ಕುಶಾಲನಗರ NEWS DESK ಸೆ.25 : ನ್ಯಾಯಾಲಯದ ಸೂಚನೆಯಂತೆ, ನ್ಯಾಯಸಮ್ಮತವಾಗಿ ಚುನಾವಣೆ ಪ್ರಕ್ರಿಯೆ ನಡೆದಿದೆ. ಇಲ್ಲಿ ನಮ್ಮ ಪರ ಆದೇಶ ಬಂದ ಕಾರಣ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ. ನ್ಯಾಯ ಎಲ್ಲರಿಗೂ ಒಂದೆ, ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪಾಲಿಸಬೇಕು. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬಂದ ತೀರ್ಪಿಗೆ ಸಂಭ್ರಮಿಸುವ ಬಿಜೆಪಿ ಮಂದಿ ಕುಶಾಲನಗರದ ವಿಚಾರದಲ್ಲಿ ವಿರುದ್ಧವಾಗಿ ವರ್ತಿಸುತ್ತಿದ್ದಾರೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾನೂನಿನ ಚೌಕ್ಕಟ್ಟಿನಲ್ಲಿಯೇ ನಾಮನಿರ್ದೇಶನ ಪ್ರಕ್ರಿಯೆ ನಡೆದಿದ್ದು, ಮುಳ್ಳುಸೋಗೆ ಭಾಗದಿಂದ ಐವರನ್ನು ನೇಮಿಸಲಾಗಿದೆ. ಅಧಿಕಾರ ಕಳೆದುಕೊಂಡ ಇಬ್ಬರನ್ನು ಹೆಚ್ಚುವರಿ ಸೇರ್ಪಡೆ ಮಾಡಲಾಗಿದೆ. ಕಾನೂನಿನಲ್ಲಿದ್ದ ಅವಕಾಶದಂತೆ ನಾವು ಮಾಡಿದ್ದೇವೆ ಎಂದು ಶಾಸಕರು ಕುಶಾಲನಗರದಲ್ಲಿ ಸ್ಪಷ್ಟಪಡಿಸಿದರು.
ಲೇಖಕ: admin
ಮಡಿಕೇರಿ NEWS DESK ಸೆ.25 : ಜೆಡಿಎಸ್ ಬೆಂಬಲದಿಂದ ಕುಶಾಲನಗರ ಪುರಸಭೆಯ ಅಧಿಕಾರ ಕಾಂಗ್ರೆಸ್ ಪಾಲಾಗಿದೆ. ನೂತನ ಅಧ್ಯಕ್ಷರಾಗಿ ಜಯಲಕ್ಷ್ಮಿ ಚಂದ್ರು ಹಾಗೂ ಉಪಾಧ್ಯಕ್ಷರಾಗಿ ಪುಟ್ಟ ಲಕ್ಷ್ಮಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಸದಸ್ಯರುಗಳು ಚುನಾವಣೆ ಬಹಿಷ್ಕರಿಸಿದ್ದರು. ಇದು ಅವಿರೋಧ ಆಯ್ಕೆಗೆ ದಾರಿ ಸುಗಮಗೊಳಿಸಿತು. ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಪರ ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಹಾಗೂ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಪರ ಪುರಸಭೆ ಸದಸ್ಯರಾದ ಕಲೀಮುಲ್ಲಾ ಚುನಾವಣಾಧಿಕಾರಿ ತಹಶೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ನಾಮಪತ್ರ ಸಲ್ಲಿಸಿದರು. ಪುರಸಭೆ ಕಛೇರಿ ಆವರಣಕ್ಕೆ ಆಗಮಿಸಿದ ಬಿಜೆಪಿ ಮುಖಂಡರು ಹಾಗೂ ಸದಸ್ಯರು ಚುನಾವಣೆ ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿ ದಿಕ್ಕಾರ ಕೂಗಿದರು. ಚುನಾವಣೆ ಬಹಿಷ್ಕರಿಸುವುದಾಗಿ ಹೇಳಿ ತಹಶೀಲ್ದಾರ್ ಗೆ ಪತ್ರ ಸಲ್ಲಿಸಿ ತೆರಳಿದರು. ನಿಗಧಿತ ಅವಧಿಯ ನಂತರ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ಕುರಿತು ಚುನಾವಣಾಧಿಕಾರಿ ಘೋಷಿಸಿದರು. ಕಾಂಗ್ರೆಸ್ ಮುಖಂಡರು,…
ಕುಶಾಲನಗರ NEWS DESK ಸೆ.25 : ರಾಷ್ಟ್ರ ಕಂಡ ಮಹಾನ್ ಪತ್ರಕರ್ತರಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ವ್ಯಕ್ತಿತ್ವವನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ಸ್ಥಳೀಯ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಏರ್ಪಡಿಸಿದ್ದ ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಮಹಾತ್ಮಗಾಂಧಿ ಪತ್ರಿಕೋದ್ಯಮದ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದರು. ಅದೇ ರೀತಿ ಡಾ.ಅಂಬೇಡ್ಕರ್ ಅವರು ಐದು ಪತ್ರಿಕೆಗಳ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ಪತ್ರಿಕಾ ವಿತಕರರಾಗಿ ಹೋರಾಟದ ಬದುಕು,ಬೆಳೆದು ಬಂದ ದಾರಿ ನಮ್ಮೆಲ್ಲರ ಸ್ಪೂರ್ತಿಯಾಗಬೇಕು. ಇಂತಹ ಮಹಾನ್ ನಾಯಕರ ಆದರ್ಶ ನಮಗೆ ಬೆಳಕಾಗಲಿ ಎಂದು ಆಶಯ ವ್ಯಕ್ತಪಡಿಸಿದರು. 80 ರ ಕಾಲಘಟ್ಟದಲ್ಲಿ ಪತ್ರಿಕೆಗಳ ಸ್ವರೂಪ ಬದಲಾವಣೆ…
ಮಡಿಕೇರಿ NEWS DESK ಸೆ.25 : ಆಶುಕವಿತೆಯಲ್ಲಿ ದಾಖಲೆ ಬರೆದ ಪ್ರಿತುನ್ ಪೂವಣ್ಣ ಅಯ್ಯನೆರವಂಡ ಅವರನ್ನು ಕುಂಜಿಲ ಕಕ್ಕಬೆ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಅಧಕ್ಷರಾದ ಶಿಲ್ಪ, ಉಪಾಧ್ಯಕ್ಷೆ ಬೀನಾ, ಪಿಡಿಓ ಅಶೋಕ್ ಸದಸ್ಯರುಗಳಾದ ಕಲಿಯಂಡ ಸಂಪನ್ ಅಯ್ಯಪ್ಪ, ಕೋಡಿಮಣಿಯಂಡ ಬೋಪಣ್ಣ, ಭರತ್ ಚಂದ್ರ ದೇವಯ್ಯ, ಪ್ರಕಾಶ್, ಇಂದಿರಾ, ಶಾಫಿಯ ಹಾಗೂ ನೂಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಸೆ.25 NEWS DESK : ಮಡಿಕೇರಿ ದಸರಾ ಆಚರಣೆ ಸಂಬಂಧ ದಶ ಮಂಟಪ ಹಾಗೂ ಕರಗ ಉತ್ಸವ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಭೆ ನಡೆಸಿದರು. ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಡಿಕೇರಿ ನಗರದಲ್ಲಿ ಮಂಟಪಗಳು ಸಾಗುವ ಮಾರ್ಗ ಹಾಗೂ ವೇಳಾಪಟ್ಟಿ ಬಗ್ಗೆ ಲಿಖಿತವಾಗಿ ಮಾಹಿತಿ ಒದಗಿಸುವಂತೆ ಸಲಹೆ ಮಾಡಿದರು. ದಸರಾದಂದು ಮಂಟಪಗಳ ಮೆರವಣಿಗೆ ಸಂದರ್ಭದಲ್ಲಿ ಯಾವ ಮಂಟಪ ಯಾವ ವೇಳೆಯಲ್ಲಿ ಎಲ್ಲಿಂದ, ಯಾವ ಮಾರ್ಗ ತೆರಳಲಿದೆ ಎಂಬ ಬಗ್ಗೆ ಮಾಹಿತಿ ನೀಡುವಂತಾಗಬೇಕು. ಜೊತೆಗೆ ನಿಗಧಿತ ವೇಳೆ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಇದರಿಂದ ನಿಗದಿತ ವೇಳೆ ಹಾಗೂ ಮಂಟಪಗಳ ಮೆರವಣಿಗೆ ಸಂಬಂಧಿಸಿದಂತೆ ಸರಿಯಾದ ಮಾಹಿತಿ ಇದ್ದಲ್ಲಿ ಸಾರ್ವಜನಿಕರಿಗೆ ಒಳಿತಾಗಲಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಮಡಿಕೇರಿ ಜನೋತ್ಸವ ದಸರಾವು ಪ್ರಮುಖವಾಗಿ ಕರಗ ಉತ್ಸವ ಹಾಗೂ ಮಂಟಪಗಳ ಮೆರವಣಿಗೆ ಅತೀ ಪ್ರಮುಖವಾಗಿದೆ. ಆ…
ಮಡಿಕೇರಿ ಸೆ.25 NEWS DESK : ಜಿಲ್ಲೆಯಲ್ಲಿನ ಪೌರಕಾರ್ಮಿಕರ ವಸತಿ ಗೃಹಗಳು ಶಿಥಿಲಗೊಂಡಿರುವ ಬಗ್ಗೆ ಪರಿಶೀಲಿಸಿ, ವಸತಿ ಗೃಹ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಸಂಬಂಧ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಇತರೆ ಕಡೆಗಳಲ್ಲಿ ಪೌರಕಾರ್ಮಿಕರ ವಸತಿ ಗೃಹ ಕಟ್ಟಡ ಶೀತಲಗೊಂಡಿರುವ ಮಾಹಿತಿ ಪಡೆದು ವರದಿ ನೀಡಬೇಕು. ಜೊತೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಈ ಕುರಿತು ವಿಷಯ ಪ್ರಸ್ತಾಪಿಸಿದ ಸಮಿತಿ ಸದಸ್ಯರಾದ ಪಳನಿ ಪ್ರಕಾಶ್ ಅವರು ಮಡಿಕೇರಿ ನಗರಸಭೆ, ವಿರಾಜಪೇಟೆ ಮತ್ತು ಕುಶಾಲನಗರ ಪುರಸಭೆ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿದಂತೆ ಪೌರಕಾರ್ಮಿಕರು ವಾಸಿಸುವ ವಸತಿ ಗೃಹಗಳು ಹಳೇ ಕಟ್ಟಡಗಳಾಗಿದ್ದು, ಶೀತಲಗೊಂಡಿವೆ.…
ಮಡಿಕೇರಿ ಸೆ.25 NEWS DESK : ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಿತಿ ಸದಸ್ಯರಾದ ರಂಗಸ್ವಾಮಿ ಅವರು ಸಫಾಯಿ ಕರ್ಮಚಾರಿಗಳು ದಿನಗೂಲಿಯಲ್ಲಿ ಕೆಲಸ ಮಾಡುತ್ತಿದ್ದು, ಇವರಿಗೆ ಕಾರ್ಮಿಕ ಇಲಾಖೆಯ ನಿಯಮದಂತೆ ವೇತನ ನೀಡುವಂತಾಗಬೇಕು. ಜೊತೆಗೆ ಪಿಎಫ್, ಇಎಸ್‍ಐ ಸೌಲಭ್ಯ ಒದಗಿಸುವಂತಾಗಬೇಕು ಎಂದು ಕೋರಿದರು. ಸುಂಟಿಕೊಪ್ಪ ಗ್ರಾ.ಪಂ.ವ್ಯಾಪ್ತಿಯ ಉಲುಗುಲಿ ಗ್ರಾಮದಲ್ಲಿ ಸುಮಾರು 12 ಕುಟುಂಬಗಳು ವಾಸಮಾಡುತ್ತಿದ್ದು, ಈ ಕುಟುಂಬಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕಿದೆ ಎಂದು ಕೋರಿದರು. ಸಿದ್ದಾಪುರ ಗ್ರಾಮವು ಅಮ್ಮತ್ತಿ ಹೋಬಳಿ ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಗೆ ಒಳಪಟ್ಟಿರುತ್ತದೆ. ಸ್ಥಳೀಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗೆ ಸಭೆ ಸಮಾರಂಭಗಳನ್ನು ನಡೆಸಲು ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಡಾ.ಬಾಬು ಜಗಜೀವನ್ ರಾಂ ಭವನ ನಿರ್ಮಾಣ ಮಾಡಲು ಜಾಗ ಗುರುತಿಸಲು ಸೂಚಿಸಿದ ಮೇರೆ ಪರಿಶೀಲಿಸಲಾಗಿ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಮಂಜೂರಾತಿಗೆ ಪೈಸಾರಿ ಜಾಗ ಲಭ್ಯತೆ ಬಗ್ಗೆ ಪರಿಶೀಲಿಸುವಂತಾಗಬೇಕು ಎಂದು ರಂಗಸ್ವಾಮಿ ಕೋರಿದರು. ಸುಂಟಿಕೊಪ್ಪ ಹೋಬಳಿ ಉಲುಗುಲಿ ಗ್ರಾಮದ…
ವಿರಾಜಪೇಟೆ ಸೆ.23 NEWS DESK : ಕೊಡವರು ಮುಂದೆ ಬಂದರೆ ಮಾತ್ರ ಜನಾಂಗದ ಅಭಿವೃದ್ಧಿ ಸಾಧ್ಯ. ಕೊಡಗಿನ ಹಬ್ಬ ಹರಿದಿನಗಳನ್ನು ಎಲ್ಲರೂ ಒಗ್ಗಟ್ಟಾಗಿ ಆಚರಿಸುವಂತಾಗಬೇಕು ಎಂದು ಕುಪ್ಪಂಡ ಛಾಯಾ ನಂಜಪ್ಪ ಹೇಳಿದರು. ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಕೊಡವ ಸಮಾಜದ ಆವರಣದಲ್ಲಿ ಕೈಲ್‍ಪೊಳ್ದ್ ಹಬ್ಬದ ಪ್ರಯುಕ್ತ ನಡೆದ ಒತ್ತೊರ್ಮೆ ಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕೊಡವರು ತಮ್ಮ ಆಚಾರ, ವಿಚಾರ, ಪದ್ಧತಿ, ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲೂ ರಾಜಕೀಯ ಬೆರೆಸಬಾರದು. ಕೊಡವಾಮೆ ಬಗ್ಗೆ, ಕೊಡವ ಜನಾಂಗದ ಬಗ್ಗೆ, ಸಂಸ್ಕೃತಿ, ಆಚಾರ, ವಿಚಾರ ಪದ್ಧತಿ ಪರಂಪರೆ ಉಳಿಸಿ ಬೇಳೆಸಬೇಕು, ಕೊಡವರು ಸ್ವಾಭಿಮಾನಿಗಳು ಹಾಗೂ ಬದುಕಿನ ಪ್ರತಿ ಹೆಜ್ಜೆಯಲ್ಲೂ ಕೊಡವತನವನ್ನು ಮರೆಯಬಾರದು ಎಂದರಲ್ಲದೆ ತಾವು ಉದ್ಯಮದಲ್ಲಿ ಹೇಗೆ ಸತತವಾದ ಪ್ರಯತ್ನದಿಂದ ಮುಂದೆ ಬರಲು ಸಾಧ್ಯವಾಯಿತು ಎನ್ನುವುದರ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್, ಸೆಪ್ಟೆಂಬರ್ ಮೊದಲ ವಾರದಲ್ಲಿ…
ಸಿದ್ದಾಪುರ ಸೆ.24 NEWS DESK : ಗುಹ್ಯ, ಕರಡಿಗೋಡು, ಸಿದ್ದಾಪುರ ಸುತ್ತಮುತ್ತಲ ಸದಸ್ಯರ ಸಹಕಾರದಿಂದ ಸಿದ್ದಾಪುರದ ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರಗತಿಯತ್ತ ಸಾಗುತ್ತಿದ್ದು, 2023 -24ನೇ ಸಾಲಿನ ಪ್ರಸಕ್ತ ವರ್ಷ 1.06ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಂ.ಎಸ್.ವೆಂಕಟೇಶ್ ತಿಳಿಸಿದ್ದಾರೆ. ಸಿದ್ದಾಪುರ ಎಂ.ಜಿ.ರಸ್ತೆಯಲ್ಲಿರುವ ಸಂಘದ ಕಟ್ಟಡ ಸಭಾಂಗಣದಲ್ಲಿ ನಡೆದ 94ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿ, ಗುಹ್ಯ, ಕರಡಿಗೋಡು, ಸಿದ್ದಾಪರ ಈ ಮೂರು ಗ್ರಾಮಗಳ ವ್ಯಾಪ್ತಿಯನ್ನೊಳಗೊಂಡ ಗುಹ್ಯ ಅಗಸ್ತೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪಾಲು ಬಂಡವಾಳ ರೂ. 2.23 ಕೋಟಿಗಳಿದ್ದು, ಠೇವಣಿಗಳು ರೂ.46.15 ಕೋಟೆ ಹಾಗೂ ಸದಸ್ಯರುಗಳಿಗೆ ಕೃಷಿ ಹಾಗೂ ಕೃಷಿಯೇತರ ಸಾಲ ಸೇರಿ ಒಟ್ಟು ರೂ. 30.20 ಕೋಟೆ ಹೊರಬಾಕಿ ಸಾಲವಿರುತ್ತದೆ. ಸಂಘದಲ್ಲಿ ದುಡಿಯುವ ಬಂಡವಾಳ ರೂ. 56.16 ಕೋಟಿ ಹಾಗೂ 2023-24 ನೇ ಸಾಲಿನಲ್ಲಿ ರೂ. 225.77 ಕೋಟಿ ವ್ಯವಹಾರ ನಡೆಸಲಾಗಿದೆ. ಪ್ರಸಕ್ತ ವರ್ಷ ರೂ. 1.06 ಕೋಟಿ…
ಸೋಮವಾರಪೇಟೆ ಸೆ.24 NEWS DESK : ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಫೋಟೋಗ್ರಫಿ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ರಮ್ಯ ಸ್ಟುಡಿಯೋ ಮಾಲೀಕ ವಿನೋದ್ ಜಯರಾಂ ಅವರು ಕಂಚಿನ ಪದಕಕ್ಕೆ ಭಾಜನರಾಗಿದ್ದಾರೆ. ದೇಶದ ವಿವಿಧ ಭಾಗಗಳಿಂದ 247 ಮಂದಿ ಛಾಯಾಚಿತ್ರಗಾರರು ಭಾಗವಹಿಸಿದ್ದ ಸ್ಪರ್ಧೆಯಲ್ಲಿ 3046 ಛಾಯಾಚಿತ್ರಗಳು ಸ್ಪರ್ಧೆಯಲ್ಲಿದ್ದವು. ಇದರಲ್ಲಿ ಮದುವೆ ಶಾಸ್ತ್ರ ವಿಭಾಗದ ಸ್ಪರ್ಧೆಯಲ್ಲಿ ವಿನೋದ್ ಜಯರಾಂ ಅವರು ಕಂಚಿನ ಪದಕಕ್ಕೆ ಭಾಜನರಾಗಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘದ ಕಾರ್ಯದರ್ಶಿಗಳು ಹಾಗೂ ವಿಭಾಗದ ಅಧ್ಯಕ್ಷರಾದ ಎ.ಎಂ. ಮುರುಳಿ, ಕಾರ್ಯದರ್ಶಿ ಬಿ.ಎನ್. ಉಮಾಶಂಕರ್, ಫೆಡರೇಷನ್ ಆಫ್ ಇಂಡಿಯನ್ ಫೋಟೋಗ್ರಫಿ ಅಧ್ಯಕ್ಷ ಸಿ.ಆರ್. ಸತ್ಯನಾರಾಯಣ, ಯೂತ್ ಫೋಟೋಗ್ರಫಿ ಸೊಸೈಟಿ ಅಧ್ಯಕ್ಷ ಮಂಜು ವಿಕಾಸ್ ಶಾಸ್ತ್ರೀ ಅವರುಗಳು ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಸೋಮವಾರಪೇಟೆ ತಾಲೂಕು ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿನಯ್, ಜಿಲ್ಲಾ ಛಾಯಾಚಿತ್ರ ಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ಎಸ್.ಆರ್.ವಸಂತ್, ವಂದನ…






