ಲೇಖಕ: admin

ಮಡಿಕೇರಿ NEWS DESK ಸೆ.29 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ (ಮಡಿಕೇರಿಯ ಜಿಲ್ಲಾಸ್ಪತ್ರೆ) ಎಂ.ಆರ್.ಐ ಸ್ಕ್ಯಾನಿಂಗ್ ಕೇಂದ್ರವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ ಅವರು ಇಂದು ಉದ್ಘಾಟಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

Read More

ಗೋಣಿಕೊಪ್ಪ NEWS DESK ಸೆ.28 : ಗೋಣಿಕೊಪ್ಪ ದಸರಾವನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ನಡೆಸಲು ಸಿದ್ಧತೆಗಳು ಭರದಿಂದ ಸಾಗಿದೆ. ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದರು. ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ದಸರಾ ಪ್ರಯುಕ್ತ ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳ ಬಂದೋಬಸ್ತ್, ಮೂಲಭೂತ ಸೌಲಭ್ಯ ಮತ್ತಿತರ ವ್ಯವಸ್ಥೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಸೂಚನೆ ನೀಡಿದರು. ಸಾರ್ವಜನಿಕರಿಗೆ ಎಲ್ಲಾ ಅನುಕೂಲ ಕಲ್ಪಿಸಿ ದಸರಾ ಉತ್ಸವವನ್ನು ಅತ್ಯಂತ ಯಶಸ್ವಿಗೊಳಿಸಲು ಎ.ಎಸ್.ಪೊನ್ನಣ್ಣ ಕರೆ ನೀಡಿದರು.

Read More

ಮಡಿಕೇರಿ ಸೆ.28 NEWS DESK : ಕೊಡವ ಭಾಷೆ, ಸಂಸ್ಕೃತಿ, ಸಾಹಿತ್ಯ, ಕಲೆ ಬೆಳವಣಿಗೆಯಲ್ಲಿ ಕೊಡಗಿನ ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಅವರ ಶ್ರಮ ಮಹತ್ತರವಾಗಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಚೇರಂಬಾಣೆಯ ಬೇಂಗ್ ನಾಡು ಕೊಡವ ಸಮಾಜ ಸಹಕಾರದಲ್ಲಿ ಕೊಡಗಿನ ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚಂಡ ಕವಿ ಅವರ 157 ನೇ ಜನ್ಮದಿನದ ಪ್ರಯುಕ್ತ ಚೇರಂಬಾಣೆಯಲ್ಲಿ ಶನಿವಾರ ನಡೆದ ‘ಕೊಡವ ಸಾಹಿತ್ಯ ನಾಳ್’ ಕಾರ್ಯಕ್ರಮದಲ್ಲಿ ಅಪ್ಪಚ್ಚ ಕವಿಯ ಭಾವಚಿತ್ರಕ್ಕೆ ಪುಷ್ಪಾರ್ಚಣೆ ನೆರವೇರಿಸಿ ಅವರು ಮಾತನಾಡಿದರು. ಕೊಡವ ಸಾಹಿತ್ಯ ಬೆಳವಣಿಗೆಯಲ್ಲಿ ಇಂದಿನ ಮಕ್ಕಳು ಮನಸ್ಸು ಮಾಡಬೇಕಿದೆ. ಅಪ್ಪಚ್ಚ ಕವಿ ಅವರ ಆಶೋತ್ತರಗಳನ್ನು ಉಳಿಸಿ ಬೆಳೆಸುವಲ್ಲಿ ಕೊಡವ ಭಾಷಿಕರೆಲ್ಲರೂ ಒಂದುಗೂಡಬೇಕಿದೆ ಎಂದು ಕರೆ ನೀಡಿದರು. ಕೊಡವ ಭಾಷಿಕರೆಲ್ಲರೂ ಒಟ್ಟುಗೂಡಿದಾಗ ಕೊಡವ ಸಂಸ್ಕೃತಿ, ಆಚಾರ, ವಿಚಾರಗಳು ,…

Read More

ಸೋಮವಾರಪೇಟೆ NEWS DESK ಸೆ.28 : ಅಂತರರಾಷ್ಟ್ರೀಯ ಕಾಫಿ ದಿನದ ಅಂಗವಾಗಿ ಅ.1ರಂದು ಕಾಫಿ ಕುಡಿಯುವುದನ್ನು ಉತ್ತೇಜಿಸಲು, ಕೊಡಗು ಕಾಫಿಯ ವಿಶಿಷ್ಟ ರುಚಿಯನ್ನು ಸವಿಯಲು ಸೋಮವಾರಪೇಟೆ ಪಟ್ಟಣದ ಚಿಕ್ಕಬಸಪ್ಪ ಕ್ಲಬ್ ಆವರಣದಲ್ಲಿ ಉಚಿತವಾಗಿ ಕಾಫಿ ವಿತರಿಸಲಾಗುವುದು ಎಂದು ಕೂರ್ಗ್ ವುಮೆನ್ಸ್ ಕಾಫಿ ಅವರ್‌ನೆಸ್ ಬಾಡಿ (CWCAB) ಕಾರ್ಯದರ್ಶಿ ಅನಿತಾ ನಂದ ಹೇಳಿದರು. ಅದೇ ದಿನ ಪೊನ್ನಂಪೇಟೆಯ ಸಿಐಟಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಕುಟ್ಟ ಗ್ರಾಮದ ಜಂಕ್ಷನ್‌ನಲ್ಲಿ ಕಾಫಿಯನ್ನು ವಿತರಿಸುತ್ತೇವೆ. ಮೂರು ಕಡೆಗಳಲ್ಲೂ ಬೆಳಿಗ್ಗೆ 10ರಿಂದ 12 ಗಂಟೆಯ ವರೆಗೆ ವಿತರಿಸಲಾಗುವುದು ಎಂದು ಸೋಮವಾರಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಯುವಕರು ಕಾಫಿ ಸೇವಿಸುವಂತಾಗಬೇಕು. ಪ್ರವಾಸಿಗರು, ವಿದ್ಯಾರ್ಥಿಗಳು ಕಾಫಿ ಕುಡಿಯಲು ಪ್ರಾರಂಭಿಸಿದರೆ, ಕಾಫಿಗೆ ಬೇಡಿಕೆ ಹೆಚ್ಚಾಗುತ್ತದೆ ಎಂದು ಹೇಳಿದರು. 2002ನೇ ಇಸವಿಯಲ್ಲಿ ಸಿಡಬ್ಲೂö್ಯಸಿಎಬಿ ಯನ್ನು ಪ್ರಾರಂಭಿಸಲಾಗಿದ್ದು, ಈಗ 400ಮಂದಿ ಸದಸ್ಯರಿದ್ದಾರೆ. ಕಾಫಿ ಉದ್ಯಮದಲ್ಲಿ ಮಹಿಳೆಯರು ತೊಡಗಿಸಿಕೊಳ್ಳಲು ಸಂಸ್ಥೆ ಪ್ರೋತ್ಸಾಹ ಮಾಡುತ್ತದೆ. ಉತ್ಪಾದನೆ ಮತ್ತು ಮಾರ್ಕೆಟಿಂಗ್‌ನಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರಿಗೆ ತರಬೇತಿ, ಸಂಪನ್ಮೂಲಗಳು ಹಾಗೂ ಬೆಂಬಲವನ್ನು ಒದಗಿಸುವ ಗುರಿಯನ್ನು…

Read More

ಮಡಿಕೇರಿ NEWS DESK ಸೆ.28 : 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯೊಳಗೆ ನಿವೃತ್ತಿಯಾಗಿರುವ ರಾಜ್ಯ ಸರಕಾರಿ ನೌಕರರಿಗೆ, 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ನಿವೃತ್ತಿ ಆರ್ಥಿಕ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅ.1 ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿವೃತ್ತ ನೌಕರರು ಪಾಲ್ಗೊಂಡಲ್ಲಿ ನಮ್ಮ ಹೋರಾಟಕ್ಕೆ ಯಶಸ್ಸು ಸಾಧ್ಯ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ರಾಜ್ಯ ಮಹಾಪ್ರಧಾನ ಸಂಚಾಲಕ ಎಂ.ಪಿ.ಎಂ.ಷಣ್ಮುಖಯ್ಯ ಹೇಳಿದರು. ಮಡಿಕೇರಿ ನಗರಕ್ಕೆ ಭೇಟಿ ನೀಡಿದ ಅವರು ವೇದಿಕೆಯ ಕೊಡಗು ಜಿಲ್ಲಾ ಘಟಕದ ಪದಾಧಿಕಾರಿಗಳೊಂದಿಗೆ ಹೋರಾಟದ ರೂಪುರೇಷಗಳ ಕುರಿತು ಚರ್ಚಿಸಿದರು. ಅ.1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಂದರ್ಭ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಎದುರು ಏಕಕಾಲದಲ್ಲಿ ನಿವೃತ್ತ ನೌಕರರು ಕಪ್ಪುಪಟ್ಟಿ ಧರಿಸಿ ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗವುದು ಎಂದರು. 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯಲ್ಲಿ ನಿವೃತ್ತಿಯಾದ…

Read More

ಕುಶಾಲನಗರ, ಸೆ.28 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಪಟ್ಟಣದ ಕಲಾಭವನದಲ್ಲಿ ಪೊಲೀಸರಿಗೆ ಏರ್ಪಡಿಸಿದ್ದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು. ಗೀತ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜಾನಪದ, ಭಾವಗೀತೆಗಳ ಗಾಯನದೊಂದಿಗೆ 1980 ನೇ ಇಸವಿಗಿಂದ ಹಿಂದಿನ ಹಳೆಯ ಚಿತ್ರಗೀತೆಗಳನ್ನು ಹಾಡುವ ಮೂಲಕ ಕನ್ನಡದ ಇತಿಹಾಸ, ನಾಡು- ನುಡಿ, ಪರಂಪರೆ, ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗಳನ್ನು ಅನಾವರಣಗೊಳಿಸಿದರು. ಗಾಯನ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್ ರಾಜ್ ಮಾತನಾಡಿ, ಇಂತಹ ಗಾಯನ ಸ್ಪರ್ಧೆಗಳು ಕನ್ನಡ ನಾಡು- ನುಡಿ, ಕಲೆ, ಸಂಸ್ಕೃತಿ – ಪರಂಪರೆಯನ್ನು ಪ್ರತಿಬಿಂಬಿಸಲು ಸಹಕಾರಿಯಾಗಿವೆ. ಸದಾ ಕೆಲಸದ ಒತ್ತಡ ಮತ್ತು ಜಂಜಾಟದಿಂದ ಕಾರ್ಯನಿರ್ವಹಿಸುವ ಪೊಲೀಸರು ಇಂತಹ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಪರಸ್ಪರ ಬೆರಗಂಗಾಧರಪ್ಪ,…

Read More

ವಿರಾಜಪೇಟೆ ಸೆ.28 NEWS DESK : ಸರ್ವದೈವತ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಬಿ.ಎಸ್.ಸೃಷ್ಟಿ ಪ್ರಥಮ ಸ್ಥಾನಗಳಿಸಿ, ಹಾವೇರಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾಳೆ. ಇವಳು ಕಾವೇರಿ ಶಾಲೆ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್ ಅವರ ಪುತ್ರಿಯಾಗಿದ್ದು, ನ್ಯಾಷನಲ್ ಲೆವೆಲ್ ಚೆಸ್ ಕೋಚ್ ಮಣಿ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ಇವಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿಯರು, ದೈಹಿಕ ಶಿಕ್ಷಕಿಯರು, ಸಹ ಶಿಕ್ಷಕ ವೃಂದದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಪ್ರೌಢ ವಿಭಾಗದ ಮುಖ್ಯ ಶಿಕ್ಷಕಿ ಬಿ.ಎಸ್.ಜ್ಯೋತಿ ಹಾಗೂ ದೈಹಿಕ ಶಿಕ್ಷಕಿ ಮೋನಿಕಾ ಹಾಜರಿದ್ದರು.

Read More

ಸುಂಟಿಕೊಪ್ಪ ಸೆ.28 NEWS DESK : ಕೊಡಗರ ಹಳ್ಳಿ ನಾಡು ಪ್ರೌಡಶಾಲೆಯ ವಿದ್ಯಾರ್ಥಿ ಕಾರ್ತಿಕ್ ಹೆಚ್.ಎ.( ಶಾಟ್ ಪುಟ್) ಭಾರದ ಗುಂಡು ಎಸೆತದಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಟಿ.ಶಂಕರ್, ಆಡಳಿತ ಮಂಡಳಿ ಉಪಾಧ್ಯಕ್ಷ ಕುಟ್ಟಪ್ಪ, ಕಾರ್ಯದರ್ಶಿ ಕೆ.ಎಸ್.ಮಂಜುನಾಥ್, ಶಾಲಾ ಮುಖ್ಯ ಶಿಕ್ಷಕಿ ಕೆ.ಇಂದಿರಾ ಶಿಕ್ಷಕರು ಶಿಕ್ಷಕಿಯರು ವಿದ್ಯಾರ್ಥಿಯನ್ನು ಅಭಿನಂದಿಸಿ ಪ್ರಶಂಸಿದ್ದಾರೆ.

Read More

ಮಡಿಕೇರಿ NEWS DESK ಸೆ.28 : ಕೂರ್ಗ್ ಕಾಫಿವುಡ್ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಕೊಡವ ಚಲನಚಿತ್ರ “ಕಾಂಗತ ಮೂಡ್”(“(The Shadow) ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರದ ಪ್ರೊಮೋ ಮತ್ತು ಪೋಸ್ಟರ್ ನ್ನು ಇಂದು ಬಿಡುಗಡೆ ಮಾಡಲಾಯಿತು. ನಗರದ ಪತ್ರಿಕಾ ಭವನದಲ್ಲಿ ಪ್ರೊಮೋ ಮತ್ತು ಪೋಸ್ಟರ್ ನ್ನು ಬಿಡುಗಡೆ ಮಾಡಿ ಮಾತನಾಡಿದ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಅವರು ಕೊಡವ ಸಿನಿಮಾಗಳಿಗೆ ಪ್ರೋತ್ಸಾಹದ ಅಗತ್ಯವಿದೆ ಎಂದರು. ಕೊಡಗಿನಲ್ಲಿ ಹಿಂದೆ ಕೃಷಿ ಚಟುವಟಿಕೆ ಸುಖೀಮಯವಾಗಿತ್ತು, ತೋಟದ ಮಾಲೀಕ ಬೆಂಗಳೂರು ಅಥವಾ ಬೇರೆಲ್ಲೋ ಇದ್ದುಕೊಂಡು ರೈಟರ್ ಮೂಲಕ ತೋಟವನ್ನು ನಿಭಾಯಿಸುವ ಪ್ರೀತಿ ಮತ್ತು ನಂಬಿಕೆಯ ವ್ಯವಹಾರವಿತ್ತು. ಆದರೆ ಇಂದು ಪರಿಸ್ಥಿತಿ ಸಂಪೂರ್ಣ ತದ್ವಿರುದ್ಧವಾಗಿದ್ದು, ಜೀವನ ಸಂಪೂರ್ಣ ಯಾಂತ್ರೀಕೃತವಾಗಿದೆ. ಪ್ರೀತಿ ಮತ್ತು ನಂಬಿಕೆ ಕಳೆದು ಹೋಗಿದೆ. ವ್ಯಕ್ತಿ ಹಾಗೂ ಸಮಾಜಕ್ಕೆ ಇರುವ ಮತ್ತೊಂದು ಮುಖವನ್ನು ತೋರಿಸುವ ಪ್ರಯತ್ನವನ್ನು “ಕಾಂಗತ ಮೂಡ್” ಚಿತ್ರತಂಡ ಮಾಡಿದೆ. ಮದ್ಯ ವ್ಯಸನ ಮತ್ತು…

Read More

ಮಡಿಕೇರಿ ಸೆ.28 NEWS DESK : ಎಮ್.ಆರ್.ಪೈ. ಫೌಂಡೇಷನ್ ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ನಾಯಕತ್ವ ಶಿಬಿರ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ  ಉದ್ದೇಶ ರಚನೆ, ತೀರ್ಮಾನ, ಸಮಯ ಪರಿಪಾಲನೆಯನ್ನು ಚಟುವಟಿಕೆಗಳ ಮೂಲಕ ಹೇಳಿಕೊಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಮೇಜರ್. ಪ್ರೊ.ಬಿ.ರಾಘವ ಅವರ ಅಧ್ಯಕ್ಷತಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಇ.ತಿಪ್ಪೇಸ್ವಾಮಿ ಮತ್ತು ಡಾ.ಹೆಚ್.ಕೆ.ರೇಣುಶ್ರೀ ಹಾಜರಿದ್ದರು. 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು. ಎಂ.ಆರ್.ಪೈ ಫೌಂಡೇಶನ್ ನ ವಿವೇಕ ಪಟ್ಕಿ ಮತ್ತು ರಾಜೀವ್ ಕುಮಾರ್ ಲವ್ ಶಿಬಿರ ನಡೆಸಿಕೊಟ್ಟರು.

Read More