರೆ. ಸಹೋದರರು ಬಲಮಾವಟ್ಟಿ ಗ್ರಾಮ ಪಂಚಾಯಿತಿಯ ನೆಲಜಿ ಗ್ರಾಮದ ಚೇಟ್ಟಿಯರಂಡ ಮನು ಹಾಗೂ ಪವಿತ ದಂಪತಿಗಳ ಪುತ್ರ. ಕರಾಟೆ ಮಾಸ್ಟರ್ ಸೆನ್ ಸಾಯಿ ನಾಗೇಂದ್ರಪ್ಪ ಅವರ ಶಿಷ್ಯರಾಗಿದ್ದಾರೆ. (ವರದಿ : ದುಗ್ಗಳ ಸದಾನಂದ)

Read More

ಮಡಿಕೇರಿ NEWS DESK ಅ.11 : ಮಡಿಕೇರಿಯ ಬ್ರಹ್ಮಾಕುಮಾರೀಸ್ ಲೈಟ್ ಹೌಸ್ ಸಭಾಂಗಣದಲ್ಲಿ ದಸರಾ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಗುಜರಾತಿನ ಅಹಮದಾಬಾದ್ ಹಾಗೂ ನ್ಯೂಜೆರ್ಸಿಯಿಂದ ಆಗಮಿಸಿದ್ದ ಬ್ರಹ್ಮಾಕುಮಾರ, ಬ್ರಹ್ಮಾಕುಮಾರಿಯರೊಂದಿಗೆ ಮಡಿಕೇರಿಯ ಸಹೋದರ ಸಹೋದರಿಯರು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ದಸರಾ ಹಬ್ಬದ ವಿಶೇಷ ಆಧ್ಯಾತ್ಮಿಕ ರಹಸ್ಯವನ್ನು ಹಂಚಿಕೊಂಡರು. ನಮ್ಮಲ್ಲಿರುವ ದುಷ್ಟತನವನ್ನು ಸಂಹರಿಸಿ, ಶಿಷ್ಟತನವನ್ನು ಅಥವಾ ದೈವೀಗುಣಗಳನ್ನು ಬೆಳೆಸಿಕೊಳ್ಳಲು ಇದೊಂದು ವ್ರತ ಅಥವಾ ದೈವಪೂಜೆ ಅಥವಾ  ಧ್ಯಾನದ ವಿಶೇಷ ಕೊಡುಗೆಯಾಗಿದೆ ಎಂದು ಪ್ರಮುಖರು ಅಭಿಪ್ರಾಯಪಟ್ಟರು.  ಕೊಡಗು ಜಿಲ್ಲೆಯ ಬ್ರಹ್ಮಾಕುಮಾರ, ಬ್ರಹ್ಮಾಕುಮಾರಿಯರು ದಸರಾ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ NEWS DESK ಅ.11 : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದ ವಿವಿಧ ದೇವಾಲಯಗಳಿಗೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಾಡಿನಲ್ಲೆಡೆ ಆಯುಧ ಪೂಜೆ ಸಲ್ಲಿಸಲಾಗುತ್ತಿದೆ. ಹಾಗೆಯೇ ವಿಜಯದಶಮಿ ದಿನಾಚರಣೆ ಇದೆ. ನಾಡಿನ ಎಲ್ಲೆಡೆ ದಸರಾ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು, ತಾಯಿ ಕಾವೇರಿ ಮಾತೆ ಎಲ್ಲರಿಗೂ ಸಮೃದ್ಧಿ ತರುವಂತಾಗಲಿ ಎಂದು ಉಪ ಮುಖ್ಯಮಂತ್ರಿ ಅವರು ಪ್ರಾರ್ಥಿಸಿದರು. ನಾಡಿನಲ್ಲಿ ಹಿಂದಿನಿಂದಲೂ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ಬರಲಾಗಿದೆ. ದಸರಾ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಈ ಬಾರಿ ಉತ್ತಮ ಮಳೆ, ಬೆಳೆಯಾಗಿದ್ದು ಎಲ್ಲರಲ್ಲಿ ಸಂತಸ ತಂದಿದೆ ಎಂದು ಉಪ ಮುಖ್ಯಮಂತ್ರಿ ಅವರು ಹೇಳಿದರು‌. ನಗರದ ಶಕ್ತಿ ದೇವತೆಗಳಾದ ಕುಂದೂರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ, ಕಂಚಿ ಕಾಮಾಕ್ಷಿ, ಶ್ರೀ ಕೋಟೆ ಗಣಪತಿ, ಪೇಟೆ ಶ್ರೀ ರಾಮಮಂದಿರ, ಶ್ರೀ ಕೊದಂಡರಾಮ ದೇವಾಲಯ, ಶ್ರೀ ಮುತ್ತಪ್ಪ ದೇವಾಲಯ, ಕರವಾಲೇ ಭಗವತಿ ದೇವಾಲಯ, ಶ್ರೀ ಚೌಡೇಶ್ವರಿ ದೇವಾಲಯ,…

Read More

ಮಡಿಕೇರಿ NEWS DESK ಅ.11 : “ಅನವಶ್ಯಕ ವಿಚಾರ ಇಟ್ಟುಕೊಂಡು ರಾಜ್ಯಕ್ಕೆ ಕೆಟ್ಟ ಹೆಸರು ತರಲು  ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಡಿಕೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಶುಕ್ರವಾರ ಪ್ರತಿಕೆಗಳಿಗೆ ನೀಡಿರುವ ಸರ್ಕಾರದ ಜಾಹೀರಾತಿನಲ್ಲಿ ದುಷ್ಟಶಕ್ತಿಗಳು ಎಂದು ಹೇಳಿದ್ದು ಆ ದುಷ್ಟಶಕ್ತಿಗಳು ಯಾರು ಎಂದು ಕೇಳಿದಾಗ, ಈ ರೀತಿ ಉತ್ತರಿಸಿದರು.  “ದುಃಖವನ್ನು ನಿವಾರಿಸುವ ದುರ್ಗಾ ದೇವಿ, ದುಷ್ಟರನ್ನು ದೂರಮಾಡಿ ಎಲ್ಲರಿಗೂ ಒಳ್ಳೆಯದನ್ನು ಮಾಡಿ ಹರಸಲಿ. ನಮ್ಮ ರಾಜ್ಯ ಶಾಂತಿಯ ತೋಟವಾಗಿ ಪರಿವರ್ತನೆ ಆಗಬೇಕೆಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಪಕ್ಷವೇ ದುಷ್ಟಶಕ್ತಿಗೆ ಪ್ರಚೋದನೆ ನೀಡುತ್ತಿದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ವಿರೋಧ ಪಕ್ಷದವರಿಗೆ ಉತ್ತರ ನೀಡಲು ಬಯಸುವುದಿಲ್ಲ. ಸಕಾರಾತ್ಮಕ ವಿಚಾರದ ಬಗ್ಗೆ ಮಾತ್ರ ಮಾತನಾಡುತ್ತೇನೆ” ಎಂದು ತಿಳಿಸಿದರು. ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧದ ಪ್ರಕರಣ ಹಿಂಪಡೆದಿರುವ ಬಗ್ಗೆ ಕೇಳಿದಾಗ, “ಬಿಜೆಪಿ ನಾಯಕರ ಮೇಲಿರುವ ಪ್ರಕರಣಗಳನ್ನು ನಾವು ಹಿಂದಕ್ಕೆ ಪಡೆದಿದ್ದೇವೆ.…

Read More