ಮಡಿಕೇರಿ NEWS DESK ಡಿ.1 : ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿರಾಜಪೇಟೆ-ಸಿದ್ದಾಪುರ ರಸ್ತೆಯ ಮಗ್ಗುಲ ಜಂಕ್ಷನ್ ಬಳಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ನೆಹರು ನಗರದ ನಿವಾಸಿ ಅಲಿಂ ಮೊಹಮ್ಮದ್ (41) ಎಂಬಾತನನ್ನು ಬಂಧಿಸಿ 1 ಕೆಜಿ 88 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಖಚಿತ ಮಾಹಿತಿ ದೊರೆತ ಹಿನ್ನೆಲೆ ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದರು. ಪೊಲೀಸ್ ಅಧಿಕಾರಿಗಳ ಕಾರ್ಯದಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಲೇಖಕ: admin
ಮಡಿಕೇರಿ NEWS DESK ಡಿ.1 : ಪರಿಶುದ್ಧ ಗಾಳಿ, ಉತ್ತಮ ವಾತಾವರಣ ಸೂಚ್ಯಂಕದಲ್ಲಿ ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ರಾಷ್ಟ್ರಮಟ್ಟದಲ್ಲಿ ಉನ್ನತ ಸ್ಥಾನದಲ್ಲಿದೆ. ಈ ಹೆಗ್ಗಳಿಕೆಯ ಹಿಂದಿರುವ ಪೌರ ಕಾರ್ಮಿಕರ ಪರಿಶ್ರಮವನ್ನು ಹ್ಯುಮಾನಿಟಿ ಫಸ್ಟ್ ಇಂಡಿಯಾ ಮಡಿಕೇರಿ ಅಹಮದಿಯ ಮುಸ್ಲಿಂ ಜಮಾತಿನ (ಲಜ್ನಾಯಿಮಾ ಇಲ್ಲಹ್) ಮಹಿಳಾ ವಿಭಾಗ ಗುರುತಿಸಿ, ಅವರಿಗೆ ಬೆಳಗ್ಗಿನ ಉಪಹಾರದ ವ್ಯವಸ್ಥೆ ಮಾಡಿ ತನ್ನ ಗೌರವವನ್ನು ಸೂಚಿಸಿತು. ಈ ಸಂದರ್ಭ ಹ್ಯುಮಾನಿಟಿ ಫಸ್ಟ್ ಇಂಡಿಯಾದ ಸೌತ್ ಕರ್ನಾಟಕದ ಮುಖ್ಯಸ್ಥರಾದ ಮೊಹಮ್ಮದ್ ಶರೀಫ್ ಮಾತನಾಡಿ, ಪೌರಕಾರ್ಮಿಕರು ಮಡಿಕೇರಿಯ ಸ್ವಚ್ಛತೆಗಾಗಿ ಮಾಡುತ್ತಿರುವ ಕೆಲಸ ಶಾಘನೀಯ. ಪೌರಕಾರ್ಮಿಕರ ಅಹರ್ನಿಶಿ ದುಡಿಮೆ, ಪರಿಶ್ರಮದಿಂದ ಮಡಿಕೇರಿ ನಗರ ಸ್ವಚ್ಛವಾಗಿದೆ ಎಂದು ಮನದುಂಬಿ ನುಡಿದರು. ಮಡಿಕೇರಿ ನಗರ ಶುದ್ಧ ಗಾಳಿ, ಪರಿಸರವನ್ನು ಹೊಂದಲು ಪೌರಕಾರ್ಮಿಕರ ಪರಿಶ್ರಮ ಕಾರಣ.ಅದಕ್ಕಾಗಿ ಅವರಿಗೆ ಬೆಳಗ್ಗಿನ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಈ ಸಂದರ್ಭ ಪೌರಾಯುಕ್ತರಾದ ರಮೇಶ್ ಮಾತನಾಡಿ, ಹ್ಯುಮಾನಿಟಿ ಫಸ್ಟ್ ಇಂಡಿಯಾದ ಕಾರ್ಯ ಮೆಚ್ಚತಕ್ಕಂತದ್ದು. ಪೌರಕಾರ್ಮಿಕರನ್ನು ಈ ರೀತಿ ನೆನೆಸಿಕೊಂಡಿರುವುದು ಅಪರೂಪದ್ದೆಂದು ನುಡಿದರು.…
ಮಡಿಕೇರಿ NEWS DESK ಡಿ.1 : ಶ್ರೀರಾಮಾಂಜನೇಯ ಭಜನಾ ಮಂಡಳಿಯ 34ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಭಾನುವಾರ ‘ಅಖಂಡ ಏಕಾಹ ಭಜನಾ’ ಕಾರ್ಯಕ್ರಮ ವಿಶೇಷವಾಗಿ ನಡೆಯಿತು. ಅಖಂಡ ಏಕಾಹ ಭಜನಾ ಕಾರ್ಯಕ್ರಮ ಇಂದು ಬೆಳಗ್ಗೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ನಿರಂತರವಾಗಿ ನಡೆದು, ಸಂಜೆ 7.30ಕ್ಕೆ ಹನಮಾನ್ ಚಾಲೀಸ್, ಮಂಗಳಾಚರಣೆ, ಮಹಾಪೂಜೆ, ಪ್ರಸಾದ ವಿತರಣೆಯೊಂದಿಗೆ ಸಮಾಪನಗೊಂಡಿತು. ಅಖಂಡ ಏಕಾಹ ಭಜನಾ ಕಾರ್ಯಕ್ರಮದಲ್ಲಿ ಶ್ರೀ ರಾಮಾಂಜನೇಯ ಮಹಿಳಾ ಭಜನಾ ಮಂಡಳಿ, ಶ್ರೀ ಸತ್ಯಸಾಯಿ ಭಜನಾ ಮಂಡಳಿ, ಮೋದೂರಿನ ಶ್ರೀಮತಿ ಮೇಘಾ ಭಟ್ ಮತ್ತು ತಂಡ, ಶ್ರೀ ಕನ್ನಿಕಾ ಪರಮೇಶ್ವರಿ ಭಜನಾ ಮಂಡಳಿ, ಶ್ರೀ ವಿಜಯ ವಿನಾಯಕ ಭಜನಾ ಮಂಡಳಿ, ಕಗ್ಗೋಡ್ಲುವಿನ ಶ್ರೀ ಸನಾತನ ಭಜನಾ ಮಂಡಳಿ, ಜೋಡುಪಾಲದ ಶ್ರೀ ದೇವಿ ಭಜನಾ ಮಂಡಳಿ, 2ನೇ ಮೊಣ್ಣಂಗೇರಿಯ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ, ಕತ್ತಲೆಕಾಡುವಿನ ಶ್ರೀ ವಿನಾಯಕ ಸೇವಾ ಟ್ರಸ್ಟ್, ಭೂತನಕಾಡುವಿನ ಶ್ರೀ ಓಂಶಕ್ತಿ ಭಜನಾ ಮಂಡಳಿ, ತೊಂಬತ್ತುಮನೆಯ ಶ್ರೀ ವಿನಾಯಕ ಸೇವಾ…
ಮಡಿಕೇರಿ NEWS DESK ಡಿ.1 : ಮಾನಸಿಕವಾಗಿ ಹೆಚ್ಚುತ್ತಿರುವ ಒತ್ತಡದಿಂದಾಗಿ ಹಲವರಲ್ಲಿ ಕಂಡು ಬರುತ್ತಿರುವ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರೋಟರಿ ಸಂಸ್ಥೆಯು ಮಾನಸಿಕ ಚಿಕಿತ್ಸೆ ಸಂಬಂಧಿತ ಯೋಜನೆ ರೂಪಿಸಿದೆ ಎಂದು ರೋಟರಿ ಜಿಲ್ಲೆ 3181 ನ ಗವರ್ನರ್ ವಿಕ್ರಂದತ್ತ ಹೇಳಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಆಯೋಜಿತ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಕ್ರಂದತ್ತ, ರೋಟರಿಯು ಈ ಸಾಲಿನಲ್ಲಿ ಅನೇಕ ವಿಶೇಷ ಯೋಜನೆಗಳನ್ನು ಜಾರಿಗೊಳಿಸಿದೆ, ಮಹಿಳೆಯರನ್ನು ಕಾಡುತ್ತಿರುವ ಗರ್ಭಕಂಠ ಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಲಸಿಕೆ ನೀಡಲಾಗುತ್ತಿದೆ, ಮಾನಸಿಕ ಒತ್ತಡದಿಂದಾಗಿ ಕಂಡುಬರುತ್ತಿರುವ ಮಾನಸಿಕ ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೂ ಶಿಬಿರಗಳ ಮೂಲಕ ತಜ್ಞರಿಂದ ಚಿಕಿತ್ಸೆ ನೀಡಲಾಗುತ್ತಿದೆ, ಸಂಧ್ಯಾಸುರಕ್ಷಾ ಯೋಜನೆ ಮೂಲಕ ಹಿರಿಯ ನಾಗರಿಕರಿಗೆ ಅಗತ್ಯ ಸೌಲಭ್ಯವನ್ನೂ ಕಲ್ಪಿಸಲಾಗುತ್ತಿದೆ ಎಂದರು. ಹೆಚ್ಚುತ್ತಿರುವ ಶಿಶುಮರಣ ತಪ್ಪಿಸುವ ನಿಟ್ಟಿನಲ್ಲಿ ಮಂಗಳೂರು, ಮೈಸೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ರೋಟರಿ ಸಹಭಾಗಿತ್ವದಲ್ಲಿ ಶಿಶುಸಂರಕ್ಷಣಾ ಯೋಜನೆಗೆ ಆಸ್ಪತ್ರೆಗಳು ಕಾರ್ಯಕ್ರಮ ರೂಪಿಸುತ್ತಿದೆ ಎಂದು…
ಮಡಿಕೇರಿ NEWS DESK ಡಿ.1: ಬುಡಕಟ್ಟು ಸಮುದಾಯದ ಮಕ್ಕಳಲ್ಲಿ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ರಕ್ಷಣೆಯೊಂದಿಗೆ ಅವರಲ್ಲಿ ಸುಪ್ತವಾಗಿ ಅಡಗಿರುವ ಸಾಂಸ್ಕೃತಿಕ ಪ್ರತಿಭೆಯನ್ನು ಗುರುತಿಸಿ ಅವರನ್ನು ಶೈಕ್ಷಣಿಕವಾಗಿ ಉತ್ತೇಜಿಸುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕದ ವತಿಯಿಂದ ಡಿಸೆಂಬರ್ ಅಂತ್ಯದ ವೇಳೆಗೆ ಕೊಡಗು ಜಿಲ್ಲೆಯಲ್ಲಿ ರಾಜ್ಯಮಟ್ಟದ ಬುಡಕಟ್ಟು ಮಕ್ಕಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಮಡಿಕೇರಿಯಲ್ಲಿ ತಿಳಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಜಿಲ್ಲಾ ಸಂಸ್ಥೆಯ ಮಡಿಕೇರಿ ನಗರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಕುರಿತು ಪದಾಧಿಕಾರಿಗಳೊಂದಿಗೆ ಪರಾಮರ್ಶೆ ನಡೆಸಿದ ನಂತರ ಮಾತನಾಡಿದ ಅವರು ಸಂಸ್ಥೆಯ ವಜ್ರಮಹೋತ್ಸವದ ಅಂಗವಾಗಿ ಪ್ರಸಕ್ತ ಸಾಲಿನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಶಾಲಾ ಮಕ್ಕಳಿಂದ ಕುಶಾಲನಗರದಲ್ಲಿ ಜಿಲ್ಲಾಮಟ್ಟದ Rally ನಡೆಸುವ ಮೂಲಕ ಸ್ಕೌಟ್ಸ್, ಗೈಡ್ಸ್…
ಮಡಿಕೇರಿ NEWS DESK ಡಿ.1 : ಕರ್ನಾಟಕ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡ ಹಿನ್ನಲೆಯಲ್ಲಿ ರಾಜ್ಯ ಸರಕಾರ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಸುವರ್ಣ ಸಂಭ್ರಮ -50 ಆಚರಣೆ ಪ್ರಯುಕ್ತ ಕೊಡಗು ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಮೂರ್ನಾಡು ಸರ್ಕಾರಿ ಪ್ರೌಢ ಶಾಲೆಯ ತಶ್ಮಿಕಾ ಕೆ.ಎಂ ಪ್ರಥಮ, ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆಯ ಅಮೃತ ಟಿ.ಜೆ ದ್ವಿತೀಯ ಮತ್ತು ಕುಶಾಲನಗರ ಸರ್ಕಾರಿ ಪದವಿ ಪ್ರೌಢಶಾಲೆಯ ಪ್ರಗತಿ ಬಡಿಗೇರ್ ತೃತೀಯ ಸ್ಥಾನ ಪಡೆದಿದ್ದಾರೆ. ಪದವಿಪೂರ್ವ ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಲಯನ್ಸ್ ಪಿ.ಯು ಕಾಲೇಜಿನ ಆದ್ವಿಕ (ಪ್ರ), ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಬಿ.ಹೆಚ್ (ದ್ವಿ), ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಸ್ಪಂದನ…
ಮಡಿಕೇರಿ NEWS DESK ನ.30 : ಸುಂಟಿಕೊಪ್ಪ ಪೊಲೀಸ್ ಠಾಣೆ ಸಮೀಪ ನೂತನ ಪೊಲೀಸ್ ವಸತಿ ಗೃಹ ಕಟ್ಟಡದ ಕಾಮಗಾರಿಗೆ ಚಾಲನೆ ನೀಡಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭೂಮಿಪೂಜೆ ನೆರವೇರಿಸಿದರು. ಸುಮಾರು 3.64 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಳ್ಳಲಿದೆ. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ವಿರಾಜಪೇಟೆ NEWS DESK ನ.30 : ವಿರಾಜಪೇಟೆಯ ಅರ್ಜಿ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಮಮತ ಅವರನ್ನು ಕರ್ತವ್ಯಲೋಪದ ಆರೋಪದಡಿ ಅಮಾನತು ಮಾಡಲಾಗಿದೆ. ಮಮತ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರು ಮತ್ತು ಶಿಸ್ತು ಪ್ರಾಧಿಕಾರದ ಅಧಿಕಾರಿ ಜೀಲಾನಿ ಹೆಚ್.ಮೊಕಾಶಿ ಆದೇಶ ಹೊರಡಿಸಿದ್ದಾರೆ. ವಸತಿ ಶಾಲೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್ .ಪೊನ್ನಣ್ಣ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿದ ಸಂದರ್ಭ ಕೆಲವು ನ್ಯೂನತೆಗಳು ಕಂಡು ಬಂದಿತ್ತು. ಶಾಲೆಯ ಅಡುಗೆ ಕೋಣೆ ನೊಣಗಳಿಂದ ಕೂಡಿರುವುದು, ಶಾಲೆಯ ಕಿಟಕಿಗಳು ಪಾಳು ಬಿದ್ದಿರುವುದು, ಶೌಚಾಲಯದಲ್ಲಿ ಶುಚಿತ್ವ ಕಾಪಾಡದೇ ಇರುವುದು, ವಿದ್ಯಾರ್ಥಿಗಳು ಬಳಸುವ ಹಾಸಿಗೆಗಳು ಯೋಗ್ಯವಾಗಿಲ್ಲದಿದ್ದರೂ ಶಾಲೆಯಲ್ಲಿರುವ ಹೊಸ ಹಾಸಿಗೆಯನ್ನು ವಿತರಣೆ ಮಾಡದೇ ಇರುವುದು, ದಾಸ್ತಾನು/ವಿತರಣೆ ನಿರ್ವಹಣೆ ಮಾಡದೇ ಇರುವುದು, ಸಹದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದದೆ ಇರುವುದು ಗೋಚರಿಸಿತ್ತು. ಕಳೆದ 6 ವರ್ಷಗಳಿಂದ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಾಂಶುಪಾಲರು ಶಾಲೆಯ ನ್ಯೂನ್ಯತೆಗಳ ಬಗ್ಗೆ ಮೇಲಾಧಿಕಾರಿಗಳ…
ಮಡಿಕೇರಿ NEWS DESK ನ.30 : ಕರ್ನಾಟಕ ಸರಕಾರ, ಶಿಕ್ಷಣ ಇಲಾಖೆ ಹಾಗೂ ಅಕ್ಷರ ಫೌಂಡೇಶನ್ ಸಹಯೋಗದೊಂದಿಗೆ ಗಣಿತ ಕಲಿಕಾ ಆಂದೋಲನ ಯೋಜನೆಯು ಸುಮಾರು ವರ್ಷಗಳಿಂದ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳ ಗುಣಾತ್ಮಕ ಕಲಿಕೆಗಾಗಿ ಹಾಗೂ ಮಕ್ಕಳು ಗಣಿತ ವಿಷಯವನ್ನು ಸರಳವಾಗಿ, ಅನುಭವಾತ್ಮಕವಾಗಿ ಕಲಿಯಲು ಜಿಲ್ಲೆಯ ಪ್ರತಿ ಶಾಲೆಗಳಿಗೆ ಗಣಿತ ಕಿಟ್ ನೀಡುವುದರ ಮೂಲಕ ಅನುಷ್ಠಾನಗೊಂಡಿರುತ್ತದೆ. ಈ ಯೋಜನೆ ಅಡಿಯಲ್ಲಿ ಕೊಡಗು ಜಿಲ್ಲೆಯ ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ, ಸಮುದಾಯ, ಶೈಕ್ಷಣಿಕ ಸ್ವಯಂ ಸೇವಕರು, ಗ್ರಾಮ ಪಂಚಾಯತ್ ಮಟ್ಟದ ಶೈಕ್ಷಣಿಕ ತಂಡದ ನಾಯಕರು ಹಾಗೂ ಅಕ್ಷರ ಫೌಂಡೇಶನ್ ಸಹಭಾಗಿತ್ವದಲ್ಲಿ “ಗ್ರಾಮ ಪಂಚಾಯಿತಿ ಮಟ್ಟದ ಗಣಿತ ಸ್ಪರ್ಧೆಗಳನ್ನು 4ನೇ ತರಗತಿ ಯಿಂದ 6ನೇ ತರಗತಿಯ ಮಕ್ಕಳಿಗೆ ಒಟ್ಟು 102 ಗ್ರಾಮ ಪಂಚಾಯತಿಗಳಲ್ಲಿ ಮಾಡಲಾಯಿತು. ಸುಮಾರು 7600 ಮಕ್ಕಳು ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ. ಗ್ರಾಮ ಪಂಚಾಯತಿ ಮಟ್ಟದ ಗಣಿತ ಸ್ಪರ್ಧೆಗಳು ಎಲ್ಲರ ಸಹಕಾರದೊಂದಿಗೆ ಉತ್ತಮ ರೀತಿಯಲ್ಲಿ ಯಶಸ್ಸು ಸಾಧಿಸಿದೆ.…
ಮಡಿಕೇರಿ NEWS DESK ನ.30 : ಮಳೆಗಾಲ ಮುಗಿದಿರುವ ಹಿನ್ನೆಲೆ ಜಿಲ್ಲೆಯ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆ ಕಾಮಗಾರಿಯನ್ನು ಕೂಡಲೇ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಸಕ್ತ (2024-25) ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಸಂಬಂಧ ಶನಿವಾರ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಸಿವಿಲ್ ಕಾಮಗಾರಿಗಳನ್ನು ಕೈಗೊಳ್ಳಲು ನವೆಂಬರ್ ಡಿಸೆಂಬರ್, ಜನವರಿ, ಫೆಬ್ರವರಿ, ಮಾರ್ಚ್ ಈ ಐದು ತಿಂಗಳು ಸೂಕ್ತವಾಗಿದ್ದು, ಈ ಹಿನ್ನೆಲೆ ಮಳೆಹಾನಿ ಕಾಮಗಾರಿಗಳು ಸೇರಿದಂತೆ ರಸ್ತೆ ಕಾಮಗಾರಿಗಳನ್ನು ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಾಕೀತು ಮಾಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ವಿರಾಜಪೇಟೆ-ಮಡಿಕೇರಿ ಮಾರ್ಗದ…






