ಮಡಿಕೇರಿ ನ.30 NEWS DESK : “ಇಂಗ್ಲೀಷ್”ನ್ನು ಒಂದು ಭಾಷೆಯಾಗಿ ಪ್ರಾಥಮಿಕ ಹಂತದಿಂದಲೆ ಮಕ್ಕಳಿಗೆ ಕಲಿಸುವುದರ ಜೊತೆ ಜೊತೆಯಲ್ಲೆ, ಅತ್ಯಂತ ಸಂಪದ್ಭರಿತವಾದ ಕನ್ನಡ ಭಾಷೆಯತ್ತ ಅವರಲ್ಲಿ ಆಸಕ್ತಿಯನ್ನು ಮೂಡಿಸುವ ಮೂಲಕ ಕನ್ನಡ ಭಾಷಾ ಸಂಸ್ಕೃತಿಯನ್ನು ಸಂರಕ್ಷಿಸುವ ಕಾರ್ಯ ನಡೆಯಬೇಕಾಗಿದೆಯೆಂದು ಮಡಿಕೇರಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ದೊಡ್ಡೇಗೌಡ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ನಗರದ ಲಯನ್ಸ್ ಸಭಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿತ “ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಲ್ಲಿ ಒಂದು ಭಾಷೆಯಾಗಿ ಇಂಗ್ಲೀಷ್ ಕಲಿಸುವ ಹಂತದಲ್ಲೆ, ಕನ್ನಡ ಭಾಷೆಯ ಆಳವಾದ ಜ್ಞಾನವನ್ನು ಹೊಂದಿರುವ ಶಿಕ್ಷಕ ವರ್ಗದ ಮೂಲಕ, ಮಕ್ಕಳಲ್ಲಿ ಕನ್ನಡ ಭಾಷಾ ಸಂಸ್ಕೃತಿಯತ್ತ ಒಲವು ಮೂಡಿಸುವ ಪ್ರಯತ್ನ ಅತ್ಯವಶ್ಯವಾಗಿ ನಡೆಯಬೇಕು. ಕನ್ನಡದ ಮೌಲ್ಯ ಮತ್ತು ಬದುಕು ಅತ್ಯಂತ ದೊಡ್ಡದಾಗಿದ್ದು, ಇದನ್ನರಿತು ಕನ್ನಡಿಗರಾದ ನಾವೆಲ್ಲ ಒಂದೆನ್ನುವ ಭಾವವನ್ನು ಮನದಲ್ಲಿ ತುಂಬಿಕೊಂಡು ಒಟ್ಟಾಗಿ…
ಲೇಖಕ: admin
ಮಡಿಕೇರಿ ನ.30 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು, ಮೂರ್ನಾಡು ಹೋಬಳಿ ಘಟಕ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ, ಮೂರ್ನಾಡು ಹೋಬಳಿ ಘಟಕದ ವಿವಿಧ ಶಾಲಾ ಕಾಲೇಜು, ವಿದ್ಯಾ ಸಂಸ್ಥೆಗಳು ಹಾಗೂ ವಿವಿಧ ಸಾರ್ವಜನಿಕ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಮೂರ್ನಾಡುವಿನ ಪಿ.ಎಂ ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮೂರ್ನಾಡು ವಿದ್ಯಾ ಸಂಸ್ಥೆಯ ಕಾಲೇಜು ಮೈದಾನದಲ್ಲಿ ಕೊಡಗಿನ ಹಿರಿಯ ಸಾಹಿತಿಗಳಾದ ನಾಗೇಶ್ ಕಾಲೂರು, ಮಡಿಕೇರಿ ಪೊಲೀಸ್ ಉಪ ಅಧೀಕ್ಷಕ ರವಿ ಹಾಗೂ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಡೊಳ್ಳು ಬಾರಿಸುವ ಮೂಲಕ ವರ್ಣರಂಜಿತ ಬೃಹತ್ ಕನ್ನಡ ಮೆರವಣಿಗೆಯನ್ನು ಉದ್ಘಾಟಿಸಿದರು. ಮೂರ್ನಾಡುವಿನ ಶಾಲಾ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಅಂಗನವಾಡಿ ಕಾರ್ಯಕರ್ತರು, ವಿವಿಧ ಸ್ತ್ರೀ ಶಕ್ತಿ ಸಂಘಗಳು, ಟೈಲರ್ ಅಸೋಸಿಯೇಷನ್, ಗಜಾನನ, ಆಪ್ತಮಿತ್ರ, ಸ್ವಸ್ತಿಕ್, ರಾಮ ಮಂದಿರ, ಮೂರ್ನಾಡು, ಗಾಂಧಿನಗರ, ಜೈಭೀಮ್…
ಡಿ.2 ರಿಂದ 8ರ ವರೆಗಿನ ಹನ್ನೆರಡು ರಾಶಿಗಳ ವಾರ ಭವಿಷ್ಯ (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 81056 34429) ಮೇಷ ರಾಶಿ :: ಈ ವಾರದಲ್ಲಿ ನಿಮಗೆ ಹೊಸ ಸುದ್ದಿ ಕೇಳಿ ಬರಲಿದೆ. ಸಂತೋಷವು ಆಗಲಿದೆ. ಆರ್ಥಿಕ ಪ್ರಗತಿಯನ್ನು ಹೊಂದುವಿರಿ, ಸ್ನೇಹಿತರಿಗೆ ಸಹಾಯ ಮಾಡುವಿರಿ, ದೂರ ಪ್ರಯಾಣ ಯೋಗವಿದೆ. :: ಶುಭ ಸಂಖ್ಯೆ :; 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ವೃಷಭ ರಾಶಿ :: ದೂರದ ಪ್ರವಾಸಕ್ಕೆ ಹೋಗಲಿದ್ದು, ಸ್ನೇಹಿತರಿಂದ ಉಡುಗೊರೆ ಪಡೆಯಲಿದ್ದೀರಿ. ವ್ಯಾಪಾರಸ್ಥರಿಗೆ ಹಣದ ಅಡಚಣೆ ಆಗಲಿದೆ. ಹೊಸ ಸಂಬಂಧ ಕೂಡಿ ಬರಲಿದೆ. ಚರ್ಮಕ್ಕೆ ಸಂಬಂಧಪಟ್ಟ ವ್ಯಾದಿ ಕಾಡಲಿದೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ :: ಈ ರಾಶಿಯವರಿಗೆ ತುಂಬಾ ಸುತ್ತಾಟ, ಶುಭ ಕಾರ್ಯದಲ್ಲಿ ಭಾಗವಹಿಸುವಿಕೆ, ವಿಪರಿಮಿತ ಹಣದ ಖರ್ಚು, ಗಂಟಲು ನೋವು, ನೆಗಡಿ,…
ಮಡಿಕೇರಿ ನ.30 NEWS DESK : ಸುಂಟ್ಟಿಕೊಪ್ಪದಲ್ಲಿ ನಡೆದ ಕುಶಾಲನಗರ ವಲಯ ಮಟ್ಟದ ಎಸ್.ಕೆ.ಎಸ್.ಎಸ್.ಎಫ್ ಇಸ್ಲಾಮಿಕ್ ಕಲೋತ್ಸವದಲ್ಲಿ ಕೊಡ್ಲಿಪೇಟೆ ಯೂನಿಟ್ (286) ಅಂಕಗಳೊಂದಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. 284 ಅಂಕಗಳೊಂದಿಗೆ ಕುಶಾಲನಗರ ದ್ವಿತೀಯ ಹಾಗೂ 251 ಅಂಕಗಳನ್ನುಗಳಿಸಿ ಮಡಿಕೇರಿ ಯೂನಿಟ್ ತೃತೀಯ ಸ್ಥಾನ ಪಡೆದುಕೊಂಡಿತ್ತು. ಸಬ್ ಜೂನಿಯರ್ ಮತ್ತು ಸೂಪರ್ ಸೀನಿಯರ್ ವಿಭಾಗದಲ್ಲಿ ಕೊಡ್ಲಿಪೇಟೆ, ಜೂನಿಯರ್,ಜನರಲ್ ಗ್ರೂಪ್,ಮತ್ತು ಸೀನಿಯರ್ ವಿಭಾಗದಲ್ಲಿ ಕುಶಾಲನಗರ ಯೂನಿಟ್ ಪ್ರಥಮ ಸ್ಥಾನ ಪಡೆಯಿತು. ಸಬ್ ಜೂನಿಯರ್ ವಿಭಾಗದ ಫೆಸ್ಟ್ ಐಕಾನ್ ಆಗಿ ಮೊಹಮ್ಮದ್ ಆಶಿಮ್ ಕೊಡ್ಲಿಪೇಟೆ, ಜೂನಿಯರ್ ವಿಭಾಗದಲ್ಲಿ ತಬೀಶ್ ಶನಿವಾರಸಂತೆ,ಸೀನಿಯರ್ ವಿಭಾಗದಲ್ಲಿ ಮೊಹಮ್ಮದ್ ಸಿನಾನ್ ಕುಶಾಲನಗರ, ಹಾಗೂ ಸೂಪರ್ ಸೀನಿಯರ್ ವಿಭಾಗದಲ್ಲಿ ಮೊಹಮ್ಮದ್ ರಾಜಿಕ್ ಕುಶಾಲನಗರ ಫೆಸ್ಟ್ ಐಕಾನ್ ಪ್ರಶಸ್ತಿ ಪಡೆದುಕೊಂಡರು. ಏಳು ಯೂನಿಟ್ ಭಾಗವಹಿಸಿದ್ದ ಕುಶಾಲನಗರ ವಲಯ ಎಸ್.ಕೆ.ಎಸ್.ಎಸ್.ಎಫ್. ಇಸ್ಲಾಮಿಕ್ ಕಲೋತ್ಸವದಲ್ಲಿ ತೀರ್ಪುಗಾರರಾಗಿ ಸಮದ್ ಬಾಖವಿ ಚಿಕ್ಕಮಗಳೂರು, ಅಬ್ಬಾಸ್ ಅಝ್ಹರಿ ಸಕಲೇಶಪುರ, ರಝಾಕ್ ಫೈಝಿ ಸಕಲೇಶಪುರ, ಕಮರುದ್ದೀನ್ ಫೈಝಿ ಕುಂಜಿಲ,ಮನಾಫ್ ಅಝ್ಹರಿ ಸುಂಟ್ಟಿಕೊಪ್ಪ, ಹಾಗೂ…
ಮಡಿಕೇರಿ ನ.30 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ, ಮಡಿಕೇರಿ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ ಮತ್ತು 2023-24ನೇ ಸಾಲಿನ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ನಗರದ ಲಯನ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ದೊಡ್ಡೇಗೌಡ ಉದ್ಘಾಟಿಸಿದರು. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಲೋಕನಾಥ ಅಮೆಚೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ 10ನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ಮಾದಾಪುರದ ಚನ್ನಮ್ಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯು.ಅದವಿಯ ಗೆ…
ಪುತ್ತೂರು ನ.30 NEWS DESK : ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳು ಕ್ಷಣ ಕ್ಷಣಕ್ಕೂ ಬದಲಾವಣೆಯಾಗುತ್ತಿವೆ. ಈ ಕ್ಷಿಪ್ರ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಪಠ್ಯಕ್ರಮದ ಜತೆಯಲ್ಲಿ ಅನೇಕ ಪೂರಕ ವಿಷಯಗಳನ್ನು ಕಲಿತುಕೊಳ್ಳುವುದು ತುಂಬಾ ಅವಶ್ಯಕ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕಿ ವಿದ್ಯಾ.ಆರ್.ಗೌರಿ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಡಾಟಾ ಸೈನ್ಸ್ ವಿಭಾಗದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ತಾಂತ್ರಿಕ ಉತ್ಸವ ಔರ-2ಕೆ24 (AURA 2K24) ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತಾಡಿದರು. ಸಮಾಜದ ಆವಶ್ಯಕತೆಗಳನ್ನು ಅರಿತುಕೊಂಡು ಕಟ್ಟ ಕಡೆಯ ವ್ಯಕ್ತಿಗೂ ಉಪಕಾರವಾಗುವ ರೀತಿಯಲ್ಲಿ ವಿದ್ಯಾರ್ಥಿಗಳು ಹೊಸತನ್ನು ಸಾಧಿಸಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಆವಶ್ಯಕತೆಗೆ ಅನುಗುಣವಾಗಿ ಕಾಲೇಜು ಇಂತಹ ಅನೇಕ ಚಟುವಟಿಕೆಗಳನ್ನು ಸಂಘಟಿಸುತ್ತದೆ ಇದರಲ್ಲಿ ಭಾಗಿಗಳಾಗಿ ಪ್ರಯೋಜನವನ್ನು ಪಡೆಯುವುದು ಪ್ರತಿಯೊಬ್ಬರ ಕರ್ತ್ಯವಾಗಬೇಕು ಎಂದರು. ಮೂರು ದಿನಗಳ…
ಮಡಿಕೇರಿ ನ.30 NEWS DESK : ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ಯುದ್ಧ ಸ್ಮಾರಕದ ಆವರಣದಲ್ಲಿ ಡಿ.7 ರಂದು ಬೆಳಗ್ಗೆ 10 ಗಂಟೆಗೆ ‘ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ’ ನಡೆಯಲಿದೆ. ಸಮಾರಂಭದಲ್ಲಿ ನಿವೃತ್ತ ಗ್ರೂಪ್ ಕ್ಯಾಪ್ಟನ್ ಬಿ.ಎನ್.ಮನು ಭೀಮಯ್ಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ. ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ ಇತರರು ಪಾಲ್ಗೊಳ್ಳಲಿದ್ದಾರೆ.
ನಾಪೋಕ್ಲು ನ.30 NEWS DESK : ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದು ಕರ್ನಾಟಕ ವಿಧಾನ ಪರಿಷತ್ ಶಾಸಕ ಎಂ.ಪಿ ಸುಜಾ ಕುಶಾಲಪ್ಪ ಹೇಳಿದರು. ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿ ಮತ್ತು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಕಲೆ, ಸಾಹಿತ್ಯದಲ್ಲಿ ಭಾಗವಹಿಸುವುದರ ಮೂಲಕ ಪ್ರತಿಭೆಯನ್ನು ಹೊರ ಹಾಕಬೇಕು. ಮಕ್ಕಳ ಪ್ರತಿಭೆಗೆ ಪೋಷಕರು ಸಹಕಾರ ನೀಡಬೇಕು. ಯಾವುದರಲ್ಲಿ ಹೆಚ್ಚು ಆಸಕ್ತಿ ಇದೆ ಎಂಬುದನ್ನು ಗುರುತಿಸಿ ಶಿಕ್ಷಕರು ಅದಕ್ಕೆ ಪ್ರೋತ್ಸಾಹ ನೀಡಿ ವಿದ್ಯಾರ್ಥಿಗಳ ಬೆಳವಣಿಗೆಗೆ ಮಾರ್ಗದರ್ಶಕರಾಗಬೇಕು ಎಂದರು. ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ…
ನಾಪೋಕ್ಲು ನ.30 NEWS DESK : ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ನೈತಿಕ ಹಾಗೂ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಿ ಕೊಡುಗೆ ನೀಡಬೇಕೆಂದು ಮೈಸೂರು ಚಾಮರಾಜ ಜೋಡಿ ರಸ್ತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪಟ್ಟಡ ಶಿವಕುಮಾರ್ ಕರೆ ನೀಡಿದರು. ಮದೆನಾಡಿನ ಬಿ.ಜಿ.ಎಸ್ ವಿದ್ಯಾಸಂಸ್ಥೆಯಲ್ಲಿ ನಡೆದ ನುಡಿಹಬ್ಬ ಹಾಗೂ ಮಕ್ಕಳ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಪೋಷಕರು, ಶಿಕ್ಷಕರು, ಹಿರಿಯರನ್ನು ಗೌರವಿಸುವ ಜೊತೆಗೆ ತಮ್ಮ ಭಾಷೆ, ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಕಡೆಗೆ ಗಮನ ಹರಿಸಬೇಕು. ಸಮಾಜಕ್ಕೆ ನಾವು ಕೊಡುಗೆ ನೀಡಿದರೆ ಸಮಾಜ ನಮ್ಮನ್ನು ಸದಾ ಸ್ಮರಿಸುತ್ತದೆ ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮದೆಮಹೇಶ್ವರ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಹುದೇರಿ ರಾಜೇಂದ್ರ ಮಾತನಾಡಿ, ಮಕ್ಕಳು ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮೈಗುಡಿಸಿಕೊಳ್ಳಬೇಕು ಎಂದು ಹೇಳಿದರು. ಸಂಸ್ಥೆಯ ಮೇಲ್ವಿಚಾರಕ ಸಚಿನ್, ಮುಖ್ಯಪಾಧ್ಯಾಯಿನಿ ಮುದ್ಯನ ಪುನೀತ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು…
ಮಡಿಕೇರಿ ನ.30 NEWS DESK : ಕೊಡಗು ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಗೆ ಸೇರಿದ ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿಯ QR code ಅನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅನಾವರಣಗೊಳಿಸಿ ಮಾತನಾಡಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೆರಿರ ನವೀನ್, ಗೋಣಿಕೊಪ್ಪ ಪಂಚಾಯತ್ ಅಧ್ಯಕ್ಷ ಪ್ರಮೋದ್ ಗಣಪತಿ , ಉಪಾಧ್ಯಕ್ಷರಾದ ಮಂಜುಳ, ಶಾಲಾ ಸಿಬ್ಬಂದಿಗಳು , ಮಕ್ಕಳು ಹಾಗೂ ಇತರೆ ಮುಖಂಡರುಗಳು ಹಾಜರಿದ್ದರು.






