ಲೇಖಕ: admin

ಮಡಿಕೇರಿ ಅ.29 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಹಾಗೂ ಎನ್‍ಎಸ್‍ಎಸ್ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಇಕೋ ಕ್ಲಬ್, ಎನ್.ಎಸ್.ಎಸ್.ಘಟಕಗಳ ಸಹಯೋಗದೊಂದಿಗೆ ನಮ್ಮ ನಡೆ ಹಸಿರೆಡೆಗೆ: ಗೋ ಗ್ರೀನ್ ಅಭಿಯಾನ: 2024 ದಡಿ ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ-2024 ರತ್ತ ನಮ್ಮ ಹೆಜ್ಜೆ” ಎಂಬ ಪರಿಸರ ಜಾಗೃತಿ ಅಭಿಯಾನ ನಡೆಯಿತು. ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಲಿನ್ಯಕಾರಿ ಪಟಾಕಿ ಸಿಡಿಸುವುದನ್ನು ಬಿಟ್ಟು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವುದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು. ಹಸಿರು ದೀಪಾವಳಿ ಆಚರಣೆ ಕುರಿತ ಮಾಹಿತಿಯುಳ್ಳ…

Read More

ಮಡಿಕೇರಿ ಅ.29 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ನೀಮಾ ಕೊಡಗು ಇವರ ಸಹಯೋಗದೊಂದಿಗೆ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯು ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ಘೋಷವಾಕ್ಯದೊಂದಿಗೆ, ಮೇಕೇರಿ ಬಳಿಯ ಸತ್ಯಸಾಯಿ ಮಂದಿದಲ್ಲಿ ನಡೆಯಿತು. ರಾಷ್ಟ್ರೀಯ ಆಯುರ್ವೇದ ದಿನಾಚರಣೆಯಲ್ಲಿ ಯೋಗ ಪ್ರಾತ್ಯಾಕ್ಷಿಕೆ ಹಾಗೂ ಶ್ರೀ ಧನ್ವಂತರಿ ಹೋಮ ಜರುಗಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ. ಜಿ.ಶೈಲಜಾ ಮಾತನಾಡಿ, ಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದ ನಾವಿನ್ಯತೆ ಕುರಿತು ಮಾಹಿತಿ ನೀಡಿದರು. ಆಯುಷ್ ಇಲಾಖೆಯಿಂದ ಒಂದು ವಾರದಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಹೆಣ್ಣು ಮಕ್ಕಳ ಯೋಗ ಕ್ಷೇಮದಲ್ಲಿ ಆಯುರ್ವೇದದ ಪಾತ್ರ, ಪರಿಸರ ರಕ್ಷಣೆ ಮತ್ತು ಸಸ್ಯ ಹಾಗೂ ಪ್ರಾಣಿಗಳ ಯೋಗ ಕ್ಷೇಮದಲ್ಲಿ ಆಯುರ್ವೇದದ ಪಾತ್ರ ಹಾಗೂ 22 ರಿಂದ 45 ವಯಸ್ಸಿನ ಮಹಿಳೆಯರ ಯೋಗ ಕ್ಷೇಮದಲ್ಲಿ ಆಯುರ್ವೇದದ ಪಾತ್ರ, ಮಾನವನ ಸ್ವಾಸ್ಥ್ಯ ರಕ್ಷಣೆ ಹಾಗೂ ಯೋಗ ಕ್ಷೇಮದಲ್ಲಿ ಆಯುರ್ವೇದದ ಪಾತ್ರ ಮತ್ತು 45 ವರ್ಷ ಮೇಲ್ಪಟ್ಟ ಮಹಿಳೆಯರ ಯೋಗ ಕ್ಷೇಮದಲ್ಲಿ…

Read More

ವಿರಾಜಪೇಟೆ ಅ.29 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ವಿರಾಜಪೇಟೆ ತಾಲ್ಲೂಕು ಶಾಖೆಯ 2024-2029ನೇ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಸರಕಾರಿ ಪ್ರೌಢ ಶಾಲೆ ಮತಕ್ಷೇತ್ರದಿಂದ ರಾಘವೇಂದ್ರ ಸಿ.ಎಂ.ಅರಣ್ಯ ಇಲಾಖೆ ಮತಕ್ಷೇತ್ರದಿಂದ ಉಮಾಶಂಕರ್ ಎ.ಎಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕ ಆಸ್ಪತ್ರೆ ಮತಕ್ಷೇತ್ರದಿಂದ ಲಲಿತಾ ಎ.ಬಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಳಿದ ಸಿಬ್ಬಂದಿಗಳು ಮತಕ್ಷೇತ್ರದಿಂದ ಎರಡು ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾರ್ಯಪ್ಪ ಎ.ಯು, ಲಲಿತಾ ಪಿ.ಎ ಅವರು ಸ್ಪರ್ಧಿಸಿ ಜಯಶೀಲರಾಗಿದ್ದಾರೆ. ಉಳಿದ ಇಲಾಖೆಗಳ ಮತಕ್ಷೇತ್ರಗಳಾದ ಕೃಷಿ ಇಲಾಖೆ ಮತಕ್ಷೇತ್ರದಿಂದ ಅಶ್ವಿನ್ ಕುಮಾರ್ ಹೆಚ್.ಬಿ, ಪಶುಪಾಲನಾ ಮತ್ತು ವೈದ್ಯ ಇಲಾಖೆ ಮತಕ್ಷೇತ್ರದಿಂದ ಸರ್ವರ್ ಪಾಷಾ, ಕಂದಾಯ ಇಲಾಖೆ ತಾಲೂಕು ಕಚೇರಿ ಮತಕ್ಷೇತ್ರದಿಂದ ಸೋಮಣ್ಣ ಕೆ.ಎಂ, ಕಂದಾಯ ಇಲಾಖೆ ಕ್ಷೇತ್ರ ಸಿಬ್ಬಂದಿಗಳು ಮತಕ್ಷೇತ್ರದಿಂದ ಹರೀಶ್ ಎಂ.ಎಲ್, ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಮತಕ್ಷೇತ್ರದಿಂದ…

Read More

ಮಡಿಕೇರಿ ಅ.29 NEWS DESK : ಸಮಥ೯ ಕನ್ನಡಿಗರು ಸಂಸ್ಥೆಯ ಕೊಡಗು ಜಿಲ್ಲಾ ಘಟಕದಿಂದ ನ.3 ರಂದು ಮಡಿಕೇರಿಯ ಓಂಕಾರ ಸದನದಲ್ಲಿ ನಿಮ್ಮ ಪ್ರತಿಭೆ – ನಮ್ಮ ವೇದಿಕೆ ಕಾಯ೯ಕ್ರಮ ಆಯೋಜಿಸಲಾಗಿದ್ದು, ಈ ಸಂದಭ೯ ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನದ ಗೌರವಾಪ೯ಣೆ ನೆರವೇರಲಿದೆ ಎಂದು ಸಮಥ೯ ಕನ್ನಡಿಗರು ಸಂಸ್ಥೆಯ ಜಿಲ್ಲಾ ಸಂಚಾಲಕಿ ಕೆ. ಜಯಲಕ್ಷ್ಮಿ ಮಾಹಿತಿ ನೀಡಿದ್ದಾರೆ. ಈ ವಷ೯ ಸಮಥ೯ ಕನ್ನಡಿಗರು ಸಂಸ್ಥೆಯಿಂದ ಸನ್ಮಾನಕ್ಕೆ ಭಾಜನರಾದವರು ::  ಟಿ.ಪಿ ರಮೇಶ್ ( ಸಾಹಿತ್ಯ ಸಂಘಟನೆ) , ಕುಂಡ್ಯೊಳಂಡ ದಿನೇಶ್ ಕಾಯ೯ಪ್ಪ (ಕ್ರೀಡಾ ಸಂಘಟನೆ) ಆರ್ .ಕೆ ಬಾಲಚಂದ್ರ ( ಕನ್ನಡದಲ್ಲಿ ಬ್ಯಾಂಕಿಂಗ್ ಮಾಗ೯ದಶ೯ನ) ಅರುಣ್ ಶೆಟ್ಟಿ (ಸಮಾಜಸೇವೆ) , ತೇಲಪಂಡ ಆರತಿ ಸೋಮಯ್ಯ (ಶಿಕ್ಷಣ), , ನಿಖಿಲ್ ರಾಮಮೂತಿ೯ ( ಬಿದಿರು ಕೖಷಿ), ಚಿತ್ರಾ ಆಯ೯ನ್ (ಸಂಗೀತ), ಸಂಗೀತ ರವಿರಾಜ್ (ಸಾಹಿತ್ಯ), ಎಸ್ ಕೆ ಲಕ್ಷ್ಮೀಶ್ (ಮಾಧ್ಯಮ), ಓಬಳಿ (ಪೌರಸೇವೆ) ಬೆಂಗಳೂರಿನ ಲಕ್ಷ್ಮಿ ಲಿಂಗೇಶ್ (ಸಮಾಜಮುಖಿ ಕಾಯ೯)  ನ.3…

Read More

ಪುತ್ತೂರು ಅ.29 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ಕಿಲ್ ಫೊರ್ಜ್ ವಿದ್ಯಾರ್ಥಿ ಬಳಗ, ಐಇಇಇ ವಿದ್ಯಾರ್ಥಿ ವಿಭಾಗ ಮತ್ತು ಗ್ರಾಮ ವಿಕಾಸ ಯೋಜನೆ ವಿಸಿಇಟಿ  ಸಂಯುಕ್ತ ಆಶ್ರಯದಲ್ಲಿ ಕುಳ ಗ್ರಾಮದ ಗ್ರಾಮಸ್ಥರಿಗೆ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ ಹಂಚುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಜ್ಞ ವೈದ್ಯರಿಂದ ಮಾಹಿತಿಯನ್ನು ಪಡೆದ ಸುಮಾರು 35 ವಿದ್ಯಾರ್ಥಿಗಳ ತಂಡವು ಉಪನ್ಯಾಸಕರ ಹಾಗೂ ಊರವರ ಸಹಕಾರದೊಂದಿಗೆ 170ಕ್ಕೂ ಹೆಚ್ಚಿನ ಮನೆಗಳಿಗೆ ಭೇಟಿ ನೀಡಿ ಕರಪತ್ರಗಳನ್ನು ಹಂಚಿ ಸ್ತನ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಿದರು. ಕಾಲೇಜಿನ ಗ್ರಾಮ ವಿಕಾಸ ಯೋಜನೆಯನ್ವಯ ನಡೆದ ಈ ಕಾರ್ಯಕ್ರಮದಲ್ಲಿ ಸ್ಕಿಲ್ ಫೊರ್ಜ್ ವಿದ್ಯಾರ್ಥಿ ಬಳಗದ ಸಂಯೋಜಕ ಡಾ.ಶ್ರೀಶ ಭಟ್, ಐಇಇಇ ವಿದ್ಯಾರ್ಥಿ ವಿಭಾಗದ ಸಲಹೆಗಾರ್ತಿ ಪ್ರೊ. ರಜನಿ ರೈ.ಬಿ ಮತ್ತು ಕಾಲೇಜಿನ ಗ್ರಾಮ ವಿಕಾಸ ಯೋಜನೆಯ ಸಂಯೋಜಕಿ ಡಾ.ಸೌಮ್ಯ.ಎನ್.ಜೆ ಭಾಗವಹಿಸಿದರು. ಮಾತೃ ಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶನದನ್ವಯ ಗ್ರಾಮವಿಕಾಸ ಯೋಜನೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು ಕುಳ ಗ್ರಾಮದಲ್ಲಿ…

Read More

ಮಡಿಕೇರಿ ಅ.29 NEWS DESK : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಮತ್ತು ಮಡಿಕೇರಿ ರೋಟರಿ ವುಡ್ಸ್ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಜಾಗತಿಕ ಪೊಲೀಯೋ ನಿಮೂ೯ಲನ ದಿನದ ಅಂಗಲಾಗಿ ಬೈಕ್ ಜಾಥಾ ನಡೆಯಿತು. ನಗರದ ಜನರಲ್ ತಿಮ್ಮಯ್ಯ ವೖತ್ತದಲ್ಲಿ ಬೈಕ್ ಜಾಥಾಕ್ಕೆ ಮಡಿಕೇರಿ ಪೊಲೀಸ್ ವೖತ್ತ ನಿರೀಕ್ಷಕ ಅನೂಪ್ ಮಾದಪ್ಪ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಡಾ.ಲೋಕೇಶ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಪೊಲೀಯೋ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಪೊಲಿಯೋ ನಿಮೂ೯ಲನೆಗೆ ಸಹಕರಿಸುವಂತೆ ಮಡಿಕೇರಿಯ ಮುಖ್ಯರಸ್ತೆ ಮೂಲಕ 32 ಬೈಕ್ ಸವಾರರು ಸಂದೇಶವನ್ನು ಸಾರಿದರು. ಈ ಜಾಥಾವು ಪೋಲಿಯೋ ವಿರೋಧದ ಹೋರಾಟದಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ. ಎಂದು ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ತಿಳಿಸಿದರು. ರೋಟರಿ ಮಿಸ್ಟಿ ಹಿಲ್ಸ್ ಕಾಯ೯ದಶಿ೯ ಕಟ್ಟೆಮನೆ ಸೋನಜಿತ್, ಖಜಾಂಜಿ ಲಿಂಗರಾಜುಸ ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು, ಕಾಯ೯ದಶಿ೯ ಕಿರಣ್ ಕುಂದೂರು, ರೋಟರಿ ಪ್ರಮುಖರಾದ ಕೆ. ಕೆ ವಿಶ್ವನಾಥ್, ಎ.ಕೆ ಜೀವನ್,…

Read More

ವಿರಾಜಪೇಟೆ ಅ.29 NEWS DESK : ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದುಕೋಟೆ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಗದ್ದೆಗಳಿಗೆ ನುಗ್ಗಿರುವ ಕಾಡಾನೆಗಳ ಹಿಂಡು ಫಸಲನ್ನು ನಾಶಪಡಿಸಿವೆ. ಸ್ಥಳೀಯ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ತೋಟ ಮತ್ತು ಗದ್ದೆಗಳಲ್ಲಿನ ಫಸಲನ್ನು ತಿಂದು ತೇಗುತ್ತಿವೆ. ಗ್ರಾಮದ ಬೆಳೆಗಾರರಾದ ಕೆ.ಕುಮಾರ್, ಪೋರ್ಕಂಡ ನಾಚಪ್ಪ, ಮಂಡೇಪಂಡ ಜಾಲಿ ಮತ್ತಿತರರ ಗದ್ದೆಗಳಿಗೆ ಕಾಡಾನೆಗಳು ಹಾನಿ ಮಾಡಿವೆ. ನಿರಂತರ ಕಾಡಾನೆಗಳ ಹಾವಳಿಯಿಂದ ನೆಮ್ಮದಿ ಇಲ್ಲದಂತ್ತಾಗಿದೆ ಎಂದು ಬೆಳೆಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದರೂ ಕಾಡಾನೆಗಳು ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಸ್ಥಳಾಂತರಗೊಳ್ಳುತ್ತಿವೆಯೇ ಹೊರತು ಕಾಡಿಗೆ ಮರಳುತ್ತಿಲ್ಲ. ಪ್ರತಿವರ್ಷ ಈ ಗ್ರಾಮಗಳಲ್ಲಿ ಕಾಡಾನೆಗಳು ಉಪಟಳ ನೀಡುತ್ತಿವೆ. ನಾಟಿ ಮಾಡಿದ ಮರುದಿನೇ ಕಾಡಾನೆಗಳು ದಾಳಿ ಮಾಡುತ್ತಿವೆ. ಮರುನಾಟಿ ಮಾಡಿ ಫಸಲಿಗಾಗಿ ಎದುರು ನೋಡುತ್ತಿರುವಾಗಲೇ ಮತ್ತೆ ಕಾಡಾನೆಗಳು ಹಾನಿ ಪಡಿಸುತ್ತಿವೆ. ಬೆಳೆಹಾನಿಗಾಗಿ ಕೃಷಿಕರು ಅರ್ಜಿ ಸಲ್ಲಿಸಿ ಒಂದು ವರ್ಷ ಕಳೆದರೂ ಪರಿಹಾರ ದೊರೆತ್ತಿಲ್ಲ ಎನ್ನುವ…

Read More

ಮಡಿಕೇರಿ ಅ.29 NEWS DESK : ಕೊಪ್ಪಳ ಜಿಲ್ಲೆಯ ಗಂಗಾವತಿಯ ಮರುಕುಂಬಿಯಲ್ಲಿ 2014 ರಲ್ಲಿ ನಡೆದ ದಲಿತ ದೌರ್ಜನ್ಯ ಪ್ರಕರಣದ 98 ಮಂದಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು, ಇದು ಸಂವಿಧಾನದ ಆಶಯಗಳಿಗೆ ಸಂದ ಜಯವಾಗಿದೆ ಎಂದು ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಐಕ್ಯ ಹೋರಾಟ ಚಾಲನಾ ಸಮಿತಿ ಹಾಗೂ ಮಾನವ ಬಂಧುತ್ವ ವೇದಿಕೆಯ ಪ್ರಮುಖರು ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಸಮಿತಿಯ ಸಂಯೋಜಕ ಜೆ.ಆರ್.ಪಾಲಾಕ್ಷ, ಜಿಲ್ಲಾ ಸಂಚಾಲಕ ಎಂ.ಎಸ್.ವೀರೇಂದ್ರ ಹಾಗೂ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್, ಕಳೆದ 10 ವರ್ಷಗಳಿಂದ ತೀರ್ಪಿಗಾಗಿ ಕಾಯುತ್ತಿದ್ದ ಸಂತ್ರಸ್ತರ ಹಲವು ಕುಟುಂಬಗಳಿಗೆ ನ್ಯಾಯ ಸಿಕ್ಕಿದಂತ್ತಾಗಿದ್ದು, ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ. 2014 ರಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕು ಮುರುಕುಂಬಿ ಗ್ರಾಮದಲ್ಲಿ ದಲಿತ ಕುಟುಂಬಗಳ ಮೇಲೆ ದೌರ್ಜನ್ಯವೆಸಗಿ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಈ ಪ್ರಕರಣವನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಿತು. ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನದ ಅಡಿಯಲ್ಲಿ ವಕೀಲರು…

Read More

ಮಡಿಕೇರಿ ಅ.29 NEWS DESK : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಪತ್ರಕರ್ತರ ಕಾಲ್ಚೆಂಡು ಪಂದ್ಯವಾಳಿಯು ನ.3 ರಂದು ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ‌ ಎಂದು ಕ್ರೀಡಾಕೂಟದ ಸಂಚಾಲಕ ಪ್ರೆಸ್ ಕ್ಲಬ್ ನಿರ್ದೇಶಕ ಇಸ್ಮಾಯಿಲ್ ಕಂಡಕರೆ ಹಾಗೂ ಕೆ.ಎಂ.ವಿನೋದ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ಪ್ರೆಸ್ ಕ್ಲಬ್ ಫುಟ್ಬಾಲ್ ಪಂದ್ಯಾವಳಿಯು ಲೀಗ್ ಮಾದರಿಯಲ್ಲಿ ನಡೆಯಲಿದ್ದು, ಸೂಪರ್ ಸೆವೆನ್ಸ್ ಮಾದರಿಯ ಫುಟ್ಬಾಲ್ ಪಂದ್ಯಾವಳಿಯಲ್ಲಿ ನಾಲ್ಕು ತಂಡಗಳ ಭಾಗವಹಿಸಲಿದೆ.  ಗೋಪಾಲ್ ಸೋಮಯ್ಯ ನಾಯಕತ್ವದ ಮೀಡಿಯಾ ಯುನೈಟೆಡ್ ತಂಡದಲ್ಲಿ, ರೆಜಿತ್ ಕುಮಾರ್ ಗುಹ್ಯ, ವಿ.ವಿಅರುಣ್ ಕುಮಾರ್, ಕುಡೆಕಲ್ ಸಂತೋಷ್, ಶಶಿಕುಮಾರ್ ರೈ, ಅಬ್ದುಲ್ಲಾ, ಎಚ್.ಸಿ ಜಯಪ್ರಕಾಶ್, ಕೆ.ಬಿ.ಶಂಶುದ್ದೀನ್, ವಿಶ್ವ ಕುಂಬೂರು, ದುರ್ಗ ಪ್ರಸಾದ್, ಚಂದನ್ ನಂದರಬೆಟ್ಟು ಮತ್ತು ರವಿಕುಮಾರ್ ಸ್ಥಾನ ಪಡೆದಿದ್ದಾರೆ. ಸುರ್ಜಿತ್ ನಾಯಕತ್ವದ ರಾಕ್ ಸ್ಟಾರ್ ತಂಡದಲ್ಲಿ ಸುಬ್ರಮಣಿ ಸಿದ್ದಾಪುರ, ಮಂಜು ಸುವರ್ಣ,ಮುಸ್ತಫಾ ಸಿದ್ದಾಪುರ, ಮನು, ರಿಜ್ವಾನ್ ಹುಸೇನ್, ಲೋಕೇಶ್ ಕಾಟಕೇರಿ,…

Read More

ಮಡಿಕೇರಿ ಅ.29 NEWS DESK : ದೇಶದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನದ ಅಂಗವಾಗಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ “ಏಕತೆಗಾಗಿ ಓಟ” ನಡೆಯಿತು. ಮಡಿಕೇರಿಯ ಕಾರ್ಯಪ್ಪ ವೃತ್ತದಿಂದ ಆರಂಭಗೊಂಡ ಓಟ ರಾಜಸೀಟ್‌ನಲ್ಲಿ ಕೊನೆಗೊಂಡಿತು.  ಈ ಸಂದರ್ಭದಲ್ಲಿ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಮಾಜಿ ಶಾಸಕ ಅಪ್ಪಚ್ಚು ರಂಜನ್, ವಿಧಾನಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ಉಪಾಧ್ಯಕ್ಷ ಕಾಂಗಿರ ಸತೀಸ್, ಮನು ಮಂಜುನಾಥ್, ಎಸ್.ಸಿ ಮೋರ್ಚಾ ಜಿಲ್ಲಾದ್ಯಕ್ಷ ಪಿ.ಎಂ.ರವಿ, ಮಹಿಳಾ ಮೋರ್ಚಾ ಜಿಲ್ಲಾ ಅದ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಪ್ರಮುಖರಾದ ಕನ್ನಂಡ ಸಂಪತ್, ಬಿ.ಕೆ.ಜಗದೀಶ್, ನಗರ ಸಭಾ ಸದಸ್ಯರಾದ ಸವಿತಾ ರಾಕೇಶ್, ಎಸ್.ಸಿ ಸತೀಸ್, ಸಬಿತಾ, ಶ್ವೆತಾ ಪ್ರಶಾಂತ್, ಚಂದ್ರ ಸೇರಿದಂತೆ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Read More