ಲೇಖಕ: admin

ಮಡಿಕೇರಿ ನ.16 NEWS DESK : ವಿರಾಜಪೇಟೆ ಲೋಕೋಪಯೋಗಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಮಡಿಕೇರಿಯಲ್ಲಿ ನೆಲೆಸಿದ್ದ ಜಿ.ವೆಂಕಟರಮಣ ಅವರ ಪತ್ನಿ ಜಿ.ವಿ.ಪೇಚಮ್ಮ (91)ಇಂದು ಮಡಿಕೇರಿಯ ಗೌಳಿಬೀದಿಯ ನಿವಾಸದಲ್ಲಿ ನಿಧನರಾದರು. ಇವರ ಅಂತ್ಯಕ್ರಿಯೆ ಇಂದು (ನ.16) ಸಂಜೆ ಮಡಿಕೇರಿಯಲ್ಲಿ ನಡೆಯಲಿದೆ ಎಂದು ಮೃತರ ಪುತ್ರ ಕೊಡಗು ಚಾನಲ್ ಸಂಸ್ಥೆಯ ಮುಖ್ಯಸ್ಥರಾದ ಜಿ.ವಿ.ರವಿಕುಮಾರ್. ತಿಳಿಸಿದ್ದಾರೆ.  

Read More

ಮಡಿಕೇರಿ ನ.16 NEWS DESK : ಇದೇ ನವೆಂಬರ್, 18 ರಂದು ಕನಕದಾಸರ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕನಕದಾಸರ ಜಯಂತಿಯನ್ನು ನಗರದ ಗಾಂಧಿಭವನದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಎಲ್ಲರೂ ಸಹಕರಿಸುವಂತೆ ಕೋರಿದರು. ಎಸ್‍ಎಸ್‍ಎಲ್‍ಸಿ, ಪಿಯುಸಿ, ನೀಟ್, ಜೆಇಇ ಹೀಗೆ ಮತ್ತಿತರ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಪ್ರೋತ್ಸಾಹಿಸುವಲ್ಲಿ ಅಗತ್ಯ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಲಹೆ ಮಾಡಿದರು. ಸಂಗೋಳ್ಳಿ ರಾಯಣ್ಣ ಕುರುಬರ ಸಂಘದ ಜಿಲ್ಲಾಧ್ಯಕ್ಷರಾದ ಡಿ.ಆರ್.ಪ್ರಭಾಕರ್ ಅವರು ಮಾತನಾಡಿ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಯೋಜಿಸಬೇಕು. ಕುಶಾಲನಗರದಲ್ಲಿಯೂ ಸಹ ತಾಲ್ಲೂಕು ಮಟ್ಟದಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಕುರುಬ ಸಮಾಜವು ಪರಿಶಿಷ್ಟ ಪಂಗಡ ವ್ಯಾಪ್ತಿಗೆ ಬರಲಿದ್ದು, ಆದಿವಾಸಿ ಮಕ್ಕಳನ್ನು ಪ್ರೋತ್ಸಾಹಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಕುಶಾಲನಗರ ತಾಲ್ಲೂಕು…

Read More

ಮಡಿಕೇರಿ NEWS DESK ನ.15 : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಕ್ಕೆ ಗ್ರಾಮದಲ್ಲಿ ನಡೆದಿದ್ದ ಮನೆ ಕಳವು ಪ್ರಕರಣವನ್ನು ಬೇಧಿಸಿರುವ ಕುಶಾಲನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹಕ್ಕೆ ಗ್ರಾಮದ ನಿವಾಸಿ ಸೋಮಶೇಖರ್.ಎಸ್.ಕೆ(24) ಹಾಗೂ ಹೊಳೆನರಸೀಪುರ ತಾಲ್ಲೂಕಿನ ಮಾಚಗೌಡನಹಳ್ಳಿ ಗ್ರಾಮದ ನಿವಾಸಿ ಅಭಿಷೇಕ್.ಎನ್(24) ಬಂಧಿತ ಆರೋಪಿಗಳು. ಬಂಧಿತರಿಂದ 168.02 ಗ್ರಾಂ ಚಿನ್ನಾಭರಣ, ರೂ.2.54 ಲಕ್ಷ ನಗದು, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಮತ್ತು ಕಬ್ಬಿಣದ ಹಾರೆಯನ್ನು ವಶಪಡಿಸಿಕೊಳ್ಳಲಾಗಿದೆ. ಹಕ್ಕೆ ಗ್ರಾಮದ ನಿವಾಸಿ ದೇವರಾಜು ಎಂಬುವವರು ನ.3ರಂದು ದೀಪವಾಳಿ ಹಬ್ಬದ ಪ್ರಯುಕ್ತ ಸಂಬಂಧಿಕರ ಮನೆಗೆ ತೆರಳಿದ್ದರು. ಮರಳಿ ಮನೆಗೆ ಬಂದು ನೋಡಿದಾಗ ಅಪರಿಚಿತ ವ್ಯಕ್ತಿಗಳು ಮನೆಯ ಹಿಂದಿನ ಬಾಗಿಲನ್ನು ಮುರಿದು ಲಾಕರ್‌ನಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವುದು ಗೋಚರಿಸಿದೆ. ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಆರೋಪಿಗಳನ್ನು ಬಂಧಿಸಿದ್ದಾರೆ. ಸೋಮವಾರಪೇಟೆ ಡಿವೈಎಸ್‌ಪಿ ಆರ್.ವಿ ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕ ರಾಜೇಶ್.ಕೆ,…

Read More

ಮಡಿಕೇರಿ ನ.15 NEWS DESK : ಮಕ್ಕಳ ದಿನಾಚರಣೆಯ ಪ್ರಯುಕ್ತ ಮಡಿಕೇರಿ ನಗರದ ಮಹದೇವಪೇಟೆಯ ಎಸ್‍ಎಸ್ ಆಸ್ಪತ್ರೆ ವತಿಯಿಂದ ನ.17 ರಂದು ಎಲ್‍ಕೆಜಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಆಸ್ಪತ್ರೆಯ ಸಮೀಪದಲ್ಲಿರುವ ಕ್ರೆಸೆಂಟ್ ಸ್ಕೂಲ್ ಆವರಣದಲ್ಲಿ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಸ್ಪರ್ಧೆ ಆರಂಭಗೊಳ್ಳಲಿದ್ದು, ಮಧ್ಯಾಹ್ನ 12 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣಾ ಸಮಾರಂಭದ ದಿವ್ಯ ಸಾನಿಧ್ಯವನ್ನು ಮುದ್ದಿನಕಟ್ಟೆ ಮಠದ ಶ್ರೀಅಭಿನವ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ. ಎಸ್‍ಎಸ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಶಿಲ್ಪಾ ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ.ದೇವದಾಸ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭೆಯ ಮಾಜಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್, ನಗರಸಭಾ ಸದಸ್ಯರಾದ ಸವಿತಾ ರಾಕೇಶ್, ಕಲಾವತಿ, ತೀರ್ಪುಗಾರರಾಗಿ ಮ್ರಿಣಾಲಿನಿ ಚಿಣ್ಣಪ್ಪ ಪಾಲ್ಗೊಳ್ಳಲಿದ್ದಾರೆ. ಚಿತ್ರಕಲಾ ಸ್ಪರ್ಧೆ ಮೂರು ವಿಭಾಗಗಳಲ್ಲಿ ನಡೆಯಲಿದ್ದು, ಮೂರೂ ವಿಭಾಗಗಳಲ್ಲಿಯೂ ಪ್ರಥಮ, ದ್ವಿತೀಯ, ತೃತೀಯ ವಿಜೇತರಿಗೆ ಆಕರ್ಷಕ ನಗದು ಬಹುಮಾನ,…

Read More

ಮಡಿಕೇರಿ ನ.15 NEWS DESK : ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಟೆಕ್ವಾಂಡೋ ಸ್ಪರ್ಧೆಯಲ್ಲಿ ಪದಕ ಗೆದ್ದ ಕೊಡಗು ಮರ್ಕರ ಟೆಕ್ವಾಂಡೋ ಕ್ಲಬ್‍ನ ವಿದ್ಯಾರ್ಥಿಗಳು ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಮಿಶಾಲ್, ಸಂತ ಜೊಸೆಫರ ಶಾಲೆಯ ವಿರಾಟ್, ವಿರಾಂಜನ್, ಅನಿಯ ಪರ್ವಿನ್ ಹಾಗೂ ಸಂತ ಮೈಕಲರ ಶಾಲೆಯ ಆರೂಷ್ ಪರ್ವಿನ್, ಕೊಡಗು ವಿದ್ಯಾಲಯ ಶಾಲೆಯ ಪಾವನಿ, ಹರ್ಷ್ ಕರುಂಬಯ್ಯ, ಹೋಂ ಸ್ಕೂಲ್‍ನ ಅನನ್ಯ ಆಯ್ಕೆಯಾಗಿದ್ದಾರೆ. ಇವರು ಕರ್ನಾಟಕ ಒಲಿಂಪಿಕ್ ಸಂಸ್ಥೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಬೆಂಗಳೂರಿನ ಕಂಠೀರವ ಒಳಂಗಾಣ ಕ್ರೀಡಾಂಗಣದಲ್ಲಿ ನ.20ರ ವರೆಗೆ ನಡೆಯಲಿರುವ ಮಿನಿ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕೊಡಗನ್ನು ಪ್ರತಿನಿಧಿಸಲಿದ್ದಾರೆ. ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಇತರ ಸಚಿವರು ಪಾಲ್ಗೊಳ್ಳಲಿದ್ದಾರೆ. ಇವರಿಗೆ ಕರ್ನಾಟಕ ಸರ್ಕಾರದ ಎಲ್ಲಾ ಕ್ರೀಡಾ ಸೌಲಭ್ಯಗಳು ದೊರೆಯಲಿದೆ ಎಂದು…

Read More

ಮಡಿಕೇರಿ ನ.15 NEWS DESK : ವಿಭಿನ್ನ, ವಿಶಿಷ್ಟ ಸಂಸ್ಕೃತಿಯುಳ್ಳ ಜನಾಂಗ ಕೊಡವರಾಗಿದ್ದು, ಈ ಸಂಸ್ಕೃತಿ ಹಾಗೂ ಭಾಷೆಯನ್ನು ಉಳಿಸಿಕೊಂಡು ಹೋಗುವ ಹಾಗೂ ಮುಂದಿನ ಪೀಳಿಗೆಯಲ್ಲಿ ಅಭಿಮಾನ ಹುಟ್ಟಿಸುವ ಕೆಲಸ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಆಗಬೇಕಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ಹೇಳಿದರು. ಅರೆಕಾಡುವಿನ ರಿಯಾವರ್ ರೆಸಾಟ್ರ್ಸ್‍ನಲ್ಲಿ ನಡೆದ ಅಕಾಡೆಮಿಯ ವಿನೂತನ ಕಾರ್ಯಕ್ರಮವಾದ ‘ನಾಡೊರ್ಮೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡವ ಸಾಂಸ್ಕೃತಿಕ ಹಬ್ಬವನ್ನು ಆಚರಿಸುವುದರೊಟ್ಟಿಗೆ ಆಯಾಯ ಊರು-ನಾಡಿನ ಯುವ ಜನಾಂಗದ ಪಾಲ್ಗೊಳ್ಳುವಿಕೆಗೆ ಪೂರಕವಾದ ವಾತಾವರಣ ನಿರ್ಮಾಣ ಆಗಬೇಕಿದೆ. ಹೊರಗೆ ನೆಲೆಸಿರುವ ಯುವಕರನ್ನು ಕೊಡಗಿನಲ್ಲಿಯೇ ನೆಲೆಸುವಂತೆ ಮಾಡಬೇಕು. ಕೊಡವ ಅಕಾಡೆಮಿಯ ಕೆಲಸ-ಕಾರ್ಯಗಳಿಗೆ ಉತ್ತೇಜನ ನೀಡುವ ಸಲುವಾಗಿ ನಾನು ವೈಯಕ್ತಿಕವಾಗಿ ಹಾಗೂ ಸರ್ಕಾರದ ಮಟ್ಟದಲ್ಲಿ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ ಅವರು ಮಾತನಾಡಿ ಕೊಡವ ಆಚಾರ-ವಿಚಾರ, ಸಂಸ್ಕøತಿ ದೇಶದಲ್ಲೇ ಅಗ್ರಸ್ಥಾನದಲ್ಲಿ ನಿಲ್ಲುವಂತದ್ದು. ಇಂತಹ ಹಿರಿಮೆಯುಳ್ಳ ಸಂಸ್ಕøತಿಯನ್ನು ಕೊಡವ ಜನಾಂಗ ಉಳಿಸಿಕೊಂಡು, ಬೆಳೆಸಿಕೊಂಡು…

Read More

ಮಡಿಕೇರಿ ನ.15 NEWS DESK : ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಶತತ ಪ್ರಯತ್ನ ಮತ್ತು ಪೂರ್ವ ಸಿದ್ಧತೆ ಅತ್ಯಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪ್ರತಿಪಾದಿಸಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಶಿಸ್ತು, ಶ್ರದ್ಧೆ ಮತ್ತು ಸಮಯಪ್ರಜ್ಞೆ ಅತೀಮುಖ್ಯ. ಆದ್ದರಿಂದ ಇವುಗಳನ್ನು ಅಳವಡಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು ಎಂದು ಕೆ.ರಾಮರಾಜನ್ ಸಲಹೆ ನೀಡಿದರು. ಇಂದಿನ ಆಧುನಿಕ ಯುಗದಲ್ಲಿ ಅವಕಾಶಗಳು ಬಹಳಷ್ಟು ಇದ್ದು, ಅವುಗಳನ್ನು ಇಚ್ಛಾಶಕ್ತಿಯಿಂದ ಬಳಸಿಕೊಳ್ಳಬೇಕು. ಆ ದಿಸೆಯಲ್ಲಿ ಗುರಿ ಮತ್ತು ಉದ್ದೇಶ ಇರಬೇಕು ಎಂದರು. ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಳ್ಳಬೇಕು. ಸತತ ಪ್ರಯತ್ನ ಇದ್ದಲ್ಲಿ ಪ್ರಶಸ್ತಿ ಹಾಗೂ ಉದ್ಯೋಗ ದೊರೆಯಲಿದೆ. ಯುವ ವಯಸ್ಸಿನಲ್ಲಿ ಜೀವನ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು. ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡಬೇಕು…

Read More

ಮಡಿಕೇರಿ ನ.15 NEWS DESK : ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ, ಜೇಡ್ಲ ಗೋಶಾಲೆಯಿಂದ ಪ್ರಥಮ ವರ್ಷದ “ಜೇಡ್ಲ ಗೋಕುಲ ತಿಲಕ” ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ರಾಮಚಂದ್ರಾಪುರ ಮಠ, ಹೊಸನಗರದ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ, ಜೇಡ್ಲ, ಸಂಪಾಜೆ ಗೋಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ: 07-12-2024 ರಂದು ಆಯ್ದ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 5 ದೇಶೀ ಗೋ ಪಾಲಕರಿಗೆ “ಜೇಡ್ಲ ಗೋಕುಲ ತಿಲಕ-24” ಎಂಬ ಬಿರುದಿನೊಂದಿಗೆ ಪ್ರೋತ್ಸಾಹ ಧನ ಹಾಗೂ ಪ್ರಶಂಸನಾ ಪತ್ರ ನೀಡಲಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅರ್ಹ ದೇಶೀ ಗೋ ಪಾಲಕರು 22-11-24 ರ ಮೊದಲು ಅರ್ಜಿಯನ್ನು ಸಲ್ಲಿಸಲು ಪ್ರಕಟಣೆ ತಿಳಿಸಿದೆ. ವಿವರಗಳಿಗಾಗಿ:9886266120 ಅಥವಾ 9481979526 ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ.

Read More

ಮಡಿಕೇರಿ ನ.15 NEWS DESK : ಕುಶಾಲನಗರ- ಶ್ರೀರಂಗಪಟ್ಟಣ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದ್ದು, ಕೊಡಗಿನ ಜನರಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಭರವಸೆ ನೀಡಿದ್ದಾರೆ. ಮಡಿಕೇರಿ ತಾಲ್ಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕೊಡಗು ಜಿಲ್ಲೆಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸದಾ ಶ್ರಮಿಸುವುದಾಗಿ ತಿಳಿಸಿದರು. ಕುಶಾಲನಗರದವರೆಗಿನ ರೈಲು ಮಾರ್ಗದ ಕಾಮಗಾರಿ ಕೂಡ ಸಧ್ಯದಲ್ಲೇ ಆರಂಭಗೊಳ್ಳಲಿದೆ. ಬಿಎಸ್‍ಎನ್‍ಎಲ್ ನೆಟ್‍ವರ್ಕ್ ಸಮಸ್ಯೆಯ ಕುರಿತು ದೂರುಗಳು ಕೇಳಿ ಬಂದಿದೆ. ಜಿಲ್ಲೆಯಾದ್ಯಂತ ಟವರ್ ಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ, ಶೀಘ್ರ ನೆಟ್‍ವರ್ಕ್ ಸಮಸ್ಯೆ ಬಗೆಹರಿಯಲಿದೆ. ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು, ರಸ್ತೆ, ತಡೆಗೋಡೆ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲು ಬದ್ಧನಾಗಿರುವುದಾಗಿ ತಿಳಿಸಿದರು. ::: ಮಾವುತರ ಸಮಸ್ಯೆಗೆ ಸ್ಪಂದನೆ ::: ದುಬಾರೆ ಸಾಕಾನೆ ಶಿಬಿರಕ್ಕೆ ಭೇಟಿ ನೀಡಿದ್ದ ಸಂಸದ ಯದುವೀರ್ ಅವರು ಮಾವುತರು ಹಾಗೂ ಕಾವಡಿಗರ ಸಮಸ್ಯೆಗಳನ್ನು ಆಲಿಸಿದರು. ಮನವಿಯನ್ನು ಸ್ವೀಕರಿಸಿದ…

Read More

ಮಡಿಕೇರಿ ನ.15 NEWS DESK : ಮಡಿಕೇರಿಯ ಗ್ರಾಮಾಂತರ ಮಂಡಲದ ಹಾಕತ್ತೂರು-ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾಜಪಾ ಸಂಘಟನಾ ಪರ್ವ ಕಾರ್ಯಕ್ರಮದಲ್ಲಿ  ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್  ಭಾಗವಹಿಸಿದರು. ನಂತರ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾರ 150ನೇ ಜನ್ಮದಿನದ ಶುಭ ಹಾರೈಸಿ, ಪಕ್ಷವನ್ನು ತಳಮಟ್ಟದಿಂದ ಕಟ್ಟುವ ಕೆಲಸಕ್ಕೆ ಕೈ ಜೋಡಿಸಿ ಸಶಕ್ತ ಭಾರತ ನಿರ್ಮಾಣ ಮಾಡಲು ಕಾರ್ಯಕರ್ತರಿಗೆ ಕರೆ ನೀಡಿದರು. ಇದೇ ಸಂದರ್ಭ ಗ್ರಾಮಸ್ಥರ ಅಹವಾಲು ಸ್ವೀಕರಿಸಿ, ಸಮಸ್ಯೆಗಳನ್ನು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Read More