ಮಡಿಕೇರಿ ನ.6 NEWS DESK : ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಸಂದರ್ಭ ಅಡ್ಡ ಮತದಾನ ಮಾಡಿದ ದೂರಿನ ಹಿನ್ನೆಲೆ ಬಿಜೆಪಿ ಬೆಂಬಲಿತ ನಾಲ್ವರು ಗ್ರಾ.ಪಂ ಸದಸ್ಯರುಗಳ ವಿರುದ್ಧ ಶಿಸ್ತು ಕ್ರಮಕ್ಕಾಗಿ ಪಕ್ಷದ ರಾಜ್ಯ ಅಮಿತಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಜ.30 ರಂದು ನಡೆದ ಪೊನ್ನಂಪೇಟೆ ತಾಲ್ಲೂಕಿನ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಡ್ಡಂಡ ನಿಲನ್ ಮಂದಣ್ಣ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ವಿ.ಎಂ.ವಿಜಯ ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅವರ ವಿರುದ್ದ ಪಕ್ಷದ ಸದಸ್ಯರು ಮತ್ತು ಪಕ್ಷದ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ವಿಮಲಾ ಎಂ.ಬಿ,. ಆರತಿ ಸುರೇಶ್ ಎ. ಹಾಗೂ ರಮೇಶ್ ಪಿ.ಟಿ. ಇವರುಗಳು ಅಡ್ಡ ಮತದಾನ ಮಾಡಿದ್ದಾರೆ ಎಂದು ಶಕ್ತಿ ಕೇಂದ್ರದ ಪ್ರಮುಖರು ಮತ್ತು ಮಂಡಲ ಅಧ್ಯಕ್ಷರಗಳು ಸೂಚಿಸಿದ ಮೇರೆಗೆ ಮುಂದಿನ ಶಿಸ್ತು ಕ್ರಮಕ್ಕಾಗಿ ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಲಾಗಿದೆ. ಆ.28…
ಲೇಖಕ: admin
ಮಡಿಕೇರಿ, ನ.6 NEWS DESK : ಕನ್ನಡ ಪುಸ್ತಕ ಸಂಸ್ಕೃತಿ ಇಮ್ಮಡಿಗೊಳಿಸುವ ಉದ್ದೇಶದಿಂದ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ವರ್ಷದ “ವೀರಲೋಕ ಪುಸ್ತಕ ಸಂತೆ”ಗೆ ಭಾರೀ ತಯಾರಿ ನಡೆದಿದೆ ಎಂದು ವೀರಲೋಕ ಪ್ರಕಾಶನದ ಮುಖ್ಯಸ್ಥ ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ. ಒಂದೇ ಸೂರಿನಡಿ ನೂರಕ್ಕೂ ಅಧಿಕ ಲೇಖಕರು, ಪ್ರಕಾಶಕರು, ನ.15,16,17 ರಂದು ಜಯನಗರದ ಅಲಂಕೃತ ಶಾಲಿನಿ ಮೈದಾನದಲ್ಲಿ ಭೇಟಿಗೆ ಲಭ್ಯವಾಗಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಲೇಖಕರು, ಪ್ರಕಾಶಕರನ್ನು ಗುರುತಿಸಿ, ಆಹ್ವಾನಿಸಲಾಗಿದ್ದು ಪ್ರತಿಯೊಬ್ಬರೂ ಪ್ರತ್ಯೇಕ ಮಳಿಗೆಗಳಲ್ಲಿ ಪುಸ್ತಕಗಳೊಂದಿಗೆ ಓದುಗರನ್ನು ಭೇಟಿ ಮಾಡಲಿದ್ದಾರೆ. ಲಕ್ಷ ಸಂಖ್ಯೆಯಲ್ಲಿ ಕನ್ನಡ ಪುಸ್ತಕಗಳು ಮಾರಾಟಕ್ಕೆ ಲಭ್ಯವಿದೆ. ಲೇಖಕರು ಮಾರಾಟವಾಗುವ ತಮ್ಮ ಪುಸ್ತಕಗಳಿಗೆ ಖುದ್ದಾಗಿ ಸಹಿ ಮಾಡಲಿದ್ದಾರೆ. ಪುಸ್ತಕ ಮಳಿಗೆಗಳನ್ನು ಹೊರತು ಪಡಿಸಿ ಇತರ ಆಕರ್ಷಣೆಗಳೂ ಇದ್ದು, ಮಕ್ಕಳಿಗಾಗಿಯೇ ವಿಶೇಷ ಆಟ ಮತ್ತು ಮನೋರಂಜನಾ ವಿಭಾಗಗಳಿವೆ. ನೂರಕ್ಕೂ ಅಧಿಕ, ಆಹಾರ, ಆರೋಗ್ಯ, ವಸ್ತ್ರ, ಚಿತ್ರಕಲೆ, ಸಣ್ಣ ಕೈಗಾರಿಕಾ ಮಳೆಗೆಗಳು ಕನ್ನಡಿಗರನ್ನು ಆಕರ್ಷಿಸಲಿವೆ. ಅಥsರ್Àಪೂರ್ಣ ಉದ್ಘಾಟನೆಯ ಬಳಿಕ ನಿತ್ಯ ಜಾನಪದ ಸಂಜೆ, ಭಾವಗೀತೆ ಸಂಜೆ,…
ಮಡಿಕೇರಿ ನ.6 NEWS DESK : ಕೊಡಗು ಮುಸ್ಲಿಂ ಟ್ರಸ್ಟ್ ಹಾಗೂ ಚಿಲ್ ಬಾಯ್ಸ್ ತಂಡದ ವತಿಯಿಂದ 20ನೇ ವರ್ಷದ “ಮುಸ್ಲಿಂ ಕಪ್” ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ 2025ನೇ ಫೆ.8 ರಿಂದ 16ರ ವರೆಗೆ ಮಡಿಕೇರಿಯಲ್ಲಿ ನಡೆಯಲಿದೆ ಎಂದು ಟ್ರಸ್ಟ್ ನ ಅಧ್ಯಕ್ಷ ಎ.ಅಬ್ದುಲ್ ಖಾದರ್ ಹಾಗೂ ಚಿಲ್ ಬಾಯ್ಸ್ ನ ಅಧ್ಯಕ್ಷ ಎಂ.ಎ.ಉನೈಸ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಗಳು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರೀಡಾಕೂಟದ ಉಸ್ತುವಾರಿಯನ್ನು “ಚಿಲ್ ಬಾಯ್ಸ್ ಮಡಿಕೇರಿ” ತಂಡ ವಹಿಸಿಕೊಂಡಿದ್ದು, ಪಂದ್ಯಾವಳಿಯನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕ್ರೀಡಾಕೂಟಕ್ಕೆ ಸುಮಾರು 25ಲಕ್ಷ ರೂ.ಗೂ ಅಧಿಕ ಹಣ ಖರ್ಚಾಗುತ್ತಿದ್ದು, ಇಷ್ಟು ವರ್ಷಗಳವರೆಗೆ ಸರ್ಕಾರದಿಂದ ಯಾವುದೇ ಅನುದಾನ ದೊರೆತ್ತಿಲ್ಲ. ಈ ಬಾರಿಯಾದರೂ ಜಿಲ್ಲೆಯ ಇಬ್ಬರು ಶಾಸಕರು ಆಸಕ್ತಿ ತೋರಿ ಸರ್ಕಾರದಿಂದ ಅನುದಾನ ದೊರಕಿಸಿಕೊಡಬೇಕೆಂದು ಮನವಿ ಮಾಡಿದರು. ಕಳೆದ ವರ್ಷ ಸುಮಾರು 110 ತಂಡಗಳು ಕ್ರೀಡಾಕೂಟಕ್ಕೆ ಹೆಸರು ನೋಂದಾಯಿಸಿಕೊಂಡಿದ್ದವು. ಈ ಬಾರಿ…
ಮಡಿಕೇರಿ ನ.6 NEWS DESK : ಕೊಡವ ಜನಪದ ಕಲೆಗಳಿಗೆ ಒತ್ತು ನೀಡುವ ಸಲುವಾಗಿ ಮಡಿಕೇರಿಯ ಸುಬ್ರಮಣ್ಯ ಕೊಡವ ಕೇರಿಯ ನೇತೃತ್ವದಲ್ಲಿ ನ.9 ರಂದು 7ನೇ ಕೊಡವ ಅಂತರ್‍ಕೇರಿ ಜನಪದ ಸಾಂಸ್ಕೃತಿಕ ಮೇಳವನ್ನು ಆಯೋಜಿಸಲಾಗಿದೆ ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೊಡವ ಸಮಾಜದ ಆವರಣದಲ್ಲಿ ಮಡಿಕೇರಿಯ 12 ಕೇರಿಯ ಕೊಡವ ಜನಾಂಗ ಬಾಂಧವರು ಈ ಮೇಳದಲ್ಲಿ ಭಾಗವಹಿಸಲಿದ್ದಾರೆ ಎಂದರು. ಅಂದು ಬೆಳಿಗ್ಗೆ 8.45 ಗಂಟೆಗೆ ಕೊಡವ ಸಮಾಜದಲ್ಲಿ ದೇವರಿಗೆ ಪ್ರಾರ್ಥನೆ ಮತ್ತು ಧ್ವಜಾರೋಹಣ ನೆರವೇರಲಿದೆ. ಸುಬ್ರಹ್ಮಣ್ಯ ಕೊಡವ ಕೇರಿಯ ಸದಸ್ಯ ಕಾಳಿಮಾಡ ನಾಚಪ್ಪ ಮೇಳವನ್ನು ಉದ್ಘಾಟಿಸಲಿದ್ದು, ಹಿರಿಯ ಸದಸ್ಯೆ ನಂದೇಟ್ಟಿರ ಗೌರಮ್ಮ ಮುತ್ತಪ್ಪ ಅಂತರ್ ಕೇರಿ ಜಾನಪದ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ನಂತರ ಕೇರಿ ಕೇರಿಗಳ ನಡುವೆ ಬೊಳಕಾಟ್, ಕೋಲಾಟ್, ಮಹಿಳೆಯರ ಉಮ್ಮತಾಟ್, ಕಪ್ಪೆಯಾಟ್, ಬಾಳೋಪಾಟ್, ತಾಲಿಪಾಟ್, ಸಮ್ಮಂದ ಅಡ್‍ಕುವೊ, ವಾಲಗತಾಟ್, ಕೊಡವ ಹಾಡು…
ಪುತ್ತೂರು ಸೆ.6 NEWS DESK : ಇತಿಹಾಸದ ಪುಟಗಳತ್ತ ಇಣುಕಿ ನೋಡಿದಾಗ 1903 ರಲ್ಲಿ ಆರಂಭವಾದ ಕನ್ನಡ ಏಕೀಕರಣ ಚಳುವಳಿಯು ಮುಂದಿನ ದಿನಗಳಲ್ಲಿ ತೀವ್ರಗೊಂಡು 1956ರ ನವೆಂಬರ್ ಒಂದರಂದು ಮೈಸೂರು ರಾಜ್ಯ ಉದಯವಾಯಿತು. 1973 ನವೆಂಬರ್ ಒಂದರಂದು ಕರ್ನಾಟಕ ರಾಜ್ಯವಾಗಿ ನಾಮಕರಣಗೊಂಡಿತು. ಇಲ್ಲಿನ ಸುಂದರವಾದ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಗುರುತರ ಜವಾಬ್ಧಾರಿ ನಮ್ಮ ಮೇಲಿದೆ ಎಂದು ಎಸ್.ಕೆ.ಎಫ್ ಇಂಡಿಯಾ ಲಿಮಿಟೆಡ್ ಇಲ್ಲಿನ ಅಧಿಕಾರಿ ಹಾಗೂ ಸಾಹಿತಿ ಹರಿನರಸಿಂಹ ಉಪಾಧ್ಯಾಯ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಯಾವುದೇ ಭಾಷೆಯನ್ನಾಗಲಿ ನಿರಂತರವಾಗಿ ಬಳಸಿದರೆ ಮಾತ್ರ ಅದರ ಉಳಿವು ಸಾಧ್ಯವಾಗುತ್ತದೆ. ಹಾಗಾಗಿ ಕನ್ನಡ ಭಾಷೆಯನ್ನು ಬಳಸುವಲ್ಲಿ ಮತ್ತು ಉಳಿಸುವಲ್ಲಿ ನಾವು ಶಕ್ತಿವಂತರಾಗಬೇಕು ಎಂದರು. ಕಾಲೇಜಿನ ಹಿರಿಯ…
ಮಡಿಕೇರಿ ನ.6 NEWS DESK : ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ತಾಳತ್ತಮನೆಯ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಧ್ವಜಾರೋಹಣವನ್ನು ಸಂಘದ ಸಂಘಟನ ಕಾರ್ಯದರ್ಶಿ ಎಂ.ಟಿ.ದೇವಪ್ಪ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮರಾಠ-ಮರಾಟಿ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್, ಕನ್ನಡ ಭಾಷೆ ಸಂಸ್ಕೃತಿ ಉಳಿವಿಗೆ ಎಲ್ಲರೂ ಕೈಜೋಡಿಸಬೇಕು. ಮನೆಯಲ್ಲಿ ಮಕ್ಕಳಿಗೂ ಕನ್ನಡ ಕಲಿಸುವ ಮೂಲಕ ಕನ್ನಡ ಭಾಷೆ ಬೆಳೆಸಬೇಕು. ಪ್ರತಿನಿತ್ಯ ಕನ್ನಡ ಬಳಕೆ ಮೂಲಕ ಕನ್ನಡ ಉಳಿಸಿ ಬೆಳೆಸಲು ಕನ್ನಡಿಗರು ಸದಾ ಬದ್ಧರಾಗಬೇಕು. ಕನ್ನಡ ಭಾಷೆಯು ಪ್ರತಿಯೊಬ್ಬ ಜನಸಾಮಾನ್ಯನು ಅರಿತು, ಬೆರೆತು, ಬಾಳುವ, ಆಡುವ ಸುಂದರ ಭಾಷೆಯಾಗಿದೆ. ಅದರಿಂದ ಕನ್ನಡ ಇಂದು ಶಾಶ್ವತವಾಗಿ ಉಳಿದಿದೆ ಎಂದರು. ಪ್ರತಿಯೊಬ್ಬ ಸದಸ್ಯರು ಸಂಘದ ಅಭಿವೃದ್ಧಿಗೆ ಹೆಚ್ಚು ಶ್ರಮಿಸಬೇಕಿದೆ. ಸಂಘದ ಪ್ರತಿ ಕಾರ್ಯಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಾಮಾಜಿಕ ಕಾರ್ಯಕ್ಕೆ ಪದಾಧಿಕಾರಿಗಳು ಕೈಜೋಡಿಸಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಕರಾವಳಿ…
ಮಡಿಕೇರಿ ನ.6 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವಿನೂತನ ಕಾರ್ಯಕ್ರಮ ‘ನಾಡೋರ್ಮೆ’ಯು ಅರೆಕಾಡು-ಹೊಸ್ಕೇರಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮನೆಮಾತಾಗಿದೆ. ನಾಡೊರ್ಮೆಯ ವೈಭವವನ್ನು ಕಣ್ತುಂಬಿಕೊಳ್ಳಲು ನಾಡಿನ ಜನತೆ ಕಾತರರಾಗಿದ್ದಾರೆ. ನ.14 ರಂದು ಅರೆಕಾಡಿನ ರಿಯಾವರ್ ರೆಸಾರ್ಟ್‍ನಲ್ಲಿ ಬೆಳಿಗ್ಗೆ 9 ಗಂಟೆಗೆ ಆರಂಭವಾಗುವ ನಾಡೊರ್ಮೆಗೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ‘ಕೊಡವ ವೆಲ್ಫೇರ್ ಅಂಡ್ ರಿಕ್ರಿಯೇಷನ್ ಅಸೋಸಿಯೇಷನ್” ಕಟ್ಟಡಕ್ಕೆ ಅರೆಕಾಡುವಿನಲ್ಲಿ ಶಂಕು ಸ್ಥಾಪನೆ ನೆರವೇರುವುದು. ಈ ವೇಳೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟರಾಜ, ಸರ್ಕಾರಿ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ತಕ್ಕರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಹಾಗೂ ‘ಕೊಡವ ವೆಲ್ಫೇರ್ ಅಂಡ್ ರಿಕ್ರಿಯೇಷನ್ ಅಸೋಸಿಯೇಷನ್” ಅಧ್ಯಕ್ಷ ಕುಕ್ಕೆರ ಜಯಾ ಚಿಣ್ಣಪ್ಪ ಹಾಗೂ ಆಡಳಿತ ಮಂಡಳಿ ಸದಸ್ಯರು…
ನಾಪೋಕ್ಲು ನ.6 NEWS DESK : ಚೇರಂಬಾಣೆಯ ಕೊಳಗದಾಳು ಗ್ರಾಮದ ಶತಾಯುಷಿ ಎರಡನೇ ಮಹಾಯುದ್ಧದಲ್ಲಿ ಭಾಗವಹಿಸಿದ ನಿವೃತ್ತ ಯೋಧ ಅಜ್ಜಿನಂಡ ಮೊಣ್ಣಪ್ಪ ಅವರ ನೂರನೇ ಜನ್ಮದಿನಾಚರಣೆಯನ್ನು ಚೇರಂಬಾಣೆ ಕೊಡವ ಸಮಾಜದಲ್ಲಿ ಆಚರಿಸಲಾಯಿತು. ದಿವಂಗತ ಅಜ್ಜಿನಂಡ ಮೇದಪ್ಪ ಹಾಗೂ ಚಿಣ್ಣವ್ವ ದಂಪತಿಯ ಪುತ್ರ ಶತಾಯುಷಿ ಎಂ.ಮೊಣ್ಣಪ್ಪ ಅವರನ್ನು ಕೊಡವ ಸಾಂಪ್ರದಾಯಿಕ ಉಡುಪಿನೊಂದಿಗೆ ದುಡಿ ಕೊಟ್ ಪಾಟ್ ಮೂಲಕ ಕರೆತರಲಾಯಿತು. ಆ ಬಳಿಕ ಕುಟುಂಬ ಬಂಧು ಮಿತ್ರರೊಂದಿಗೆ ಕಾರ್ಯಕ್ರಮದ ವೇದಿಕೆಯಲ್ಲಿ ಎಲ್ಲರ ಪರವಾಗಿ ಕೋಟೆರ ಪ್ರಭು ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿ, ಬಳಿಕ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭ ಅವರ ಸಹೋದರ ಅಪ್ಪಣ್ಣ (97) ಉಪಸ್ಥಿತರಿದ್ದು, ಆಗಮಿಸಿದ ಎಲ್ಲರೂ ಶತಾಯುಷಿಗೆ ತಮ್ಮ ನೆನಪಿನ ಕಾಣಿಕೆಗಳನ್ನು ನೀಡಿ ಇಬ್ಬರ ಆಶೀರ್ವಾದ ಪಡೆದುಕೊಂಡು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪೆÇ್ರ ಎಂ.ಬಿ.ನಂಜುಂಡ, ಬೇಂಗೂರು ನಾಡು ಕಡಪಾಲಪ್ಪ ದೇವಸ್ಥಾನದ ಅಧ್ಯಕ್ಷ ತೇಲಪಂಡ ಕೆ.ಮಂದಣ್ಣ, ನಿವೃತ್ತ ಪೆÇಲೀಸ್ ಅಧಿಕಾರಿ ಮಣವಟ್ಟಿರ ಸಿ.ಕುಶಾಲಪ್ಪ ಸನ್ಮಾನಿತರ ಗುಣಗಾನ ಮಾಡಿ ತಮ್ಮ…
ಮಡಿಕೇರಿ ನ.6 NEWS DESK : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸೋಮವರಪೇಟೆ ತಾಲ್ಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ವತಿಯಿಂದ ಮಸಗೋಡು ಚನ್ನಮ್ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭ್ರಷ್ಟಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ನಡೆಯಿತು. ಕಾರ್ಯಕ್ರಮದಲ್ಲಿ ಸೋಮವಾರಪೇಟೆಯ ಸಿವಿಲ್ ನ್ಯಾಯಾಧೀಶರಾದ ನ್ಯಾ. ಗೋಪಾಲಕೃಷ್ಣ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
ಮಡಿಕೇರಿ ನ.6 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ ವಯ ಸಿಇಟಿ, ನೀಟ್ ಮುಖಾಂತರ) ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ, ಎಂಬಿಎ, ಎಂಸಿಎ ಮತ್ತು ಎಲ್‍ಎಲ್‍ಬಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ “ಅರಿವು” (ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್ ಸೈಟ್ https://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ…






