ಲೇಖಕ: admin

ವಿರಾಜಪೇಟೆ ಸೆ.27 NEWS DESK : ವಿರಾಜಪೇಟೆ ತಾಲ್ಲೂಕಿನ ಚೂರಿಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಈ ತಂಡದಲ್ಲಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯರಾದ ಗಳಾದ ಶಕ್ತಿದೇಚಮ್ಮ, ಪಿ.ಸಾಂಚ್ ಬೋಪಣ್ಣ, ಕೆ.ಐ.ಶಿಪ್ರಾ ಕಾಳಪ್ಪ, ಪಿ.ಪಿ.ಕ್ಷಮಾ ಕಾವೇರಮ್ಮ, 9ನೇ ತರಗತಿ ವಿದ್ಯಾರ್ಥಿಗಳಾದ ಎಸ್.ಎಸ್.ರಶ್ಮಿ ಪೊನ್ನಮ್ಮ, ಪಿ.ಸಿ.ಕಾಜಲ್, ಬಿ.ಬಿ.ದೀಪ್ತಿ ತಂಗಮ್ಮ, ಬಿ.ಎಸ್.ಸೃಷ್ಟಿ, ಕೆ.ಎಂ.ಯಶ್ಮಿತಾ, ಬಿ.ಎಸ್.ತನ್ಯ ರೈ ಹಾಗೂ ಪಿ.ಯು.ತನಿಷ ಪ್ರತಿನಿಧಿಸಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ ಹಾಗೂ ಲಾವಣ್ಯ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯರು, ಬೋಧಕ ಮತ್ತು ಭೋಧಕೇತರ ಸಿಬ್ಬಂದಿ ವರ್ಗದವರು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ, ಲಾವಣ್ಯ ಉಪಸ್ಥಿತರಿದ್ದರು.

Read More

ವಿರಾಜಪೇಟೆ ಸೆ.27 NEWS DESK : ವಿರಾಜಪೇಟೆ ತಾಲ್ಲೂಕಿನ ಕೆ.ಪಿ.ಎಸ್ ಪ್ರೌಢಶಾಲೆ ಶಾಲೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಪ್ರಾಥಮಿಕ ವಿಭಾಗದ ಬಾಲಕಿಯರ ಖೋ-ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಪಂದ್ಯಾವಳಿಯಲ್ಲಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಗಳಾದ ಎಂ.ಜಿ.ಚಾಲ್ಸಿ, ಪಿ.ಎಸ್.ಶಾನ್ವಿ ಪೊನ್ನಮ್ಮ, ಯಾನಿ ಬೆಳ್ಳಿಯಪ್ಪ, ನಿಯತ್ತಿ ರಾಜ ಪುರೋಹಿತ್, ಕೆ.ಎಸ್.ದಿಯಾ ಫಾತಿಮಾ, ಕೆ.ಸಿ.ಲಿವ್ಯ, ಎನ್.ಎಸ್.ಮೋಕ್ಷಿತ, 7ನೇ ತರಗತಿ ವಿದ್ಯಾರ್ಥಿಗಳಾದ ಸ್ಫೂರ್ತಿ ದೇಚಮ್ಮ, ಶತಕ ಕಾವೇರಮ್ಮ, ಪಿ.ಬಿ.ದೇಚಮ್ಮ, ಕೆ.ಎಂ.ದೇಚಮ್ಮ ಹಾಗೂ ಪಿ.ಎಂ.ಫಿದಾ ಫಾತಿಮಾ ಪ್ರತಿನಿಧಿಸಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ ಹಾಗೂ ಲಾವಣ್ಯ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯರು, ಬೋಧಕ ಮತ್ತು ಭೋಧಕೇತರ ಸಿಬ್ಬಂದಿ ವರ್ಗದವರು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ. ಈ ಸಂದರ್ಭ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ ಹಾಗೂ ಸಹ ಶಿಕ್ಷಕಿ ಶ್ರುತಿ ಹಾಜರಿದ್ದರು.

Read More

ಸೋಮವಾರಪೇಟೆ ಸೆ.27 NEWS DESK : ಸೋಮವಾರಪೇಟೆ ಮಹಿಳಾ ಸಮಾಜದಲ್ಲಿ ನಡೆದ ನಗರ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ಸೋಮವಾರಪೇಟೆಯ ಸಿಂಚನಾ ಅವರನ್ನು ಶಾಸಕ ಡಾ. ಮಂತರ್‍ಗೌಡ ಸನ್ಮಾನಿಸಿದರು. ಕಾಂಗ್ರೆಸ್ ಮುಖಂಡರಾದ ಬಿ.ಬಿ.ಸತೀಶ್, ಹೆಚ್.ಸಿ.ನಾಗೇಶ್, ಕೆ.ಎ.ಆದಂ, ಹೆಚ್.ಆರ್.ಸುರೇಶ್, ಶುಭ, ಬಿ.ಸಿ.ವೆಂಕಟೇಶ್ ಇದ್ದರು.

Read More

ಮಡಿಕೇರಿ ಸೆ.27 NEWS DESK : ಜಾಖರ್ಂಡ್‍ನ ರಾಂಚಿಯಲ್ಲಿ ಸೆ.24 ರಿಂದ ಅ.10 ರವರೆಗೆ ನಡೆಯುತ್ತಿರುವ ಜೂನಿಯರ್ ರಾಷ್ಟ್ರೀಯ ಹಾಕಿ ಚಾಂಪಿಯನ್‍ಶಿಪ್‍ನಲ್ಲಿ ಬೇಂಗೂರು ಗ್ರಾಮದ ಪಟ್ಟಮಾಡ ಶ್ರೀಷ್ಮ ಬೊಳ್ಳಮ್ಮ ಹಾಕಿ ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದಾರೆ. ಬೇಂಗೂರಿನ ಪಟ್ಟಮಾಡ ರವಿನ್ ಮುತ್ತಣ್ಣ ಹಾಗೂ ಮಿಲನ್ ಮುತ್ತಣ್ಣ ಅವರ ಪುತ್ರಿ ಶ್ರೀಷ್ಮ ಬೊಳ್ಳಮ್ಮ ಬೆಂಗಳೂರಿನ ಸಂತ ಜೋಸೆಫರ ಕಾಲೇಜ್ ನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

Read More

ಸೋಮವಾರಪೇಟೆ ಸೆ.27 NEWS DESK : ಸೋಮವಾರಪೇಟೆ ಸಮೀಪದ ನೇರುಗಳಲೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭವಾಗಿರುವ ಆಂಗ್ಲ ಮಾಧ್ಯಮ ಎಲ್‍ಕೆಜಿ ಶಾಲಾ ಕೊಠಡಿ ಉದ್ಘಾಟಿಸಲಾಯಿತು. ಸಮಾರಂಭದಲ್ಲಿ ಕೊಠಡಿ ನಿರ್ಮಾಣಕ್ಕೆ ಧನ ಸಹಾಯ ಮಾಡಿದ ದಾನಿಗಳಾದ ಬಿ.ಎಂ.ಮುರಳೀಧರ್, ಪಿಡಿಒ ಗಣೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ರೋಹಿತ್ ಅವರುಗಳನ್ನು ಸನ್ಮಾನಿಸಲಾಯಿತು. ಶಾಸಕ ಡಾ.ಮಂತರ್‍ಗೌಡ, ಅಂಕುರಂ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಬೋಜೇಗೌಡ, ದಾನಿಗಳಾದ ಗಿರೀಶ್ ಮಲ್ಲಪ್ಪ, ವಿ.ಎಂ.ವಿಜಯ್, ನೇರುಗಳಲೆ ಗ್ರಾಮ ಪಂಚಾಯತಿ ಅಧ್ಯಕ್ಷ ವಿನೋದ್ ಕುಮಾರ್ ಇದ್ದರು.

Read More

ಸೋಮವಾರಪೇಟೆ ಸೆ.27 NEWS DESK : ಕೊಡವ ಸಮಾಜದ ಸುವರ್ಣ ಮಹೋತ್ಸವ ಸಮಾರಂಭವನ್ನು ಡಿ.24 ಹಾಗೂ 25ರಂದು ಸಮಾಜದ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್ ಹೇಳಿದರು. ಸುವರ್ಣ ಮಹೋತ್ಸವ ಸಮಾರಂಭ ಆಚರಣೆ ಕುರಿತು ಕೊಡವ ಸಮಾಜದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. 1974ರಲ್ಲಿ ಪ್ರಾರಂಭಗೊಂಡ ಸೋಮವಾರಪೇಟೆ ಕೊಡವ ಸಮಾಜ ಸುವರ್ಣ ಮಹೋತ್ಸವ ಆಚರಣೆಯ ಹೊಸ್ತಿಲಿನಲ್ಲಿ ಇದ್ದು ಜಿಲ್ಲೆಯ ಮತ್ತು ರಾಜ್ಯದ ಇತರೆಡೆಯ ಕೊಡವ ಸಮಾಜಗಳ ಸಂಪೂರ್ಣ ಸಹಕಾರ ಅತ್ಯಗತ್ಯ ಎಂದರು. ಸುವರ್ಣ ಮಹೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಾಂಸ್ಕøತಿಕ ಕಾರ್ಯಕ್ರಮಗಳು, ಕ್ರೀಡಾ ಸ್ಫರ್ಧೆಗಳು ನಡೆಯಲಿದೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಇದುವರೆಗೂ ಸಮಾಜ ಬೆಳೆದ ಬಂದ ರೀತಿ, ಸಾಧನೆ ಹಾಗೂ ಬರಹಗಾರರ ಕಥೆ, ಕವನ. ಲೇಖನಗಳನ್ನೊಳಗೊಂಡ ಸ್ಮರಣ ಸಂಚಿಕೆಯನ್ನು ಹೊರತರಲಾಗುವುದು ತಿಳಿಸಿದರು. ಇದೇ ಸಂದರ್ಭ ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು. ಪೂರ್ವಭಾವಿ ಸಭೆಯಲ್ಲಿ ಸಮಾಜದ ಸದಸ್ಯರು ಸೂಕ್ತ ಸಲಹೆ…

Read More

ಮಡಿಕೇರಿ ಸೆ.27 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗಾಳಿಬೀಡು ಗ್ರಾಮ ಪಂಚಾಯತಿಯಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಜಾಗೃತಿ ಶಿಬಿರ ನಡೆಯಿತು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತಾ ಕೀರ್ತನ್ ಮತ್ತು ಆರೋಗ್ಯ ಇಲಾಖೆಯಿಂದ  ಸಮುದಾಯ ಆರೋಗ್ಯ ಅಧಿಕಾರಿ ರಮ್ಯಾ ರಕ್ತ ಹೀನತೆ, ಬಿಪಿ, ಶುಗರ್, ಕ್ಷಯ, ಮುಟ್ಟಿನ ಸಮಸ್ಯೆ, ಮಾನಸಿಕ ಆರೋಗ್ಯ, ಬಾಲ್ಯ ವಿವಾಹ, ಅಪೌಷ್ಟಿಕತೆ, ಜಲ ಸಂರಕ್ಷಣೆ, ಆರೋಗ್ಯಕರ ಜೀವನ ಶೈಲಿ, ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗಾಳಿಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿ.ಜಿ.ಉಷಾ, ಉಪಾಧ್ಯಕ್ಷರಾದ ಕೆ.ಎ.ಪೆಮ್ಮಯ್ಯ, ಗ್ರಾಮ ಪಂಚಾಯತಿ ಸದಸ್ಯರಾದ ಪ್ರದೀಪ್, ಯಾಲದಾಳು ರಾಜಶೇಖರ್, ಸರೋಜಾ ಕೆ.ಸಿ,ಪುಷ್ಪಾವತಿ, ಧರ್ಮಾವತಿ, ಗಿರೀಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿಕಿರಣ್, ಗಾಳಿಬೀಡು ಗ್ರಾಮ ಪಂಚಾಯಿತಿಗೆ ಸೇರಿದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಗುಂಪಿನವರು, ಸಮುದಾಯದವರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಸೆ.27 NEWS DESK  : ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಅಕ್ಟೋಬರ್ 4 ರಂದು 12 ರವರೆಗೆ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟಿದೆ. ಜಿಲ್ಲಾಧಿಕಾರಿ ವೆಂಕಟರಾಜಾ ಅಧ್ಯಕ್ಷತೆಯಲ್ಲಿ ನಡೆದ ಮಡಿಕೇರಿ ನಗರ ದಸರಾ ಸಮಿತಿ ಪ್ರಮುಖರ ಸಭೆಯಲ್ಲಿ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಸಾಂಸ್ಕೃತಿಕ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಮಾಹಿತಿ ನೀಡಿದರು ಅ.4 ರಂದು ಸಂಜೆ 6 ಗಂಟೆಗೆ ಗಾಂಧಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಅ. 5 ರಂದು ಬೆಳಗ್ಗೆ 9.30 ಗಂಟೆಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ 11 ನೇ ವರ್ಷದ ಮಕ್ಕಳ ದಸರಾ ಅಂಗವಾಗಿ ಮಕ್ಕಳ ಸಂತೆ, ಮಕ್ಕಳ ಅಂಗಡಿ, ಮಕ್ಕಳ ಮಂಟಪ, ಛದ್ಮವೇಷ ಕ್ಲೇಮಾಡೆಲಿಂಗ್ ಸ್ಪರ್ಧೆಗಳು ಆಯೋಜಿತವಾಗಿದೆ, ಅಂದು ಸಂಜೆ 6 ಗಂಟೆಯಿಂದ ಮಕ್ಕಳಿಂದಲೇ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ. ಅಕ್ಟೋಬರ್ 6 ರಂದು ಬೆಳಗ್ಗೆ 10 ಗಂಟೆಗೆ ಮೊದಲ ವರ್ಷದ ಕಾಫಿ ದಸರಾ ಚಾಲನೆಗೊಳ್ಳಲಿದೆ. ಕಾಫಿ…

Read More

ಸೋಮವಾರಪೇಟೆ ಸೆ.27 NEWS DESK : ಮೀನುಗಾರಿಕೆ ಇಲಾಖೆ, ಬೆಂಗಳೂರು ಐಸಿಎಆರ್ ಒಳನಾಡು ಮೀನುಗಾರಿಕೆ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಪರಿಶಿಷ್ಟ ಪಂಗಡದ ಮೀನುಗಾರರಿಗೆ ಐಸ್ ಬಾಕ್ಸ್ ಮತ್ತು ಕ್ರೇಟ್ ಗಳನ್ನು ವಿತರಿಸಲಾಯಿತು. ಗಿರಿಜನ ಉಪಯೋಜನೆ ಅಡಿಯಲ್ಲಿ ಜಲಾಶಯಗಳಲ್ಲಿ ಹಿಡಿಯುವ ಮೀನುಗಳು ತಾಜಾವಾಗಿ ಮತ್ತು ಉತ್ತಮ ಗುಣಮಟ್ಟದಲ್ಲಿ ಗ್ರಾಹಕರನ್ನು ತಲುಪಬೇಕು ಎನ್ನುವ ಉದ್ದೇಶದಿಂದ ಕ್ರೇಟ್ ಮತ್ತು ಐಸ್ ಬಾಕ್ಸ್‍ಗಳನ್ನು ವಿತರಿಸಲಾಗಿದೆ ಎಂದು ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಮಿಲನ ಭರತ್ ಹೇಳಿದರು. ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪರಮೇಶ ಕುಮಾರ್ ಮೀನುಗಾರರು ಹೊಂದಬಹುದಾದ ಕೌಶಲಾಭಿವೃದ್ಧಿ, ಜಲಾಶಯಗಳಲ್ಲಿ ಮೀನುಗಾರಿಕೆ ಅಭಿವೃದ್ಧಿಯ ಕುರಿತು ಮಾತನಾಡಿದರು. ಸಂಶೋಧನಾ ಕೇಂದ್ರದ ಮುಖ್ಯ ವಿಜ್ಞಾನಿಗಳಾದ ಡಾ.ಪ್ರೀತಾ ಪಣಿಕ್ಕರ್, ವಿಜ್ಞಾನಿಗಳಾದ ಡಾ.ರಮ್ಯ, ಜೇಷ್ನಾ, ಶ್ರೀ ಕಾವೇರಿ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಮಹಮ್ಮದ್ ಇದ್ದರು.

Read More

ಮಡಿಕೇರಿ ಸೆ.27 NEWS DESK : ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಹೊದವಾಡದ ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜು ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಸಾಧನೆಗೈದಿದ್ದಾರೆ. ಪ್ರಥಮ ಪಂದ್ಯವನ್ನು ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜು ತಂಡವು ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜು ತಂಡವನ್ನು 2-0 ನೇರ ಸೆಟ್ ಗಳ ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿತು. ಫೈನಲ್ ಪಂದ್ಯದಲ್ಲಿ ಸಂಪಾಜೆಯ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡದ ವಿರುದ್ಧ ಸೋಲು ಕಂಡಿತ್ತು. ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜಿನ ಉಪನ್ಯಾಸಕ ಉಸೈನ್,ತರಬೇತುದಾರ ಇಸ್ಮಾಯಿಲ್ ಕಂಡಕರೆ ಇದ್ದರು.

Read More