ಲೇಖಕ: admin

ನಾಪೋಕ್ಲು ಸೆ.20 NEWS DESK : ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಾಪೋಕ್ಲುವಿನ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗವ ಮೂಲಕ ಸಾಧನೆ ಮಾಡಿದ್ದಾರೆ. ಮೂರ್ನಾಡು ಜ್ಞಾನ ಜ್ಯೋತಿ ಶಾಲೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಾಪೋಕ್ಲುವಿನ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಪ್ರೌಢ ಶಾಲಾ ಬಾಲಕರ ವಿಭಾಗದಲ್ಲಿ ಕಬಡ್ಡಿ ಮತ್ತು ಖೋ-ಖೋ ಪ್ರಥಮ, ಬಾಲಕಿಯರ ವಿಭಾಗದಲ್ಲಿ ಖೋ-ಖೋ ದ್ವಿತೀಯ,ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಖೋ-ಖೋ ಪ್ರಥಮ ಸ್ಥಾನ ಪಡೆದಿದ್ದಾರೆ. ಬಾಲಕರ ವಿಭಾಗದ ಅಥೆಟಿಕ್ಸ್ 400 ಮೀ. ಓಟದಲ್ಲಿ ವಚನ್ ಪ್ರಥಮ, 1500 ಮೀ. ಓಟದಲ್ಲಿ ವಿ.ಕೆ.ವಿಕಾಸ್ ಪ್ರಥಮ, 1500 ಮೀ. ಓಟದ ಸ್ಪರ್ಧೆಯಲ್ಲಿ ಪಿ.ಯು.ಲಿತೇಶ್ ದ್ವಿತೀಯ, ಉದ್ದ ಜಿಗಿತ ಮತ್ತು ತ್ರಿವಿಧ ಜಿಗಿತದಲ್ಲಿ ಕೆ.ಎಂ.ಖುಶಿ ಪ್ರಥಮ, 4*400 ಮೀ. ರಿಲೇ ಬಾಲಕರ ತಂಡ ಪ್ರಥಮ, 4*100 ಮೀ.ರಿಲೇ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರೌಢ ಶಾಲಾ ಅಥ್ಲೆಟಿಕ್ಸ್ ಬಾಲಕಿಯರ ವಿಭಾಗದ 800 ಮೀ. ಪ್ರೀತಿಕ ದ್ವಿತೀಯ,…

Read More

ಮಡಿಕೇರಿ ಸೆ.20 NEWS DESK : ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿರುವ ಚಿಕ್ಕತ್ತೂರು ಹಾಲು ಉತ್ಪಾದಕರ ಸಹಕಾರ ಸಂಘದ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಡಿ.ಎಸ್ ಗಣೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹವಲು ವಿಚಾರಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ, ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಮಾತನಾಡಿ, ಸಂಘವು ಈ ಸಾಲಿನಲ್ಲಿ 3.ಲಕ್ಷ ದ 2.ಸಾವಿರಗಳಷ್ಟು ನಿವ್ವಳ ಲಾಭಾಂಶ ಗಳಿಸಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಸಂಘದ ಅಭಿವೃದ್ಧಿ ಪೂರಕವಾದ ಯೋಜನೆಗಳಿಗೆ ಒಕ್ಕೂಟದ ವತಿಯಿಂದ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಒಕ್ಕೂಟದ ವಿಸ್ತಾರಣಾಧಿಕಾರಿ ವೀಣಾ ಮಾತನಾಡಿ, ಪಶುಪಾಲನೆ ಮತ್ತು ಅದಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.  ಸಂಘದ ಉಪಾಧ್ಯಕ್ಷ ಆರ್.ಕುಮಾರಸ್ವಾಮಿ, ನಿರ್ದೇಶಕರಾದ ರಾಮಣ್ಣ ರೈ, ಪುಟ್ಟೆಗೌಡ, ದೇವೆಗೌಡ, ಗುಜೇಂದ್ರ, ಪುಟ್ಟಯ್ಯ, ಅಶ್ವಿನಿ ಕುಮಾರ್, ಗೋವಿಂದ ಶೆಟ್ಟಿ, ಪುರುಷೋತ್ತಮ, ಪುಷ್ಪಲತಾ,…

Read More

ಮೈಸೂರು ಸೆ.20 NEWS DESK : ಹೆಸರಾಂತ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಶಾಸಕ ಮುನಿರತ್ನ ಅವರ ಮೇಲೆ ಮೇಲಿನ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು ತಮ್ಮನ್ನು ಭೇಟಿ ಮಾಡಿದ ಒಕ್ಕಲಿಗ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ ಎಂದರು. ಕಾನ್ ಸ್ಟಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಬಗ್ಗೆ ಮಾತನಾಡಿ ಈ ಕುರಿತು ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದರು.

Read More

ಮೈಸೂರು ಸೆ.20 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಜಂಟಿಯಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ನಡೆದ “ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶ” ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. “ಸುವರ್ಣ ಸಂಭ್ರಮ ಕರ್ನಾಟಕ-50: ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ದ ಅಂಗವಾಗಿ ಚಿಂತನಾ ಸಮಾವೇಶ ಆಯೋಜಿಸಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕನಕದಾಸ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಕಾ.ತ.ಚಿಕ್ಕಣ್ಣ, ಗ್ಯಾರಂಟಿ ಅನುಷ್ಠಾನ‌ ಸಮಿತಿ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಮುಕ್ತ ವಿವಿ‌ ಕುಲಪತಿಗಳಾದ ಪ್ರೊ.ಶರಣಪ್ಪ ವಿ.ಹಲ್ಸೆ, ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಧರಣೀದೇವಿ ಮಾಲಗತ್ತಿ, ವಿಧಾನ ಪರಿಷತ್ ಸದಸದಯರಾದ ಡಾ.ತಿಮ್ಮಯ್ಯ, ಅರ್ಧ ಶತಮಾನದಿಂದ ಕನ್ನಡದ ವಿವೇಕವನ್ನು ವಿಸ್ತರಿಸುತ್ತಿರುವ ಹಿರಿಯ ಸಾಹಿತಿಗಳು, ಬರಹಗಾರರು, ಲೇಖಕರು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ನಾನಾ ಚಳವಳಿಗಳ ಕಾರ್ಯಕರ್ತರು, ಮುಖಂಡರುಗಳು ಚಿಂತನಾ…

Read More

ನಾಪೋಕ್ಲು ಸೆ.20 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ವಿನೂತನ ಕಾರ್ಯಕ್ರಮ ಮದ್ಯವರ್ಜನ ಶಿಬಿರ ಸಾಮಾಜಿಕ ಬದಲಾವಣೆಗೆ ಸಹಕಾರಿ ಎಂದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ಮಡಿಕೇರಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಬೆಟ್ಟಗೇರಿ ವಲಯ, ತಾಲೂಕು ಸಮಿತಿಯ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಮಡಿಕೇರಿ ತಾಲೂಕು, ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಸಹಯೋಗದೊಂದಿಗೆ ಚೇರಂಬಾಣೆ ಗೌಡ ಸಮಾಜ, ಬೆಟ್ಟಗೇರಿ ವಲಯ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಬೆಟ್ಟಗೇರಿ ಗ್ರಾ.ಪಂ, ಬೇಂಗೂರು – ಚೇರಂಬಾಣೆ ಗ್ರಾ.ಪಂ, ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರ, ಭಾಗಮಂಡಲ ಆರಕ್ಷಕ ಇಲಾಖೆ, ಮಡಿಕೇರಿ ನವಜೀವನ ಸಮಿತಿ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ…

Read More

ನಾಪೋಕ್ಲು ಸೆ.20 NEWS DESK : ಚೇರಂಬಾಣೆ ಕ್ಲಸ್ಟರ್ ನ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಾ.ಪಂ ಅಧ್ಯಕ್ಷೆ ಮಿಲನ ಮುತ್ತಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವೀಣಾ ರೈ ಪ್ರಾಸ್ತವಿಕ ಮಾತನಾಡಿ, ಪ್ರತಿಭಾ ಕಾರಂಜಿಯೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗಾಗಿ ಇಲಾಖೆಯೂ ರೂಪಿಸಿದ ಒಂದು ವಿನೂತನ ಕಾರ್ಯಕ್ರಮ. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಒಂದು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು. ವಿವಿಧ ಸ್ಪರ್ಧೆಯಲ್ಲಿ ಸುಮಾರು 200 ವಿದ್ಯಾರ್ಥಿಗಳು ಭಾಗವಹಿಸಿದ್ದು, 47 ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾದರು. ಕಾರ್ಯಕ್ರಮವನ್ನು ಪಿ.ಎಸ್.ಸುಬ್ಬಯ್ಯ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪಾಕ ದೇವಸ್ಥಾನದ ಅಧ್ಯಕ್ಷರ ಎಂ.ಎನ್.ಮಾದಪ್ಪ, ವಾಹನ ಮಾಲೀಕರ ಸಂಘದ ಅಧ್ಯಕ್ಷ ರವಿ, ಮಸೀದಿ ಅಧ್ಯಕ್ಷ ಹಸೈನಾರ್, ಗ್ರಾ.ಪಂ ಸದಸ್ಯ ಬಶೀರ್, ನಿವೃತ್ತ ಹಿರಿಯ ಶಿಕ್ಷಕಿ ಬಡ್ಡಿರ ನಳಿನಿ, ಕಾಲೇಜಿನ ಪ್ರಶುಪಾಲ ಡಿ.ಪಿ.ರಾಮಕೃಷ್ಣ, ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ಲೋಕೇಶ್, ಸೇರಿದರಿದಂತೆ ಕ್ಲಸ್ಟರ್ ನ…

Read More

ವಿರಾಜಪೇಟೆ ಸೆ.20 NEWS DESK : ಚಿಕ್ಕಪೇಟೆ ಯೂನಿಯನ್ ಬ್ಯಾಂಕ್ ವತಿಯಿಂದ ಪಿಂಚಣಿದಾರರಿಗೆ ಪಿಂಚಣಿ ವ್ಯವಸ್ಥೆಯ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಬ್ಯಾಂಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಖಾ ವ್ಯವಸ್ಥಾಪಕ ಕೆ.ನಾಗರಾಜು ಪಿಂಚಣಿದಾರರಿಗೆ ಸಂಬಂಧಪಟ್ಟ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮಾಹಿತಿಯನ್ನು ಪಡೆದುಕೊಂಡರು. ಪಿಂಚಣಿದಾರರ ಪಿಂಚಣಿ ಖಾತೆಯಿಂದ ತೆರಿಗೆ ಕಟಾವು ಆಗಿರುವುದು, ಪಿಂಚಣಿದಾರರು ಮೃತಪಟ್ಟಲ್ಲಿ ಕುಟುಂಬದವರು ನೀಡಬೇಕಾದ ದಾಖಲೆಗಳ ವಿವರ, 80 ವರ್ಷ ಮೇಲ್ಪಟ್ಟ ಪಿಂಚಣಿದಾರರ ಪಿಂಚಣಿಯ ಪರಿಷ್ಕರಣೆಯ ಬಗ್ಗೆ ಮರು ಪರಿಶೀಲನೆ ಮಾಡುವುದು ಇನ್ನಿತರ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಪಿಂಚಣಿದಾರರು ಪಡೆಯುವ ಪಿಂಚಣಿ ವ್ಯವಸ್ಥೆಯಲ್ಲಿ ಏನಾದರೂ ಸಮಸ್ಯೆಯಾದಲ್ಲಿ ಕೂಡಲೇ ಮುಖ್ಯ ವ್ಯವಸ್ಥಾಪಕರ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ತಿಳಿಸಿದರು. ಪಿಂಚಣಿದಾರರು ಕೂಡ ಬ್ಯಾಂಕ್ ಸಿಬ್ಬಂದಿಗಳ ಜೊತೆಗೆ ಅನೇಕ ಸಂದೇಹಗಳನ್ನು ಬಗೆಹರಿಸಿಕೊಂಡರು. ಈ ಸಭೆಯಲ್ಲಿ ರಾಜ್ಯ, ಕೇಂದ್ರ ಸರ್ಕಾರದ 75 ಕ್ಕೂ ಅಧಿಕ ಪಿಂಚಣಿದಾರರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗಳಾದ ಜೇಮ್ಸ್ ಮೆನೇಜಸ್, ನಿರೀಕ್ಷಾ, ವೆಂಕಟೇಶ್, ಗೌರಿ, ಕಿರಣ್ ಹಾಗೂ…

Read More

ಬೆಂಗಳೂರು NEWS DESK ಸೆ.20  ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾಜಿ ಸಚಿವ ಮುನಿರತ್ನ ಅವರ ಮೇಲಿನ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್.ಐ.ಟಿ) ರಚಿಸುವಂತೆ ಮನವಿ ಸಲ್ಲಿಸಿದರು. ನಿಯೋಗದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸೇರಿದಂತೆ ಸಚಿವರು ಹಾಗೂ ಶಾಸಕರು ಇದ್ದರು.

Read More

ನಾಪೋಕ್ಲು ಸೆ.20 NEWS DESK : ಪಶು ಪಾಲನ ಇಲಾಖೆ, ಕಕ್ಕಬೆ ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಮರoದೋಡ ಗ್ರಾಮದಲ್ಲಿ ಸಾಕು ನಾಯಿಗಳಿಗೆ ಉಚಿತ ರೇಬಿಸ್ ಮುಂಜಾಗ್ರತ ಲಸಿಕೆ ನೀಡಲಾಯಿತು. ಗ್ರಾ.ಪಂ ಸದಸ್ಯ ಚೋಯಮಾಡಾಂಡ ಮೊಣ್ಣಪ್ಪ, ಪಶುವೈ ಧ್ಯಾಧಿಕಾರಿ ಡಾ.ಶಿಲ್ಪಾ ಶ್ರೀ, ಪಶು ವ್ಯೆದ್ಯ ಪರೀಕ್ಷ ಸುನಿಲ್, ಗುರುರಾಜ್ ಹಾಗೂ ಪಶು ಸಖಿ ಸುಧಾ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಶಿಬಿರದಲ್ಲಿ ಮರoದೋಡ ಗ್ರಾಮದ ಸುತ್ತಮುತ್ತಲ ಸಾರ್ವಜನಿಕರು ಆಗಮಿಸಿ ನಾಯಿಗಳಿಗೆ ರೇಬಿಸ್ ಲಸಿಕೆಯನ್ನು ಹಾಕಿಸಿದರು. ವರದಿ : ದುಗ್ಗಳ ಸದಾನಂದ. 

Read More

ಕುಶಾಲನಗರ, ಸೆ.20 NEWS DESK : ಭಾರತ್ ಸ್ಕೌಟ್ಸ್, ಗೈಡ್ಸ್ ನ ಜಿಲ್ಲಾ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕು ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‌ಏರ್ಪಡಿಸಿದ್ದ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆಯ ಸಭೆಯಲ್ಲಿ ಸಂಸ್ಥೆಯ ಕುಶಾಲನಗರ ತಾಲ್ಲೂಕು ಸ್ಥಳೀಯ ಅಧ್ಯಕ್ಷರಾಗಿ ಆಯ್ಕೆಗೊಂಡ ದೇವರಗುಂಡ  ಡಾ.ಪ್ರವೀಣ್ ಸೋಮಪ್ಪ ಅವರಿಗೆ ಸ್ಕೌಟ್ಸ್, ಗೈಡ್ಸ್ ನ ಕೊಡಗು ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಅಧಿಕಾರ ಹಸ್ತಾಂತರ ಮಾಡಿದರು. ನಂತರ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಕೆ.ಟಿ.ಬೇಬಿಮ್ಯಾಥ್ಯೂ , ವಿಶ್ವವ್ಯಾಪಿಯಾಗಿರುವ ಸ್ಕೌಟ್ ಚಳುವಳಿಯು ಒಂದು ಯುವ ಜನಾಂಗದ ಕೂಟ. ಈ ಚಳುವಳಿಯ ಉದ್ದೇಶವು ಯುವ ಪೀಳಿಗೆಯಲ್ಲಿ ಶಿಸ್ತು- ಸಂಯಮ ಹಾಗೂ ಉತ್ತಮ ನಾಯಕತ್ವ ಗುಣ ಬೆಳೆಸುವುದರೊಂದಿಗೆ ಅವರಲ್ಲಿ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆ ಹೊಂದಲು ಸಹಕಾರಿಯಾಗಿದೆ. ಈ ಚಳುವಳಿಯ ಆರಂಭ ಹಾಗೂ ಸೇವಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಬೇಬಿಮ್ಯಾಥ್ಯೂ ಅವರು, ಈ ಚಳುವಳಿಯನ್ನು 1907 ರಲ್ಲಿ…

Read More