ಕುಶಾಲನಗರ ಮೇ 11 : ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ರ ಕೊಡಗು ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಚಿಕ್ಕತ್ತೂರಿನ ಖಾಸಗಿ ರೆಸಾರ್ಟ್ ಸಭಾಂಗಣದಲ್ಲಿ ನಡೆಯಿತು. ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳು ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತದೆ. ಜಿಲ್ಲಾಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದವರೆಗೆ ಪ್ರತಿ ಹಂತದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಕಾರ್ಯಕರ್ತರ ವ್ಯಕ್ತಿತ್ವ ರೂಪಿಸಲು, ಶಿಸ್ತು ಮೂಡಿಸಲು ಜವಬ್ದಾರಿಯುತ ಸ್ಥಾನದಲ್ಲಿರುವವರ ಮೂಲಕ ಸಹಕಾರಿಯಾಗಲಿದೆ. ನಿರ್ದಿಷ್ಟ ಗುರಿ ಹೊಂದಿರುವ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ. ಕೇವಲ ಅಧಿಕಾರ ಗಳಿಸುವುದು ಮಾತ್ರ ನಮ್ಮ ಉದ್ದೇಶವಲ್ಲ. ಉತ್ತಮ ಸೇವೆ ಸಲ್ಲಿಸಲು ಅಧಿಕಾರ ನಮಗೆ ಒಂದು ಸಾಧನವಷ್ಟೆ. ಪಕ್ಷದ ಮೂಲ ತತ್ವ ಸಿದ್ದಾಂತ, ಪರಂಪರೆ ಯನ್ನು ಇಂದಿನ ಆಧುನಿಕ ಕಾಲಘಟ್ಟದ ಕಾರ್ಯಕರ್ತರಿಗೆ ಸ್ಮರಿಸಿ ಪಕ್ಷದೊಳಗೆ ಯಾವ ರೀತಿ ಕಾರ್ಯನಿರ್ವಹಿಸಬೇಕು, ಜನರಿಗೆ ಹೇಗೆ ಸೇವೆ ಸಲ್ಲಿಸಬೇಕು ಎಂಬುದನ್ನು ತಿಳಿಸಲು ಪ್ರಶಿಕ್ಷಣ ಕಾರ್ಯಕ್ರಮದ ಮೂಲಕ…
ಲೇಖಕ: admin
ಮಡಿಕೇರಿ NEWS DESK ಮೇ 10 : ಐಸಿಎಸ್‌ಇ 2025 – 26 ರ 10 ನೇ ತರಗತಿ ಪರೀಕ್ಷೆಯಲ್ಲಿ ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಪಿ.ಹೆಚ್.ಅಧೃತ್ ಶರ್ಮ ಶೇ.98.20 ಫಲಿತಾಂಶ ಗಳಿಸುವ ಮೂಲಕ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲ ಗ್ರಾಮದ ಪಿ.ಎನ್.ಹರಿಶಂಕರ್ ಪ್ರಸಾದ್ ಹಾಗೂ ಡಾ.ವಿಜಯಲತಾ ಸಿ. ದಂಪತಿಯ ಪುತ್ರ.
ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ ನಡೆದ ಮೊದಲ ಇಂಡೋ ನೇಪಾಳ ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ಇಂಟರ್ ಗೆಲ್ ಫೈಟಿಂಗ್ ಸಿಸ್ಟಮ್ ಅಸೋಸಿಯೇಷನ್ ನ ಕೊಡಗು ಜಿಲ್ಲೆಯ ಐವರು ವಿದ್ಯಾರ್ಥಿಗಳು ಪದಕ ಗೆದ್ದು ಸಾಧನೆ ಮಾಡಿದ್ದಾರೆ. ಮಿಥೇಶ್ ಜೆ. ಚಿನ್ನ, ಯಶಸ್ ಪಿ.ಆರ್, ಎಸ್.ಎಸ್.ಪಶುಪತಿ ಅರಸ್, ಯಶಸ್ಮಿತ್ ಗೌಡ ಬೆಳ್ಳಿ ಹಾಗೂ ಪ್ರಜ್ವಲ್ ಪ್ರದೀಪ್ ರಾಥೋಡ್ ಕಂಚು ಗೆದ್ದಿದ್ದಾರೆ. ಕರ್ನಾಟಕ ಇಂಟರ್ ಗೆಲ್ ಫೈಟಿಂಗ್ ಸಿಸ್ಟಮ್ ಅಸೋಸಿಯೇಷನ್ ನ ಅಧ್ಯಕ್ಷ ಸುದರ್ಶನ್ ಎನ್.ಸಿ ಹಾಗೂ ಪ್ರಧಾನ ಕಾರ್ಯದರ್ಶಿ ಪಲಂಗೋಟು ಯಶಸ್ ಪಿ.ಆರ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ.
ಮಡಿಕೇರಿ ಮೇ 9 NEWS DESK : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯ ವತಿಯಿಂದ 2026 ರ ಜುಲೈ, 01 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕುಗಳು ನಮ್ಮ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವುದರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ, 11 ರಿಂದ ಅರ್ಜಿ ಸಲ್ಲಿಸಬಹುದು. ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500 ಶಿಷ್ಯವೇತನ ಮತ್ತು ವಿಶೇಷ ನಿರುದ್ಯೋಗ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.600 ಶಿಷ್ಯವೇತನ ನೀಡಲಾಗುವುದು ಹಾಗೂ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ವ್ಯವಸ್ಥೆ ಇರುತ್ತದೆ. ಹಾಗೆಯೇ ದೂರಶಿಕ್ಷಣ“ಡಿಪ್ಲೊಮಾ…
ಮಡಿಕೇರಿ ಮೇ 9 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ, 12 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಮಿನಿ “ಉದ್ಯೋಗಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಪಿರಾಮಲ್ ಪೈನಾನ್ಸ್ ಲಿಮಿಟೆಡ್ ಮೈಸೂರು, ಕಲ್ಯಾಣಿ ಮೋಟಾರ್ಸ್ ಕಾರ್ ಶೋ ರೂಮ್, ಮಡಿಕೇರಿ, ಇನ್‍ಸ್ಟಂಟ್ ಐಟಿ ಟೆಕ್ನಾಲಜಿ ಮೈಸೂರು, ಹ್ಯೂಂಡಾಯಿ ಕಾರ್ ಶೋ ರೂಮ್, ಮಡಿಕೇರಿ, ಇವೊಲೋಬ್ಯಾಕ್ ರೆಸಾರ್ಟ್, ಮಡಿಕೇರಿ, ಮುತ್ತೂಟ್ ಮನಿ ಪೈನಾನ್ಸ್, ಮೈಸೂರು ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ಮಿನಿ ಉದ್ಯೋಗಮೇಳದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ., ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ…
ಮಡಿಕೇರಿ ಮೇ 9 NEWS DESK : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಯುಆರ್‍ಡಬ್ಲ್ಯು/ವಿಆರ್‍ಡಬ್ಲ್ಯು ಹುದ್ದೆಗಳು ಖಾಲಿ ಇದ್ದು ಬೌದ್ಧಿಕ ವಿಕಲತೆ ಹಾಗೂ ಮಾನಸಿಕ ಅಸ್ವಸ್ಥರನ್ನು ಹೊರತುಪಡಿಸಿ ಅರ್ಜಿ ಸಲ್ಲಿಸಬಯಸುವವರು ಮೇ, 30 ರೊಳಗೆ ಅರ್ಜಿ ಸಲ್ಲಿಸಬಹುದು. ನಗರದ ಪುನರ್ವಸತಿ ಕಾರ್ಯಕರ್ತರು (ಯುಆರ್‍ಡಬ್ಲ್ಯು) ಹುದ್ದೆಗೆ ಮಾಸಿಕ ಗೌರವಧನ ರೂ.10 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ, ಅನುತ್ತೀರ್ಣ, ವಿಕಲತೆಯ ಪ್ರಮಾಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ವಿಆರ್‍ಡಬ್ಲ್ಯು) ಹುದ್ದೆಗೆ ಮಾಸಿಕ ಗೌರವಧನ 10 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ, ವಿಕಲತೆಯ ಪ್ರಮಾಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಯುಆರ್‍ಡಬ್ಲ್ಯು ಹುದ್ದೆಗಳು ನಗರಸಭೆ ಮಡಿಕೇರಿ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಹಾಗೂ ವಿಆರ್‍ಡಬ್ಲ್ಯು ಹುದ್ದೆಗಳು ಮಡಿಕೇರಿ ತಾಲ್ಲೂಕಿನ ಹಾಕತ್ತೂರು, ಕಾಂತೂರು ಮುರ್ನಾಡು, ಸೋಮವಾರಪೇಟೆ…
ಮಡಿಕೇರಿ ಮೇ 9 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮೇ, 10 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮೈಸೂರು, ಮೇ 9 NEWS DESK : ಮೈಸೂರಿನ ಪಾರಂಪರಿಕ ಕಟ್ಟಡಗಳಾಗಿರುವ ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್ ಕಟ್ಟಡದ ಸಂರಕ್ಷಣೆ ಹಾಗೂ ನವೀಕರಣಕ್ಕೆ ಅನುದಾನವನ್ನು ಶೀಘ್ರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ. ಮೈಸೂರಿನ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಣೆ ಮಾಡುವುದೇ ನಮ್ಮ ಮುಖ್ಯ ಧ್ಯೇಯ. ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ ಎಂದು ಸಂಸದರು ಹೇಳಿದ್ದಾರೆ. ಮೈಸೂರಿನ ಐತಿಹಾಸಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್ ಕಟ್ಟಡದ ಸಂರಕ್ಷಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 4 ಮೇ 2026 ರಂದು ನೀಡಿದ ತೀರ್ಪು ಅತ್ಯಂತ ಮಹತ್ವದ್ದಾಗಿದೆ ಎಂದು ವಿವರಿಸಿದ್ದಾರೆ. :: ಸುಪ್ರೀಂ ಕೋರ್ಟ್ ತೀರ್ಪು ಮನವರಿಕೆ :: ಕಟ್ಟಡ ಕೆಡವಿ ಪುನರ್ ನಿರ್ಮಾಣದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. 19ನೇ ಶತಮಾನದ ಈ ಐತಿಹಾಸಿಕ ಕಟ್ಟಡವನ್ನು ಸಂರಕ್ಷಿಸಿ, ನವೀಕರಿಸಲು ಆದೇಶಿಸಿದೆ ಎಂದು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದಿದ್ದಾರೆ. ::…
ಕರ್ಕಾಳ ಮೇ 9 NEWS DESK : ರಾಷ್ಟ್ರೀಯ ರಕ್ಷಣಾ ಪಡೆಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ 2026ರ ಎನ್ ಡಿ ಎ-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ಸುಕ್ಷಿತ್ ಗಿರೀಶ್ ಗೌಡ, ಸಂವಿತ್ ಅಮಿತ್ ಗೋಕರ್ಣ, ಅಭಿಷೇಕ್ ಜೋಶಿ ಮತ್ತು ನಾಗದೇವ್‍ಎಂ.ಜಿ. ತೇರ್ಗಡೆಗೊಂಡು ಮುಂದಿನ ದೈಹಿಕ ಸಾಮಥ್ರ್ಯ ಪರೀಕ್ಷೆಗೆ ಆಯ್ಕೆಗೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ,ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಹಾಗೂ ಪರೀಕ್ಷಾ ಸಂಯೋಜಕರಾದ ಸುಮಂತ್ ದಾಮ್ಲೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಮಡಿಕೇರಿ ಮೇ 9 NEWS DESK : ವಿವಿಧತೆಯಲ್ಲಿ ಏಕತೆಯನ್ನು ಸಾರುವ ನಮ್ಮ ದೇಶದಲ್ಲಿ ಬಹುಸಂಸ್ಕೃತಿ ಮತ್ತು ಸೌಹಾರ್ದತೆಯೇ ನಮ್ಮ ಅಸ್ಮಿತೆ, ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಮತ್ತು ಬೆಳವಣಿಗೆಗೆ ಪೂರಕ” ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ನುಡಿದರು. ಅವರು ಅಕಾಡೆಮಿಯ ಸಹಯೋಗದೊಂದಿಗೆ ಬಂಟ್ವಾಳ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆದ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಹು ಸಂಸ್ಕೃತಿ ಉತ್ಸವದ ಅಡಿಯಲ್ಲಿ ಅರೆಭಾಷಿಕರು ಕಡಿಮೆ ಇರುವಂತಹ ಸ್ಥಳದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಂಡು ಭಾಷೆಯ ಸೊಬಗು, ಸೊಗಡು ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ಕಾರ್ಯ ಶ್ಲಾಘನೀಯ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ -2026 ಇದರ ಅಧ್ಯಕ್ಷರಾಗಿರುವ ವಕೀಲ ಉಮೇಶ್ ಕುಮಾರ್ ವೈ ಅವರು ಹಲವು ಭಾಷೆಗಳು ಹಲವು ಸಂಸ್ಕೃತಿಗಳು ನಮ್ಮ ದೇಶದ ವಿಶಿಷ್ಟತೆ. ಪ್ರಪಂಚದ…






