ಮಡಿಕೇರಿ ಸೆ.17 NEWS DESK : ಆಲೂರು ಸಿದ್ದಾಪುರ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಗೋಣಿಮರೂರು ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಸೆಪ್ಟೆಂಬರ್, 18 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಬಾಣಾವರ, ಸಂಗಯ್ಯನಪುರ, ಭುವಂಗಾಲ, ಗೋಣಿಮರೂರು, ಗಣಗೂರು, ಉಂಜಿಗನಹಳ್ಳಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಸೆ.17 NEWS DESK : ಸೋಮನಾಥಪುರ ದೇವಾಲಯ ಸೇರಿದಂತೆ ವಿವಿಧ ದೇವಾಲಯ ಹಾಗೂ ಮೂರ್ತಿ/ ಪ್ರತಿಮೆಗಳ ಕೆತ್ತನೆಯಲ್ಲಿ ವಿಶ್ವಕರ್ಮ ಸಮಾಜದವರ ಕೊಡುಗೆ ಅಪಾರ ಎಂದು ಸಾಹಿತಿ ಡಾ.ಜೆ.ಸೋಮಣ್ಣ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಂಸ್ಕೃತಿ, ಆಚಾರ-ವಿಚಾರದಲ್ಲಿ ಹಾಗೂ ಕುಲಕಸುಬುನಲ್ಲಿ ವಿಶ್ವಕರ್ಮ ಸಮಾಜದವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ಸೋಮಣ್ಣ ಹೇಳಿದರು. ಎಂಜಿನಿಯರ್‍ಗಳ ರೀತಿಯಲ್ಲಿ ವಿಶ್ವಕರ್ಮರು ಮರ, ಚಿನ್ನ ಕೆತ್ತನೆ, ಕಬ್ಬಿಣ ಕೆಲಸ ಹೀಗೆ ಹಲವು ರೀತಿಯ ವೃತ್ತಿ ಕೌಶಲ್ಯದಲ್ಲಿ ತೊಡಗಿಸಿಕೊಂಡು ಕಾಯಕವೇ ಕೈಲಾಸ ಎಂಬಂತೆ ವೃತ್ತಿಯನ್ನೇ ಕುಲಕಸುಬನ್ನಾಗಿ ಮಾಡಿಕೊಂಡು ಮುನ್ನಡೆಯುತ್ತಾರೆ ಎಂದು ಸೋಮಣ್ಣ ನುಡಿದರು. ಪ್ರಾಚೀನ ಕಾಲದಲ್ಲಿ ದೇವಾನುದೇವತೆಗಳ ಸೃಷ್ಠಿಕರ್ತರು ವಿಶ್ವಕರ್ಮರಾಗಿದ್ದಾರೆ. ಸಿಂಧೂ ಬಯಲಿನ ನಾಗರಿಕತೆಯಂತೆ ದೇಶದಲ್ಲಿ ಹಲವು ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿ ವೆಂಕಟ್ ರಾಜಾ…
ಕುಶಾಲನಗರ, ಸೆ.17 NEWS DESK : ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದ ಸಹಯೋಗದೊಂದಿಗೆ ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕೂಡಿಗೆ ಕ್ಲಸ್ಟರ್ ನ ಕೂಡಿಗೆ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲ್ಲೂಕುಮಟ್ಟದ ವಿಜ್ಞಾನ ವಿಚಾರ ಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ ಹಾಗೂ ವಿಜ್ಞಾನ ನಾಟಕ ಸ್ಪರ್ಧೆ ನಡೆಯಿತು. ವಿವಿಧ ಪ್ರೌಢಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಎಲ್ಲಾ ಸ್ಪರ್ಧೆಗಳಲ್ಲಿ ಸಂತಸದಿಂದ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು. ವಿಜ್ಞಾನ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಎಂ.ವಿ.ಮಂಜೇಶ್, ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡು ಉತ್ತಮ ಸಾಧನೆ ಮಾಡಲು ಇಂತಹ ವಿಜ್ಞಾನ ಸ್ಪರ್ಧೆಗಳು ಉತ್ತಮ ವೇದಿಕೆ ಒದಗಿಸುತ್ತವೆ ಎಂದರು. ವಿದ್ಯಾರ್ಥಿಗಳಿಗೆ ವಿಜ್ಞಾನದ ಕುತೂಹಲ ಹಾಗೂ ಮಹತ್ವದ ಬಗ್ಗೆ ಅರಿವು ಮೂಡಿಸಲು ಇಂತಹ ವಸ್ತು ಪ್ರದರ್ಶನಗಳು ಪ್ರಮುಖ ಪಾತ್ರ ವಹಿಸುತ್ತದೆ. ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ…
ಮಡಿಕೇರಿ ಸೆ.17 NEWS DESK : ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ಕೊಡಗು ಘಟಕದ ವತಿಯಿಂದ ಮಡಿಕೇರಿಯ ಆರೋಹಣ ಯೋಗ ಮತ್ತು ಚಾರಣಿಗರ ತಂಡದ 31 ಸದಸ್ಯರು ಚಾರ್ ಧಾಮ್ ಯಾತ್ರೆ ಕೈಗೊಂಡಿದ್ದಾರೆ. ಮಡಿಕೇರಿಯ ಭಾರತೀಯ ವಿದ್ಯಾಭವನದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಭಾಸ್ಕರ್ ಮತ್ತು ಭಾರತೀಯ ವಿದ್ಯಾ ಭವನದ ಕಾರ್ಯದರ್ಶಿ ಬಾಲಾಜಿ ಕಶ್ಯಪ್ , ಯೂತ್ ಹಾಸ್ಟೆಲ್ ಅಸೋಸಿಯೇಶನ್ ನ ಅಧ್ಯಕ್ಷ ಅಯ್ಯಣ್ಣ, ರಾಜಶೇಖರ್, ಯೂತ್ ಹಾಸ್ಟೆಲ್ ನ ಪ್ರಧಾನ ಕಾರ್ಯದರ್ಶಿ ಅಯ್ಯಣ್ಣ, ಹಿರಿಯ ವೈದ್ಯರಾದ ಡಾ.ಮನೋಹರ್ ಜಿ.ಪಾಟ್ಕರ್, ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ಸದಸ್ಯರು, ಆರೋಹಣ, ಯೋಗ ತಂಡದ ಸದಸ್ಯರು ಹಾಗೂ ಮತ್ತಿತರರು ಚಾರ್ ಧಾಮ್ ಯಾತ್ರಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭ ಆರೋಹಣ ಚಾರಣ ತಂಡದ ಸಂಸ್ಥಾಪಕರು, ಚಾರ್ ಧಾಮ್ ಯಾತ್ರೆಯ ನೇತೃತ್ವ ವಹಿಸಿರುವ ಯೋಗ ಗುರು ಕೆ.ಕೆ.ಮಹೇಶ್ ಕುಮಾರ್ ಯಾತ್ರೆಯ ಬಗ್ಗೆ ಮಾಹಿತಿ ನೀಡಿದರು.
ಮಡಿಕೇರಿ ಸೆ.17 NEWS DESK : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಮಾಡಲಾಗುತ್ತಿದ್ದು, ನ.25ರ ಒಳಗೆ ಅರ್ಜಿ ಸಲ್ಲಿಸುವಂತೆ ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಹಾಗೂ ಕಾರ್ಯದರ್ಶಿ ಪೇರಿಯನ ಕೆ.ಉದಯಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಟಕಣೆ ನೀಡಿರುವ ಅವರು, 10ನೇ ತರಗತಿ ಕನ್ನಡ ಮಾಧ್ಯಮದಲ್ಲಿ ಶೇ.80 ಕ್ಕಿಂತ ಮೇಲ್ಪಟ್ಟು ಹಾಗೂ ಆಂಗ್ಲ ಮಾಧ್ಯಮದಲ್ಲಿ ಶೇ.90 ಕ್ಕಿಂತ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿಯುಸಿ ಮತ್ತು ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಮತ್ತು ಸಿ.ಇ.ಟಿ ಯಲ್ಲಿ 1000 ರ‍್ಯಾಂಕ್ ಒಳಗೆ ಮತ್ತು ಎನ್.ಇ.ಇ.ಟಿ (ನೀಟ್) ಯಲ್ಲಿ ರಾಷ್ಟ್ರಮಟ್ಟದಲ್ಲಿ 5000 ರ‍್ಯಾಂಕ್ ಒಳಗೆ ಪಡೆದುಕೊಂಡಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ನೀಡಲಾಗುವುದು. ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳು ನ.25ರ ಒಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಡನೆ ಅರ್ಜಿಯನ್ನು ಸಂಘದ ಕಚೇರಿಗೆ ತಲುಪಿಸಬೇಕು ಎಂದು ಹೇಳಿದ್ದಾರೆ. ವೈದ್ಯಕೀಯ,…
ಸಿದ್ದಾಪುರ ಸೆ.17 NEWS DESK : ಅಮ್ಮತ್ತಿಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪಾಲ್ಗೊಂಡು ಪ್ರಥಮ, ದ್ವಿತೀಯ ಸ್ಥಾನ ಗಳಿಸುವ ಮೂಲಕ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಡಿಕೇರಿ ಸೆ.17 NEWS DESK : ನೆಲ್ಲಿಹುದಿಕೇರಿ ಕರ್ನಾಟಕ ಪಬ್ಲಿಕ್ ಶಾಲೆಯ ಬಾಲಕರ ಫುಟ್ಬಾಲ್ ತಂಡವು ವಲಯ ಮಟ್ಟ, ತಾಲೂಕು ಮಟ್ಟ, ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಮಡಿಕೇರಿ ತಾಲ್ಲೂಕಿನ ಮೂರ್ನಾಡು ಶಾಲೆಯ ತಂಡವನ್ನು ಸೋಲಿಸುವುದರೊಂದಿಗೆ ಎಂಟು ಜಿಲ್ಲೆ ಗಳನ್ನೊಳಗೊಂಡ ವಿಭಾಗಿಯ ಮಟ್ಟದಲ್ಲಿ ಆಡುವ ಅರ್ಹತೆಯನ್ನು ಪಡೆದುಕೊಂಡಿತು. ನಂತರ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ ಹೀಗೆ ಎಂಟು ತಂಡಗಳನ್ನು ಒಳಗೊಂಡ ವಿಭಾಗೀಯ ಮಟ್ಟದಲ್ಲಿ ಜಯಶಾಲಿಯಾಗಿದೆ. ಫೈನಲ್ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಂಡವನ್ನು 1- 0 ಗೋಲ್ ಗಳಿಂದ ವಿಜಯಶಾಲಿಯಾಗಿ ರಾಜ್ಯಮಟ್ಟದಲ್ಲಿ ಆಡುವ ಅರ್ಹತೆಯನ್ನು ಪಡೆಯಿತು. ಶಾಲೆಯ ಮ್ಯಾನೆಜರ್ ಟಿ.ಎಸ್.ಶಶಿಕುಮಾರ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಶಿಕ್ಷಕಿ ರೆಮ್ಮಿ ನೀಡಿದ್ದಾರೆ.
ಮಡಿಕೇರಿ ಸೆ.17 NEWS DESK : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾರತದ ಮೀಸಲಾತಿ ವ್ಯವಸ್ಥೆ ಕುರಿತು ಅಮೆರಿಕಾದಲ್ಲಿ ನೀಡಿರುವ ಹೇಳಿಕೆ ಸಂವಿಧಾನ ವಿರೋಧಿಯಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕಾಂಗ್ರೆಸ್ ಪಕ್ಷ ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಕೇವಲ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮಾತ್ರ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಎಸ್.ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಅವರು, ಪರಿಶಿಷ್ಟರ ಭಾವನೆಗೆ ವಿರುದ್ಧವಾದ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ಅವರನ್ನು ಸಂಸತ್ ಸ್ಥಾನದಿಂದ ತಕ್ಷಣ ವಜಾಗೊಳಸಬೇಕೆಂದು ಒತ್ತಾಯಿಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿದ್ದುಕೊಂಡು ದೇಶದ ಬಗ್ಗೆ ಗೌರವಯುತವಾಗಿ ನಡೆದುಕೊಳ್ಳದೆ ವಿದೇಶದಲ್ಲಿ ಅಗೌರವದ ಮಾತುಗಳನ್ನಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆದಿವಾಸಿ, ಹಿಂದುಳಿದ…
ಮಡಿಕೇರಿ ಸೆ.17 NEWS DESK : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 74ನೇ ಜನ್ಮದಿನಾಚರಣೆಯ ಪ್ರಯುಕ್ತ ಸಿದ್ದಾಪುರದ ಕೇಸರಿ ಯೂತ್ ಮೂವ್ ಮೆಂಟ್ ವತಿಯಿಂದ ಸಿದ್ದಾಪುರ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ, ವೈದ್ಯರುಗಳಿಗೆ, ಆಸ್ಪತ್ರೆಯ ಸಿಬ್ಬಂದಿಗಳಿಗೆ ಮತ್ತು ಸಾರ್ವಜನಿಕರಿಗೆ ಹಣ್ಣು-ಹಂಪಲುಗಳು ಮತ್ತು ಬ್ರೆಡ್ ಗಳನ್ನು ವಿತರಿಸಲಾಯಿತು. ಈ ಸಂಧರ್ಭ ಕೇಸರಿ ಯೂತ್ ಮೂವ್ ಮೆಂಟ್ ನ ಪದಾದಿಕಾರಿಗಳು ಹಾಜರಿದ್ದರು.
ನವದೆಹಲಿ NEWS DESK ಸೆ.17 : ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ರೈತರ ಪ್ರಮುಖ ಬೆಳೆಯಾದ ಕರಿಮೆಣಸಿಗೆ ಲಗತ್ತಿಸಲ್ಪಡುವ ಜಿ.ಎಸ್.ಟಿ ವಿನಾಯಿತಿ ಕುರಿತು ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರೊಂದಿಗೆ ಚರ್ಚಿಸಿದರು. ಕರಿಮೆಣಸಿಗೆ ವಿಧಿಸುವ ಜಿ.ಎಸ್.ಟಿಯಿಂದಾಗುವ ಸಾಧಕ ಬಾಧಕಗಳ ಬಗ್ಗೆ ಗಮನ ಸೆಳೆದ ಸಂಸದರು ವಿನಾಯಿತಿಯನ್ನು ಮುಂದುವರಿಸುವAತೆ ಕೋರಿ ಮನವಿ ಸಲ್ಲಿಸಿದರು.






