ಹುಣಸೂರು NEWS DESK ಸೆ.24 : ಒಂದೇ ಕಂಟೈನರ್ ನಲ್ಲಿ ಸುಮಾರು 42 ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹುಣುಸೂರಿನಿಂದ ಮೈಸೂರು ಕಡೆಗೆ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ದಾಳಿ ನಡೆಸಿದರು. ರತ್ನಪುರಿ ಹಾಗೂ ಚಾಮರಾಜನಗರದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು 42 ಜಾನುವಾರುಗಳನ್ನು ರಕ್ಷಿಸಿದರು. ಕರುಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ವಶಪಡಿಸಿಕೊಂಡ ಜಾನುವಾರುಗಳನ್ನು ಪಿಂಜಾರಾಪೋಲ್ ಗೆ ಕಳುಹಿಸಲಾಗಿದೆ.
ಲೇಖಕ: admin
ಗುಂಡ್ಲುಪೇಟೆ NEWS DESK ಸೆ.24 : ಉಪಟಳ ನೀಡುತ್ತಿದ್ದ ಹುಲಿ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಸುಮಾರು 6 ವರ್ಷದ ಗಂಡು ಚಿರತೆ ಸೆರೆಯಾಗಿದ್ದು, ಅರಣ್ಯ ಇಲಾಖೆ ಮುಂದಿನ ಕ್ರಮ ಕೈಗೊಂಡಿದೆ. ಕೆಲವು ದಿನಗಳ ಹಿಂದೆ ಜಮೀನಿನಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆ ರೈತರ ಒತ್ತಾಯದ ಮೇರೆಗೆ ಗುಂಡ್ಲುಪೇಟೆ ಬಫರ್ ಜೋನ್ ವಲಯ ಅರಣ್ಯಾಧಿಕಾರಿಗಳು ಬೋನ್ ಇರಿಸಿದ್ದರು. ಪಡಗೂರು ಮತ್ತು ಪರಮಾಪುರ ವ್ಯಾಪ್ತಿಯಲ್ಲಿ ಹುಲಿ ಹಾಗೂ ಚಿರತೆ ಹಾವಳಿ ಹೆಚ್ಚಾಗಿದ್ದು, ಸೂಕ್ತ ಕ್ರಮಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ NEWS DESK ಸೆ.24 : ಯೋಧರ ನಾಡು ಕೊಡಗಿನಲ್ಲಿ ಸೇನಾ ನೇಮಕಾತಿ ಕೇಂದ್ರ ಸ್ಥಾಪಿಸುವ ಮೂಲಕ ಸೇನಾ ಕ್ಷೇತ್ರದ ಬಗ್ಗೆ ಯುವ ಸಮೂಹದಲ್ಲಿ ಮತ್ತಷ್ಟು ಉತ್ತೇಜನವನ್ನು ತುಂಬಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಒತ್ತಾಯಿಸಿದ್ದಾರೆ. ಕೇಂದ್ರದ ಭಾರೀ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಪತ್ರ ಬರೆದಿರುವ ಅವರು ಕೊಡಗು ಜಿಲ್ಲೆಯ ಹೆಚ್ಚಿನ ಯುವಕರು ಸೇನಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಸೇನಾ ನೇಮಕಾತಿ ಕೇಂದ್ರ ಸಹಕಾರಿಯಾಗಲಿದೆ ಎಂದು ವಿವರಿಸಿದ್ದಾರೆ. ಕೊಡಗಿನ ವೀರ ಯೋಧರು ಸೇನೆಯ ಮೂರೂ ವಿಭಾಗಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಮತ್ತಷ್ಟು ಯುವಕ, ಯುವತಿಯರು ಸೇನೆಗೆ ಸೇರಲು ಅನುಕೂಲವಾಗುವಂತೆ ನೇಮಕಾತಿ ಕೇಂದ್ರ ಸ್ಥಾಪಿಸಬೇಕು ಎಂದು ಮನವಿ ಮಾಡಿದ್ದಾರೆ. ಮಾಜಿ ಸೈನಿಕರ ಕುಂದುಕೊರತೆಗಳ ನಿವಾರಣೆಗೆ ಸುಸಜ್ಜಿತವಾದ ಇಸಿಎಚ್ ಆಸ್ಪತ್ರೆ ವ್ಯವಸ್ಥೆ ಕಲ್ಪಿಸಬೇಕು ಮತ್ತು ಯುವ ಸಮೂಹಕ್ಕೆ ಸ್ಫೂರ್ತಿ ತುಂಬಲು ಸೇನಾ ಮ್ಯೂಸಿಯಂ ನಿರ್ಮಾಣ ಮಾಡಬೇಕು ಎಂದು ಭೋಜಣ್ಣ…
ಮಡಿಕೇರಿ NEWS DESK ಸೆ.24 : ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜೀನಾಮೆಗಾಗಿ ಆಗ್ರಹಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡ ಬೇಕು ಮತ್ತು ನಿಷ್ಪಕ್ಷಪಾತ ತನಿಖೆಗೆ ಸಹಕರಿಸಬೇಕೆಂದು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸುವ ಮೂಲಕ ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿರುವುದು ಸ್ವಾಗತಾರ್ಹವಾಗಿದೆ. ಕಾನೂನು ಎಲ್ಲರಿಗೂ ಒಂದೇ ಎನ್ನುವುದನ್ನು…
ಮಡಿಕೇರಿ NEWS DESK ಸೆ.24 : ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನ ಮಡಿಕೇರಿ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಸಬಾಸ್ಟಿನ್ ಎ.ಜಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನ ಅಧ್ಯಕ್ಷ ಜಾನ್ಸನ್ ಪಿಂಟೋ ಅವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ವಿಲ್ಫೆçಡ್ ಮಡಿಕೇರಿ, ಉಪಾಧ್ಯಕ್ಷರಾಗಿ ಜೋಸಿ ನಾಪೋಕ್ಲು, ಭಾವುತ್ತಿಸ್ ಹಟ್ಟಿಹೊಳೆ, ಮೈಕಲ್ ವೇಗಸ್ ಮಡಿಕೇರಿ, ಖಜಾಂಚಿ ಶರತ್ ಜೋಸೆಫ್ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಪಿಯೂಶ್ ಪೆರೆರಾ ಅವಿರೋಧವಾಗಿ ಆಯ್ಕೆಯಾದರು. ಇದೇ ಸಂದರ್ಭ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನ ಜಿಲ್ಲಾ ಸಂಚಾಲಕರನ್ನಾಗಿ ಗಾಡ್ವಿನ್ ಮಾಸ್ಕೇರೆನಸ್ (ಪಮ್ಮಿ) ಅವರನ್ನು ನೇಮಕ ಮಾಡಲಾಯಿತು. ಅಸೋಸಿಯೇಷನ್ ನ ಸ್ಥಾಪಕಾಧ್ಯಕ್ಷ ವಿ.ಎ.ಲಾರೆನ್ಸ್ ಅವರು ಪ್ರಾಸ್ತಾವಿಕ ನುಡಿಯಾಡಿದರು. ಜಿಲ್ಲಾ ಸಂಘ ಮತ್ತು ಎಲ್ಲಾ ತಾಲ್ಲೂಕು ಘಟಕಗಳನ್ನು ಬಲಪಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಂಘದ ಗೌರವಾಧ್ಯಕ್ಷ ಜೋಕಿಂ ವಾಜ್, ಜಿಲ್ಲಾ ಉಪಾಧ್ಯಕ್ಷರುಗಳು ಹಾಗೂ ತಾಲ್ಲೂಕು ಘಟಕಗಳ…
ಮಡಿಕೇರಿ ಸೆ.24 NEWS DESK : ಹಮಾಲಿ ಕಾರ್ಮಿಕರ ಭವಿಷ್ಯ ನಿಧಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ಕೊಡಗು ಜಿಲ್ಲಾ ಸಮಿತಿ ಒತ್ತಾಯಿಸಿದೆ. ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಹಾಮಲಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಗಮನ ಸೆಳೆದರು. ಈ ಸಂದರ್ಭ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಅಸಂಘಟಿತ ಕಾರ್ಮಿರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ನಿರ್ವಹಿಸುವ, ವ್ಯಾಪಾರ ವಹಿವಾಟಿನಲ್ಲಿ ಹಾಗೂ ಸರಕು ಸಾಗಣಿಕೆಯಲ್ಲಿ ಮಹತ್ವದ ಪಾತ್ರ ವಹಿಸುವ ಶ್ರಮ ಜೀವಿಗಳಾದ ಹಮಾಲಿ ಕಾರ್ಮಿಕರಿಗೆ ಪಿಂಚಣಿ, ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಕರ್ನಾಟಕ ರಾಜ್ಯ ಸರಕಾರ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಅಂಬೇಡ್ಕರ ಸಹಾಯ ಹಸ್ತ ಸ್ಮಾರ್ಟ ಪಡೆದ ಹಮಾಲಿ ಕಾರ್ಮಿಕರು ಸೇರಿದಂತೆ 23 ವಲಯದ ಅಸಂಘಟಿತ ಕಾರ್ಮಿಕರಿಗೆ ಅಪಘಾತ ಮರಣ, ಅಪಘಾತ ಅಂಗವಿಕಲತೆ, ಅಪಘಾತ ವೈದ್ಯಕೀಯ ಮರು…
ಮಡಿಕೇರಿ ಸೆ.24 NEWS DESK : ಭಾಗಮಂಡಲ ಹೋಬಳಿ ಕರಿಕೆ ಗ್ರಾಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸೆ.26 ರಂದು ಬೆಳಗ್ಗೆ 11 ಗಂಟೆಗೆ ಪಿಂಚಣಿ ದಿನ ಕಾರ್ಯಕ್ರಮ ನಡೆಯಲಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಾಶನಗಳ ಫಲಾನುಭವಿಗಳು ಕುಂದು ಕೊರತೆಗಳನ್ನು ನೋಂದಾಯಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಪ್ರವೀಣ್ ಕುಮಾರ್ ಕೋರಿದ್ದಾರೆ.
ಮಡಿಕೇರಿ ಸೆ.24 NEWS DESK : ಕೊಡಗು ಜಿಲ್ಲೆಯಲ್ಲಿ 5 ವರ್ಷದೊಳಗಿನ ಸಾಧಾರಣ ಅಪೌಷ್ಟಿಕತೆಯಿಂದ 264 ಮಕ್ಕಳು ಹಾಗೂ ತೀವ್ರ ಅಪೌಷ್ಟಿಕತೆಯಿಂದ 50 ಮಕ್ಕಳು ತುತ್ತಾಗಿದ್ದು, ಮಕ್ಕಳ ಅಪೌಷ್ಟಿಕತೆ ದೂರ ಮಾಡಲು ಗುಣಮಟ್ಟದ ಆಹಾರ ನೀಡುವಂತಾಗಬೇಕು ಎಂದು ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಕ್ಕಳ ವಿಭಾಗದಿಂದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ಹೊರ ರೋಗಿಗಳ ವಿಭಾಗದಲ್ಲಿ ನಡೆದ ‘ಪೋಷಣ ಅಭಿಯಾನ ಮಾಸಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಐದು ವರ್ಷದೊಳಗಿನ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕಿದೆ ಎಂದರು. ಇತ್ತೀಚಿನ ದಿನಗಳ ಜೀವನ ಶೈಲಿಯಲ್ಲಿನ ಬದಲಾವಣೆ, ಗುಣಮಟ್ಟದ ಆಹಾರ ಪಡೆಯದಿರುವುದು ಮತ್ತಿತರ ಕಾರಣವಾಗಿದೆ. ಆದ್ದರಿಂದ ಸರ್ಕಾರದಿಂದ ಪ್ರತೀ ಮೂರು…
ಮಡಿಕೇರಿ ಸೆ.24 NEWS DESK : ಅಖಿಲ ಭಾರತ ಸಂತ ಸಮಿತಿಯ ಕರ್ನಾಟಕ ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಕೊಡಗಿನ ಸಿದ್ಧಲಿಂಗಪುರ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದ ಶ್ರೀ ರಾಜೇಶ್ ನಾಥ ಗುರೂಜಿ ನಿಯುಕ್ತಿಗೊಂಡಿದ್ದಾರೆ. ಹಾಲಿ ಕೊಡಗು ಜಿಲ್ಲಾ ಅಧ್ಯಕ್ಷರಾಗಿರುವ ರಾಜೇಶ್ ನಾಥ್ ಜೀ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಸಹ ಕಾರ್ಯದರ್ಶಿಯಾಗಿ ಸೋಮವಾರಪೇಟೆ ವಿರಕ್ತಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ನೇಮಕಗೊಂಡಿದ್ದಾರೆ. ಅಲ್ಲದೆ ಕೊಡಗಿನ ಧಾರ್ಮಿಕ ಚಿಂತಕ ಚಿ.ನಾ.ಸೋಮೇಶ್ ಎಬಿಎಸ್ಎಸ್ ಸಂಚಲನ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡಿದ್ದಾರೆ. ಮಂಗಳೂರಿನ ಓಂ ಶ್ರೀ ಮಠದಲ್ಲಿ ನಡೆದ ಅಖಿಲ ಭಾರತ ಸಂತ ಸಮಿತಿಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ನಿಯುಕ್ತಿಯೊಂದಿಗೆ ಪ್ರತಿಜ್ಞೆ ಭೋದಿಸಲಾಯಿತು. ಎಬಿಎಸ್ಎಸ್ ಕರ್ನಾಟಕ ರಾಜ್ಯ ಅಧ್ಯಕ್ಷ ಶ್ರೀ ವಿದ್ಯಾನಂದ ಸರಸ್ವತಿ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಸಂಘಚಾಲಕ್ ಡಾ. ವಾಮನ ಶೆಣೈ ಸೇರಿದಂತೆ ಅನೇಕ ಸಂತರು ಧಾರ್ಮಿಕ ಪ್ರಮುಖರು ಪಾಲ್ಗೊಂಡಿದ್ದರು.
ಮಡಿಕೇರಿ ಸೆ.23 NEWS DESK : ಸಮಾಜದಲ್ಲಿ ಬದಲಾವಣೆ ತರುವಲ್ಲಿ ಸರ್ಕಾರದ ಕಾನೂನುಗಳಿಗಿಂತ ಧರ್ಮದ ಆದೇಶಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದು ಹಿರಿಯ ಚಿಂತಕ ಹಾಗೂ ನಿವೃತ್ತ ಪ್ರಾಂಶುಪಾಲ ಡಾ.ಜೆ.ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ. ಜಮಾಅತೆ ಇಸ್ಲಾಮೀ ಹಿಂದ್ ವಿರಾಜಪೇಟೆ ಸ್ಥಾನಿಯ ಶಾಖೆ ಸೀರತುನ್ನಬಿ ಪ್ರಯುಕ್ತ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ” ಎಂಬ ವಿಷಯದಲ್ಲಿ ಏರ್ಪಡಿಸಿದ್ದ ಗಣ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. “ಆಧ್ಯಾತ್ಮಿಕತೆಯ ಮೂಲಕ ಲೌಕಿಕ ಬದುಕನ್ನು ಸಂಸ್ಕರಿಸುವ ವಿಧಾನವನ್ನು ಪ್ರವಾದಿ ಮುಹಮ್ಮದ್(ಸ) ಪ್ರಾಯೋಗಿಕವಾಗಿ ತೋರಿಸಿಕೊಟ್ಟರು. ಇತರ ಹಲವು ಧಾರ್ಮಿಕ ಸುಧಾರಕರುಗಳಿಗೆ ಹೋಲಿಸಿದಲ್ಲಿ ಅವರು ಓರ್ವ ಸಂಸಾರಸ್ಥರಾಗಿದ್ದುಕೊಂಡೇ ಸಮಾಜಕ್ಕೆ ಮಾದರಿಯೋಗ್ಯ ಶಿಕ್ಷಣವನ್ನು ನೀಡಿದರು. ಪ್ರವಾದಿ ಮುಹಮ್ಮದ್(ಸ)ರವರ ಬದುಕು ತೆರೆದಿಟ್ಟ ಪುಸ್ತಕವಾಗಿತ್ತು. ಮಾತ್ರವಲ್ಲ, ಅವರ ಬದುಕಿನ ಎಲ್ಲಾ ಮಜಲುಗಳೂ ಇಂದು ದಾಖಲಿಸಲ್ಪಟ್ಟಿರುವುದು ವಿಶೇಷವಾಗಿದೆ. ಇತರ ಮಹಾಪುರುಷರು ಹಾಗೂ ಸುಧಾರಕರಂತೆ ಅವರು ಬದುಕಿನ ಕೆಲವೇ ಕ್ಷೇತ್ರಗಳನ್ನು ಮಾತ್ರ ಕೈಯಾಡಿಸಲಿಲ್ಲ. ಅವರು ಪ್ರಚಾರಪಡಿಸಿದ ಸಿದ್ದಾಂತಗಳು ಮತ್ತು ಆಶಯಗಳು ಸಮಾಜವನ್ನು ಸಂಪೂರ್ಣವಾಗಿ ಬದಲಾಯಿಸಲು ಸಾಧ್ಯವಂತದ್ದಾಗಿತ್ತು. ಬದುಕಿನ ನಿಖಿಲ ಕ್ಷೇತ್ರಗಳಲ್ಲೂ ದೇವನನ್ನು…






