ಮಡಿಕೇರಿ ಸೆ.26 NEWS DESK : ಸರ್ಕಾರದ ಪ್ರಮುಖ ಕಾರ್ಯಕ್ರಮಗಳಾದ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ನವೆಂಬರ್ ತಿಂಗಳಲ್ಲಿ ‘ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ’ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಸರ್ಕಾರ ಗೃಹ ಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಈ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕುಟುಂಬದವರು ಯಾವುದೇ ಕಾರಣಕ್ಕೂ ವಂಚಿತರಾಗಬಾರದು, ಅರ್ಹರೆಲ್ಲರಿಗೂ ಗ್ಯಾರಂಟಿ ಯೋಜನೆಗಳು ತಲುಪಬೇಕು. ಶೇ.100 ರಷ್ಟು ಪ್ರಗತಿ ಸಾಧಿಸಬೇಕು. ಆ ನಿಟ್ಟಿನಲ್ಲಿ ಗ್ಯಾರಂಟಿ ಅನುಷ್ಠಾನ ಸಪ್ತಾಹವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ ಸಂಬಂಧ ರಾಜ್ಯ ಅಧ್ಯಕ್ಷರ ಗಮನಕ್ಕೆ ತಂದು, ರಾಜ್ಯಾದ್ಯಂತ ಈ ಕಾರ್ಯಕ್ರಮ ಆಯೋಜಿಸಲು ಮುಂದಿನ ದಿನಗಳಲ್ಲಿ ಚಿಂತಿಸಲಾಗುವುದು…
ಲೇಖಕ: admin
ಮೈಸೂರು ಸೆ.26 NEWS DESK : ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರ ನೇತೃತ್ವದಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇಂದು ಸಿದ್ದರಾಮಯ್ಯ ಅವರನ್ನು ನಾಡ ಹಬ್ಬ ದಸರಾಗೆ ಆಹ್ವಾನಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ನಾಯಕರು ಉಪಸ್ಥಿತರಿದ್ದರು.
ಬೆಂಗಳೂರು ಸೆ.26 NEWS DESK : ವಿಜ್ಞಾನ ಮಂದಿರ ಸಂಸ್ಥೆಯ(IISC) ಜೆ.ಎನ್.ಟಾಟಾ ಸಭಾಂಗಣದಲ್ಲಿ ನಡೆದ ಅಭೂತಪೂರ್ವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತೀಯ 2022 ಮತ್ತು 2023 ನೇ ಸಾಲಿನ ವಿಜ್ಞಾನಿ ಮತ್ತು ಇಂಜಿನಿಯರ್ ಗಳಿಗೆ ರಾಜ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಭಾರತ ರತ್ನ ಪ್ರೊ.ಸಿ.ಎನ್.ಆರ್.ರಾವ್ , ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್.ಬೋಸರಾಜು ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಡಿಕೇರಿ ಸೆ.26 NEWS DESK : ದಸರಾ ವಿವಿಧ ಉಪ ಸಮಿತಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ ವೆಂಕಟರಾಜಾ ಮಡಿಕೇರಿ ದಸರಾ ಸಂಬಂಧಿಸಿದಂತೆ ಸ್ವಚ್ಛತೆ ಹಾಗೂ ಪರಿಸರ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಕೋರಿದರು. ಪ್ರಾಯೋಜಕತ್ವ ಬಗ್ಗೆ ಗಮನಹರಿಸಬೇಕು. ಈಗಾಗಲೇ ಯುವ ದಸರಾಗೆ ಪ್ರಸಿದ್ಧ ನಟರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಮಹಿಳಾ ದಸರಾ, ಮಕ್ಕಳ ದಸರಾ, ಜಾನಪದ ದಸರಾ, ಕಾಫಿ ದಸರಾ, ಹೀಗೆ ವಿವಿಧ ದಸರಾಗಳನ್ನು ಅಚ್ಚುಕಟ್ಟಾಗಿ ನಡೆಸಲು ಶ್ರಮಿಸುವಂತೆ ಜಿಲ್ಲಾಧಿಕಾರಿ ಕೋರಿದರು. ನಾಡಿನ ಖ್ಯಾತ ಹಿನ್ನೆಲೆ ಗಾಯಕರಾದ ಅರ್ಜುನ್ ಜನ್ಯ, ರಾಜೇಶ್ ಕೃಷ್ಣ ಸೇರಿದಂತೆ ಅನೇಕ ಖ್ಯಾತ ನಾಮರನ್ನು ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕರೆಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು, ಪ್ರಯತ್ನಗಳು ಸಾಗಿವೆ ಎಂದು ನಗರ ದಸರಾ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಜನೋತ್ಸವಕ್ಕೆ ಧಕ್ಕೆ ಬಾರದಂತೆ ಜನರ ಸಮಿತಿಯಿಂದಲೇ ಉತ್ಸವ ಸಾಂಪ್ರದಾಯಿಕವಾಗಿ ನಡೆಯುವಂತಾಗಲು…
ಮಡಿಕೇರಿ ಸೆ.26 NEWS DESK : ಮೈಸೂರಿನ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ನೀಡಲಾಗುವ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿಗೆ ಕೊಡಗು ಜಿಲ್ಲಾ ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಭಾಜನರಾಗಿದ್ದಾರೆ. ಮೈಸೂರಿನ ದಿ ಇನ್ಸ್ಟಿ ಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಸೆ.30 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯುವ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಅವರು ಸಂಪಾದಿಸಿರುವ ಅರಸು ಚುಟುಕು ಸ್ಪರ್ಶಗಳು ಕೃತಿ ಬಿಡುಗಡೆ ಮತ್ತು ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಟಿ.ಪಿ.ರಮೇಶ್ ಸೇರಿದಂತೆ ಸಪ್ತ ಮಹಾಕಾವ್ಯಗಳ ಕರ್ತೃ, ಕವಯತ್ರಿ ಡಾ.ಲತಾ ರಾಜಶೇಖರ್, ಔಷಧ್ ಗ್ರೂಪ್ ಆಫ್ ಫಾರ್ಮಾಸಿಸ್ ನ ವ್ಯವಸ್ಥಾಪಕ ನಿರ್ದೇಶಕ ಚಂದ್ರಗುಪ್ತ ವಿ.ಜೈನ್, ವಾಸವಿ ಪ್ರಕಾಶನದ ನಿರ್ದೇಶಕ ರಾಮನಾಥ ಗುಪ್ತ, ಅಂಚೆ ಕಚೇರಿಯ ನಿವೃತ್ತ ಹಿರಿಯ ಸೂಪರಿಡೆಂಟೆಂಡ್ ಕೆ.ಓಬಯ್ಯ ಹಾಗೂ ಪ್ರಗತಿಪರ ರೈತ ಪ್ರಕಾಶ್ ರಾಜೇ ಅರಸ್ ಅವರನ್ನು ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕಾರ್ಯಕ್ರಮವನ್ನು ಮಾಜಿ ಗೃಹ ಸಚಿವ ಪಿ.ಜಿ.ಆರ್.ಸಿಂಧ್ಯಾ ಉದ್ಘಾಟಿಸಲಿದ್ದು, ಮೈಸೂರು ಜಿಲ್ಲಾ ಕಾಂಗ್ರೆಸ್…
ಮಡಿಕೇರಿ NEWS DESK ಸೆ.26 : 2022ರ ಫೆಬ್ರವರಿ ತಿಂಗಳಿನಲ್ಲಿ ದಕ್ಷಿಣ ಕೊಡಗಿನ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ಶೆಟ್ಟಿಗೇರಿ ಗ್ರಾಮದ ನಿವಾಸಿ ರಾಜೇಶ್ (42) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಇದೇ ಗ್ರಾಮದ ನಿವಾಸಿ ಪ್ರೇಮ ಎಂಬುವವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವುದಲ್ಲದೆ ಜೊತೆಯಲ್ಲಿದ್ದ ಪ್ರೇಮಾ ಅವರ ಸಹೋದರಿ ವೀಣಾ ಅವರ ಮೇಲೂ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಆರೋಪ ರಾಜೇಶ್ ಮೇಲಿದೆ. ಮೊದಲು ಪೊನ್ನಂಪೇಟೆ ಕೊಡವ ಸಮಾಜದಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ಪ್ರೇಮಾ ಅವರನ್ನು ಕೊಲೆ ಮಾಡಲು ರಾಜೇಶ್ ಯತ್ನಿಸಿದ್ದ. ಈ ಪ್ರಯತ್ನ ವಿಫಲವಾದಾಗ ಪ್ರೇಮಾ ಅವರು ಟಿ.ಶೆಟ್ಟಿಗೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ನ್ನು ಬೈಕ್ ನಲ್ಲಿ ಹಿಂಬಾಲಿಸಿದ್ದ. ನಂತರ ನಿಗಧಿತ ಸ್ಥಳದಲ್ಲಿ ಪ್ರೇಮಾ ಹಾಗೂ ಅವರ ಸಹೋದರಿ ವೀಣಾ ಅವರು ಬಸ್ ನಿಂದ ಇಳಿದು ಹೋಗುತ್ತಿದ್ದಾಗ ರಾಜೇಶ್…
ವಿರಾಜಪೇಟೆ ಸೆ.26 NEWS DESK : ವ್ಯಾಯಾಮ, ಮಿತ ಆಹಾರ ಸೇವೆಯೊಂದಿಗೆ ಪ್ರತಿಯೊಬ್ಬರೂ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಗತ್ಯ ಎಂದು ಆರ್.ಐ.ಹೆಚ್.ಪಿ ಆಸ್ಪತ್ರೆಯ ಸರ್ಜನ್ ಡಾ. ಸಿ.ಕೆ.ಎನ್ ಚಂದ್ರು ಎಂದು ಸಲಹೆ ನೀಡಿದರು. ಅಮ್ಮತ್ತಿಯ ಆರ್.ಐ.ಹೆಚ್.ಪಿ ಆಸ್ಪತ್ರೆ, ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೆದಮುಳ್ಳೂರು ಗ್ರಾ.ಪಂ ಸಂಯುಕ್ತ ಆಶ್ರಯದಲ್ಲಿ ಗುಂಡಿಕೆರೆ ಶಾಫಿ ಜಮಾಅತ್ ಮದ್ರಸಾ ಸಭಾಂಗಣದಲ್ಲಿ ಸಾರ್ವಜನಿಕರಿಗೆ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು. ಇತ್ತೀಚೆಗಿನ ದಿನಗಳಲ್ಲಿ ಅನಾರೋಗ್ಯಗಳು ಹೆಚ್ಚಾಗುತ್ತಿದ್ದು, ಆರೋಗ್ಯವನ್ನು ಕಾಪಾಡುವಲ್ಲಿ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ತಪಾಸಣೆ ಮಾಡುವುದು ಅಗತ್ಯ ಎಂದರು. ಕೆ.ಡಿ.ಪಿ ಸದಸ್ಯರಾದ ಮಾಳೇಟಿರ ಪ್ರಶಾಂತ್ ಉತ್ತಪ್ಪ ಮಾತನಾಡಿ, ಹಿಂದಿನ ಕಾಲದಲ್ಲಿ ರಾಸಾಯನಿಕ ರಹಿತ ಆಹಾರ ಸೇವನೆ ಹಾಗೂ ಕೃಷಿ ಕೆಲಸ ಮಾಡಿಕೊಂಡು ಆರೋಗ್ಯವನ್ನು ಕಾಪಾಡುತ್ತಿದ್ದರು. ಇತ್ತೀಚೆಗೆ ಯಾಂತ್ರಿಕ ಕೆಲಸಗಳು ಹೆಚ್ಚಾಗುತ್ತಿದ್ದಂತೆ ಮಾನವನ ರೋಗಗಳು ಹೆಚ್ಚುತ್ತಿದೆ. ಆಗಿಂದಾಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯವನ್ನು ಕಾಪಾಡಬೇಕು ಎಂದರು. ವಿರಾಜಪೇಟೆ…
ಮಡಿಕೇರಿ ಸೆ.26 NEWS DESK : ಗೋಣಿಕೊಪ್ಪಲು ಕಾವೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಬಸವೇಶ್ವರ ಗಿರಿಜನರ ಕಾಲೋನಿಯಲ್ಲಿ ಸ್ವಚ್ಚತಾ ಹೈ ಸೇವಾ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮಕ್ಕೆ ಹಾಡಿ ಮುಖಂಡ ಗಪ್ಪು ಚಾಲನೆ ನೀಡಿದರು. ಕಾವೇರಿ ಕಾಲೇಜು ವಿದ್ಯಾರ್ಥಿಗಳು ಹಾಡಿಯ ಮನೆ ಮನೆಗಳಿಗೆ ತೆರಳಿ ಆರ್ಥಿಕ ಸಮೀಕ್ಷೆ ನಡೆದರು. ನಂತರ ಹಾಡಿಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ಮಾಡಿ ಗಿಡನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜೆ.ಸಿ.ಐ ಪೊನ್ನಂಪೇಟೆ ನಿಸರ್ಗ ಘಟಕ ಅಧ್ಯಕ್ಷ ಪೆಮ್ಮಂಡ ಮಂಜು ಬೋಪಣ್ಣ, ವಿದ್ಯಾರ್ಥಿಗಳು ಸಮಾಜಸೇವೆಯಲ್ಲಿ ತೊಡಗಿಕೊಂಡರೆ ಮಾತ್ರ ಮೇಲು ಕೀಳು ಎಂಬ ಅಂತರ ಕಡಿಮೆಯಾಗಿ ಎಲ್ಲಾರು ಸಮಾನರಂತೆ ಬಾಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಇದಕ್ಕೂ ಮೊದಲು ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಬಿ.ಕಾವೇರಿಯಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿ ಎನ್.ಪಿ.ರೀತಾ, ಸಲಹಾ ಸಮಿತಿ ಸದಸ್ಯರು ಹಾಗೂ ಉಪನ್ಯಾಸಕರಾದ ಪೂಜಾ ಮತ್ತು ಸಂತೋಷ್, ಗ್ರಂಥಾಲಯ ಸಹಾಯಕ ಚನ್ನನಾಯಕ ಹಾಗೂ ಸುಮಾರು…
ಮಡಿಕೇರಿ ಸೆ.26 NEWS DESK : ಮೂರ್ನಾಡು ಪ್ರೌಢ ಶಾಲೆಯಲ್ಲಿ ನಡೆದ ಮೂರ್ನಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹೊದವಾಡದ ರಾಫೆಲ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ಸಾಧನೆಗೈದಿದ್ದಾರೆ. 1 ರಿಂದ 4ನೇ ತರಗತಿ ವಿಭಾಗದ ಅರೇಬಿಕ್ ಧಾರ್ಮಿಕ ಪಠಣದಲ್ಲಿ ಉಮೈಝ್ ಪ್ರಥಮ, ಚಿತ್ರಕಲೆ ಸ್ಪರ್ಧೆಯಲ್ಲಿ ಲಾಜಿಯಾ ಫಾತಿಮಾ ಪ್ರಥಮ, ಆಶಯ ಭಾಷಣ ಜಿ.ಯು.ಜಿಯಾನ ತೃತೀಯ, ಛದ್ಮವೇಷ ಎಂ.ಎನ್.ರಾಹಿದ್ ತೃತೀಯ, ಹಿಂದಿ ಕಂಠಪಾಠದಲ್ಲಿ ಎ.ಆರ್.ಸಫ್ವಾನ್ ತೃತೀಯ ಸ್ಥಾನಗಳಿಸಿದ್ದಾರೆ. 5 ರಿಂದ 7ನೇ ತರಗತಿ ವಿಭಾಗದಲ್ಲಿ ಅರೇಬಿಕ್ ಧಾರ್ಮಿಕ ಪಠಣ ಹೈಝ್ ಸಿ.ಎಚ್ ಪ್ರಥಮ, ಭಕ್ತಿಗೀತೆ ಫಾತಿಮತ್ ವಫಾ ಪ್ರಥಮ, ಹಾಗೂ ಚಿತ್ರಕಲೆ ಸ್ಪರ್ಧೆಯಲ್ಲಿ ನಿಸಾಜ್ ತೃತೀಯ ಸ್ಥಾನಗಳಿಸಿದ್ದಾರೆ. 8ನೇ ತರಗತಿಯಿಂದ 12ನೇ ತರಗತಿ ವಿಭಾಗದಲ್ಲಿ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಪಿ.ಎಂ.ಫಜೀಲ ತೃತೀಯ, ಹಿಂದಿ ಭಾಷಣ ಕೆ.ಆರ್.ಫೈಜಾ ತೃತೀಯ, ಆಶು ಭಾಷಣ ಅಸ್ಮತ್ ರುಮಾನ ತೃತೀಯ, ಕನ್ನಡ ಪ್ರಬಂಧ ಸಲ್ಮಾನ್ ಫಾರಿಸ್ ದ್ವಿತೀಯ, ಗಜಲ್…
ಪೊನ್ನಂಪೇಟೆ ಸೆ.26 NEWS DESK : ಇಸ್ಲಾಮಿನ ಇತಿಹಾಸದಲ್ಲಿ ಆದರ್ಶ ಧೀರರಾಗಿರುವ ವಿಶ್ವ ಪ್ರವಾದಿ ಪ್ರವಾದಿ ಮುಹಮ್ಮದ್ ರ ಜೀವನವು ಒಂದು ತೆರೆದ ಪುಸ್ತಕವಾಗಿದೆ. ತಮ್ಮ ಖಾಸಗಿ ಬದುಕನ್ನು ಪರಿಶುದ್ಧವಾಗಿ, ಕುಟುಂಬ ಜೀವನವನ್ನು ಸುಭದ್ರವಾಗಿ, ಸಾಮಾಜಿಕ ಜೀವನವನ್ನು ಮಾದರಿಯಾಗಿ ಹಾಗೂ ಸಮುದಾಯವನ್ನು ಕಲ್ಯಾಣಕಾರಿಯನ್ನಾಗಿ ರೂಪಿಸಿದ ಪ್ರವಾದಿಯವರು ಜನಕೋಟಿಗಳ ಹೃದಯದಲ್ಲಿ ಇಂದಿಗೂ ಜೀವಂತವಾಗಿದ್ದಾರೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಅಧ್ಯಕ್ಷ ದುದ್ದಿಯಂಡ ಹೆಚ್.ಸೂಫಿ ಹಾಜಿ ಹೇಳಿದರು. ದುಬೈನ ಅನಿವಾಸಿ ಕೊಡಗಿನ ಕನ್ನಡಿಗರ ಸಂಘಟನೆಯಾದ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ (KSWA) ಯು.ಎ.ಇ. ರಾಷ್ಟ್ರೀಯ ಸಮಿತಿ ವತಿಯಿಂದ ದುಬೈನ ದೇರಾದಲ್ಲಿ ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಜನ್ಮದಿನಾಚರಣೆಯ ಅಂಗವಾಗಿ ‘ವಿಶ್ವ ವಿಮೋಚನೆಯ ಹಾದಿ -ಪ್ರವಾದಿ’ ಎಂಬ ಧ್ಯೇಯವಾಕ್ಯದಲ್ಲಿ ಆಯೋಜಿಸಲಾಗಿದ್ದ ಬೃಹತ್ ಮಿಲಾದ್ ಸಮಾವೇಶ-2024 ರಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಪ್ರವಾದಿತ್ವ ಲಭಿಸಿದ 23 ವರ್ಷಗಳಲ್ಲಿ ಇಸ್ಲಾಂ ಎಂಬ ಜೀವನಪದ್ಧತಿಯನ್ನು 12ಲಕ್ಷ ಚದರ ಮೈಲಿ ವಿಸ್ತೀರ್ಣದ ಭೂಪ್ರದೇಶದಲ್ಲಿ ವಿಸ್ತರಿಸಿದ ಯಶಸ್ವಿ ಮಹಾ…






