ಮಡಿಕೇರಿ ಸೆ.23 NEWS DESK : ಬಾಳುಗೋಡು ಕೊಡವ ಸಮಾಜದ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಕೊಡವ ಸಮಾಜಗಳ ಅಭಿವೃದ್ದಿಗೆಂದು ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಬಿಡುಗಡೆಗೊಂಡಿದ್ದ 10 ಕೋಟಿ ರೂ.ಗಳಲ್ಲಿ ಬಾಳುಗೋಡುವಿನ ಮೈದಾನ. ತಡೆಗೋಡೆ ನಿರ್ಮಾಣ, ಶಾಶ್ವತ ವೇದಿಕೆ ನಿರ್ಮಾಣ, ಯುದ್ದ ಸ್ಮಾರಕ, ಕಟ್ಟಡಗಳಿಗೆ ಪೈಂಟಿ0ಗ್ ಸೇರಿದಂತೆ 6 ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಸೇರಿದಂತೆ ವಿವಿಧ ಸಮಿತಿಗಳ ಸದಸ್ಯರು ಹಾಜರಿದ್ದರು.
ಲೇಖಕ: admin
ನಾಪೋಕ್ಲು ಸೆ.23 NEWS DESK : ಮಡಿಕೇರಿ ತಾಲ್ಲೂಕು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೆಟ್ಟಗೇರಿ ವಲಯದ ಕಾರುಗುಂದ ಗ್ರಾಮದ ಗೌಡ ಸಮಾಜದಲ್ಲಿ 1855ನೇ ಮದ್ಯವರ್ಜನ ಶಿಬಿರ ನಡೆಯಿತು. 5ನೇ ದಿನದ ಗುಂಪು ಸಲಹೆ ಕಾರ್ಯಕ್ರಮದಲ್ಲಿ ಚಾಮರಾಜ ಜೋಡಿ ರಸ್ತೆ ಮೈಸೂರು ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಪಟ್ಟಡ ಶಿವಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯ ಒಳಗೆ ಅದ್ಭುತ ಶಕ್ತಿಯಿದೆ. ಅದನ್ನು ಅರಿತು ಕಾರ್ಯೋನ್ಮುಖವಾದರೆ ಅಭಿವೃದ್ಧಿ ಹೊಂದಲು ಸಾಧ್ಯ. ಆದರೆ ಮದ್ಯ ವ್ಯಸನಿಗಳು ಮದ್ಯದಲ್ಲಿ ಶಕ್ತಿಯಿದೆ ಎಂಬ ಭ್ರಮೆಯಿಂದ ಜೀವನ ಹಾಳು ಮಾಡಿಕೊಳ್ಳುತ್ತಾರೆ ಎಂದು ಉಪನ್ಯಾಸಕ ಪಟ್ಟಡ ಶಿವಕುಮಾರ್ ಅಭಿಪ್ರಾಯಪಟ್ಟರು. ಮದ್ಯ ಬಿಡುವವರು ಕುಂಟು ನೆಪಗಳನ್ನು ಹೇಳುತ್ತ ಮುಂದಕ್ಕೆ ಹಾಕುವ ಬದಲು ತಕ್ಷಣವೇ ಮದ್ಯ ತ್ಯಜಿಸಿ, ತಮ್ಮ ಕುಟುಂಬಕ್ಕೆ ಹಾಗೂ ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ಬದುಕಿ ಎಂದು ಶಿಬಿರಾರ್ಥಿಗಳಿಗೆ ಆತ್ಮಸ್ಥೈರ್ಯವನ್ನು ತುಂಬಿದರುದರು. ಕಾರ್ಯಕ್ರಮದಲ್ಲಿ ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ಗೌರವ…
ಬೆಂಗಳೂರು ಸೆ.23 NEWS DESK : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ” ನೂತನ 65 ಆ್ಯಂಬುಲನ್ಸ್ ಗಳನ್ಮು ಲೋಕಾರ್ಪಣೆ” ಮಾಡಿದರು. ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗುತ್ತವೆ ಎಂದರು. ಸದ್ಯ 65 ಆಧನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು. ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ.…
ನಾಪೋಕ್ಲು ಸೆ.23 NEWS DESK : ಬೆಂಗಳೂರಿನ ಕೊಡಗು ಗೌಡ ಸಮಾಜದ ಪ್ರಾಯೋಜಕತ್ವದಲ್ಲಿ ಓಜಸ್ವಿ ಫೌಂಡೇಶನ್ ವತಿಯಿಂದ ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಸಿ.ಐ.ಟಿ ಪೊನ್ನಂಪೇಟೆ ಉಪನ್ಯಾಸಕರಾದ ಕವಿತಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಸಮಯ ಪಾಲನೆ, ಶಿಸ್ತು ಮತ್ತು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ನಂತರ ತಮ್ಮ ಭವಿಷ್ಯವನ್ನು ಹೇಗೆ ರೂಪಿಸಿಕೊಳ್ಳಬಹುದು ಎಂಬುದರ ಬಗ್ಗೆ ಪ್ರೊಜೆಕ್ಟರ್ (ಕಿರುತೆರೆ) ಮೂಲಕ ಮನಮುಟ್ಟುವಂತೆ ಸಮಗ್ರ ಮಾಹಿತಿಯನ್ನು ನೀಡಿದರು. ಅರುಣಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ.ಎಸ್.ರಾಮಕೃಷ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶೆಟ್ಟೆಜನ ಬ್ರಿಜೇಶ್, ವಿದ್ಯಾ ಸಂಸ್ಥೆಯ ಉಪನ್ಯಾಸಕರಾದ ಚನ್ನಬಸಪ್ಪ, ದಾಮೋದರ್ ನಾಯಕ್ ಮತ್ತು ಶಿಕ್ಷಕರಾದ ಪರಮೇಶ್ ಮತ್ತು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಸೆ.23 NEWS DESK : ಕುಂಜಿಲದ ಆಕ್ಸ್ ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಇಂಟರ‍್ಯಾಕ್ಟ್ ಕ್ಲಬ್ ಸ್ಥಾಪನೆಯಾಯಿತು. ರೊಟರಿಯನ್ ಬಿ.ಜಿ.ಅನಂತ ಶಯನ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲ್ ವಿದ್ಯಾರ್ಥಿಗಳಿಗೆ ಉತ್ತಮ ನಾಯಕತ್ವ ಗುಣವನ್ನು ಬೆಳೆಸುವಂತೆ ಕಿವು ಮಾತು ಹೇಳಿದರು. ರೋಟರಿ ಎಸ್.ಎಸ್ ಸ್ಥಾಪನಾ ಅಧ್ಯಕ್ಷ ಸಂಪತ್ ಕುಮಾರ್ ಕ್ಲಬ್ ನ ಜವಾಬ್ದಾರಿಗಳನ್ನು ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಮಾರ್ಗದರ್ಶನ ನೀಡಿದರು. ಶಾಲೆಯ ಇಂಟರ‍್ಯಾಕ್ಟ್ ಕಬ್ಲ್ ನ ಅಧ್ಯಕ್ಷೆ ಹತ್ತನೇ ತರಗತಿ ವಿದ್ಯಾರ್ಥಿನಿ ಅಫ್ರ ಪರ್ವೀನ್ ಇಂಟರ‍್ಯಾಕ್ಟ್ ಕ್ಲಬ್ ನಿಂದ ವಿದ್ಯಾರ್ಥಿಗಳಿಗಾಗುವ ಪ್ರಯೋಜನದ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ರೋಟರಿ ಕಾರ್ಯದರ್ಶಿ ಕಿರಣ್ ಕುಂದರ್, ಶಾಲೆಯ ವ್ಯವಸ್ಥಾಪಕ ಶಾಹಿದ್ ಅಲಿ, ಶಾಲಾ ಮುಖ್ಯೋಪಾಧ್ಯಾಯಿನಿ ಎಂ.ಎಂ.ಕವಿತ, ಶಾಲಾ ಇಂಟರ‍್ಯಾಕ್ಟ್ ಕ್ಲಬ್ ಸಂಘಟಕರಾದ ಪಿ.ಪಿ.ರಕ್ಷಿತ, ಶಾಲಾ ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ಸೆ.23 NEWS DESK : ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿರಾಜಪೇಟೆ ತಾಲೂಕು ತಾಲ್ಲೂಕು ಸಮಿತಿ ವತಿಯಿಂದ 2023-24 ನೇ ಸಾಲಿನಲ್ಲಿ ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಯಲ್ಲಿ ಅತೀ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು ಹಾಗೂ ಅತೀ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಚಿಲ್ಲವಂಡ ಕಾವೇರಪ್ಪ ಮಾತನಾಡಿ, ವಿದ್ಯಾರ್ಥಿಗಳ ಪರೀಕ್ಷಾ ಸಾಧನೆಯ ಹಿಂದೆ ಶಿಕ್ಷಕರ ಶ್ರಮ ಅಡಗಿದ್ದು ಇನ್ನು ಮುಂದೆಯೂ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಬೇಕೆಂದರು. ವಿದ್ಯಾರ್ಥಿಗಳು ಚೆನ್ನಾಗಿ ಓದಿ ರಾಷ್ಟ್ರಕ್ಕೆ ಕೊಡುಗೆಯನ್ನು ಕೊಡಬೇಕೆಂದು ಕಿವಿಮಾತು ಹೇಳಿದರು.ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ ಮಾತನಾಡಿ, ಇಂದಿನ ಕಾರ್ಯಕ್ರಮವು ಅರ್ಥಪೂರ್ಣವಾಗಿದ್ದು ವಿದ್ಯಾರ್ಥಿಗಳ ಸಾಧನೆ ಹಾಗೂ ಸಂಸ್ಥೆಯ ಅಭಿವೃದ್ದಿ ಯಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ.…
ಮಡಿಕೇರಿ ಸೆ.23 NEWS DESK : ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದ್ದು, ಅರ್ಹ ಕಾನೂನು ಪದವೀಧರರು ಸೆಪ್ಟೆಂಬರ್, 30 ರವರೆಗೆ ಇಲಾಖಾ ವೆಬ್‍ಸೈಟ್: www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿಯನ್ನು ಸಲ್ಲಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು 03 ಅಥವಾ 05 ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರ ಸಡಿಲಗೊಳಿಸಲಾಗುವುದು.…
ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ “ಗೌರಮ್ಮ ದತ್ತಿ ಪ್ರಶಸ್ತಿ”ಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕಿಯರು ತಾವು ರಚಿಸಿದ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿ ತಕ್ಕದ್ದು. 2019ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಕಳುಹಿಸುವ ಕೃತಿಗೆ ಯಾವುದೇ ಪ್ರಶಸ್ತಿ ಬಂದಿರಕೂಡದು. ಓರ್ವ ಲೇಖಕಿ ಒಂದು ಪುಸ್ತಕವನ್ನು ಮಾತ್ರ ಕಳುಹಿಸತಕ್ಕದ್ದು. ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ _94483 46276. ಇಲ್ಲಿಗೆ ದಿನಾಂಕ 05.10.2024 ರ ಒಳಗಾಗಿ ತಲುಪಿಸಬೇಕೆಂದು ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಂಟಿಕೊಪ್ಪ ಸೆ.23 NEWS DESK : ಜಿಲ್ಲಾ ಮಟ್ಟದ 14ರ ವಯೋಮನದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಸಂತ ಮೇರಿ ಆಂಗ್ಲ ವಿದ್ಯಾ ಸಂಸ್ಥೆಯ ಬಾಲಕಿಯರ ತಂಡ ಗೆಲುವು ಸಾಧಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅರ‍್ವತೋಕ್ಲುವಿನ ಸರ್ವೂದೈವತ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿದ್ಯಾ ಸಂಸ್ಥೆಯ ಬಾಲಕಿಯರಾದ ನಿಬ್ರ ಫಾತೀಮಾ, ಅಹಾಲ್ಯ, ಸಮೀಕ್ಷ ಅನುಷ್ಕ, ಚೈತನ್ಯ ಸ್ಪರ್ಧಿಸಿದರು. ಪೈನಲ್ ಪಂದ್ಯದಲ್ಲಿ ಅರ‍್ವತೋಕ್ಲುವಿನ ಸರ್ವೂದೈವತ ಶಾಲೆಯ ತಂಡವನ್ನು ಮಣಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ತರುಬೇತುದಾರರಾಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ್ ಕಾರ್ಯನಿರ್ವಹಿಸಿದರು. ಸಂತ ಮೇರಿ ಆಂಗ್ಲ ವಿದ್ಯಾ ಸಂಸ್ಥೆಯ ಬಾಲಕಿಯರ ತಂಡದ ಕ್ರೀಡಾ ಸಾಧನೆಯನ್ನು ಶಾಲೆಯ ವ್ಯವಸ್ಥಾಪಕರಾದ ರೇ.ಫಾ.ವಿಜಯಕುಮಾರ್, ಸಂತ ಮೇರಿ ಆಂಗ್ಲ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ಸೇಲ್ವರಾಜ್ ಪ್ರಶಂಸಿದ್ದಾರೆ.
ಪುತ್ತೂರು ಸೆ.23 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ನಾತಕೋತ್ತರ ಎಂಸಿಎ ವಿಭಾಗದ ನಿರ್ದೇಶಕಿಯಾಗಿ ಡಾ.ಜ್ಯೋತಿಮಣಿ.ಕೆ ಪದ ಸ್ವೀಕಾರ ಮಾಡಿದ್ದಾರೆ. ಇವರು ಎಂಸಿಎ ಮತ್ತು ಎಂಎಸ್‍ಸಿ ಪದವಿಯನ್ನು ಪಡೆದುಕೊಂಡು ಡಾಟಾ ಮೈನಿಂಗ್ ಹಾಗೂ ಮೆಷಿನ್ ಲರ್ನಿಂಗ್ ವಿಭಾಗದಲ್ಲಿ ಸಂಶೋಧನೆಯನ್ನು ಮಾಡಿ ಡಾಕ್ಟರೇಟ್ ಪದವಿಯನ್ನು ಗಳಿಸಿಕೊಂಡಿದ್ದಾರೆ. ಹದಿನೆಂಟು ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಇವರು ಕಂಪ್ಯೂಟರ್ ವಿಭಾಗದ ನೂತನ ತಂತ್ರಜ್ಞಾನಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದ ಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.






