ಮಡಿಕೇರಿ ಅ.3 NEWS DESK : ನಗರದ ಐತಿಹಾಸಿಕ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಜಯದಶಮಿಯ ಮೊದಲ ದಿನ ಶ್ರೀ ಚೌಡೇಶ್ವರಿ ದೇವಿ ವಿಶೇಷ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾರೆ.
ಲೇಖಕ: admin
ಮಡಿಕೇರಿ ಅ.3 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ವೈಭವ ನಗರದ ಗಾಂಧಿ ಮೈದಾನದಲ್ಲಿ ಅ.4 ರಿಂದ ಆರಂಭಗೊಳ್ಳಲಿದೆ. ವೇದಿಕೆ ಮತ್ತು ಪೆಂಡಾಲ್ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ಮಡಿಕೇರಿ ಅ.3 NEWS DESK : ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟ ಈಗಾಗಲೇ 94 ಪುಸ್ತಕಗಳನ್ನು ಬಿಡುಗಡೆ ಮಾಡಿದ್ದು, ಮಹತ್ವಾಕಾಂಕ್ಷೆಯ 100ನೇ ಪುಸ್ತಕವನ್ನು ನವೆಂಬರ್ ತಿಂಗಳಿನಲ್ಲಿ ಅದ್ದೂರಿಯಾಗಿ ಸಮರ್ಪಿಸಲಾಗುವುದು ಎಂದು ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟದ 94ನೇ ಪುಸ್ತಕ, ಬರಹಗಾರ್ತಿ ಬೊಟ್ಟೋಳಂಡ ನಿವ್ಯ ದೇವಯ್ಯ ಅವರ 2ನೇ ಪುಸ್ತಕ “ಏಳ್ ದಿನಕ್ಕೊಮ್ಮ… ಬ್ರಹ್ಮಗಿರಿಲ್” ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕøತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಕೊಡವ ಮಕ್ಕಡ ಕೂಟ ದಾಖಲೆಯ ಪುಸ್ತಕಗಳನ್ನು ಬಿಡುಗಡೆ ಮಾಡಿ ಹಿರಿಯ ಹಾಗೂ ಕಿರಿಯ ಬರಹಗಾರರಿಗೆ ಪ್ರೋತ್ಸಾಹವನ್ನು ನೀಡಿದೆ. ಯುವ ಬರಹಗಾರರಿಗೆ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಸ್ಫೂರ್ತಿಯನ್ನು ತುಂಬಿದೆ ಎಂದರು. ಕೂಟದ ಮೂಲಕ 99ನೇ ಪುಸ್ತಕವಾಗಿ ಲೇಖಕಿ ತೆನ್ನಿರ ಟೀನಾ ಚಂಗಪ್ಪ ಅವರು ಬರೆದಿರುವ…
ಮೈಸೂರು ಅ.3 NEWS DESK : ಮೈಸೂರು ದಸರಾ ಹಿನ್ನೆಲೆ ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ಆರಂಭಿಸಿದರು. ರಾಜ ಪೋಷಾಕು ಧರಿಸಿ ಸಿಂಹಾಸನಕ್ಕೆ ಮೂರು ಬಾರಿ ಪ್ರದಕ್ಷಿಣೆ ಬಂದು, ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿದರು. ಈ ಸಂದರ್ಭ ರಾಜಮಾತೆ ಪ್ರಮೋದಾದೇವಿ, ಪತ್ನಿ ತ್ರಿಷಿಕಾ ಕುಮಾರಿ, ಯುವರಾಜ ಆದ್ಯವೀರ ನರಸಿಂಹರಾಜ ಒಡೆಯರ್ ಇದ್ದರು.
ನಾಪೋಕ್ಲು ಸೆ.3 NEWS DESK : ನಾಪೋಕ್ಲುವಿನ ವಿವಿಧ ಶಾಲೆಗಳಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ವಿವಿಧ ಶಾಲೆಗಳಲ್ಲಿ ನೇತಾರರ ಭಾವಚಿತ್ರಗಳನ್ನು ಇರಿಸಿ ಪುಷ್ಪ ನಮನ ಸಲ್ಲಿಸಿ ಶಾಲಾ ಪರಿಸರವನ್ನು ಸ್ವಚ್ಚಗೊಳಿಸಲಾಯಿತು. ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಶಾಲಾ ಸುತ್ತಮುತ್ತಲಿನ ಪರಿಸರ ಹಾಗೂ ಆವರಣವನ್ನು ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ದಿನದ ಮಹತ್ವದ ಕುರಿತು ವಿವರಿಸಿದರು. ಪ್ರೊ.ಕಲ್ಯಾಟಂಡ ಪೂಣಚ್ಚ ಮಾತನಾಡಿ, ಸಬರಮತಿಯಲ್ಲಿ ಮೊದಲಿಗೆ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ಚಳುವಳಿಯನ್ನು ಆರಂಭಿಸಿದರು. ಬಳಿಕ ದೇಶದ ಉದ್ದಗಲಕ್ಕೂ ಚಳುವಳಿಗಳನ್ನು ಕೈಗೊಂಡು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು ಎಂದ ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಯ ಬಗ್ಗೆ ವಿದ್ಯಾರ್ಥಿಗಳ ವಿವರಿಸಿದರು. ಶಾಲೆಯ ಪ್ರಾಂಶುಪಾಲೆ ಬಿ.ಎ ಶಾರದ ಮಾತನಾಡಿ, ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.…
ಮೈಸೂರು ಅ.3 NEWS DESK : ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲಾ ಐದು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40 ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ.…
ಮೈಸೂರು ಅ.3 NEWS DESK : ದಸರಾ ಉದ್ಘಾಟನಾ ಸಮಾರಂಭದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದಸರಾ ಉದ್ಘಾಟಕ ಡಾ. ಹಂ.ಪ.ನಾಗರಾಜಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಕೆ.ಪಾಟೀಲ್, ಡಾ. ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಸೇರಿ ಹಲವಾರು ಸಚಿವರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ವಿರಾಜಪೇಟೆ ಅ.3 NEWS DESK : ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಕಮಲಮ್ಮ ದಿನದ ಮಹತ್ವದ ಕುರಿತು ಮತ್ತು ಸ್ವಚ್ಛತೆಯ ಕುರಿತು ಮಾತನಾಡಿದರು. ಗಾಂಧಿ ಜಯಂತಿಯ ಪ್ರಯುಕ್ತ ಶಾಲಾ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ನಂತರ ಶಿಕ್ಷಕರು, ಮಕ್ಕಳು ಹಾಗೂ ಗ್ರಾಮಸ್ಥರು ಶಾಲೆಯ ಸುತ್ತ ಸ್ವಚ್ಛತಾ ಶ್ರಮದಾನವನ್ನು ಮಾಡಿದರು. ಈ ಸಂದರ್ಭ ಬಿ.ಎಸ್.ಎನ್.ಎಲ್. ನ ನಿವೃತ್ತ ನೌಕರ ಕೋಡಿರ ಟಿ.ಗಣಪತಿ, ರೇಷ್ಮಾ ಗಣಪತಿ, ಎಸ್.ಡಿ.ಎಂ.ಸಿ ಅಧ್ಯಕ್ಷೆ ವೈ.ಎಸ್.ಲತಾ, ಸಹ ಶಿಕ್ಷಕಿ ಕಮರುನ್ನಿಸ, ಎಸ್. ಡಿ. ಎಂ. ಸಿ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು. ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.
ಮಡಿಕೇರಿ ಅ.3 NEWS DESK : ಕೂಡಿಗೆ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಧ ಸಂತೋಷ್, ಉಪಾಧ್ಯಕ್ಷರಾಗಿ ಅಶ್ವಿನಿ ಯೋಗೇಶ್ ಅವಿರೋಧವಾಗಿ ಆಯ್ಕೆಯಾದರು. ಸಂಘದ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಧಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ಆಶಾ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಭಾರತಿ, ವಿಜಯ, ಪಂಕಜಾ, ವೀಣಾ , ಲಕ್ಷ್ಮಿ, ಮಣಿ, ಪಲ್ಲವಿ, ಸಾಕಮ್ಮ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮಿ ಹಾಜರಿದ್ದರು.
ಮಡಿಕೇರಿ ಅ.3 NEWS DESK : ಕಂಡಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪೂಜಾ ಮುರಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಂಡಕರೆ ಶಾಲೆಯಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ಪೂಜಾ ಅವರನ್ನು ಒಮ್ಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭ ಮಾತಾನಾಡಿದ ಪೂಜಾ ಮುರಳಿ, ಮುಂದಿನ ದಿನಗಳಲ್ಲಿ ಶಾಲೆಯ ಎಲ್ಲಾ ಹಳೆಯ ವಿದ್ಯಾರ್ಥಿಗಳನ್ನು ಒಂದುಗೂಡಿಸಿ ಸಮ್ಮಿಲನ ಕಾರ್ಯಕ್ರಮ ಮಾಡುವುದರ ಮೂಲಕ ಶಾಲೆಯ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಟಿ.ಎನ್.ರತೀಶ್, ಸುಜಿತ್, ವಿನೋದ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಜೀದ್, ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು.






