ಮಡಿಕೇರಿ ಅ.1 NEWS DESK : ವಿಶ್ವ ರೇಬಿಸ್ ದಿನದ ಪ್ರಯುಕ್ತ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ “Breaking Rabies boundries ರೇಬಿಸ್ ಗಡಿಯನ್ನು ಮುರಿಯುವುದು” ಎಂಬ ಧ್ಯೇಯದೊಂದಿಗೆ ಕೊಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೇಬಿಸ್ ತಡೆ ಹಾಗೂ ಲಸಿಕೆಗಳ ಮಹತ್ವದ ಕುರಿತು ಜನಜಾಗೃತಿ ಕಾರ್ಯಕ್ರಮ ನಡೆಯಿತು. ನೋಡಲ್ ಅಧಿಕಾರಿ ಹಾಗೂ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾದ್ಯಪಕರಾದ ಡಾ.ಕೃತಿಕಾ ಮಾತನಾಡಿ, ರೇಬಿಸ್ ರೋಗ ಎಷ್ಟು ಮಾರಕ, ರೇಬಿಸ್ ಕಾಯಿಲೆ ಹರಡುವ ಬಗ್ಗೆ ಹಾಗೂ ರೇಬಿಸ್ ಲಸಿಕೆ ತೆಗೆದುಕೊಳ್ಳುವ ವಿಧಾನ ಹಾಗೂ ರೇಬಿಸ್ ರೋಗ ತಡೆಗಟ್ಟುವಿಕೆ ಬಗ್ಗೆ ವಿವರಿಸಿದರು. ಜಿಲ್ಲ್ಲಾ ಶಸ್ತ್ರಚಿಕಿತ್ಸಕ ಡಾ.ನಜುಂಡಯ್ಯ ಮಾತನಾಡಿ, ರೇಬಿಸ್ ಕಾಯಿಲೆಯು ಎಷ್ಟು ಮಾರಕವೆಂದು, ಸೂಕ್ತ ಲಸಿಕೆ ಪಡೆಯುವುದು ಅನಿವಾರ್ಯ ಎಂದು ತಿಳಿಸಿದರು. ಹುಚ್ಚು ನಾಯಿ ಕಡಿತದಿಂದ ದೇಶದಲ್ಲಿ ವರ್ಷಕ್ಕೆ 15 ರಿಂದ 20 ಸಾವಿರ ಮಂದಿ ಬಲಿಯಾಗುತ್ತಿದ್ದು ಈ ಪೈಕಿ ಶೇ.40 ರಷ್ಟು 15 ವರ್ಷದ…
ಲೇಖಕ: admin
ಮಡಿಕೇರಿ ಅ.1 NEWS DESK : ನಾಡ ಹಬ್ಬ ದಸರಾ ಪ್ರಯುಕ್ತ ಅ.3 ರಂದು ಮಡಿಕೇರಿಯಲ್ಲಿ ನಾಲ್ಕು ಶಕ್ತಿ ದೇವತೆಗಳ ಕರಗ ಮಹೋತ್ಸವ ಆರಂಭಗೊಳ್ಳಲಿದ್ದು, ಗಣ್ಯರು ಸೇರಿದಂತೆ ಸಾವಿರಾರು ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮತ್ತು ವಾಹನ ಸುಗಮ ಸಂಚಾರಕ್ಕೆ ಅನುವುಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ಬೆಳಿಗ್ಗೆಯಿಂದಲೇ ಪಂಪ್ ಕೆರೆಯಿಂದ ( ಕರಗ ಹೋರಡುವ ಸ್ಥಳ) ಹಿಡಿದ್ದು, ಎವಿ ಶಾಲೆ ಜಂಕ್ಷನ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ವಾಹನ ನಿಲುಗಡೆಯನ್ನು ತಾತ್ಕಾಲಿಕವಾಗಿ ಸಂಪೂರ್ಣ ನಿಷೇಧಿಸಲಾಗಿದೆ. ಎವಿ ಶಾಲಾ ಜಂಕ್ಷನ್ ನಿಂದ ಐಜಿ ವೃತ್ತದವರಗೆ ರಸ್ತೆಯ ಒಂದು ಭಾಗದಲ್ಲಿ ಅಂದರೆ ರಸ್ತೆಯ ಎಡ ಭಾಗದಲ್ಲಿ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ನಂತರ ಐಜಿ ವೃತ್ತದಿಂದ ಕಾಲೇಜು ರಸ್ತೆ ಮಾರ್ಗವಾಗಿ ರಾಮಮಂದಿರ ದೇವಾಲಯದವರೆಗೆ ಸಂಜೆ 6 ಗಂಟೆಯ ನಂತರ ರಸ್ತೆಯ ಎರಡು ಭಾಗದಲ್ಲಿಯೂ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸಿ, ಕರಗ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮಡಿಕೇರಿ…
ಮಡಿಕೇರಿ ಅ.1 NEWS DESK : ಬಿದ್ದು ಸಿಕ್ಕಿದ ಬೆಲೆಬಾಳುವ ಮೊಬೈಲ್ ಫೋನ್‍ಅನ್ನು ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ನಗರದ ಸಂಚಾರಿ ಪೊಲೀಸರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಗರದ ಐಜಿ ವೃತ್ತದ ಬಳಿ ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ಉಪ ನೀರಿಕ್ಷಕ ಶ್ರೀಧರ್ ಅವರಿಗೆ ಬೆಲೆಬಾಳುವ ಮೊಬೈಲ್ ಫೋನ್ ಬಿದ್ದುಸಿಕ್ಕಿದ್ದು, ಅದನ್ನು ವಾರಸುದಾರರಿಗೆ ಒಪ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮಡಿಕೇರಿ ಅ.1 NEWS DESK : 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ನಿವೃತ್ತಿ ಆರ್ಥಿಕ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿ ಆರ್ಥಿಕ ತಾರತಮ್ಯವನ್ನು ಸರಿಪಡಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯಲ್ಲಿ ನಿವೃತ್ತಿಯಾದ ನೌಕರರಿಗೆ 6ನೇ ಆಯೋಗದ ಲೆಕ್ಕಾಚಾರದ ಅನುಸಾರ ಡಿ.ಸಿ.ಆರ್.ಜಿ. ಕಮ್ಯುಟೇಶನ್, ರಜೆ ನಗದೀಕರಣಗಳ ನಿವೃತ್ತಿ ಆರ್ಥಿಕ ಸೌಲಭ್ಯವನ್ನು ನೀಡಿದ್ದಾರೆ. ಈ ಕ್ರಮದಿಂದ ನಮಗೆ ಆರ್ಥಿಕ ನಷ್ಟವುಂಟಾಗಿ ಅನ್ಯಾಯವಾಗಿದೆ. ಸರ್ಕಾರ ತಕ್ಷಣ 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯೊಳಗೆ ನಿವೃತ್ತಿಯಾಗಿರುವ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ನಿವೃತ್ತಿ ಆರ್ಥಿಕ ಸೌಲಭ್ಯ ಕಲ್ಪಿಸಬೇಕು ಎಂದು ವೇದಿಕೆಯ ಜಿಲ್ಲಾ ಸಂಚಾಲಕ ಪಿ.ಎಸ್.ಜನಾರ್ಧನ…
ವಿರಜಪೇಟೆ ಅ.1 NEWS DESK : ವಿರಾಜಪೇಟೆ ಕಲ್ಲುಬಾಣೆಯ ಕಲ್ಲುಬಾಯ್ಸ್ ತಂಡದ ವತಿಯಿಂದ ಎರಡನೇ ವರ್ಷದ ಫುಟ್ಬಾಲ್ ಪಂದ್ಯಾವಳಿಯು ನ.15 ರಿಂದ 17ರ ವರೆಗೆ ವಿರಾಜಪೇಟೆ ನಗರದ ತಾಲ್ಲೂಕು ಮೈದಾನದಲ್ಲಿ ನಡೆಯಲಿದೆ ಎಂದು ಕಲ್ಲುಬಾಯ್ಸ್‍ನ ಅಧ್ಯಕ್ಷ ರಹೀಂ ಇಚ್ಚಿಯಪ್ಪ ಮಾಹಿತಿ ನೀಡಿದರು. ವಿರಾಜಪೇಟೆಯ ಟಿ.ಕೆ.ಟಿ. ಟವರ್‍ನಲ್ಲಿ ನಡೆದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಲೈಕ್ ಸಂಸ್ಥೆಯ ಮಾಲೀಕ ರಾಸಿಕ್ ಕ್ರೀಡಾಕೂಟದ ಪೋಸ್ಟರ್‍ನ್ನು ಬಿಡುಗಡೆ ಮಾಡಿದರು. ಇದೇ ಸಂದರ್ಭ ವಿರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯರಾದ ಮಹಮ್ಮದ್ ರಾಫಿ ಮಾತನಾಡಿ ಪಂದ್ಯಾವಳಿಗೆ ಶುಭಹಾರೈಸಿದರು. ಈ ಸಂದರ್ಭ ಕ್ರೀಡಾಕೂಟದ ಪ್ರೇಮಿಗಳಾದ ಸಿ.ಎ.ನಾಸಿರ್, ಶಂಶಿರ್, ಚೇಕು, ಯ್ಯಯ್ಯ ಸೇರಿದಂತೆ ಕೀಡಾ ಪ್ರೇಮಿಗಳು ಹಾಜರಿದ್ದರು.
ಮಡಿಕೇರಿ ಅ.1 NEWS DESK : ನಗರದ ಕೊಡಗು ವಿದ್ಯಾಲಯ ವಿದ್ಯಾಸಂಸ್ಥೆಯ ವತಿಯಿಂದ ದ್ವಿತೀಯ ಬಾರಿಗೆ ಅ.4 ರಿಂದ 7 ರವರೆಗೆ ಸಿಬಿಎಸ್‍ಇ ದಕ್ಷಿಣ ವಲಯದ ವಲಯ 2ರ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ವಲಯಕ್ಕೆ ಒಳಪಡುವ ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿನ ಸಿಬಿಎಸ್‍ಇ ಶಿಕ್ಷಣ ಸಂಸ್ಥೆಗಳ ಕ್ರೀಡಾಪಟುಗಳಿಗೆ ಸೀಮಿತವಾಗಿ ಆಯೋಜಿತ ಹಾಕಿ ಪಂದ್ಯಾವಳಿಯ ಪಂದ್ಯಗಳು ಕೂಡಿಗೆ ಮತ್ತು ಸೋಮವಾರಪೇಟೆಯ ಆಸ್ಟ್ರೋ ಟರ್ಫ್ ಮೈದಾನದಲ್ಲಿ ನಡೆಯಲಿದೆ ಎಂದರು. 14 ವರ್ಷದೊಳಗಿನ, 17 ವರ್ಷದೊಳಗಿನ ಮತ್ತು 19 ವರ್ಷದೊಳಗಿನ ಮೂರು ವಿಭಾಗಗಳಲ್ಲಿ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಪಂದ್ಯಾವಳಿ ನಡೆಯಲಿದ್ದು, ಒಟ್ಟು 37 ತಂಡಗಳು ಪಾಲ್ಗೊಳ್ಳಲಿವೆ. ಕ್ರೀಡಾಪಟುಗಳು, ತರಬೇತುದಾರರು ಮತ್ತು ವ್ಯವಸ್ಥಾಪಕರು ಸೇರಿದಂತೆ ಸುಮಾರು 700 ಮಂದಿ ಭಾಗವಹಿಸಲಿದ್ದಾರೆ. ಲೀಗ್ ಮತ್ತು ನಾಕೌಟ್ ಮಾದರಿಯಲ್ಲಿ 60 ಪಂದ್ಯಾಟಗಳು ನಡೆಯಲಿದ್ದು, ಹಾಕಿ ಕೂರ್ಗ್‍ನ ಅಂತರಾಷ್ಟ್ರೀಯ ಮಟ್ಟದ ತೀರ್ಪುಗಾರರು ಪಂದ್ಯಗಳನ್ನು ನಿರ್ವಹಿಸಲಿದ್ದಾರೆ…
ಮಡಿಕೇರಿ ಅ.1 NEWS DESK : ಕೊಡವ ಯುವ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಮತ್ತು ಲೆದರ್‌ಬಾಲ್ ಕ್ರಿಕೆಟ್ ಗೆ ಉತ್ತೇಜನ ನೀಡುವ ಉದ್ದೇಶದಿಂದ ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಏ.1 ರಿಂದ 20ರ ವರೆಗೆ ಪಾಲಿಬೆಟ್ಟದಲ್ಲಿ ಕೊಡವ ಕ್ರಿಕೆಟ್ ಲೆದರ್‌ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಫೌಂಡೇಶನ್‍ನ ಅಧ್ಯಕ್ಷ ಪೊರುಕೊಂಡ ಸುನಿಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಬೆಟ್ಟದ ಟಾಟಾ ಕಾಫಿ ಸಂಸ್ಥೆಯ ಕ್ರಿಕೆಟ್ ಮೈದಾನದಲ್ಲಿ ಟಿ-20 ಮಾದರಿಯ ಪಂದ್ಯಾವಳಿ ನಡೆಯಲಿದ್ದು, ವಿಜೇತರಿಗೆ ಆಕರ್ಷಕ ನಗದು ಹಾಗೂ ಟ್ರೋಫಿ ನೀಡಲಾಗುವುದು ಎಂದರು. ಸೀಸನ್-1 ರ ಪ್ರಾಂಚೈಸಿಗಳು ಮುಂದುವರೆಯಲಿದ್ದು, ಇವರೊಂದಿಗೆ ಮತ್ತಷ್ಟು ಪ್ರಾಂಚೈಸಿಗಳು ಪಾಲ್ಗೊಳ್ಳವ ನಿರೀಕ್ಷೆ ಇದೆ. ಒಂದು ತಂಡದಲ್ಲಿ 15 ಮಂದಿ ಇರಲಿದ್ದು, ಈ ಪಂದ್ಯ ಕೊಡವ ಕ್ರೀಡಾ ಪ್ರತಿಭೆಗಳಿಗೆ ಸೀಮಿತವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಜನಾಂಗದ ಪ್ರತಿಭೆಗಳನ್ನು ಗುರುತಿಸಿ ಲೆದರ್‍ಬಾಲ್ ಕ್ರಿಕೆಟ್ ಗೆ ಉತ್ತೇಜನ ನೀಡುವ ಗುರಿ ಹೊಂದಿದ್ದೇವೆ. ಯುವ ಪ್ರತಿಭೆಗಳು ಲೆದರ್‌ಬಾಲ್ ಕ್ರಿಕೆಟ್…
ಮಡಿಕೇರಿ ಅ.1 NEWS DESK : ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ಅ.5 ರಂದು ಮಲೆನಾಡ ಮಡಿಲಲ್ಲಿ ಜೆಸಿ ನಿಸರ್ಗ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಘಟಕದ ಅಧ್ಯಕ್ಷ ಪೆಮ್ಮಂಡ ಬೋಪಣ್ಣ ಅವರು ಪೊನ್ನಂಪೇಟೆ ತಾಲ್ಲೂಕಿನ ಬೇಗೂರುಕೊಲ್ಲಿಯಲ್ಲಿ ಒಂದು ದಿನ ನಡೆಯುವ ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ 9.30 ಗಂಟೆಗೆ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಹುದಿಕೇರಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಜ್ಜಿಕುಟ್ಟೀರ ಪ್ರವೀಣ್ ಮುತ್ತಪ್ಪ, ಹುದಿಕೇರಿ ಗ್ರಾ.ಪಂ ಅಧ್ಯಕ್ಷರಾದ ಕುಪ್ಪಣಮಡ ಕೆ.ಕಾವೇರಮ್ಮ, ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠನಾ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ವಲಯ 14 ಜೆಎಸಿ ವಲಯ ಆಡಳಿತ ಮಂಡಳಿಯ ಸಲಹೆಗಾರ ಎ.ಎಸ್.ನರೈನ್ ಕಾರ್ಯಪ್ಪ, ಹುದಿಕೇರಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಎಂ.ಎಂ.ನವೀನ್ ಪಾಲ್ಗೊಳ್ಳಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಿ.ಶೆಟ್ಟಿಗೇರಿ ಗ್ರಾಮದ ನಾಮೇರ ನವೀನ್,…
ಮೈಸೂರು NEWS DESK ಅ.1 : ಕೇಂದ್ರ ಸರ್ಕಾರವು ಸ್ಥಾಯಿ ಸಮಿತಿಗಳನ್ನು ರಚಿಸಿ ಆದೇಶಿಸಿದ್ದು. ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸ್ಥಾಯಿ ಸಮಿತಿಗೆ ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಸದರಿ ಸ್ಥಾಯಿ ಸಮಿತಿಗೆ ಅಸ್ಸಾಂನ ಸಂಸದ ಭುಭನೇಶ್ವರ್ ಕಲಿತಾ ಅವರು ಅಧ್ಯಕ್ಷರಾಗಿರುತ್ತಾರೆ.
ಮಡಿಕೇರಿ NEWS DESK ಅ.1 : ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಅಕ್ಟೋಬರ್ 4 ರಿಂದ 12 ರವೆರೆಗೆ ಪ್ರತೀ ನಿತ್ಯವೂ ವೈವಿಧ್ಯಮಯ ಸಾಂಸ್ಕೖತಿಕ ಕಾಯ೯ಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್. ಟಿ ಮಾಹಿತಿ ನೀಡಿದ್ದಾರೆ. ಮಡಿಕೇರಿ ಕ್ಷೇತ್ರ ಶಾಸಕ ಡಾ, ಮಂಥರ್ ಗೌಡ, ಜಿಲ್ಲಾಧಿಕಾರಿ ಮತ್ತು ದಸರಾ ಸಮಿತಿ ಅಧ್ಯಕ್ಷರಾದ ವೆಂಕಟರಾಜಾ ಮಾಗ೯ದಶ೯ನದಲ್ಲಿ ದಸರಾ ಸಮಿತಿಯ ಕಾಯಾ೯ಧ್ಯಕ್ಷ ಪ್ರಕಾಶ್ ಆಚಾಯ೯, ಪ್ರಧಾನ ಕಾಯ೯ದಶಿ೯ ರಾಜೇಶ್ ಬಿ ವೈ ಮತ್ತು ಖಜಾಂಜಿ ಅರುಣ್ ಶೆಟ್ಟಿ, ಸಮಿತಿ ಪದಾದಿಕಾರಿಗಳ ಸಹಕಾರದೊಂದಿಗೆ ವೈವಿಧ್ಯಮಯ ಕಾಯ೯ಕ್ರಮಗಳು ಈ ಬಾರಿಯ ದಸರಾದಲ್ಲಿ ಜನಮನ ಸೆಳೆಯಲಿದೆ ಎಂದೂ ಅನಿಲ್ ತಿಳಿಸಿದ್ದಾರೆ. ::: ದಸರಾ ಕಾಯ೯ಕ್ರಮಗಳ ವಿವರ ::: ಅಕ್ಟೋಬರ್ 4 ರಂದು ಶುಕ್ರವಾರ – ಮಡಿಕೇರಿಯ ಕಾವ್ಯಶ್ರೀ ಕಪಿಲ್ ಕಲಾಕಾವ್ಯ ತಂಡದಿಂದ ನೖತ್ಯ ವೈವಿಧ್ಯ , ಮೇವಡ ಕಾವೇರಿ ಅಯ್ಯಪ್ಪಮತ್ತು ತಂಡದಿಂದ ಗಾನಸುಧೆ , ಕೂಡಿಗೆಯ ಎ ಕ್ರಿಯೇಟೀವ್ ಡಾನ್ಸ್ ಅಕಾಡೆಮಿಯಿಂದ ಭಾರತೀಯ…






