ಲೇಖಕ: admin

ಮಡಿಕೇರಿ ಅ.14 NEWS DESK : ಇತರರಿಗೆ ಮಾದರಿಯಾಗಿರುವ “ನೊಂದವರ ಬಾಳಿನ ಆಶಾಕಿರಣ ಗೆಳೆಯರ ಬಳಗ” ಪ್ರತಿ ತಿಂಗಳ ಕೊನೆಯ ಭಾನುವಾರದಂದು ಆಶ್ರಮದಲ್ಲಿರುವ ನೊಂದ ಹಿರಿಯರಿಗೆ ಅನ್ನದಾನ ಹಾಗೂ ರಸಮಂಜರಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ. “ಎಲ್ಲರೂ ನಮ್ಮವರು” ಎಂಬ ಘೋಷವಾಕ್ಯದೊಂದಿಗೆ ಮಡಿಕೇರಿಯ ತ್ಯಾಗರಾಜ ಕಾಲೋನಿಯ ತನಲ್ ಆಶ್ರಮದಲ್ಲಿ ಹಿರಿಯರಿಗಾಗಿ ವಿವಿಧ ಸ್ಪರ್ಧೆಯನ್ನು ನಡೆಸಲಾಯಿತು. ನಂತರ ಆಶಾಕಿರಣದ ಫೈವ್ ಸ್ಟಾರ್ ಸಿಂಗರ್ಸ್ ನ ಭಾಷಾ ಹಾಗೂ ಶಿವಣ್ಣ ಅವರ ನೇತೃತ್ವದಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಿ ಆಶ್ರಮವಾಸಿಗಳಿಗೆ ಮನರಂಜನೆ ನೀಡಲಾಯಿತು ಮತ್ತು ಅನ್ನದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ನೊಂದವರ ಬಾಳಿನ ಆಶಾಕಿರಣ ಗೆಳೆಯರ ಬಳಗದ ಅಧ್ಯಕ್ಷ ಮೊಹಮ್ಮದ್ ಆಲಿ, ಉಪಾಧ್ಯಕ್ಷ ಸುಲೇಮಾನ್, ಖಜಾಂಚಿ ಶಿವು, ಕಾರ್ಯದರ್ಶಿ ಎಂ.ಎ.ಅಬ್ದುಲ್ ರಜಾಕ್, ಗಾಯಕಿ ಮಮತಾ, ದೀಕ್ಷಿತ್, ನಗರಸಭಾ ಸದಸ್ಯರಾದ ಅಮಿನ್ ಮೊಹಿಸಿನ್, ಬಶೀರ್, ಅಹ್ಮದ್, ಮೇರಿ ವೇಗಸ್, ಲತೀಫ್, ಸಾಮಾಜಿಕ ಕಾರ್ಯಕರ್ತರಾದ ರಜಾಕ್, ಅಬ್ಸೀನಾ, ಸೆಲಿಕತ್ ಹಾಗೂ ಬಡಾವಣೆಯ ನಿವಾಸಿಗಳು ಹಾಜರಿದ್ದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

Read More

ಮಡಿಕೇರಿ ಅ.14 NEWS DESK : ದಸರಾ ಉತ್ಸವದ ಹಿನ್ನೆಲೆಯಲ್ಲಿ ಹಲವಾರು ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದ್ದ ನಗರದ ಗಾಂಧಿ ಮೈದಾನದಲ್ಲಿ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಈ ಸಂದರ್ಭ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಪಕ್ಷದ ಕಾರ್ಯಕರ್ತರುಗಳೊಂದಿಗೆ ಶ್ರಮದಾನ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Read More

ಬಳ್ಳಾರಿ ಅ.14 NEWS DESK : ಸಂಡೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನಿಮಿತ್ತ ಬಳ್ಳಾರಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್, ಶಾಸಕರಾದ ಶ್ರೀನಿವಾಸ್, ಕಂಪ್ಲಿ ಗಣೇಶ್, ಲತಾ ಮಲ್ಲಿಕಾರ್ಜುನ್, ಸಂಸದರಾದ ಈ.ತುಕಾರಾಂ ಸೇರಿ ಹಲವು ಗಣ್ಯರು ಹಾಜರಿದ್ದರು. ಸಂಡೂರು ತಾಲೂಕಿನ ನಾರಿಹಳ್ಳ ಕಿರು ಜಲಾಶಯವು 0.810 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, 615 ಕಿ.ಮೀ. ವಿಸ್ತೀರ್ಣ ಇದೆ. ಈ ಜಲಾಶಯ ಸಂಡೂರಿನ 20 ಗ್ರಾಮಗಳಿಗೆ ಕುಡಿಯುವ ನೀರಿಗೆ ಆಸರೆಯಾಗಿದೆ.

Read More

ಮಡಿಕೇರಿ ಅ.14 NEWS DESK : ಮಡಿಕೇರಿ ದಸರಾ ಜನೋತ್ಸವ ಸಂದಭ೯ 9 ದಿನಗಳು ಸಾಂಸ್ಕೃತಿಕ ಕಾಯ೯ಕ್ರಮಗಳನ್ನು ವ್ಯವಸ್ಥಿತವಾಗಿ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ ಅವರನ್ನು ಸಾಂಸ್ಕೃತಿಕ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಕಾಯ೯ಕ್ರಮದಲ್ಲಿ ಸಾಂಸ್ಕೃತಿಕ ಸಮಿತಿ ಪರವಾಗಿ ಅನಿಲ್ ಅವರಿಗೆ ಜಿಲ್ಲಾಧಿಕಾರಿ ಮತ್ತು ಮಡಿಕೇರಿ ದಸರಾ ಸಮಿತಿ ಅಧ್ಯಕ್ಷ ವೆಂಕಟ್‌ರಾಜಾ  ಸನ್ಮಾನಿಸಿ ಗೌರವಿಸಿದರು. ಯಾವುದೇ ಸಮಸ್ಯೆಯಿಲ್ಲದಂತೆ ಈ ಬಾರಿ ಸಾಂಸ್ಕೃತಿಕ ಕಾಯ೯ಕ್ರಮಗಳೂ ಭವ್ಯ ವೇದಿಕೆಯಲ್ಲಿ ಆಯೋಜಿತವಾಗಿ ಜನಮನ ಗೆದ್ದಿದೆ. ಇದಕ್ಕಾಗಿ ಸಮಿತಿ ಸದಸ್ಯರು, ವೇದಿಕೆ, ಸ್ವಾಗತ ಸಮಿತಿಯವರಿಗೂ ಅಭಿನಂದನೆ ಸಲ್ಲಿಸುವುದಾಗಿಯೂ ಜಿಲ್ಲಾಧಿಕಾರಿಗಳು ನುಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅನಿಲ್ ಹೆಚ್.ಟಿ ಮಾತನಾಡಿ, ಸ್ಥಳೀಯ ಪ್ರತಿಭೆಗಳ ಜತೆಗೇ ರಾಷ್ಟ್ರ ಮತ್ತು ರಾಜ್ಯಮಟ್ಟದ ಖ್ಯಾತ ಕಲಾವಿದರನ್ನು ದಸರಾ ವೇದಿಕೆಗೆ ಆಹ್ವಾನಿಸಿ ಕಾಯ೯ಕ್ರಮ ನೀಡುವಲ್ಲಿ ಶಾಸಕ ಡಾ.ಮಂಥರ್ ಗೌಡ ಮತ್ತು ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಪೌರಾಯುಕ್ತ ರಮೇಶ್ ಹಾಗೂ ದಸರಾ ಸಮಿತಿ ಕಾಯಾ೯ಧ್ಯಕ್ಷ ಪ್ರಕಾಶ್ ಆಚಾಯ೯, ಪ್ರಧಾನ ಕಾಯ೯ದಶಿ೯ ಬಿ.ವೈ.ರಾಜೇಶ್ ಮತ್ತು…

Read More

ಮಡಿಕೇರಿ ಅ.14 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ “ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆಧ್ಯತೆ ನೀಡುವ ಸಮಯ” ಎಂಬ ಘೋಷ ವಾಕ್ಯದೊಂದಿಗೆ “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2024” ಆಚರಿಸಲಾಯಿತು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಮುನಿರತ್ನಮ್ಮ ಉದ್ಘಾಟಿಸಿ,  ಅತಿಯಾದ ಕೆಲಸದ ಅವಧಿ ಮತ್ತು ಸ್ಪಷ್ಟತೆ ಇರದ ಸಂದೇಶಗಳು, ಮಾನಸಿಕ ಕ್ಷೋಭೆ ಉಂಟು ಮಾಡುತ್ತವೆ. ನೌಕರರ ಒಳ್ಳೆಯ ಕೆಲಸಗಳಿಗೆ ಪ್ರೋತ್ಸಾಹ ಸಿಗದಿರುವುದು ಕೂಡ ಮಾನಸಿಕ ಅನಾರೋಗ್ಯ ಉಂಟುಮಾಡಬಹುದು ಎಂದು ಹೇಳಿದರು.…

Read More

ಮಡಿಕೇರಿ ಅ.14 NEWS DESK : ಹುಲಿ ಸೆರೆ ಕಾರ್ಯಾಚರಣೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶ್ರೀಮಂಗಲ ಹೋಬಳಿ ವ್ಯಾಪ್ತಿಯಲ್ಲಿ ಜಾನುವಾರುಗಳ ಮೇಲೆ ಹುಲಿ ದಾಳಿಯಾದ ಸ್ಥಳಗಳಿಗೆ ಶಾಸಕರು ಭೇಟಿ ನೀಡಿ ಪರಿಸ್ಥಿತಿಯ ಗಂಭೀರತೆಯನ್ನು ಅರಿತರು. ನಂತರ ಅರಣ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು ಹುಲಿ ಸೆರೆಗೆ ನಿರ್ದೇಶನ ನೀಡಿದರು. ವನ್ಯಜೀವಿ ಪಿ.ಸಿ.ಸಿ.ಎಫ್ ಪುಷ್ಕರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಹುಲಿ ಸೆರೆ ಅನಿವಾರ್ಯ ಎಂದು ತಿಳಿಸಿದರು. ಪರಿಹಾರ ವಿತರಣೆ :: ಹುಲಿ ದಾಳಿಗೆ ಹಸು ಕಳೆದುಕೊಂಡ ಮಾಣೀರ ಕಿಶನ್ ಅವರಿಗೆ ಈಗಾಗಲೇ ರೂ.30 ಸಾವಿರ ಪರಿಹಾರವನ್ನು ಅರಣ್ಯ ಇಲಾಖೆ ನೀಡಿದೆ. ವಿಶೇಷ ಪ್ರಕರಣದಡಿ ಹೆಚ್ಚುವರಿ ಪರಿಹಾರವನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಸಿಎಫ್ ನೆಹರು ಅವರಿಗೆ ಶಾಸಕ ಪೊನ್ನಣ್ಣ ಸೂಚಿಸಿದರು. ಕೂಂಬಿಂಗ್ ಆರಂಭ :: ಶಾಸಕ ಎ.ಎಸ್.ಪೊನ್ನಣ್ಣ ಅವರ ನಿರ್ದೇಶನದಂತೆ ಶ್ರೀಮಂಗಲ ಹೋಬಳಿಯ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಹುಲಿ ಸೆರೆಗೆ…

Read More

ಸಿದ್ದಾಪುರ ಅ.14 NEWS DESK : ಸೂರ್ಯ ಫೌಂಡೇಶನ್ ಬೆಂಗಳೂರಿನ ಸ್ಪಾರ್ಕ್ ಅಕಾಡೆಮಿ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಸಹಯೋಗದಲ್ಲಿ ನೀಡಲಾಗುವ 2024-25ನೇ ಸಾಲಿನ ಉತ್ತಮ ಶಿಕ್ಷಕ ಶಿಕ್ಷಣ ಸಿಂಧು ಪ್ರಶಸ್ತಿಗೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಚನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕೆ.ಕೆ.ಸುಷಾ ಭಾಜನರಾಗಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪ್ರಗತಿಗೆ ಶಾಲಾ ಹಂತದಲ್ಲಿ ಕೈಗೊಂಡ ವಿಶಿಷ್ಟ ಕಾರ್ಯಕ್ರಮ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಇಂಡೋ ಗ್ಲೋಬ್ ಸಂಸ್ಥೆ ಚಿಕ್ಕ ಬಾಣಾವಾರದಲ್ಲಿ ನಡೆಯುವ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗವುದು ಎಂದು ಸೂರ್ಯ ಫೌಂಡೇಶನ್ ಹಾಗೂ ಸ್ಟಾರ್ಕ್ ಅಕಾಡೆಮಿಯ ಮುಖ್ಯಸ್ಥ ಸೋಮೇಶ್ ನಮೋದಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚನ್ನಂಗಿ ಶಾಲೆಯ ಮುಖ್ಯ ಶಿಕ್ಷಕಿ ಕೆ.ಕೆ.ಸುಷಾ ಗ್ರಾಮೀಣ ಭಾಗದ ಶಾಲೆಯಲ್ಲಿ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಪರಿಸರ ಕಾಳಜಿ, ವೃತ್ತಿ ಶಿಕ್ಷಣ, ಕಲಾ ಸಾಹಿತ್ಯ ಸಂಸ್ಕೃತಿ ಸೇರಿದಂತೆ ತಿಂಗಳಿಗೊಮ್ಮೆ…

Read More

ನಾಪೋಕ್ಲು ಅ.14 NEWS DESK : ಭಾರತೀಯ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಕೊಡಗಿನ ಕಕ್ಕಬೆಯ ಅರೆಯಡ ಕೃತಿಕ ದೇವಯ್ಯ ಪದೋನ್ನತಿ ಹೊಂದಿದ್ದಾರೆ. ಕೃತಿಕ ದೇವಯ್ಯ ಭಾರತೀಯ ಸೇನೆಯ ಆಫೀಸರ್ಸ್ ನೇಮಕಾತಿ ಪರೀಕ್ಷೆಯಲ್ಲಿ ಎರಡನೇ ರ್ಯಾಂಕ್ ಗಳಿಸಿದ್ದರು. ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡಿ ಬಳಿಕ ಬೆಂಗಳೂರಿನ ಆರ್.ವಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪೂರೈಸಿದ್ದರು. ಕೃತಿಕ ದೇವಯ್ಯ 2018 ರಲ್ಲಿ ಗಣರಾಜ್ಯೋತ್ಸವ ಸಮಾರಂಭದ ಎನ್‍ಸಿಸಿ ಪರೆಡ್ ನಲ್ಲಿ ಭಾಗವಹಿಸಿದ್ದರು. ವಿಯೆಟ್ನಾಂನಲ್ಲಿ ನಡೆದ ಎನ್ಸಿಸಿ ಯುವ ಸಮ್ಮೇಳನದಲ್ಲಿ ಭಾರತವನ್ನು ಪ್ರತಿನಿಧಿಸಿದ ಕೃತಿಕ ಮಡಿಕೇರಿ ತಾಲ್ಲೂಕಿನ ಕಕ್ಕಬೆಯ ಯವಕಪಾಡಿ ಗ್ರಾಮದ ಅರೆಯಡ ಜೀವನ್ ದೇವಯ್ಯ ಮತ್ತು ಬಬಿತಾ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ. 

Read More

ಸುಂಟಿಕೊಪ್ಪ ಅ.14 NEWS DESK : ಸುಂಟಿಕೊಪ್ಪದಲ್ಲಿರುವ ಇಮ್ಯಾನ್‍ವೆಲ್ ದೇವಾಲಯದಲ್ಲಿ ವಾರ್ಷಿಕ ಬೆಳೆಹಬ್ಬವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯ ಹಾಗೂ ಆವರಣವನ್ನು ಕಬ್ಬು, ಭತ್ತದ ಪೈರು, ಪುಷ್ಪಾಗಳಿಂದ ಅಲಂಕರಿಸಲಾಗಿತ್ತು. ಕೊಡಗು ವಲಯಾಧ್ಯಕ್ಷ ಮತ್ತು ಸಭಾಪಾಲಕ ರೆ.ಫಾ.ಜೈಸನ್‍ಗೌಡರ್, ರೇವರೆಂಡ್ ವಿನೋದ್‍ಐಸಾಕ್ ಹಾಗೂ ಸುಂಟಿಕೊಪ್ಪ ಸಭಾಪಾಲಕರಾದ ಮಧುಕಿರಣ್ ಪಾಲ್ಗೊಂಡು ಧಾರ್ಮಿಕ ವಿಧಿವಿಧಾನಗಳೊಂದಿಗೆ ಪ್ರಾರ್ಥನೆ, ಆರ್ಶಿವಚನ ನೀಡಿದರು. ಈ ಸಂದರ್ಭ ಮಾತನಾಡಿದ ಚರ್ಚ್ ಆಫ್ ಸೌತ್ ಇಂಡಿಯಾದ ದಕ್ಷಿಣ ಪ್ರಾಂತ್ಯದ ದೇವಾಲಯಗಳ ಕೊಡಗು ವಲಯಾಧ್ಯಕ್ಷ ಮತ್ತು ಸಭಾಪಾಲಕರಾದ ರೆ.ಫಾ.ಜೈಸನ್‍ಗೌಡರ್ ಮಾತನಾಡಿ, ನಮ್ಮ ದೇವಾಲಯಗಳ ವಾರ್ಷಿಕ ವಿಧಿವಿಧಾನಗಳಲ್ಲಿ ಬೆಳೆ ಹಬ್ಬವು ಪ್ರಮುಖವಾಗಿದ್ದು, ಸತ್ಯವೇದ ಅಥವಾ ಬೈಬಲಿನ ಪ್ರಕಾರ ಭಕ್ತರು ತಾವು ಬೆಳೆದ ಕೃಷಿ ಉತ್ಪಾನ ಮತ್ತು ಬೆಳೆದ ಫಲವಸ್ತುಗಳನ್ನು ಮೊದಲ ಕಾಣಿಕೆಯಾಗಿ ದೇವರಿಗೆ ಸರ್ಮಪಿಸುವುದು ಒಂದು ಪದ್ಧತಿ ಮತ್ತು ನಂಬಿಕೆಯ ನಡವಳಿಕೆಯಾಗಿದೆ. ಇದರ ಮೂಲಕ ನಮ್ಮನ್ನು ನಾವು ದೇವರಿಗೆ ಪುನಾರವರ್ತಿ ಕಾಣಿಕೆಯಾಗಿ ಸರ್ಮಪಿಸಿಕೊಳ್ಳುವದಾಗಿದೆ. ಇದರಿಂದ ನಮ್ಮ ಜೀವನದಲ್ಲಿ ಯೇಸುಸ್ವಾಮಿಯ ಕೃಷೆ ಮತ್ತು ಆರ್ಶಿವಾದಗಳಿಗೆ ಪಾತ್ರರಾಗಿ ಜೀವನವನ್ನು ಮುನ್ನಡೆಸುವುದಾಗಿದೆ ಎಂದು…

Read More

ಸುಂಟಿಕೊಪ್ಪ ಅ.14 NEWS DESK : ಕನ್ನಡ ಭಾಷೆ ನಮ್ಮ ಉಸಿರಾಗಿರಬೇಕು, ಕನ್ನಡ ಉಳಿಸಿ ಬೆಳೆಸುವ ಕೆಲಸದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸೋಮವಾರಪೇಟೆ ಕ.ಸಾ.ಪ ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ ಐಗೂರು ಕೇಂದ್ರದ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು ಕಚೇರಿ ಉದ್ಘಾಟಿಸಿದರೆ ಸಾಲದು ಪ್ರತಿದಿನ ಕಚೇರಿ ಬಾಗಿಲು ತೆರದಿಡಬೇಕು. ಹೋಬಳಿ ಕೇಂದ್ರದ ಶಾಲೆಗಳಲ್ಲಿ ಕನ್ನಡ ಭಾಷೆ ಸಾಹಿತ್ಯದ ಚಟುವಟಿಕೆಗಳನ್ನು ನಡೆಸಿಕೊಂಡು ಶಾಲಾ ಮಕ್ಕಳಲ್ಲಿ ಹಾಗೂ ಸ್ತ್ರೀಶಕ್ತಿ ಗುಂಪಿನವರಿಗೆ ಕನ್ನಡ ಜಾಗೃತಿ ಕೆಲಸ ಮಾಡಬೇಕು. ಮಹಿಳೆಯರಲ್ಲಿ ಆಡಗಿರುವ ಸಾಹಿತ್ಯ ಪ್ರತಿಭೆಗಳನ್ನು ಹೊರ ತರುವ ಕೆಲಸ ಸಾಹಿತ್ಯ ಪರಿಷತ್ ವತಿಯಿಂದ ಆಗಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್, ಕನ್ನಡಭಾಷೆ ಸಾಹಿತ್ಯ ಇನ್ನಷ್ಟು ಗಟ್ಟಿಯಾಗಿ…

Read More