ಮಡಿಕೇರಿ ಸೆ.5 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಕೊಡವ ಸಂಸ್ಕೃತಿ ಹಾಗೂ ಚರಿತ್ರೆಗಳ ಸಂಶೋಧನೆ-ಅಧ್ಯಯನದ ದಿಸೆಯಲ್ಲಿ ಕಾರ್ಯಯೋಜನೆ ರೂಪಿಸಿದೆ. ಈ ದಿಸೆಯಲ್ಲಿ ಕೊಡವ ಭಾಷೆ-ಸಾಹಿತ್ಯ, ಸಂಸ್ಕೃತಿ, ಆಚಾರ-ವಿಚಾರ, ಪದ್ಧತಿ-ಪರಂಪರೆಗಳ ಹಾಗೂ ಕೊಡವ-ಕೊಡಗಿನ ಸಂಬಂಧಿತ ಚರಿತ್ರೆಗಳ ಬಗ್ಗೆ ಆಳವಾದ ಸಂಶೋಧನೆಗೆ ಅಕಾಡೆಮಿಯ ಕಾರ್ಯಸೂಚಿಯನ್ವಯ ಅರ್ಹ-ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಕಾರ್ಯನಿರ್ವಹಿಸಲು ಬಯಸಿದ್ದಲ್ಲಿ ಹೆಚ್ಚಿನ ವಿವರಗಳಿಗೆ ಅಧ್ಯಕ್ಷರು, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಜೂನಿಯರ್ ಕಾಲೇಜು ರಸ್ತೆ, ಸ್ಕೌಟ್ಸ್ ಮತ್ತು ಗೈಡ್ಸ್ ಭವನ, ಮ್ಯಾನ್ಸ್ ಕಾಪೌಂಡ್ ಹತ್ತಿರ ಮಡಿಕೇರಿ. ಇವರಿಗೆ ಪತ್ರ ಬರೆಯುವಂತೆ ತಿಳಿಸಲಾಗಿದೆ ಎಂದು ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ತಿಳಿಸಿದ್ದಾರೆ.
ಲೇಖಕ: admin
ನಾಪೋಕ್ಲು ಸೆ.5 NEWS DESK : ಮೈಸೂರು ದೇವಧನ್ ಫೌಂಡೇಶನ್ ಹಾಗೂ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಇಂಟರಾಕ್ಟ್ ಸಂಘ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣ ನಡೆಯಿತು. ಫೌಂಡೇಶನ್ ನ ಪ್ರಮುಖರಾದ ಬಲ್ಲಚಂಡ ಧನ್ಯ ಪೊನ್ನಮ್ಮ, ಕೋಟೆರ ದೇವಯ್ಯ ಹಾಗೂ ತಂಡದಿಂದ ವಿದ್ಯಾರ್ಥಿಗಳಿಗೆ ಏಕಾಗ್ರತೆ, ಖಿನ್ನತೆ ಹಾಗೂ ಆಕ್ರಮಣಕಾರಿ ವರ್ತನೆಯ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳು ಯಾವುದೇ ಸಂದರ್ಭದಲ್ಲಿ ಖಿನ್ನತೆಗೆ ಒಳಗಾಗಬಾರದು. ಉತ್ತಮ ಗುಣ ನಡತೆಗಳನ್ನು ರೂಪಿಸಿಕೊಳ್ಳಬೇಕು. ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಈಗಿನಿಂದಲೇ ಯೋಜನೆ ಹಾಕಿಕೊಳ್ಳಬೇಕು ಎಂದ ಮಾರ್ಗದರ್ಶನ ನೀಡಿದರು. ಈ ಸಂದರ್ಭ ಸಂಘದ ಸಂಚಾಲಕಿ ಕೆ.ಎಸ್. ಶೋಭ, ಸ್ಮಿತಾ , ಸಂಘದ ಸದಸ್ಯರು, ವಿದ್ಯಾರ್ಥಿಗಳು ಶಿಕ್ಷಕರು ಪಾಲ್ಗೊಂಡಿದ್ದರು.
ಮಡಿಕೇರಿ ಸೆ.5 NEWS DESK : ಗೋಣಿಕೊಪ್ಪನ ಜಿ.ಹೆಚ್.ಎಸ್ ಶಾಲೆಯಲ್ಲಿ ಲೇಖನಿ ಅಭಿಯಾನ ನಡೆಯಿತು. ಅಭಿಯಾನದ ಸಂಚಾಲಕಿ ವಾತ್ಸಲ್ಯ ಅಭಿಯಾದ 20 ಮಹತ್ವಗಳನ್ನು ವಿವರಿಸಿ ಲೇಖನಿ ತಯಾರಿಸುವ ವಿಧಾನಗಳನ್ನು ತಿಳಿಸಿಕೊಟ್ಟರು. ಈ ಸಂದರ್ಭ ಶಾಲೆಯ ಮುಖ್ಯೋಪಾಧ್ಯಾಯರಾದ ರತೀಶ್ ರೈ, ಶಿಕ್ಷಕಿಯರಾದ ಸಾಬೀನಾ ಬಾನು, ಲವೀನ್, ರಶ್ಮಿ, ಹಂನ್ಸಿರ ಹಾಜರಿದ್ದರು.
ಬೆಂಗಳೂರು ಸೆ.5 NEWS DESK : “ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ”ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರೈತರು – ಶಿಕ್ಷಕರು – ಸೈನಿಕರು ದೇಶದ ನಿರ್ಮಾತೃಗಳು. ದೇಶದ ಎರಡನೇ ರಾಷ್ಟ್ರಪತಿಗಳಾಗಿದ್ದ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲಾ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾಕೃಷ್ಣನ್ ಅವರ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವವರು ನಮ್ಮ ಶಿಕ್ಷಕರು. ಇದು ಶಿಕ್ಷಕರ ಮೂಲಭೂತ ಜವಾಬ್ದಾರಿಯಾಗಿದೆ ಎಂದರು. ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತಿ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ. ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವಂತೆ ರೂಪಿಸುವುದೇ ಶಿಕ್ಷಕರ ಜವಾಬ್ದಾರಿ. ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ವಿದ್ಯಾರ್ಥಿಗಳು…
ಬೆಂಗಳೂರು ಸೆ.5 NEWS DESK : ಹಿರಿಯ ಸಾಮಾಜಿಕ ಕಾರ್ಯಕರ್ತೆ ವಿಜಯಮ್ಮ, ನಟ ಚೇತನ್ ನೇತೃತ್ವದ ಫೈರ್ ನಿಯೋಗದವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಮಲಯಾಳಂ ಸಿನೆಮಾ ರಂಗದಲ್ಲಿ ನಟಿಯರ ಮೇಲಿನ ಲೈಂಗಿಕ ದೌರ್ಜನ್ಯ ಕುರಿತ ತನಿಖೆಗಾಗಿ ಸಮಿತಿ ರಚನೆ ಮಾಡಿದಂತೆ, ರಾಜ್ಯ ಸರ್ಕಾರವು ಸಮಿತಿ ರಚಿಸಿ, ಕನ್ನಡ ಚಿತ್ರರಂಗದಲ್ಲಿ ನಟಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಮಗ್ರ ತನಿಖೆ ಮಾಡುವಂತೆ ಮನವಿ ಸಲ್ಲಿಸಿದರು.
ನಾಪೋಕ್ಲು ಸೆ.5 NEWS DESK : ನಾಪೋಕ್ಲು ಗ್ರಾಮ ಪಂಚಾಯಿತಿಗೆ ಒಳಪಟ್ಟ ಚೆರಿಯಪರಂಬು-ಕಲ್ಲುಮೊಟ್ಟೆ ಸಂಪರ್ಕ ರಸ್ತೆ ದುರಸ್ತಿಗೆ ಚಾಲನೆ ದೊರೆಯಿತು. ಚೆರಿಯಪರಂಬು- ಕಲ್ಲು ಮೊಟ್ಟೆಯ ಸಂಪರ್ಕ ರಸ್ತೆಯು ಹಲವು ವರ್ಷಗಳಿಂದ ಹದಗೆಟ್ಟಿತ್ತು.ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ವಾಹನ ಚಾಲಕರು, ಆಟೋ ಚಾಲಕರು ಸಂಕಷ್ಟ ಅನುಭವಿಸುವಂತಾಗಿದ್ದು, ಈ ಬಗ್ಗೆ ಅರಿತ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ರಸ್ತೆ ದುರಸ್ತಿಗೆ ರೂ.10 ಲಕ್ಷ ಅನುದಾನ ಮಂಜೂರು ಮಾಡಿದ್ದು, ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಈ ಸಂದರ್ಭ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ನಾಪೋಕ್ಲು ವಲಯ ಅಧ್ಯಕ್ಷ ಮಾಚೇಟಿರ ಕುಶು ಕುಶಾಲಪ್ಪ, ಪಂಚಾಯಿತಿ ಸದಸ್ಯರಾದ ಟಿ.ಎ.ಮಹಮ್ಮದ್, ಕಾಂಗ್ರೆಸ್ ಮುಖಂಡರಾದ ಟಿ.ಎ.ಉಂಬಾಯಿ, ಪಿ.ಯು.ರಜಾಕ್, ಹನಿಫಾ, ಸೌಕತ್ ಝುಬೇರ್, ಹಜೀಜ್, ಫಿರು ಸಾಹೇಬ್, ಫಯಾಜ್, ಹಾಗೂ ಗ್ರಾಮಸ್ಥರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಸೆ.5 NEWS DESK : ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ (JEMS) ವಿದ್ಯಾರ್ಥಿಗಳು ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿ ಸಾಧನೆ ಮಾಡಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಬಾಲಕಿಯರ ವಿಭಾಗದಲ್ಲಿ ಪ್ರಥಮ, ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಚೆಸ್ ಪಂದ್ಯಾವಳಿಯಲ್ಲಿ ಎ.ಎನ್.ಬೃಂದಾ, ಕೆ. ಆರ್.ಬಿನೀಷ್, ಎ.ಎನ್.ಚಿರಾಗ್ ಚಂಗಪ್ಪ ವೀಜೆತಾರಾಗಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾಗಮಂಡಲ ಕಾವೇರಿ ಜೂನಿಯರ್ ಕಾಲೇಜಿನಲ್ಲಿ ನಡೆದ ಪ್ರೌಢ ಶಾಲಾ ವಿಭಾಗ ಮಟ್ಟದ ಬಾಲಕರ ಹಾಕಿ ಪಂದ್ಯಾವಳಿಯಲ್ಲಿ ಪ್ರಥಮ, ಹ್ಯಾಂಡ್ ಬಾಲ್ ನಲ್ಲಿ ದ್ವಿತೀಯ ಹಾಗೂ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕಿಯರ ವಿಭಾಗದ ಖೋ -ಖೋ ಪಂದ್ಯಾವಳಿಯಲ್ಲಿ ದ್ವಿತೀಯ, ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಚೆಸ್ ಪಂದ್ಯಾವಳಿಯಲ್ಲಿ ಬಾಲಕಿಯರಾದ ಶಿರಿನ್ ಸೀತಮ್ಮ , ಶೀರ್ಷಾ, ವೈ.ಎಸ್.ಸ್ಪಂದನ, ಕೆ.ಪಿ.ನಿಧಿ ಮತ್ತು ಬಾಲಕರ ವಿಭಾಗದಲ್ಲಿ ಬಿ.ಯು.ಕುಶಾಲಪ್ಪ ವಿಜೇತರಾಗಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಥ್ಲೆಟಿಕ್ಸ್ ಬಾಲಕಿಯರ ವಿಭಾಗದಲ್ಲಿ…
NEWS DESK : : ಹಿಂದೂಗಳ ಹಬ್ಬಗಳಲ್ಲಿ ಶ್ರೀ ಗಣೇಶ ಚತುರ್ಥಿಗೆ ವಿಶೇಷ ಸ್ಥಾನವಿದೆ. ಶ್ರೀ ಗಣೇಶ ಚತುರ್ಥಿಯ ದಿನದಂದು ಮತ್ತು ಈ ಹಬ್ಬದ ಇತರ ದಿನಗಳಂದು ಶ್ರೀ ಗಣೇಶತತ್ತ್ವವು ಇತರ ದಿನಗಳ ತುಲನೆಯಲ್ಲಿ 1000 ಪಟ್ಟು ಹೆಚ್ಚು ಕಾರ್ಯರತವಾಗಿರುತ್ತದೆ. ಇಂತಹ ಸಮಯದಲ್ಲಿ ಶ್ರೀ ಗಣಪತಿಯ ಉಪಾಸನೆಯನ್ನು ಮಾಡುವುದರಿಂದ ಆಧ್ಯಾತ್ಮಿಕ ಸ್ತರದಲ್ಲಿ ಗಣೇಶತತ್ತ್ವದ ಹೆಚ್ಚು ಲಾಭವಾಗುತ್ತದೆ. ಶ್ರೀ ಗಣೇಶ ಚತುರ್ಥಿಯನ್ನು ಸೆ.7 ರಂದು ಆಚರಿಸಲಿದ್ದೇವೆ. ಗಣೇಶಭಕ್ತರಿಗೆ ವಿಘ್ನಹರ್ತಾ, ಸಿದ್ಧಿದಾತಾ ಮತ್ತು ಅಷ್ಟ ದಿಕ್ಕುಗಳ ಅಧಿಪತಿಯಾದ ಶ್ರೀ ಗಣೇಶನ ಭಾವಪೂರ್ಣ ಪೂಜೆಯನ್ನು ಮಾಡಿ ಅವನ ಆಶೀರ್ವಾದವನ್ನು ಪಡೆಯುವ ಹಂಬಲ ಸದಾ ಇರುತ್ತದೆ. ‘ಗಣೇಶಭಕ್ತರು ಗಣೇಶಪೂಜೆಯನ್ನು ಭಾವಪೂರ್ಣವಾಗಿ ಮಾಡುವಂತಾಗಲಿ, ಮತ್ತು ಅವರ ಮೇಲೆ ಗಣಪತಿಯ ಕೃಪೆಯಾಗಲಿ’ ಎಂಬ ಉದ್ದೇಶದಿಂದ ಶ್ರೀ ಗಣೇಶ ಚತುರ್ಥಿಯನ್ನು ಶಾಸ್ತ್ರೀಯವಾಗಿ ಹೇಗೆ ಆಚರಿಸಬೇಕು ಎಂಬ ಮಾರ್ಗದರ್ಶನವನ್ನು ಮುಂದಿನ ಲೇಖನದ ಮೂಲಕ ನೀಡಲಾಗಿದೆ. ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ಮೂರ್ತಿಯನ್ನು ತಯಾರಿಸಬೇಕು ಎಂಬ ಶಾಸ್ತ್ರವಿಧಿಯಿದೆ: ಪಾರ್ವತಿಯು ತಯಾರಿಸಿದ ಶ್ರೀ ಗಣೇಶನು ಮಹಾಗಣಪತಿಯ ಅವತಾರವಾಗಿದ್ದಾನೆ.…
ಮಡಿಕೇರಿ ಸೆ.5 NEWS DESK : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 59ನೇ ಪುಣ್ಯಸ್ಮರಣೆ ಸೆ.7 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಹಾಗೂ ಸ್ವಾ.ಲೀ ಅಜ್ಜಮಾಡ ದೇವಯ್ಯ ಟ್ರಸ್ಟ್‌ನ ಸಹಯೋಗದಲ್ಲಿ ಬೆಳಗ್ಗೆ 11 ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ…
ಮಡಿಕೇರಿ ಸೆ.5 NEWS DESK : ಕೊಡಗು ಜಿಲ್ಲೆಯ ಅಮ್ಮತ್ತಿ ಒಂಟಿಯಂಗಡಿ ಹಚ್ಚಿನಾಡು ಗ್ರಾಮದ ಜಿಲ್ಲಂಡ ಸಿ.ತನು ಭಾರತೀಯ ಸೇನೆಯಲ್ಲಿ ಸುಬೇಧಾರ್ ಆಗಿ ಬಡ್ತಿ ಹೊಂದಿದ್ದಾರೆ. ಭಾರತೀಯ ಸೇನೆಯ ಎಎಂಸಿಯಲ್ಲಿ ಕಳೆದ 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ತನು, ದೆಹಲಿ, ಕೊಲ್ಕತ್ತಾ, ಜಮ್ಮು ಮಾತ್ರವಲ್ಲದೆ, ಶ್ರೀಲಂಕಾ ಹಾಗೂ ದಕ್ಷಿಣ ಆಫ್ರಿಕಾದಲ್ಲಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಇದೀಗ ಸುಬೇಧಾರ್ ಆಗಿ ಬಡ್ತಿ ಹೊಂದಿ ಮಹಾರಾಷ್ಟ್ರದ ಪುಣೆಯಲ್ಲಿ ಸೇವೆಯಲ್ಲಿದ್ದಾರೆ. ಜಿಲ್ಲಂಡ ಸಿ.ತನು ಅವರ ತಂದೆ ಹಚ್ಚಿನಾಡು ಗ್ರಾಮದ ಜಿಲ್ಲಂಡ ಸಿ.ಚಂಗಪ್ಪ, ತಾಯಿ ಸರೋಜ, ಪತ್ನಿ ಗಾಯತ್ರಿ, ಇಬ್ಬರು ಪುತ್ರರಾದ ಹರನ್ ಕಾಳಪ್ಪ ಹಾಗೂ ಸೋಹನ್ ಮಾದಪ್ಪ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ತನು ಅವರು ಕೊಡಗಿನ ನಟಿ, ನಿರ್ಮಾಪಕಿ, ನಿರ್ದೇಶಕಿ, ಬರಹಗಾರ್ತಿ ಈರಮಂಡ ಹರಿಣಿ ವಿಜಯ್ ಅವರ ಸಹೋದರರಾಗಿದ್ದಾರೆ.






