ಮಡಿಕೇರಿ ಏ.18 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.18 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ತೀತಮಾಡ(ಕುಂದ) ಮತ್ತು ಕಾಣತಂಡ ತಂಡಗಳ ನಡುವಿನ ಪಂದ್ಯದಲ್ಲಿ ಕಾಣತಂಡ 30 ರನ್ ಗಳ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಾಣತಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 94 ರನ್ ಗಳನ್ನು ಸೇರಿಸಿತು. ತೀತಮಾಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 64 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಆದೇಂಗಡ ಮತ್ತು ಗೀಜಿಗಂಡ ನಡುವಿನ ಪಂದ್ಯದಲ್ಲಿ ಗೀಜಿಗಂಡ 15 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗೀಜಿಗಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 60 ರನ್ ಗಳನ್ನು ಸೇರಿಸಿತು. ಆದೇಂಗಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 45…
ಲೇಖಕ: admin
ಮಡಿಕೇರಿ ಏ.18 NEWS DESK : ಕೊಡಗು ಜಿಲ್ಲಾ ಮೊಗೇರ ಸಮಾಜ ಸೇವಾ ಸಂಘದಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲಿ ಆಯೋಜಿತ ಎರಡು ದಿನಗಳ 10ನೇ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”ಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು. ಮಡಿಕೇರಿ ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ ಅವರು ಜ್ಯೋತಿ ಬೆಳಗುವ ಮೂಲಕ ಮೊಗೇರ ಕ್ರೀಡಾಕೂಟ ಸಮಾರಂಭಕ್ಕೆ ಚಾಲನೆಯನ್ನಿತ್ತು ಮಾತನಾಡಿ, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಮೊಗೇರ ಸಮಾಜ ಬಾಂಧವರು ಕ್ರೀಡಾಕೂಟದ ಹಿನ್ನೆಲೆ ಒಂದೆಡೆ ಸಮಾವೇಶಗೊಂಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ, ಕ್ರೀಡಾಕೂಟದ ಯಶಸ್ಸಿಗೆ ಶುಭ ಹಾರೈಸಿದರು. ಕೊಡಗು ಜಿಲ್ಲಾ ಮೊಗೇರ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪಿ.ಬಿ.ಜನಾರ್ಧನ್ ಮಾತನಾಡಿ, ಕಳೆದ ಒಂದು ದಶಕದಿಂದ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳಲ್ಲಿನ ಮೊಗೇರ ಸಮಾಜ ಬಾಂಧವರನ್ನು ಒಗ್ಗೂಡಿಸುವ, ಆ ಮುಖೇನ ಸಮಾಜದ ಸಂಘಟನೆಯನ್ನು ಬಲಪಡಿಸುವ ಪ್ರಯತ್ನವಾಗಿ ಕ್ರೀಡಾಕೂಟವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಪ್ರಸ್ತುತ ನಮ್ಮೆಲ್ಲ ಪ್ರಯತ್ನಗಳಿಂದ ಸಂಘಟನೆ ಸದೃಢವಾಗಿ ಬೆಳೆಯುತ್ತಿರುವುದಾಗಿ ಸಂತಸ ವ್ಯಕ್ತಪಡಿಸಿದರು. ರಾಜ್ಯ ಮಟ್ಟದ ಈ ಕ್ರೀಡಾಕೂಟದಲ್ಲಿ ಕೊಡಗನ್ನು ಒಳಗೊಂಡಂತೆ…
ಮಡಿಕೇರಿ ಏ.18 NEWS DESK : ಮಹಿಳಾ ಮೀಸಲು ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ನ ಮಹಿಳಾ ವಿರೋಧಿ ಧೋರಣೆ ಜಗಜ್ಜಾಹೀರಾಗಿದ್ದು, ಅದರ ಮುಖವಾಡ ಕಳಚಿಬಿದ್ದಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಪ್ರಮುಖರು ಕೇಂದ್ರದ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ.33 ಮೀಸಲಾತಿಯನ್ನು ನೀಡಲು ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಸಂದರ್ಭ ಕಾಂಗ್ರೆಸ್ ನೇತೃತ್ವದ ಮಹಿಳಾ ವಿರೋಧಿ ಇಂಡಿಯಾ ಕೂಟ ಅಡ್ಡಿಪಡಿಸಿ ಅದಕ್ಕೆ ಸೋಲಾಗುವಂತೆ ನಡೆದುಕೊಂಡಿದೆ. ಇದು ಕಾಂಗ್ರೆಸ್ ನ ಮಹಿಳಾ ವಿರೋಧಿ ಧೋರಣೆಗಳನ್ನು ಸ್ಪಷ್ಟಪಡಿಸಿದೆ ಎಂದು ಟೀಕಿಸಿದರು. ರಾಷ್ಟ್ರದ ಜನತೆ ಅದರಲ್ಲೂ ಪ್ರಮುಖವಾಗಿ ಮಹಿಳೆಯರು ಕಾಂಗ್ರೆಸ್ ನ ಈ ಧೋರಣೆಯನ್ನು ವಿರೋಧಿಸುವ ಮೂಲಕ ಮುಂದಿನ ಚುನಾವಣೆಗಳಲ್ಲಿ ಇವರಿಗೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ತಿಳಿಸಿದರು. *ವಿಕೇಂದ್ರೀಕರಣ ಬುಡಮೇಲು* ರಾಜ್ಯ ಕಾಂಗ್ರೆಸ್ ಸರಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದೆ ಅಧಿಕಾರ ವಿಕೇಂದ್ರೀಕರಣ…
ಮಡಿಕೇರಿ, NEWS DESK ಏ.18 : ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ನಗರದ ಜಿ.ಪಂ.ಸಭಾAಗಣದಲ್ಲಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಬೇಸಿಗೆಯು ಈ ಬಾರಿ ಹೆಚ್ಚಿದ್ದು, ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಯಾವುದೇ ರೀತಿಯ ದೂರುಗಳು ಬಾರದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಈ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ನಗರ ವ್ಯಾಪ್ತಿಯಲ್ಲಿ ನಗರಸಭೆ ಆಯುಕ್ತರು, ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಕುಡಿಯುವ ನೀರು ಪೂರೈಕೆಯ ಮೂಲಗಳಲ್ಲಿನ ನೀರಿನ ಲಭ್ಯತೆಯ ಬಗ್ಗೆ ಮಾಹಿತಿ ಹೊಂದಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ಜಿಲ್ಲೆಯ 40 ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಮಾಹಿತಿ ಇದ್ದು, ಸೂಕ್ತ…
ಮಡಿಕೇರಿ NEWS DESK ಏ.18 : ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸುವ ಮೂಲಕ ಮಹಿಳಾ ವಿರೋಧಿ ಧೋರಣೆಯನ್ನು ಅನುಸರಿಸಿವೆ ಎಂದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇಂದ್ರದ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಆರಂಭದಿoದಲೂ ಮಹಿಳಾ ಸಮಾನತೆಯನ್ನು ಪ್ರತಿಪಾದಿಸುತ್ತಾ ಬಂದಿದೆ. ಇದರ ಭಾಗವಾಗಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ಮಸೂದೆಯನ್ನು ಮಂಡಿಸಿದೆ. ಆದರೆ ಸದಾ ಮಹಿಳಾ ವಿರೋಧಿ ನಡೆಯನ್ನೇ ಅನುಸರಿಸಿಕೊಂಡು ಬಂದಿರುವ ಕಾಂಗ್ರೆಸ್ ಮಸೂದೆಯನ್ನು ವಿರೋಧಿಸುವ ಮೂಲಕ ದೇಶದ ಮಹಿಳಾ ಸಮೂಹವನ್ನು ಅಪಮಾನಿಸಿದೆ ಎಂದು ಟೀಕಿಸಿದ್ದಾರೆ. ಮಹಿಳೆಯರು ರಾಜಕೀಯ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಸಮಾನ ಅವಕಾಶಗಳನ್ನು ಪಡೆದುಕೊಂಡು ಸಬಲರಾಗಬೇಕು. ಆ ಮೂಲಕ ಸ್ವಾಭಿಮಾನದಿಂದ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು ಎನ್ನುವ ಮನೋಭಾವವನ್ನು ಪ್ರಧಾನಿ ನರೇಂದ್ರಮೋದಿಯವರು ಹೊಂದಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಮಹಿಳೆಯರ…
ಮಡಿಕೇರಿ, NEWS DESK ಏ.18 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಿವಿ, ಮೂಗು, ಗಂಟಲು ವಿಭಾಗದಿಂದ “ನಮ್ಮ ಧ್ವನಿಯ ಆರೈಕೆ” ಎಂಬ ವಿಷಯದಡಿ ‘ವಿಶ್ವ ಧ್ವನಿ’ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು. ವೃತ್ತಿಪರ ಧ್ವನಿ ಬಳಕೆದಾರರಲ್ಲಿ ಧ್ವನಿಯ ಆರೋಗ್ಯದ ಮಹತ್ವ ಮತ್ತು ಧ್ವನಿಯ ಆರೈಕೆಯ ಅಗತ್ಯತೆಯ ಬಗ್ಗೆ ಅರಿವು ಮೂಡಿಸಲಾಯಿತು. ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ, ವಾಕ್ ಮತ್ತು ಭಾಷೆ ತಜ್ಞರು ಡಾ.ದಿವ್ಯಾ ಸೇಠ್ ಅವರು ಧ್ವನಿಯ ಆರೈಕೆ, ಧ್ವನಿಯ ಅಸ್ವಸ್ಥತೆಗಳನ್ನು ಗುರುತಿಸುವುದು ಮತ್ತು ವಿಶೇಷವಾಗಿ ತಮ್ಮ ವೃತ್ತಿಗಳಲ್ಲಿ ಧ್ವನಿಯನ್ನು ಹೆಚ್ಚು ಅವಲಂಬಿಸಿರುವ ವ್ಯಕ್ತಿಗಳಲ್ಲಿ ಆರೋಗ್ಯಕರ ಧ್ವನಿ ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಸ್ನಾತಕೋತ್ತರ ಇಎನ್ಟಿ ವಿದ್ಯಾರ್ಥಿನಿ ಡಾ.ಪೂಜಾ ಅವರು ಧ್ವನಿಯ ವಿಕಸನವನ್ನು ವಿವರಿಸಿದರು. ಇದು ಅಭಿವ್ಯಕ್ತಿಗೆ ಪ್ರಬಲ ಮಾಧ್ಯಮವಾಗಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಬಗ್ಗೆ ಒತ್ತಿ ಹೇಳಿದರು. ಧ್ವನಿ ಕೇವಲ ಒಂದು ಪ್ರಮುಖ ಅಂಗವಲ್ಲದೆ, ಮಾನವರನ್ನು ಸುತ್ತಮುತ್ತಲಿನ ಪ್ರಪಂಚದೊAದಿಗೆ ಅರ್ಥಪೂರ್ಣವಾಗಿ ಸಂಪರ್ಕಿಸಲು ಸ್ವರ ಪೆಟ್ಟಿಗೆ ಹೇಗೆ…
ಮಡಿಕೇರಿ, NEWS DESK ಏ.18 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವತಿಯಿಂದ 7ನೇ ಕೊಡವ ಪುಸ್ತಕ ಪತ್ತಾಯವನ್ನು ಸುಂಟಿಕೊಪ್ಪನಾಡು ಕೊಡವ ಸಮಾಜದಲ್ಲಿ ಸ್ಥಾಪಿಸಲಾಯಿತು. ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಉದ್ಘಾಟಿಸಿದ ಪುಸ್ತಕ ಪತ್ತಾಯ ಸ್ಥಾಪನಾ ಸಮಾರಂಭದ ವೇಳೆ ವೇದಿಕೆಯಲ್ಲಿ ಸುಂಟಿಕೊಪ್ಪ ಕೊಡವ ಸಮಾಜದ ಅಧ್ಯಕ್ಷರಾದ ಚೇಂದ್ರಿಮಡ ಕರುಂಬಯ್ಯ, ಹಿರಿಯ ಸಮಾಜ ಸೇವಕರಾದ ಪುಡಿಯಂಡ ಮುತ್ತಣ್ಣ, ಕುಶಾಲನಗರ ಶ್ರೀ ಇಗ್ಗುತಪ್ಪ ಕೊಡವ ಕಲ್ಚರಲ್ ಅಸೋಸಿಯೇಷನ್ ಮಾಜಿ ಅಧ್ಯಕ್ಷರಾದ ಅರುಣ್ ಮೊಣ್ಣಪ್ಪ, ಸುಂಟಿಕೊಪ್ಪ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಬೊಳಂದAಡ ಸರೋಜಿನಿ ದೇವಯ್ಯ, ಸಮಾಜ ಕಾರ್ಯದರ್ಶಿ ಅಜ್ಜಿಕುಟ್ಟಿರ ಸಿ.ಗಿರೀಶ್ ಹಾಗೂ ಅಕಾಡೆಮಿಯ ಸದಸ್ಯೆ ಕಂಬೆಯAಡ ಡೀನಾ ಬೋಜಣ್ಣ ಉಪಸ್ಥಿತರಿದ್ದರು. ನಂತರ ಕೊಡವರ ಹೊಸ ವರ್ಷ ಎಡಮ್ಯಾರ್ ಒಂದಕ್ಕೆ ಶುಭ ಕೋರಿ ಮಾತನಾಡಿದ ಅಧ್ಯಕ್ಷ ಮಹೇಶ್ ನಾಚಯ್ಯ, ಯಾವುದೇ ಭಾಷೆಯಾದರೂ ಸರಿ, ಸಾಹಿತ್ಯ ರಚನೆಯಾದಷ್ಟು ಭಾಷೆಯು ಗಟ್ಟಿಗೊಳ್ಳುವುದು. ಕೊಡವ ಭಾಷೆಯು ಸಾಹಿತಿಕವಾಗಿ ಮತ್ತಷ್ಟು ಬೆಳೆಯಬೇಕಾಗಿದೆ. ಕೊಡವ ಭಾಷೆಯಲ್ಲಿ ಓದುವ, ಬರೆಯುವ ಪ್ರವೃತ್ತಿಯನ್ನು ಚಿಕ್ಕಂದಿನಿAದಲೇ ಮಕ್ಕಳಿಗೆ…
ಮಡಿಕೇರಿ, NEWS DESK ಏ.18 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಇಂಗ್ಲಿಷ್ ವಿಭಾಗದ ಜಾಯ್ಸ್ ಲಿಟರರಿ ಕ್ಲಬ್ ವತಿಯಿಂದ, ಹಳೆಯ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ಪುಸ್ತಕಗಳನ್ನು ಮೀರಿ ನೈಜ ಪ್ರಪಂಚಕ್ಕಾಗಿ ಕೌಶಲ್ಯಗಳು ಎಂಬ ಎರಡು ದಿನಗಳ ಕೌಶಲ್ಯ ಕಾರ್ಯಾಗಾರವು ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು. ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿಗಳಾದ ಚೋಂದಮ್ಮ, ಸಪ್ನ ಹಾಗೂ ಲಿಖಿತ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಬಳಿಕ ಇಂಗ್ಲಿಷ್ ವಿಭಾಗದ ಸಹ ಪ್ರಾಧ್ಯಾಪಕರಾದ ಪೂಣಚ್ಚ ಕೆ.ಎಂ. ಅವರು ಸ್ವಾಗತ ಭಾಷಣ ಮಾಡಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಹಾಗೂ ಜಾಯ್ಸ್ ಲಿಟರರಿ ಕ್ಲಬ್ ಅಧ್ಯಕ್ಷೆ ಪ್ರೊ. ನಯನ ಕಶ್ಯಪ್ ಅವರು ಪ್ರಾಸ್ತಾವಿಕ ನುಡಿಯಲ್ಲಿ “ವಿದ್ಯಾರ್ಥಿಗಳು ಪಾಠದ ಜೊತೆಗೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ಬಹಳ ಮುಖ್ಯ ಎಂದು ತಿಳಿಸಿದರು. ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿ, ಜೀವನ ಕೌಶಲ್ಯಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.” ಅತಿಥಿಯಾಗಿ ಭಾಗವಹಿಸಿದ್ದ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರು ಮಾತನಾಡಿ,…
ಮಡಿಕೇರಿ, NEWS DESK ಏ.18 : ಜಿಲ್ಲೆಯಲ್ಲಿ ಆಟೋ ದರ ಹಾಗೂ ಮಾಂದಲ್ ಪಟ್ಟಿಗೆ ತೆರಳುವ ಬಾಡಿಗೆ ವಾಹನ ದರ ಪರಿಷ್ಕರಣೆ ಸಂಬAಧ ‘ಉಪ ಸಮಿತಿ’ ರಚಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಕಳೆದ ಹನ್ನೆರಡು ವರ್ಷಗಳ ಹಿಂದೆ ಆಟೋ ದರ ಪರಿಷ್ಕರಣೆ ಮಾಡಲಾಗಿದ್ದು, ಈಗಿರುವ ದರವನ್ನು ಸ್ವಲ್ಪವಾದರೂ ಹೆಚ್ಚಿಸಬೇಕು ಎಂದು ಆಟೋ ಚಾಲಕರು/ಮಾಲಿಕರ ಸಂಘದ ಅಧ್ಯಕ್ಷರಾದ ಮೇದಪ್ಪ ಅವರು ಸಭೆಯಲ್ಲಿ ಕೋರಿದರು. ಆಟೋ ವಾಹನ ಬಿಡಿಭಾಗಗಳ ಬೆಲೆ ಹಾಗೂ ಇಂಧನ ದರ ಹೆಚ್ಚಳವಾಗಿರುವ ಹಿನ್ನೆಲೆ ಆಟೋ ಚಾಲಕರ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಆದ್ದರಿಂದ ದರ ಹೆಚ್ಚಳ ಮಾಡಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆಟೋ ದರ ಪರಿಷ್ಕರಣೆ ಸಂಬAಧ ಉಪ ಸಮಿತಿ ವರದಿ ಆಧರಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.…
ಮಡಿಕೇರಿ ಏ.17 NEWS DESK : ತರಬೇತಿ ಶಿಬಿರಗಳಲ್ಲಿ ಕಲಿತದ್ದನ್ನು ಮಕ್ಕಳು ಶಿಬಿರದ ನಂತರವೂ ಅಭ್ಯಾಸ ಮಾಡಬೇಕೆಂದು ಮೂರು ಬಾರಿ ಒಲಂಪಿಕ್ಸ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಹಿರಿಯ ಹಾಕಿ ಆಟಗಾರ ಮನೆಯಪಂಡ ಸೋಮಯ್ಯ ಕರೆ ನೀಡಿದರು. ಮಡಿಕೇರಿಯ ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಸ್ನರಣಾರ್ಥ ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತಿರುವ ಮಕ್ಕಳ ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರಕ್ಕೆ ಆಗಮಿಸಿ ಮಕ್ಕಳಿಗೆ ಹಿತವಚನ ನುಡಿದರು. ಕ್ರಿಕೆಟ್ ಆಟಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆಯಾದರೂ ಕೊಡಗು ಜಿಲ್ಲೆಯಲ್ಲಿ ಹಾಕಿ ಆಟ ಪ್ರಥಮವಾಗಿದೆ. ಈ ಶಿಬಿರದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಹಾಕಿ ಆಟದಲ್ಲಿ ತೊಡಗಿಸಿರುವದು ಹೆಮ್ಮೆಯ ಸಂಗತಿ. ಶಿಬಿರzಲ್ಲಿ ತರಬೇತುದಾರರು ಹೇಳಿಕೊಡುವದನ್ನು ಗಮನವಿಟ್ಟು ಕಲಿಯಬೇಕು. ಯೋಗ ತರಬೇತಿ ಕೂಡುತ್ತಿದ್ದು, ಅದು ಆರೋಗ್ಯಕ್ಕೆ ಉತ್ತಮ. ಶಿಬಿರದ ಬಳಿಕವೂ ಮಕ್ಕಳು ಅಭ್ಯಾಸ ಮುಂದುವರೆಸಬೇಕೆಂದು ಕಿವಿ ಮಾತು ಹೇಳಿದರು. ಪದ್ಮಶ್ರೀ ಪ್ರಶಸ್ತಿ ಪಡೆದ, ವಿಶ್ವಕಪ್ ಗೆದ್ದ ತಂಡದಲ್ಲಿದ್ದ ಹಾಗೂ ಪ್ರಸ್ತುತ ಭಾರತ ತಂಡದಲ್ಲಿ ಆಡುತ್ತಿರುವ ಆಟಗಾರರ…






