ಲೇಖಕ: admin

ಮಡಿಕೇರಿ ಸೆ.18 NEWS DESK : ಯು.ಎಸ್.ಎ.ಯ ಸ್ಕ್ಯಾನ್‌ ಫೋರ್ಡ್‌ ವಿವಿ ಮತ್ತು ಎಲ್ಸ್‌ ವಿಯರ್  ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಜೆ.ಜಿ.ಮಂಜುನಾಥ ಅವರು ಸತತ 5ನೇ ಬಾರಿ ಸ್ಥಾನ ಪಡೆದಿದ್ದಾರೆ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ.ಮಂಜುನಾಥ ಅವರು “Analytical Chemistry and Energy” ವಿಷಯಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ ಇವರು 2024ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 8257ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿಜೀವಮಾನ ಸಾಧಕರ ಪಟ್ಟಿಯಲ್ಲಿ 65119ನೇ ಸ್ಥಾನವನ್ನು ಪಡೆದಿದ್ದಾರೆ (ಸಂಯೋಜಿತ ಅಂಕಗಳ ಆಧಾರದ ಮೇಲೆ ಶ್ರೇಣಿ). ಇವರು 194 ಅಂತರಾಷ್ಟ್ರೀಯ ಲೇಖನಗಳನ್ನು ಅತ್ಯಂತ ಪ್ರತಿಷ್ಟಿತ ಜರ್ನಲ್‌ಗಳಲ್ಲಿ ಪ್ರಕಟಿಸಿದ್ದು, 25 ಪುಸ್ತಕಗಳನ್ನು ಹೊರ ತಂದಿದ್ದಾರೆ. 27 ಜರ್ನಲ್‌ಗಳಲ್ಲಿ ಎಡಿಟೋರಿಯಲ್ ಬೋರ್ಡ್‌ ಮೆಂಬರ್ ಆಗಿಯೂ ಹಾಗೂ Sensing technology (Taylor and francis) ಜರ್ನಲ್‌ನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಇವರ ಈ…

Read More

ವಿರಾಜಪೇಟೆ ಸೆ.18 NEWS DESK : ವಿರಾಜಪೇಟೆ ಐತಿಹಾಸಿಕ ಶ್ರೀ ಗೌರಿ ಗಣೇಶ ವಿಸರ್ಜನೋತ್ಸವವು ಸಂಭ್ರಮದಿಂದ ನಡೆಯಿತು. ಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ಹೊತ್ತ ವಿದ್ಯುತ್ ಅಲಂಕೃತಗೊಂಡ 22 ಮಂಟಪಗಳ ಶೋಭಾಯಾತ್ರೆಯು ನಗರದ ಮುಖ್ಯ ಬೀದಿಯಲ್ಲಿ ಮಳೆಯ ನಡುವೆಯೂ ಮೆರವಣಿಗೆ ನಡೆಸಿ ಪವಿತ್ರ ಗೌರಿ ಕೆರೆಯಲ್ಲಿ ಬುಧವಾರ ಬೆಳಗ್ಗಿನ ಜಾವ ವಿಸರ್ಜಿಸಲಾಯಿತು. ಸೆ.7 ರಂದು ನಗರದ 22 ಸಮಿತಿಗಳ ಮೂಲಕ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶನಿಗೆ 10 ದಿನಗಳ ಕಾಲ ಬೆಳಿಗ್ಗೆ ಮತ್ತು ರಾತ್ರಿ ವಿಶೇಷ ಪೂಜೆ ಸಲ್ಲಿಸಿ ಸೆ,17 ರಂದು ವಿದ್ಯುತ್ ದೀಪಾಲಂಕೃತ ಹೂವಿನ ಭವ್ಯ ಮಂಟಪದಲ್ಲಿ ವಿಶೇಷ ವಾಧ್ಯಗೋಷ್ಠಿಯೋಂದಿಗೆ ಮಂಟಪಗಳು ಮೆರವಣಿಗೆಯಲ್ಲಿ ಸಾಗಿ ಬಂದವು. ನಗರದ ಶ್ರೀ ಗಣಪತಿ ದೇವಸ್ಥಾನ ಗಡಿಯಾರ ಕಂಬದ ಬಳಿ, ಜೈನರ ಬೀದಿ ಶ್ರೀ ಬಸವೇಶ್ವರ ದೇವಸ್ಥಾನ, ವಿಘ್ನೇಶ್ವರ ಸೇವಾ ಸಮಿತಿ ಅರಸುನಗರ, ವಿನಾಯಕ ಯುವಕ ಭಕ್ತ ಮಂಡಳಿ ಅಂಗಾಳ ಪರಮೇಶ್ವರಿ ದೇವಸ್ಥಾನ, ವಿಜಯ ವಿನಾಯಕ ಉತ್ಸವ ಸಮಿತಿ ದಕ್ಕನಿಮೊಹಲ್ಲಾ, ಕಾವೇರಿ ಗಣೇಶ ಉತ್ಸವ ಸಮಿತಿ…

Read More

ಮಡಿಕೇರಿ NEWS DESK ಸೆ.18 : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಸಂಘದ ಕುಶಾಲನಗರ ತಾಲ್ಲೂಕು ಘಟಕವನ್ನು ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಪೀಟರ್ ಕೆ.ಎ ಕೂಡಿಗೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪೌಲ್ಸನ್ ಜಾಯ್ ಕುಶಾಲನಗರ ಆಯ್ಕೆಯಾದರು. ರೋಮನ್ ಕ್ಯಾಥೋಲಿಕ್ ಸಂಘದ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಬಿ.ಎಸ್.ಶಾಂತಪ್ಪ, ಗೌರವ ಸಲಹೆಗಾರರಾಗಿ ಡೆನಿಲ್ ನರೋನ, ಸಹ ಕಾರ್ಯದರ್ಶಿಯಾಗಿ ರೀಟಾ ಮೆನೆಜಸ್ ಕೂಡಿಗೆ, ಉಪಾಧ್ಯಕ್ಷರುಗಳಾಗಿ ಗ್ರೇಸಿ ಸುಂಟಿಕೊಪ್ಪ, ಬ್ಲೇಜಿ ಕ್ರಾಸ್ತಾ ಕುಶಾಲನಗರ, ಸಿಸಿಲಿ ಜೋಸೆಫ್ ಕೂಡಿಗೆ, ಸಾಜಿ ಬೈಲಿ ಚೆಟ್ಟಳ್ಳಿ, ಅಲೆಕ್ಸ್ 7ನೇ ಹೊಸಕೋಟೆ, ಖಜಾಂಜಿಯಾಗಿ ಆಲ್ಬರ್ಟ್ ಗಾನ್ಸ್ವೆಲ್ಸ್, ಮಹಿಳಾ ಪ್ರತಿನಿಧಿಯಾಗಿ ಜಾನ್ಸಿ ಪೀಟರ್ ಕೂಡಿಗೆ, ಸಾಮಾಜಿಕ ಜಾಲತಾಣದ ಪ್ರಮುಖರಾಗಿ ರೇಷ್ಮಾ ವಿ. ಪ್ರಸಾದ್ ಕೂಡಿಗೆ ಆಯ್ಕೆಗೊಂಡರು. ಸುಂಟಿಕೊಪ್ಪ, ಕುಶಾಲನಗರ, ಚೆಟ್ಟಳ್ಳಿ, ಕೂಡಿಗೆ ಮತ್ತು 7ನೇ ಹೊಸಕೋಟೆ ಈ 5 ಧರ್ಮಕೇಂದ್ರಗಳಿಂದ ಸದಸ್ಯರುಗಳನ್ನು ಆಯ್ಕೆ ಮಾಡಿ ನೂತನ ಕುಶಾಲನಗರ ತಾಲ್ಲೂಕು ಘಟಕದ ಸಮಿತಿಯನ್ನು…

Read More

ನವದೆಹಲಿ NEWS DESK ಸೆ.18 ; ಕೊಡಗು ಮತ್ತು ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಮಿತಿ ಮೀರಿರುವ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕಾಡಾನೆಗಳ ನಿರಂತರ ದಾಳಿಯಿಂದ ಕೃಷಿ ಕ್ಷೇತ್ರಕ್ಕೆ ನಷ್ಟವಾಗುತ್ತಿದೆ ಮತ್ತು ಮಾನವರ ಮೇಲೂ ದಾಳಿಗಳಾಗುತ್ತಿದೆ. ಆದ್ದರಿಂದ ಕಾಡಾನೆಗಳು ಕಾಡು ಬಿಟ್ಟು ನಾಡಿಗೆ ಲಗ್ಗೆ ಇಡುವುದನ್ನು ತಡೆಯಲು ಹೆಚ್ಚಿನ ಪ್ರಮಾಣದ ರೈಲ್ವೆ ಬ್ಯಾರಿಕೇಡ್ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಸಂಸದರು ಸಚಿವರಲ್ಲಿ ಮನವಿ ಮಾಡಿದರು.

Read More

ಮಡಿಕೇರಿ ಸೆ.18 NEWS DESK : ಪರಿಸರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಪ್ರಮುಖವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗಿಡ ನೆಡುವ ಮೂಲಕ ಸ್ಚಚ್ಛತಾ ಹೀ ಸೇವಾ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಸ್ವಚ್ಛತಾಹೀ ಸೇವಾ ಪಾಕ್ಷಿಕವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅ.2 ರ ವರೆಗೂ ಈ ಕಾರ್ಯಕ್ರಮ ನಡೆಯಲಿದೆ. “ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ” ಘೋಷ ವಾಕ್ಯದೊಂದಿಗೆ ಈ ಬಾರಿಯ ಸ್ವಚ್ಛತಾಹೀ ಸೇವಾ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಅವರು ತಿಳಿಸಿದರು. ಕೊಡಗು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಈ ಅಭಿಯಾನವೂ ಸ್ವಚ್ಛತೆಗಾಗಿ ಬೃಹತ್ ಪ್ರಮಾಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಮತ್ತು ಸಮುದಾಯದ ಭಾಗವಹಿಸುವಿಕೆಗೆ ಅನುಕೂಲ‌ ಮಾಡಿಕೊಡುತ್ತದೆ ಎಂದರು. ಎಲ್ಲೆಂದರಲ್ಲಿ ಅಕ್ರಮವಾಗಿ ತ್ಯಾಜ್ಯ ಸುರಿಯುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಸಮುದಾಯದ ಭಾಗವಹಿಸುವಿಕೆಯೊಂದಿಗೆ ಸ್ಥಳವನ್ನು ಸ್ವಚ್ಛ…

Read More

ಮಡಿಕೇರಿ NEWS DESK ಸೆ.18 : ಮೈಸೂರು-ಕೊಡಗು ರೈಲು ಮಾರ್ಗದ ಅಭಿವೃದ್ಧಿಯ ಕುರಿತು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜಿ. ಅವರನ್ನು ಭೇಟಿಯಾಗಿ ಚರ್ಚಿಸಿದರು. ತಿರುಪತಿಯಿಂದ ಬೆಂಗಳೂರು ಮತ್ತು ಮೈಸೂರಿಗೆ ಮಾರ್ಗ ಸಂಪರ್ಕಿಸುವುದರಿಂದ ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಪ್ರಸ್ತಾವಿತ ಅಭಿವೃದ್ಧಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ವಿನಂತಿಸಿಕೊಂಡ ಸಂಸದರು, ಇದರಿಂದ ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸಿದಂತಾಗುತ್ತದೆ ಎಂದು ತಿಳಿಸಿದರು. ಮಹಾರಾಜ ಕೋಚ್ ನ್ನು ಮೈಸೂರಿಗೆ ಸ್ಥಳಾಂತರಿಸುವುದು ಮತ್ತು ಪಾರಂಪರಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಸೂಕ್ತ ಎಂದು ವಿವರಿಸಿದರು.

Read More

ಸುಂಟಿಕೊಪ್ಪ ಸೆ.18 NEWS DESK : ಸುಂಟಿಕೊಪ್ಪ ಜೆಸಿಐ ಸಂಸ್ಥೆ ಹಾಗೂ “ವಿಷನ್ ಸ್ಪ್ರಿಂಗ್” ಸಂಯುಕ್ತಾಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಸುಂಟಿಕೊಪ್ಪದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ನೇತ್ರ ತಪಾಸಣಾ ಶಿಬಿರದಲ್ಲಿ 162 ಮಂದಿ ತಪಾಸಣೆಗೆ ಒಳಗೊಂಡು ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ಪಡೆದರು. ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮನುಷ್ಯನ ದೇಹದಲ್ಲಿ ಕಣ್ಣು ಪ್ರಧಾನ ಅಂಗವಾಗಿದ್ದು, ಅದನ್ನು ಸೂಕ್ಷ್ಮತೆಯಿಂದ ಕಾಪಾಡಿಕೊಳ್ಳಬೇಕು. ಕಣ್ಣಿನ ದೃಷ್ಟಿಯು ಸರಿಯಾಗಿದ್ದರೆ ಸ್ವತಂತ್ರವಾಗಿ ಜೀವಿಬಹುದೆಂದು ಅವರು ಹೇಳಿದರು. ಶಿಬಿರವನ್ನು ನಡೆಸಿಕೊಟ್ಟ ನೇತ್ರ ತಜ್ಞ ಡಾ.ಅವಿನಾಶ್ ಮಾತನಾಡಿ, ಸ್ವಯಂ ಸೇವ ಸಂಸ್ಥೆಗಳು ಸಮಾಜಮುಖಿಯಾಗಿ ಮತ್ತು ಸಾರ್ವಜನಿಕರಿಗೆ ಉಪಯೋಗವಾಗುವಂತಹ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿರುವುದು ಅತ್ಯಂತ ಶ್ಲಾಘನೀಯ ಎಂದರು. ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಅಧ್ಯಕ್ಷ ಸಂಪತ್‍ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಶಿಬಿರದಲ್ಲಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಡೆನ್ನಿಸ್ ಡಿಸೋಜ, ಜಿ.ಬಿ.ಹರೀಶ್, ಹೆಚ್.ಆರ್.ಅರುಣ್ ಕುಮಾರ್, ಪ್ರೀತಂ ಪ್ರಭಾಕರ್ ಸದಸ್ಯ ನಿಯಾಜ್ ಸೇರಿದಂತೆ ಇತರರು ಹಾಜರಿದ್ದರು.

Read More

ಪೆರಾಜೆ ಸೆ.18 NEWS DESK : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ 7ನೇ ವಾರ್ಷಿಕ ಮಹಾಸಭೆಯು ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಸಹಕಾರ ಸಂಘವು ವರದಿ ವರ್ಷದಲ್ಲಿ 193 ಕೋಟಿ ವಾರ್ಷಿಕ ವ್ಯವಹಾರವನ್ನು ನಡೆಸಿ 38.47 ಲಕ್ಷ ಲಾಭಗಳಿಸಿದೆ. ವಿಶೇಷವಾಗಿ ರಬ್ಬರ್ ವ್ಯವಹಾರ ಮಾಡಿದ ಸದಸ್ಯರುಗಳಿಗೆ ಕೆ.ಜಿಗೆ ರೂ 2 ರಂತೆ ಪ್ರೋತ್ಸಾಹ ಧನವನ್ನು ನೀಡಲು 5.95 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ. ಸದಸ್ಯರಿಗೆ ಶೇ. 8 ರಂತೆ ಡಿವಿಡೆಂಡ್ ಘೋಷಿಸಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ಉಪಾಧ್ಯಕ್ಷ ಪಿ.ಎಂ.ಅಶೋಕ, ನಿರ್ದೇಶಕರುಗಳಾದ ಹೊನ್ನಪ್ಪ ಅಮಚೂರು, ಜಯರಾಮ ನಿಡ್ಯಮಲೆ ಬಿ, ಸೀತಾರಾಮ ಕದಿಕಡ್ಕ, ಧನಂಜಯ ಕೋಡಿ, ಪ್ರಮೀಳ ಬಂಗಾರಕೋಡಿ, ಪುಷ್ಪಾವತಿ ವ್ಯಾಪಾರೆ, ಪ್ರದೀಪ ಕೆ.ಎಂ, ದೀನರಾಜ್ ದೊಡ್ಡಡ್ಕ, ಶೇಷಪ್ಪ ನಾಯ್ಕ ನಿಡ್ಯಮಲೆ, ಪಿ.ಟಿ.ಜಯರಾಮ, ಕಿರಣ್ ಬಂಗಾರಕೋಡಿ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶಾಖಾ ವ್ಯವಸ್ಥಾಪಕರಾದ ಕೆ.ಜಿ.ಶ್ರೀನಿವಾಸ್…

Read More

ಮಡಿಕೇರಿ ಸೆ.17 NEWS DESK : ಸಂಕಷ್ಟದ ಬದುಕು ಸವೆಸುತ್ತಿರುವ ಜಿಲ್ಲಾ ವ್ಯಾಪ್ತಿಯ ದುಡಿಯುವ ವರ್ಗಕ್ಕೆ ನಿವೇಶನ ಅಥವಾ ವಸತಿ ಒದಗಿಸುವಲ್ಲಿ ಅಧಿಕಾರಕ್ಕೆ ಬಂದ ಪ್ರತಿ ಸರ್ಕಾರಗಳು ವಿಫಲವಾಗುತ್ತಿವೆ. ನಿವೇಶನ ರಹಿತರ ಕಡೆಗಣನೆಯನ್ನು ಖಂಡಿಸಿ ಸೆ.23 ರಂದು ದಕ್ಷಿಣ ಕೊಡಗಿನ ಪೊನ್ನಂಪೇಟೆಯಲ್ಲಿ ಮತ್ತು ಅ.3 ರಂದು ಸೋಮವಾರಪೇಟೆ ತಾಲ್ಲೂಕು ಕಚೇರಿಯ ಎದುರಿನಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ಜಿಲ್ಲಾ ಸಹ ಕಾರ್ಯದರ್ಶಿ ಹೆಚ್.ಎಂ.ಸೋಮಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಪಿಐ, ಕಾರ್ಮಿಕ ಸಂಘಟನೆ ಎಐಟಿಯುಸಿ ಮತ್ತು ನಿವೇಶನ ರಹಿತರ ಹೋರಾಟ ಸಮಿತಿ 2002 ರಿಂದ ನಿರಂತರವಾಗಿ ನಿವೇಶನಕ್ಕಾಗಿ ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಆರು ಸಾವಿರಕ್ಕೂ ಹೆಚ್ಚಿನ ಬಡ ಕೂಲಿ ಕಾರ್ಮಿಕ ಮಂದಿ ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದರೆ ಆಡಳಿತ ವ್ಯವಸ್ಥೆ ಇಲ್ಲಿಯವರೆಗು ಸ್ಪಂದಿಸಿಲ್ಲವೆಂದು ಆರೋಪಿಸಿದರು. ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಲಭ್ಯವಿರುವ ಸರ್ಕಾರಿ ಜಾಗವನ್ನು ಗುರುತಿಸಿ ನಿವೇಶನ…

Read More

ಮಡಿಕೇರಿ ಸೆ.17 NEWS DESK : ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ನೇಮಕಾತಿ ಪರೀಕ್ಷೆಯು ಡಿ.8 ರಂದು ನಿಗಧಿಯಾಗಿದೆ. ಈ ನೇಮಕಾತಿ ಪರೀಕ್ಷೆಯ ತಯಾರಿಗಾಗಿ ಸೆಪ್ಟೆಂಬರ್, 23 ರಂದು ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್‍(ರಿ) ನಲ್ಲಿ ಉಚಿತ ಕಾರ್ಯಾಗಾರ ಆಯೋಜಿಸಲಾಗಿದ್ದು, ನುರಿತ ವಿಷಯ ತಜ್ಞರಿಂದ ಮಾರ್ಗದರ್ಶನ ನೀಡಲಾಗುವುದು. ಆಸಕ್ತ ಪದವೀಧರ ವಿದ್ಯಾರ್ಥಿಗಳು ಈ ಅವಕಾಶದ ಉಪಯೋಗಪಡೆದುಕೊಳ್ಳಲು ಸೆ.22 ರೊಳಗೆ ಮೊಬೈಲ್ ಸಂಖ್ಯೆ 8660217739 ಸಂಪರ್ಕಿಸಿ ಈ ಉಚಿತ ಕಾರ್ಯಾಗಾರಕ್ಕೆ ಹೆಸರು ನೋಂದಣಿ ಮಾಡಿಕೊಳ್ಳಬಹುದು ಎಂದು ಹಾಸನ ಶಾಖೆಯ ಕೃಷಿಕ್ ಸರ್ವೋದಯ ಫೌಂಡೇಶನ್‍ನ ಕಾರ್ಯದರ್ಶಿ ತಿಳಿಸಿದ್ದಾರೆ.

Read More