ಮಡಿಕೇರಿ ಸೆ.30 NEWS DESK : ಕೊಡಗು ವಿದ್ಯಾಲಯದ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಅಮೂಲ್ಯ ಸೇವೆಗಾಗಿ ಪ್ರಗತಿಪರ ಪ್ರಾಂಶುಪಾಲೆ ಪ್ರಶಸ್ತಿ ಲಭಿಸಿದೆ. ಎಜುಕೇಶನ್ ಟುಡೇನ ಎಜುಕೇಶನ್ ನ್ಯೂಸ್ ನೆಟ್‌ವರ್ಕ್ (ಇಎನ್‌ಎನ್) ವತಿಯಿಂದ ಆಂಧ್ರ ಪ್ರದೇಶ ಮತ್ತು ತೆಲಂಗಾಣ ಶಿಕ್ಷಣೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಯಿತು. ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸುಮಿತ್ರ ಅವರು ಸಲ್ಲಿಸಿರುವ ಸೇವೆ, ದೃಢಸಂಕಲ್ಪ ಮತ್ತು ಶ್ರಮವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ, ಶಿಕ್ಷಣದ ಗುಣಮಟ್ಟವನ್ನು ಉತ್ತೇಜಿಸಲು ಸುಮಿತ್ರಾ ಹಮ್ಮಿಕೊಂಡಿರುವ ನಿರಂತರ ಪ್ರಯತ್ನಗಳು ಈ ಗೌರವ ಲಭಿಸಲು ಕಾರಣವಾಗಿದೆ. ದೇಶದ ವಿವಿಧೆಡೆಗಳಿಂದ ಶಿಕ್ಷಣ ತಜ್ಞರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಕೊಡಗು ವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಲೇಖಕ: admin
ಮಡಿಕೇರಿ ಸೆ.30 NEWS DESK : ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮದ ಹನುಮ ಸೇನಾ ಸಮಿತಿಯ ವತಿಯಿಂದ ಹನುಮ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯು ಸಮಿತಿಯ ಅಧ್ಯಕ್ಷ ಕೆ.ಎಸ್ .ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕೂಡುಮಂಗಳೂರು ಗ್ರಾಮದ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಈ ಬಾರಿ ಮೂರನೇಯ ಅವಧಿಯ ಹನುಮ ಜಯಂತಿ ಆಚರಣೆ, ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ವಾರ್ಷಿಕ ರಥೋತ್ಸವ ಸಂದರ್ಭದ ಭಾಗವಹಿಸುವಿಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆದವು. ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಎರಡೂ ಗ್ರಾಮಗಳಿಗೆ ಒಂದೇ ಶೋಭಾಯಾತ್ರೆಯ ಹನುಮ ಮಂಟಪವನ್ನು ಹೊರತರುವ ಚಿಂತನೆಗಳ ಬಗ್ಗೆ ಹಾಜರಿದ್ದ ಯುವಕರ ತಂಡ, ಗ್ರಾಮಸ್ಥರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ಹಾಜರಿದ್ದ ಎಲ್ಲಾ ಸದಸ್ಯರುಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಅದರ ಅನುಗುಣವಾಗಿ ಅದ್ದೂರಿಯ ಶೋಭಾಯಾತ್ರೆಯ ವಿಗ್ರಹವನ್ನು ಸಿದ್ದ ಪಡಿಸುವ ಮತ್ತು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಕುಶಾಲನಗರ ಹನುಮ ಸೇವಾ ಸಮಿತಿಯ…
ಮಡಿಕೇರಿ ಸೆ.30 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಮಡಿಕೇರಿ ರೋಟರಿ ಸಂಸ್ಥೆ, ಭಾರತೀಯ ರೆಡ್‍ಕ್ರಾಸ್ ಸೊಸೈಟಿ ಕೊಡಗು ಶಾಖೆ ಮಡಿಕೇರಿ ಮಾಜಿ ಸೈನಿಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯು ಅ.1 ರಂದು ಬೆಳಗ್ಗೆ 10.30 ಗಂಟೆಗೆ ನಗರದ ರೋಟರಿ ಹಾಲ್‍ನಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್,…
ಮಡಿಕೇರಿ ಸೆ.30 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ ಮತ್ತು ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ನ.5 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಅ.8 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ,…
ಮಡಿಕೇರಿ ಸೆ.30 NEWS DESK : ಕೊಡಗು ಜಿಲ್ಲೆ ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧಿಸಿದಂತೆ ಪ್ರಸಿದ್ಧ ದೇವಾಲಯಗಳು, ಪವಿತ್ರ ಸ್ಥಳಗಳು, ಹೋಟೆಲ್, ಹೋಂಸ್ಟೇ, ರೆಸಾರ್ಟ್, ಜಲಾಶಯ, ಜಲಪಾತ, ಪ್ರೇಕ್ಷಣೀಯ ಸ್ಥಳಗಳು ಹೀಗೆ ವಿವಿಧ ಪ್ರವಾಸಿ ಅಂಶಗಳನ್ನು ಒಳಗೊಂಡ ವೆಬ್‍ಸೈಟ್‍ನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಪ್ರವಾಸೋದ್ಯಮ ಪಾಲುದಾರರ ಸಹಕಾರದಲ್ಲಿ ನಗರದ ಹೊರವಲಯದ ಆಕ್ಸಿರಿಚ್ ಹೋಟೆಲ್‍ನಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯ ಪವಿತ್ರ ಸ್ಥಳವಾದ ತಲಕಾವೇರಿ, ಭಾಗಮಂಡಲ ಹಾಗೂ ಪ್ರವಾಸಿ ಸ್ಥಳವಾದ ಜಲಪಾತಗಳು, ಪ್ರೇಕ್ಷಣೀಯ ಸ್ಥಳಗಳು, ಹೋಟೆಲ್‍ಗಳು ರೆಸಾರ್ಟ್‍ಗಳು, ಸೇರಿದಂತೆ ಹಲವು ಸ್ಥಳಗಳ ಬಗ್ಗೆ ಮಾಹಿತಿ ನೀಡುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಡಿಸೆಂಬರ್‍ನೊಳಗೆ ವೆಬ್‍ಸೈಟ್‍ಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು. ಕೊಡಗು ಜಿಲ್ಲೆಗೆ ಹೊರ ಜಿಲ್ಲೆ ಹಾಗೂ ರಾಜ್ಯದಿಂದ ಪ್ರವಾಸಿಗರು ಆಗಮಿಸುತ್ತಾರೆ. ಅವರಿಗೆ ಸರಿಯಾದ ಮಾಹಿತಿ ನೀಡಿದಲ್ಲಿ ಅವರು ಮತ್ತೊಬ್ಬರಿಗೆ…
ಮಡಿಕೇರಿ ಸೆ.30 NEWS DESK : ವಿಶ್ವ ಪ್ರವಾಸೋದ್ಯಮ ದಿನ 2024ರ ಅಂಗವಾಗಿ ಜಿಲ್ಲಾಡಳಿತ, ಜಿ.ಪಂ, ಮಡಿಕೇರಿ ನಗರಸಭೆ, ಪ್ರವಾಸೋದ್ಯಮ ಇಲಾಖೆ, ತೋಟಗಾರಿಕೆ ಇಲಾಖೆ, ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಹಾಗೂ ಕಾಲೇಜಿನ ಎನ್.ಸಿ.ಸಿ. ಘಟಕಗಳ ಜಂಟಿ ಸಹಯೋಗದಲ್ಲಿ “ಸ್ವಚ್ಛತಾ ಹೀ ಸೇವಾ 2024” ನಮ್ಮ ನಡೆ ಸ್ವಚ್ಛತೆಯ ಕಡೆ ಎಂಬ ಘೋಷವಾಕ್ಯದೊಂದಿಗೆ ಸ್ವಚ್ಛತಾ ರ‍್ಯಾಲಿ ನಡೆಯಿತು. ಫೀಲ್ಡ್ ಮಾರ್ಷಲ್ ಕೆ.ಎಮ್. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ ಸ್ವಚ್ಛತಾ ರ‍್ಯಾಲಿ ಚಾಲನೆ ನೀಡಿದರು. ಈ ರ‍್ಯಾಲಿಯು ಮಡಿಕೇರಿ ನಗರದ ಚೌಕಿ ವೃತ್ತದಿಂದ ಆರಂಭಗೊಂಡು ರಾಜಾಸೀಟಿನಲ್ಲಿ ಕೊನೆಗೊಂಡಿತು. ಈ ಸಂದರ್ಭ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಅನಿತಾ ಭಾಸ್ಕರ್ ಮಾತನಾಡಿ, ಸ್ವಚ್ಛತೆಯು ಒಂದು ದಿನಕ್ಕೆ ಸೀಮಿತವಾಗದೆ ದಿನನಿತ್ಯ ಅನುಸರಿಸಬೇಕೆಂದು ಹೇಳಿದರು. ಇಂದಿನ ಯುವ ಪೀಳಿಗೆ ನಗರದ ಸ್ವಚ್ಛತೆಯನ್ನು ಕಾಪಾಡಲು ಪಣತೊಡಬೇಕೆಂದು ಹೇಳಿದರು. ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಕೆ.ಶೈಲಶ್ರೀ, ಅಲೋಕ್ ಬಿ.ಜೈ ಮತ್ತು ಅಧ್ಯಾಪಕರಾದ ಖುರ್ಷಿದ್ ಬಾನು, ಅರ್ಷಕ್…
ಮಡಿಕೇರಿ ಸೆ.30 NEWS DESK : ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಡಗಿನ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಮೂಡಿ ಬಂದಿರುವ ಕನ್ನಡ ಚಲನಚಿತ್ರ “ಕಂದೀಲು” (The Ray of hope) ವಿಶ್ವ ವಿಖ್ಯಾತ ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಅ.4ರಂದು ಪ್ರದರ್ಶನಗೊಳ್ಳಲಿದೆ. ಕೊಲ್ಕತ್ತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದ “ಕಂದೀಲು” ಚಲನಚಿತ್ರ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡ ಸಿನಿಮಾದ ಸ್ಪರ್ಧಾತ್ಮಕ ವಿಭಾಗದಲ್ಲಿ “2ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ” ಯನ್ನು ತನ್ನದಾಗಿಸಿಕೊಂಡಿತ್ತು. ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ ಚಿತ್ರ ಮೈಸೂರಿನ ಇನಾಕ್ಸ್ ಚಿತ್ರಮಂದಿರದಲ್ಲಿ ಶುಕ್ರವಾರ ಬೆಳಿಗ್ಗೆ 10.15 ಗಂಟೆಗೆ ಪ್ರದರ್ಶನಗೊಳ್ಳುತ್ತಿದೆ. ಚಿತ್ರದಲ್ಲಿ ಕಾಂತಾರ ಖ್ಯಾತಿಯ ಪ್ರಭಾಕರ್ ಕುಂದರ್ ಬಡ ರೈತ ತಂದೆಯ ಪಾತ್ರ, ಮೈಸೂರಿನ ವನಿತಾ ರಾಜೇಶ್ ತಾಯಿಯ ಪಾತ್ರ, ಗುರು ತೇಜಸ್ ಮಗನ ಪಾತ್ರ ನಿರ್ವಹಿಸಿದ್ದಾರೆ. ಕೊಡಗಿನ ಚಿತ್ರ ನಿರ್ಮಾಪಕರಾದ ಈರಮಂಡ ವಿಜಯ್ ಹಾಗೂ ಹರಿಣಿ ದಂಪತಿಯ ಪುತ್ರಿ ಬಾಲನಟಿ ಈರಮಂಡ ಕುಶಿ ಕಾವೇರಮ್ಮ…
ಮಡಿಕೇರಿ NEWS DESK ಸೆ.30 : ಕೊಡಗು ಜಿಲ್ಲಾ ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಅವರಿಗೆ ಮೈಸೂರಿನ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೈಸೂರಿನ ದಿ ಇನ್ಸ್ ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಗೃಹ ಸಚಿವ ಪಿ.ಜಿ.ಆರ್.ಸಿಂಧ್ಯಾ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಅನ್ವೇಷಣಾ ಸೇವಾ ಟ್ರಸ್ಟ್ ನ ಅಧ್ಯಕ್ಷ ಡಾ.ಎಂ.ಜಿ.ಆರ್.ಅರಸ್, ಅರಸು ಜಾಗೃತಿ ಅಕಾಡೆಮಿ ಚಾರಿಟೇಬಲ್ ಟ್ರಸ್ಟ್ ನ ಉಪಾಧ್ಯಕ್ಷ ಹೆಚ್.ಎ.ವೆಂಕಟೇಶ್ ಮತ್ತಿತರ ಪ್ರಮುಖರ ಸಮ್ಮುಖದಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಅವರು ಟಿ.ಪಿ.ರಮೇಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ಅಹಿಂದ ಒಕ್ಕೂಟದ ಜಿಲ್ಲಾಧ್ಯಕ್ಷ ಟಿ.ಎಂ.ಮುದ್ದಯ್ಯ, ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಕೋಶಾಧಿಕಾರಿ ಬಿ.ಎನ್.ವಾಸುರೈ, ಅಹಿಂದ ಒಕ್ಕೂಟದ ಕೆ.ಎಂ.ರಾಜನ್, ವಿಜಯ…
ಗೋಣಿಕೊಪ್ಪ NEWS DESK ಸೆ.30 : ವಚನ ಸಾಹಿತ್ಯ ಮರೆತು ಹೋದ ಶರಣರ ಪರಂಪರೆಯ ಮೌಲ್ಯಗಳನ್ನು ಮರಳಿ ಸ್ಮರಿಸುವ ವೇದಿಕೆಯಾಗಿದೆ ಎಂದು ಸಾಹಿತಿ ಕಣಿವೆ ಭಾರಧ್ವಾಜ್ ಆನಂದತೀರ್ಥ ಹೇಳಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಕದಳಿ ವೇದಿಕೆ ಹಾಗೂ ಮಾಯಮುಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ” ವಿದ್ಯಾರ್ಥಿಗಳೆಡೆಗೆ ವಚನಗಳ ನಡಿಗೆ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶರಣರ ವ್ಯಕ್ತಿತ್ವ ಹಾಗೂ ಅವರ ಸಾಧನೆಗಳ ಘನತೆಯನ್ನು ಬಿಂಬಿಸುವ ವಚನಗಳು ಕನ್ನಡ ಸಾಹಿತ್ಯದ ಅಮೂಲ್ಯ ಸಂಪತ್ತು. ಹಾಗಾಗಿ ಶಾಲಾ ಕಾಲೇಜು ಹಂತದಿಂದಲೇ ವಿದ್ಯಾರ್ಥಿಗಳು ವಚನ ಸಾಹಿತ್ಯದ ಅರಿವು ಮೂಡಿಸಿಕೊಂಡು ಉತ್ತಮ ವ್ಯಕ್ತಿತ್ವ ಹೊಂದಲು ಭಾರದ್ವಾಜ್ ಕರೆಕೊಟ್ಟರು. ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು ವಿಷಯದ ಕುರಿತು ಉಪನ್ಯಾಸ ನೀಡಿದ ವಿರಾಜಪೇಟೆ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ದಿಲನ್ ಮುತ್ತಣ್ಣ, ಶತ ಶತಮಾನಗಳ ಎಲ್ಲೆಯನ್ನು ಮೀರಿ ಎಷ್ಟೋ ಕಾಲದವರೆಗೂ ಜೀವಂತವಾಗಿ ಉಳಿಯಬಲ್ಲ ಸತ್ವ ವಚನಗಳಲ್ಲಿವೆ. ರಾಜಧರ್ಮ ಕ್ಷೀಣಿಸಿ ಪ್ರಜಾಧರ್ಮ ಜಾರಿಗೆ…
ಮಡಿಕೇರಿ ಸೆ.29 NEWS DESK : ಬಿದ್ದು ಸಿಕ್ಕಿದ ಒಂದುವರೆ ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ಫೋನ್‍ಅನ್ನು ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಕಟ್ಟೆಮಾಡು ಗ್ರಾಮದ ಹರ್ಷಿತ ಎಂಬ ಯುವತಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಡಿಕೇರಿ ನಗರದ ಜಿ.ಟಿ.ಸರ್ಕಲ್ ನಲ್ಲಿ ಬಿದ್ದು ಸಿಕ್ಕಿದ ದುಬಾರಿ ಫೋನನ್ನು ಸಂಚಾರಿ ಪೊಲೀಸರ ನೆರವಿನೊಂದಿಗೆ ವಾರಸುದಾರರಿಗೆ ಒಪ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.






