ಲೇಖಕ: admin

ಮಡಿಕೇರಿ ಅ.7 NEWS DESK : ಬಲ್ಲಮಾವಟಿಯ ನಾಲ್‍ನಾಡ್ ಹಾಕಿ ಕ್ಲಬ್ ವತಿಯಿಂದ ಅ.29 ರಿಂದ ನ.2ರವರೆಗೆ ನಾಲ್‍ನಾಡ್ ವ್ಯಾಪ್ತಿಯ ಅಂತರ ಗ್ರಾಮ ಹಾಕಿ ಪಂದ್ಯಾವಳಿ ಮತ್ತು ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾವಳಿ ನಡೆಯಲಿದೆ ಎಂದು ಕ್ಲಬ್ ನ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೇ ತಿಂಗಳಿನಲ್ಲಿ ನಡೆಯಬೇಕಿದ್ದ ಈ ಪಂದ್ಯಾವಳಿಯನ್ನು ಮಳೆಯ ಕಾರಣದಿಂದ ಮುಂದೂಡಲಾಗಿತ್ತು. ಇದೀಗ ಬಲ್ಲಮವಾಟಿಯ ನೇತಾಜಿ ವಿದ್ಯಾಸಂಸ್ಥೆಯ ಆಟದ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ ಎಂದರು. ಹಾಕಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದ್ದು, ನಾಲ್‍ನಾಡ್ ವ್ಯಾಪ್ತಿಯ 16 ತಂಡಗಳು ಭಾಗವಹಿಸಲಿವೆ. ಮುಂದಿನ ದಿನಗಳಲ್ಲಿ ಶಾಲೆಯ ಬೇಸಿಗೆ ರಜೆಯ ದಿನಗಳಲ್ಲಿ ಕಿರಿಯ ಮಕ್ಕಳಿಗೆ ನುರಿತ ತರಬೇತುದಾರರಿಂದ ತರಬೇತಿ ನೀಡಲಾಗುವುದೆಂದು ತಿಳಿಸಿದರು. ಕಾರ್ಯದರ್ಶಿ ಚಂಗೇಟಿರ ಸೋಮಣ್ಣ ಮಾತನಾಡಿ, ಅಪ್ಪಚೆಟ್ಟೋಳಂಡ ಕುಟುಂಬಸ್ಥರು ಈ ಪಂದ್ಯಾವಳಿಯ ಪ್ರಯೋಜಕರಾಗಿದ್ದು, ಹಾಕಿ ಪಂದ್ಯಾವಳಿಯ ಪ್ರಥಮ ಸ್ಥಾನದ ಟ್ರೋಫಿಯನ್ನು ನೆಲಜಿ ಗ್ರಾಮದ ಮಾಳೆಯಂಡ ದಿ.ಲಲಿತ ಚೋಂದವ್ವ ಜ್ಞಾಪಕಾರ್ಥವಾಗಿ ಅವರ…

Read More

ಮಡಿಕೇರಿ ಅ.7 NEWS DESK :  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೃಸೂರು ಜಗನ್‍ಮೋಹನ ಅರಮನೆಯಲ್ಲಿ ನಡೆಯುತ್ತಿರುವ ಪಂಚ ಕವಿ ಗೋಷ್ಠಿಗೆ ಕೊಡವ ಭಾಷೆಯ ಕವಿಯಾಗಿ ಮುಲ್ಲೇಂಗಡ ಮಧೋಷ್ ಪೂವಯ್ಯ ಭಾಗವಹಿಸಲಿದ್ದಾರೆ. ಅ.8 ರಂದು ನಡೆಯಲಿರುವ ನಾಲ್ಕನೇ ದಿನದ ಸಮಷ್ಟಿ ಬಹುಭಾಷಾ ಕವಿಗೋಷ್ಠಿಯಲ್ಲಿ ಮದೋಷ್ ಪೂವಯ್ಯ ಕೊಡವ ಭಾಷೆಯನ್ನು ಪತಿನಿಧಿಸುತ್ತಿದ್ದಾರೆ.

Read More

ಸೋಮವಾರಪೇಟೆ ಅ.7 NEWS DESK : ಸೋಮವಾರಪೇಟೆ ಶ್ರೀ ಬಸವೇಶ್ವರ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದುರ್ಗಾದೇವಿಗೆ ಬಾಳೆ ಎಲೆ ಅಲಂಕಾರ ಮಾಡಲಾಯಿತು. ವಿವಿಧೆಡೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

Read More

ಸೋಮವಾರಪೇಟೆ ಅ.7 NEWS DESK : ಸೋಮವಾರಪೇಟೆ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಶ್ರೀ ಶಕ್ತಿಪಾರ್ವತಿ ದೇವಿಗೆ ಕುಂಕುಮ ಅಲಂಕಾರ ಮಾಡಲಾಯಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

Read More

ಸೋಮವಾರಪೇಟೆ ಅ.7 NEWS DESK : ಮಾದಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ನಿರ್ವಹಣೆ ಹಾಗೂ ವ್ಯವಹಾರಕ್ಕಾಗಿ ಸೋಮವಾರಪೇಟೆ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಬಹುಮಾನ ದೊರೆಯಿತು. ಕೊಡಗು ಜಿಲ್ಲೆ ಸಹಕಾರ ಬ್ಯಾಂಕಿನ 99ನೇ ವಾರ್ಷಿಕ ಮಹಾಸಭೆಯಲ್ಲಿ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕ ಶರತ್ ಶೇಖರ್ ಅವರಿಂದ ಮಾದಾಪುರ ಸಂಘದ ಅಧ್ಯಕ್ಷ ನಾಪಂಡ ಉಮೇಶ್ ಉತ್ತಪ್ಪ ಹಾಗೂ ಸಿಇಒ ಕಾವೇರಪ್ಪ 25,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ಸ್ವೀಕರಿಸಿದರು. ಈ ಸಂದರ್ಭ ಬ್ಯಾಂಕಿನ ಅಧ್ಯಕ್ಷ ಬಾಂಡ್ ಗಣಪತಿ ಇದ್ದರು.

Read More

ಮಡಿಕೇರಿ ಅ.7 NEWS DESK : ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೈವ ನರ್ತನವನ್ನು ಮನರಂಜನೆಗಾಗಿ ಬಳಸಿಕೊಂಡು ಅಪಮಾನಿಸಲಾಗಿದೆ ಎಂದು ದೈವ ಆರಾಧಕರು ಹಾಗೂ ದೈವ ನರ್ತಕರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸಂಘದ ಸ್ಥಾಪಕಾಧ್ಯಕ್ಷ ಪಿ.ಎಂ.ರವಿ ಅವರು ದೈವ ನರ್ತನ ಎನ್ನುವುದು ತುಳುನಾಡು ಹಾಗೂ ಕರಾವಳಿ ಭಾಗದ ದೈವಶಕ್ತಿಯ ಆರಾಧನೆ, ಸಂಸ್ಕೃತಿ ಮತ್ತು ಸಂಪ್ರದಾಯವಾಗಿದೆ. ಇದನ್ನು ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಮನರಂಜನೆಗಾಗಿ ಬಳಸಿಕೊಂಡು ದೈವ ಆರಾಧಕರು ಹಾಗೂ ದೈವ ನರ್ತಕರಿಗೆ ಮಾನಸಿಕವಾಗಿ ನೋವುಂಟು ಮಾಡುವುದು ಖಂಡನೀಯವೆಂದರು. ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ವೇದಿಕೆಯಲ್ಲಿ ನೃತ್ಯ ತಂಡಗಳು ದೈವ ನರ್ತನವನ್ನು ತಮಗಿಷ್ಟ ಬಂದಂತೆ ಬಳಸಿಕೊಂಡು ಸಂಪ್ರದಾಯಕ್ಕೆ ಅಪಚಾರವೆಸಗಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಖಂಡನೆ ವ್ಯಕ್ತವಾಗಿದೆ. ಕೊಡಗಿನಲ್ಲಿ ನಮ್ಮ ಸಂಘ ಮನರಂಜನೆಗಾಗಿ ದೈವ ವೇಷ ತೊಟ್ಟು ನರ್ತನ ಮಾಡುವುದನ್ನು ಅನೇಕ ಬಾರಿ ವಿರೋಧಿಸುತ್ತಲೇ ಬಂದಿದೆ. ಶಾಲಾ ಕಾಲೇಜುಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಹಿಂದೆ ಸರ್ಕಾರ…

Read More

ಸೋಮವಾರಪೇಟೆ ಅ.7 NEWS DESK : ಕಾಫಿ ಬೆಳೆಗಾರರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕು ಎಂದು ಸೋಮವಾರಪೇಟೆ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ.ಎಂ.ದಿನೇಶ್ ಆಗ್ರಹಿಸಿದರು. ಕೂತಿ ಗ್ರಾಮದ ಸಮುದಾಯಭವನದಲ್ಲಿ ನಡೆದ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಅವರೊಂದಿಗೆ ನಡೆದ ರೈತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಕಾಫಿ ಬೆಳೆಗಾರರ ಸಂಕಷ್ಟವನ್ನು ಹೇಳಿದರು. ಕಾಫಿಯನ್ನು ಆಹಾರ ಬೆಳೆಯೆಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದರೆ ಮಾತ್ರ, ಕಾಫಿ ಬೆಳೆಗಾರರಿಗೆ ಸೂಕ್ತ ಸೌಲಭ್ಯಗಳು ಸಿಗುತ್ತವೆ. ವಿಶೇಷ ಸವಲತ್ತುಗಳನ್ನು ಒದಗಿಸದಿದ್ದರೆ ಮುಂದಿನ ಕೆಲವೇ ವರ್ಷಗಳಲ್ಲಿ ಕೊಡಗಿನ ಕಿತ್ತಳೆಯಂತೆ ಕಾಫಿಯೂ ಕಣ್ಮರೆಯಾದರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ಹೇಳಿದರು. ಕಾಫಿ ಹೂ ಅರಳುವ ಸಂದರ್ಭದಲ್ಲಿ ನಿಗದಿತ ಸಮಯದಲ್ಲಿ ಹೂಮಳೆ ಬೀಳುವುದಿಲ್ಲ. ಮತ್ತು ಬ್ಯಾಕಿಂಗ್ ಮಳೆ ಸಿಗುವುದಿಲ್ಲ. ಈ ಕಾರಣದಿಂದ ಬಹುತೇಕ ಸಣ್ಣ ಬೆಳೆಗಾರರು ಬೋರ್‍ವೆಲ್‍ಗಳಿಂದ ನೀರನ್ನು ಹಾರಿಸಿ, ಕಾಫಿ ಹೂ ಅರಳಿಸಬೇಕಾಗಿದೆ. ಈ ಕಾರಣದಿಂದ ಸಂಕಷ್ಟದಲ್ಲಿರುವ ಸಣ್ಣ ಕಾಫಿ ಬೆಳೆಗಾರರ ಎಲ್‍ಟಿ4ಸಿ ಪಂಪ್‍ಸೆಟ್‍ಗಳಿಗೆ ಯಾವುದೇ ಷರತ್ತುಗಳಿಲ್ಲದೆ ಉಚಿತ ವಿದ್ಯುತ್…

Read More

ಮಡಿಕೇರಿ ಅ.7 NEWS DESK : ಕೊಡಗು ಜಿಲ್ಲೆಯ ವಿವಿಧೆಡೆ ಸಿ ಮತ್ತು ಡಿ ಭೂಮಿಯಲ್ಲಿ ಬದುಕು ಕಟ್ಟಿಕೊಂಡಿರುವ ಬಡವರ ಜಮೀನುಗಳನ್ನು ಮೀಸಲು ಅರಣ್ಯವೆಂದು ಘೋಷಿಸುವ ಕುರಿತು ಮೈಸೂರು ವಿಭಾಗದ ಅರಣ್ಯ ವ್ಯವಸ್ಥಾಪನಾಧಿಕಾರಿಗಳು ಗ್ರಾ.ಪಂ ಗಳಿಗೆ ಸುತ್ತೋಲೆ ಹೊರಡಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ತಾಲ್ಲೂಕಿನ ಮುಕ್ಕೋಡ್ಲು ಗ್ರಾಮದ ಸರ್ವೆ ನಂಬರ್ 55ರ ಒಟ್ಟು ವಿಸ್ತೀರ್ಣ 109.44 (ಹೆಕ್ಟೇರುಗಳಲ್ಲಿ) ಜಮೀನುಗಳನ್ನು ಕರ್ನಾಟಕ ಅರಣ್ಯ ಅಧಿನಿಯಮ 1963ರ ಕಲಂ-05 ರನ್ವಯ ಮೀಸಲು ಅರಣ್ಯವೆಂದು ಘೋಷಿಸುವ ಕುರಿತು ಎಂದು ಅರಣ್ಯ ವ್ಯವಸ್ಥಾಪನಾಧಿಕಾರಿಯಾಗಿರುವ ನಿವೃತ್ತ ಕೆಎಎಸ್ ಅಧಿಕಾರಿ ರೇಣುಕಾಂಬ ಅವರು ಮಕ್ಕಂದೂರು ಗ್ರಾ.ಪಂ ಗೆ 2024 ಜುಲೈ 5ಕ್ಕೆ ಸುತ್ತೋಲೆ ಹೊರಡಿಸಿದ್ದಾರೆ. ಇದೇ ರೀತಿಯ ಸುತ್ತೋಲೆ ಜಿಲ್ಲೆಯ ಇನ್ನಿತರ ಗ್ರಾ.ಪಂ ಗಳಿಗೂ ಕಳುಹಿಸಿರುವ ಬಗ್ಗೆ ಮಾಹಿತಿ ಲಭಿಸಿದೆ. ಇದನ್ನು ಸ್ಪಷ್ಟಪಡಿಸಿಕೊಳ್ಳಲು ತಾವು ಹಾಗೂ ಗ್ರಾಮಸ್ಥರು ರೇಣುಕಾಂಬ…

Read More

ಮಡಿಕೇರಿ ಅ.7 NEWS DESK : ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಅಸಾಧಾರಣ ಸಾಧನೆಗಾಗಿ ಕೊಡಗಿನ ಮೂಕಳೇರ ಟೈನಿ ಪೂಣಚ್ಚ ಅವರು “ಪುನೀತ ಪ್ರಶಸ್ತಿ”ಗೆ ಆಯ್ಕೆಯಾಗಿದ್ದಾರೆ. ಡಾ.ಪುನೀತ್ ರಾಜಕುಮಾರ್ ಪುಣ್ಯ ಸ್ಮರಣೆ ಅಂಗವಾಗಿ ಚಲನಚಿತ್ರ ಮತ್ತು ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿಯ ವತಿಯಿಂದ ಧಾರವಾಡದಲ್ಲಿ ಅ.27, 28 ಮತ್ತು 29 ರಂದು ಜರುಗುವ “ಅಂತರಾಷ್ಟ್ರೀಯ ಫಿಲಂ ಫೆಸ್ಟಿವಲ್” ಕಾರ್ಯಕ್ರಮದಲ್ಲಿ  ಮೂಕಳೇರ ಟೈನಿ ಪೂಣಚ್ಚ ಅವರಿಗೆ “ಪುನೀತ”ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮಂಡಳಿಯ ಪ್ರಮುಖರು ತಿಳಿಸಿದ್ದಾರೆ.

Read More

ಮಡಿಕೇರಿ ಅ.7 NEWS DESK : ನಗರದ ನಾಲ್ಕು ಶಕ್ತಿ ದೇವಾಲಯಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿಯ 94ನೇ ವರ್ಷದ ದಸರಾ ಉತ್ಸವಕ್ಕೆ ಸಜ್ಜಾಗುತ್ತದೆ ಎಂದು ಸಮಿತಿಯ ಅಧ್ಯಕ್ಷ ಬಿ.ಎಂ.ರಮೇಶ್ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್‌ಗಳನ್ನು ಬಳಸಲಾಗುತ್ತಿದ್ದು, ಕೌಶಿಕೆ ಮಹಾತ್ಮೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ. ದಿಂಡಿಗಲ್‍ನ ಜೆಮ್ಸ್ ಲೈಟಿಂಗ್ ಬೋರ್ಡ್ ಅಳವಡಿಸಿದ್ದು, ಸಮಿತಿ ಸದಸ್ಯರೇ ಪ್ಲಾಟ್‍ಫಾರಂ ನಿರ್ಮಿಸಲಿದ್ದಾರೆ. ಧ್ವನಿವರ್ಧಕ ಹಾಗೂ ಸ್ಟುಡಿಯೋ ವ್ಯವಸ್ಥೆಯನ್ನು ಮಡಿಕೇರಿಯ ಶಿವು ಇವೆಂಟ್ ಮ್ಯಾನೆಜ್‍ಮೆಂಟ್‍ನವರು ಒದಗಿಸಲಿದ್ದಾರೆ. 21 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಕಲಾಕೃತಿಗಳ ರಚನೆ ಹಾಗೂ ಟ್ರ್ಯಾಕ್ಟರ್ ಸೆಟ್ಟಿಂಗ್ಸ್‍ನ್ನು ಮಡಿಕೇರಿಯ ಆನಂದ್ ಆಟ್ರ್ಸ್‍ನವರು ಮಾಡಲಿದ್ದಾರೆ. ಮಡಿಕೇರಿಯ ಅಶ್ರಫ್ ಹಾಗೂ ಪ್ರಕಾಶ್ ಸ್ಪೆಷಲ್ ಎಫೆಕ್ಟ್ ನೀಡಲಿದ್ದಾರೆ. ಮಡಿಕೇರಿ ಓಜೋನ್ ಫ್ಯಾಬ್‍ನ ದಿನೇಶ್ ನಾಯರ್ ತಂಡ ಕಲಾಕೃತಿಗಳಿಗೆ ಚಲನವಲನ ನೀಡಲಿದೆ. ಒಟ್ಟು 27 ಲಕ್ಷ ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು, ಜನಾಕರ್ಷಣೆ ಪಡೆಯುವುದರೊಂದಿಗೆ ಬಹುಮಾನಕ್ಕೂ ಪೈಪೋಟಿ ನೀಡಲಾಗವುದು ಎಂದು ರಮೇಶ್ ಮಾಹಿತಿ ನೀಡಿದರು.

Read More