ಮಡಿಕೇರಿ ನ.13 NEWS DESK : ಮಡಿಕೇರಿ ತಾಲೂಕು ಸವಿತಾ ಸಮಾಜದ 2023-2024 ನೇ ಸಾಲಿನ ವಾರ್ಷಿಕ ಮಹಾಸಭೆ ನಗರದ ಬಾಲ ಭವನದಲ್ಲಿ ನಡೆಯಿತು. ಸಭೆಯನ್ನು ವಾರ್ಷಿಕ ಸಭೆಯ ನಡಾವಳಿಯಂತೆ ವಾರ್ಷಿಕ ವರದಿಯನ್ನು ಅವಿನಾಶ್ ಬೊಟ್ಲಪ್ಪ ಮಂಡಿಸಿದರು. ವಾರ್ಷಿಕ ಲೆಕ್ಕಪತ್ರವನ್ನು ಅಧ್ಯಕ್ಷ ಎಂ.ಟಿ ಮಧು ಮಂಡಿಸಿದರು. ನಂತರ ಕಾರ್ಯಕಾರಿ ಸಮಿತಿಯ ಬದಲಾವಣೆ ಹಾಗೂ ಪುನರಾಯ್ಕೆ ಮಾಡಲಾಯಿತು. ಅದರಂತೆ ಮುಂದಿನ ಸಾಲಿನ ಅಧ್ಯಕ್ಷರಾಗಿ ಎಮ್.ಟಿ.ಮಧು ಪುನರಾಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಕಿರಣ್ ಚೆಟ್ಟಿಮಾನಿ, ಕಾರ್ಯದರ್ಶಿಯಾಗಿ ಎಂ.ಜಿ.ಚರಣ್ ಸಹ ಕಾರ್ಯದರ್ಶಿಯಾಗಿ ನಿಶಾಂತ್, ಖಜಾಂಚಿಯಾಗಿ ಅವಿನಾಶ್ ಬೊಟ್ಲಪ್ಪ ಆಯ್ಕೆಯಾದರು. ಮಹಿಳಾ ಅಧ್ಯಕ್ಷರಾಗಿ ಆರ್.ಬಿ.ವಸಂತಿ, ಉಪಾಧ್ಯಕ್ಷರಾಗಿ ಲತಾ ವಿಜಯ ಭಂಡಾರಿ ಕಾರ್ಯದರ್ಶಿಯಾಗಿ ಆರ್.ನಂದಿತ, ಸಹ ಕಾರ್ಯದರ್ಶಿ ಅಶ್ವಿನಿ ಮಧು, ನಗರ ಅಧ್ಯಕ್ಷರಾಗಿ ಟಿ.ಜಿ.ಸಂದೇಶ್. ಕ್ರೀಡಾ ಅಧ್ಯಕ್ಷರಾಗಿ ಮಧು ಚೆಟ್ಟಿಮಾನಿ ಹಾಗೂ ಗೌರವಾಧ್ಯಕ್ಷರಾಗಿ ಸುಂದರಮ್ಮ ಮತ್ತು ಈರಪ್ಪ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷ ದೊರೇಶ್ ಉಪಸ್ಥಿತರಿದ್ದರು ಹಾಗೂ ಎಲ್ಲಾ ಸದಸ್ಯರುಗಳು ಹಾಗೂ ಸವಿತಾ ಸಮಾಜದ ಬಂಧುಗಳು ಕಾರ್ಯಕ್ರಮದಲ್ಲಿ…
ಲೇಖಕ: admin
ಸುಂಟಿಕೊಪ್ಪ ನ.13 NEWS DESK : ಕಳೆದ ಕೆಲವು ತಿಂಗಳುಗಳಿಂದ ದುರಸ್ತಿಗೀಡಾಗಿ ಮೂಲೆಗುಂಪಾಗಿದ್ದ ಸುಂಟಿಕೊಪ್ಪ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ದುರಸ್ತಿಗೊಂಡು ಸಾರ್ವಜನಿಕ ಸೇವೆಗೆ ಮತ್ತೆ ಲಭ್ಯವಾಗಿದೆ. ಕಳೆದ ಕೆಲವು ತಿಂಗಳುಗಳಿಂದ ವಾಹನವು ಸಾರ್ವಜನಿಕರ ಸೇವೆಗೆ ದೊರೆಯದೆ ತೀವ್ರ ಸಂಕಷ್ಟವನ್ನು ಎದುರಿಸುವಂತಾಗಿತ್ತು. ಈ ಬಗ್ಗೆ ಸೋಶಿಯಲ್ ಡೆಮೊಕ್ರಿಟಿಕ್ ಟ್ರೇಡ್ ಯೂನಿಯನ್ ಸಂಘಟನೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ದೂರು ಸಲ್ಲಿಸಿತ್ತು. ಅಧಿಕಾರಿಗಳು ಸುಂಟಿಕೊಪ್ಪ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ಆ್ಯಂಬುಲೆನ್ಸ್ ವಾಹನದ ದುರಸ್ತಿ ಕಾರ್ಯಕ್ಕೆ ಕ್ರಮ ಕೈಗೊಂಡಿದ್ದಾರೆ.ಅಧಿಕಾರಿಯ ಕಾರ್ಯವನ್ನು ಯೂನಿಯನ್ ಜಿಲ್ಲಾಧ್ಯಕ್ಷ ಅಣ್ಣಾ ಶರೀಫ್, ಸಂಘಟನಾ ಕಾರ್ಯದರ್ಶಿ ಕೆ.ಎ.ಲತೀಫ್ ಶ್ಲಾಘಿಸಿದ್ದಾರೆ. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಹಲವು ಸಮಸ್ಯೆಗಳ ಕುರಿತು ನ.6ರಂದು ಎಸ್‌ಡಿಟಿಯು ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯನ್ನು ಭೇಟಿ ಮಾಡಿ ಗಮನ ಸೆಳೆಯಲಾಗಿತ್ತು. ಸಮಸ್ಯೆ ಕುರಿತು ದೂರು ಸಲ್ಲಿಸಿದ ಜೊತೆಗೆ ಸೋಶಿಯಲ್ ಡೆಮೊಕ್ರಿಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಪ್ರತಿಭಟನೆ ನಡೆಸುವ ಬಗ್ಗೆ ಎಚ್ಚರಿಸಲಾಗಿತ್ತು.…
ಮಡಿಕೇರಿ NEWS DESK ನ.12 : ಮೈಸೂರು ಕಾಫಿ ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸುಮಾರು 24 ವರ್ಷಗಳ ನಂತರ ಆಡಳಿತ ಮಂಡಳಿಗೆ ಚುನಾವಣೆ ನಡೆಯಿತು. ಉಪಾದ್ಯಕ್ಷರಾಗಿ ಪ್ರಭುದೇವ್ ಆಯ್ಕೆಯಾದರು. ಅಧಿಕಾರ ಸ್ವೀಕರಿಸಿ ಮತನಾಡಿದ ಎ.ಎಸ್.ಪೊನ್ನಣ್ಣ ಅವರು, ಮೈಸೂರು ಕಾಫಿ ಸಂಸ್ಕರಣ ಕೇಂದ್ರವನ್ನು ಪುನಶ್ಚೇತನಗೊಳಿಸಲು ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು. ನಿರ್ದೇಶಕರು ಹಾಗೂ ಆಡಳಿತ ಮಂಡಳಿಯ ಸದಸ್ಯರ ಬೆಂಬಲ ಕೋರಿದರು. ಸಭೆಯಲ್ಲಿ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ, ಅಡಳಿತಾಧಿಕಾರಿ ರಘು, ಚುನಾವಣಾಧಿಕಾರಿ ರವಿಶಂಕರ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಮಡಿಕೇರಿ NEWS DESK ನ.12: ಕುಶಾಲನಗರ ಸಾಮಿಲ್ ಮಾಲೀಕರ ಸಂಘದ ನೂತನ ಅಧ್ಯಕ್ಷರಾಗಿ ಕರ್ನಾಟಕ ಸಾಮಿಲ್ ಮಾಲೀಕ ಎಂ.ಎಚ್.ಮಹಮ್ಮದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಶಾಲನಗರ ಸಮೀಪದ ಗಂಧದ ಕೋಟೆ ಬಳಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಎಂ.ಎಚ್. ಮಹಮ್ಮದ್, ಉಪಾಧ್ಯಕ್ಷರಾಗಿ ಬಿ.ಪಿ. ವಿಜಯ, ಎಂ.ಎಂ.ಶಾಹಿರ್, ಕಾರ್ಯದರ್ಶಿಯಾಗಿ ಕೆ.ಲೋಹಿತ್, ಖಜಾಂಚಿಯಾಗಿ ರಮೇಶ್ ಆಯ್ಕೆಗೊಂಡರು. ಕುಶಾಲನಗರ ವ್ಯಾಪ್ತಿಯ ಎಲ್ಲಾ ಸಾಮಿಲ್ ಮಾಲೀಕರನ್ನು ಸಂಘದ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ನೂತನ ಅಧ್ಯಕ್ಷ ಎಂ.ಎಚ್.ಮಹಮ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ NEWS DESK ನ.12 : ಆದಿವಾಸಿ ಸಮುದಾಯದ ಗಣೇಶ್ ಹಾಗೂ ರಮೇಶ್ ಕುಟುಂಬದವರು ತಾವು ತಂದಿದ್ದ ಜೇನುತುಪ್ಪ ಮತ್ತು ಬೆಟ್ಟದ ನೆಲ್ಲಿಕಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿ, ಸತ್ಕರಿಸಿದರು. ಜೇನುತುಪ್ಪದಲ್ಲಿ ಕಾಡುಗೆಣಸು ಅದ್ದಿ ಸವಿದ ಮುಖ್ಯಮಂತ್ರಿಗಳು ಬಳಿಕ 500 ರೂಪಾಯಿ ನೀಡಿ ಜೇನುತುಪ್ಪ ಖರೀದಿಸಿದರು.
ಮಡಿಕೇರಿ NEWS DESK ನ.12 : ಕೋಲಾರದಲ್ಲಿ ನಡೆದ ಹದಿನೇಳು ವರ್ಷದೊಳಗಿನ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ 4*400 ರಿಲೇ ಸ್ಪರ್ಧೆಯಲ್ಲಿ ಕೂಡಿಗೆ ಕ್ರೀಡಾಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಭವಿಷ್ಯ ಡಿ.ಕೆ ನೇತೃತ್ವದ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದೆ. ನ.26ರಿಂದ ಡಿ.1 ರವರೆಗೆ ಉತ್ತರಪ್ರದೇಶದ ಲಕ್ನೋದಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆ ನಡೆಯಲಿದೆ. ದೈಹಿಕ ಶಿಕ್ಷಕ ಮಂಜುನಾಥ್ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಭವಿಷ್ಯ ಡಿ.ಕೆ ಮುತ್ತಾರುಮುಡಿಯ ದೇರಾಜೆ ಮನೆಯ ಕಿರಣ್ ಹಾಗೂ ಗೀತಾ ದಂಪತಿಯ ಪುತ್ರಿ. ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಭವಿಷ್ಯ ಡಿ.ಕೆ ಹಾಗೂ ತಂಡವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸನ್ಮಾನಿಸಿ, ಅಭಿನಂದಿಸಿದರು. ರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸುವಂತೆ ಶುಭ ಹಾರೈಸಿದರು. ಈ ಸಂಧರ್ಭ ಫೀ.ಮಾ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇಜರ್ ಡಾ.ರಾಘವ ಬಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೋಹನ್ ವಿ.ಜಿ ಗೌಡ, ಪ್ರಮುಖರಾದ ಕವನ್ ಕೊತ್ತೋಳಿ, ದಿನೇಶ್ ಶೆಟ್ಟಿ, ಹರಿಪ್ರಸಾದ್ ಕೋಚನ ಉಪಸ್ಥಿತರಿದ್ದರು.
ಮಡಿಕೇರಿ ನ.12 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ನವೆಂಬರ್, 13 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಶಾಲನಗರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಸೋಮವಾರಪೇಟೆ ನ.12 NEWS DESK : ಸೋಮವಾರಪೇಟೆ ಪಟ್ಟಣ ಪಂಚಾಯಿತಿಯ ಗ್ರಾಮಸಭೆಯು ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಬಿಳಕಿಕೊಪ್ಪ ಹರೀಶ್, ದಾಮೋಧರ್, ಕಿಬ್ಬೆಟ್ಟ ಧರ್ಮ, ಚೌಡ್ಲು ಸತೀಶ್ ಮಾತನಾಡಿ, ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಂದ ದೂರವಾಗುತ್ತಿದೆ. ಸೂಕ್ತ ತಜ್ಞವೈದ್ಯರಿಲ್ಲದೆ ವರ್ಷಗಳೇ ಕಳೆದಿವೆ. ಬಹುತೇಕ ವೈದ್ಯರು ಮೆಡಿಕಲ್‍ಶಾಪ್‍ಗಳಿಗೆ ಚೀಟಿ ಬರೆಯುತ್ತಿದ್ದಾರೆ. ಕೆಲ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ಇನ್ನು ಕೆಲವರು ಸರ್ಕಾರಿ ಆಸ್ಪತ್ರೆಗೆ ಬಂದ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ಬಗ್ಗೆ ನಿರ್ಣಯ ಮಾಡಿ, ಆರೋಗ್ಯ ಸಚಿವರು, ಡಿಹೆಚ್‍ಒ, ಜಿಲ್ಲಾಧಿಕಾರಿಗಳಿಗೆ ಕಳುಹಿಸಿ ಕ್ರಮಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಪಿಡಿಒ ರವಿ ನಾಯರ್ ಸಭೆಗೆ ಭರವಸೆ ನೀಡಿದರು. ಅಕ್ರಮ ಮದ್ಯ ಮಾರಾಟದ ಮಾಹಿತಿ ಪಡೆದು ಹಲವು ಕಡೆ ದಾಳಿ ಮಾಡಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕರು ಮಾಹಿತಿ ನೀಡಿದರೆ ಮಾಹಿತಿದಾರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಅಬಕಾರಿ ಉಪನಿರೀಕ್ಷಕರಾದ ಸುಮತಿ ಹೇಳಿದರು. ಬಿಳಿಕಿಕೊಪ್ಪದಲ್ಲಿ ವಿದ್ಯುತ್…
ಮಡಿಕೇರಿ ನ.8 NEWS DESK : ಕಾನೂನು ಸೇವಾ ಪ್ರಾಧಿಕಾರ ಎಂದರೆ ಪ್ರತಿಯೊಬ್ಬರಿಗೂ ಎಲ್ಲಾ ರೀತಿಯ ಉಚಿತ ಕಾನೂನು ನೆರವು ಮತ್ತು ಅರಿವನ್ನು ನೀಡುವುದು. ಲೋಕ ಅದಾಲತ್ ಮೂಲಕ ರಾಜಿ ಸಂಧಾನ ಏರ್ಪಡಿಸಿ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವುದು ಉದ್ದೇಶವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಹೇಳಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನಿನ ಅಜ್ಞಾನಕ್ಕೆ ಕ್ಷಮೆ ಇಲ್ಲ. ಆದ್ದರಿಂದ ಕಾನೂನಿನ ಜ್ಞಾನ ಎಲ್ಲರಿಗೂ ಅವಶ್ಯಕ. ಹೆಣ್ಣು ಮಕ್ಕಳು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು. ಶಿಕ್ಷಣದೊಂದಿಗೆ ಮಾನವೀಯ ಮೌಲ್ಯ ಮುಖ್ಯ ಎಂದು ಪ್ರತಿಪಾಧಿಸಿದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ಕೆ.ಸರಸ್ವತಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ನಾವುಗಳು ಶಿಸ್ತುಬದ್ಧ…
ಮಡಿಕೇರಿ ನ.12 NEWS DESK : ತಲಕಾವೇರಿಯಲ್ಲಿ ನ.16 ರಂದು ಕಿರು ಸಂಕ್ರಮಣ(ವೃಶ್ಚಿಕ ಸಂಕ್ರಮಣ) ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.






