ಲೇಖಕ: admin

ಮಡಿಕೇರಿ ಸೆ.11 NEWS DESK : ಕತ್ತಲೆಕಾಡು, ಜೇನುಕೊಲ್ಲಿ ಗ್ರಾಮದ ಶ್ರೀ ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 18ನೇ ವರ್ಷದ ಗೌರಿ-ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಭಾರತ್‌ ಮಾತಾ ಪೂಜೆ ಹಾಗೂ ಧ್ವಜಾರೋಹಣ ನೆರವೇರಿಸಿ ಗಣೇಶ ಮೂರ್ತಿಯನ್ನು ಟ್ರಸ್ಟ್‌ ಆವರಣದಲ್ಲಿ ಪ್ರತಿಷ್ಠಾಪಿಸಲಾಯಿತು. ಸಂಜೆ ಸ್ಥಳೀಯ ವಿದ್ಯಾರ್ಥಿಗಳು, ಸ್ಥಳೀಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ನಂತರ ಸಾಮೂಹಿಕ ಸತ್ಯನಾರಾಯಣ ಪೂಜೆ ಜರುಗಿತು. ಮಡಿಕೇರಿಯ ರಾಮಾಂಜನೇಯ ಭಜನಾ ಮಂಡಳಿ ಸದಸ್ಯರು ಭಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಂತರ ಮಹಾಪೂಜೆ ಬಳಿಕ ವಿದ್ಯುತ್‌ ದೀಪಾಲಂಕೃತ ಮಂಟಪದಲ್ಲಿ ಗ್ರಾಮದ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿ ಬಳಿಕ ಕ್ಲೋಸ್‌ಬರ್ನ್‌ ಕೆರೆಯಲ್ಲಿ ವಿಸರ್ಜಿಸಲಾಯಿತು. ಬಿಡುವು ನೀಡದೆ ಸುರಿದ ಮಳೆಯ ನಡುವೆಯೂ ಸಾರ್ವಜನಿಕರು ಅತ್ಯುತ್ಸಾಹದಿಂದ ಗಣೇಶನ ಮೆರವಣಿಗೆಯಲ್ಲಿ ಪಾಲ್ಗೊಂಡರು. ಅಬ್ಬರದ ಸಂಗೀತಕ್ಕೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಅರ್ಚಕ ಯೋಗೇಶ್‌ ಭಟ್‌ ಪೂಜಾ ಕಾರ್ಯ ನಡೆಸಿಕೊಟ್ಟರು. ಟ್ರಸ್ಟ್ ಅಧ್ಯಕ್ಷ ಹೊನ್ನಪ್ಪ, ಉಪಾಧ್ಯಕ್ಷ ಚಂದ್ರಶೇಖರ ರೈ, ಕಾರ್ಯದರ್ಶಿ ಬ್ರಿಜೇಶ್ ಖಜಾಂಚಿ ನವೀನ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ಅಶೋಕ, ಖಜಾಂಚಿ…

Read More

ಮಡಿಕೇರಿ ಸೆ.11 NEWS DESK : ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಆಕ್ಸಿಜನ್ ಕಾನ್ಸಂಟ್ರೇಟರ್ ಅನ್ನು ಕೊಡುಗೆಯಾಗಿ ನೀಡಿದರು. ‎ ಕುಟ್ಟ ನಿವಾಸಿ ರಾಘವನ್  ಈ ಬಗ್ಗೆ ಶಾಸಕ ಪೊನ್ನಣ್ಣ ಅವರಿಗೆ ಹೇಳಿಕೊಂಡಿದ್ದು, ತಕ್ಷಣವೇ ಸ್ಪಂದಿಸಿದ ಶಾಸಕರು ಅಗತ್ಯವಿರುವ ಆಕ್ಸಿಜನ್ ಕಾನ್ಸಂಟ್ರೇಟರನ್ನು ವಿತರಿಸಿದರು. ಈ ಸಂದರ್ಭ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಪ್ರಮುಖರಾದ ಕಾಳಿಮಾಡ ಪ್ರಶಾಂತ್, ಕಲಿಯಂಡ ಸಂಪನ್ ಅಯ್ಯಪ್ಪ, ನಿಶ್ಚಲ್ ದಂಬೆಕೋಡಿ, ವಿನಿಲ್ ಸೋಮಣ್ಣ ಮತ್ತಿತರು ಹಾಜರಿದ್ದರು.

Read More

ನಾಪೋಕ್ಲು ಸೆ.11 NEWS DESK : ಭಾಗಮಂಡಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಚೇರಂಬಾಣೆ ಯ ಕೊಟ್ಟೂರು ಶ್ರೀ ರಾಜ ರಾಜೇಶ್ವರಿ ವಿದ್ಯಾರ್ಥಿಗಳ ಸಾಧನೆ ಮಾಡಿದ್ದಾರೆ. ಬಾಲಕರ ವಿಭಾಗದ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕೆ ಆಯ್ಕೆ ಯಾಗಿದ್ದಾರೆ. ಬಾಲಕ ಮತ್ತು ಬಾಲಕಿಯರ ವಿಭಾಗದ ಥ್ರೋ ಬಾಲ್ ಸ್ಪರ್ಧೆಯಲ್ಲಿ ದ್ವಿತೀಯ, ಶಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಬಾಲಕ, ಬಾಲಕಿಯರು ಪ್ರಥಮ, ಎತ್ತರ ಜಿಗಿತ ಬಾಲಕರ ವಿಭಾಗ ಪ್ರಥಮ, ಬಾರದ ಗುಂಡು ಎಸೆತ ಬಾಲಕರ ಹಾಗೂ ಬಾಲಕಿಯರು ದ್ವಿತೀಯ, ಜಾವಲಿನ್ ಬಾಲಕಿಯರ ಎಸೆತದಲ್ಲಿ ದ್ವಿತೀಯ, 100×4 ಮೀಟರ್ ರಿಲೇ ಓಟದಲ್ಲಿ ಪ್ರಥಮ, 4×400 ಮೀಟರ್ ರೀಲೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. 100 ಮೀಟರ್ ಓಟ ಸ್ಪರ್ಧೆಯಲ್ಲಿ ಬಾಲಕರು ಪ್ರಥಮ, 200 ಮೀಟರ್ ಓಟದಲ್ಲಿ ಬಾಲಕರು ಪ್ರಥಮ, 1500 ಮೀಟರ್ ಓಟದಲ್ಲಿ ಬಾಲಕರು ತೃತೀಯ, ತಟ್ಟೆ ಎಸೆತದಲ್ಲಿ ಬಾಲಕರು ಹಾಗೂ ಬಾಲಕಿಯರು ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ದೈಹಿಕ…

Read More

ನಾಪೋಕ್ಲು ಸೆ.11 NEWS DESK : ಕೊಡಗು ಬ್ರಹ್ಮಗಿರಿ ಸಹೋದಯದ ಕ್ಲಸ್ಟರ್ ವತಿಯಿಂದ ಅಂಕುರ್ ಪಬ್ಲಿಕ್ ಶಾಲೆಯ ವತಿಯಿಂದ ಪಾಲಿಬೆಟ್ಟ ಚೆಶೈರ್ ಹೋಂ ಅಧ್ಯಕ್ಷೆ ಗೀತ ಚಂಗಪ್ಪ ಅವರನ್ನು ಸನ್ಮಾನಿಸಲಾಯಿತು. ಶಾಲೆಯ ವತಿಯಿಂದ ನಾಪೋಕ್ಲು ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಗೀತ ಚಂಗಪ್ಪ ಅವರ ಸಮಾಜ ಸೇವೆಯನ್ನು ಪರಿಗಣಿಸಿ ಶಾಲೆಯ ಶಿಕ್ಷಕರು, ಗಣ್ಯರು ಸನ್ಮಾನಿಸಿ ಗೌರವಿಸಿದರು. ನಾಪೋಕ್ಲು ಅಂಕುರ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಕೇಟೋಳಿರ ರಾಜಚರ್ಮಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಕುರ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಹಾಗೂ ಬ್ರಹ್ಮಗಿರಿ ಸಹೋದಯದ ಖಜಾಂಚಿ ರತ್ನ ಚರ್ಮಣ, ಅರಮೆರಿ ಎಸ್ಎಂಎಸ್ ಶಾಲೆಯ ಪ್ರಾಂಶುಪಾಲ ಕುಸುಮ್ ಟಿಟೋ, ಬ್ರಹ್ಮಗಿರಿ ಸಹೋದಯದ ಕಾರ್ಯದರ್ಶಿ , ಮಡಿಕೇರಿ ಎ.ಎಲ್.ಜಿ ಶಾಲೆಯ ಪ್ರಾಂಶುಪಾಲ ಜಾಯ್ಸಿ , ಮಡಿಕೇರಿ ಕೊಡಗು ವಿದ್ಯಾಲಯ ಶಾಲೆಯ ಪ್ರಾಂಶುಪಾಲೆ ಸುಮಿತ್ರ, ಪಾಲಿಬೆಟ್ಟ ಜ್ಞಾನಗಂಗಾ ಶಾಲೆಯ ಪ್ರಾಂಶುಪಾಲರಾದ ಸುಲೋಚನ, ಗೋಣಿಕೊಪ್ಪ ನ್ಯಾಷನಲ್ ಅಕಾಡೆಮಿ ಶಾಲೆಯ ಪ್ರಾಂಶುಪಾಲರಾದ ಪುಷ್ಪ, ಅಂಕುರ್ ಪಬ್ಲಿಕ್ ಶಾಲೆಯ ನಿರ್ದೆಶಕಿ…

Read More

ಮಡಿಕೇರಿ ಸೆ.11 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕಸಾಪ ಮತ್ತು ಮೂರ್ನಾಡು ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಸೆ.14 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ವಿಷಯ ಸಂಕಲನ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಮೂರ್ನಾಡು ಪದವಿ ಪೂರ್ವ ಕಾಲೇಜಿನ ಕಾವೇರಿ ಸಭಾಂಗಣದಲ್ಲಿ ಪೂರ್ವಾಹ್ನ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕಾಲೇಜಿನ ಅಧ್ಯಕ್ಷ ಡಾ.ಚೌರೀರ ಜಗತ್ ತಿಮ್ಮಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ನಿಯೋಜಿತ ಹೋಬಳಿ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಪುಸ್ತಕ ಬಿಡುಗಡೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ.ದೇವಕ್ಕಿ, ಸಾಹಿತಿ ಗೌರಮ್ಮ ಮಾದಮಯ್ಯ ವಿಷಯ ಸಂಕಲನ ಲೇಖಕರು, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷ ಪಿ.ಅನೂಪ್ ಮಾದಪ್ಪ “ಸಂಚಾರ ನಿಯಮ ಹಾಗೂ ಕಾನೂನು” ವಿಷಯದ ಕುರಿತು ಉಪನ್ಯಾಸ ನೀಡಲಿದ್ದು, ಕೊಡಗು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ…

Read More

ಮಡಿಕೇರಿ ಸೆ.11 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ರಥಕ್ಕೆ ಭವ್ಯ ಸ್ವಾಗತ ಕೋರಲಾಯಿತು. ಮೂರ್ನಾಡು ಪಂಚಾಯಿತಿ ಸದಸ್ಯ  ಮುಂಡಾಂಡ ವಿಜು ಹಾಗೂ ಕಸಪಾ ಮೂರ್ನಾಡು ಘಟಕದ ಪದಾಧಿಕಾರಿಗಳು  ಕನ್ನಡ ರಥದ ಭುವನೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭ ಕಸಪಾ ಮೂರ್ನಾಡು ಘಟಕದ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್, ಸಂಘಟನೆ ಕಾರ್ಯದರ್ಶಿ ಜಾಶೀರ್ , ಸದಸ್ಯ ಕೊಳುಮಾಡಾಂಡ ಮಣಿ ಚೆಂಗಪ್ಪ ಹಾಗೂ ಇತರ ಸದಸ್ಯರು ಹಾಜರಿದ್ದರು.

Read More

ವಿರಾಜಪೇಟೆ ಸೆ.11 NEWS DESK : ವಿದ್ಯಾರ್ಥಿಗಳು ಶಿಕ್ಷಣದ ಹಂತದಿಂದಲೇ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿತಿಮತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಾರ್ಲ್ಸ್ ಡಿಸೋಜಾ ಕರೆ ನೀಡಿದರು. ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಯಾವುದೇ ಕೆಲಸವನ್ನು ಸ್ವ ಇಚ್ಛೆಯಿಂದ ಮಾಡಬೇಕು. ಆ ನಿಟ್ಟಿನಲ್ಲಿ ಎನ್.ಎಸ್.ಎಸ್ ಮತ್ತು ರೆಡ್ ಕ್ರಾಸ್ ಘಟಕಗಳ ಸಾಮಾಜಿಕ ಕಾರ್ಯಗಳು ಪ್ರಮುಖವಾಗಿದೆ ಎಂದು ಅಭಿಪ್ರಾಯಪಟ್ಟರು. ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು  ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಮಾತನಾಡಿ, ವಿದ್ಯಾರ್ಥಿಗಳು ಈ ಹಂತದಿಂದಲೇ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಪರರ ಸೇವೆಯಲ್ಲಿ ತೊಡಗಿಸಿಕೊಂಡು ನಿಸ್ವಾರ್ಥ ಸೇವೆಗೆ ಬದ್ಧರಾಗಿರಬೇಕು. ಪರಸ್ಪರ ಸಹಕಾರ, ಪ್ರೀತಿ, ವಿಶ್ವಾಸವು ಉತ್ತಮ ವ್ಯಕ್ತಿಯನ್ನಾಗಿ ಮಾಡುತ್ತದೆ. ಮಾನವೀಯ ಆದರ್ಶಗಳನ್ನು ಬೆಳೆಸಿ ಸಮಾಜ ಹಾಗೂ ರಾಷ್ಟ್ರಕ್ಕೆ ಕೊಡುಗೆಯನ್ನು ನೀಡಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…

Read More

ಬೆಂಗಳೂರು ಸೆ.11 NEWS DESK : ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ‌ ಹುತತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ. ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು. ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ‌ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ಎಂದರೆ ನಾವು ನಮ್ಮ‌ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ ಎಂದರು. ರಾಜ್ಯದಲ್ಲಿ ಆನೆ, ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತೋಷದ ಸಂಗತಿ. ಆದರೆ ಪ್ರಾಣಿ-ಮನುಷ್ಯ ಸಂಘರ್ಷ ತಪ್ಪಿಸಿ ಮಾನವ, ಪ್ರಾಣಿ ಸಂಪತ್ತನ್ನು ಕಾಪಾಡುವ ದಿಕ್ಕಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳು ಆಗಬೇಕಿದೆ. ಇದಕ್ಕಾಗಿ ಲಭ್ಯ ಇರುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು.…

Read More

ನವದೆಹಲಿ NEWS DESK ಸೆ.11 :  ಸೈಬರ್‌ ಭದ್ರತೆಯು ದೇಶದ ಆಂತರಿಕ, ರಾಷ್ಟ್ರೀಯ ಭದ್ರತೆಯ ಪ್ರಶ್ನೆಯಾಗಿದೆ. ಸೈಬರ್‌ ಅಪರಾಧಗಳಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರವು ಕಾರ್ಯನಿರತವಾಗಿದ್ದು, ಸೈಬರ್‌ ಭದ್ರತೆಗಾಗಿ ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಭಾರತದಲ್ಲಿನ ಸೈಬರ್‌ ಅಪರಾಧಗಳನ್ನು ತಡೆಯಲು ಮುಂದಿನ ಐದು ವರ್ಷಗಳಲ್ಲಿ 5 ಸಾವಿರ ಸೈಬರ್‌ ಕಮಾಂಡೊಗಳಿಗೆ ತರಬೇತಿ ನೀಡುವ ಬಗ್ಗೆ ಸರ್ಕಾರ ಯೋಜಿಸಿದೆ. ಜಗತ್ತಿನ ಶೇ 47ರಷ್ಟು ಡಿಜಿಟಲ್‌ ವ್ಯವಹಾರಗಳು ಭಾರತದಲ್ಲೇ ನಡೆಯುತ್ತವೆ. ಹೀಗಾಗಿ ಸೈಬರ್‌ ಭದ್ರತೆ ಅತಿ ಅಗತ್ಯವಾದುದು’ ಎಂದು ಪುನರುಚ್ಚರಿಸಿದರು. ಕಾರ್ಯಕ್ರಮದಲ್ಲಿ ಶಾ, ದೇಶದಲ್ಲಿ ಸೈಬರ್‌ ಅಪರಾಧ ತಡೆಗೆ ಹೊಸದಾಗಿ ನಾಲ್ಕು ಪ್ಲಾಟ್‌ಫಾರ್ಮ್‌ಗಳನ್ನು ಉದ್ಘಾಟಿಸಿದರು. ಕೇಂದ್ರ ಗೃಹ ಸಚಿವಾಲಯವು ಸೈಬರ್‌ ಅಪರಾಧ ಸಮನ್ವಯ ಕೇಂದ್ರವನ್ನು 2018ರಲ್ಲಿ ಸ್ಥಾಪಿಸಿದೆ. ದೇಶದಲ್ಲಿ ನಡೆಯುವ ಸೈಬರ್‌ ಅಪರಾಧಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರಮಟ್ಟದಲ್ಲಿ ಸಮನ್ವಯ ಸಾಧಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ.

Read More

ಸೋಮವಾರಪೇಟೆ NEWS DESK ಸೆ.11 : ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಆಡಳಿತ ಬಿಜೆಪಿ- ಜೆಡಿಎಸ್ ಮೈತ್ರಿ ಕೂಟದ ಪಾಲಾಗಿದೆ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿತ್ತು. ಬಿಜೆಪಿ, ಜೆಡಿಎಸ್ ಮೈತ್ರಿಕೂಟದ (ಸಾಮಾನ್ಯ ಮಹಿಳೆ)ಜೆಡಿಎಸ್‌ ನ ಜಯಂತಿ ಅಧ್ಯಕ್ಷರಾಗಿ ಹಾಗೂ (ಪರಿಶಿಷ್ಠ ಜಾತಿ ಮಹಿಳೆ)ಬಿಜೆಪಿಯ ಮೋಹಿನಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ವಾರ್ಡ್ ಸಂಖ್ಯೆ 10ರಲ್ಲಿ ಜೆಡಿಎಸ್ ನಿಂದ ಜಯಂತಿ  ಜಯಗಳಿಸಿದ್ದರೆ, ವಾರ್ಡ್ ಸಂಖ್ಯೆ 3ರಲ್ಲಿ ಬಿಜೆಪಿಯಿಂದ ಮೋಹಿನಿ ಗೆಲುವು ದಾಖಲಿಸಿದ್ದರು. ಕೇವಲ 3 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್ ತಟಸ್ಥವಾಗಿತ್ತು.

Read More