ಲೇಖಕ: admin

ಮಡಿಕೇರಿ NEWS DESK ಅ.6 : ಕೊಡಗು ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ ಜೊತೆಗೆ ಕಾಫಿ ಮುಖ್ಯ ಬೆಳೆಯಾಗಿದ್ದು, ಕಾಫಿ ಜತೆಗೆ ಕೃಷಿ ಮತ್ತು ತೋಟಗಾರಿಕೆಯ ಸಮಗ್ರ ಅಭಿವೃದ್ಧಿಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ವಿವಿಧ ಇಲಾಖೆಗಳ ಸಹಕಾರದಲ್ಲಿ ಎರಡು ದಿನಗಳ ಕಾಲ ಏರ್ಪಡಿಸಲಾಗಿರುವ ಕಾಫಿ ಹಾಗೂ ಕೃಷಿ ಸಂಬಂಧಿತ ಮಾಹಿತಿಯುಳ್ಳ ವಸ್ತು ಪ್ರದರ್ಶನ ಮಳಿಗೆ ವೀಕ್ಷಣೆ ಹಾಗೂ ಮೊದಲ ವರ್ಷದ ಕಾಫಿ ದಸರಾಗೆ ಭಾನುವಾರ ಚಾಲನೆ ನೀಡಿ ಸಚಿವರು ಮಾತನಾಡಿದರು. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಕೃಷಿ ಮತ್ತು ತೋಟಗಾರಿಕೆ ಸಮಗ್ರ ಅಭಿವೃದ್ಧಿ ಬಗ್ಗೆ ತೋಟಗಾರಿಕೆ ಸಚಿವರ ಜತೆ ಚರ್ಚಿಸಲಾಗಿವುದು. ಹಾಗೆಯೇ ಕಾಫಿ ಬೆಳೆಗಾರರಿಗೆ ಮತ್ತಷ್ಟು ಸಹಕಾರಿ ಕಾರ್ಯಕ್ರಮಗಳನ್ನು ರೂಪಿಸಲು ಸಂಬಂಧಪಟ್ಟವರ ಗಮನ ಸೆಳೆಯಲಾಗುವುದು ಎಂದು ಕೃಷಿ ಸಚಿವರಾದ ಚಲುವರಾಯ ಸ್ವಾಮಿ ಅವರು ಹೇಳಿದರು. ಕಾಫಿ ಬೆಳೆಗಾರರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಗಮನ…

Read More

ಕುಶಾಲನಗರ NEWS DESK ಅ.6 : ಮಕ್ಕಳು ಪೋಷಕರಿಗೆ ಹಾಗೂ ಗುರು ಹಿರಿಯರಿಗೆ ಗೌರವ ನೀಡುವ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಕರೆ ನೀಡಿದ್ದಾರೆ. ಕುಶಾಲನಗರದ ಕೇರಳ ಸಮಾಜದ ವತಿಯಿಂದ ನಡೆದ ಓಣಂ ಆಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದೂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಓಣಂ ಆಚರಣೆ ಸುಂದರವಾದ ಆಚರಣೆ. ಮಲೆಯಾಳಿ ಸಮಾಜ ಕೇರಳದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ ಎಂದು ಹೇಳಿದರು. ಹಿಂದೂ ಮಲೆಯಾಳಿ ಸಮಾಜದ ಕೊಡಗು ಜಿಲ್ಲಾಧ್ಯಕ್ಷ ವಿ.ಎಂ.ವಿಜಯ ಮಾತನಾಡಿ ಹಿಂದೂ ಸಂಸ್ಕೃತಿ, ಸಂಪ್ರದಾಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು. ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷಿö್ಮ ಚಂದ್ರು, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಮುರುಳಿ, ಮಡಿಕೇರಿ ಎಸ್‌ಎನ್‌ಡಿ ಪಿ ಅಧ್ಯಕ್ಷ ಹರೀಶ್ ಕುಮಾರ್, ವಾಸು, ಕೇರಳ ಸಮಾಜದ ಉಪಾಧ್ಯಕ್ಷ ಕೆ.ಬಾಬು, ಕಾರ್ಯದರ್ಶಿ ರಾಬಿನ್, ನಿರ್ದೇಶಕರಾದ ರಾಯ್, ಎಂ.ಜೆ.ಪ್ರಕಾಶ್, ಸುಶೀಲಾ,…

Read More

ವಿರಾಜಪೇಟೆ NEWS DESK ಅ.6 : ಸಂವಿಧಾನವನ್ನು ಓದಿ ಅರ್ಥೈಸುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ನ ನಿವೃತ್ತ ಜಸ್ಟಿಸ್ ನಾಗಮೋಹನ್ ದಾಸ್ ತಿಳಿಸಿದ್ದಾರೆ. ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜ್ ನಲ್ಲಿ ಕಾಲೇಜ್ ನ ಮಾನವ ಹಕ್ಕುಗಳ ಘಟಕ ಹಾಗೂ ಐಕ್ಯೂಎಸಿ ಘಟಕಗಳ ಸಹಯೋಗದಲ್ಲಿ “ಭಾರತದ ಸಂವಿಧಾನದ ಮೂಲಾಂಶಗಳು” ಎಂಬ ವಿಷಯದ ಕುರಿತು ನಡೆದ ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತ ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟçವಾಗಿದ್ದು, ಪ್ರಜಾಪ್ರಭುತ್ವಕ್ಕೆ ಸಂವಿಧಾನ ತಳಹದಿಯಾಗಿದೆ. ಸಂವಿಧಾನವನ್ನು ಓದದಿದ್ದರೆ ಕಾನೂನನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ಸಂವಿಧಾನ ಎಲ್ಲರಿಗೂ ಸಮಾನ ಹಕ್ಕನ್ನು ನೀಡಿದ್ದು, ಸಾಮಾಜಿಕ ನ್ಯಾಯದ ಅಂಶಗಳನ್ನು ಎತ್ತಿ ಹಿಡಿದಿದೆ. ಪ್ರತಿಯೊಬ್ಬರು ದೇಶದ ಇತಿಹಾಸ, ಆರ್ಥಿಕ ಪರಿಸ್ಥಿತಿ, ಕಾನೂನು, ಹಕ್ಕುಗಳು, ರಾಜಕೀಯ ಅಂಶಗಳನ್ನು ಓದಿ ತಿಳಿಯಬೇಕು. ಸಂವಿಧಾನಕ್ಕೆ ಗೌರವವನ್ನು ನೀಡುವ ಮೂಲಕ ಈ ನೆಲದ ಕಾನೂನನ್ನು ಗೌರವಿಸಬೇಕು ಎಂದು ಕರೆ ನೀಡಿದರು. ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕÀ…

Read More

ವಿರಾಜಪೇಟೆ NEWS DESK ಅ.6 : ಪ್ರಜಾಪ್ರಭುತ್ವದ ಆರಂಭ ಮತ್ತು ಅರಿವು ಶಾಲಾ ಕಾಲೇಜುಗಳಿಂದಲೇ ಆರಂಭವಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. ವಿದ್ಯಾರ್ಥಿ ಜೀವನವು ಅಮೂಲ್ಯವಾಗಿದ್ದು ಅದನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆ ಶಾಲಾ ಕಾಲೇಜುಗಳಿಂದಲೇ ಆರಂಭವಾಗುತ್ತದೆ. ಕಾಲೇಜುಗಳಲ್ಲಿ ಚುನಾವಣೆಯ ಮೂಲಕವೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ಎಲ್ಲರನ್ನು ಸಮಾನತೆಯಿಂದ ಕಾಣಬೇಕು, ಮಾನವೀಯ ಮೌಲ್ಯಗಳೊಂದಿಗೆ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು. ಆ ಮೂಲಕ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಸುರೇಶ್ ಅಲೆಟ್ಟಿ ಅವರು ವಿದ್ಯಾರ್ಥಿ ಜೀವನ ಎಂದರೆ ಗುರಿಯನ್ನು ನಿಭಾಯಿಸುವ ವ್ಯವಸ್ಥೆ. ಕ್ರಿಯಾಶೀಲ ವ್ಯಕ್ತಿತ್ವವನ್ನು ವ್ಯಕ್ತಪಡಿಸುವ ವೇದಿಕೆಯೇ ಕಾಲೇಜು. ಇದಕ್ಕೆ ವೇದಿಕೆ ಒದಗಿಸುವುದು…

Read More

ಮಡಿಕೇರಿ NEWS DESK ಅ.6 : ಮಡಿಕೇರಿ ದಸರಾ ಅಂಗವಾಗಿ ಸಾಂಸ್ಕೖತಿಕ ಸಮಿತಿ  ವತಿಯಿಂದ ಅ.7 ರಂದು ಸೋಮವಾರ ಸಂಜೆ 6 ಗಂಟೆಗೆ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸೋನಿ ರಿಯಾಲಿಟಿ ಶೋ ಸೂಪರ್ ಸ್ಟಾರ್ ಸಿಂಗರ್ ನ ವಿಜೇತ ಕೇರಳದ ಅವಿಭ೯ವ್  ಮತ್ತು ತಂಡದಿಂದ ಗಾನಸಂಭ್ರಮ ಆಯೋಜಿತವಾಗಿದೆ. ಕುಶಾಲನಗರದ ಏಂಜಲ್ ವಿಂಗ್ಸ್ ತಂಡದಿಂದ ನೖತ್ಯ ವೈವಿಧ್ಯ, ಕೊಡಗು ಪತ್ರಕತ೯ರ ಸಂಘ (ರಿ) ತಂಡದಿಂದ ಸಂಗೀತ ರಸಮಂಜರಿ, ನಾಟ್ಯ ನಿಕೇತನ ತಂಡದಿಂದ ನೖತ್ಯ ಸಂಗಮ, ಕಿಂಗ್ಸ್ ಆಫ್ ಕೂಗ್೯ ತಂಡದಿಂದ ನೖತ್ಯ ವೈವಿಧ್ಯ ಮತ್ತು ಇತರ ಸಾಂಸ್ಕೖತಿಕ ವೈವಿಧ್ಯಗಳು ಆಯೋಜಿತವಾಗಿದೆ. ಸೋಮವಾರ ಬೆಳಗ್ಗೆ 10 ಗಂಟೆಯಿಂದ ಕಾಫಿ ದಸರಾ ಅಂಗವಾಗಿ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಕಾಫಿ ಮತ್ತು ಕೖಷಿಗೆ ಸಂಬಂಧಿಸಿದಂತೆ ನಡೆಯುವ ವಿಚಾರಸಂಕಿರಣದಲ್ಲಿ     ಕೖಷಿ ರಂಗದ ಪರಿಣಿತರಾದ ಧಮ೯ರಾಜ್, ಡಾ ಕೆಂಚರೆಡ್ಡಿ, ಕೆ ಕೆ ವಿಶ್ವನಾಥ್, ನಡಿಕೇರಿಯಂಡ ಬೋಸ್ ಮಂದಣ್ಣ,  ಖಲಿಸ್ತಾ ಡಿಸೋಜಾ, ಡಾ,ಶಿವಪ್ರಸಾದ್, ಮಿಲನಾ…

Read More

ಮಡಿಕೇರಿ NEWS DESK ಅ.6 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಕಾಫಿ ದಸರಾವನ್ನು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು. ಕಾಫಿ ದಸರಾಕ್ಕೆ ಕಾಫಿ ಮಂಡಳಿ, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್, ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಸೇರಿದಂತೆ ಕಾಫಿ ವಲಯದಿಂದ ಉತ್ತಮ ಸ್ಪಂದನ ದೊರಕಿದೆ. ಈಗಾಗಲೇ 32 ಮಳಿಗೆಗಳು ಭರ್ತಿಯಾಗಿದ್ದು, ಕಾಫಿ, ಹೈನುಗಾರಿಕೆ, ಬಿದಿರು, ತೋಟಗಾರಿಕಾ ಬೆಳೆಗಳು, ಯಂತ್ರೋಪಕರಣಗಳಿಗೆ ಸಂಬAಧಿಸಿದAತೆ ಸಮಗ್ರ ಮಾಹಿತಿ ಈ ಮಳಿಗೆಗಳಲ್ಲಿ ದೊರಕಲಿದೆ. ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಮೀನುಗಾರಿಕಾ ಇಲಾಖೆ, ಪಶುಪಾಲನಾ ಇಲಾಖೆ, ಚೆಟ್ಟಳ್ಳಿಯ ತೋಟಗಾರಿಕಾ ಸಂಶೋಧನಾ ಕೇಂದ್ರ ಸೇರಿದಂತೆ ವಿವಿಧ ಇಲಾಖೆಗಳು ಕೈಜೋಡಿಸಿವೆ. ಕಾಫಿ ದಸರಾದಲ್ಲಿ…

Read More

ಮಡಿಕೇರಿ NEWS DESK ಅ.6 : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 9 ಮತ್ತು 11 ನೇ ತರಗತಿಗೆ ಖಾಲಿ ಇರುವ ಸ್ಥಾನಗಳ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಈಗಾಗಲೇ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್, 30 ರವರೆಗೆ ವಿಸ್ತರಿಸಿದ್ದು, ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.  9ನೇ ತರಗತಿಗೆ ಅರ್ಜಿ ಸಲ್ಲಿಸುವವರು ಕೊಡಗು ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಪಾಲಕರು ಕೊಡಗು ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿಯೂ ಕೂಡ ಕೊಡಗು ಜಿಲ್ಲೆಯಲ್ಲೇ ಓದುತ್ತಿರಬೇಕು. ಅಭ್ಯರ್ಥಿ ದಿನಾಂಕ 01/05/2010 ರಿಂದ 31/07/2012 ರೊಳಗೆ ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ಪರೀಕ್ಷೆಯು 2025 ರ ಫೆಬ್ರವರಿ, 08 ರಂದು ನಡೆಯಲಿದೆ. 11 ನೇ…

Read More

ಮಡಿಕೇರಿ NEWS DESK ಅ.6 : ಕಿತ್ತೂರು ಉತ್ಸವ ಪ್ರಯುಕ್ತ ವಿಜಯ ಜ್ಯೋತಿ ರಥಯಾತ್ರೆಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಬರಮಾಡಿಕೊಂಡರು. ಕಿತ್ತೂರು ಜ್ಯೋತಿ ರಥಯಾತ್ರೆಗೆ ಪುಷ್ಪನಮನ ಸಲ್ಲಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಅವರು ಬೀಳ್ಕೊಟ್ಟರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಯಯ್ಯ, ಶಿರಸ್ತೆದಾರ ದೇವರಾಜು, ಮಂಜುನಾಥ್ ಇತರರು ಇದ್ದರು.

Read More

ಮಡಿಕೇರಿ NEWS DESK ಅ.6 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ನಾಲ್ಕನೇ ದಿನವಾದ ಇಂದು ವಿಶೇಷ ಖಾದ್ಯಗಳ ಅಲಂಕಾರ ಮಾಡಲಾಯಿತು. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ.

Read More

ಮಡಿಕೇರಿ NEWS DESK ಅ.5 : ವರ್ಣರಂಜಿತವಾಗಿ ನಡೆದ ಮಡಿಕೇರಿ ಮಕ್ಕಳ ದಸರಾದಲ್ಲಿ ಆಯೋಜಿಸಲಾಗಿದ್ದ ಛದ್ಮವೇಷ ಸ್ಪರ್ಧೆಯಲ್ಲಿ 5 ರಿಂದ 7 ನೇ ತರಗತಿ ವಿಭಾಗದಲ್ಲಿ ಹಾಕತ್ತೂರು ಗ್ರಾಮದ ವರ್ಷಿತ ಹೆಚ್.ವಿ ಪ್ರಥಮ ಬಹುಮಾನ ಗೆದ್ದಿದ್ದಾಳೆ. ವೆಂಕಟೇಶ್ ಹಾಗೂ ವನಿತಾ ದಂಪತಿಯ ಪುತ್ರಿ ವರ್ಷಿತ ಶಿಲಾ ಬಾಲಿಕೆ ವೇಷ ಧರಿಸಿ ಪ್ರೇಕ್ಷಕರ ಹಾಗೂ ತೀರ್ಪುಗಾರರ ಮೆಚ್ಚುಗೆಗೆ ಪಾತ್ರಳಾದಳು.

Read More