ಸೋಮವಾರಪೇಟೆ ಸೆ.28 NEWS DESK : ಪಂಚಾಯಿತಿ ವ್ಯಾಪ್ತಿಯಲ್ಲಿನ ವರ್ತಕರು ವ್ಯಾಪಾರ ಪರವಾನಗಿ ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ನಿಯಮ ಮೀರುವ ವರ್ತಕರ ಅಂಗಡಿಗಳಿಗೆ ಬೀಗ ಜಡಿದು ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಸದಸ್ಯರು ಮುಖ್ಯಾಧಿಕಾರಿಗೆ ಸೂಚಿಸಿದರು. ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಕೆಲ ಸದಸ್ಯರು ವ್ಯಾಪಾರ ಪರವಾನಗಿ ಪಡೆಯದ ವರ್ತಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಆದರೆ ಕೆಲವರು ಲೈಸೆನ್ಸ್ ಪಡೆಯದೆ ವ್ಯಾಪಾರ ಮಾಡುತ್ತಿದ್ದಾರೆ. ಅವರಿಗೆ ನೋಟೀಸು ಜಾರಿಗೊಳಿಸಲಾಗಿದೆ ಎಂದು ಮುಖ್ಯಾಧಿಕಾರಿ ಸಭೆಯ ಗಮನಕ್ಕೆ ತಂದರು. ಟ್ರೇಡ್ ಲೈಸೆನ್ಸ್ ಪಡೆಯದ ಅಂಗಡಿಗಳಿಗೆ ಬೀಗ ಜಡಿಯಬೇಕು ಎಂದು ಸದಸ್ಯ ಬಿ.ಆರ್.ಮಹೇಶ್ ಸಲಹೆ ನೀಡಿದರು. ಪಟ್ಟಣ ಪಂಚಾಯಿತಿಯಿಂದ ತೆರಿಗೆ ಮತ್ತು ಕಂದಾಯ ವಸೂಲಿ ಸಂದರ್ಭ ಕಡ್ಡಾಯವಾಗಿ ರಶೀದಿ ನೀಡಿ ಹಣ ಪಡೆಯಬೇಕು ಎಂದು ಪಂಚಾಯಿತಿ ಸದಸ್ಯರು ಸೂಚಿಸಿದರು. ಕೆಲ ವರ್ತಕರಿಂದ 5 ಸಾವಿರ ರೂ.,ಗಳ ನಗದು ಪಡೆದು ರಶೀದಿ ನೀಡಿಲ್ಲ. ಲೆಡ್ಜರ್‍ನಲ್ಲಿ ಬರೆದುಕೊಂಡಿದ್ದೇವೆ ಎಂದು ಹೇಳುತ್ತಾರೆ. ರಶೀದಿ ನೀಡದಿದ್ದರೆ, ಆ…
ಲೇಖಕ: admin
ಮಡಿಕೇರಿ ಸೆ.28 NEWS DESK : ಶ್ರೀಮಂಗಲದಲ್ಲಿ ನಡೆದ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಪಂದ್ಯಾವಳಿಯ ವಿವಿಧ ಪಂದ್ಯಾವಳಿಗಳಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಿಸಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಗುಂಡು ಎಸೆತ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಶಿಪ್ರಾ ಕಾಳಪ್ಪ ಚಿನ್ನದ ಪದಕ, 100 ಮೀಟರ್ ಓಟದ ಸ್ಪರ್ಧೆಯಲ್ಲಿ 7ನೇ ತರಗತಿ ವಿದ್ಯಾರ್ಥಿನಿಂ ಸ್ಪೂರ್ತಿ ಪೂವಮ್ಮ ಚಿನ್ನದ ಪದಕ, 400 ಮೀಟರ್ ಓಟದ ಸ್ಪರ್ಧೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಕೃತಿಕಾ ಅಕ್ಕಮ ಕಂಚಿನ ಪದಕ ಹಾಗೂ 4100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿಗಳಾದ ಶತಕ ಕಾವೇರಮ್ಮ, ಫಾತಿಮಾ ಫಿದಾ, ಸ್ಪೂರ್ತಿ ಪೂವಮ್ಮ, ಎನ್.ಎಸ್.ಮೋಕ್ಷಿತ ಸ್ಪರ್ಧಿಸಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿಯರು, ಶಿಕ್ಷಕ ವೃಂದದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರೌಢಶಾಲೆ ವಿಭಾಗದ ಮುಖ್ಯ ಶಿಕ್ಷಕಿ ಬಿ.ಎಸ್.ಜ್ಯೋತಿ, ದೈಹಿಕ ಶಿಕ್ಷಕಿಯರುಗಳಾದ…
ಸುಂಟಿಕೊಪ್ಪ ಸೆ.28 NEWS DESK : ವಿದ್ಯಾರ್ಥಿಗಳು ತಾವು ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ವಿದ್ಯೆ ಕಲಿಸಿದ ಗುರುಗಳನ್ನು ಗೌರವದಿಂದ ಕಾಣಬೇಕೆಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಕರೆ ನೀಡಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶೇ.100 ರಷ್ಟು ಫಲಿತಾಂಶ ಪಡೆಯಲು ಕಾರಣಕರ್ತರಾದ ಉಪನ್ಯಾಸಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಪ್ರಾಸ್ತಾವಿಕವಾಗಿ ಮತನಾಡಿದ ಅವರು, ಕಳೆದ 35 ವರ್ಷಗಳಿಂದ ಸಂಘಟನೆಯು ವಾರ್ಷಿಕವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡು ಬಂದಿದ್ದು, ಶಿಕ್ಷಣ ಸಂಘಟನೆ ಮತ್ತು ಹೋರಾಟದಲ್ಲಿ ನಾವು ಜಯಕಾಣಬೇಕಾದರೆ ಉತ್ತಮ ಶಿಕ್ಷಣ ಅಗತ್ಯ. ಸಂಘಟನೆಯು ಪರಿಶೀಷ್ಟ ಜಾತಿ ಪರಿಶೀಷ್ಟ ವರ್ಗದ ವಿರುದ್ದ ನಡೆಯುವ ಯಾವುದೇ ದೌರ್ಜನ್ಯಗಳನ್ನು ಕಾನೂನಿನ ಮೂಲಕ ಎದುರಿಸುತ್ತಿದೆ. ಹಾಡಿಗಳಲ್ಲಿ ಮಕ್ಕಳ ಶಿಕ್ಷಣ ಉನ್ನತ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುತ್ತ ಬರುತ್ತಿದೆ. ವೃದ್ಧಾಶ್ರಮಗಳಲ್ಲಿ ಹಿರಿಯರಿಗೆ ಬಟ್ಟೆ ವಿತರಣೆ, ಮಳೆಗಾಲದ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಪಾದರಕ್ಷೆ ಹಾಗೂ ಸ್ವೆಟರ್ ವಿತರಣೆ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟನೆಯ ಮೂಲಕ ಮಾಡುತ್ತ…
ಮಡಿಕೇರಿ ಸೆ.28 NEWS DESK : ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ. 2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ. ಪ್ರಸ್ತುತ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗದೇ ಐಟಿ ಮತ್ತು ಜಿಎಸ್‍ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ. ಐಟಿ ಮತ್ತು ಜಿಎಸ್‍ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್‍ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳಾದ ಪಡಿತರಚೀಟಿ ಸಂಖ್ಯೆ, ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಜಿಎಸ್‍ಟಿ ಇಂದ ನೀಡಲಾದ ಔಡಿಜeಡಿ ಜಿoಡಿ ಛಿಚಿಟಿಛಿeಟ ಜಿoಡಿ ಖegisಣಡಿಚಿಣioಟಿ ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಅರ್ಜಿದಾರರ ಮನವಿ…
ಮಡಿಕೇರಿ ಸೆ.28 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇಂಗಾ ಹೆಲ್ತ್ ಪೌಂಡೇಶನ್ ಸಹಯೋಗದಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ತ್ಯ ಕಾರ್ಯಕ್ರಮದಡಿ ಇಂಗಾ ಹೆಲ್ತ್ ಪೌಂಡೇಶನ್ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಸೀಳು ತುಟಿ, ಸೀಳು ಅಂಗುಲ ಮತ್ತು ಕ್ರೋನಿಯೋಫೇಷಿಯಲ್ ವಿರೂಪಗಳ ತಪಾಸಣಾ ಶಿಬಿರ’ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸತೀಶ್ ಕುಮಾರ್ ಕೆ.ಎಂ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಇಂಗಾ ಹೆಲ್ತ್ ಪೌಂಡೇಶನ್, ಇವರೊಂದಿಗೆ “ಸೀಳು ತುಟಿ, ಸೀಳು ಅಂಗುಲ ಮತ್ತು ಕ್ರೋನಿಯೋಫೇಷಿಯಲ್ ವಿರೂಪಗಳ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸೆಗೆ ಜಿಲ್ಲೆಯನ್ನು ರಾಜ್ಯ ಮಟ್ಟದಿಂದ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಶಿಬಿರದಲ್ಲಿ ತಪಾಸಣೆ ಮಾಡಿ ಶಸ್ತ್ರ ಚಿಕಿತ್ಸೆಗೆ ಗುರುತಿಸಲಾಗುವ ಮಕ್ಕಳಿಗೆ ಇಂಗಾ ಹೆಲ್ತ್ ಪೌಂಡೇಶನ್, ಬೆಂಗಳೂರು, ಇವರಿಂದ ಉಚಿತವಾಗಿ…
ಮಡಿಕೇರಿ NEWS DESK ಸೆ.27 : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಹಿನ್ನೆಲೆಯಲ್ಲಿ ಮುಂಬರುವ ಜಿ.ಪಂ, ತಾ.ಪಂ, ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಎನ್‌ಡಿಎ ಮೈತ್ರಿ ಕೂಟದ ಮೂಲಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ. ಜೆಡಿಎಸ್ ಪ್ರಭಾವ ಇರುವ ಕಡೆಗಳಲ್ಲಿ ಪಕ್ಷದ ಸಮರ್ಥ ಕಾರ್ಯಕರ್ತರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಜಾತ್ಯತೀತ ಜನತಾದಳದ ಸದಸ್ಯತ್ವ ಅಭಿಯಾನದ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ನಗರದ ರಾಜದರ್ಶನ್ ಸಭಾಂಗಣದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಕನಿಷ್ಟ 10 ಸಾವಿರ ಸದಸ್ಯರನ್ನು ನೋಂದಾಯಿಸುವ ಮೂಲಕ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಬೇಕೆಂದು ಕರೆ ನೀಡಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆ ಪ್ರಾಕೃತಿಕ ವಿಕೋಪಲಕ್ಕೆ ಸಿಲುಕಿದ ಸಂದರ್ಭ 6 ತಿಂಗಳಲ್ಲಿ 8 ಬಾರಿ ಜಿಲ್ಲೆಗ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಮಾತ್ರವಲ್ಲದೇ ನೂರಾರು…
ಮಡಿಕೇರಿ NEWS DESK ಸೆ.27 : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ಆದೇಶಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ನಿಷ್ಪಕ್ಷಪಾತ ತನಿಖೆೆಗೆ ಅನುವು ಮಾಡಿಕೊಡಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅವರು, ಈ ಹಿಂದೆ ಯಡಿಯೂರಪ್ಪ ಅವರು ಆರೋಪಗಳಿಗೆ ಗುರಿಯಾದ ಸಂದರ್ಭ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ನೈತಿಕ ಹೊಣೆÉ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದರು. ಅದರಂತೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದರು. ಇದೀಗ ಸಿದ್ದರಾಮಯ್ಯ ಅವರು ಕೂಡ ರಾಜೀನಾಮೆ ನೀಡಲಿ. ತನಿಖೆಯ ಮೂಲಕ ದೋಷಮುಕ್ತವಾದಲ್ಲಿ ಮತ್ತೆ ಬೇಕಾದರೆ ಮುಖ್ಯಮಂತ್ರಿಯಾಗಲಿ ಎಂದರು. ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಮುಡಾ ಪ್ರಕರಣದ ತನಿಖೆ ಲೋಕಾಯುಕ್ತದ ಮೂಲಕ ನಡೆಯಬೇಕಾಗಿದೆ. ಆದರೆ, ಈ ಲೋಕಾಯುಕ್ತ ನೇರವಾಗಿ ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ…
ಮಡಿಕೇರಿ NEWS DESK ಸೆ.27 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಈ ಬಾರಿ ಸಂಪ್ರದಾಯಿಕವಾಗಿ ನಡೆಯುತ್ತಿದ್ದು, ಮಡಿಕೇರಿ ನಗರ ಅಲಂಕಾರ ಸಮಿತಿ ವತಿಯಿಂದ ನವರಾತ್ರಿ ಅಂಗವಾಗಿ ವಿವಿಧ ಅಲಂಕಾರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಅಲಂಕಾರ ಸಮಿತಿ ಉಪಾಧ್ಯಕ್ಷ ಜೆ.ರವಿ ಗೌಡ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.3 ರಂದು ಕರಗ ಸಾಗುವ ರಸ್ತೆಯಲ್ಲಿ ರಂಗೋಲಿ ಸ್ಪರ್ಧೆ ಆಯೋಜಿತವಾಗಿದ್ದು, ಚುಕ್ಕಿ, ಪುಡಿ, ಎಳೆ ಮತ್ತು ಪುಷ್ಪ ರಂಗೋಲಿ ವಿಭಾಗಗಳ ಸ್ಪರ್ಧೆಗಳು ಜರುಗಲಿದೆ. ಅ.11 ರಂದು ಆಯುಧ ಪೂಜೆ ಅಂಗವಾಗಿ ನಗರದ ಗಾಂಧಿ ಮೈದಾನದಲ್ಲಿ ವಾಹನ ಅಲಂಕಾರ ಸ್ಪರ್ಧೆ ನಡೆಯಲಿದ್ದು, ಲಾರಿ, ಬಸ್, ಕಾರ್, ಸೈಕಲ್, ಆಟೋ, ಟಾಟಾಏಸ್, ಜೀಪ್, ಪಿಕ್‌ಅಪ್, ಜೆಸಿಬಿ ಹಾಗೂ ಇನ್ನಿತರ ವಾಹನ ಅಲಂಕಾರ ಸ್ಪರ್ಧೆಗಳು ನಡೆಯಲಿದೆ ಎಂದರು. ನವರಾತ್ರಿ ಪ್ರಯುಕ್ತ ಮಡಿಕೇರಿ ನಗರಾಲಂಕಾರ ಸ್ಪರ್ಧೆಯ ಅಂಗವಾಗಿ ನಗರದ ವಿವಿಧ ಕಟ್ಟಡಗಳ ಅಲಂಕಾರ ಸ್ಪರ್ಧೆ ನಡೆಯಲಿದ್ದು, ನವರಾತ್ರಿಯ 9 ದಿನವೂ ಮಡಿಕೇರಿ ನಗರದ ದಶ ದೇವಾಲಯಗಳು, ಸರ್ಕಾರಿ,…
ಮಡಿಕೇರಿ NEWS DESK ಸೆ.27 : ರೋಟರಿ ಕ್ಲಬ್ ಮಡಿಕೇರಿ ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ರೋಟರ‍್ಯಾಕ್ಟ್ ಕ್ಲಬ್‌ನ ಪದಗ್ರಹಣ ಸಮಾರಂಭ ನಡೆಯಿತು. ಪಿಡಿಜಿ ರೋಟರಿಯನ್ ಎಂ.ಸುರೇಶ್ ಚಂಗಪ್ಪ ಪದಗ್ರಹಣ ಅಧಿಕಾರಿಯಾಗಿ ರೋಟರ‍್ಯಾಕ್ಟ್ ಕ್ಲಬ್‌ನ ಸದಸ್ಯರುಗಳಿಗೆ ಪ್ರಮಾಣವಚನ ಬೋಧಿಸಿದರು. ನಂತರ ಮಾತನಾಡಿದ ಅವರು ಇಂದಿನ ಯುವ ಪೀಳಿಗೆಗೆ ತಂತ್ರಜ್ಞಾನ ಹೆಚ್ಚು ಅನುಕೂಲಕರವಾಗಿದೆ. ಮುಂದುವರಿದ ಕಾಲಘಟ್ಟದಲ್ಲಿ ನವೀನ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು ಜಾತಿ, ಧರ್ಮ ಎಲ್ಲವನ್ನೂ ಮೀರಿ ಮನುಷ್ಯತ್ವವನ್ನು ಅಳವಡಿಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಬೇಕಾದ ಪರಿಸ್ಥಿತಿ ನಮ್ಮ ಜಗತ್ತಿನಲ್ಲಿ ಬಂದೊದಗಿದೆ. ತಾವು ರೋಟರಿ ಸಂಸ್ಥೆಯ ಭಾಗವಾಗಿ ಭಾತೃತ್ವವನ್ನು ನಮ್ಮ ಪರಿಸರದಲ್ಲಿ ಗಟ್ಟಿಯಾಗಿ ಬೇರೂರುವಂತೆ ಕೆಲಸ ಮಾಡಬೇಕೆಂದು ನೂತನ ಪದಾಧಿಕಾರಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ರೋಟರಿ ಕ್ಲಬ್‌ನ ಅಧ್ಯಕ್ಷ ಎಂ.ಸುದಯ್ ನಾಣಯ್ಯ ಅವರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿ ಮಾತನಾಡಿ ವಿದ್ಯಾರ್ಥಿಗಳು ರೋಟರ‍್ಯಾಕ್ಟ್ ಕ್ಲಬ್ ಗೆ ನೀಡಲಾಗುವ ಪ್ರಶಸ್ತಿಗೆ ಭಾಜನರಾಗಬೇಕು. ಈ ನಿಟ್ಟಿನಲ್ಲಿ ತಮ್ಮ ಕಾರ್ಯಚಟುವಟಿಕೆಯನ್ನು ರೂಪಿಸಿ ಅನುಷ್ಠಾನ ಮಾಡಬೇಕೆಂದು…
ಮಡಿಕೇರಿ ಸೆ.27 NEWS DESK : ಜಿಲ್ಲೆಯಲ್ಲಿ ಸೆ.29 ರಂದು ನಡೆಯುವ ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಯ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಕಡ್ಡಾಯ ಕನ್ನಡ) ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಸ್ಪರ್ಧಾತ್ಮಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸುವಂತೆ ನಿರ್ದೇಶನ ನೀಡಿದರು. ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಓದಿಕೊಂಡು ಪರೀಕ್ಷೆಯನ್ನು ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಮಾತನಾಡಿ, ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಹಾಗೆಯೇ ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಈ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ…






