ಲೇಖಕ: admin

ನಾಪೋಕ್ಲು ಅ.6 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ದಿನಾಚರಣೆ ಅಂಗವಾಗಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಅಂಗನವಾಡಿ ಸಹಾಯಕಿಯರಿಗೆ ನೀಡಲಾಗುವ ತಾಲ್ಲೂಕು ಮಟ್ಟದ ಉತ್ತಮ ಅಂಗನವಾಡಿ ಸಹಾಯಕಿ ಪ್ರಶಸ್ತಿಯನ್ನು ನಾಪೋಕ್ಲು ಹಳೇ ಅಂಗನವಾಡಿ ಸಹಾಯಕಿ ಮಮತಾ ಪಡೆದುಕೊಂಡಿದ್ದಾರೆ. ಸಮಗ್ರ ಶಿಶು ಅಭಿವೃದ್ಧಿ ಇಲಾಖೆ ಮಾಮತ ಅವರ ಕಾರ್ಯದಕ್ಷತೆಯನ್ನು ಗುರುತಿಸಿ ಇಲಾಖೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. ವರದಿ : ದುಗ್ಗಳ ಸದಾನಂದ.

Read More

ವಿರಾಜಪೇಟೆ ಅ.5 NEWS DESK : ಬಿಟ್ಟಂಗಾಲದ ಪೆಗ್ಗರಿಕಾಡುವಿನ ನವೋದಯ ಯುವಕ ಸಂಘದ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಪೆಗ್ಗಾರಿಕಾಡು ಮತ್ತು ಬಿಟ್ಟಂಗಾಲದ ಮುಖ್ಯ ರಸ್ತೆಗಳಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಈ ಸಂದರ್ಭ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಪಿ.ಸುಬ್ಬಯ್ಯ, ಉಪಾಧ್ಯಕ್ಷ ಹೆಚ್.ಕೆ.ಸುಮಂತ್, ಖಜಾಂಚಿ ಟಿ.ಎಂ.ಸುದೀಶ್, ಕಾರ್ಯದರ್ಶಿ ಹೆಚ್.ಎ.ಶಿವಕುಮಾರ್, ಸಲಹೆಗಾರ ಪಿ.ಎನ್.ವಿನೋದ್, ಟಿ.ವಿ.ಅಜಿತ್ ಮತ್ತು ಬಿ.ಎಂ.ದಿನೇಶ್ ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು ಇದ್ದರು.

Read More

ವಿರಾಜಪೇಟೆ ಅ.5 NEWS DESK : ಪೆರಂಬಾಡಿಯ ಕಾಫಿ ತೋಟದಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ. ಸಮೀಪದ ರೆಸಾರ್ಟ್ ವ್ಯವಸ್ಥಾಪಕರು ತೋಟದಲ್ಲಿ ಹೆಬ್ಬಾವು ಕಾಣಿಸಿಕೊಂಡಿರುವ ಬಗ್ಗೆ ಉರಗತಜ್ಞ ಆಟೋ ಸ್ನೇಕ್ ಸತೀಶ್ ಅವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಸ್ನೇಕ್ ಸತೀಶ್ ಸುಮಾರು 12 ಅಡಿ ಉದ್ದ ಹಾಗೂ 20 ಕೆ.ಜಿ.ತೂಕದ ಹೆಬ್ಬಾವನ್ನು ರಕ್ಷಿಸಿ, ಸಮೀಪದ ಮಾಕುಟ್ಟ ಅರಣ್ಯಕ್ಕೆ ಬಿಟ್ಟರು. ಈ ಸಂದರ್ಭ ರೆಸಾರ್ಟ್ ನ ಸಿಬ್ಬಂದಿಗಳು, ಗ್ರಾಮಸ್ಥರು ಹಾಜರಿದ್ದರು.

Read More

ಸೋಮವಾರಪೇಟೆ ಅ.5 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕವಾದ ಕದಳಿ ವೇದಿಕೆಯ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರನ್ನಾಗಿ ಪಟ್ಟಣದ ಬಸವೇಶ್ವರ ರಸ್ತೆಯ ಕೆ.ಎಸ್.ಉಷಾರಾಣಿ ಅವರನ್ನು ನೇಮಕಗೊಳಿಸಲಾಗಿದ್ದು, ಶರಣ ಹಾಗೂ ಶರಣೆಯರ ಆದರ್ಶಗಳನ್ನು ಸಮಾಜಕ್ಕೆ ಬಿತ್ತರಿಸುವ ಮೂಲಕ ಶರಣ ಸಾಹಿತ್ಯ ಸಂಸ್ಕೃತಿ ಪ್ರಸಾರಕ್ಕೆ ಮುಂದಾಗಬೇಕೆಂದು ಕದಳಿ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷೆ ಸುಶೀಲಾ ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಅ.5 NEWS DESK : ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ದಸರಾ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಡಿಕೇರಿ ದಸರಾ ಜಾಗತಿಕ ಮಟ್ಟದಲ್ಲಿ ಜನಪ್ರಿಯತೆಗಳಿಸಿಕೊಂಡಿದೆ. ಜನೋತ್ಸವ ಯಶಸ್ವಿಗೆ ಮಡಿಕೇರಿ ದಸರಾ ಸಮಿತಿ ಹಾಗೂ ದಶಮಂಟಪಗಳು ಪ್ರಮುಖ ಕಾರಣವಾಗಿದೆ. ವರ್ಷದಿಂದ ವರ್ಷಕ್ಕೆ ಕಾರ್ಯಕ್ರಮದ ಜನಪ್ರಿಯತೆ ಹೆಚ್ಚಾಗುವುದು ಜಿಲ್ಲೆಗೆ ಹಿರಿಮೆ ತಂದಿದೆ ಎಂದರು. ಜಿಲ್ಲಾಧಿಕಾರಿ ಹಾಗೂ ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷ ವೆಂಕಟರಾಜಾ ಮಾತನಾಡಿ, ಅಪಾರ ಶ್ರಮವಹಿಸಿ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಇದು ಯಶಸ್ವಿಯಾಗಬೇಕಾದರೆ ಜನರ ಸಹಕಾರ ಬಹುಮುಖ್ಯ ಎಂದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಹೆಚ್.ಟಿ.ಅನಿಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪವಿಭಾಧಿಕಾರಿ ವಿನಾಯಕ್ ನರ್ವಾಡೆ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ರಾಜ್ಯ ಸರ್ಕಾರದ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ…

Read More

ಮಡಿಕೇರಿ ಅ.5 NEWS DESK : ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಶೈಕ್ಷಣಿಕ ಹಾಗೂ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷದ್ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಎಬಿವಿಪಿ ಪ್ರಮುಖರಾದ ಕೌಶಲ್ಯ ನೇತೃತ್ವದಲ್ಲಿ ಜಮಾಯಿಸಿದ ಫೀ.ಮಾ.ಕಾರ್ಯಪ್ಪ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಸರ್ಕಾರಿ ವಿವಿಗಳಲ್ಲಿ ಹಾಗೂ ವಿವಿ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಮರ್ಪಕ ಬೋಧಕ ವರ್ಗವಿಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ರಾಜ್ಯದ 460ಕ್ಕೂ ಅಧಿಕ ಪ್ರಥಮ ದರ್ಜೆ ಕಾಲೇಜುಗಳ ಖಾಯಂ ಉಪನ್ಯಾಸಕರಿಲ್ಲದೆ ಸಮಸ್ಯೆ ತಲೆದೋರಿದೆ. ತಕ್ಷಣವೇ ಸರ್ಕಾರ ಈ ಸಮಸ್ಯೆಗಳನ್ನು ಪರಿಹರಿಸಿ ವಿದ್ಯಾರ್ಥಿಗಳ ನೆರವಿಗೆ ಬರಬೇಕೆಂದು ಆಗ್ರಹಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ಮೂಲಕ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Read More

ಮಡಿಕೇರಿ ಅ.5 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕ ಕದಳಿ ವೇದಿಕೆಯ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾಗಿ ಮಡಿಕೇರಿ ಮಹದೇವಪೇಟೆಯ ಕೂರ್ಗ್ ಆಪ್ಟಿಕಲ್ಸ್ ನ ನೇತ್ರ ತಜ್ಞರಾದ ವಿಜಯಲಕ್ಷ್ಮಿ ಅವರನ್ನು ನೇಮಕಗೊಳಿಸಲಾಗಿದೆ. ಹನ್ನೆರಡನೇ ಶತಮಾನದ ಶರಣರ ಚಿಂತನೆಗಳನ್ನು ತಾಲ್ಲೂಕಿನಾದ್ಯಂತ ಬಿತ್ತರಿಸುವ ಮೂಲಕ ಶರಣ ಸಾಹಿತ್ಯ ಹಾಗೂ ಸಂಸ್ಕೃತಿಯ ಪ್ರಸಾರಕ್ಕೆ ಮುಂದಾಗಬೇಕೆಂದು ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷೆ ಸುಶೀಲಾ ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿರಾಜಪೇಟೆ ಅ.5 NEWS DESK : ಬೇಟೋಳಿ ಗ್ರಾಮದ ರಾಮನಗರ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ವನದುರ್ಗೆ ದೇವಿಯ ಗುಡಿಯಲ್ಲಿ ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಮುಂಜಾನೆಯಿಂದಲೇ ದುರ್ಗಾ ಮಾತೆಗೆ ಅಲಂಕಾರ ಪೂಜೆ, ಕುಂಕುಮಾರ್ಚನೆ, ಪುಷ್ಪರ್ಚನೆ, ದೇವಿ ಅಷ್ಟೋತ್ತರ ಪಠಣ, ಪಾರಾಯಣ, ನೈವೇದ್ಯ ಅರ್ಪಣೆ ಮೊದಲಾದ ಸೇವೆಗಳು ಜರುಗಿದವು. ನಂತರ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣಾ ಸೇವೆಗಳು ನಡೆದವು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜಾ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಹಾಜರಿದ್ದರು. ದೇವಸ್ಥಾನದ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್  ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನಡೆಸಿಕೊಟ್ಟರು.

Read More

ಮಡಿಕೇರಿ ಅ.5 NEWS DESK : ಮಡಿಕೇರಿ ದಸರಾ ಜನೋತ್ಸವದಲ್ಲಿಂದು (ಶನಿವಾರ ಅ.5) ಮಕ್ಕಳ ನಡೆಯಲಿದೆ, 11 ನೇ ವಷ೯ದ ಮಕ್ಕಳ ದಸರಾ ಅಂಗವಾಗಿ ನಗರದ ಗಾಂಧಿ ಮೈದಾನದಲ್ಲಿ ಬೆಳಗ್ಗಿನಿಂದಲೇ ಮಕ್ಕಳಿಗಾಗಿ ವೈವಿಧ್ಯಮಯ ಸ್ಪಧಾ೯ ಕಾಯ೯ಕ್ರಮಗಳನ್ನು ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದೆ ಎಂದು ಮಕ್ಕಳ ದಸರಾ ಸಮಿತಿ ಸಂಚಾಲಕ ಅನಿಲ್ ಹೆಚ್ ಟಿ ತಿಳಿಸಿದ್ದಾರೆ. ಬೆಳಗ್ಗೆ 9 ಗಂಟೆಯಿಂದಲೇ ಗಾಂಧಿ ಮೈದಾನದಲ್ಲಿ ಮಕ್ಕಳ ಸಂತೆ, ಮಕ್ಕಳ ಅಂಗಡಿ, ಮಕ್ಕಳಿಂದ ಮಂಟಪ, ಕ್ಲೇಮಾಡೆಲಿಂಗ್ ಮತ್ತು ಛದ್ನವೇಶ ಸ್ಪಧೆ೯ಗಳು ಆಯೋಜಿತವಾಗಿದೆ, ಅತ್ಯಧಿಕ ಸಂಖ್ಯೆಯಲ್ಲಿ ಮಕ್ಕಳ ದಸರಾಕ್ಕೆ ಮಕ್ಕಳು ಹೆಸರು ನೋಂದಾಯಿಸಿಕೊಂಡಿದ್ದು ಛದ್ನವೇಷ ಸ್ಪಧೆ೯ಗೇ 130 ಸ್ಪಧಿ೯ಗಳಿದ್ದಾರೆ, ಮಕ್ಕಳ ಅಂಗಡಿಗೆ 80 ಮಕ್ಕಳ ಸಂತೆಗೆ 65 ಮಕ್ಕಳ ಮಂಟಪಕ್ಕೆ 20, ಕ್ಲೇಮಾಡೆಲಿಂಗ್ ಸ್ಪಧೆ೯ಗೆ 23 ಸ್ಪಧಿ೯ಗಳ ನೋಂದಣಿಯಾಗಿದೆ. ಇದೇ ವೇಳೆ ನಂಜನಗೂಡಿನ ಸುನಾದ್ ವಿನೋದಿನಿ ಸಂಗೀತ ಶಾಲಾ ಮಕ್ಕಳಿಂದ ವಾದ್ಯ ವೈವಿಧ್ಯ ಕೂಡ ಆಯೋಜಿತವಾಗಿದೆ. ಸಂಜೆ 6 ಗಂಟೆಯಿಂದ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿತ ಸಾಂಸ್ಕೖತಿಕ…

Read More

ಮಡಿಕೇರಿ ಅ.5 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯು ಶರನ್ನವರಾತ್ರಿಯ ಮೂರನೇ ದಿನವಾದ ಇಂದು ಬೇವಿನ ಅಲಂಕಾರದಲ್ಲಿ ಗಮನ ಸೆಳೆಯುತ್ತಿದ್ದಾರೆ. ಅ.6 ರಂದು ವಿಶೇಷ ಖಾದ್ಯ ಅಲಂಕಾರ, ನಡೆಯಲಿದೆ.

Read More