ಮಡಿಕೇರಿ NEWS DESK ಸೆ.12 : ವಿವಿಧ ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರನ್ನು ಗುರುತಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲು ಸಂಘಟನೆಗಳಲ್ಲಿ ಹೆಸರು ನೋಂದಾಯಿಸಿಕೊಂಡಿರುವ ಸದಸ್ಯರ ದತ್ತಾಂಶವನ್ನು ಪಡೆಯಲು ಸಮಾಲೋಚನಾ ಸಭೆ ನಡೆಯಿತು. ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ, ಹಿರಿಯ ಕಾರ್ಮಿಕ ನಿರೀಕ್ಷಕರು, ಮಡಿಕೇರಿ ವೃತ್ತ, ಮಡಿಕೇರಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಯತ್ನಟ್ಟಿ ಅವರು 23 ಅಸಂಘಟಿತ ವರ್ಗಗಳಾದ “ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‌ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೊಟೋಗ್ರಾಪರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ ಟೆಂಟ್/ ಪೆಂಡಾಲ್‌ಗಳ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು ಹಾಗೂ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರು(ಮೆಕ್ಯಾನಿಕ್…
ಲೇಖಕ: admin
ಮಡಿಕೇರಿ NEWS DESK ಸೆ.12 : ಪ್ರಜಾಪ್ರಭುತ್ವ ಬಲಪಡಿಸಲು ಸಾಕ್ಷರತೆ ಒಂದು ಪ್ರಮುಖ ಸಾಧನವಾಗಿದೆ ಎಂದು ಕೂಡಿಗೆಯ ಪ್ರಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಎಂ.ಚಂದ್ರಕಾಂತ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದ ಜೂನಿಯರ್ ಕಾಲೇಜಿನ ಆವರಣದಲ್ಲಿ ಗುರುವಾರ ನಡೆದ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಅಂತರಾಷ್ಟ್ರೀಯ ಸಾಕ್ಷರತೆ ದಿನಾಚರಣೆ ಮತ್ತು ಸಪ್ತಾಹವನ್ನು ಜಿಲ್ಲಾ ವಯಸ್ಕರ ಶಿಕ್ಷಣ ಸಹಯೋಗದಲ್ಲಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಗುರುವಾರ ಆಚರಿಸಲಾಯಿತು. ಸಾಕ್ಷರತೆಯ ಮಹತ್ವ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇರಬೇಕು. ಆದ್ದರಿಂದ ಪ್ರತೀ ವರ್ಷ ವಿಶ್ವ ಸಾಕ್ಷರತಾ ದಿನಾಚರಣೆ ಆಚರಿಸಲಾಗುತ್ತದೆ ಎಂದರು. ‘ಆಲೋಚನೆಗಳು ಮತ್ತು ಭಾವನೆಗಳನ್ನು ಓದುವ ಮತ್ತು ಬರವಣಿಗೆ ಮೂಲಕ ತಿಳಿಸಲು ಸಾಕ್ಷರತೆ ಅತ್ಯವಶ್ಯಕವಾಗಿದೆ. ಸಾಮಾಜಿಕ ಮತ್ತು ಮಾನವೀಕ ಅಭಿವೃದ್ಧಿಗೆ ಸಾಕ್ಷರತೆ ಒಂದು ಶಕ್ತಿಯಾಗಿದೆ ಎಂದು ಎಂ.ಚಂದ್ರಕಾಂತ್ಅವರು ಅಭಿಪ್ರಾಯಪಟ್ಟರು. ಪ್ರತಿಯೊಬ್ಬರೂ ಸಾಮಾಜಿಕ, ಆರ್ಥಿಕ ಹಾಗೂ ವೈಯಕ್ತಿಕವಾಗಿ ಅರಿವು ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ ಎಂದು ಎಂ.ಚಂದ್ರಕಾಂತ್ ಅವರು ಹೇಳಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಡಿವೈಎಸ್‌ಪಿ…
ಮಡಿಕೇರಿ NEWS DESK ಸೆ.12 : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಗಣೇಶ ಮೂರ್ತಿಯ ಮೆರವಣಿಗೆಯ ಸಂದರ್ಭ ನಡೆದ ಅಹಿತಕರ ಘಟನೆಗಳನ್ನು ಖಂಡಿಸಿ ಹಿಂದೂ ಸಂಘಟನೆಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದವು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಗಲಭೆ ನಡೆಸಿ ಮೆರವಣಿಗೆಗೆ ತಡೆಯೊಡ್ಡಿದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಕುಕ್ಕೇರ ಅಜಿತ್ ಮಾತನಾಡಿ ಗಣೇಶೋತ್ಸವ ಆಚರಣೆ ಹಿಂದೂ ರಾಷ್ಟç ಭಾರತದ ರಾಷ್ಟ್ರೀಯ ಹಬ್ಬವಾಗಿದೆ. ಇದನ್ನು ತಡೆಯಲು ಯತ್ನಿಸಿದರೆ ಸಹಿಸಲು ಸಾಧ್ಯವಿಲ್ಲವೆಂದರು. ನಾಗಮAಗಲದಲ್ಲಿ ನಡೆದ ಅಹಿತಕರ ಘಟನೆ ಇಡೀ ಹಿಂದೂ ಸಮಾಜವನ್ನು ಜಾಗೃತಗೊಳಿಸಿದೆ. ಮುಂದಿನ ದಿನಗಳಲ್ಲಿ ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಬಹುದು. ಏನೇ ಅನಾಹುತ ಸಂಭವಿಸಿದರೂ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸಮಾಜದಲ್ಲಿ ಅಶಾಂತಿ ಮೂಡಿಸುವ ದುಷ್ಕರ್ಮಿಗಳಿಗೆ ರಾಜ್ಯ ಸರ್ಕಾರ ಓಟ್…
ಮಡಿಕೇರಿ ಸೆ.12 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಬೇಂಗ್‍ನಾಡ್ ಕೊಡವ ಸಮಾಜದ ಸಹಯೋಗದಲ್ಲಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಗಳ 157ನೇ ಜನ್ಮದಿನಾಚರಣೆಯ ಪ್ರಯುಕ್ತ ಸೆ.28 ರಂದು ಚೇರಂಬಾಣೆಯಲ್ಲಿ “ಕೊಡವ ಸಾಹಿತ್ಯ ನಾಳ್” ಕಾರ್ಯಕ್ರಮ ನಡೆಯಲಿದೆ. ಚೇರಂಬಾಣೆಯ ಕೊಡವ ಸಮಾಜದಲ್ಲಿ ಶಾಸಕರುಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ, ವಿಧಾನ್ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಸಾಹಿತ್ಯ ನಾಳ್, ಕೊಡವ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ವಹಿಸಲಿದ್ದಾರೆ. ಬೇಂಗ್‍ನಾಡ್ ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್ ಗಣಪತಿ ಉಸ್ತುವಾರಿ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬೇಂಗ್‍ನಾಡ್ ಭಾಗದ ಕಾರುಗುಂದ, ಐವತ್ತೋಕ್ಲು, ಕಡಿಯತ್ತೂರು, ಬೇಂಗೂರು, ಬಾಡಗ, ಕೊಳಗದಾಳು, ಕೋಪಟ್ಟಿ, ಚೆಟ್ಟಿಮಾನಿ ಹಾಗೂ ಬೆಟ್ಟತ್ತೂರು ಗ್ರಾಮಸ್ಥರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮವು ಬೆಳಗ್ಗೆ 9 ಗಂಟೆಗೆ ಚೇರಂಬಾಣೆ ಪಟ್ಟಣದಲ್ಲಿ ಅದ್ಧೂರಿ ಮೆರವಣಿಗೆಯೊಂದಿಗೆ ಶುಭಾರಂಭಗೊಳ್ಳಲಿದ್ದು, ಕೊಂಬ್-ಕೊಟ್ಟ್, ದುಡಿಕೊಟ್ಟ್ ಪಾಟ್, ತಳಿಯತಕ್ಕಿ ಬೊಳ್‍ಚ, ವೀರ ಕೊಡವರ ಸಾಂಪ್ರದಾಯಿಕ ಉಡುಗೆಯೊಂದಿಗೆ ಬೀಕಚಂಡ…
ಸಿದ್ದಾಪುರ NEWS DESK ಸೆ.12 : : ಕರಡಿಗೋಡು ಆರೆಂಜ್ ಕೌಂಟಿ ಇವಾಲ್ವ್ ಬ್ಯಾಕ್ ರೆಸಾರ್ಟ್ ಸಂಸ್ಥೆ ವತಿಯಿಂದ ನೂತನ ತಂಗುದಾಣವನ್ನು ಕೊಡುಗೆಯಾಗಿ ನಿರ್ಮಿಸಿಕೊಡಲಾಯಿತು. ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ತೂಬನಕೊಲ್ಲಿ ಬಳಿ ಅಂದಾಜು 5 ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾದ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ತಂಗುದಾಣವನ್ನು ಮಾಲ್ದಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ಹಾಗೂ ಸಿದ್ದಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಳನಿಸ್ವಾಮಿ ಸೇರಿದಂತೆ ಮತ್ತಿತರರು ಸೇರಿ ಉದ್ಘಾಟನೆ ಮಾಡಿದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಕೆ.ಲೋಕೇಶ್ ಮಾತನಾಡಿ ಹಲವು ವರ್ಷಗಳ ಹಿಂದೆ ಕರಡಿಗೋಡು ಗ್ರಾಮದಲ್ಲಿ ಆರೆಂಜ್ ಕೌಂಟಿ ಎಂಬ ರೆಸಾರ್ಟ್ ಸಂಸ್ಥೆಯನ್ನು ಪ್ರಾರಂಭಿಸಿ ಸಂಸ್ಥೆ ಮೂಲಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹಲವು ಯೋಜನೆಗಳನ್ನು ರೂಪಿಸಿ ಗ್ರಾಮ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಕರಡಿಗೋಡು ಸರ್ಕಾರಿ ಶಾಲೆ ದತ್ತು ಸ್ವೀಕಾರ, ಗ್ರಾಮ ವ್ಯಾಪ್ತಿಯಲ್ಲಿ ಸೋಲಾರ್ ದೀಪ ಅಳವಡಿಕೆ, ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಹೈಮಾಸ್ಟ್ ಲೈಟ್ ಅಳವಡಿಕೆ, ಶುಚಿತ್ವಕ್ಕೆ ಆದ್ಯತೆ, ಶಾಲಾ ಮಕ್ಕಳ ಶಿಕ್ಷಣಕ್ಕೆ ನೆರವು, ಸಿದ್ದಾಪುರ ಎಸ್ಎನ್‌ಡಿಪಿ…
ಮಡಿಕೇರಿ ಸೆ.12 NEWS DESK : ಬ್ಯಾಂಕ್ ವ್ಯವಸ್ಥಾಪಕರೊಬ್ಬರು ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಬಳಿಯ ಕಕ್ಕಬ್ಬೆಯಲ್ಲಿ ಬುಧವಾರ ಸಂಜೆ ನಡೆದಿದೆ. ರಾಷ್ಟ್ರೀಕೃತ ಬ್ಯಾಂಕ್ ವೊಂದರ ಕಕ್ಕಬ್ಬೆ ಶಾಖೆಯ ವ್ಯವಸ್ಥಾಪಕ ವಿಜು(46) ಎಂಬುವವರೇ ಕಕ್ಕಬ್ಬೆ ಬ್ಯಾಂಕ್ ನಲ್ಲಿ ನೇಣಿಗೆ ಶರಣಾದ ವ್ಯಕ್ತಿ. ಇವರು ಮೂಲತ: ಕೇರಳದ ಆಲಪುಯ ಆಯಿಕ್ಕಾಡ್ ಚಿಂಗೋಲಿ ಗ್ರಾಮದ ನಿವಾಸಿಯಾಗಿದ್ದು, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಪತ್ನಿ ಇದೇ ರಾಷ್ಟ್ರೀಕೃತ ಬ್ಯಾಂಕ್ ನ ಬೆಟ್ಟಗೇರಿ ಶಾಖೆಯ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಸೆ.13 NEWS DESK : ಮೂರ್ನಾಡು ಪ್ರೌಢಶಾಲಾ ಮೈದಾನದಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಚೆಟ್ಟಳ್ಳಿ ಪ್ರೌಢಶಾಲಾ ಬಾಲಕಿಯರ ತಂಡ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಮೂರ್ನಾಡುವಿನ ಮಾರುತಿ ವಿದ್ಯಾಸಂಸ್ಥೆಯ ಬಾಲಕಿಯರ ತಂಡದೊಂದಿಗೆ 1-0 ಗೋಲುಗಳ ಅಂತರದಿಂದ ಗೆಲುವು ಸಾಧಿಸಿದೆ. ಈ ಸಂದರ್ಭ ಚೆಟ್ಟಳ್ಳಿ ಪ್ರೌಢಶಾಲೆಯ ದೈಹಿಕ ಶಿಕ್ಷಕಿ ಗೀತಾ ಇದ್ದರು.
ಮಡಿಕೇರಿ ಸೆ.12 NEWS DESK : ತಾಳತ್ತಮನೆಯಲ್ಲಿ ಸೆ.13 ರಂದು ಉಚಿತ ರೇಬಿಸ್ (ಹುಚ್ಚು ನಾಯಿ) ಲಸಿಕಾ ಶಿಬಿರ ನಡೆಯಲಿದೆ. ಜಿಲ್ಲಾ ಪಂಚಾಯಿತಿ, ಕೊಡಗು ಪಶು ಪಲನಾ ಹಾಗೂ ಪಶು ವೈದ್ಯಕೀಯ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ಮಡಿಕೇರಿ ತಾಲೂಕು ಯುವ ಒಕ್ಕೂಟ, ತಾಳತ್ತಮನೆ ನೇತಾಜಿ ಯುವತಿ ಮಂಡಳಿ ಹಾಗೂ ನೇತಾಜಿ ಯುವಕ ಮಂಡಲದ ಸಂಯುಕ್ತಶ್ರಾಯದಲ್ಲಿ ಬೆಳಿಗ್ಗೆ 9.30 ರಿಂದ 11.30 ಗಂಟೆಯವರೆಗೆ ತಾಳತ್ತಮನೆ ಆಟದ ಮೈದಾನದಲ್ಲಿ ಶಿಬಿರ ನಡೆಯಲಿದ್ದು, ತಾಳತ್ತಮನೆಯ ಹಾಗೂ ಸುತ್ತಮುತ್ತಲಿನ ಜನರು ತಮ್ಮ ಸಾಕು ಪ್ರಾಣಿಗಳನ್ನು ತರುವಂತೆ ನೇತಾಜಿ ಯುವಕ ಮಂಡಲದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮನವಿ ಮಾಡಿದ್ದಾರೆ.
ಕೂಡಿಗೆ ಸೆ.12 NEWS DESK : ಮೈಸೂರು ರಾಜ್ಯವು ಕರ್ನಾಟಕ ರಾಜ್ಯ ಎಂದು ನಾಮಕರಣಗೊಂಡು 50 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ: 50 ರ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು ಕೊಡಗು ಜಿಲ್ಲೆಯಲ್ಲಿ ಐದು ದಿನಗಳ ಕಾಲ ಸಂಚರಿಸಿ ಕುಶಾಲನಗರ ತಾಲ್ಲೂಕಿನಿಂದ ನೆರೆಯ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿಗೆ ತೆರಳಿತು. ಕನ್ನಡ ಜ್ಯೋತಿ ರಥಕ್ಕೆ ಕೊಡಗಿನ ಗಡಿಭಾಗವಾದ ಶಿರಂಗಾಲ ಗೇಟ್ ಬಳಿ ಹಾಸನ ಜಿಲ್ಲೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪರವಾಗಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಮತ್ತು ಶಿರಂಗಾಲ ಗ್ರಾಮಸ್ಥರು ಸಾಂಪ್ರದಾಯಿಕವಾಗಿ ಬೀಳ್ಕೊಟ್ಟರು. ಕೂಡಿಗೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ :: ಇದಕ್ಕೂ ಮುನ್ನ ಕೂಡಿಗೆ ವೃತ್ತದ ಹಾಲಿನ ಡೇರಿ ಬಳಿ ಕನ್ನಡ ಜ್ಯೋತಿ ರಥವನ್ನು ಸ್ವಾಗತಿಸಿ ಮುಂದಿನ ಗ್ರಾಮಗಳಿಗೆ ಬೀಳ್ಕೊಡಲಾಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆ, ಕುಶಾಲನಗರ ಲಯನ್ಸ್ ಕ್ಲಬ್…
ಮಡಿಕೇರಿ ಸೆ.12 NEWS DESK : ಕರ್ನಾಟಕ ಮತ್ತು ಬಾಗಲಕೋಟೆ ಜಿಲ್ಲಾ ಕಿವುಡರ ಸಂಘದಿಂದ ಸೆ.27 ರಿಂದ ಬಾಗಲಕೋಟೆಯಲ್ಲಿ 14ನೇ ಕರ್ನಾಟಕ ರಾಜ್ಯ ಕಿವುಡರ ಕ್ರೀಡಾಕೂಟ ನಡೆಯಲಿದೆ. ಬಾಗಲಕೋಟೆಯ ಕಾಲೇಜು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ಸುಮಾರು 20 ಜಿಲ್ಲೆಗಳಿಂದ ಸ್ಪರ್ಧಿಗಳು ಭಾಗವಹಿಸಲಿದ್ದು, ಕೊಡಗು ಜಿಲೆಯಿಂದಲೂ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಇಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ಗ್ವಾಲಿಯರ್ನಲ್ಲಿ ನಡೆಯಲಿರುವ 26ನೇ ಕಿವುಡರ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.






