ಸುಂಟಿಕೊಪ್ಪ ಸೆ.14 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ರಾಮಮಂದಿರದಲ್ಲಿ ನಡೆಯುತ್ತಿರುವ 60ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ರಂಗೋಲಿ, ಮಡಿಕೆ ಒಡೆಯುವ ಸ್ಪರ್ಧೆ ನಡೆಯಿತು. ಸುಂಟಿಕೊಪ್ಪದ ಮಂಜನಾಥಯ್ಯ ಮಿನಾಕ್ಷಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರು ಯುವತಿಯರು, ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ರಂಗೋಲಿ ಸ್ಪರ್ಧೆಯಲ್ಲಿ ಸ್ವಾತಿ ಪ್ರಥಮ, ಲಿಖಿತ ದ್ವಿತೀಯ, ಮಡಿಕೆ ಒಡೆಯುವ ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ಮೌಲ್ಯ ಪ್ರಥಮ, ಮಹಿಳೆಯರ ವಿಭಾಗದಲ್ಲಿ ಲೀಲಾವತಿ ಪ್ರಥಮ ಬಹುಮಾನ ಪಡೆದುಕೊಂಡರು. ಸ್ಪೂನ್ ನಲ್ಲಿ ನಿಂಬೆಹಣ್ಣು ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ತನ್ವಿಕ ಪ್ರಥಮ, ಮೌಲ್ಯ ದ್ವಿತೀಯ, ವಂಶಿನಿ ತೃತೀಯ ಬಹುಮಾನ ಪಡೆದುಕೊಂಡರು. ಪ್ರೌಢಶಾಲಾ ವಿಭಾಗದಲ್ಲಿ ಲಿಖಿತ ಪ್ರಥಮ, ಡ್ಯಾನಿಲ್ ದ್ವಿತೀಯ, ಮಹಿಳೆಯರ ವಿಭಾಗದಲ್ಲಿ ಜಯಶ್ರೀ ಪ್ರಥಮ, ಶೀಲಾ ದ್ವಿತೀಯ, ಅಶ್ವಿನಿ ತೃತೀಯ ಬಹುಮಾನವನ್ನು ಪಡೆದುಕೊಂಡರು.
ಲೇಖಕ: admin
ವಿರಾಜಪೇಟೆ ಫೆ.14 NEWS DESK : ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ಗಣಪತಿ ದೇವಾಲಯದ ಶ್ರೀ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವವು ಸಂಭ್ರಮದಿಂದ ನಡೆಯಿತು. 42ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಏಳು ದಿನಗಳ ಕಾಲ ದೇವಾಲಯದಲ್ಲಿ ವಿಶೇಷ ಪೂಜೆ, ಅನ್ನದಾನ ಸೇವೆಗಳು ಜರುಗಿತು ವಿಸರ್ಜನೋತ್ಸವದಂದು ಮುಂಜಾನೆಯಿಂದಲೇ ವಿವಿಧ ಪೂಜಾ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಸೇವೆಗಳು ನಡೆದವು. ನಂತರ ಧಾರ್ಮಿಕ ಕಾರ್ಯಕ್ರಮದ ಬಳಿಕ ಗೌರಿ ಗಣೇಶ ಮೂರ್ತಿಯನ್ನು ಹೂವಿನ ಅಲಂಕೃತ ಮಂಟಪದಲ್ಲಿ ಪ್ರತಿಷ್ಠಾಪಿಸಿ ಶೋಭಯಾತ್ರೆಯ ಮೂಲಕ ತೆರಳಿ ಸಮೀಪದ ಮೂಲೆ ಅಂಗಡಿ ಹೊಳೆಯಲ್ಲಿ ವಿಸರ್ಜಿಸಲಾಯಿತು. ಶೋಭಯಾತ್ರೆಯ ಸಂದರ್ಭದಲ್ಲಿ ರುದ್ರಂ ಚಂಡೆ ಬಳಗದವರಿಂದ ಚಂಡೆ ಸೇವೆ ಹಾಗೂ ದಕ್ಷಿಣ ಕನ್ನಡದ ಕಲಾವಿದರು, ಸ್ಥಳೀಯ ಕಲಾವಿದರಿಂದ ಆಕರ್ಷಕವಾಗಿ ಕುಣಿತ, ಭಜನೆಯು ನಡೆಯಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ, ಗ್ರಾಮಸ್ಥರು ಹಾಜರಿದ್ದರು.
ಮೂರ್ನಾಡು ಸೆ.14 NEWS DESK : ಪಾಲೆಮಾಡುವಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ-ಗಣೇಶ ಮೂರ್ತಿಯ ವಿಸರ್ಜನೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಪಾಲೆಮಾಡುವಿನ ಶ್ರೀ ಏಕದಂತ ಸೇವಾ ಸಮಿತಿಯ ವತಿಯಿಂದ 9ನೇ ವರ್ಷ ಪ್ರತಿಷ್ಠಾಪಿಸಲಾಗಿದ್ದ ಗಣೇಶಮೂರ್ತಿಗೆ ಮೂರುದಿನಗಳ ಕಾಲ ವಿವಿಧ ಧಾರ್ಮಿಕ ಪೂಜೆ ಸಲ್ಲಿಸಲಾಯಿತು. ನಂತರ ಅಲಂಕೃತ ಮಂಟಪದಲ್ಲಿ ಉತ್ಸವಮೂರ್ತಿಯನ್ನು ಪಾಲೆಮಾಡುವಿನ ಮುಖ್ಯಬೀದಿಗಳಲ್ಲಿ ಶೋಭಯಾತ್ರೆಯೊಂದಿಗೆ ಬಲಮುರಿಯ ಕಾವೇರಿನದಿಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭ ಏಕದಂತ ಸೇವಾ ಸಮಿತಿಯ ಅಧ್ಯಕ್ಷ ಎಂ.ಸಿ.ದಿನೇಶ್, ಉಪಾಧ್ಯಕ್ಷ ಶರವಣ, ಕಾರ್ಯದರ್ಶಿ ಟಿ.ಆರ್.ರಮೇಶ್, ಖಜಾಂಚಿ ಕಾಳಪ್ಪ ಹಾಗೂ ಸರ್ವಸದಸ್ಯರು, ಸುತ್ತಮುತ್ತಲಿನ ಗ್ರಾಮಸ್ಥರು ಶೋಭಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ವರದಿ : ಟಿ.ಸಿ.ನಾಗರಾಜ್, ಮೂರ್ನಾಡು
ಮಡಿಕೇರಿ ಸೆ.14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆಯ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿ “ಬೇಟಿ ಬಚಾವೊ ಬೇಟಿ ಪಡಾವೋ” ಕಾರ್ಯಕ್ರಮದಡಿಯಲ್ಲಿ ತಾಲ್ಲೂಕು ಮಟ್ಟದಲ್ಲಿ ಅಪೌಷಿಕ್ಟ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವು ಕುಶಾಲನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಕುಶಾಲನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಕ್ಕಳ ತಜ್ಞ ಡಾ.ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಪಾಲನೆ ಪೋಷಣೆಯಲ್ಲಿ ಪೋಷಕರ ಪಾತ್ರ ಮುಖ್ಯ. ಆದರೆ ಪ್ರಸ್ತುತ ದಿನಗಳಲ್ಲಿ ಪೋಷಕರು ಉದ್ಯೋಗದಲ್ಲಿ ತಮ್ಮನ್ನು ತಾವು ಹೆಚ್ಚು ತೊಡಗಿಸಿಕೊಳ್ಳುತ್ತಿರುವುದರಿಂದ ಅಪೌಷ್ಟಿಕ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಾಗಿದೆ. ಮಕ್ಕಳನ್ನು ಶಾಂತವಾಗಿರಿಸಲು ಸಿಹಿತಿನಿಸು, ಬಿಸ್ಕೆಟ್, ಚಿಪ್ಸ್ ಇಂತಹ ಖರೀದಿಸಿದ ಪದಾರ್ಥ ನೀಡುತಿದ್ದಾರೆ. ಇದರಿಂದ ಮಕ್ಕಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಮಕ್ಕಳ ಎಲ್ಲಾ ತಾಯಂದಿರು ಮಕ್ಕಳಿಗೆ ಹೆಚ್ಚು ಒತ್ತು ನೀಡುವ ಮೂಲಕ ಮನೆಯಲ್ಲಿ ತಯಾರಿಸಿದ ಆಹಾರ ಪಾದರ್ಥಗಳನ್ನು ನೀಡುವುದು ಉತ್ತಮ ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ…
ಮಡಿಕೇರಿ ಸೆ.14 NEWS DESK : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೊಮ್ಮುವ ಎಫ್ 3 ಗದ್ದಿಗೆ, ಎಫ್11 ಗಾಳಿಬೀಡು ಹಾಗೂ ಎಫ್10 ಕುಂಡಾಮೇಸ್ತ್ರಿ ಫೀಡರ್‍ಗಳ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಸೆಪ್ಟೆಂಬರ್, 17 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸಂಪಿಗೆಕಟ್ಟೆ, ಎ.ವಿ.ಶಾಲೆ, ಆಜಾದ್‍ನಗರ, ತ್ಯಾಗರಾಜ ಕಾಲೋನಿ, ಮಾರ್ಕೆಟ್, ಭಗವತಿನಗರ, ಕಾನ್ವೆಂಟ್ ಜಂಕ್ಷನ್, ಐಟಿಐ ಹಿಂಭಾಗ, ಕಾವೇರಿ ಲೇಔಟ್, ಹೆಬ್ಬೆಟ್ಟಗೇರಿ, ದೇವಸ್ತೂರು, ಕೆ.ಬಾಡಗ, ಗಾಳಿಬೀಡು, ಕಾಲೂರು, ಸಿದ್ದಿಕಾಡು, ವಣಚಲು, ಕೆ.ನಿಡುಗಣೆ, ಕುಂಡಾಮೇಸ್ತ್ರಿ, ಕೂಟುಹೊಳೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ NEWS DESK ಸೆ.13 : ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯತ್ವ ಅಭಿಯಾನ ಮತ್ತು ಕಾರ್ಯಕಾರಿಣಿ ಸಭೆ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸದಸ್ಯತ್ವ ಅಭಿಯಾನದೊಂದಿಗೆ ಪಕ್ಷ ಸಂಘಟನೆಯ ಕುರಿತು ಚರ್ಚಿಸಿ, ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಸಂಯೋಜಕರಾಗಿ ವಸಂತ್ ಕುಮಾರ್ ಸಿದ್ದಾಪುರ, ಸಹ ಸಂಯೋಜಕರಾಗಿ ಸುರೇಶ್ ಬಿ.ಜೆ, ಕಾರ್ಯಕಾರಿಣಿ ಸದಸ್ಯರಾಗಿ ಅಕ್ಷಿತ್ ಪೂಜಾರಿ, ಪ್ರದೀಪ್ ಪೆರಾಜೆ ಹಾಗೂ ಸಾಮಾಜಿಕ ಜಾಲತಾಣದ ಮುಖ್ಯಸ್ಥರನ್ನಾಗಿ ವಿಠಲ್ ಪೂಜಾರಿ ಹಾಕತ್ತೂರು ಅವರನ್ನು ಆಯ್ಕೆ ಮಾಡಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರು ಪಕ್ಷದ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕು, ಸದಸ್ಯತ್ವವನ್ನು ಹೆಚ್ಚು ಮಾಡಬೇಕು ಎಂದು ಕರೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು ಮಾತನಾಡಿದರು. ಸಭೆಯಲ್ಲಿ ರಾಜ್ಯ…
ಮಡಿಕೇರಿ ಸೆ.13 NEWS DESK : ಕೊಡಗು ಜಿಲ್ಲಾ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಇಂಟರ್ ಸ್ಕೂಲ್ ಚೆಸ್ ಪಂದ್ಯಾವಳಿಯು ನಗರದ ಕೊಡಗು ವಿದ್ಯಾಲಯದಲಿ ನಡೆಯಿತು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಜಿ.ವಿ.ಲಿಖಿತ್ ಒಟ್ಟು 8 ಪಂದ್ಯದಲ್ಲಿ 7 ಪಂದ್ಯಗಳನ್ನು ಗೆದ್ದು, 8ನೇ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈ ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಭಾಗವಹಿಸಿ 2ನೇ ಸ್ಥಾನ ಪಡೆದಿರುವುದು ಶಾಲೆಗೆ ಹಮ್ಮೆ ತಂದಿದೆ. ಆದ್ದರಿಂದ ವಿದ್ಯಾರ್ಥಿಗೆ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ತರಬೇತುದಾರರಾದ ಈರಪ್ಪ ಹಾಗೂ ಶಾಲೆಯ ಪ್ರಾಂಶುಪಾಲರಾದ ಸವಿತ ಎಂ.ಜಿ. ಮತ್ತು ಮಾಸ್ಟರ್ ಮೈಂಡ್ ಚೆಸ್ ಶಾಲೆಯ ಆದರ್ಶ ಮಂಡಳಿಯವರು ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮಡಿಕೇರಿ ಸೆ.13 NEWS DESK : ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ಅಪ್ಪಯ್ಯ ಎಂ.ಕೆ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ಜೆ.ಎಂ.ನಾಸಿರ್ ಅಹಮ್ಮದ್, ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ, ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಕಾರ್ಯದರ್ಶಿ ರಿಯಾಜ್ ಕೆ.ಹೆಚ್, ಜಿಲ್ಲಾ ಎಸ್.ಸಿ/ಎಸ್.ಟಿ. ಘಟಕದ ಅಧ್ಯಕ್ಷ ರಮೇಶ್ ಹೆಚ್.ಎ, ಸಾಮಾಜಿಕ ಜಾಲತಾಣದ ಜಿಲ್ಲಾ ಉಸ್ತುವಾರಿ ರಫೀಕ್ ಎಂ.ಇ, ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಕೆ.ಪಿ.ಬಾಲಸುಬ್ರಹ್ಮಣ್ಯ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ನಯಾಜ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎಸ್.ಎಂ.ಬೆಳ್ಳಿಯಪ್ಪ, ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಶೀಲಾವತಿ ಹೆಚ್.ಎಸ್ ಹಾಗೂ ಜಿಲ್ಲಾ ಆಟೋ ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷರನ್ನಾಗಿ ಅರುಣ ಎಸ್. ಅವರುಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾಧ್ಯಕ್ಷ ಅಪ್ಪಯ್ಯ ಎಂ.ಕೆ ಅವರು ಮಾತನಾಡಿ ಜಿಲ್ಲೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಬಲವರ್ಧನೆಯೇ ನಮ್ಮ ಗುರಿಯಾಗಿರಬೇಕು, ಅನ್ಯಾಯ ಹಾಗೂ ಸಮಸ್ಯೆಗಳ…
ಮಡಿಕೇರಿ ಸೆ.13 NEWS DESK : ಕರ್ನಾಟಕ ಸುವರ್ಣ ಸಂಭ್ರಮ ಪ್ರಯುಕ್ತ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ವಿವಿಧ ಪದವಿ ಕಾಲೇಜುಗಳ ಸಹಕಾರದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಅಂತರ್ ಕಾಲೇಜು ಸಮೂಹ ಗಾಯನ ಸ್ಪರ್ಧೆ ನಡೆಯಿತು. ಕೊಡ್ಲಿಪೇಟೆಯ ಪ್ರಥಮ ದರ್ಜೆ ಕಾಲೇಜು, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜು, ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನಗರದ ಸರ್ಕಾರಿ ಮಹಿಳಾ ಪದವಿ ಕಾಲೇಜು, ವಿರಾಜಪೇಟೆಯ ಕಾವೇರಿ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳು ಸಮೂಹ ಗಾಯನ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಸ್ಪರ್ಧೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು(ಪ್ರಥಮ), ಕುಶಾಲನಗರದ ಅನುಗ್ರಹ ಪ್ರಥಮ ದರ್ಜೆ ಕಾಲೇಜು(ದ್ವಿತೀಯ), ಗೋಣಿಕೊಪ್ಪ ಕಾವೇರಿ ಕಾಲೇಜಿನ ವಿದ್ಯಾರ್ಥಿಗಳು (ತೃತೀಯ) ಸ್ಥಾನ ಪಡೆದರು. ಸಮೂಹ ಗಾಯನ ಸ್ಪರ್ಧಾ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ.…
ವಿರಾಜಪೇಟೆ ಸೆ.13 NEWS DESK : ವಿರಾಜಪೇಟೆಯ ಇತಿಹಾಸ ಪ್ರಸಿದ್ದ ಗಣಪತಿ ದೇವಾಲಯದ ಸಭಾಂಗಣದಲ್ಲಿ ನಾಟ್ಯಾಂಜಲಿ ನೃತ್ಯ ಮತ್ತು ಸಂಗೀತ ಶಾಲೆಯ ವಿದ್ಯಾರ್ಥಿಗಳ ಭಜನಾ ನೃತ್ಯ ಸಂಕೀರ್ತನೆಗಳು ಪ್ರೇಕ್ಷಕರನ್ನು ರಂಜಿಸಿತು. ಗಣಪತಿ ದೇವಾಲಯದ ಆವರಣದಲ್ಲಿ ಗಣೇಶನ ಮೂರ್ತಿಯ ಪ್ರತಿಷ್ಠಾಪನೆ ವೇಳೆ ಭಜನ ನೃತ್ಯ ಪ್ರದರ್ಶನ ನಡೆದು ಬಳಿಕ ಮೆರವಣಿಗೆ ಮುಖಾಂತರ ನೃತ್ಯ ತಂಡ ಸಾಗಿ ವಿಘ್ನ ವಿನಾಶಕನನ್ನು ದೇವಾಲಯಕ್ಕೆ ತರಲಾಯಿತು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸದಸ್ಯರು, ನೂರಾರು ಸಂಖ್ಯೆಯಲ್ಲಿ ಭಕ್ತರು, ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು ಭಜನಾ ನೃತ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವಿದ್ಯಾರ್ಥಿಗಳಿಗೆ ನೃತ್ಯ ಶಾಲೆಯ ಗುರುಗಳಾದ ಹೇಮಾವತಿ ಕಾಂತರಾಜ್, ಕು. ಕಾವ್ಯಶ್ರೀ ಮಾರ್ಗದರ್ಶನ ನೀಡಿದ್ದರು.






