ಬೆಂಗಳೂರು ನ.27 NEWS DESK : ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ವಿಭಾಗೀಯ ಪೀಠ, ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ. ಈ ಹಿಂದೆ ಆಂಧ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂ ಗಳನ್ನು ತಿರುಚಬಹುದು ಎಂಬ ಆರೋಪ-ಪ್ರತ್ಯಾರೋಪಗಳನ್ನು ಸ್ಮರಿಸಿದ ನ್ಯಾಯಾಧೀಶರು, ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ…
ಲೇಖಕ: admin
ಮಡಿಕೇರಿ ನ.27 NEWS DESK : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾರಾಗೃಹ ವಾರ್ಡನ್ ಹುದ್ದೆಗೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಹುದ್ದೆಗೆ ಮಾಸಿಕ ವೇತನ ರೂ.28,499 ಹಾಗೂ ಕರ್ತವ್ಯ ಸಮಯ 8 ಗಂಟೆ/ 3 ಶಿಫ್ಟ್ ಗಳಾಗಿರುತ್ತದೆ. ಆಸಕ್ತಿಯುಳ್ಳ ಮಾಜಿ ಸೈನಿಕರು ಡಿ.4 ರೊಳಗೆ ಕಚೇರಿಯ ಸಮಯದಲ್ಲಿ ಬಂದು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ NEWS DESK ನ.27 : ಭಾರತದ ಹೆಮ್ಮೆಯ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘ ತಿಳಿಸಿದೆ. ಆರೋಪಿಯ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಮತ್ತು ಇನ್ನು ಮುಂದೆ ಈ ರೀತಿಯ ಪ್ರಕರಣಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘದ ಪ್ರಮುಖರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಮಡಿಕೇರಿ ನ.27 NEWS DESK : ಕ್ರಿಸ್ಮಸ್ ಉತ್ಸವದ ಅಂಗವಾಗಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಕುಶಾಲನಗರ ತಾಲ್ಲೂಕು ಘಟಕ ಹಾಗೂ ಕೂಡಿಗೆ ಪವಿತ್ರ ದೇವಾಲಯದ ಸಹಯೋಗದಲ್ಲಿ ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ ನಡೆಯಲಿದೆ. ಕೂಡಿಗೆ ಆಂಜೆಲಾ ವಿದ್ಯಾನಿಕೇತನ ಆವರಣದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ವಿಧಾನ ಪರಿಷತ್ತು ಶಾಸಕ ಐವಾನ್ ಡಿಸೋಜ ಉದ್ಘಾಟಿಸಲಿದ್ದು, ಮೈಸೂರು ಧರ್ಮಕ್ಷೇತ್ರದ ಪ್ರೇಷಿತ ಆಡಳಿತಾಧಿಕಾರಿ ಮಹಾ ಧರ್ಮಾಧ್ಯಕ್ಷ ಡಾ.ಬರ್ನಾಡ್ ಮೊರಸ್ ದಿವ್ಯ ಸಾನಿಧ್ಯ ವಹಿಸಿ, ಆರ್ಶೀವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಕುಶಾಲನಗರ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎ.ಪೀಟರ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿ ವಲಯ ಶ್ರೇಷ್ಠ ಗುರು ವಂ.ಸ್ವಾಮಿ ಜಾರ್ಜ್ ದೀಪಕ್, ಕೂಡಿಗೆ ಪವಿತ್ರ ಕುಟುಂಬ ದೇವಾಲಯದ ಧರ್ಮಗುರು ವಂ.ಸ್ವಾಮಿ ಚಾಲ್ರ್ಸ್ ನೊರೋನ್ಹ, ಕುಶಾಲನಗರ ಸಂತ ಸೆಬಾಸ್ಟಿಯನ್‍ರ ದೇವಾಲಯದ ಧರ್ಮಗುರು ವಂ.ಸ್ವಾಮಿ ಎಂ.ಮಾರ್ಟಿನ್, ಕೂಡಿಗೆ ಆಂಜೆಲಾ ವಿದ್ಯಾನಿಕೇತನ ಸುಪೀರಿಯರ್ ಸಿಸ್ಟರ್…
ಮಡಿಕೇರಿ ನ.27 NEWS DESK : ಭಾರತೀಯ ಸೇನೆಯ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ ಆರೋಪಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಹಿಂದು ಜಾಗರಣ ವೇದಿಕೆಯ ಕೊಡಗು ಘಟಕ ಒತ್ತಾಯಿಸಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕ ಕುಕ್ಕೇರ ಅಜಿತ್ ಹಾಗೂ ಪ್ರಮುಖರು ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಬಳಸಿ ಅಪ್ರತಿಮ ವೀರ ಸೇನಾಧಿಕಾರಿಗಳಿಗೆ ಅಗೌರವ ತೋರಿದ ಆರೋಪಿಯನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಸೋಮವಾರಪೇಟೆ ನ.27 NEWS DESK : ಸೋಮವಾರಪೇಟೆ ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ, ಮತದಾರರ ಸಾಕ್ಷರತಾ ಸಂಘದ ವತಿಯಿಂದ ಮತದಾರರ ದಿನಾಚರಣೆ ಅಂಗವಾಗಿ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧೆಗಳಿಗೆ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಕುಮಾರಿ ಚಾಲನೆ ನೀಡಿದರು. ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳು, ಕನ್ನಡ, ಇಂಗ್ಲೀಷ್ ಪ್ರಬಂಧ, ರಸಪ್ರಶ್ನೆ, ಭಿತ್ತಿಪತ್ರ ತಯಾರಿಕೆ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ನೋಡೆಲ್ ಅಧಿಕಾರಿ ಶಿವಕುಮಾರ್, ಮುಖ್ಯ ಶಿಕ್ಷಕಿ ಯಶೋದಮ್ಮ, ತೀರ್ಪುಗಾರರಾಗಿ ಶಾಂತಳ್ಳಿ ಕ್ಲಸ್ಟರ್ ಸಿಆರ್‍ಪಿ ಚೈತ್ರ, ಸೋಮವಾರಪೇಟೆ ಕ್ಲಸ್ಟರ್‍ನ ಸಿಆರ್‍ಪಿ ಪ್ರೇಮ, ಬಿಟಿಆರ್‍ಪಿ ರಂಜಿತಾ, ಕ್ವೀಜ್ ಮಾಸ್ಟರ್ ವಿಜಯ್ ಇದ್ದರು.
ಸೋಮವಾರಪೇಟೆ ನ.27 NEWS DESK : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದೆ. ಕಾನೂನನ್ನು ಉಲ್ಲಂಘಿಸಿದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೋಪಾಲಕೃಷ್ಣ ಎಚ್ಚರಿಸಿದರು. ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ‘ಬಾಲ್ಯ ವಿವಾಹ ತಡೆ’ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅನಕ್ಷರತೆ, ಬಡತನ, ಮೂಢನಂಬಿಕೆ ಇಂತಹವುಗಳು ಬಾಲ್ಯವಿವಾಹಕ್ಕೆ ಕಾರಣವಾಗಿವೆ. ಬಾಲ್ಯ ವಿವಾಹ ತಡೆ ಜಾಗೃತಿಯಲ್ಲಿ ವಿದ್ಯಾರ್ಥಿಗಳು ಕೈಜೋಡಿಸಬೇಕು. ಬಾಲ್ಯವಿವಾಹದಂತಹ ಘಟನೆಗಳು ಕಂಡುಬಂದಾಗ ವಿದ್ಯಾರ್ಥಿಗಳು ಕೂಡಲೆ ಸಂಬಂಧಪಟ್ಟವರಿಗೆ ವಿಷಯ ಮುಟ್ಟಿಸಬೇಕು. ನಂತರ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದರು. 21 ವರ್ಷ ಒಳಗಿನ ಹುಡುಗ ಹಾಗೂ 18 ವರ್ಷ ಒಳಗಿನ ಹುಡುಗಿಯರ ನಡುವಿನ ಮದುವೆ ಬಾಲ್ಯವಿವಾಹವಾಗುತ್ತದೆ. ಗಿರಿಜನರಲ್ಲಿ ಬಾಲ್ಯವಿವಾಹ ನಡೆಯುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ ಎಂದು ಹೇಳಿದರು. ಜಾಗೃತಿಯ ಮೂಲಕ ಬಾಲ್ಯವಿವಾಹವನ್ನು ತಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು. ವಕೀಲರ ಸಂಘದ ಅಧ್ಯಕ್ಷ ಕೆ.ಹೆಚ್.ವಿಠಲ್ ಮಾತನಾಡಿ,…
ಮಡಿಕೇರಿ ನ.27 NEWS DESK : ಶ್ರೀ ಕಾವೇರಿ ಜನ್ಮ ಭೂಮಿ ಟ್ರಸ್ಟ್‌ನ ಸ್ಥಾಪಕರು ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಚೇರಂಗಾಲ ಗ್ರಾಮದ ಮೊಟ್ಟನ ಸಿ.ರವಿಕುಮಾರ್ ಅವರು ಇಲ್ಲಿನ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ 1 ಲಕ್ಷ ರೂ. ದೇಣಿಗೆಯನ್ನು ನೀಡಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಉದ್ದೇಶದಿಂದ ಈ ದೇಣಿಗೆಯನ್ನು ನೀಡಲಾಗಿದೆ. ಕಾಲೇಜಿನ ಪಿ.ಯು.ಸಿ ವಿಭಾಗದ ಒಟ್ಟು 12 ವಿದ್ಯಾರ್ಥಿಗಳ ಒಂದು ವರ್ಷದ ಶೈಕ್ಷಣಿಕ ವೆಚ್ಚವನ್ನು ಭರಿಸಲು ಈ ನೆರವನ್ನು ನೀಡಲಾಗಿದೆ. ಶ್ರೀ ಕಾವೇರಿ ವಿದ್ಯಾ ಸಂಘದ ನಿರ್ದೇಶಕರಾದ ಕುಯ್ಯಮುಡಿ ಮನೋಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮೊಟ್ಟನ ಸಿ. ರವಿಕುಮಾರ್ ಅವರ ಉದಾರತೆಯನ್ನು ಶ್ಲಾಘಿಸಿ, ಕಳೆದ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು. ಈ ರೀತಿಯ ಪ್ರೋತ್ಸಾಹ ಧನವು ವಿದ್ಯಾರ್ಥಿಗಳ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಸ್ಪೂರ್ತಿಯಾಗಲಿದೆ ಎಂದು…
ಮಡಿಕೇರಿ ನ.27 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಭಾರತ ಸಂವಿಧಾನದ ಪ್ರಸ್ತಾವನೆಯ ಪ್ರತಿಗೆ ಪುಷ್ಪಾರ್ಚನೆ ಮಾಡಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿ, ಸಂವಿಧಾನದ ತತ್ವ ಮತ್ತು ಆಶಯಗಳನ್ನು ಸಾಕಾರಗೊಳಿಸುವಲ್ಲಿ ತನ್ನನ್ನು ತಾನು ಪರಮರ್ಶೆ ಮಾಡಿಕೊಳ್ಳಲು ಇದು ಸುದಿನ ಎಂದರು. “ಭಾರತ ಸಂವಿಧಾನವು ರಚನಾ ಸಭೆಯು ಅನುಮೋದಿಸಿರುವ ಒಂದು ದಾಖಲೆ ಮಾತ್ರ ಅಲ್ಲ ಅದು ಯಾರನ್ನು ಪ್ರತಿನಿಧಿಸುತ್ತದೆಯೋ ಅವರ ಮೂಲದಿಂದಲೇ ಬಂದ ಸನ್ನದು” ಎಂಬ ಡಾ.ಬಿ.ಆರ್ ಅಂಬೇಡ್ಕರ್ ಅವರ ಹೇಳಿಕೆಯನ್ನು ಸ್ಮರಿಸುತ್ತಾ, ಸ್ವಾತಂತ್ರ್ಯ, ಸಮಾನತೆ, ಸೋದರತ್ವ, ಧರ್ಮ, ಏಕತೆ, ಭ್ರಾತೃತ್ವ, ಶಿಕ್ಷಣ, ಸ್ವತಂತ್ರ ಭಾರತದ ಸಂವಿಧಾನದಲ್ಲಿನ ಪ್ರಮುಖ ಮೌಲ್ಯಗಳು, ಮೂಲಭೂತ ಹಕ್ಕುಗಳೊಂದಿಗೆ ಮೂಲಭೂತ ಕರ್ತವ್ಯಗಳು ಕೂಡ…
ಮಡಿಕೇರಿ ನ.27 NEWS DESK : ದೇಶ ಕಂಡ ಮಹಾನ್ ಚೇತನಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಪದ್ಮಭೂಷಣ ಕೆ.ಎಸ್.ತಿಮ್ಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿರುವ ಆರೋಪಿಯನ್ನು ಮುಂದಿನ ಒಂದು ವಾರದೊಳಗೆ ಗಡಿಪಾರು ಮಾಡದಿದ್ದರೆ ತೀವ್ರ ರೀತಿಯ ಹೋರಾಟವನ್ನು ರೂಪಿಸುವುದಾಗಿ ವಿವಿಧ ಕೊಡವ ಸಂಘಟನೆಗಳು ಎಚ್ಚರಿಕೆ ನೀಡಿವೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕೊಡವ ಸಮಾಜದ ಕಾರ್ಯದರ್ಶಿ ಕೀತಿಯಂಡ ವಿಜಯಕುಮಾರ್, ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ, ಕಾರ್ಯದರ್ಶಿ ಕುಂಞರ ಗಿರೀಶ್ ಭೀಮಯ್ಯ, ಕನೆಕ್ಟಿಂಗ್ ಕೊಡವಾಸ್ ಸಂಚಾಲಕ ಶಾಂತೆಯಂಡ ನಿರನ್ ನಾಚಪ್ಪ, ಒಡಿಯಂಡ ನವೀನ್ ತಿಮ್ಮಯ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಚೊಟ್ಟೆಯಂಡ ಸಂಜುಕಾವೇರಪ್ಪ ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು. ವೀರ ಸೇನಾನಿಗಳಿಗೆ ಅಪಮಾನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರ ಕಾರ್ಯ ಕ್ಷಮತೆಯನ್ನು ಅಭಿನಂದಿಸುತ್ತೇವೆ, ಈ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ ಗಡಿಪಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇವೆ. ಆರೋಪಿಯನ್ನು ಅಮಾನತು ಮಾಡಿದ ವಕೀಲರ ಸಂಘವನ್ನು ಕೂಡ ಅಭಿನಂದಿಸುವುದಾಗಿ ಹೇಳಿದರು.…






