ವಿರಾಜಪೇಟೆ ಸೆ.20 NEWS DESK : ಬೆಂಗಳೂರಿನ ಕೋರಮಂಗಲದಲ್ಲಿ ನಡೆದ ಜಡ್ಜ್ ಬಿ ಪರೀಕ್ಷೆಯಲ್ಲಿ ವಿರಾಜಪೇಟೆ ಕಾವೇರಿ ಕಾಲೇಜಿನ ವಿದ್ಯಾರ್ಥಿ ಚರೀಷ್ ಪೊನ್ನಣ್ಣ ಉತ್ತೀರ್ಣನಾಗುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ನಡೆಯುವಂತಹ ಕರಾಟೆ ಸ್ಪರ್ಧೆಗಳ ತೀರ್ಪುಗಾರನಾಗುವ ಅರ್ಹತೆಯನ್ನು ಪಡೆದುಕೊಂಡಿದ್ದಾನೆ. ಈ ಅರ್ಹತಾ ಪರೀಕ್ಷೆಯಲ್ಲಿ ಕೊಡಗಿನಿಂದ ಎಂಟು ಜನರು ಪಾಲ್ಗೊಂಡಿದ್ದು, ಇದರಲ್ಲಿ ಮೂರು ಜನ ಉತೀರ್ಣರಾಗಿದ್ದಾರೆ. ಈ ಪರೀಕ್ಷೆಯಲ್ಲಿ ಒಟ್ಟು 270 ಪ್ರಶ್ನೆಗಳಿದ್ದು, ಇದರಲ್ಲಿ 200 ಪ್ರಶ್ನೆಗಳಿಗೆ ಉತ್ತರಿಸಿ ಹಾಗೂ ಒಂದು ಪ್ರಾಯೋಗಿಕ ಸ್ಪರ್ಧೆಯ ತೀರ್ಪುಗಾರನಾಗಿ ಈ ಸಾಧನೆಯನ್ನು ಮಾಡಿದ್ದಾನೆ. ಚರೀಷ್ ವಿರಾಜಪೇಟೆಯ ಬೋಪಯ್ಯ ಹಾಗೂ ಪುಷ್ಪಾ ದಂಪತಿಯ ಪುತ್ರ. ಚಿಕ್ಕಪೇಟೆಯಲ್ಲಿನ ಸೋಮಣ್ಣ ಸಿನ್ಸೆ ಅವರ ವಿದ್ಯಾರ್ಥಿ.
ಲೇಖಕ: admin
ಪುತ್ತೂರು ಸೆ.20 NEWS DESK : ಕೇವಲ ಉದ್ಯೋಗ ಗಳಿಸುವುದಷ್ಟೇ ಕಲಿಕೆಯ ಗುರಿಯಾಗಿರಬಾರದು, ತಾನು ಗಳಿಸಿದುದರಲ್ಲಿ ಕೆಲವಂಶವನ್ನು ಸಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಾ ದೇಶದ ಉನ್ನತಿಗೂ ಕೊಡುಗೆಯನ್ನು ನೀಡಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ 2024ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪುನಶ್ಚೇತನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತಾಡಿದರು. ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆಯ ಪ್ರಜ್ಞೆಯನ್ನು ಉದ್ದೀಪನಗೊಳಿಸುವ ನಿಟ್ಟಿನಲ್ಲಿ ಕಾಲೇಜಿನಲ್ಲಿ ಮೌಲ್ಯಯುತ ಶಿಕ್ಷಣವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಕರ್ತವ್ಯ ಹಾಗೂ ಜವಾಬ್ಧಾರಿಗಳನ್ನು ಅರಿತುಕೊಂಡು ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಮಾತನಾಡಿ, ಸಮಯ ನಿರ್ವಹಣೆಯ ಕಲೆ ವಿದ್ಯಾರ್ಥಿಗಳಿಗೆ ಅತಿ ಮುಖ್ಯವಾದದ್ದು. ಸಿಕ್ಕಿದ ಸಮಯವನ್ನು ಸದುಪಯೋಗಪಡಿಸಿಕೊಂಡು ನಿಗದಿತ ಕೆಲಸಗಳನ್ನು ಪೂರೈಸಿಕೊಳ್ಳಬೇಕು ಎಂದರು. ಆಡಳಿತ ಮಂಡಳಿಯ ಇನ್ನೋರ್ವ ನಿರ್ದೇಶಕ ಸತ್ಯನಾರಾಯಣ…
ಮಡಿಕೇರಿ NEWS DESK ಸೆ.20 : ಕಳೆದ 25 ವರ್ಷಗಳಿಂದ ನಾಡಿನ ಗ್ರಾಹಕರ ಹಾಗೂ ಚಿನ್ನಾಭರಣ ಪ್ರಿಯರ ವಿಶ್ವಾಸ ಗಳಿಸಿರುವ ಕುಶಾಲನಗರದ ಬೈಚನಹಳ್ಳಿಯ ಬಿ.ಎಂ.ರಸ್ತೆಯ ವಿಲ್ಕೋ ಗೋಲ್ಡ್ ಚಿನ್ನಾಭರಣ ಮಳಿಗೆಯಲ್ಲಿ ಹಬ್ಬಗಳ ಕೊಡುಗೆಯಾಗಿ 10 ಗ್ರಾಂ ಚಿನ್ನಾಭರಣಗಳನ್ನು ಖರೀದಿಸುವವರಿಗೆ ಚಿನ್ನದ ನಾಣ್ಯವನ್ನು ಉಚಿತವಾಗಿ ನೀಡಲಾಗುತ್ತಿದೆ. ಕೊಡಗಿನ ಸಾಂಪ್ರದಾಯಿಕ ಆಭರಣಗಳು ಸೇರಿದಂತೆ ಎಲ್ಲರೂ ಮೆಚ್ಚುವ ವಿವಿಧ ವಿನ್ಯಾಸದ ಅತ್ಯಾಕರ್ಷಕ ಚಿನ್ನಾಭರಣಗಳು ವಿಲ್ಕೋ ಗೋಲ್ಡ್ ಚಿನ್ನಾಭರಣ ಮಳಿಗೆಯಲ್ಲಿ ಲಭ್ಯವಿದೆ. ಚಿನ್ನಾಭರಣ ಪ್ರಿಯರು ಭೇಟಿ ನೀಡಿ ಚಿನ್ನದ ನಾಣ್ಯವನ್ನು ಉಚಿತವಾಗಿ ಪಡೆದುಕೊಳ್ಳುವಂತೆ ವಿಲ್ಕೋ ಗೋಲ್ಡ್ ಆಡಳಿತ ಮಂಡಳಿ ಮನವಿ ಮಾಡಿದೆ.
ಕುಶಾಲನಗರ ಸೆ.20 NEWS DESK : ನದಿ ಮೂಲ, ಜಲ ಮೂಲಗಳ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಜಮೀರ್ ಅಹ್ಮದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದ ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ನಡೆದ 163ನೇ ಮಹಾಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನೀರಿನ ಮೌಲ್ಯದ ಬಗ್ಗೆ ಪ್ರತಿಯೊಬ್ಬರಿಗೂ ಅರಿವಿರಬೇಕು. ಆ ಮೂಲಕ ಜಲ ಮೂಲಗಳ ಸಂರಕ್ಷಣೆ ಅಗತ್ಯವಾಗಿದೆ ಎಂದರು. ಗ್ಯಾರೆಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಕೆ.ಎಸ್.ಕೃಷ್ಣೇಗೌಡ ಅವರು ಮಾತನಾಡಿ, ನದಿ ತೊರೆಗಳ ಸ್ವಚ್ಛತಾ ಕಾಯಕ ಪ್ರತಿ ಪಂಚಾಯತ್ ಮಟ್ಟದಲ್ಲಿ ನಡೆಯಬೇಕಾಗಿದೆ. ಈ ಸಂಬಂಧ ಶಾಸಕರು ಸರ್ಕಾರದ ಮೂಲಕ ಗಮನ ಸೆಳೆಯಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಹರಿಯುವ ಸ್ಥಳಗಳ ಬಗ್ಗೆ ಸರ್ವ ಕಾರ್ಯ ನಡೆಸಿ ಸಂರಕ್ಷಣೆಗೆ ಯೋಜನೆ ರೂಪಿಸಬೇಕಾಗಿದೆ ಎಂದರು. ಕಾವೇರಿ ನದಿ ಸ್ವಚ್ಛತಾ ಸಮಿತಿ ಮೂಲಕ ನಡೆಯುತ್ತಿರುವ ಅಭಿಯಾನದ ಬಗ್ಗೆ ಸಂತಸ ವ್ಯಕ್ತಪಡಿಸಿದ ಕೃಷ್ಣೇಗೌಡ ಅವರು ಕಳೆದ…
ಸಿದ್ದಾಪುರ ಸೆ.20 NEWS DESK : ನೆಲ್ಯಹುದಿಕೇರಿಯ ಅಭ್ಯತ್‌ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ವಿ.ಕೆ.ಲೋಕೇಶ್ ಅವರ ಅಧ್ಯಕ್ಷತೆಯಲ್ಲಿ ಸೆ.23 ರಂದು ಬೆಳಿಗ್ಗೆ 10.30 ಗಂಟೆಗೆ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಬೆಳ್ತಂಗಡಿ ಸೆ.20 NEWS DESK : ಬೆಳ್ತಂಗಡಿ ತಾಲ್ಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಲೋಗೋವನ್ನು ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅನಾವರಣಗೊಳಿಸಿದರು. ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಜಿಲ್ಲಾ ನಿರ್ದೇಶಕರುಗಳಾದ ಲಿಂಗಯ್ಯ, ರಕ್ಷಿತ್ ಪುತ್ತಿಲ, ದಾಮೋದರ ಗೌಡ ಸುರುಳಿ, ವಿಜಯ ಗೌಡ ವೇಣೂರು, ಸೂರಜ್ ರಾಜ್ ಗೌಡ ವಳಂಬ್ರ, ಸೌಮ್ಯಲತಾ ಗೌಡ ಹಾಗೂ ಸೇವಾ ಸಮಿತಿಯ ಗೌರವ ಅಧ್ಯಕ್ಷ ರಂಜನ್ ಜಿ.ಗೌಡ , ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಕಾರ್ಯಾಧ್ಯಕ್ಷ ಶ್ರೀನಿವಾಸ್ ಗೌಡ ಬೆಳಾಲು, ಜಯಂತ ಗೌಡ ಗುರಿಪಳ್ಳ, ಪ್ರಧಾನ ಕಾರ್ಯದರ್ಶಿಗಳಾದ ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ಫೌಂಡರ್ ಟ್ರಸ್ಟಿಗಳಾದ ರಂಜನ್ ಜಿ ಗೌಡ, ವಿಜಯ ಗೌಡ ವೇಣೂರು, ಕೆ.ಜಯಂತ ಗೌಡ ಗುರಿಪಳ್ಳಾ, ಶ್ರೀನಿವಾಸ್ ಗೌಡ ಬೆಳಾಲು, ಮೋಹನ್ ಕುಮಾರ್ ಕಲ್ಮಂಜ, ಭರತ್ ಕುಮಾರ್ ಬಂಗಾಡಿ,…
ಮಡಿಕೇರಿ ಸೆ.20 NEWS DESK : ಮಡಿಕೇರಿ 66/33/11 ಕೆವಿ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸುವುದರಿಂದ ರಾಜಾಸೀಟು, ಗದ್ದಿಗೆ, ಮೇಕೇರಿ, ಕೋಟೆ, ಭಾಗಮಂಡಲ, ಬೊಯಿಕೇರಿ, ಸಂಪಾಜೆ, ಕುಂಡಾಮೇಸ್ತ್ರಿ, ಗಾಳಿಬೀಡು, ಓಂಕಾರೇಶ್ವರ, ಜಿ.ಟಿ ರಸ್ತೆ, ಮಕ್ಕಂದೂರು ಹಾಗೂ ಕೆಎಸ್‍ಆರ್‍ಟಿಸಿ ಫೀಡರ್‍ಗಳಲ್ಲಿ ಸಹ ನಿರ್ವಹಣ ಕಾಮಗಾರಿಯನ್ನು ಸೆಪ್ಟೆಂಬರ್, 21 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿರ್ವಹಿಸಲಾಗುವುದು. ಆದ್ದರಿಂದ ಮಡಿಕೇರಿ, ಭಾಗಮಂಡಲ, ಸಂಪಾಜೆ, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್‍ಮನೆ, ಬೆಟ್ಟಗೇರಿ, ಗಾಳಿಬೀಡು, ಚೆಟ್ಟಿಮಾನಿ, ಚೇರಂಬಾಣೆ, ಮಕ್ಕಂದೂರು, ಬೊಯಿಕೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ NEWS DESK ಸೆ.19: ನಗರದ ಬಸ್ ಡಿಪೋ ಬಳಿ ಇರುವ ಶಾಂತಿನಿಕೇತನ ಬಡಾವಣೆಯ ಗಣೇಶ ಪ್ರತಿಷ್ಠಾಪನಾ ಮೂರ್ತಿಯ ವಿಸರ್ಜನೆ ಮೆರವಣಿಗೆ ಸೆ.21ರ ಶನಿವಾರ ಸಂಜೆ ನಗರದ ಮುಖ್ಯ ಬೀದಿಗಳಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಂಚಾರಿ ಠಾಣಾ ಪೊಲೀಸರು ಆ ದಿನ ಇಂದಿರಾ ಗಾಂಧಿ ವೃತ್ತದಿಂದ ಎ.ವಿ ಶಾಲೆಯ ಜಂಕ್ಷನ್‌ವರೆಗಿನ ವಾಹನ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿದ್ದಾರೆ. ಮಂಟಪದ ಮೆರವಣಿಗೆ ತೆರಳುವ ರಸ್ತೆ ಏರಿಳಿತ ಸಹಿತ ಕಿರಿದಾಗಿರುವ ಹಿನ್ನೆಲೆಯಲ್ಲಿ ಮುಂಜಾಗೃತೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡುವ ದೃಷ್ಟಿಯಿಂದ ಸೆ.21ರ ಸಂಜೆ 6 ಗಂಟೆಯ ನಂತರ ಮಡಿಕೇರಿಯ ಐ.ಜಿ ವೃತ್ತದಿಂದ ಎ.ವಿ ಶಾಲೆಯವರೆಗೆ, ಮಹದೇವಪೇಟೆ-ಮಾರ್ಕೆಟ್ ರಸ್ತೆ ಸೇರಿದಂತೆ ರಸ್ತೆಯ ಎರಡು ಬದಿಯಲ್ಲೂ ತಾತ್ಕಾಲಿಕವಾಗಿ ವಾಹನ ನಿಲುಗಡೆಯನ್ನು ಸಂಪೂರ್ಣ ನಿಷೇಧಿಸಿದ್ದಾರೆ. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮಡಿಕೇರಿ ನಗರ ಸಂಚಾರಿ ಪೊಲೀಸ್ ಠಾಣೆ ಮನವಿ ಮಾಡಿದೆ.
ಕುಶಾಲನಗರ NEWS DESK ಸೆ.19 : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತು- ಸಂಯಮ, ಉತ್ತಮ ನಾಯಕತ್ವ ಗುಣ, ರಾಷ್ಟ್ರೀಯ ಭಾವೈಕ್ಯತೆ ಹಾಗೂ ಮಾನವೀಯ ಮೌಲ್ಯಗಳನ್ನು ಕಲಿಯುವ ಮೂಲಕ ದೇಶದಲ್ಲಿ ಭಾವೈಕ್ಯತೆ ಬೆಳೆಯಲು ಸಹಾಯವಾಗುತ್ತದೆ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಗುರುವಾರ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆಯ ವತಿಯಿಂದ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ದೇಶಭಕ್ತಿ ಗೀತೆ ಗಾಯನ ಸ್ಪರ್ಧಾ ಕಾರ್ಯಕ್ರಮ ಹಾಗೂ ಸಂಸ್ಥೆಯ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಲ್ಲಿ ಕ್ರಿಯಾಶೀಲತೆ ಬೆಳೆಸಲು ಸಹಕಾರಿಯಾಗಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಶಾಲಾ ಶಿಕ್ಷಣ ಇಲಾಖೆಯ ಅವಿಭಾಜ್ಯ ಅಂಗವಾಗಿದೆ. ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮತ್ತು ನಾಯಕತ್ವ, ಶಿಸ್ತು ಬೆಳೆಯಲು ಸೂಕ್ತ ವೇದಿಕೆ’ ಒದಗಿಸುತ್ತಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸ್ಕೌಟ್ ಮತ್ತು…
ಮಡಿಕೇರಿ ಸೆ.14 NEWS DESK : ನಲ್ವತ್ತೋಕ್ಲು ಚೋಕಂಡಳ್ಳಿ ಕಂದೂರಿ ಹಜ್ರತ್ ಮುಹಮ್ಮದ್ ಪೈಗಂಬರ್‍ರ ಮುಹ್‍ಜಿಸತ್ತಿನಿಂದ ಪ್ರಸಿದ್ಧಿ ಹೊಂದಿರುವ ಕಂದೂರಿ ಈದ್ ಮಿಲಾದ್ ನ್ನು ಸೆ.21 ಮತ್ತು 22 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು ಎಂದು ಈದ್ ಮಿಲಾದ್ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಕೆ.ಎಂ.ರಫಿ, ಕಾರ್ಯದರ್ಶಿ ಪಿ.ಎ.ಸಿರಾಜುದ್ದೀನ್, ಸದಸ್ಯರುಗಳಾದ ಪಿ.ಎ.ಅಬ್ದುಲ್ ಮಜಿದ್, ಟಿ.ಎಂ.ಅಸಿಮ್, ಕೆ.ಎಸ್.ಮೊಯ್ದಿನ್ ಹಾಗೂ ಪಿ.ಯು.ನೂರುದ್ದೀನ್ ತಿಳಿಸಿದ್ದಾರೆ. ಎರಡು ದಿನ ನಡೆಯಲಿರುವ ಕಾರ್ಯಕ್ರಮಕ್ಕೆ ಸೆ.21 ರಂದು ಅಸರ್ ನಮಾಜಿನ ಬಳಿಕ ಈದ್ ಮಿಲಾದ್ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಎಂ.ರಫಿ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು. ಸಂಜೆ 7 ಗಂಟೆಗೆ ಅಬ್ದುಲ್ ಲತೀಫ್ ಸಖಾಫಿ ಕಾಂದಪುರಂ ನೇತೃತ್ವದಲ್ಲಿ ಮದನೀಯಂ ಸದಸ್ಸ್ ಮತ್ತು ನಸೀಹತ್ ನಡೆಯಲಿದ್ದು, ಕಾರ್ಯಕ್ರಮವನ್ನು ಸೈಯದ್ ಮಹದಿ ತಂಗಳ್ ಉದ್ಘಾಟಿಸಲಿದ್ದಾರೆ. ಮುಬಶ್ಯಿರ್ ಅಹ್ಸನಿ ಅಲ್ ಕಾಮಿಲ್ ಪ್ರಾರ್ಥನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಲ್ವತೋಕ್ಲು ಚೋಕಂಡಳ್ಳಿ ಜುಮಾ ಮಸೀದಿ ಅಧ್ಯಕ್ಷ ಪಿ.ಎ.ಹನೀಫ್, ಕೊಡವ ಮುಸ್ಲಿಂ ಅಸೊಶಿಯೇಶನ್ ಅಧ್ಯಕ್ಷ ಡಿ.ಹೆಚ್.ಸೂಪಿ…






