ವಿರಾಜಪೇಟೆ NEWS DESK ಅ.6 : ಸಂವಿಧಾನವನ್ನು ಓದಿ ಅರ್ಥೈಸುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ನ ನಿವೃತ್ತ ಜಸ್ಟಿಸ್ ನಾಗಮೋಹನ್ ದಾಸ್ ತಿಳಿಸಿದ್ದಾರೆ. ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜ್ ನಲ್ಲಿ ಕಾಲೇಜ್ ನ ಮಾನವ ಹಕ್ಕುಗಳ ಘಟಕ ಹಾಗೂ ಐಕ್ಯೂಎಸಿ ಘಟಕಗಳ ಸಹಯೋಗದಲ್ಲಿ “ಭಾರತದ ಸಂವಿಧಾನದ ಮೂಲಾಂಶಗಳು” ಎಂಬ ವಿಷಯದ ಕುರಿತು ನಡೆದ ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತ ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟçವಾಗಿದ್ದು, ಪ್ರಜಾಪ್ರಭುತ್ವಕ್ಕೆ ಸಂವಿಧಾನ ತಳಹದಿಯಾಗಿದೆ. ಸಂವಿಧಾನವನ್ನು ಓದದಿದ್ದರೆ ಕಾನೂನನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ಸಂವಿಧಾನ ಎಲ್ಲರಿಗೂ ಸಮಾನ ಹಕ್ಕನ್ನು ನೀಡಿದ್ದು, ಸಾಮಾಜಿಕ ನ್ಯಾಯದ ಅಂಶಗಳನ್ನು ಎತ್ತಿ ಹಿಡಿದಿದೆ. ಪ್ರತಿಯೊಬ್ಬರು ದೇಶದ ಇತಿಹಾಸ, ಆರ್ಥಿಕ ಪರಿಸ್ಥಿತಿ, ಕಾನೂನು, ಹಕ್ಕುಗಳು, ರಾಜಕೀಯ ಅಂಶಗಳನ್ನು ಓದಿ ತಿಳಿಯಬೇಕು. ಸಂವಿಧಾನಕ್ಕೆ ಗೌರವವನ್ನು ನೀಡುವ ಮೂಲಕ ಈ ನೆಲದ ಕಾನೂನನ್ನು ಗೌರವಿಸಬೇಕು ಎಂದು ಕರೆ ನೀಡಿದರು. ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕÀ…
ಲೇಖಕ: admin
ವಿರಾಜಪೇಟೆ NEWS DESK ಅ.6 : ಪ್ರಜಾಪ್ರಭುತ್ವದ ಆರಂಭ ಮತ್ತು ಅರಿವು ಶಾಲಾ ಕಾಲೇಜುಗಳಿಂದಲೇ ಆರಂಭವಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. ವಿದ್ಯಾರ್ಥಿ ಜೀವನವು ಅಮೂಲ್ಯವಾಗಿದ್ದು ಅದನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆ ಶಾಲಾ ಕಾಲೇಜುಗಳಿಂದಲೇ ಆರಂಭವಾಗುತ್ತದೆ. ಕಾಲೇಜುಗಳಲ್ಲಿ ಚುನಾವಣೆಯ ಮೂಲಕವೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ಎಲ್ಲರನ್ನು ಸಮಾನತೆಯಿಂದ ಕಾಣಬೇಕು, ಮಾನವೀಯ ಮೌಲ್ಯಗಳೊಂದಿಗೆ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು. ಆ ಮೂಲಕ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಸುರೇಶ್ ಅಲೆಟ್ಟಿ ಅವರು ವಿದ್ಯಾರ್ಥಿ ಜೀವನ ಎಂದರೆ ಗುರಿಯನ್ನು ನಿಭಾಯಿಸುವ ವ್ಯವಸ್ಥೆ. ಕ್ರಿಯಾಶೀಲ ವ್ಯಕ್ತಿತ್ವವನ್ನು ವ್ಯಕ್ತಪಡಿಸುವ ವೇದಿಕೆಯೇ ಕಾಲೇಜು. ಇದಕ್ಕೆ ವೇದಿಕೆ ಒದಗಿಸುವುದು…
ಮಡಿಕೇರಿ NEWS DESK ಅ.6 : ಮಡಿಕೇರಿ ದಸರಾ ಅಂಗವಾಗಿ ಸಾಂಸ್ಕೖತಿಕ ಸಮಿತಿ ವತಿಯಿಂದ ಅ.7 ರಂದು ಸೋಮವಾರ ಸಂಜೆ 6 ಗಂಟೆಗೆ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸೋನಿ ರಿಯಾಲಿಟಿ ಶೋ ಸೂಪರ್ ಸ್ಟಾರ್ ಸಿಂಗರ್ ನ ವಿಜೇತ ಕೇರಳದ ಅವಿಭ೯ವ್ ಮತ್ತು ತಂಡದಿಂದ ಗಾನಸಂಭ್ರಮ ಆಯೋಜಿತವಾಗಿದೆ. ಕುಶಾಲನಗರದ ಏಂಜಲ್ ವಿಂಗ್ಸ್ ತಂಡದಿಂದ ನೖತ್ಯ ವೈವಿಧ್ಯ, ಕೊಡಗು ಪತ್ರಕತ೯ರ ಸಂಘ (ರಿ) ತಂಡದಿಂದ ಸಂಗೀತ ರಸಮಂಜರಿ, ನಾಟ್ಯ ನಿಕೇತನ ತಂಡದಿಂದ ನೖತ್ಯ ಸಂಗಮ, ಕಿಂಗ್ಸ್ ಆಫ್ ಕೂಗ್೯ ತಂಡದಿಂದ ನೖತ್ಯ ವೈವಿಧ್ಯ ಮತ್ತು ಇತರ ಸಾಂಸ್ಕೖತಿಕ ವೈವಿಧ್ಯಗಳು ಆಯೋಜಿತವಾಗಿದೆ. ಸೋಮವಾರ ಬೆಳಗ್ಗೆ 10 ಗಂಟೆಯಿಂದ ಕಾಫಿ ದಸರಾ ಅಂಗವಾಗಿ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಕಾಫಿ ಮತ್ತು ಕೖಷಿಗೆ ಸಂಬಂಧಿಸಿದಂತೆ ನಡೆಯುವ ವಿಚಾರಸಂಕಿರಣದಲ್ಲಿ ಕೖಷಿ ರಂಗದ ಪರಿಣಿತರಾದ ಧಮ೯ರಾಜ್, ಡಾ ಕೆಂಚರೆಡ್ಡಿ, ಕೆ ಕೆ ವಿಶ್ವನಾಥ್, ನಡಿಕೇರಿಯಂಡ ಬೋಸ್ ಮಂದಣ್ಣ, ಖಲಿಸ್ತಾ ಡಿಸೋಜಾ, ಡಾ,ಶಿವಪ್ರಸಾದ್, ಮಿಲನಾ…
ಮಡಿಕೇರಿ NEWS DESK ಅ.6 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಕಾಫಿ ದಸರಾವನ್ನು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು. ಕಾಫಿ ದಸರಾಕ್ಕೆ ಕಾಫಿ ಮಂಡಳಿ, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್, ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಸೇರಿದಂತೆ ಕಾಫಿ ವಲಯದಿಂದ ಉತ್ತಮ ಸ್ಪಂದನ ದೊರಕಿದೆ. ಈಗಾಗಲೇ 32 ಮಳಿಗೆಗಳು ಭರ್ತಿಯಾಗಿದ್ದು, ಕಾಫಿ, ಹೈನುಗಾರಿಕೆ, ಬಿದಿರು, ತೋಟಗಾರಿಕಾ ಬೆಳೆಗಳು, ಯಂತ್ರೋಪಕರಣಗಳಿಗೆ ಸಂಬAಧಿಸಿದAತೆ ಸಮಗ್ರ ಮಾಹಿತಿ ಈ ಮಳಿಗೆಗಳಲ್ಲಿ ದೊರಕಲಿದೆ. ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಮೀನುಗಾರಿಕಾ ಇಲಾಖೆ, ಪಶುಪಾಲನಾ ಇಲಾಖೆ, ಚೆಟ್ಟಳ್ಳಿಯ ತೋಟಗಾರಿಕಾ ಸಂಶೋಧನಾ ಕೇಂದ್ರ ಸೇರಿದಂತೆ ವಿವಿಧ ಇಲಾಖೆಗಳು ಕೈಜೋಡಿಸಿವೆ. ಕಾಫಿ ದಸರಾದಲ್ಲಿ…
ಮಡಿಕೇರಿ NEWS DESK ಅ.6 : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 9 ಮತ್ತು 11 ನೇ ತರಗತಿಗೆ ಖಾಲಿ ಇರುವ ಸ್ಥಾನಗಳ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಈಗಾಗಲೇ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್, 30 ರವರೆಗೆ ವಿಸ್ತರಿಸಿದ್ದು, ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. 9ನೇ ತರಗತಿಗೆ ಅರ್ಜಿ ಸಲ್ಲಿಸುವವರು ಕೊಡಗು ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಪಾಲಕರು ಕೊಡಗು ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿಯೂ ಕೂಡ ಕೊಡಗು ಜಿಲ್ಲೆಯಲ್ಲೇ ಓದುತ್ತಿರಬೇಕು. ಅಭ್ಯರ್ಥಿ ದಿನಾಂಕ 01/05/2010 ರಿಂದ 31/07/2012 ರೊಳಗೆ ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ಪರೀಕ್ಷೆಯು 2025 ರ ಫೆಬ್ರವರಿ, 08 ರಂದು ನಡೆಯಲಿದೆ. 11 ನೇ…
ಮಡಿಕೇರಿ NEWS DESK ಅ.6 : ಕಿತ್ತೂರು ಉತ್ಸವ ಪ್ರಯುಕ್ತ ವಿಜಯ ಜ್ಯೋತಿ ರಥಯಾತ್ರೆಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಬರಮಾಡಿಕೊಂಡರು. ಕಿತ್ತೂರು ಜ್ಯೋತಿ ರಥಯಾತ್ರೆಗೆ ಪುಷ್ಪನಮನ ಸಲ್ಲಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಅವರು ಬೀಳ್ಕೊಟ್ಟರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಯಯ್ಯ, ಶಿರಸ್ತೆದಾರ ದೇವರಾಜು, ಮಂಜುನಾಥ್ ಇತರರು ಇದ್ದರು.
ಮಡಿಕೇರಿ NEWS DESK ಅ.6 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ನಾಲ್ಕನೇ ದಿನವಾದ ಇಂದು ವಿಶೇಷ ಖಾದ್ಯಗಳ ಅಲಂಕಾರ ಮಾಡಲಾಯಿತು. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ.
ಮಡಿಕೇರಿ NEWS DESK ಅ.5 : ವರ್ಣರಂಜಿತವಾಗಿ ನಡೆದ ಮಡಿಕೇರಿ ಮಕ್ಕಳ ದಸರಾದಲ್ಲಿ ಆಯೋಜಿಸಲಾಗಿದ್ದ ಛದ್ಮವೇಷ ಸ್ಪರ್ಧೆಯಲ್ಲಿ 5 ರಿಂದ 7 ನೇ ತರಗತಿ ವಿಭಾಗದಲ್ಲಿ ಹಾಕತ್ತೂರು ಗ್ರಾಮದ ವರ್ಷಿತ ಹೆಚ್.ವಿ ಪ್ರಥಮ ಬಹುಮಾನ ಗೆದ್ದಿದ್ದಾಳೆ. ವೆಂಕಟೇಶ್ ಹಾಗೂ ವನಿತಾ ದಂಪತಿಯ ಪುತ್ರಿ ವರ್ಷಿತ ಶಿಲಾ ಬಾಲಿಕೆ ವೇಷ ಧರಿಸಿ ಪ್ರೇಕ್ಷಕರ ಹಾಗೂ ತೀರ್ಪುಗಾರರ ಮೆಚ್ಚುಗೆಗೆ ಪಾತ್ರಳಾದಳು.
ಮಡಿಕೇರಿ NEWS DESK ಅ.5 : ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ 79ಎ, 79ಬಿ ದುರುಪಯೋಗವಾಗುತ್ತಿದ್ದು, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ಮೂಲಕ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ಆರ್ಥಿಕ ಅಪರಾಧಿಗಳು ಹಾಗೂ ಉದ್ಯಮಪತಿಗಳು ಕೊಡವಲ್ಯಾಂಡ್ ನ ಪರಿಸರವನ್ನು ಸಂಪೂರ್ಣ ನಾಶ ಮಾಡುತ್ತಿದ್ದಾರೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ತಿತಿಮತಿಯಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ಕಪ್ಪು ಹಣ ಹೊಂದಿರುವವರು ವಿಲ್ಲಾ, ಟೌನ್ ಶಿಪ್ ಗಳ ನಿರ್ಮಾಣದಲ್ಲಿ ತೊಡಗಿರುವ ಉದ್ಯಮಪತಿಗಳು ಹಾಗೂ ಬಂಡವಾಳಶಾಹಿಗಳು ಇಡೀ ಕೊಡಗಿನಲ್ಲಿ ವ್ಯಾಪಿಸಿದ್ದು, ಪಾಕೃತಿಕ ಕೊಡುಗೆಗಳನ್ನು ಆವರಿಸಿಕೊಂಡಿದ್ದಾರೆ. ಸರ್ಕಾರ ಆದಾಯವನ್ನಷ್ಟೇ ಗುರಿ ಮಾಡಿಕೊಂಡು ಪವಿತ್ರ ಕೊಡವಲ್ಯಾಂಡ್ ನ್ನು ಮೋಜು, ಮಸ್ತಿಗಾಗಿ ಬಿಟ್ಟುಕೊಡುತ್ತಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದರು. ಕೊಡಗಿನಲ್ಲಿ ಪ್ರವಾಸೋದ್ಯಮವನ್ನು ಬೂಸ್ಟ್ ಮಾಡುವುದಾಗಿ ಜಿಲ್ಲಾಡಳಿತ ಹೇಳಿಕೆ ನೀಡುತ್ತಿದೆ.…
ಮಡಿಕೇರಿ ಅ.5 NEWS DESK : ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಜಿಲ್ಲಾ ಸಹಕಾರ ತರಬೇತಿ ಕೇಂದ್ರದ ವಿದ್ಯಾರ್ಥಿಗಳೊಂದಿಗೆ ಸಹಕಾರ ಸಂಘದ ವಿಷಯಗಳ ಕುರಿತಾದ ಸಂವಾದ ಕಾರ್ಯಕ್ರಮವು ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್, ಸಹಕಾರ ಸಂಘದ ಬೆಳೆವಣಿಗೆ, ಆಡಳಿತ ಮಂಡಳಿಯ ಮುಖೇನ ಸಂಘದ ಅಭಿವೃದ್ಧಿಗೆ ಹಮ್ಮಿಕೊಳ್ಳುವ ವಿವಿಧ ಯೋಜನೆ, ಸಹಕಾರ ತತ್ವದ ನಿಯಮಾನುಸಾರ ಕೈಗೊಳ್ಳುವ ವಿಷಯಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಹಾಜರಿದ್ದ ಜಿಲ್ಲಾ ಸಹಕಾರ ತರಬೇತಿ ಕೇಂದ್ರದ ವಿದ್ಯಾರ್ಥಿಗಳ ಸಹಕಾರ ಸಂಘದ ಅಭಿವೃದ್ಧಿಗೆ ಪೂರಕವಾದ ಪ್ರಶ್ನೆಗಳಿಗೆ ಮತ್ತು ಸಹಕಾರ ಇಲಾಖೆಗೆ ಸಂಬಂಧಿಸಿದಂತೆ ಸಂವಾದದಲ್ಲಿ ಕೇಳಿದ ಪ್ರಶ್ನೆಗಳಿಗೆ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ನಿರ್ದೇಶಕರಾದ ನಾಗರಾಜು, ಕೆ.ಪಿ.ರಾಜು, ಕೆ.ಬಿ.ರಾಮಚಂದ್ರ, ಜಯಶ್ರೀ, ಎಸ್.ಎಸ್.ಕೃಷ್ಣ, ಜಿಲ್ಲಾ ಸಹಕಾರ ತರಬೇತಿ ಕೇಂದ್ರ ಪ್ರಾಂಶುಪಾಲೆ ಡಾ.ರೇಣುಕಾ, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಪಿ.ಮೀನಾ,…






