ಗೋಣಿಕೊಪ್ಪ ಸೆ.16 NEWS DESK : ಎರಡು ಕೋಟಿ ಅನುದಾನದಲ್ಲಿ ನಡೆಯುತ್ತಿರುವ ಗೋಣಿಕೊಪ್ಪ ಬಸ್ ನಿಲ್ದಾಣದ ಕಾಮಗಾರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಕಳೆದ ಹತ್ತು ವರ್ಷಗಳಿಂದ ಜನರ ಬಹು ಬೇಡಿಕೆಯಾಗಿದ್ದ ಬಸ್ ನಿಲ್ದಾಣ ಇದಾಗಿದ್ದು, ನೂತನ ವರ್ಷಾರಂಭದಲ್ಲಿ ನಾಗರಿಕರ ಸೇವೆಗೆ ಲಭ್ಯವಾಗಲಿದೆ. ಈ ನಿಟ್ಟಿನಲ್ಲಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು. ಈ ಸಂದರ್ಭ ಪಕ್ಷದ ಮುಂಡರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಸೆ.16 NEWS DESK : ಎತ್ತಿನಗಾಡಿ ಬಿದ್ದು ಮೃತಪಟ್ಟ ತೊರೆನೂರು ಗ್ರಾಮದ ಟಿ.ಎಂ.ತರುಣ್ ಎಂಬ ಶಾಲಾ ಬಾಲಕ ಮನೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಹಾಗೂ ಸ್ಥಳೀಯ ಮುಖಂಡರುಗಳು, ಗ್ರಾಮಸ್ಥರು ಹಾಜರಿದ್ದರು.
ಸೋಮವಾರಪೇಟೆ ಸೆ.16 NEWS DESK : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕಕ್ಕೆಹೊಳೆ ಜಂಕ್ಷನ್‍ನಿಂದ ಜೇಸಿವೇದಿಕೆಯ ವರಗೆ ಮಾನವ ಸರಪಳಿ ರಚಿಸಿ ಭಾರತ ಸಂವಿಧಾನ ಪ್ರಸ್ತಾವನೆ ಓದಲಾಯಿತು. ಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ, ನಾಡಗೀತೆ ಹಾಡಿದರು. ಬಾಣಾವರ ರಸ್ತೆಯಲ್ಲಿರುವ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಪ್ರತಿಮೆಯ ಪಕ್ಕದಲ್ಲಿ ಸಸಿಯನ್ನು ನೆಡಲಾಯಿತು. ಈ ಸಂದರ್ಭ ತಹಶೀಲ್ದಾರ್ ಶ್ರೀಧರ್ ಕಂಕನವಾಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ಪ.ಪಂ ಮುಖ್ಯಾಧಿಕಾರಿ ನಾಚಪ್ಪ, ಎಸಿಎಫ್ ಗೋಪಾಲ್, ಪ್ರಮುಖರಾದ ಬಿ.ಇ.ಜಯೇಂದ್ರ, ಡಿ.ಎಸ್.ನಿರ್ವಾಣಪ್ಪ, ಹೊನ್ನಪ್ಪ ಇದ್ದರು.
ಮಡಿಕೇರಿ ಸೆ.16 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಅಕ್ಟೋಬರ್ 5 ರಂದು ನಗರದ ಗಾಂಧಿ ಮೈದಾನದಲ್ಲಿ 11 ನೇ ವಷ೯ದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪಧೆ೯ಗಳನ್ನು ಆಯೋಜಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ಮತ್ತು ಹಾಗೂ ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ವಿದ್ಯಾಥಿ೯ಗಳಿಗಾಗಿ ಮಕ್ಕಳ ದಸರಾ ಸ್ಪಧೆ೯ಗಳು ಅ. 5 ರಂದು ಬೆಳಗ್ಗೆ 9.30 ಗಂಟೆಯಿಂದ ಗಾಂಧಿ ಮೈದಾನದಲ್ಲಿ ಪ್ರಾರಂಭವಾಗಲಿದೆ. ಮಕ್ಕಳ ಸಂತೆ ಮತ್ತು ಮಕ್ಕಳ ಅಂಗಡಿ :: ಎಸ್ ಎಸ್ ಎಲ್ ಸಿ ಒಳಗಿನ ವಿದ್ಯಾಥಿ೯ಗಳಿಗಾಗಿ ಆಯೋಜಿತ ಮಕ್ಕಳ ಸಂತೆಯಲ್ಲಿ ಒಂದು ತಂಡದಲ್ಲಿ ಗರಿಷ್ಟ 5 ವಿದ್ಯಾಥಿ೯ಗಳು ಪಾಲ್ಗೊಳ್ಳಬಹುದು. ಸಂತೆಯಲ್ಲಿ ಗ್ರಾಮೀಣ ಪದಾಥ೯ಗಳ ಮಾರಾಟಕ್ಕೆ ಆದ್ಯತೆ ಇದೆ. ಮಕ್ಕಳ ಅಂಗಡಿಯಲ್ಲಿ ಗರಿಷ್ಟ ಇಬ್ಬರು ಸ್ಪಧಿ೯ಗಳಿಗೆ ಅವಕಾಶವಿದೆ. ಮಕ್ಕಳ ಮಂಟಪ :: 10 ನಿಮಿಷದ ಪ್ರದಶ೯ನಾವಧಿಯುಳ್ಳ ಮಂಟಪ ಸ್ಪಧೆ೯ಯಲ್ಲಿ…
ಸೋಮವಾರಪೇಟೆ ಸೆ.16 NEWS DESK : ಮಲಯಾಳಿ ಬಾಂಧವರ ಪ್ರಮುಖ ಹಬ್ಬವಾದ ಓಣಂ ಅನ್ನು ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಮನೆ ಮನೆಗಳಲ್ಲಿ ಸಂಭ್ರಮದಿಂದ ಆಚರಿಸಿದರು. ಮಹಿಳೆಯರು ಮನೆಯ ಎದುರು ಹೂವುಗಳಿಂದ ಪೂಕಳಂ ರಚಿಸಿ ಸಂಭ್ರಮಿಸಿದರು. ಪುರುಷರೂ ಸಹ ಶ್ವೇತ ವರ್ಣದ ವಸ್ತ್ರಗಳನ್ನು ಧರಿಸಿ ಪೂಕಳಂ ಹಾಕುವುದರಲ್ಲಿ ಭಾಗಿಯಾದರು. ಹಬ್ಬದ ವಿಶೇಷ ಖಾದ್ಯಗಳನ್ನು ಮಾಡಿ ಸವಿದ ಹಬ್ಬಾಚರಣೆ ಮಾಡಿದರು. ಸೋಮವಾರಪೇಟೆ ತಾಲ್ಲೂಕಿನ ಐಗೂರು ಗ್ರಾಮದ ಪದ್ಮಾವತಿ ಮತ್ತು ಮೊಮ್ಮಕ್ಕಳು ವಿವಿಧ ಹೂವಿನ ಪೂಕಳಂ ಬಿಡಿಸಿ ಓಣಂ ಆಚರಿಸಿದರು.
ಸೋಮವಾರಪೇಟೆ ಸೆ.16 NEWS DESK : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪ್ರಸಕ್ತ ಸಾಲಿನಲ್ಲಿ 1.19 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷೆ ರೂಪಾ ಸತೀಶ್ ಹೇಳಿದರು. ಸ್ಥಳೀಯ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಹಕಾರ ಸಂಘದಲ್ಲಿ 5209 ಮಂದಿ ಸದಸ್ಯರಿದ್ದು, ಪ್ರಸಕ್ತ ಅವಧಿಯಲ್ಲಿ 300 ಮಂದಿ ನೂತನವಾಗಿ ಸದಸ್ಯರಾಗಿದ್ದಾರೆ. 380 ಕೋಟಿ ರೂ., ವ್ಯವಹಾರ ಮಾಡಲಾಗಿದೆ. ಸದಸ್ಯರಿಗೆ ಶೆ.22 ಲಾಭಾಂಶ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಸಂಘದ ಒಟ್ಟು ದುಡಿಯುವ ಬಂಡವಾಳ 77.26 ಕೋಟಿ ರೂ., ಆಗಿದ್ದು, ಸಂಘದಲ್ಲಿ ಜಾಮೀನು ಸಾಲದ ವಿಮಾ ಯೋಜನೆ, ಪಿಗ್ಮಿ ಓವರ್‍ಡ್ರಾಫ್ಟ್ ಸಾಲದ ವಿಮಾ ಯೋಜನೆ, ಸ್ವಸಹಾಯ ಮತ್ತು ಜಂಟಿ ಭಾದ್ಯತಾ ಗುಂಪುಗಳ ಯೋಜನೆಯನ್ನು ರೂಪಿಸಲಾಗಿದೆ. ಹಿಂದಿನಿಂದ ಇಲ್ಲಿಯವರೆಗೂ ಸಂಘವು ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ ಎ. ತರಗತಿಯನ್ನು ಪಡೆದುಕೊಂಡಿದೆ ಎಂದು ಅಧ್ಯಕ್ಷರು ಮಾಹಿತಿ ನೀಡಿದರು. ಸಂಘದಲ್ಲಿ ಯಶಸ್ವಿನಿ ರೈತರ ವಿಮಾ ಯೋಜನೆ ಜಾರಿಯಲ್ಲಿದ್ದು, 2023-24ನೇ…
ಮಡಿಕೇರಿ ಫೆ.16 NEWS DESK : ಈದ್ ಮಿಲಾದ್ ಅಂಗವಾಗಿ ಮಡಿಕೇರಿಯ ಬದ್ರಿಯಾ ಜಮಾಅತ್ ಆಶ್ರಯದಲ್ಲಿ ನಗರದಲ್ಲಿ ಬೃಹತ್ ಮಿಲಾದ್ ರ‍್ಯಾಲಿ ನಡೆಯಿತು. ನಗರದ ಗದ್ದುಗೆ ಬಳಿಯಿಂದ ಆರಂಭಗೊಂಡ ಜಾಥಾ ಹಳೆ ಖಾಸಗಿ ಬಸ್ ನಿಲ್ದಾಣದ ಮಾರ್ಗವಾಗಿ ತೆರಳಿ ಜಮಾಅತ್ ಸಭಾಂಗಣದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ದಫ್ ಪ್ರದರ್ಶನ ನಡೆಯಿತು. ಜಿಲ್ಲೆಯ ವಿವಿಧೆಡೆಗಳಿಂದ ಸಾವಿರಾರು ಮಂದಿ ಭಾಗವಹಿಸಿ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಶಾಂತಿ, ಸಂದೇಶಗಳನ್ನು ಸಾರಿದರು. ಬದ್ರಿಯಾ ಜಮಾಅತ್ ಅಧ್ಯಕ್ಷ ಅಮಿನ್ ಮೊಹ್ಸಿನ್ ಅಧ್ಯಕ್ಷತೆಯಲ್ಲಿ ನಡೆದ ಜಾಥದಲ್ಲಿ ಸಹಾಯಕ ಖದೀಬ್ ಹನಿಫ್ ಫೈಝಿ, ಜಮಾಅತ್ ಹಿಮಾಮ್ ನಜೀಮ್ ಅತ್ತರ್, ಸಮಿತಿ ಸದಸ್ಯ ಅಹಮ್ಮದ್, ಎಂ.ಎಂ.ಮಸೀದಿ ಕಾರ್ಯದರ್ಶಿ ಹಾರುಲ್ ಸೇರಿದಂತೆ ಮತ್ತಿತರರು ಇದ್ದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಡಿವೈಎಸ್ಪಿ ಮಹೇಶ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಮಡಿಕೇರಿ ಸೆ.16 NEWS DESK : ಒಕ್ಕಲಿಗ ಜನಾಂಗದ ವಿರುದ್ಧ ಹೇಳಿಕೆ ನೀಡಿರುವ ಮತ್ತು ಒಕ್ಕಲಿಗ ಮಹಿಳೆಯ ಬಗ್ಗೆ ಆಕ್ಷೇಪಾರ್ಹ ಪದ ಬಳಸಿರುವ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ, ಸೋಮವಾರಪೇಟೆ ಅಧ್ಯಕ್ಷ ಎ.ಆರ್.ಮುತ್ತಣ್ಣ ಹಾಗೂ ಕುಶಾಲನಗರ ಅಧ್ಯಕ್ಷ ಎಂ.ಕೆ.ದಿನೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರುಗಳು ಒಕ್ಕಲಿಗ ಸಮುದಾಯದ ಬಗ್ಗೆ ಘರ್ಷಣೆಗೆ ಪ್ರಚೋದನೆ ಉಂಟು ಮಾಡುವ ರೀತಿಯಲ್ಲಿ ಮುನಿರತ್ನ ಅವರು ಮಾತನಾಡಿದ್ದಾರೆ ಮತ್ತು ಒಕ್ಕಲಿಗ ಮಹಿಳೆಯ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮೂಡಿಸುವ ಜವಾಬ್ದಾರಿ ಹೊತ್ತಿರುವ ಜನಪ್ರತಿನಿಧಿಯೊಬ್ಬರು ತಮ್ಮ ಲಾಭಕ್ಕಾಗಿ ಜನಾಂಗಗಳ ನಡುವೆ ದ್ವೇಷ ಹುಟ್ಟಿಸಲು ಮುಂದಾಗಿರುವುದು ಖಂಡನೀಯ. ಒಕ್ಕಲಿಗ ಸಮಾಜ ಮತ್ತು ಒಕ್ಕಲಿಗ ಮಹಿಳೆಯ ಬಗ್ಗೆ ಮುನಿರತ್ನ ಅವರು ನೀಡಿರುವ ಕೀಳು ಮಟ್ಟದ ಹೇಳಿಕೆಯನ್ನು ಯಾರೂ ಸಮರ್ಥಿಸಬಾರದು ಎಂದು ಒತ್ತಾಯಿಸಿದ್ದಾರೆ. ಗುತ್ತಿಗೆದಾರರಿಗೆ ಬೆದರಿಕೆ ಹಾಕಿರುವುದು, ಎರಡು…
ಸೋಮವಾರಪೇಟೆ ಸೆ.16 NEWS DESK : ಭಾರತದ ಸೈನ್ಯಕ್ಕೆ ಕೊಡವರ ಕೊಡುಗೆ ಅಪಾರ ಎಂದು ನಿವೃತ್ತ ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್ ಹೇಳಿದರು. ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯ ಭವನದಲ್ಲಿ ನಡೆದ ಮಂಡೆಪಂಡ ಅಕ್ಕಮ್ಮ ಗಣಪತಿ ಸ್ಮಾರಕ ದತ್ತಿನಿಧಿ ಕಾರ್ಯಕ್ರಮದಲ್ಲಿ ಕೊಡವ ಸಂಸ್ಕೃತಿ , ಮಹಿಳೆ, ಸಾಹಿತ್ಯ, ಸಾಹಿತಿಗಳು, ಫಿ.ಮಾ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಸಾಧನೆಗಳು ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಕೊಡವರು, ವೀರರು, ಶೂರರು ಎಂದು ಕರೆಯಬೇಕಾದರೆ ಕಾರಣವೂ ಇದೆ. ವಿಶ್ವ ಮಹಾಯುದ್ಧದ ಕಾಲದಲ್ಲೇ ಮನೆಗೊಬ್ಬರರಂತೆ ಸೈನ್ಯಕ್ಕೆ ಸೇರುತ್ತಿದ್ದರು. ಹುಟ್ಟಿನಿಂದಲೇ ಶೂರತ್ವ ಅವರಿಗೆ ಇದೆ. ಗಂಡು ಮಗು ಜನಿಸಿದರೆ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸುವುದು ನಡೆದುಕೊಂಡು ಬಂದಿರುವ ಪದ್ಧತಿಯಾಗಿದೆ. ಮನೆಯಲ್ಲಿ ಇಬ್ಬರು ಗಂಡು ಮಕ್ಕಳು ಜನಿಸಿದರೆ, ಒಬ್ಬರನ್ನು ಸೈನ್ಯಕ್ಕೆ ಕಳುಹಿಸುತ್ತಿದ್ದರು ಎಂದು ಹೇಳಿದರು. ಕೊಡವರು ಪ್ರಕೃತಿ ಮತ್ತು ಆಗ್ನಿ ಅರಾಧಕರು, ಇವತ್ತಿಗೂ ಮದುವೆಯಂತಹ ಶುಭಕಾರ್ಯಗಳು ವೈದಿಕ ಪದ್ದತಿಯಂತೆ ನಡೆಯುವುದಿಲ್ಲ. ಮಹಿಳೆಯರಿಗೆ ಸಮಾನ ಹಕ್ಕು ಮತ್ತು ಅವಕಾಶವನ್ನು ಕಲ್ಪಿಸಿರುವ ಜನಾಂಗವಾಗಿದೆ.…
ಮಡಿಕೇರಿ ಸೆ.16 NEWS DESK : ಮಲಯಾಳಿ ಸಮುದಾಯದ ಪ್ರಮುಖ ಹಬ್ಬವಾದ ತಿರು ಓಣಂ ಅನ್ನು ಜಿಲ್ಲೆಯಾದ್ಯಂತ ಮಲಯಾಳಿ ಸಮುದಾಯದವರು ಸಂಭ್ರಮದಿಂದ ಆಚರಿಸಿದರು. ಹೂವಿನ ರಂಗೋಲಿ (ಪೂಕಳಂ)ಯನ್ನು ಮನೆ ಎದುರು ರಚಿಸಿ ಮನೆ ಹಾಗೂ ದೇವಾಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಓಣಂ ಹಬ್ಬದ ವಿಶೇಷ ಖಾದ್ಯಗಳನ್ನು ಮಾಡಿ ಸವಿದು ಹಬ್ಬಾಚರಣೆ ಮಾಡಿದರು.






