ಲೇಖಕ: admin

ಮಡಿಕೇರಿ ಸೆ.25 NEWS DESK : ಕರ್ನಾಟಕ ಗ್ರಾಮೀಣ ಬ್ಯಾಂಕ್ ಮಡಿಕೇರಿ ಪ್ರಾದೇಶಿಕ ಕಚೇರಿ ವತಿಯಿಂದ ನಗರದಲ್ಲಿ ಸ್ವಚ್ಛತೆಯೇ ಸೇವೆ ಅಭಿಯಾನ 2024 ಹಿನ್ನಲೆ ವಿವಿಧಡೆ ಸ್ವಚ್ಛತಾ ಕಾರ್ಯ ನಡೆಯಿತು. ಪ್ರಾದೇಶಿಕ ವ್ಯವಸ್ಥಾಪಕ ಉದಯ್ ಕುಮಾರ್ ಮಾತನಾಡಿ, ನಮ್ಮ ಮನೆಯ ಸುತ್ತಮುತ್ತಲ ಪ್ರದೇಶ ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕೇವಲ ಒಬ್ಬಿಬ್ಬರಿಂದ ಇಂತಹ ಕಾರ್ಯ ಸಾಧ್ಯವಿಲ್ಲ. ಪ್ರತಿಯೊಬ್ಬರು ಕೈಜೋಡಿಸಿದಾಗ ಬದಲಾವಣೆ ಸಾಧ್ಯವಿರುತ್ತದೆ. ಸ್ವಚ್ಛತಾ ಕಾರ್ಯಕ್ರಮ ಒಂದು ಅವಧಿಗೆ ಸೀಮಿತವಾಗಿರದೇ ನಿರಂತರ ಅಭಿಯಾನವಾದಾಗ ಸ್ವಚ್ಛ ನಗರವಾಗಲು ಸಾಧ್ಯ. ಪರಿಸರ ಸ್ವಚ್ಛತೆಯಿಂದ ಮನುಷ್ಯನ ಆರೋಗ್ಯ ಉತ್ತಮವಾಗುತ್ತದೆ. ಹಾಗಾಗಿ, ಎಲ್ಲರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು ನೀಡಬೇಕಿದೆ. ಪ್ರಕೃತಿಗೆ ವಿರುದ್ಧವಾಗಿ ಪ್ರತಿಕ್ರಿಯಿಸಿದಾಗ, ಅದು ಮನುಷ್ಯನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಪರಿಸರವನ್ನು ಹಾಳಗೆಡಹದೆ, ಶುಚಿತ್ವದಿಂದ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅಭಿಯಾನದ ಹಿನ್ನಲೆ ನಗರದ ಮುನ್ಸಿಪಾಲ್ ಪೌರಕಾರ್ಮಿಕರಾದ ಲಕ್ಷ್ಮೀ ಹಾಗೂ ಮುರ್ಗಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೆ ವೇಳೆ ಸ್ವಚ್ಛತೆಯಿಂದ…

Read More

ಮಡಿಕೇರಿ ಸೆ.25 NEWS DESK : ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ವಿರೋಧಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಸೆ.30 ರಂದು ಶ್ರೀಮಂಗಲ, ಅ.5 ರಂದು ತಿತಿಮತಿ ಮತ್ತು ಅ.9 ರಂದು ಅಮ್ಮತ್ತಿಯಲ್ಲಿ ಶಾಂತಿಯುತ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶ್ರೀಮಂಗಲದಲ್ಲಿ ಬೆಳಿಗ್ಗೆ 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದಲ್ಲಿ ಸರ್ವ ಕೊಡವರು ಪಾಲ್ಗೊಳ್ಳುವ ಮೂಲಕ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ವಿರುದ್ಧ ಸಿಎನ್‍ಸಿ ನಡೆಸುತ್ತಿರುವ ಹೋರಾಟಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ. ಆದಿಮಸಂಜಾತ ಕೊಡವರ ಭೂಮಿಯ ಹಕ್ಕನ್ನು ರಕ್ಷಿಸಲು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‍ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಬೃಹತ್…

Read More

ವಿರಾಜಪೇಟೆ ಸೆ.25 NEWS DESK : ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಎನ್ ಎಸ್ ಎಸ್ ದಿವಸದ ಪ್ರಯುಕ್ತ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು. ಸ್ವಚ್ಛತಾ ಹೈ ಸೇವಾ ಎಂಬ ದ್ಯೇಯ ವಾಕ್ಯದಡಿಯಲ್ಲಿ ಶ್ರಮದಾನ ಮಾಡಿದರು. ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸಮಾಜದ ಒಳಿತು ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶವಾಗಿದ್ದು, ವಿದ್ಯಾರ್ಥಿಗಳು ಸಮಾಜದ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ನಿಸ್ವಾರ್ಥವಾಗಿ ಸೇವೆಯನ್ನು ಸಲ್ಲಿಸಬೇಕು ಎಂದರು. ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಶಸ್ತ್ರ ಚಿಕಿತ್ಸಕರಾದ ಡಾ.ವಿಶ್ವನಾಥ್ ಸಿಂಪಿ ಮಾತನಾಡಿ, ಸ್ವಚ್ಛತಾ ಅಭಿಯಾನವು ಎನ್.ಎಸ್.ಎಸ್. ದ್ಯೇಯವಾಗಿದ್ದು ವಿದ್ಯಾರ್ಥಿಗಳು ತಮ್ಮ ಸೇವೆಯನ್ನು ಸಮಾಜಕ್ಕೆ ಸಲ್ಲಿಸುತ್ತಿರುವುದು ಗಮನಾರ್ಹವಾಗಿದೆ. ಸೇವಾ ಮನೋಭಾವನೆಯನ್ನು ಬೆಳೆಸುವುದರ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದೆ ಎಂದರು. ಸಾಮಾಜಿಕ ಕಳಕಳಿಯಲ್ಲಿ…

Read More

ಮಡಿಕೇರಿ ಸೆ.25 NEWS DESK : ಮದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2023-24 ನೇ ಸಾಲಿನಲ್ಲಿ ರೂ.25.02 ಲಕ್ಷ ಲಾಭ ಗಳಿಸಿದೆ ಮತ್ತು ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ “ಎ” ಶ್ರೇಣಿ ಪಡೆದಿದೆ ಎಂದು ಸಂಘದ ಅಧ್ಯಕ್ಷ ಧನಂಜಯ ಆಗೋಳಿಕಜೆ ಅವರು ತಿಳಿಸಿದ್ದಾರೆ. ಸಂಘದ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅನೇಕ ಸಹಕಾರಿಗಳ ಪರಿಶ್ರಮದಿಂದ ಮದೆ ಸಹಕಾರ ಸಂಘ ರಚನೆಗೊಂಡಿದೆ ಎಂದು ಸ್ಮರಿಸಿಕೊಂಡರು. ಕಳೆದ ವರ್ಷ ಸದಸ್ಯರ ಖಾತೆಗಳಿಗೆ ಪ್ರಿಂಟೆಡ್ ಪಾಸ್ ಪುಸ್ತಕ ನೀಡಲಾಗಿದೆ. ಇ- ಸ್ಟ್ಯಾಂಪ್ ವಿತರಣೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಘದ ಭದ್ರತೆಯ ದೃಷ್ಟಿಯಿಂದ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಬ್ಯಾಂಕಿಂಗ್ ವಿಭಾಗಕ್ಕೆ ನೂತನ ಕೌಂಟರ್, ಸಂಘದ ಸುತ್ತ ಕಾಂಪೌಂಡ್ ನಿರ್ಮಾಣ, ಬೋರ್ ವೆಲ್ ಕೊರೆಯಿಸಿ ಸಮರ್ಪಕ ನೀರಿನ ವ್ಯವಸ್ಥೆ ಮಾಡಲಾಗಿದೆ. ಸಂಘದ ಸಭಾಂಗಣವನ್ನು ದುರಸ್ತಿಗೊಳಿಸಿ ಹೊಸ ವಿನ್ಯಾಸದೊಂದಿಗೆ ಸುಸಜ್ಜಿತಗೊಳಿಸಲಾಗಿದೆ. ಸದಸ್ಯರ ಅನುಕೂಲಕ್ಕಾಗಿ ಸಾಲದ ಬಡ್ಡಿಯನ್ನು ಕಡಿಮೆ ಮಾಡಲಾಗಿದೆ. ಕಲಿಕೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ…

Read More

ಮಡಿಕೇರಿ ಸೆ.25 NEWS DESK : ಹಾಕತ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ 10ನೇ ತರಗತಿ ಓದುತ್ತಿದ್ದ ಬಿ.ಎನ್.ಪೃಥ್ವಿ ವಿಜ್ಞಾನ ಶಿಕ್ಷಕಿ ಎಂ.ವನಜ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದ ಕಾಳುಮೆಣಸು ಶುದ್ಧೀಕರಿಸುವ ಯಂತ್ರದ ಪರಿಕಲ್ಪನೆಯು ರಾಷ್ಟ್ರೀಯ ಮಟ್ಟದ ಇನ್ಸ್‌ಪೈರ್ ಮಾನಕ್ ಅವಾರ್ಡ್ ಗೆ ಆಯ್ಕೆಯಾಗಿದೆ. ಪೃಥ್ವಿ ಮಂಡಿಸಿದ ಈ ಪರಿಕಲ್ಪನೆಯ ಸಾಧನವು ಸಣ್ಣ ಖರ್ಚಿನಲ್ಲಿ ಕಾಳುಮೆಣಸು ಶುದ್ಧೀಕರಿಸುವ ಯಂತ್ರವಾಗಿದ್ದು, ಇಂದಿನ ದುಬಾರಿ ಜೀವನದಲ್ಲಿ ರೈತರಿಗೆ ಇದು ವರದಾನವಾಗಲಿದೆ. ಪೃಥ್ವಿ ಪ್ರಸ್ತುತ ಸಂತ ಮೈಕಲರ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಇವಳು ಮೇಕೇರಿ ಗ್ರಾಮದ ಬಿಲ್ಲವರ ನಂದಕುಮಾರ್ ಮತ್ತು ಶಶಿಕಲ ದಂಪತಿಯ ಪುತ್ರಿ.  

Read More

ಮಡಿಕೇರಿ ಸೆ.25 NEWS DESK : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬದಲಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗೆ ಇಲ್ಲವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯ ತನ್ನ ನಿಲುವು ಪ್ರಕಟಿಸಿದ್ದು, ಮುಂದಿನ ಕಾನೂನು ಹೋರಾಟದ ಬಗ್ಗೆ ಕಾಂಗ್ರೆಸ್ ಪಕ್ಷದ ಪ್ರಮುಖರು ಸಿದ್ಧತೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದರು. ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸುವ ಬಿಜೆಪಿಯವರು ಮೊದಲು, ನೈತಿಕತೆ ಎನ್ನುವುದು ಮೋದಿ ಮತ್ತು ಸಿದ್ದರಾಮಯ್ಯ ಅವರಿಗೆ ಪ್ರತ್ಯೇಕವಾಗಿದೆಯೇ ಎಂದು ಉತ್ತರಿಸಬೇಕು. ಗುಜರಾತ್‍ನಲ್ಲಿ 2002 ರಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2008 ರಲ್ಲಿ ಸರ್ವೋಚ್ಚ ನ್ಯಾಯಾಲಯ ತನಿಖೆಗೆ ಸೂಚನೆ ನೀಡಿದ ಸಂದರ್ಭ ಮುಖ್ಯಮಂತ್ರಿಯಾಗಿದ್ದ ಮೋದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನೇನು ನೀಡಿರಲಿಲ್ಲವೆಂದು ಆರೋಪಿಸಿದರು. ಇದೀಗ ಮುಡಾ ಹಗರಣದಲ್ಲಿ ಬಿಜೆಪಿಯವರು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವುದರಲ್ಲಿ ಏನು…

Read More

ಮಡಿಕೇರಿ ಸೆ.25 NEWS DESK : ಭಾರತೀಯ ಜನತಾ ಪಾರ್ಟಿ ವತಿಯಿಂದ ದೀನ್ ದಯಾಳ್ ಉಪಾಧ್ಯಾಯ ಅವರ 108ನೇ ಜನ್ಮದಿನವನ್ನು ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೊಡಗು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೀನ್ ದಯಾಳ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಈ ಸಂದರ್ಭ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಮಾತನಾಡಿ, ತನ್ನ ಇಡೀ ಜೀವನವನ್ನೇ ಸಮಾಜಕ್ಕಾಗಿ ಸಮರ್ಪಿಸಿದ ಜನಸಂಘದ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ  ಅವರು ಎಲ್ಲರಿಗೂ ಮಾದರಿಯಾಗಿದ್ದರು ಎಂದರು. ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಮತ್ತು ನಗರ ಅಧ್ಯಕ್ಷ ಉಮೇಶ್ ಸುಬ್ರಮಣ್ಯ ಮಾತನಾಡಿ ದೀನ್ ದಯಾಳ್ ಉಪಾಧ್ಯಾಯರ ಜೀವನ ಮತ್ತು ಆದರ್ಶಗಳನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ನಗರ ಸಭಾ ಸದಸ್ಯರು, ಪಕ್ಷದ ಕಾರ್ಯ ಕರ್ತರು ಹಾಜರಿದ್ದರು. ಪ್ರಧಾನ ಕಾರ್ಯದರ್ಶಿ ಗಳಾದ ಬಿ.ಕೆ.ಜಗದೀಶ್ ಸ್ವಾಗತಿಸಿದರು. ಕವನ್ ಕಾವೇರಪ್ಪ ವಂದಿಸಿದರು.  

Read More

ಮಡಿಕೇರಿ ಸೆ.25 NEWS DESK :  ಮೂಲಸೌಲಭ್ಯ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿ ವಿರಾಜಪೇಟೆಯ ಗ್ರಾಮ ಆಡಳಿತ ಅಧಿಕಾರಿಗಳು  ತಹಶೀಲ್ದಾರ್ ಅವರ ಮೂಲಕ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದ ವಿವಿಧ ಆ್ಯಪ್ ಗಳಲ್ಲಿ ಕರ್ತವ್ಯ ನಿರ್ವಹಿಸಲು ಒತ್ತಡ ಹೆಚ್ಚಾಗಿದ್ದು, ಸರ್ಕಾರ ಯಾವ ಸೌಲಭ್ಯವು ನೀಡುತ್ತಿಲ್ಲ ಎಂದು ಆರೋಪಿಸಿದರು. ನಿತ್ಯ ಒತ್ತಡದ ಕಾರ್ಯನಿರ್ವಹಣೆಯಿಂದಾಗಿ ಅಧಿಕಾರಿಗಳು ನೋವು ಅನುಭವಿಸುವಂತಾಗಿದೆ. ಆದ್ದರಿಂದ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಕೇಂದ್ರ ಸಂಘ ನಿರ್ದೇಶನದಂತೆ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಮನವಿಗೆ ಸ್ಪಂದಿಸದಿದ್ದಲ್ಲಿ ಸೆ.26 ರಂದು ಕರ್ತವ್ಯಕ್ಕೆ ಗೈರಾಗುವ ಮೂಲಕ ರಾಜ್ಯಾದ್ಯಂತ ಏಕಕಾಲದಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ವಿರಾಜಪೇಟೆ ತಾಲ್ಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ. ಮನವಿ ನೀಡುವ ಸಂದರ್ಭ  ವಿರಾಜಪೇಟೆ ತಾಲೂಕಿನ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.

Read More

ಸಿದ್ದಾಪುರ ಸೆ.25 NEWS DESK : ಸಿದ್ದಾಪುರ ಸಮೀಪದ ಕರಡಿಗೊಡು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಉಚಿತ ದಂತ ತಪಾಸಣಾ ಶಿಬಿರ ನಡೆಯಿತು. ಸಿದ್ದಾಪುರ ಡೆಂಟಲ್ ಕ್ಲಿನಿಕ್ ನ ದಂತ ವೈದ್ಯ ಡಾ.ಜೀವನ್ ಅವರು ವಿದ್ಯಾರ್ಥಿಗಳಿಗೆ ದಂತ ತಪಾಸಣೆ ನಡೆಸಿದರು. ವಿದ್ಯಾರ್ಥಿಗಳಿಗೆ ಹಲ್ಲುಗಳ ಸ್ವಚ್ಛತೆಯ ಬಗ್ಗೆ ತಿಳುವಳಿಕೆಯನ್ನು ನೀಡಿದರು. ಕೂರ್ಗ್ ಡೆಂಟಲ್ ಕೇರ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಟೂತ್ ಪೇಸ್ಟ್ ನ್ನು ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಲಯನ್ಸ್ ಕ್ಲಬ್ ಅಧ್ಯಕ್ಷ ಕುಕ್ಕುನೂರು ಸುನಿಲ್ ಲಯನ್ಸ್ ಕ್ಲಬ್ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ನಡುಸುತ್ತಿದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ದಂತ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದರು ಇದೇ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿಯನ್ನ ಹಂಚಲಾಯಿತು. ಲಯನ್ಸ್ ಕ್ಲಬ್ ಸಂಸ್ಥೆಯ ಕಾರ್ಯದರ್ಶಿ ಕುರಿಯನ್ ಜಾರ್ಜ್, ಖಜಾಂಜಿ ಕುಶಾಲಪ್ಪ ಪ್ರಮುಖರಾದ ವಿಪಿನ್ ಶ್ಯಾಮ್, ಅಯ್ಯಪ್ಪ ,ಕೀರ್ತಿಯಂಡ ವಿವೇಕ್, ಥಾಮಸ್, ಮ್ಯಾಥ್ಯೂ, ದಂಬೆಕೊಡಿ…

Read More

ಸಿದ್ದಾಪುರ ಸೆ.25 NEWS DESK : ಸಿದ್ದಾಪುರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಬಿ.ಜಿ.ಎಸ್ ಪಬ್ಲಿಕ್ ಸ್ಕೂಲ್ ನಲ್ಲಿ “ಶಿಕ್ಷಕರ ದಿನಾಚರಣೆ ಸಂಭ್ರಮ” ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಆಡಳಿತಾಧಿಕಾರಿಯಾದ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕೂಡಿಗೆ ಡಯಟ್ ನ ಉಪನ್ಯಾಸಕರಾದ ಗೀತಾ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ರಾಜೇಶ್ ಆಗಮಿಸಿದ್ದರು. ಶಿಕ್ಷಕರ ಮಹತ್ವವನ್ನು ಕುರಿತು ಗೀತಾರವರು ಸವಿಸ್ತಾರವಾಗಿ ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ಶಿಕ್ಷಕರಿಗೆ ಮನರಂಜನಾ ಕ್ರೀಡಾಕೂಟವನ್ನು ಆಯೋಜಿಸಿ, ವಿಜೇತ ಶಿಕ್ಷಕರಿಗೆ ಬಹುಮಾನವನ್ನು ವಿತರಿಸಿದರು. ರಾಜೇಶ್ ಅವರು ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಅವಿನಾಭಾವ ಸಂಬಂಧದ ಬಗ್ಗೆ ಮನಮುಟ್ಟುವಂತೆ ವಿವರಿಸಿದರು. ಸಂಸ್ಥೆಯ ವತಿಯಿಂದ ಶಿಕ್ಷಕವೃಂದ, ಬೋಧಕವೃಂದ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಗೌರವ ಸಮರ್ಪಣೆಯೊಂದಿಗೆ ಉಡುಗೊರೆಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಕಾಳೇಗೌಡ ಹಾಗೂ ವ್ಯವಸ್ಥಾಪಕರಾದ ಮಂಜುನಾಥ್ ರವರು ಹಾಜರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ನಿರೂಪಣೆ, ಸ್ವಾಗತ ಭಾಷಣ, ಬಹುಮಾನ ವಿತರಣೆ ಮತ್ತು ವಂದನಾರ್ಪಣೆಯನ್ನು…

Read More