ಲೇಖಕ: admin

ಮಡಿಕೇರಿ NEWS DESK ಸೆ.19 : ನಿವೇಶನ ರಹಿತರು, ದುರ್ಬಲರಿಗೆ ಮೀಸಲಾಗಿದ್ದ ಬಸವನಹಳ್ಳಿ ಗ್ರಾಮದ ‘ನವಗ್ರಾಮ ಯೋಜನೆ’ಯ ಮೀಸಲು ಜಾಗವನ್ನು ಸ್ಥಳೀಯ ಫಲಾನುಭವಿಗಳನ್ನು ಕಡೆಗಣಿಸಿ, ಉಳ್ಳವರಿಗೆ ಮತ್ತು ಇತರೆ ಪ್ರದೇಶದವರಿಗೆ ನೀಡಲಾಗಿದೆ ಎಂದು ಸೋಲಿಗ ಸಮಿತಿಯ ಉಪಾಧ್ಯಕ್ಷ ಮಹೇಶ್ ಬಿ.ಬಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರ ಹೋಬಳಿ ಬಸವನಹಳ್ಳಿ ಗ್ರಾಮದ ರಾಜ್ಯ ಹೆದ್ದಾರಿ ಪಕ್ಕದ 2 ಎಕರೆ ಜಾಗವನ್ನು ನವಗ್ರಾಮ ಯೋಜನೆಗೆಂದು 2013 ರಲ್ಲಿ ಅಂದಿನ ಜಿಲ್ಲಾಧಿಕಾರಿಗಳು ಕಾಯ್ದಿರಿಸಿದ್ದರು. ಈ ಜಾಗವನ್ನು ಗುಡ್ಡೆಹೊಸೂರು ಪಂಚಾಯ್ತಿ ವ್ಯಾಪ್ತಿಯ ಬಡವರು, ನಿರ್ಗತಿಕರು, ವಸತಿ ರಹಿತರಿಗೆ ನಿವೇಶನಗಳನ್ನಾಗಿ ನೀಡಲು ನಿರ್ಧರಿಸಲಾಗಿತ್ತು. ಆದರೆ, ಪ್ರಸ್ತುತ ಉಳ್ಳವರಿಗೆ ಹಾಗೂ ಇತರೆ ಪ್ರದೇಶಗಳವರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಕೆಲ ನಿವೇಶನಗಳಲ್ಲಿ ಎರಡಂತಸ್ತಿನ ಮನೆಗಳ ನಿರ್ಮಾಣವಾಗುತ್ತಿದೆ ಎಂದರು. ನವಗ್ರಾಮ ಯೋಜನೆಯಡಿ ನಿವೇಶನಕ್ಕಾಗಿ ಬಸವನಹಳ್ಳಿ ಸುತ್ತಮುತ್ತಲ ನೂರಾರು ಮಂದಿ ನಿವೇಶನ ರಹಿತರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಇವರಲ್ಲಿ ಕೇವಲ 8 ಮಂದಿಗಷ್ಟೆ ನಿವೇಶನ ನೀಡಲಾಗಿದ್ದು, ಉಳಿದವುಗಳನ್ನು ಬೇರೆಯವರಿಗೆ ಹಂಚಿಕೆ…

Read More

ಮಡಿಕೇರಿ NEWS DESK  ಸೆ.19 : ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಶಾಲನಗರ ಹೋಬಳಿ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಮಹೋತ್ಸವ ಸೆ.25ರಂದು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1999ರಲ್ಲಿ ಆರಂಭಗೊಂಡ ಸಂಘ ಇದೀಗ 25 ವರ್ಷ ಪೂರೈಸಿದೆ. ಈ ಸಂಬAದ ಈಗಾಗಲೇ ಬೆಳ್ಳಿಹಬ್ಬದ ಅಂಗವಾಗಿ 25 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೊಡಗು ಜಿಲ್ಲಾ ಸಂಘದ ಸದಸ್ಯರುಗಳಿಗೆ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ಸೇರಿದಂತೆ ಹಲವು ಸಾಮಾಜಿಕ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಕುಶಾಲನಗರ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬೆಳ್ಳಿಹಬ್ಬ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಉದ್ಘಾಟಿಸಲಿದ್ದಾರೆ. ಮಡಿಕೇರಿ ಶಾಸಕ ಡಾ.ಮಂಥರ್ ಗೌಡ ಹಾಗೂ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಮತ್ತು ಸಂಸದ…

Read More

ಮಡಿಕೇರಿ NEWS DESK ಸೆ.19 : ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ 24,37,071 ರೂ. ಲಾಭ ಗಳಿಸಿದೆ. ಸಂಘದ ವಾರ್ಷಿಕ ಮಹಾಸಭೆ ಸೆ.22 ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಎಸ್.ಚೇತನ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಹಾಸಭೆಯಲ್ಲಿ ಸದಸ್ಯರ ಮಕ್ಕಳಿಗೆ ಪತ್ರಿಭಾ ಪುರಸ್ಕಾರ, ಸಾಧಕರಿಗೆ, ಹಿರಿಯ ಸದಸ್ಯರಿಗೆ ಸನ್ಮಾನ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಣೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುದು ಎಂದು ಹೇಳಿದ್ದಾರೆ. ::: 24.37 ಲಕ್ಷ ರೂ. ಲಾಭ ::: ಸಂಘವು ಪ್ರಸ್ತುತ 2352 ಸದಸ್ಯರನ್ನು ಹೊಂದಿದ್ದು, ಸುಮಾರು 24,37,071.61 ರೂ. ಲಾಭ ಗಳಿಸಿದೆ. ರೂ.2,90,49,700 ಪಾಲು ಬಂಡವಾಳವಿದ್ದು, ಒಟ್ಟು ವ್ಯವಹಾರ ರೂ.33,57,75,147.40 ಆಗಿದೆ. ಠೇವಣಿ ರೂ.12,90,09,104.75 ಇದ್ದು, ಪ್ರಸಕ್ತ ವರ್ಷ ರೂ.6,05,40,700 ಸಾಲ…

Read More

ಮಡಿಕೇರಿ NEWS DESK ಸೆ.22 : ಕೊಡಗು ಜಿಲ್ಲಾ ಮಹಾಬೋಧಿ ಪತ್ತಿನ ಸಹಕಾರ ಸಂಘದ ಮಹಾಸಭೆ ಸೆ.22ರಂದು ನಗರದ ಡಾ.ಅಂಬೇಡ್ಕರ್ ಭವನದಲ್ಲಿ ಸಂಘದ ಅಧ್ಯಕ್ಷ ಎಸ್.ಸಿ.ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವಕ್ಕಿ ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಮಹಾಸಭೆಯಲ್ಲಿ ನಿರ್ದೇಶಕರುಗಳು ಹಾಗೂ ಸರ್ವ ಸದಸ್ಯರು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

Read More

ಮಡಿಕೇರಿ NEWS DESK ಸೆ.19 : ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಐಕ್ಯ ಹೋರಾಟ ಚಾಲನಾ ಸಮಿತಿ ಹಾಗೂ ಮಾನವ ಬಂಧುತ್ವ ವೇದಿಕೆಯ ಕೊಡಗು ಜಿಲ್ಲಾ ಶಾಖೆ ವತಿಯಿಂದ ದಲಿತ ಸಂಘರ್ಷ ಸಮಿತಿಯ 50ನೇ ವಾರ್ಷಿಕೋತ್ಸವದ ಅಂಗವಾಗಿ ಸೆ.21 ರಂದು ಶನಿವಾರಸಂತೆಯ ಗುಡುಗಳಲೆಯಲ್ಲಿ ಜಿಲ್ಲಾ ಮಟ್ಟದ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮಾನವ ಬಂಧುತ್ವ ವೇದಿಕೆಯ ಜಿಲ್ಲಾಧ್ಯಕ್ಷ ಜೆ.ಎಲ್.ಜನಾರ್ಧನ್ ಅವರು, ಅಲ್ಪಸಂಖ್ಯಾತ, ಹಿಂದುಳಿದ, ದಲಿತ, ಶೋಷಿತ ಸಮುದಾಯಗಳ ಸಾಮಾಜಿಕ ಐಕ್ಯತೆಗಾಗಿ ಜಿಲ್ಲಾ ಮಟ್ಟದ ಜಾಗೃತಿ ಕಾರ್ಯಕ್ರಮವನ್ನು ಶನಿವಾರ ಬೆಳಿಗೆ 10.30 ಗಂಟೆಗೆ ಗುಡುಗಳಲೆಯ ಆರ್.ವಿ.ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದು, ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಜಿಲ್ಲಾ ಸಂಚಾಲಕ ಎಂ.ಎಸ್.ವೀರೇಂದ್ರ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಯೋಜಕ ಜೆ.ಆರ್.ಪಾಲಾಕ್ಷ…

Read More

ಮಡಿಕೇರಿ NEWS DESK ಸೆ.18 : ಮಡಿಕೇರಿ ರೋಟರಿ ಸಂಸ್ಥೆ ಹಾಗೂ ಆದಾಯ ತೆರಿಗೆ ಇಲಾಖೆಯ ಸಹಭಾಗಿತ್ವದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜ್ ನ ವಿದ್ಯಾರ್ಥಿಗಳಿಗೆ ಆದಾಯ ತೆರಿಗೆಯ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಕಾಲೇಜ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರೋಟರಿ ಸಂಸ್ಥೆಯ ಅಧ್ಯಕ್ಷ ರೋಟರಿಯನ್ ಎಂ.ಸುದಯ್ ನಾಣಯ್ಯ ಅವರು, ಆಡಳಿತ ವ್ಯವಸ್ಥೆ ಜಾರಿಗೆ ಬಂದಲ್ಲಿಂದ ತೆರಿಗೆ ಸಂಗ್ರಹ ಅದರ ಭಾಗವಾಗಿ ಸೇರಿಕೊಂಡಿದೆ. ಈ ವಿಚಾರದಲ್ಲಿ ಮೈಸೂರಿನ ಮಹಾರಾಜರಾದ ನಾಲ್ವಡಿ ಕೃಷ್ಣರಾಜ್ ಒಡೆಯರ್ ಅವರು ಉತ್ತಮ ಆಡಳಿತಗಾರರಾಗಿ ಪ್ರಸಿದ್ಧಿ ಪಡೆದಿದ್ದರು. ಸಂವಿಧಾನ ರಚನೆಯಾದ ನಂತರ ಅದರಡಿಯಲ್ಲಿ ರೂಪಿಸಿದ ಕಾಯ್ದೆಯನ್ವಯ ಭಾರತ ದೇಶದಲ್ಲಿ ತೆರಿಗೆ ಸಂಗ್ರಹ ಮಾಡಲಾಗುತ್ತಿದೆ ಎಂದು ತಿಳಿಸಿದರು. ರೋಟರಿಯನ್ ಈಶ್ವರ್ ಭಟ್ ಅವರು ಮಾತನಾಡಿ, ಆದಾಯ ತೆರಿಗೆ ಕಾಯ್ದೆಯಲ್ಲಿ ಆದಾಯವನ್ನು ವಿವಿಧ ರೀತಿಯಲ್ಲಿ ವಿಂಗಡಿಸಲಾಗಿದೆ. ಅದರನ್ವಯ ತೆರಿಗೆಯನ್ನು ಜನರಿಂದ ಪಡೆಯಲಾಗುತ್ತದೆ. ವಿದ್ಯಾರ್ಥಿಗಳಿಗೆ ತೆರಿಗೆಯ ಬಗ್ಗೆ ಏನೇ ಸಂಶಯಗಳಿದ್ದರೂ ಮುಕ್ತ ಮನಸ್ಸಿನಿಂದ ಬಗೆಹರಿಸಿಕೊಳ್ಳಬೇಕು.…

Read More

ಮಡಿಕೇರಿ NEWS DESK ಸೆ.18 : ಪೊನ್ನಂಪೇಟೆ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಸರ್ಕಾರದಿಂದ 5 ಕೋಟಿ ರೂ. ಬಿಡುಗಡೆಯಾಗಿದ್ದು, ಪ್ರಸಕ್ತ ವರ್ಷದಲ್ಲಿ ಕ್ರೀಡಾ ವಸತಿ ನಿಲಯ ನಿರ್ಮಾಣ ಸಂಬ0ಧ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಸ್ಥಳೀಯರಾದ ಮೂಕಳೇರ ಕುಶಾಲಪ್ಪ ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಿದರು. ಪೊನ್ನಂಪೇಟೆಯ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಆರಂಭದಲ್ಲಿ ಮಾತನಾಡಿದ ಸ್ಥಳೀಯರು ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮೂಕಳೇರ ಕುಶಾಲಪ್ಪ ಅವರು ಸ್ವಾತಂತ್ರö್ಯ ಪೂರ್ವದಿಂದಲೂ ಪೊನ್ನಂಪೇಟೆ ಪ್ರೌಢಶಾಲೆ ಇತ್ತು. ಪ್ರೌಢಶಾಲೆಗೆ ಒಂದು ಇತಿಹಾಸವಿದ್ದು, ಇದರ ಅಸ್ತಿತ್ವವನ್ನು ಉಳಿಸಿಕೊಳ್ಳುವಂತಾಗಬೇಕು. ಜೊತೆಗೆ ಇಲ್ಲಿನ ವಿದ್ಯಾರ್ಥಿಗಳಿಗೂ ಸಹ ಅನುಕೂಲವಾಗಬೇಕು ಎಂದು ಪ್ರತಿಪಾದಿಸಿದರು. ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಸರ್ಕಾರದಿಂದ ಪೊನ್ನಂಪೇಟೆಯ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಬಜೆಟ್‌ನಲ್ಲಿ 5 ಕೋಟಿ ರೂ. ಪ್ರಕಟಿಸಲಾಗಿತ್ತು, ಅದರಂತೆ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಪ್ರಸಕ್ತ ವರ್ಷದಲ್ಲಿ ಕ್ರೀಡಾ ವಸತಿ ನಿಲಯ ಆರಂಭಕ್ಕೆ ಚಾಲನೆ ನೀಡಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯವಿರುವ ಭೂಮಿಯನ್ನು…

Read More

ಮಡಿಕೇರಿ NEWS DESK ಸೆ.18 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ 8 ಹೋಬಳಿ ಕೇಂದ್ರದ ಶಾಲಾ ಆಟದ ಮೈದಾನವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ತಲಾ 25 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಹುದಿಕೇರಿ ಜನತಾ ಪ್ರೌಢಶಾಲೆಯಲ್ಲಿ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೊಡಗು ಜಿಲ್ಲೆ ಕ್ರೀಡಾಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಗಳಿಸಿದ್ದು, ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ 8 ಹೋಬಳಿಯ ಶಾಲಾ ಆಟದ ಮೈದಾನಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಈಗಾಗಲೇ ವಿರಾಜಪೇಟೆ ಮತ್ತು ಹುದಿಕೇರಿಯಲ್ಲಿ ಕಾಮಗಾರಿ ನಡೆದಿದೆ. ಉಳಿದ 6 ಆಟದ ಮೈದಾನದ…

Read More

ಮಡಿಕೇರಿ ಸೆ.18 NEWS DESK : ರೋಟರಿ ಮಡಿಕೇರಿ ಸಂಸ್ಥೆಯಿಂದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಇಂಟರ‍್ಯಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ನಡೆಯಿತು. ಸರ್ಕಾರಿ ಪದವಿ ಪೂರ್ವ ಕಾಲೇಜ್ ನ ಇಂಟರ್ಯಾಕ್ಟ್ ಕ್ಲಬ್ ನ ಅಧ್ಯಕ್ಷರಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಮಿಥುನ್ ಪೂವಯ್ಯ ಹಾಗೂ ಕಾರ್ಯದರ್ಶಿಯಾಗಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಕೆ.ಅನುಷಾ ಅಧಿಕಾರ ಸ್ವೀಕರಿಸಿದರು. ಪಿ.ಡಿ.ಜಿ.ರೋಟರಿಯನ್ ಡಾ.ಕೆ.ರವಿ ಅಪ್ಪಾಜಿ ಪದಗ್ರಹಣ ಅಧಿಕಾರಿಯಾಗಿ ಪಾಲ್ಗೊಂಡು ಕ್ಲಬ್‍ನ 25 ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ತಾಳ್ಮೆಯನ್ನು ರೂಢಿಸಿಕೊಂಡರೆ ಆತ್ಮಸ್ಥೈರ್ಯ ಹೆಚ್ಚಾಗಿ ಮುಂದೆ ಎದುರಾಗಬಹುದಾದ ಎಲ್ಲಾ ಕಷ್ಟಗಳನ್ನು ಎದುರಿಸಬಹುದಾಗಿದೆ. ಪ್ರಪಂಚದ ಅತ್ಯಂತ ಯಶಸ್ವಿ ವ್ಯಕ್ತಿಗಳು ಜೀವನದಲ್ಲಿ ತಾಳ್ಮೆಯಿಂದ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎನ್ನುವ ಸತ್ಯವನ್ನು ಅಮೆರಿಕದ ಸ್ಟೆಂಡ್‍ಫರ್‍ಡ್ ವಿಶ್ವವಿದ್ಯಾನಿಲಯ ನಡೆಸಿದ ಸಂಶೋಧನೆ ಬಹಿರಂಗ ಪಡಿಸಿದೆ ಎಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಟರಿ ಸಂಸ್ಥೆಯ ಅಧ್ಯಕ್ಷ ರೋಟರಿಯನ್ ಎಂ.ಸುದಯ್…

Read More

ಕೊಡ್ಲಿಪೇಟೆ ಸೆ.18 NEWS DESK : ಮಕ್ಕಳಲ್ಲಿ ಅಡಗಿರುವ ಅಂತರಿಕ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಕಾಲೋತ್ಸವ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಸಮನ್ವಯಾಧಿಕಾರಿಗಳ ಕಚೇರಿ ಸೋಮವಾರಪೇಟೆ, ಸಮೂಹ ಸಂಪನ್ಮೂಲ ಕೇಂದ್ರ ಕೊಡ್ಲಿಪೇಟೆ ಸಂಯುಕ್ತಾಶ್ರಯದಲ್ಲಿ ಕೊಡ್ಲಿಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬುಧವಾರ ಏರ್ಪಡಿಸಿದ್ದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಕಾಲೋತ್ಸವ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ, ಕ್ರೀಡೆ ಕೊಟ್ಟರೆ ಸಾಲದು ಜೊತೆಗೆ ಮಕ್ಕಳಲ್ಲಿ ಅಂತರಿಕವಾಗಿ ಅಡಗಿರುವ ಪ್ರತಿಭೆಯನ್ನು ಹೊರತರುವ ಕೆಲಸವನ್ನು ಮಾಡಬೇಕು. ಶಾಲಾಭಿವೃದ್ಧಿ ಸಮಿತಿ, ಪೋಷಕರು ಹಾಗೂ ಶಿಕ್ಷಕ ಸಮನ್ವಯತೆ ಕೆಲಸ‌ ಮಾಡಿದರೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಶಾಲೆಯಾಗಿ ರೂಪುಗೊಳಿಸಲು ಸಾಧ್ಯವಾಗುತ್ತದೆ ಎಂದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳನ್ನು ಶೇಕಡಾವಾರು ಅಂಕಗಳಲ್ಲಿ ಗುರುತಿಸುವ ಕೆಲಸ‌ ಮಾಡುತ್ತಿರುವುದು ಸರಿಯಲ್ಲ.…

Read More