ಲೇಖಕ: admin

ಸುಂಟಿಕೊಪ್ಪ ಸೆ.17 NEWS DESK : ಸುಂಟಿಕೊಪ್ಪದಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದನ್ನು ಸಂಭ್ರಮದಿಂದ ಆಚರಿಸಿದರು. ಮುಂಜಾನೆ ಸುಂಟಿಕೊಪ್ಪ ಪಟ್ಟಣದ ವಿವಿಧ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಮಿಲಾದ್ ಸಂದೇಶ ಜಾಥಾ ನಡೆಸಿ ಶಾಂತಿ ಸೌಹಾರ್ದತೆಯ ಸಂದೇಶ ಸಾರಿದರು. ವಿಶೇಷ ಉಡುಗೆಗಳನ್ನು ತೊಟ್ಟು ದಫ್ ಪ್ರದರ್ಶನ ನೀಡಿದರು. ಸುಂಟಿಕೊಪ್ಪ ಶ್ರೀ ಕೋದಂಡ ರಾಮ ದೇವಾಲಯದ ಬಳಿಯಲ್ಲಿ ಪಂಚಾಯಿತಿ ಸದಸ್ಯ ಮಂಜು, ಬಿ.ಎಂ.ಸುರೇಶ್, ಉದ್ಯಮಿ ದೀನು ದೇವಯ್ಯ, ಧನು ಕಾವೇರಪ್ಪ, ಸುರೇಶ್‍ಗೋಪಿ, ಎಂ.ಎಸ್.ಸುನಿಲ್ ಹಾಗೂ ಭುವಿತ್ ಮುಸ್ಲಿಂ ಬಾಂಧವರಿಗೆ ತಂಪು ಪಾನೀಯವನ್ನು ವಿತರಿಸುವ ಮೂಲಕ ಸೌಹಾರ್ದತೆಯನ್ನು ಮೆರೆದರು. ಸುಂಟಿಕೊಪ್ಪ ಪಟ್ಟಣದ ಸುಂಟಿಕೊಪ್ಪ ಮುಸ್ಲಿಂ ಜಮಾಯತ್‍ನ ಇಬ್ರಾಹಿಂ ಹ್ಯಾಸನಿ, ಸುನ್ನಿ ಹನಫಿ ಮುಸ್ಲಿಂ ಜಮೀಯ ಮಸೀದಿ ಮೌಲನಾ ಜುಬ್ಬೇರ್ ಅಜಾರತ್, ಸುನ್ನಿ ಶಾಫಿ ಜುಮಾ ಮಸ್ಜಿದ್ ಧಾರ್ಮಿಕ ಮೌಲವಿ ಮೊಹಮದ್ ಹುಸೈನ್ ಹಾಗೂ ಗದ್ದೆಹಳ್ಳದ ನೂರು ಜುಮ್ಮ ಮಸ್ಜಿದ್‍ನ ಅಬ್ಧುಲ್ ಅಜೀಜ್ ಅವರುಗಳು ಧಾರ್ಮಿಕ ಪ್ರವಚ ನೀಡಿದರು. ಮುಂಜಾಗೃತ ಕ್ರಮವಾಗಿ ಕೊಡಗು ಜಿಲ್ಲಾ ವರೀಷ್ಠಾಧಿಕಾರಿ…

Read More

ಸುಂಟಿಕೊಪ್ಪ ಸೆ.17 NEWS DESK : ಮಹಾಗಣಪತಿ ಮತ್ತು ಗೋಪಾಲಕೃಷ್ಣ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿದ್ದ 39ನೇ ವರ್ಷದ ಗೌರಿ ಗಣೇಶ ವಿಸರ್ಜನಾಮಹೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ವಿಸರ್ಜನೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಮುಂಜಾನೆಯಿಂದಲೇ ನಿತ್ಯ ಪೂಜೆ, ಗಣಪತಿ ಹೋಮ ಹಾಗೂ ಮಹಾಮಂಗಳಾರತಿ ನಡೆಯಿತು. ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ಸಂಜೆ ವಿದ್ಯುತ್ ದೀಪಾಲಂಕೃತ ಭವ್ಯ ಮಂಟಪದಲ್ಲಿ ಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ಕುಳ್ಳಿರಿಸಿ ಡಿಜೆ ಸಂಗೀತ, ಗೊಂಬೆ ಕುಣಿತ, ಡೊಳ್ಳು ಕುಣಿತದೊಂದಿಗೆ ಆರಂಭಗೊಂಡ ಶೋಭಯಾತ್ರೆಯು ಮೆಟ್ನಳ್ಳ ಸರ್ಕಲ್ ವರೆಗೆ ತೆರಳಿ ಅಲ್ಲಿಂದ ಹಿಂತಿರುಗಿ ಮುಖ್ಯ ರಸ್ತೆಯಲ್ಲಿ ಸಾಗಿ ರಾತ್ರಿ ದಾಸಂಡ ರಮೇಶ್ ಚಂಗಪ್ಪ ಅವರ ಜಾಗದಲ್ಲಿರುವ ಕೆರೆಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭ ಪ್ರಮುಖರಾದ ದಾಸಂಡ ರಮೇಶ್ ಚಂಗಪ್ಪ, ದಾಸಂಡ ಜಗದೀಶ್, ದಾಸಂಡ ರಂಜನ್, ಮಹೇಶ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಇದ್ದರು. ಮುಂಜಾಗ್ರತಾ ಕ್ರಮವಾಗಿ ಸುಂಟಿಕೊಪ್ಪ ಪೊಲೀಸ್ ಠಾಣಾವತಿಯಿಂದ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

Read More

ನಾಪೋಕ್ಲು ಸೆ.17 NEWS DESK : ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ವಿವಿಧ ಕಾರ್ಯಕ್ರಮಗಳೊಂದಿಗೆ ಈದ್ ಮಿಲಾದ್ ಅನ್ನು ಸಂಭ್ರಮದಿಂದ ಆಚರಿಸಲಾಯಿತು. ನಾಪೋಕ್ಲು ವ್ಯಾಪ್ತಿಯ ವಿವಿಧ ಮಸೀದಿ, ಮದರಸಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಿತು. ವಿವಿಧ ಜಮಾಯತ್ ಗಳಿಂದ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಯಿತು. ಮದರಸ ವಿದ್ಯಾರ್ಥಿಗಳಿಂದ ಹಾಗೂ ಯುವಕರಿಂದ ದಫ್ ಪ್ರದರ್ಶನ ನಡೆಯಿತು. ಹಳೆ ತಾಲೂಕಿನ ಜುಮ್ಮಾ ಮಸೀದಿ, ಸೇರಿದಂತೆ ವಿವಿಧ ಜಮಾಯತ್ ಪದಾಧಿಕಾರಿಗಳು ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ತೆರಳಿದರು. ಮುಹಮ್ಮದ್ ನಬಿ 99ನೇ ಯ ಜನ್ಮದಿನದ ಅಂಗವಾಗಿ ಕೊಳಕೇರಿ ಸುನ್ನಿ ಮುಸ್ಲಿಂ ಜಮಾಯತ್ ವತಿಯಿಂದ ನಡೆದ ಈದ್ ಮಿಲಾದ್ ಜಾಥಾ ಗಮನ ಸೆಳೆಯಿತು.ಮೆರವಣಿಗೆ ಯಲ್ಲಿ ಜುಮಾ ಮಸೀದಿಯ ಖತೀಬ್ ಜುರೈಜ್ ಸಹದಿ, ಅಧ್ಯಕ್ಷ ಎ.ಎ.ಅಶ್ರಫ್ , ಉಪಾಧ್ಯಕ್ಷ ಎಂ.ವೈ.ಹಫೀಲ್ ಸಹದಿ ಖಜಾಂಚಿ ಕೆ.ವೈ.ಅಶ್ರಫ್, ಕಾರ್ಯದರ್ಶಿ ಎಂ.ಯಚ್ ರಫೀಕ್ ಮತ್ತು ಗ್ರಾಮಸ್ಥರು ಪುಟಾಣಿ ಮಕ್ಕಳು ಮೆರವಣಿಗೆಯಲ್ಲಿ ಹಾಜರಿದ್ದರು. ಮೆರವಣಿಗೆಯು ಕಾಲ್ನಡಿಗೆಯಲ್ಲಿ ಕೊಳಕೇರಿಯಿಂದ ಕುಂಜಿಲದವರೆಗೆ ಸಾಗಿತು. ಸಮೀಪದ ಕೊಟ್ಟಮುಡಿ, ಎಮ್ಮೆಮಾಡು, ಪಡಿಯಾಣಿ ಮತ್ತಿತರ…

Read More

ಮಡಿಕೇರಿ ಸೆ.17 NEWS DESK : ಭಾರತೀಯ ಶಿಕ್ಷಣ ಪಿತಾಮಹ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ 136ನೇ ಜನ್ಮ ದಿನಾಚರಣೆ( ಶಿಕ್ಷಕರ ದಿನಾಚರಣೆ)ಯ ಅಂಗವಾಗಿ ಬೆಂಗಳೂರಿನ ಕರ್ನಾಟಕ ಪ್ರೆಸ್ಸ್ ಕ್ಲಬ್ ವತಿಯಿಂದ ಆಯೋಜಿಸಲಾದ ರಾಜ್ಯ ಮಟ್ಟದ ಗುರು ಶ್ರೇಷ್ಟ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಚೀಯಕಪೂವಂಡ ಶ್ವೇತನ್ ಚೆಂಗಪ್ಪ ಅವರಿಗೆ “ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಿದರು. ಕೊಡಗು ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣ ನಿಧಿ ಮತ್ತು ಬೆಂಗಳೂರು ವಿದ್ಯಾರ್ಥಿಗಳ ಕ್ಷೇಮಾಭಿವೃಧಿ ನಿಧಿ ವತಿಯಿಂದ 2024-25ನೇ ಸಾಲಿನಲ್ಲಿ ನೀಡಿದ”ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ”ಪ್ರಶಸ್ತಿಗೂ ಇವರು ಭಾಜಿನರಾಗಿದ್ದಾರೆ.

Read More

ಮಡಿಕೇರಿ ಸೆ.17 NEWS DESK : ದಲಿತ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಹಾಗೂ ಕನ್ನಡ ಭಾಷಾ ಬೋಧಕರಿಗೆ ಜಿಲ್ಲಾ ಮಟ್ಟದ ಕಾರ್ಯಾಗಾರ ಸಮಾರಂಭವು ಸೆ.22 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ದಸಾಪ ಅಧ್ಯಕ್ಷ ಅರ್ಜುನ್ ಮೌರ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ನಗರದ ವಾಣಿಜ್ಯೋದ್ಯಮಿಗಳ ಸಹಕಾರ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ ಸಂಗಪ್ಪ ಆಲೂರ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ದಲಿತ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಡಾ.ಅರ್ಜುನ್ ಗೋಳಸಂಗಿ ವಹಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಯಲದ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಎಸ್.ನರೇಂದ್ರ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು “ಕನ್ನಡ ಸಾಹಿತ್ಯದಲ್ಲಿ ಪರಿವರ್ತನೆಯ ಹೆಗ್ಗುರುತುಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದರು. ವಿಶೇಷ ಆಹ್ವಾನಿತರಾಗಿ ದಸಾಪ ಮೈಸೂರು ವಿಭಾಗೀಯ ಸಂಯೋಜಕ ಡಾ.ಚಂದ್ರಗುಪ್ತ, ಮಡಿಕೇರಿ ನಗರಸಭಾ ಮಾಜಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ…

Read More

ಗೋಣಿಕೊಪ್ಪ ಸೆ.17 NEWS DESK : ಚೇತನ ಫೌಂಡೇಶನ್ ಕರ್ನಾಟಕ ಮತ್ತು ಕರ್ನಾಟಕ ಸೋಶಿಯಲ್ ಕ್ಲಬ್ ಸಹಯೋಗದಲ್ಲಿ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಶಿಕ್ಷಕಿ ವಾಮನ ಅವರಿಗೆ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಸಾಧಕರ ಸಮಾಗಮ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

Read More

ಮಡಿಕೇರಿ ಸೆ.17 NEWS DESK  : ಕನ್ನಡ ನಾಡಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರಮುಖರಾದ ಸರ್.ಎಂ.ವಿಶ್ವೇಶ್ವರಯ್ಯರವರು ಸಾಹಿತ್ಯ ಸಂಸ್ಕೃತಿಯನ್ನು ಬೆಳೆಸುವಲ್ಲಿ ದಾರ್ಶನಿಕರಾಗಿ ದುಡಿದವರು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪಕರಲ್ಲಿ ಒಬ್ಬರಾದ ಸರ್.ಎಂ ವಿಶ್ವೇಶ್ವರಯ್ಯ ಅವರು 164ನೇ ಜನ್ಮದಿನಾಚರಣೆಯ ಕುರಿತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಸರ್.ಎಂ. ವಿಶ್ವೇಶ್ವರಯ್ಯ ಜನ್ಮದಿನವನ್ನು ಇಂಜಿನಿಯರ್ಸ್ ಡೇ – ಅಭಿಯಂತರರ ದಿನವನ್ನಾಗಿ ಕರ್ನಾಟಕ ಸರ್ಕಾರ ಆಚರಿಸುತ್ತಿದೆ. 15.09.1861ರಲ್ಲಿ ಶ್ರೀನಿವಾಸ ಶಾಸ್ತ್ರಿ ಮತ್ತು ವೆಂಕಟಲಕ್ಷ್ಮಮ್ಮ ದಂಪತಿಗಳ ಪುತ್ರನಾಗಿ ಇಂದಿನ ಕೋಲಾರ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮದಲ್ಲಿ ಜನ್ಮ ಪಡೆದರು. ಇವರು ಬೆಂಗಳೂರು ಮತ್ತು ಪೂನಾದಲ್ಲಿ ವಿದ್ಯಾಭ್ಯಾಸ ಪಡೆದು ಇಂಜಿನಿಯರ್ ಪದವೀಧರರಾದರು.ಮುಂಬೈ ಕರ್ನಾಟಕದ ಕುಡಿಯುವ ನೀರು ಯೋಜನೆ, ಹೈದರಾಬಾದ್ ನಿಜಾಮರ ಆಡಳಿತದಲ್ಲಿ ಹೈದರಾಬಾದಿಗೆ ಒಳಚರಂಡಿ ನಿರ್ಮಾಣ ಕಾರ್ಯ ರಚಿಸಿದರು.…

Read More

ಮಡಿಕೇರಿ NEWS DESK ಸೆ.16 : ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮಡಿಕೇರಿಯ ಬದ್ರಿಯಾ ಮಸೀದಿಯಲ್ಲಿ ಶ್ರದ್ಧಾಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಅಮ್ಮನ ಕಾಲಡಿಯಲ್ಲಿ ಸ್ವರ್ಗವಿದೆ ಎಂದು ಕಲಿಸಿದ ಪ್ರವಾದಿ {ಸ} ಅವರ ಮಾರ್ಗದರ್ಶನವನ್ನು ನಾವು ಪಾಲಿಸಬೇಕು, ವಯಸ್ಸಾದ ತಂದೆ ತಾಯಿಯನ್ನು ಕಡೆಗಣಿಸಬಾರದು ಎಂದು ಪ್ರಮುಖರು ಕರೆ ನೀಡಿದರು. ಪ್ರಮುಖರಾದ ಖಾದರ್ ಬಾಖವಿ, ಜಾಮಿಯಾ ಮಸೀದಿ ಇಮಾಮ್ ಮೌ| ನಾಸಿರುದ್ದೀನ್ ಶಾ, ಜಾಮೀಯಾ ಮಸೀದಿ ಅಧ್ಯಕ್ಷ ನಝೀರ್ ಅಹಮದ್, ಬದ್ರಿಯಾ ಮಸೀದಿ ಅಧ್ಯಕ್ಷ ಅಮಿನ್ ಮೊಹ್ಸಿನ್, ನಗರಸಭಾ ಸದಸ್ಯ ಮನ್ಸೂರ್ ಅಹಮದ್, ಮದ್ರಸ ಮುಖ್ಯ ಉಪಾಧ್ಯಾಯ ಹನೀಫ್ ಪೈಝಿ ಉಪಸ್ಥಿತರಿದ್ದರು. ಈದ್ ಮಿಲಾದ್ ಪ್ರಯುಕ್ತ ಮದರಸ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Read More

ಮಡಿಕೇರಿ NEWS DESK ಸೆ.16 : ಕರ್ನಾಟಕ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಕುಶಾಲನಗರ ಜ್ಞಾನಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಡಿ.ಎಲ್.ಚಂದ್ರಕಲಾ ಅವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜು ಹೊರಟ್ಟಿ, ಸಚಿವರುಗಳಾದ ಮಧು ಬಂಗಾರಪ್ಪ, ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತಿತರ ಪ್ರಮುಖರ ಸಮ್ಮುಖದಲ್ಲಿ ಚಂದ್ರಕಲಾ ಪ್ರಶಸ್ತಿ ಪಡೆದರು.

Read More

ಮಡಿಕೇರಿ NEWS DESK ಸೆ.16 : ಕೊಡಗು ಜಿಲ್ಲೆಯಲ್ಲಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಲ್ಲಿ ತೊಡಗಿರುವ ಉದ್ಯಮಪತಿ ಬಂಡವಾಳಶಾಹಿಗಳು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಮಾಜ ಸೇವೆಯ ಮುಖವಾಡ ತೊಟ್ಟು ಕೊಡುಗೆಗಳನ್ನು ನೀಡುತ್ತಿದ್ದಾರೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಶೀಘ್ರ ತಡೆಯದಿದ್ದಲ್ಲಿ ಕೇರಳದ ವಯನಾಡು ಮಾದರಿಯ ಪ್ರಾಕೃತಿಕ ದುರಂತ ಇಲ್ಲಿಯೂ ಸಂಭವಿಸಬಹುದೆಂದು ಆತಂಕ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ಹುದಿಕೇರಿಯಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಲ್ಲಿ ತೊಡಗಿರುವ ಉದ್ಯಮಪತಿ ಬಂಡವಾಳಶಾಹಿಗಳು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಮಾಜ ಸೇವೆಯ ಮುಖವಾಡ ತೊಟ್ಟು ಕೊಡುಗೆಗಳನ್ನು ನೀಡುತ್ತಿದ್ದಾರೆ. ಕಪ್ಪುಹಣವನ್ನು ಬಿಳಿ ಮಾಡುವುದಕ್ಕಾಗಿ ಕೊಡಗಿನ ಪ್ರಕೃತಿಯ ಮೇಲೆ ದಾಳಿ ನಡೆಸಿ ರೆಸಾರ್ಟ್, ವಿಲ್ಲಾ, ಟೌನ್…

Read More