ಮಡಿಕೇರಿ ಸೆ.13 NEWS DESK : ಕೊಡಗಿನ ಆರ್ಥಿಕ ಆಧಾರ ಸ್ತಂಭವಾಗಿರುವ ಕಾಫಿ ಕೃಷಿಯ ಸಂಕಷ್ಟಗಳನ್ನು ಅರಿತು ಸರ್ಕಾರ ಸೂಕ್ತ ಸ್ಪಂದನೆ ನೀಡಬೇಕು. ಸಿ ಮತ್ತು ಡಿ ಜಮೀನನ್ನು ಅರಣ್ಯವೆಂದು ಘೋಷಿಸಬಾರದು ಹಾಗೂ ಬಡವರನ್ನು ಒಕ್ಕಲೆಬ್ಬಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ಕಾಫಿ ರೈತರ ಸಂಘದ ಕೊಡಗು ಘಟಕ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸಂಘದ ಕೊಡಗು ಘಟಕದ ಸಂಚಾಲಕ ಕೆ.ಹೆಚ್.ಹನೀಫ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಸಂಘದ ಪದಾಧಿಕಾರಿ ಡಾ.ಇ.ರ.ದುರ್ಗಾಪ್ರಸಾದ್ ಅವರು ಮಾತನಾಡಿ, ಕಾಫಿ ಬೆಳೆಗಾರರ ಪ್ರಮುಖ ಆರು ಬೇಡಿಕೆಗಳನ್ನು ಮುಂದಿಟ್ಟುಕೊAಡು ಸರ್ಕಾರದ ಗಮನ ಸೆಳೆಯುವ ಹಿನ್ನೆಲೆಯಲ್ಲಿ ಹೋರಾಟವನ್ನು ರೂಪಿಸಲಾಗಿದೆ. ಇದಕ್ಕೆ ಸರ್ಕಾರ ಸೂಕ್ತ ಸ್ಪಂದನ ನೀಡದಿದ್ದಲ್ಲಿ ಮತ್ತಷ್ಟು ದೊಡ್ಡ ಮಟ್ಟದ ಹೋರಾಟವನ್ನು ರೂಪಿಸಲಾಗುತ್ತದೆ ಎಂದು ತಿಳಿಸಿದರು. ಅತಿವೃಷ್ಟಿಯಿಂದ ಜಿಲ್ಲೆಯ ಕಾಫಿ, ಕರಿಮೆಣಸು, ಭತ್ತ, ಅಡಿಕೆ, ಏಲಕ್ಕಿ ಕೃಷಿಗೆ ಅಪಾರ ಹಾನಿ ಸಂಭವಿಸಿದೆ. ಇದರಿಂದ ಇದನ್ನೆ ನಂಬಿರುವ ಸಣ್ಣ ಬೆಳೆಗಾರರು ತೀವ್ರ ಸಂಕಷ್ಟಕ್ಕೆ…
ಲೇಖಕ: admin
ಮಡಿಕೇರಿ NEWS DESK ಸೆ.13 : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿಯ ಎಸ್‌ಸಿ ಮೋರ್ಚಾ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿ ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು. ಬಿಜೆಪಿಯ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಮಾತನಾಡಿ ಅಮೆರಿಕದ ವಿಶ್ವವಿದ್ಯಾನಿಲಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಮೀಸಲಾತಿ ರದ್ದು ಪಡಿಸುವ ಕುರಿತು ರಾಹುಲ್ ಗಾಂಧಿ ಅವರು ನೀಡಿರುವ ಹೇಳಿಕೆ ಖಂಡನೀಯ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ರದ್ದು ಮಾಡಲು ಬಯಸುತ್ತದೆ ಎಂದು ಹೇಳುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಎಚ್ಚರಿಕೆ ನೀಡಿದಂತ್ತಾಗಿದೆ ಎಂದು ಆರೋಪಿಸಿದರು. ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ…
ಸುಂಟಿಕೊಪ್ಪ ಸೆ.13 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ರಾಮಮಂದಿರದಲ್ಲಿ ನಡೆಯುತ್ತಿರುವ 60ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಕುಂದನ್ ನೃತ್ಯಾಲಯ ತಂಡ ಮತ್ತು ಸ್ಟೆಪ್ ಕಮ್ ಡಾನ್ಸ್ ಟ್ಯುಟೋರಿಯಲ್ ತಂಡದಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ಪ್ರೇಕ್ಷಕರನ್ನು ಮನಸೂರೆಗೊಳಿಸಿತು. ಗಣೇಶ ಸ್ತೋತ್ರದ ನಾಟ್ಯದೊಂದಿಗೆ ಆರಂಭಗೊಂಡ ನೃತ್ಯ ವೈಭವ, ಪುಟಾಣಿ ಮಕ್ಕಳ ಭರತನಾಟ್ಯ ಎಲ್ಲರ ಗಮನ ಸೆಳೆಯಿತು. ‘ಕರ್ನಾಟಕದ ಇತಿಹಾಸದಲಿ’, ‘ ಮೂಷಿಕ ವಾಹನ’, ‘ ಬ್ರಹ್ಮ ಮುಖಟ’ ‘ ಕಾಂತಾರ’ ಸೇರಿದಂತೆ ಹತ್ತಾರು ಸುಂದರ ವೈವಿಧ್ಯಮಯ ಹಾಡಿಗೆ ಭರತನಾಟ್ಯದ ಮೂಲಕ ಎಲ್ಲರನ್ನು ಮನರಂಜಿಸಿತು. ಕೊನೆಯಲ್ಲಿ ಕಥಕ್ಕಳಿ ಮೂಲಕ ಮುಕ್ತಾಯಗೊಳಿಸಲಾಯಿತು. ಕುಂದನ್ ನೃತ್ಯಾಲಯದ ವಿನುತಾ ಹೇಮಂತ್ ಮತ್ತು ಸ್ಟೆಪ್ ಕಮ್ ಡಾನ್ಸ್ ಟ್ಯುಟೋರಿಯಲ್ ನ ರಶ್ಮಿ ಶಿವಕುಮಾರ್ ಅವರ ನೇತೃತ್ವದ ತಂಡ ಮನಮೋಹಕ ಭರತನಾಟ್ಯದ ಮೂಲಕ ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿಕೊಂಡಿತು. ನಂತರ ಮಹಾಪೂಜೆ, ವಿಶೇಷ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿತು. ಭಕ್ತಾಧಿಗಳು ಹೆಚ್ಚಿನ…
ಮಡಿಕೇರಿ ಸೆ.13 NEWS DESK : ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಅ.10 ರಂದು ಜಾನಪದ ದಸರಾ ಉತ್ಸವವನ್ನು ಮಡಿಕೇರಿ ದಸರಾ ಉತ್ಸವದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮತ್ತು ಜಾನಪದ ದಸರಾ ಸಂಚಾಲಕ ಅನಿಲ್ ಹೆಚ್.ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ 4 ವಷ೯ಗಳಿಂದ ಮಡಿಕೇರಿ ದಸರಾ ಉತ್ಸವದಲ್ಲಿ ಕನಾ೯ಟಕ ಜಾನಪದ ಪರಿಷತ್ ಸಹಯೋಗದಲ್ಲಿ ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಕನಾ೯ಟಕ ಕೊಡವ ಸಾಹಿತ್ಯ ಸಂಸ್ಕೖತಿ ಅಕಾಡೆಮಿ, ಕನಾ೯ಟಕ ಅರೆಭಾಷಾ ಸಾಹಿತ್ಯ ಸಂಸ್ಕೖತಿ ಅಕಾಡೆಮಿ, ಕನಾ೯ಟಕ ಬ್ಯಾರಿ ಸಾಹಿತ್ಯ ಸಂಸ್ಕೖತಿ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಜಾನಪದ ದಸರಾದಲ್ಲಿ ಈ ವಷ೯ವೂ ಕೊಡಗಿನ ಜಾನಪದ ಕಲಾವಿದರಿಗೆ ಕಲಾಪ್ರದಶ೯ನಕ್ಕೆ ಅವಕಾಶ ನೀಡಲಾಗುತ್ತಿದೆ. ಅ.10 ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಜಾನಪದ ದಸರಾ ಕಾಯ೯ಕ್ರಮಗಳು ನಡೆಯುತ್ತವೆ ಎಂದೂ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಜಾನಪದ ದಸರಾದಲ್ಲಿ ಕಲಾ…
ಮಡಿಕೇರಿ ಸೆ.13 NEWS DESK : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಭಾಗವಾಗಿರುವ ‘ಬಹುಭಾಷಾ ಕವಿಗೋಷ್ಠಿ’ಯನ್ನು 2024 ನೇ ಸಾಲಿನಲ್ಲಿ ಅಕ್ಟೋಬರ್ 9ರ ಬುಧವಾರದಂದು ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಆಯೋಜಿಸಲಾಗಿದೆ. ಇದರಲ್ಲಿ ಕವನಗಳನ್ನು ವಾಚನ ಮಾಡಲು ಆಸಕ್ತರಾಗಿರುವ ಕವಿ/ ಕವಿಯಿತ್ರಿಯರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಕವಿ/ ಕವಿಯಿತ್ರಿಯರು ಯಾವುದೇ ಒಂದು ಭಾಷೆಯ ಒಂದು ಕವನವನ್ನು ಸೆಪ್ಟೆಂಬರ್ 23 ರ ಒಳಗಾಗಿ ಕಳಹಿಸಿಕೊಡಬೇಕು. ಆ ನಂತರ ಬರುವ ಕವನಗಳನ್ನು ಪರಿಗಣಿಸಲಾಗುವುದಿಲ್ಲ. ಈ ಬಾರಿಯ ಕವಿಗೋಷ್ಠಿಯಲ್ಲಿ ವರ್ಷಂಪ್ರತಿಯಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ಉರ್ದು, ತಮಿಳು, ಮಲೆಯಾಳಂ, ತೆಲುಗು, ಮರಾಠಿ, ಸಂಸ್ಕೃತ ಹೀಗೆ ಯಾವುದೇ ಭಾಷೆಯ ಕವನಗಳನ್ನು ‘ಕನ್ನಡ’ಲಿಪಿಯಲ್ಲಿ ಹಾಗೂ ಹಿಂದಿ ಇಂಗ್ಲಿಷ್ ಕವನವನ್ನು ಅದೇ ಭಾಷೆಯಲ್ಲಿ ಕಳುಹಿಸಿಕೊಡತಕ್ಕದ್ದು. ಕನ್ನಡ ಭಾಷೆಯ ಚುಟುಕು ಕವನ(4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು, ಮಕ್ಕಳ ಕವನ(6 ರಿಂದ 12 ವರ್ಷ…
ಮಡಿಕೇರಿ ಸೆ.13 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ವೆಬ್‍ಸೈಟ್ ವಿಳಾಸ https://sevasindhu.karnataka.gov.in ನಲ್ಲಿ ಸಲ್ಲಿಸಬೇಕು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ : ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಗೆ ವಿವಿಧ ಆರ್ಥಿಕ ಗಳಿಕೆಯ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಣ್ಣ ಆದಾಯಗಳಿಸಲು ಆರ್ಥಿಕ ಚಟುವಟಿಕೆಗಳಿಗೆ ನಿಗಮಗಳಿಂದ ನೇರ ಸಾಲ (ಗರಿಷ್ಠ ವೆಚ್ಚ ರೂ.1 ಲಕ್ಷ, ಅದರಲ್ಲಿ ಶೇ.50 ಸಾಲ ಮತ್ತು ಶೇ.50 ಸಹಾಯಧನ (ಶೇ.4ರಷ್ಟು ಬಡ್ಡಿ ದರ). ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ) : ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ…
ಮಡಿಕೇರಿ ಸೆ.13 NEWS DESK : ವಿರಾಜಪೇಟೆ ಪಟ್ಟಣದಲ್ಲಿ ನಡೆಯಲಿರುವ ಗೌರಿ ಗಣೇಶ ಮೂರ್ತಿಗಳ ವಿಸರ್ಜನೆ ಸಂಬಂಧ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆ.17 ರಂದು ಅಪರಾಹ್ನ 2 ಗಂಟೆಯಿಂದ ಸೆ.18 ಬೆಳಿಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ತಾತ್ಕಾಲಿಕ ವಾಹನ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಪೆರಂಬಾಡಿ ಕಡೆಯಿಂದ ವಿರಾಜಪೇಟೆ ನಗರಕ್ಕೆ ಉತ್ಸವ ವೀಕ್ಷಣೆಗೆ ಬರುವ ವಾಹನಗಳನ್ನು ವಿರಾಜಪೇಟೆ ತಾಲೂಕು ತಹಶೀಲ್ದಾರ್‍ರವರ ಕಛೇರಿಯ ಮುಂಭಾಗದಿಂದ ಆರ್ಜಿ ಕಡೆಗೆ ಹೋಗುವ ರಸ್ತೆಯ ಎಡಭಾಗದಲ್ಲಿ ಬದಿಯಲ್ಲಿ ಮಾತ್ರ ನಿಲ್ಲಿಸುವುದು. ಕೇರಳದ ಮಾಕುಟ್ಟ ಮಾರ್ಗವಾಗಿ ಗೋಣಿಕೂಪ್ಪದ ಕಡೆ ಅಥವಾ ಸಿದ್ದಾಪುರದ ಕಡೆಗಳಿಗೆ ಹೋಗುವ ವಾಹನಗಳಿಗೆ ಪೆರುಂಬಾಡಿ ಚೆಕ್ ಪೋಸ್ಟ್-ಬಾಳುಗೋಡು-ಬಿಟ್ಟಂಗಾಲ ಜಂಕ್ಷನ್-ಕೈಕೇರಿ ಜಂಕ್ಷನ್-ಸಿ.ಎಂ. ಪೂಣಚ್ಚನವರ ಮನೆಯ ರಸ್ತೆ ಜಂಕ್ಷನ್ ಮಾರ್ಗವಾಗಿ ಪಾಲಿಬೆಟ್ಟ-ಸಿದ್ದಾಪುರಕ್ಕೆ ಹೋಗುವುದು. ಅದೇ ರೀತಿ ಸಿದ್ದಾಪುರ ಕಡೆಯಿಂದ ಕೇರಳದ ಕಡೆ ಹೋಗುವ ವಾಹನಗಳು ಕೈಕೇರಿ-ಬಿಟ್ಟಂಗಾಲ- ಬಾಳುಗೋಡು – ಪೆರುಂಬಾಡಿ ಮಾರ್ಗವಾಗಿ ಕೇರಳದ ಕಡೆ ಹೋಗುವುದು. ಮಡಿಕೇರಿಯಿಂದ ಕೇರಳದ…
ಮಡಿಕೇರಿ ಸೆ.13 NEWS DESK : “2024-25 ನೇ ಸಾಲಿನ ಶ್ರೀ ಭಗಂಡೇಶ್ವರ – ತಲಕಾವೇರಿ ದೇವಾಲಯದಲ್ಲಿ ಸೆ.17 ರಂದು ಜರುಗುವ ‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ” ಕುರಿತು ಪೂರ್ವ ಸಿದ್ಧತೆ ಬಗ್ಗೆ ಚರ್ಚಿಸಲು ಸಲುವಾಗಿ ಸೆ.14 ರಂದು “ಅಪರಾಹ್ನ 3.30 ಗಂಟೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅಧ್ಯಕ್ಷತೆಯಲ್ಲಿ ‘ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿ ಕಟ್ಟಡದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಆದುದರಿಂದ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ – 2024” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ, ಚರ್ಚಿಸಲು ಸಂಘ ಸಂಸ್ಥೆಗಳ ಅಧ್ಯಕ್ಷರು, ಎಲ್ಲಾ ಸಮುದಾಯಗಳ ಮುಖಂಡರು, ಊರಿನ ಹಿರಿಯರು, ನಾಡಿನ ಎಲ್ಲಾ ದೇವಾಲಯಗಳ ತಕ್ಕಮುಖ್ಯಸ್ಥರುಗಳು ಮತ್ತು ಸಾರ್ವಜನಿಕರು ಆಗಮಿಸಿ ಸಲಹೆ ಸೂಚನೆಗಳನ್ನು ನೀಡಿ ತುಲಾ ಸಂಕ್ರಮಣ ಜಾತ್ರೆಯನ್ನು ಯಶಸ್ವಿಯಾಗಲು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿಗಳು ಕೋರಿದ್ದಾರೆ.
ಮಡಿಕೇರಿ NEWS DESK ಸೆ.12 : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಸೆ.14ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಗುಡ್ಡೆಹೊಸೂರು ಸಮುದಾಯ ಭವನದಲ್ಲಿ ಕುಶಾಲನಗರ ತಾಲೂಕಿನ ಐವರಿಗೆ ನೇಗಿಲಯೋಗಿ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ತೋಟಗಾರಿಕೆ ವಿಭಾಗದಿಂದ ಅರಿಶಿನಗುಪ್ಪೆ ಗ್ರಾಮದ ಶುಂಠಿ ಹಾಗೂ ಬೆಣ್ಣೆಹಣ್ಣು ಬೆಳೆಗಾರ ಎಂ.ಟಿ. ಬೇಬಿ, ಹೈನುಗಾರಿಕೆ ವಿಭಾಗದಿಂದ ಗುಡ್ಡೆಹೊಸೂರು ಗ್ರಾಮದ ಸಾಗರ್, ಸಮಗ್ರ ಕೃಷಿಕ ವಿಭಾಗದಿಂದ ನಾಕೂರು ಶಿರಂಗಾಲ ಗ್ರಾಮದ ಕೃಷಿಕ ಪಿ.ಎಂ. ಬಿಜು, ಮಹಿಳಾ ಕೃಷಿಕರು ವಿಭಾಗದಿಂದ ಗುಡ್ಡೆಹೊಸೂರಿನ ಕೊರವಂಡ ವಸಂತಿ ಪೊನ್ನಪ್ಪ, ಯುವ ಕೃಷಿಕ ವಿಭಾಗದಿಂದ ಅತ್ತೂರು ಗ್ರಾಮದ ಸಜಿತ್ ಅವರಿಗೆ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ವಿನ್ಸೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಂಬಿಬಾಣೆಯ ಕಾಫಿ ಬೆಳೆಗಾರ ಟಿ.ಕೆ.ಸಾಯಿಕುಮಾರ್ ಅವರು ತಮ್ಮ ತಂದೆ ದಿ. ಟಿ.ಕೆ. ಕುಮಾರನ್ ಹಾಗೂ ತಾಯಿ ಕೆ.ಎನ್. ಭಾರತಿ ಅವರ ನೆನಪಿಗಾಗಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಲ್ಲಿ ಅತ್ಯುತ್ತಮ ಕೃಷಿಕರಿಗಾಗಿ…
ಮಡಿಕೇರಿ NEWS DESK ಸೆ.12 : ರಾಜ್ಯದ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ಏರ್ಪಡಿಸುತ್ತಿದ್ದು, ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಪಾಜೆಯಿಂದ ಶಿರಂಗಾಲ ಬಳಿಯ ಗಡಿ ಪ್ರದೇಶದವರೆಗೆ ಮಾನವ ಸರಪಳಿ ಏರ್ಪಡಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಮಾನವ ಸರಪಳಿ ರಚಿಸುವ ಸಂಬಂಧ ಶಾಲಾ-ಕಾಲೇಜಿನ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಎರಡನೇ ಸುತ್ತಿನ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸೆ.15 ರಂದು ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಮಾನವ ಸರಪಳಿ ಆಯೋಜಿಸಬೇಕಿದೆ. ಆ ನಿಟ್ಟಿನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸ್ವಯಂ ಪ್ರೇರಣೆಯಿಂದ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಕೋರಿದರು. ಸರ್ಕಾರವು ಬೀದರ್ ಜಿಲ್ಲೆಯ ಬಸವ ಕಲ್ಯಾಣದಿಂದ ಚಾಮರಾಜನಗರದವರೆಗೆ…






