ಲೇಖಕ: admin

ಮಡಿಕೇರಿ NEWS DESK ಸೆ.15 : ಪ್ರಜಾಪ್ರಭುತ್ವ ಮೌಲ್ಯವನ್ನು ಪ್ರತಿಯೊಬ್ಬರೂ ಎತ್ತಿಹಿಡಿಯುವಂತಾಗಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕರೆ ನೀಡಿದ್ದಾರೆ. ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ  ಚಾಮರಾಜನಗರ ವರೆಗೆ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಪ್ರಯುಕ್ತ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಭಾನುವಾರ ನಡೆದ ಮಾನವ ಸರಪಳಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಜಾರಿಯಾದ ನಂತರ ನಾಗರಿಕರ ಬದುಕು ಸುಧಾರಿಸುತ್ತಿದೆ. ಆ ದಿಸೆಯಲ್ಲಿ ಪ್ರತಿಯೊಬ್ಬರಿಗೂ ಸಮಾನವಾಗಿ ಬದುಕುವ ಹಕ್ಕನ್ನು ಸಂವಿಧಾನದಲ್ಲಿ ಕಲ್ಪಿಸಲಾಗಿದೆ ಎಂದು ಎನ್.ಎಸ್.ಭೋಸರಾಜು ಅವರು ಹೇಳಿದರು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ‌ ಮತ್ತು ಸಹೋದರತೆ… ಈ ಅಂಶಗಳು ಪ್ರಜಾಪ್ರಭುತ್ವದ ಆಶಯಗಳಾಗಿವೆ ಎಂದು ಸಚಿವರು ತಿಳಿಸಿದರು. ಜಾತಿ, ಮತ, ಲಿಂಗ, ಧರ್ಮ ಹಾಗೂ ಯಾವುದೇ ರೀತಿಯ ಭೇದಭಾವ ಇಲ್ಲದೆ, ಸರ್ವರಿಗೂ ಸಮಾನತೆ, ಸ್ವಾತಂತ್ರ್ಯ, ಸಾಮಾಜಿಕ, ಆರ್ಥಿಕ…

Read More

ಮಡಿಕೇರಿ NEWS DESK ಸೆ.15 : ಕೊಡಗಿನ ಮಡಿಕೇರಿ ತಾಲ್ಲೂಕಿನ ಬಿಳಿಗೇರಿ ಗ್ರಾಮದವರಾದ, ಕೃಷಿ ಮತ್ತು ತಂತ್ರಾಗಮ ಹಾಗೂ ಜ್ಯೋತಿಷ್ಯ ಶಾಸ್ತ್ರ ಪ್ರವೀಣರಾದ ಹುಲಿತ್ತಾಳ ಉದಯ ಕುಮಾರ್‌ರಿಗೆ ಹಾಸನದ ಅರಸೀಕೆರೆ ತಾಲ್ಲೂಕಿನ ಕುರುವಂಕ ಗ್ರಾಮದ ಶಾನ್‌ಬೋಗ್ ಶ್ರೀ ದಾಸಪ್ಪ ದತ್ತಿ ನಿಧಿಯಿಂದ ‘ಪ್ರೊ. ಜ್ಯೋತಿಷ್ಯ ರತ್ನಾಕರ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಆಯೋಜಿತ ಸಮಾರಂಭದಲ್ಲಿ ಕೊಡಗಿನ ‘ಶಕ್ತಿ’ ಪತ್ರ‍್ರಿಕೆಯ ಸಂಪಾದಕರಾದ ಜಿ. ರಾಜೇಂದ್ರ, ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯವಾದಿಗಳಾದ ಸತ್ಯ ವಾಗೀಶ್ವರ, ಡಾ.ರಾಜಾರಾಮ್ ಎ.ಆರ್., ಬಾಳಿಲದ ವಿದ್ಯಾ ಬೋಧಿನಿ ಶಾಲೆಯ ಸಂಸ್ಕೃತ ಶಿಕ್ಷಕರಾದ ವೆಂಕಟೇಶ್ ಕುಮಾರ್, ಕೊಡಗು ಹವ್ಯಕ ಸಂಘದ ವಲಯಾಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್ ಅವರು ಶಾಲು ಹೊದಿಸಿ, ಫಲ ತಾಂಬೂಲವನ್ನಿತ್ತು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಸಮಾಜ ಸೇವೆಗೆ ಶಕ್ತಿ ನೀಡುವಂತದ್ದೆ ಜ್ಯೋತಿಷ್ಯ- ಸಮಾರಂಭವನ್ನು ದೀಪ ಜ್ವಲನದ ಮೂಲಕ ಉದ್ಘಾಟಿಸಿದ ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ. ರಾಜೇಂದ್ರ ಅವರು ಮಾತನಾಡಿ, ಸಾಧನೆಯ ಹಾದಿಯಲ್ಲಿ…

Read More

ಮಡಿಕೇರಿ NEWS DESK ಸೆ.15 : ಶುಂಠಿ ತುಂಬಿದ ಎತ್ತಿನ ಗಾಡಿ ಬಿದ್ದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪ ತೊರೆನೂರು ಗ್ರಾಮದಲ್ಲಿ ನಡೆದಿದೆ. ತೊರೆನೂರು ಗ್ರಾಮದ ಟಿ.ಆರ್.ಮಧು ಹಾಗೂ ಅನು ದಂಪತಿಯ ಮೊದಲ ಪುತ್ರ ಟಿ.ಎಂ.ತರುಣ್ (7) ಮೃತ ದುರ್ದೈವಿ. ಭಾನುವಾರ ಬೆಳಿಗ್ಗೆ ಮನೆಯ ಬಳಿ ಶುಂಠಿ ತುಂಬಿದ್ದ ಎತ್ತಿನ ಗಾಡಿ ಭಾರ ಹೆಚ್ಚಾಗಿ ಮಗುಚಿಕೊಂಡಿತು. ಈ ಸಂದರ್ಭ ಪಕ್ಕದಲ್ಲೇ ಇದ್ದ ತರುಣ್ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿದೆ. ತಕ್ಷಣ ಬಾಲಕನನ್ನು ಕುಶಾಲನಗರ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಯಲ್ಲಿ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ತರುಣ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತ ಬಾಲಕ ತರುಣ್ ಕೂಡಿಗೆಯ ವಿದ್ಯಾನಿಕೇತನ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ NEWS DESK ಸೆ.15 : ನಕಲಿ ಸಹಿ ಮಾಡಿದ ಆರೋಪಕ್ಕೊಳಗಾಗಿ ವಿಷ ಸೇವಿಸಿದ್ದ ಮಡಿಕೇರಿ ತಹಶೀಲ್ದಾರ್ ಕಚೇರಿಯ ಸಿಬ್ಬಂದಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ತಹಶೀಲ್ದಾರರ ಸಹಿಯನ್ನು ನಕಲಿ ಮಾಡಿ ಖಜಾನೆಗೆ ಕಡತ ಕಳುಹಿಸಿದ್ದ ಆರೋಪವನ್ನು ಎದುರಿಸುತ್ತಿದ್ದ ಪ್ರಜ್ವಲ್ (38) ಮೃತ ಸಿಬ್ಬಂದಿಯಾಗಿದ್ದಾರೆ. ನಕಲಿ ಸಹಿ ಆರೋಪದಿಂದ ಸೆ.10 ರಂದು ಮಡಿಕೇರಿಯ ಮನೆಯಲ್ಲಿ ವಿಷ ಸೇವಿಸಿದ್ದ ಪ್ರಜ್ವಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟರು. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ NEWS DESK ಸೆ.15 : ಮಹಿಳಾ ಕಾಂಗ್ರೆಸ್ ಸ್ಥಾಪನೆಯಾಗಿ ಸೆ.15ಕ್ಕೆ 40 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮತ್ತು ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನದ ಅಂಗವಾಗಿ ಕೊಡಗು ಮಹಿಳಾ ಕಾಂಗ್ರೆಸ್ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ ಮಡಿಕೇರಿಯಲ್ಲಿ ನಡೆಯಿತು. ನಗರದಲ್ಲಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಅವರು, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕ ಲಂಬಾ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಸೂಚನೆ ಮೇರೆಗೆ ಅಭಿಯಾನವನ್ನು ನಡೆಸಲಾಗುತ್ತಿದ್ದು, ಪಕ್ಷದ ಬಲವರ್ಧನೆಗೆ ಇದು ಸಹಕಾರಿಯಾಗಿದೆ ಎಂದರು. ಜಿಲ್ಲೆಯ ಪ್ರತಿ ಬ್ಲಾಕ್ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ ನಡೆಸಿ ಮಹಿಳಾ ಘಟಕದ ಶಕ್ತಿ ಹೆಚ್ಚಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ಶೈಲಾ ಕುಟ್ಟಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಪ್ರಮುಖರಾದ ಧನ್ಯ ರವಿ, ಪ್ರೇಮ ಲಿಂಗಪ್ಪ, ರೇವತಿ ರಮೇಶ್, ಕೆ.ಎಂ.ಪುಷ್ಪಾ ಮುತ್ತಪ್ಪ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಸೆ.15 : ಕನ್ನಡ ಸಾಹಿತ್ಯದ ಬೆಳವಣಿಗೆಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್ ಗ್ರಾಮೀಣ ಭಾಗದ ಸಾಹಿತಿಗಳ ಸಾಹಿತ್ಯ ಕೃಷಿಗೆ ಸಹಕಾರಿಯಾಗಿದೆ ಎಂದು ಮೂರ್ನಾಡು ಪದವಿ ಪೂರ್ವ ಕಾಲೇಜ್ ನ ಅಧ್ಯಕ್ಷ ಚೌರೀರ ಡಾ.ಜಗತ್ ತಿಮ್ಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕಸಾಪ ಮತ್ತು ಮೂರ್ನಾಡು ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕಾಲೇಜ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ವಿಷಯ ಸಂಕಲನ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಲೆಮರೆಯ ಕಾಯಿಯಂತಿರುವ ಕನ್ನಡದ ಬರಹಗಾರರನ್ನು ಗುರುತಿಸಿ ಸಾಹಿತ್ಯದ ಬೆಳವಣಿಗೆಗೆ ಪ್ರೇರಣೆ ನೀಡುವ ಶಕ್ತಿ ಕನ್ನಡ ಸಾಹಿತ್ಯ ಪರಿಷತ್ ಗೆ ಇದೆ. ಜಿಲ್ಲೆಯ ಗ್ರಾಮೀಣ ಸಾಹಿತಿಗಳು ಇದರ ಲಾಭ ಪಡೆದುಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಬೇಕೆಂದು ಕರೆ ನೀಡಿದರು. ಜಿಲ್ಲಾ ಜಾನಪದ ಸಾಹಿತ್ಯ ಪರಿಷತ್ ನ…

Read More

ಮಡಿಕೇರಿ NEWS DESK ಸೆ.14 : ಐತಿಹಾಸಿಕ ಮಡಿಕೇರಿ ದಸರಾ ಸೇರಿದಂತೆ ದಕ್ಷಿಣ ಕೊಡಗಿನ ಗೋಣಿಕೊಪ್ಪಲು ದಸರಾ ಉತ್ಸವವನ್ನು ಎಲ್ಲರೂ ಒಗ್ಗಟ್ಟಾಗಿ ಆಚರಿಸಬೇಕು. ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಯಶಸ್ವಿ ದಸರಾ ಆಚರಣೆಗೆ ಸರ್ಕಾರ ನಿಮ್ಮೊಂದಿಗೆ ಸದಾ ಇರಲಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಮಡಿಕೇರಿ ಮತ್ತು ಗೋಣಿಕೊಪ್ಪಲು ದಸರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎರಡೂ ಕಡೆಯ ದಸರಾ ಉತ್ಸವ ಆಚರಣೆಗೆ ಪೂರಕವಾಗಿ ಅಗತ್ಯ ಅನುದಾನವನ್ನು ಮುಂದಿನ ಎರಡು ಮೂರು ದಿನಗಳಲ್ಲೆ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಕಳೆದ ಸಾಲಿನ ಮಡಿಕೇರಿ ದಸರಾ ಉತ್ಸವಕ್ಕೆ ಸರ್ಕಾರ 95 ಲಕ್ಷ ರೂ. ಅನುದಾನವನ್ನು ಒದಗಿಸಿತ್ತು, ಈ ಬಾರಿ ಹೆಚ್ಚಿನ ಅನುದಾನವನ್ನು ಒದಗಿಸುವಂತೆ ಕೋರಲಾಗಿದೆ, ಈ ಬಾರಿ ಕಳೆದ ಬಾರಿಗಿಂತ ಒಂದಷ್ಟು ಹೆಚ್ಚಿನ ಅನುದಾನವನ್ನು ಒದಗಿಸುವ ವಿಶ್ವಾಸ ವ್ಯಕ್ತಪಡಿಸಿದ ಅವರು, ದಸರಾ ಉತ್ಸವಕ್ಕೆ ಕಳೆದ ಸಾಲಿನಂತೆಯೇ ಅಗತ್ಯ…

Read More