ಮಡಿಕೇರಿ ಅ.8 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿಯು 49ನೇ ವರ್ಷದ ಉತ್ಸವ ಆಚರಣೆಗೆ ಸಜ್ಜಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಕೂಪದಿರ ಅಯ್ಯಪ್ಪ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್ಗಳನ್ನು ಬಳಸಲಾಗುತ್ತಿದ್ದು, ಶ್ರೀ ಕೃಷ್ಣನ ಬಾಲಲೀಲೆ ಹಾಗೂ ಕಂಸವಧೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ. ದಿಂಡಿಗಲ್‍ನ ಕಳೆಯಗಂ ಲೈಟಿಂಗ್ ಬೋರ್ಡ್ ಅಳವ ಡಿಸಲಿದ್ದು, ಧ್ವನಿವರ್ಧಕ ಹಾಗೂ ಸ್ಟುಡಿಯೋ ಲೈಟಿಂಗ್ ವ್ಯವಸ್ಥೆಯನ್ನು ಬೆಂಗ ಳೂರಿನ ಪಿಎಸ್‍ಎಲ್ ಸಂಸ್ಥೆ ಒದಗಿಸಲಿದೆ. ಪ್ಲಾಟ್ ಫಾರಂ ನಿರ್ಮಾಣ ಹಾಗೂ ಟ್ರ್ಯಾಕ್ಟರ್ ಸೆಟ್ಟಿಂಗ್ಸ್‍ನ್ನು ಸಮಿತಿ ಸದಸ್ಯರೇ ಮಾಡಲಿದ್ದಾರೆ. 19 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಸಮಿತಿಯ ಆಲ್ವಿನ್, ರಾಕಿ ಮತ್ತು ಸದಸ್ಯರು ಕಲಾಕೃತಿ ಗಳನ್ನು ರಚಿಸಲಿದ್ದಾರೆ. ಕಲಾಕೃತಿಗಳಿಗೆ ಚಲನ – ವಲನವನ್ನು ಸಮಿತಿಯ ಪ್ರಸಾದ್ ಆಚಾರ್ಯ, ಮನೋಜ್ ತಂಡ ನೀಡಲಿದೆ. ಫೈರ್ ವರ್ಕ್ ಹಾಗೂ ಸ್ಪೆಷಲ್ ಎಫೆಕ್ಟನ್ನು ಬೆಂಗಳೂರಿನ ಆಲ್ಫಾ ಇವೆಂಟ್ ತಂಡ ನೀಡಲಿದೆ. ಒಟ್ಟು 25 ಲಕ್ಷ ವೆಚ್ಚದಲ್ಲಿ…
ಲೇಖಕ: admin
ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅ.9 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಅ.8 NEWS DESK : ನಗರದ ಶ್ರೀ ಕೋದಂಡ ರಾಮ ದೇವಾಲಯ ದಸರಾ ಮಂಟಪ ಸಮಿತಿ ಈ ಬಾರಿ ಸುವರ್ಣ ಮಹೋತ್ಸವ ಸಂಭ್ರಮದಲ್ಲಿದೆ. 50ನೇ ವರ್ಷದ ಆಚರಣೆಯಲ್ಲಿ ಶ್ರೀ ರಾಮನಿಂದ ರಾವಣನ ಸಂಹಾರ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಎಸ್.ಕುಶಾಲ್ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್ಗಳನ್ನು ಬಳಸಲಾಗುತ್ತಿದ್ದು, ದಿಂಡಿಗಲ್‍ನ ಡೇವಿಡ್ ಲೈಟಿಂಗ್ ಬೋರ್ಡ್ ಅಳವಡಿಸಲಿದ್ದಾರೆ. 27 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಹುದುಬೂರಿನ ಮಹದೇವಪ್ಪ ಅಂಡ್ ಸನ್ಸ್ ಹಾಗೂ ಸಮಿತಿ ಸದಸ್ಯರು ಕಲಾಕೃತಿಗಳನ್ನು ರಚಿಸಲಿದ್ದಾರೆ. ಟೀಂ ಜೆವೈಸಿ ಕಲಾಕೃತಿಗಳಿಗೆ ಚಲನವಲನ ನೀಡಲಿದೆ. ಟ್ರ್ಯಾಕ್ಟರ್ ಸೆಟ್ಟಿಂಗ್ಸ್‍ನ್ನು ಸಮಿತಿಯ ಹೇಮರಾಜ್, ವಿವೇಕ್, ಮಂಜಿ, ರವೀಂದ್ರ ತಂಡದವರು ಮಾಡಲಿದ್ದಾರೆ. ಸೋಮವಾರಪೇಟೆಯ ಲೋಬೋ ಧ್ವನಿವರ್ಧಕ ಒದಗಿಸಲಿದ್ದು, ಮಡಿಕೇರಿಯ ಗೌತಮ್ ಮತ್ತು ಸಂದೇಶ್ ಸ್ಟುಡಿಯೋ ಲೈಟಿಂಗ್ ವ್ಯವಸ್ಥೆ ಮಾಡಲಿದ್ದಾರೆ. ಸಮಿತಿ ಸದಸ್ಯರೆ ಪ್ಲಾಟ್‍ಫಾರಂ ನಿರ್ಮಾಣ ಮಾಡಲಿದ್ದಾರೆ. 25 ಲಕ್ಷ ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು, ಕಳೆದ ಬಾರಿ ಪ್ರಥಮ ಬಹುಮಾನ ಪಡೆದಿದ್ದು, ಈ ಬಾರಿಯೂ ಜನಾಕರ್ಷಣೆಯೊಂದಿಗೆ ಬಹುಮಾನಕ್ಕೆ ಪೈಪೋಟಿ…
ಮಡಿಕೇರಿ ಅ.8 NEWS DESK : ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಕೃಷಿ-ತೋಟಗಾರಿಕೆ ಮೇಳವು ಅ.18 ರಿಂದ 21 ರವರೆಗೆ ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗದ ನವಿಲೆ ಕೃಷಿ ಮಹಾವಿದ್ಯಾಲಯದಲ್ಲಿ ನಡೆಯಲಿದೆ.
ಮಡಿಕೇರಿ ಅ.8 NEWS DESK : ನಗರದ ದೇಚೂರು ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ 106ನೇ ವರ್ಷದ ಉತ್ಸವ ಆಚರಣೆ ತಯಾರಿ ನಡೆಸುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಆರ್.ಪಿ.ಚಂದ್ರಶೇಖರ್ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್ಗಳನ್ನು ಬಳಸಲಾಗುತ್ತಿದ್ದು, ಕಾಳಿಂಗ ಮರ್ದನ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ. ದಿಂಡಿಗಲ್‍ನ ಜೇಮ್ಸ್ ಲೈಟಿಂಗ್ ಬೋರ್ಡ್ ಅಳವಡಿಸಲಿದ್ದು, ಕೊಪ್ಪಳದ ಪದ್ಮ ಎಲೆಕ್ಟ್ರಿಕಲ್ಸ್‍ನವರು ಧ್ವನಿವರ್ಧಕ ಹಾಗೂ ಸ್ಟುಡಿಯೋ ಲೈಟ್ ವ್ಯವಸ್ಥೆ ಮಾಡಲಿದ್ದಾರೆ. 28 ಕಲಾ ಕೃತಿಗಳನ್ನು ಬಳಸಲಾಗುತ್ತಿದ್ದು, ಮಡಿಕೇರಿಯ ಆರ್.ಬಿ.ರವಿ ಕ್ರಿಯೇಷನ್ಸ್‍ರವರು ಕಲಾಕೃತಿಗಳನ್ನು ರಚಿಸಲಿದ್ದಾರೆ. ಪ್ಲಾಟ್‍ಫಾರಂ ನಿರ್ಮಾಣ, ಕಲಾಕೃತಿಗಳಿಗೆ ಚಲನವಲನ ವ್ಯವಸ್ಥೆಯನ್ನು ಮಡಿಕೇರಿಯ ಪುಣ್ಯ ಕ್ರಿಯೇಷನ್ಸ್‍ನ ಪ್ರಮೋದ್ ಮತ್ತು ತಂಡದವರು ಮಾಡಲಿದ್ದಾರೆ. ಟ್ರ್ಯಾಕ್ಟರ್ ಸೆಟ್ಟಿಂಗ್ಸ್‍ನ್ನು ಮಡಿಕೇರಿಯ ಗಣೇಶ್ ಬೆಳವಾಯಿ, ಕಿರಣ್, ಸೋಮ, ನಿತಿಶ್ ತಂಡ ಮಾಡಲಿದ್ದು, ಬೆಂಗಳೂರಿನ ಗನ್ ಅನಿಲ್ ಸ್ಪೆಷಲ್ ಎಫೆಕ್ಟ್ ಕಲ್ಪಿಸಲಿದ್ದಾರೆ. ಒಟ್ಟು 16 ಲಕ್ಷ ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು, ಜನಾಕರ್ಷಣೆ ಪಡೆಯುವುದರ ಜೊತೆಗೆ ಬಹುಮಾನಕ್ಕೂ ಪೈಪೋಟಿ ನೀಡಲಾಗುವುದು. ಮಂಗಳೂರಿನ ನಾಸಿಕ್ ಬ್ಯಾಂಡ್ ಮಂಟಪವನ್ನು…
ಮಡಿಕೇರಿ ಅ.8 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿಯು ನ.5 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅ.18 ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ,…
ಮಡಿಕೇರಿ NEWS DESK ಅ.8 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ಆರನೇ ದಿನವಾದ ಇಂದು ಮಹಾಲಕ್ಷ್ಮಿ ಅಲಂಕಾರ ಮಾಡಲಾಯಿತು. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ. ಅ.9 ರಂದು ಶಾರದ ದೇವಿಯ ಅಲಂಕಾರ ನಡೆಯಲಿದೆ.
ಮಡಿಕೇರಿ ಅ.8 NEWS DESK : ಮಡಿಕೇರಿ ದಸರಾ ಜನೋತ್ಸವ ಅಂಗವಾಗಿ ಮಡಿಕೇರಿ ದಸರಾ ಸಮಿತಿ ಹಾಗೂ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಗಾನ ಸುಧೆಯೊಂದಿಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸೋನಿ ಟಿ.ವಿ.ರಿಯಾಲಿಟಿ ಶೋ, ಸೂಪರ್ ಸ್ಟಾರ್ ಸಿಂಗರ್ ಪ್ರಶಸ್ತಿ ವಿಜೇತ ಅವಿರ್ಭವ್ ಅವರ ಗಾನ ಸುಧೆ ಎಲ್ಲರ ಗಮನ ಸೆಳೆಯಿತು. ಕೊಡಗು ಪತ್ರಕರ್ತರ ಸಂಘದ ಸದಸ್ಯರಿಂದ ಸಂಗೀತ ರಸಮಂಜರಿ, ಕುಶಾಲನಗರದ ಏಂಜಲ್ ವಿಂಗ್ಸ್ ತಂಡ, ಮಡಿಕೇರಿ ನಾಟ್ಯನಿಕೇತನ, ಕಿಂಗ್ಸ್ ಆಫ್ ಕೂರ್ಗ್ ತಂಡ ಸೇರಿದಂತೆ ವಿವಿಧ ತಂಡದಿಂದ ಸಾಂಸ್ಕೃತಿಕ ವೈವಿದ್ಯಮಯ ಕಾರ್ಯಕ್ರಮ ನಡೆಯಿತು.
ಮೈಸೂರು NEWS DESK ಅ.7 : ಮೈಸೂರಿನಲ್ಲಿ ನಡೆದ 6 ನೇ ಪೊಲೀಸ್ ಕರ್ತವ್ಯ ಕೂಟದಲ್ಲಿ ಕೊಡಗಿಗೆ GOLD-5 SILVER-2 BRONZE-2 TROPHY-1 ಪ್ರಶಸ್ತಿ ಲಭಿಸಿದೆ. Best Dog Of The Meet, Dog Name-Copper, Manamohan B P AHC01 Dar. ASC Room Search 1st Jithendra Rai K R ARSI Dar. Crime Dog 1st Siddanagouda Patil APC Dar. Narcotic Dog 1st Dog-Copper Manamohan B P AHC 01 Dar. Police Portrait Parley Test 1st Place Sunil Kumar P M CHC198 Ktps. Computer Typing Speed and Ms Office 1st Ayisha Bhagamandala. Police Photography 2nd Place-Swamy K K CPC 9. Police Videography 2nd Place Ajay CHC438 Cen Ps. Computer Awareness Typing Speed And Ms Office 3rd Sumanth CPC…
ಮಡಿಕೇರಿ NEWS DESK ಅ.7 : ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆ ಉನ್ನತೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿ.ಪಂ ಕಚೇರಿ ಎದುರು ಒಕ್ಕೂಟದ ಪ್ರಮುಖರು ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಅಧಿಕಾರಿಗಳು ಹಾಗೂ ಪಿಡಿಒಗಳ ಮೇಲೆ ಆಗುತ್ತಿರುವ ಒತ್ತಡ ನಿಲ್ಲಬೇಕು, ಪಂಚಾಯತ್ ಕಾರ್ಯನಿರ್ವಹಣೆ ಕುರಿತು ಅಧ್ಯಯನಕ್ಕಾಗಿ ತಜ್ಞರ ಸಮಿತಿ ರಚನೆ ಮಾಡಬೇಕು, ತಾ.ಪಂ ಸಹಾಯಕ ನಿದೇಶಕರ ಹುದ್ದೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳ ಹುದ್ದೆ ಎಂದು ಪರಿಗಣಿಸಬೇಕು, ವೇತನ ಶ್ರೇಣಿಯಲ್ಲಿ ಆಗಿರುವ ತಾರತಮ್ಯವನ್ನು ತಕ್ಷಣ ಸರಿಪಡಿಸಬೇಕು, 15 ರಿಂದ 20 ವರ್ಷಗಳಿಂದ ಉಪಕಾರ್ಯದರ್ಶಿ ವೃಂದದಲ್ಲಿ ಸೇವೆ ಸಲ್ಲಿಸಿದವರಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಹುದ್ದೆಗೆ ಬಡ್ತಿ ನೀಡಬೇಕು, ಪಂಚಾಯತ್ ಆಡಳಿತ ಸೇವೆ ಜಾರಿಗೊಳಿಸಬೇಕು, ಎಲ್ಲಾ ಸಿಬ್ಬಂದಿಗಳಿಗೆ ವೇತನ ಶ್ರೇಣಿ ನಿಗದಿಪಡಿಸಬೇಕು, ಡಿ.ಇ.ಒ ಆಗಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಅನುಮೋದನೆ ನೀಡಬೇಕು, ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು…






