ಮಡಿಕೇರಿ ಅ.9 NEWS DESK : ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇದೇ ಅ.17 ರಂದು ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಆರಂಭದಲ್ಲಿ ಮಾತನಾಡಿದ ವಾಲ್ಮೀಕಿ ಸಮಾಜದ ಮುಖಂಡರಾದ ಅಶೋಕ್ ಅವರು ಕಳೆದ ಬಾರಿಯಂತೆ ಈ ಬಾರಿಯೂ ಸಹ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಕೋರಿದರು. ಕಳೆದ ಬಾರಿ ಗಾಂಧಿ ಮೈದಾನದಿಂದ ಕಾವೇರಿ ಕಲಾಕ್ಷೇತ್ರದವರೆಗೆ ವಾಲ್ಮೀಕಿ ಭಾವಚಿತ್ರದೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು, ಈ ಬಾರಿಯು ಮೆರವಣಿಗೆಗೆ ಅವಕಾಶ ಮಾಡಬೇಕು ಎಂದು ಕೋರಿದರು. ರೈತರು, ಪೌರಕಾರ್ಮಿಕರು, ಮತ್ತು ಮಾಜಿ ಸೈನಿಕರನ್ನು ಸನ್ಮಾನಿಸುವಂತಾಗಬೇಕು ಎಂದು ಅಶೋಕ್ ಸಲಹೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಅಕ್ಟೋಬರ್, 17 ರಂದು ನಾಡಿನ ಜೀವನನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಸಂಭವಿಸಲಿದೆ. ಹಾಗಾಗಿ ಮೆರವಣಿಗೆ ಇರುವುದಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ…
ಲೇಖಕ: admin
ಮಡಿಕೇರಿ NEWS DESK ಅ.8 : ಐತಿಹಾಸಿಕ ಹಿನ್ನೆಲೆಯ ಮಡಿಕೇರಿ ದಸರಾ ಜನೋತ್ಸವ ಮತ್ತು ದಕ್ಷಿಣ ಕೊಡಗಿನ ಗೋಣಿಕೊಪ್ಪಲು ದಸರಾ ಉತ್ಸವದಲ್ಲಿ ಕಾನೂನು ಸುವ್ಯವಸ್ಥೆಗಳನ್ನು ಕಾಪಾಡುವ ನಿಟ್ಟಿನಲ್ಲಿ 2 ಸಾವಿರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತದೆ ಎಂದು ಜಿಲ್ಲಾ ಪೊಲಿಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ದಸರಾ ಉತ್ಸವವನ್ನು ಶಾಂತಿಯುತವಾಗಿ ಆಚರಿಸುವ ಸಲುವಾಗಿ ಇಬ್ಬರು ಎಎಸ್‌ಪಿ, 7 ಡಿವೈಎಸ್‌ಪಿ, 27 ವೃತ್ತ ನಿರೀಕ್ಷಕರು, 80 ಪಿಎಸ್‌ಐ, 126 ಎಎಸ್‌ಐ, 975 ಪೊಲೀಸ್ ಸಿಬ್ಬಂದಿಗಳು, 360 ಗೃಹ ರಕ್ಷಕ ದಳದ ಸಿಬ್ಬಂದಿಗಳು ಸೇರಿದಂತೆ 16 ಡಿಎಆರ್, 8 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲು ಅಗತ್ಯ ಕ್ರಮಗಳನ್ನು ಈಗಾಗಲೆ ಕೈಗೊಳ್ಳಲಾಗಿದೆ ಎಂದರು. ::: 8 ‘ಜಂಬೋ’ ತಂಡಗಳ ನಿಯೋಜನೆ ::: ಮಡಿಕೇರಿ ದಸರಾ ಉತ್ಸವದ ಶೋಭಾಯಾತ್ರೆಯ ಸಂದರ್ಭ ಲಕ್ಷಾಂತರ ಮಂದಿ ನಗರಕ್ಕೆ ಆಗಮಿಸುತ್ತಾರೆ. ಈ ಹಂತದಲ್ಲಿ ಮಹಿಳೆೆಯರು ಮತ್ತು ಮಕ್ಕಳ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ, ಜನಸಂದಣಿ…
ಮಡಿಕೇರಿ ಅ.8 NEWS DESK : ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಎಟಿಎಂಎ) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಗೆ ಒಪ್ಪಂದದ ಆಧಾರದ ಮೇಲೆ 2024-25 ನೇ ಸಾಲಿನ ಸೀಮಿತ ಅವಧಿಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ವಿರಾಜಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಎಂಎಸ್ಸಿ(ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಅರಣ್ಯ, ರೇಷ್ಮೆ), ಕನಿಷ್ಠ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂಎಸ್ ಆಫೀಸ್‍ನಲ್ಲಿ ಪರಿಣಿತಿ ಹೊಂದಿರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಮಾಸಿಕ ರೂ. 30 ಸಾವಿರ ಗೌರವ ಧನ ನೀಡಲಾಗುವುದು. ಈ ಹುದ್ದೆಗೆ ಅರ್ಹರಿರುವ ಅಭ್ಯರ್ಥಿಗಳು ಅಕ್ಟೋಬರ್, 21 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ(ಆತ್ಮ ವಿಭಾಗ),…
ಮಡಿಕೇರಿ ಅ.8 NEWS DESK : ಕೊಡವ ಕ್ರಿಕೆಟ್ ಅಕಾಡೆಮಿ ವತಿಯಿಂದ ಅ.31 ರಿಂದ ನ.4ರ ವರೆಗೆ ಎರಡನೇ ವರ್ಷದ ಅಂತರ ಕೊಡವ ಸಮಾಜಗಳ ನಡುವಿನ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯು ಬಾಳಲೆಯಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಖಜಾಂಚಿ ಕೊಕ್ಕೆಂಗಡ ರಂಜನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಳಲೆಯ ವಿಜಯಲಕ್ಷ್ಮಿ ಜೂನಿಯರ್ ಕಾಲೇಜಿನ ಮೈದಾನದಲ್ಲಿ ಐದು ದಿನಗಳ ಕಾಲ ನಾಕೌಟ್ ಮಾದರಿಯ ಪಂದ್ಯಾವಳಿ ನಡೆಯಲಿದ್ದು, ವಿಜೇತರಿಗೆ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ನೀಡಲಾಗುವುದೆಂದರು. ಪಂದ್ಯಾವಳಿಯಲ್ಲಿ ಕೊಡವ ಜನಾಂಗದ ಆಟಗಾರರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಸುಮಾರು 14 ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಒಂದು ತಂಡಕ್ಕೆ ಎರಡು ಹೊರ ಜಿಲ್ಲೆಯ ಕೊಡವ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು. ಆಟಗಾರರು ಅ.20ರ ಒಳಗಾಗಿ ರೂ.5,000 ರೂಪಾಯಿಗಳನ್ನು ಪಾವತಿಸಿ ತಂಡಗಳ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದ ಅವರು, ಆಟಗಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು. ಹೆಚ್ಚಿನ ಮಾಹಿತಿಗೆ ಹಾಗೂ ತಂಡದ ನೊಂದಾಣಿಗಾಗಿ 9343856877,…
ಮಡಿಕೇರಿ ಅ.8 NEWS DESK : ದಕ್ಷಿಣ ಭಾರತದ ಸುಮಾರು ಎಂಟು ಕೋಟಿ ಜನರಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ನದಿ ತನ್ನ ತವರು ಜಿಲ್ಲೆ ಕೊಡಗಿನಲ್ಲೇ ನಿರ0ತರವಾಗಿ ಕಲುಷಿಗೊಳ್ಳುತ್ತಿದೆ. ನದಿ ಮಾಲಿನ್ಯವನ್ನು ತಡೆಯುವಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿರುವ ಹಿನ್ನೆಲೆ ವಿವಿಧ ಹಂತದ ಹೋರಾಟದೊಂದಿಗೆ ಕಾನೂನಿನ ಮೊರೆ ಹೋಗಲು ನಿರ್ಧರಿಸಿರುವುದಾಗಿ ಕೂರ್ಗ್ ವೈಲ್ಡ್ ಲೈಫ್ ಸೊಸೈಟಿಯ ಮಾಜಿ ಅಧ್ಯಕ್ಷ ಹಾಗೂ ಕೊಡಗು ಮೋಡೆಲ್ ಫಾರೆಸ್ಟ್ ಟ್ರಸ್ಟ್ ನ ಉಪಾಧ್ಯಕ್ಷ ಕರ್ನಲ್ ಸಿ.ಪಿ.ಮುತ್ತಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನದಿ ಮತ್ತು ಪರಿಸರ ಸ್ನೇಹಿ ಸಂಘಟನೆಗಳ ಸಹಕಾರದೊಂದಿಗೆ ಕಾವೇರಿಯನ್ನು ಉಳಿಸಿಕೊಳ್ಳಲು ಹೋರಾಟ ರೂಪಿಸುವುದಾಗಿ ಹೇಳಿದರು. ಕಾವೇರಿ ನದಿ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಹುಟ್ಟಿ ಸುಮಾರು 810 ಕಿ.ಲೋ ಮೀಟರ್ ಹರಿದು ಬಂಗಾಳಕೊಲ್ಲಿ ಸಮುದ್ರಕ್ಕೆ ಸೇರುತ್ತದೆ. ದುರಾದೃಷ್ಟವಶಾತ್ ಭಾಗಮಂಡಲದಿಂದಲೇ ನದಿ ಕಲುಷಿತಗೊಳ್ಳುತ್ತಿದೆ. ತ್ಯಾಜ್ಯದ ನೀರು ನೇರವಾಗಿ ಚರಂಡಿ ಮೂಲಕ ಕಾವೇರಿ ನದಿಗೆ ಸೇರ್ಪಡೆಗೊಳ್ಳುತ್ತಿದೆ. ಇದೇ ರೀತಿ ನಾಪೋಕ್ಲು, ಬೇತ್ರಿ, ಕೊಂಡಂಗೇರಿ, ನೆಲ್ಲಿಹುದಿಕೇರಿ,…
ಮಡಿಕೇರಿ ಅ.8 NEWS DESK : ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ, ಶಕ್ತಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಕಾರದಲ್ಲಿ ನಗರ ದಸರಾ ಸಮಿತಿ ವತಿಯಿಂದ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ‘ಮಹಿಳಾ ದಸರಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ರಾಜಕೀಯ, ಆರ್ಥಿಕ, ವಾಣಿಜ್ಯ, ಆಡಳಿತ, ಬಾಹ್ಯಾಕಾಶ, ಕ್ರೀಡೆ, ಸಿನಿಮಾ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ವೀಣಾ ಅಚ್ಚಯ್ಯ ಬಣ್ಣಿಸಿದರು. ಪಟ್ಟಣ, ನಗರ ಮತ್ತು ಬೃಹತ್ ನಗರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದು, ಗ್ರಾಮೀಣ ಪ್ರದೇಶದ ಮಹಿಳೆಯರಿಗೂ ಅವಕಾಶಗಳು ಒದಗಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಮಹಿಳಾ ದಸರಾವು ಮಹಿಳೆಯರ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಆ ನಿಟ್ಟಿನಲ್ಲಿ ಅವಕಾಶಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯುವಂತಾಗಬೇಕು ಎಂದು…
ಮಡಿಕೇರಿ NEWS DESK ಅ.9 : ಮಡಿಕೇರಿ ದಸರಾ ಅಂಗವಾಗಿ ಸಾಂಸ್ಕೃತಿಕ ಸಮಿತಿ ವತಿಯಿಂದ ಅ.9 ರಂದು ಸಂಜೆ 6 ಗಂಟೆಗೆ ವಿವಿಧ ನೃತ್ಯ ವೈಭವ ಗಮನ ಸೆಳೆಯಲಿದೆ. ರಾಷ್ಟ್ರೀಯ ಖ್ಯಾತಿಯ ಕೋಟೆರ ಯಾಮಿನಿ ಮುತ್ತಣ್ಣ ಮತ್ತು ಶಿಷ್ಯೆಯರಿಂದ “ದೇವಿ ಮಾರ್ಗಂ ನೃತ್ಯರೂಪಕ”, ವಿಂಗ್ಸ್ ಆಫ್ ಫ್ಯಾಷನ್ ತಂಡದಿಂದ ನೃತ್ಯ ಸೌರಭ, ನಾದ ವಿದ್ಯಾಲಯ ಮೈಸೂರು ತಂಡದಿಂದ ನೃತ್ಯರೂಪಕ-ಮಹಿಷಾಸುರ ಮರ್ದಿನಿ, ಕೂರ್ಗ್ ಮೆಲೋಡೀಸ್ ಮಡಿಕೇರಿ ತಂಡದಿಂದ ಸಂಗೀತ ರಸಮಂಜರಿ, ಯಶಸ್ವಿ ಡ್ಯಾನ್ಸ್ ಗ್ರೂಪ್ ಮಂಗಳೂರು ತಂಡದಿಂದ ಕಡಲ ಹಬ್ಬ ನೃತ್ಯ ಸಂಭ್ರಮ, ನಿತ್ಯ ನಿರಂತರ ಮೈಸೂರು ವಿಶೇಷ ಚೇತನ ಮಕ್ಕಳಿಂದ ಕರ್ನಾಟಕ ವೈಭವ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ ಮಾಹಿತಿ ನೀಡಿದ್ದಾರೆ.
ಮಡಿಕೇರಿ NEWS DESK ಅ.8 : ಸುಂಟಿಕೊಪ್ಪದ ಪನ್ಯ ಗ್ರಾಮ ಮಾರಿಗುಡಿ ಸಮೀಪದ ಕಾಫಿ ತೋಟವೊಂದರಲ್ಲಿ ಸುಟ್ಟು ಕರಕಲಾಗಿರುವ ಮೃತದೇಹ ಮತ್ತು ಅಂಗಾಂಗಗಳು ಪತ್ತೆಯಾಗಿದೆ. ಇದು ಅಪರಿಚಿತ ಪುರುಷನ ಶವವಾಗಿದ್ದು, 45 ರಿಂದ 50ವರ್ಷದ ವ್ಯಕ್ತಿ ಎಂದು ಅಂದಾಜಿಸಲಾಗಿದೆ. ಕರಕಲಾದ ದೇಹದ ಪಕ್ಕದಲ್ಲಿ ಕಾಲು ಮತ್ತಿತರ ಅಂಗಗಳು ಗೋಚರಿಸಿದೆ. ತೋಟದ ಮಾಲೀಕರು ಮಾಹಿತಿ ನೀಡಿದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುಮಾರು 4 ದಿನಗಳ ಹಿಂದೆ ದೇಹವನ್ನು ಸುಟ್ಟಿರುವ ಶಂಕೆ ಇದ್ದು, ಇದೊಂದು ಕೊಲೆ ಪ್ರಕರಣವಾಗಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು. ಡಿವೈಎಸ್‌ಪಿ ಗಂಗಾಧರಪ್ಪ, ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಸುಂಟಿಕೊಪ್ಪ ಠಾಣಾಧಿಕಾರಿ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಸಿದ್ದಾಪುರ ಅ.8 NEWS DESK : ನವಪಲ್ಲವ ಸಾಹಿತ್ಯ ವೇದಿಕೆ ಹಾಗೂ ನೆಲ್ಲಿಹುದಿಕೇರಿ ಕೆ.ಪಿ.ಎಸ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಲೇಖಕಿ ಎಂ.ಬಿ.ಜಯಲಕ್ಷ್ಮಿ ವಸಂತ್ ಹೊಸಮನೆ ಅವರು ರಚಿಸಿರುವ “ಸಾಂಚವ್ಯ” ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಯಿತು. ನೆಲ್ಲಿಹುದಿಕೇರಿ ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ ದಾಸ್ ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಮಡಿಕೇರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನಶಕ್ತಿ ವಾರಪತ್ರಿಕೆಯ ಸಂಪಾದಕ ಡಾ.ಎಸ್.ವೈ.ಗುರುಶಾಂತ ಪುಸ್ತಕ ಪರಿಚಯ ಮಾಡಿದರು. ಮುಖ್ಯ ಅತಿಥಿಗಳಾಗಿ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕೊಡಗು ಸಾಹಿತ್ಯ ಪರಿಷತ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೇಶವ ಕಾಮತ್, ಸೋಮವಾರಪೇಟೆ ನಿವೃತ್ತ ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್, ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್, ಗೋಣಿಕೊಪ್ಪಲಿನ ಸಂಗನಗೌಡ ಪಾಟೀಲ್ ಪಾಲ್ಗೊಂಡಿದ್ದರು. ವಸಂತ್ ಕುಮಾರ್ ಹೊಸಮನೆ ಸ್ವಾಗತಿಸಿ,…
ಪುತ್ತೂರು ಅ.8 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ ಅಭಿಯಾನವು ಯಶಸ್ವಿಯಾಗಿ ಸಂಪನ್ನಗೊಂಡಿತು. ಎರಡು ದಿನಗಳ ಕಾಲ ನಡೆದ ಈ ಅಭಿಯಾನದಲ್ಲಿ ಸುಮಾರು 30 ವರ್ಷಗಳಿಂದ ಕಂಪ್ಯೂಟೇಶನಲ್ ಪರಿಣತಿಯನ್ನು ಹೊಂದಿರುವ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಕ್ಷೇತ್ರದ ದಿಗ್ಗಜ ಸಂಸ್ಥೆ ಕೆಡೆನ್ಸ್ ಸಿಸ್ಟಮ್ಸ್ ಕಾಲೇಜಿಗೆ ಭೇಟಿ ನೀಡಿತು. ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳ 12 ಇಂಜಿನಿಯರಿಂಗ್ ಕಾಲೇಜುಗಳ ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ 623 ಅರ್ಹ ವಿದ್ಯಾರ್ಥಿಗಳು ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ವಾರ್ಷಿಕ 15 ಲಕ್ಷ ರೂಪಾಯಿಗಳ ಸಂಬಳವನ್ನು ನೀಡುವ ಒಪ್ಪಂದದೊಂದಿಗೆ ನೇಮಕಾತಿ ಪ್ರಕ್ರಿಯೆಯು ನಡೆಯಿತು. ಪ್ರಥಮ ಸುತ್ತಿನ ಪರೀಕ್ಷೆಯ ನಂತರ 102 ವಿದ್ಯಾರ್ಥಿಗಳನ್ನು ಮುಂದಿನ ಸುತ್ತಿಗೆ ಆಯ್ಕೆ ಮಾಡಲಾಗಿತ್ತು. ದ್ವಿತೀಯ ತಾಂತ್ರಿಕ ಸುತ್ತಿನ ಬಳಿಕ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ 5 ವಿದ್ಯಾರ್ಥಿಗಳ ಸಹಿತ 20 ವಿದ್ಯಾರ್ಥಿಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಯಿತು. ನಂತರ ಪ್ರತಿ ವಿದ್ಯಾರ್ಥಿಗಳ ಜತೆಗೆ ಮುಖಾ ಮುಖಿ…






