ಲೇಖಕ: admin

ಸೋಮವಾರಪೇಟೆ NEWS DESK ಸೆ.30 : ಕೊಡಗು ಜಿಲ್ಲೆಯ ಇಬ್ಬರು ಅಧಿಕಾರಿಗಳು ಅತ್ಯುತ್ತಮ ಸರ್ವೇಯರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕುಶಾಲನಗರ ತಾಲ್ಲೂಕಿನ  ವೆಂಕಟೇಶ್ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಜೀವನ್‌ ಅವರಿಗೆ  ಬೆಂಗಳೂರಿನ ವಿಕಾಸಸೌಧದಲ್ಲಿ  ನಡೆದ ಸಮಾರಂಭದಲ್ಲಿ ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕಂದಾಯ ಹಾಗೂ ಸರ್ವೇ ಇಲಾಖೆಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ  ಸರ್ಕಾರ ವರ್ಷದ ಅತ್ಯುತ್ತಮ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Read More

ಕುಶಾಲನಗರ, ಸೆ.30 NEWS DESK : ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಜತೆಗೂಡಿ ಉತ್ತಮ ಕಾರ್ಯ ಯೋಜನೆಗಳೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಎಸ್‍ಎಸ್‍ಎಲ್‍ಸಿ ಜಿಲ್ಲೆಯಲ್ಲಿ ಪರೀಕ್ಷೆಯಲ್ಲಿ ಈ ಬಾರಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ’ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಸಿ.ರಂಗಧಾಮಪ್ಪ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವತಿಯಿಂದ ಕುಶಾಲನಗರ ಪಟ್ಟಣದ ಫಾತಿಮ ಕಾನ್ವೆಂಟ್ ಶಾಲೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ಏರ್ಪಡಿಸಿದ್ದ ‌ ಶೈಕ್ಷಣಿಕ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2024-25 ನೇ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ಮುಖ್ಯ ಶಿಕ್ಷಕರು ಹಾಗೂ ವಿಷಯ ಶಿಕ್ಷಕರು ಕ್ರಿಯಾಶೀಲರಾಗಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ…

Read More

ಸುಂಟಿಕೊಪ್ಪ ಸೆ.30 NEWS DESK : ಯಾವುದೇ ರೀತಿಯ ಸಭೆ ಸಮಾರಂಭಗಳನ್ನು ಆಯೋಜಿಸುವಾಗ ವೇದಿಕೆಗೆ ತನ್ನದೆಯಾದ ಶಿಸ್ತು ಘನತೆಯಿದ್ದು, ಆದರ ಬಗ್ಗೆ ಅರಿತು ಆಯೋಜಿಸಿದ್ದಲ್ಲಿ ಮಾತ್ರ ಕಾರ್ಯಕ್ರಮವು ಯಶಸ್ವಿಗೊಳ್ಳಲಿದೆ ಎಂದು ಲೆಕ್ಕ ಪರಿಶೋಧಕ ಪಿ.ಡಬ್ಲ್ಯು. ಪ್ರಾನ್ಸಿಸ್ ಹೇಳಿದರು. ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸುಂಟಿಕೊಪ್ಪ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಭಾಷಣ ಕಲೆ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದÀರು. ಸಭೆಗಳಿಗೆ ವೇದಿಕೆಯನ್ನು ಸಿದ್ಧಪಡಿಸುವಾಗ ಅಧ್ಯಕ್ಷರು ಮತ್ತು ಅತಿಥಿಗಳಿಗೆ ಸೂಕ್ತ ರೀತಿಯಲ್ಲಿ ಆಸನಗಳನ್ನು ಸಿದ್ಧಪಡಿಸುವುದರೊಂದಿಗೆ ಅತಿಥಿಗಳು ಅಸೀನರಾಗುವಂತೆ ನೋಡಿಕೊಳ್ಳುವುದು ಕಾರ್ಯಕ್ರಮದ ಆಯೋಜಕರು ನಿರ್ವಹಿಸಬೇಕಾದ ಆದ್ಯ ಕರ್ತವ್ಯವಾಗಿದೆ. ಇದರಿಂದ ಸಮಾರಂಭವು ಯಶಸ್ವಿಗೊಳಿಸುತ್ತದೆ ಎಂದು ಅವರು ಹೇಳಿದರು. ಸುಂಟಿಕೊಪ್ಪ ಗ್ರಾ.ಪಂ ಸದಸ್ಯ ಪಿ.ಎಫ್.ಸಬಾಸ್ಟೀನ್ ಮಾತನಾಡಿ, ಭಾಷಣ ಕಲೆಯನ್ನು ಕರಗತ ಮಾಡಿಕೊಂಡು ಧೈರ್ಯದಿಂದ ಮುಂದುವರಿಯಬೇಕು. ನಮ್ಮೊಳಗಿರುವ ಕಿಳಾರಿಮೆ ತೊಡೆದು ಹಾಕಬೇಕು, ಯಾವುದೇ ವಿಚಾರದ ಮಾತನಾಡುವಾಗ ಆದರ ಪೂರ್ವಪರ ಅರಿತು ಮಾಹಿತಿ…

Read More

ಕುಶಾಲನಗರ ಸೆ.30 NEWS DESK : ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಸಮನ್ವಯತೆಯಿಂದ ಸೇವಾ ಕಾರ್ಯ ನಿರ್ವಹಿಸುವ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಾಡುವುದರೊಂದಿಗೆ ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಮೈಸೂರು ಸರ್ಕಾರಿ ಶಿಕ್ಷಕರ ತರಬೇತಿ ಕೇಂದ್ರದ ಪ್ರಾಂಶುಪಾಲರೂ ಹಾಗೂ ಜಂಟಿ ನಿರ್ದೇಶಕರೂ ಆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ಗೀತಾಂಭ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವತಿಯಿಂದ ಕುಶಾಲನಗರ ಪಟ್ಟಣದ ಫಾತಿಮ ಕಾನ್ವೆಂಟ್ ಶಾಲೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ನಡೆದಶೈಕ್ಷಣಿಕ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ರಾಜ್ಯದಲ್ಲಿ ನಾಲ್ಕನೇ ಸ್ಥಾನ ಗಳಿಸುವುದರೊಂದಿಗೆ ಗುಣಮಟ್ಟದ ‌ಶಿಕ್ಷಣದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಲು ಕಾರಣರಾದ…

Read More

ಬೆಂಗಳೂರು ಸೆ.30 NEWS DESK : ರಾಷ್ಟ್ರಪಿತ, ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ಪ್ರೌಢಶಾಲೆ ವಿಭಾಗ ಫಲಿತಾಂಶ ::  ದಿವ್ಯಾ ಶ್ರೀಶೈಲ ಗಾಣಿಗೇರ,ಸರ್ಕಾರಿ ಪ್ರೌಢಶಾಲೆ, ಕೆಎಸ್‌ಆರ್‌ಪಿ,ಮಚ್ಚೆ,ಬೆಳಗಾವಿ (ಪ್ರಥಮ), ಸಮರ್ಥ ನಾಗರಾಜ ಅರ್ಕಸಾಲಿ, ಸರ್ಕಾರಿ ಪ್ರೌಢಶಾಲೆ, ಹುನಗುಂದ, ತಾ.ಮುಂಡಗೋಡ, ಉತ್ತರ ಕನ್ನಡ ಜಿಲ್ಲೆ(ದ್ವಿತೀಯ), ಚೈತನ್ಯ ಕೆ.ಎಂ.ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ, ಕೊಡಗು ಜಿಲ್ಲೆ(ತೃತೀಯ) ಪದವಿಪೂರ್ವ ಕಾಲೇಜು ವಿಭಾಗ ಫಲಿತಾಂಶ :: ವಿಜಯಕುಮಾರ್ ಬ.ದೊಡ್ಡಮನಿ, ಸರ್ಕಾರಿ ಪ.ಪೂ.ಕಾಲೇಜು, ಮುಳಗುಂದ, ಗದಗ ಜಿಲ್ಲೆ (ಪ್ರಥಮ), ಪರೀಕ್ಷಾನಂದ್, ಮರಿಮಲ್ಲಪ್ಪ ಪ.ಪೂ.ಕಾಲೇಜು, ಮೈಸೂರು (ದ್ವಿತೀಯ),ಗೋರಮ್ಮ, ಬಾಲಕಿಯರ ಸರ್ಕಾರಿ ಪ.ಪೂ.ಕಾಲೇಜು, ಕೋಲಾರ(ತೃತೀಯ) ಪದವಿ/ಸ್ನಾತಕೋತ್ತರ ವಿಭಾಗ ಫಲಿತಾಂಶ :: ಪ್ರವೀಣ್ ನಿಂಗಪ್ಪ ಕಿತ್ನೂರ,ಕನ್ನಡ ವಿ.ವಿ.ಹಂಪಿ,ವಿಜಯನಗರ ಜಿಲ್ಲೆ (ಪ್ರಥಮ), ಶರಣಪ್ಪ,ತುಮಕೂರು ವಿ.ವಿ.ತುಮಕೂರು(ದ್ವಿತೀಯ), ನಸೀಮಾ ಇ.ಚಪ್ಪರಬಂದ್,ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿಜಯಪುರ (ತೃತೀಯ)…

Read More

ಮಡಿಕೇರಿ ಸೆ.30 NEWS DESK : ಪ್ರವಾದಿ ಮೊಹಮ್ಮದ್ ಪೈಗಂಬರ್ (ಸ.ಅ) ಅವರ ಜೀವನ ಆದರ್ಶಗಳನ್ನು ಮೈಗೂಡಿಸಿಕೊಂಡು ಜೀವನ ನಡೆಸುವಂತೆ ಇಲ್ಯಾಸ್ ತಂಙಲ್ ಎಮ್ಮೆಮಾಡು ಕರೆ ನೀಡಿದರು. ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಸೌದಿ ಅರೇಬಿಯಾ ದಮಾಮ್ ಝೋನಲ್ ಸಮಿತಿ, ದಮ್ಮಾಮ್ ನಲ್ಲಿ ಆಯೋಜಿಸದ್ದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ 1499 ಜನ್ಮದಿನಾಚರಣೆಯ ಅಂಗವಾಗಿ “ಸ್ನೇಹ ‌ಸಂಗಮ” ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರವಾದಿಯ ಅವರ ಜೀವನವೊಂದು ತೆರದ ಪುಸ್ತಕವಾಗಿದೆ.ಇಡೀ ಮಾನವ ಕುಲಕ್ಕೆ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜೀವನವೂ ಮಾದರಿಯಾಗಿದೆ ಎಂದು ಇಲ್ಯಾಸ್ ತಂಙಲ್ ಹೇಳಿದರು.ಸ್ವಾಂತನ ಕಾರ್ಯಕ್ರಮದಲ್ಲಿ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ದಮ್ಮಾಮ್‌ ಝೋನಲ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಲ್ಯಾಸ್ ತಂಙಲ್‌ ಶ್ಲಾಘನೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಹಫೀಲ್ ಸಹದಿ‌ ಕೊಡಗು ಹಾಗೂ ಹಂಸ ಉಸ್ತಾದ್ ಭಾಗವಹಿಸಿದ್ದರು.ಈ ಸಂದರ್ಭ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ದಮ್ಮಾಮ್ ಝೋನಲ್ ವತಿಯಿಂದ ಇಲ್ಯಾಸ್ ತಂಙಲ್ ಮತ್ತು ಹಫೀಲ್ ಸಹದಿ ಅವರನ್ನು…

Read More

ಮೈಸೂರು NEWS DESK ಸೆ.29 : ಮೈಸೂರಿನ ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ನಡೆದ ಜಾಥಾದಲ್ಲಿ ಕೊಡಗು ಜಿಲ್ಲೆಯನ್ನು ಕೊಡವ ಕೂಟಾಳಿಯಡ ಕೂಟದ ಸದಸ್ಯರು ಪ್ರತಿನಿಧಿಸಿದರು. ಅರಮನೆ ಮೈದಾನದಿಂದ ಬನ್ನಿ ಮಂಟಪದವರೆಗೆ ನಡೆದ ಈ ಮೆರವಣಿಗೆಯಲ್ಲಿ ಕೊಡಗಿನ ಕೊಡವ ಪಡೆಯಾಳಿಗಳು ಎನ್ನುವ ಪರಿಕಲ್ಪನೆಯಲ್ಲಿ ಕೊಡಗಿನ ಸಂಸ್ಕೃತಿ ಯನ್ನು ಪ್ರತಿಬಿಂಬಿಸುವ ತಳಿಯತಕ್ಕಿ ದೀಪ, ದುಡಿ ಕೊಟ್ಟ್ ಪಾಟ್,ನ ಜೊತೆಗೆ  ಕೊಡವ ಸಂಸ್ಕೃತಿಯ ಅಂಗವಾದ, ಒಡಿಕತ್ತಿ, ಬಿಲ್ಲು, ಬಾಣ, ಬಜಿ೯, ಹಿಡಿದು ಜಾಥಾ ನಡೆಸಲಾಯಿತು. ಕೊಡವ ಕೂಟಾಳಿಯಡ ಕೂಟದ  ಅಧ್ಯಕ್ಷ ಚೆಟ್ಟೋಳಿರ ಶರತ್ ಸೋಮಣ್ಣ, ಕಾರ್ಯಕ್ರಮ ಸಂಚಾಲಕ ಕಾಳಮಂಡ ರಾಬಿನ್ ಅಚ್ಚಮ್ಮ, ಖಜಾಂಜಿ  ಬೊಜ್ಜಂಗಡ ಭವ್ಯ ದೇವಯ್ಯ ನಿರ್ದೇಶಕ  ಅಮ್ಮಾಟಂಡ ಚೇತನ್ ಅಪ್ಪಯ್ಯ ಸದಸ್ಯರಾದ ಇಟ್ಟಿರ ಭವ್ಯ ಈಶ್ವರ್ ಹಾಗೂ ಮಾಚಂಗಡ ಸಚಿನ್ ತಿಮ್ಮಯ್ಯ, ಚೇಂದಿರ ಅಬಿನ್ ನಾಣಯ್ಯ, ಬುಟ್ಟಿಯಂಡ ಕಾರ್ಸನ್ ಕಾರ್ಯಪ್ಪ, ಕಾಯಪಂಡ ಇಶಾನ್ ಪೂಣಚ್ಚ, ಪೊನ್ನೋಲತಂಡ ಶರಣು ತಮ್ಮಯ್ಯ, ಕೇಳಪ್ಪಂಡ ಲಿಂಕಿತ್ ತಿಮ್ಮಯ್ಯ, ಚಪ್ಪಂಡ ಪೂರ್ವಿಕ್ ಪೊನ್ನಣ್ಣ, ಚೋಳಂಡ…

Read More

ಭಾಗಮಂಡಲ NEWS DESK ಸೆ.29 : 17-10-2024 ರಂದು ಜರುಗಲಿರುವ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ದೇವರ ಸನ್ನಿಧಿಗಳಲ್ಲಿ ಊಧ್ವಾರ್ಚನೆ (ಶುಚಿತ್ವ) ಕಾರ್ಯ ದಿನಾಂಕ: 03-10-2024 ರಂದು ಗುರುವಾರ, ಸಮಯ ಬೆಳಿಗ್ಗೆ 6.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ನಡೆಯಲಿದೆ. ಸದರಿ ಸಮಯದಲ್ಲಿ ಭಕ್ತಾದಿಗಳಿಗೆ ದೇವಾಲಯದ ಪ್ರವೇಶ ಹಾಗೂ ಯಾವುದೇ ಸೇವೆಗಳು ಇರುವುದಿಲ್ಲ. ಆದುದ್ದರಿಂದ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಆಡಳಿತಾಧಿಕಾರಿಯ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು ಮನವಿ ಮಾಡಿದ್ದಾರೆ.

Read More

ಮಡಿಕೇರಿ NEWS DESK ಸೆ.29 : ಅರೆಭಾಷಿಕರು  ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಅರೆಭಾಷೆ ಕಲಿಸಬೇಕು. ಆಗ ಮಾತ್ರ ಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದು ಮಡಿಕೇರಿ ಗ್ರಾಮಾಂತರ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ ಹೇಳಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೊಡಗು ಗೌಡ ಸಮಾಜಗಳ ಒಕ್ಕೂಟ ಸಭಾಂಗಣದಲ್ಲಿ ಭಾನುವಾರ ನಡೆದ ಜಿಲ್ಲೆಯ ಅರೆಭಾಷೆ ಬರಹಗಾರರು ಮತ್ತು ಕಲಾವಿದರೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಅರೆಭಾಷಿಗರು ಇದ್ದು, ಅರೆಭಾಷೆ ಮಾತನಾಡುವಂತಾಗಬೇಕು ಬರಹಗಾರನೂ ಒಬ್ಬ ಕಲಾವಿದ, ಅವನ ಕಲೆಯ ಮೂಲ ಭಾಷೆ ಆಗಿರುತ್ತದೆ. ಆ ಭಾಷೆಯನ್ನು ಚಿಕ್ಕ ವಯಸ್ಸಿನಲ್ಲಿಯೇ ಆತ ಕರಗತ ಮಾಡಿದರೆ ಉತ್ತಮ ಬರಹಗಾರನಾಗಿ ಮೂಡಿಬರಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಹಿರಿಯ ಸಾಹಿತಿ ಬಾರಿಯಂಡ ಜೋಯಪ್ಪ ಮಾತನಾಡಿ ಸಾಹಿತ್ಯ ನಮ್ಮಲ್ಲೇ ಇರುವಂತಹ ವಸ್ತು, ಅದನ್ನು ಗುರುತಿಸಿ ನಾವು ಹೊರಗೆ ತೆಗೆಯಬೇಕು. ಸಣ್ಣ ಸಣ್ಣ ವಿಷಯಗಳಿಂದ ಬರವಣಿಗೆ ಪ್ರಾರಂಭ…

Read More

ಪೊನ್ನಂಪೇಟೆ NEWS DESK ಸೆ.29 : ಪೊನ್ನಂಪೇಟೆ ಸಮೀಪದ ಪ್ರಶಾಂತಿ ನಿಲಯದಲ್ಲಿ ವೈವಿಧ್ಯಮಯ ಸಾಕುಪ್ರಾಣಿಗಳ ಕುಟುಂಬದೊಂದಿಗೆ ನಿಮ್ಮ ಗುಣಮಟ್ಟದ ಸಮಯವನ್ನು ಆನಂದಿಸಲು ಸಜ್ಜುಗೊಂಡಿರುವ “ಸಾಯಿ ಪೆಟ್ ಸ್ಟೇಷನ್” ಅಕ್ಟೋಬರ್‌ 1 ರಂದು ಉದ್ಘಾಟನೆಗೊಳ್ಳಲಿದೆ. ಸಾಯಿ ಪೆಟ್ ಸ್ಟೇಷನ್ ನ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣರವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ಒಲಂಪಿಯನ್‌ ಹಾಕಿ ಆಟಗಾರರಾಗಿದ್ದ ಲೆಫ್ಟಿನೆಂಟ್‌ ಕರ್ನಲ್‌ ಬಿ.ಕೆ.ಸುಬ್ರಮಣಿ ಹಾಗು ಕೊಡಗು ಜಿಲ್ಲಾ ಹೋಟೆಲ್‌-ರೆಸಾರ್ಟ್‌-ರೆಸ್ಟೋರೆಂಟ್‌ ಅಸೋಸಿಯೇಷನ್‌ ಅಧ್ಯಕ್ಷರಾದ ದಿನೇಶ್‌ ಕಾರ್ಯಪ್ಪ ಇವರುಗಳು ಭಾಗವಹಿಸಲಿದ್ದಾರೆ. ವೈವಿಧ್ಯಮಯ ಸಾಕುಪ್ರಾಣಿಗಳ ಸ್ವರ್ಗವಾದ ಸಾಯಿ ಪೆಟ್ ಸ್ಟೇಷನ್ ಅಕ್ಟೋಬರ್‌ 2 ರಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತದೆ ಎಂದು ಸಾಯಿ ಪೆಟ್ ಸ್ಟೇಷನ್ ನ ಮುಖ್ಯಸ್ಥರಾದ ಝರು ಗಣಪತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More