ಮಡಿಕೇರಿ NEWS DESK ಅ.5 : ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ 79ಎ, 79ಬಿ ದುರುಪಯೋಗವಾಗುತ್ತಿದ್ದು, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ಮೂಲಕ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ಆರ್ಥಿಕ ಅಪರಾಧಿಗಳು ಹಾಗೂ ಉದ್ಯಮಪತಿಗಳು ಕೊಡವಲ್ಯಾಂಡ್ ನ ಪರಿಸರವನ್ನು ಸಂಪೂರ್ಣ ನಾಶ ಮಾಡುತ್ತಿದ್ದಾರೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ತಿತಿಮತಿಯಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ಕಪ್ಪು ಹಣ ಹೊಂದಿರುವವರು ವಿಲ್ಲಾ, ಟೌನ್ ಶಿಪ್ ಗಳ ನಿರ್ಮಾಣದಲ್ಲಿ ತೊಡಗಿರುವ ಉದ್ಯಮಪತಿಗಳು ಹಾಗೂ ಬಂಡವಾಳಶಾಹಿಗಳು ಇಡೀ ಕೊಡಗಿನಲ್ಲಿ ವ್ಯಾಪಿಸಿದ್ದು, ಪಾಕೃತಿಕ ಕೊಡುಗೆಗಳನ್ನು ಆವರಿಸಿಕೊಂಡಿದ್ದಾರೆ. ಸರ್ಕಾರ ಆದಾಯವನ್ನಷ್ಟೇ ಗುರಿ ಮಾಡಿಕೊಂಡು ಪವಿತ್ರ ಕೊಡವಲ್ಯಾಂಡ್ ನ್ನು ಮೋಜು, ಮಸ್ತಿಗಾಗಿ ಬಿಟ್ಟುಕೊಡುತ್ತಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದರು. ಕೊಡಗಿನಲ್ಲಿ ಪ್ರವಾಸೋದ್ಯಮವನ್ನು ಬೂಸ್ಟ್ ಮಾಡುವುದಾಗಿ ಜಿಲ್ಲಾಡಳಿತ ಹೇಳಿಕೆ ನೀಡುತ್ತಿದೆ.…
ಲೇಖಕ: admin
ಮಡಿಕೇರಿ ಅ.5 NEWS DESK : ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಜಿಲ್ಲಾ ಸಹಕಾರ ತರಬೇತಿ ಕೇಂದ್ರದ ವಿದ್ಯಾರ್ಥಿಗಳೊಂದಿಗೆ ಸಹಕಾರ ಸಂಘದ ವಿಷಯಗಳ ಕುರಿತಾದ ಸಂವಾದ ಕಾರ್ಯಕ್ರಮವು ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್, ಸಹಕಾರ ಸಂಘದ ಬೆಳೆವಣಿಗೆ, ಆಡಳಿತ ಮಂಡಳಿಯ ಮುಖೇನ ಸಂಘದ ಅಭಿವೃದ್ಧಿಗೆ ಹಮ್ಮಿಕೊಳ್ಳುವ ವಿವಿಧ ಯೋಜನೆ, ಸಹಕಾರ ತತ್ವದ ನಿಯಮಾನುಸಾರ ಕೈಗೊಳ್ಳುವ ವಿಷಯಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಹಾಜರಿದ್ದ ಜಿಲ್ಲಾ ಸಹಕಾರ ತರಬೇತಿ ಕೇಂದ್ರದ ವಿದ್ಯಾರ್ಥಿಗಳ ಸಹಕಾರ ಸಂಘದ ಅಭಿವೃದ್ಧಿಗೆ ಪೂರಕವಾದ ಪ್ರಶ್ನೆಗಳಿಗೆ ಮತ್ತು ಸಹಕಾರ ಇಲಾಖೆಗೆ ಸಂಬಂಧಿಸಿದಂತೆ ಸಂವಾದದಲ್ಲಿ ಕೇಳಿದ ಪ್ರಶ್ನೆಗಳಿಗೆ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ನಿರ್ದೇಶಕರಾದ ನಾಗರಾಜು, ಕೆ.ಪಿ.ರಾಜು, ಕೆ.ಬಿ.ರಾಮಚಂದ್ರ, ಜಯಶ್ರೀ, ಎಸ್.ಎಸ್.ಕೃಷ್ಣ, ಜಿಲ್ಲಾ ಸಹಕಾರ ತರಬೇತಿ ಕೇಂದ್ರ ಪ್ರಾಂಶುಪಾಲೆ ಡಾ.ರೇಣುಕಾ, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಪಿ.ಮೀನಾ,…
ಮಡಿಕೇರಿ ಅ.5 NEWS DESK : ಮಡಿಕೇರಿ ದಸರಾದಲ್ಲಿ ಅ.6 ರಂದು ಬೆಳಗ್ಗೆ 10 ಗಂಟೆಗೆ ಕಾಫಿ ದಸರಾ ಎಂಬ ವಿನೂತನ ಕಾಯ೯ಕ್ರಮಕ್ಕೆ ಚಾಲನೆ ದೊರಕುತ್ತಿದೆ, ಶಾಸಕ ಡಾ.ಮಂತರ್ ಗೌಡ ಮಾಗ೯ದಶ೯ನದಲ್ಲಿ ದಸರಾ ಸಾಂಸ್ಕೃತಿಕ ಸಮಿತಿಯು ಜಿಲ್ಲಾಧಿಕಾರಿ ಮತ್ತು ನಗರ ದಸರಾ ಸಮಿತಿ ಸಹಯೋಗದಲ್ಲಿ ಕಾಫಿ ದಸರಾಕ್ಕೆ ಸವ೯ಸಿದ್ದತೆ ಕೈಗೊಂಡಿದೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ.ಮಾಹಿತಿ ನೀಡಿದ್ದಾರೆ. ಈ ವಷ೯ದಿಂದ ಕಾಫಿ ದಸರಾ ಎಂಬ ವಿನೂತನ ಕಾಯ೯ಕ್ರಮವನ್ನು ಜಾರಿಗೊಳಿಸಲಾಗುತ್ತಿದ್ದು ಅ.6 ಮತ್ತು 7 ರಂದು ಆಯೋಜಿತ ಕಾಫಿ ದಸರಾದಲ್ಲಿ ಕಾಫಿ ಮತ್ತು ಇತರ ಕೃಷಿಗೆ ಸಂಬಂಧಿಸಿದಂತೆ ಅನೇಕ ಮಾಹಿತಿ ಕೖಷಿಕರಿಗೆ ದೊರಕಲಿದೆ, ಜಿಲ್ಲೆಯ 12 ಮಂದಿ ಸಾಧಕ ಕೖಷಿಕರನ್ನೂ ಕಾಫಿ ದಸರಾ ಸಂದಭ೯ ಸನ್ಮಾನಿಸಿ ಗೌರವಿಸಲಾಗುತ್ತಿದೆ. ಕಾಫಿ ದಸರಾಕ್ಕೆ ಕಾಫಿ ಮಂಡಳಿ, ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್, ಕೊಡಗು ಪ್ಲಾಂಟಸ್೯ ಅಸೋಸಿಯೇಷನ್ ಸೇರಿದಂತೆ ಕಾಫಿ ವಲಯದಿಂದ ಉತ್ತಮ ಸ್ಪಂದನ ದೊರಕಿದೆ, ಈಗಾಗಲೇ 32 ಮಳಿಗೆಗಳು ಭತಿ೯ಯಾಗಿದ್ದು, ಕಾಫಿ, ಹೈನುಗಾರಿಕೆ,…
ಮಡಿಕೇರಿ ಅ.5 NEWS DESK : ತಾವೊಬ್ಬ ಪರಿಶುದ್ಧ ರಾಜಕಾರಣಿ ಎಂದು ಹೇಳಿಕೊಂಡೇ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆತ್ಮಸಾಕ್ಷಿ ಇದ್ದರೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನದ ಸಹ ಸಂಚಾಲಕ ಪ್ರತಾಪ್ ಸಿಂಹ ನಾಯಕ್ ಒತ್ತಾಯಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಗರಣಗಳು ನಡೆಯುತ್ತಿವೆಯೇ ಹೊರತು ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮ, ಎಸ್‍ಸಿ, ಎಸ್‍ಟಿ ಅನುದಾನ ದುರ್ಬಳಕೆ ಸೇರಿದಂತೆ ಮುಡಾ ಹಗರಣವೂ ಬೆಳಕಿಗೆ ಬಂದಿದೆ. ಅಧಿವೇಶನದಲ್ಲಿ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡದ ಸಿಎಂ ಪಲಾಯನವಾದ ಮಂಡಿಸಿದ್ದಾರೆ. ತಾವೊಬ್ಬ ಪರಿಶುದ್ಧ ರಾಜಕಾರಣಿ ಎಂದು ಹೇಳಿಕೊಳ್ಳುತ್ತಿದ್ದ ಸಿದ್ದರಾಮಯ್ಯ ಅವರು ಕಳೆದ 40 ವರ್ಷಗಳಿಂದ ಮುಖವಾಡದ ರಾಜಕಾರಣ ಮಾಡಿದ್ದಾರೆ ಎನ್ನುವುದು ಇದೀಗ ಸಾಬೀತಾಗಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿಗಳು ರಾಜೀನಾಮೆ ನೀಡುವಲ್ಲಿಯವರೆಗೆ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದರು.…
ಮಡಿಕೇರಿ ಅ.5 NEWS DESK : ಮಡಿಕೇರಿ ನಗರ ದಸರಾ ಸಮಿತಿ ಮತ್ತು ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಆಯೋಜಿತ ಮಡಿಕೇರಿಯ ಮಕ್ಕಳ ದಸರಾದಲ್ಲಿ ವಿವಿಧ ಸ್ಪಧೆ೯ಗಳಲ್ಲಿನ ಬಹುಮಾನ ವಿಜೇತರ ಪಟ್ಟಿ ಪ್ರಕಟಗೊಂಡಿದೆ. ಮಕ್ಕಳ ಸಂತೆ :: ಎಚ್.ಎನ್.ಬೊಳ್ಳಮ್ಮ , ಎ.ಎ.ಬೊಳ್ಳಮ್ಮ , ಚೋಂದಮ್ಮ ಕೆ.ಕೆ.ಲೀನಾ ದೇಚಮ್ಮ ತಂಡ ಪ್ರಥಮ, ಶೀತಲ್ ಎ.ಬಿ, ಪೂಣ೯ಶ್ರೀ ಕೆ.ಪಿ, ತಂಡ ದ್ವಿತೀಯ, ಮನ್ನಿತ್ ಎಂ.ಎಂ. ಮತ್ತು ಲಿಪಿಕ ತಂಡ ತೃತೀಯ, ರಕ್ಷಿತ್ ಮತ್ತು ತಾಂಜಿಲ ತಂಡ ಚತುಥ೯, ಲಾಸ್ಯ ಮೊನಿಕಾ ಮತ್ತು ಪ್ರೇಕ್ಷಾ ತಂಡ ಐದನೇ ಬಹುಮಾನ ಕ್ಲೇಮಾಡೆಲಿಂಗ್ ಸ್ಪಧೆ೯ಗಳು :: (5 ರಿಂದ 7 ನೇ ತರಗತಿ ವಿಭಾಗ) :: ಪ್ರಥಮ – ಸದನ್ ಗೌಡ ಬಿ.ಆರ್, ದ್ವಿತೀಯ ವಿಷ್ಣು ಎಂ.ಎಸ್, ತೃತೀಯ – ಯಶ್ವಿನ್ ಆರ್, ಸಮದಾನಕರ ಬಹುಮಾನಗಳು – ಸಾಲಿಯಾ ಐ.ಎ, ಮತ್ತು ಆಧ್ಯಾ ಎಂ.ಎಸ್. ( 8 ರಿಂದ 10 ನೇ ತರಗತಿ ವಿಭಾಗ) :: …
ವಿರಾಜಪೇಟೆ ಅ.5 NEWS DESK : ವಿದ್ಯಾರ್ಥಿ ಜೀವನವು ಅಮೂಲ್ಯವಾಗಿದ್ದು, ಅದನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟರು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದ ಆರಂಭವು ಶಾಲಾ ಕಾಲೇಜುಗಳಿಂದಲೇ ಆರಂಭವಾಗುತ್ತದೆ. ಅಂದರೆ ಇಂದಿಗೂ ಕಾಲೇಜಿನಲ್ಲಿ ಚುನಾವಣೆಯ ಮೂಲಕ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತಿರುವುದು ಸಂತಸದ ವಿಚಾರವಾಗಿದೆ ಎಂದರು. ವಿದ್ಯಾರ್ಥಿ ಜೀವನದಲ್ಲಿ ಪಠ್ಯೇತರ ಚಟುವಟಿಕೆಯಲ್ಲಿರುವ ಸ್ನೇಹ, ಭಾಂದವ್ಯ, ವಾತ್ಸಲ್ಯ ಮತ್ತೆ ಸಿಗುವುದಿಲ್ಲ ಎಂದರು. ಎಲ್ಲರನ್ನೂ ಸಮಾನತೆಯಿಂದ ಕಾಣುವ ಮೂಲಕ ಸಮಾಜದಲ್ಲಿ ಮಾನವೀಯ ಮೌಲ್ಯಗಳೊಂದಿಗೆ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಿ ಬದುಕನ್ನು ಸಾರ್ಥಕ ಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಸುರೇಶ್ ಅಲೆಟ್ಟಿ ಮಾತನಾಡಿ, ವಿದ್ಯಾರ್ಥಿ ಎಂದರೇ ಗುರಿಯನ್ನು ನಿಭಾಯಿಸುವ ವ್ಯವಸ್ಥೆ. ಇಲ್ಲಿ ಕ್ರಿಯಾಶೀಲ ವ್ಯಕ್ತಿತ್ವವನ್ನು ವ್ಯಕ್ತಪಡಿಸುವ ವೇದಿಕೆಯೇ ಕಾಲೇಜು. ಇದಕ್ಕೆ ವೇದಿಕೆ ಒದಗಿಸುವುದು…
ಮಡಿಕೇರಿ ಅ.5 NEWS DESK : ನಗರ ದಸರಾ ಸಮಿತಿ ವತಿಯಿಂದ ಅ.6 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಮೈದಾನ ಕಲಾ ಸಂಭ್ರಮ ವೇದಿಕೆಯಲ್ಲಿ ಮೊದಲ ವರ್ಷದ ಕಾಫಿ ದಸರಾ ನಡೆಯಲಿದೆ. ಕಾಫಿ, ಕೃಷಿ ಸಂಬಂಧಿತ ಉಪಯುಕ್ತ ಮಾಹಿತಿಯುಳ್ಳ ಪ್ರದರ್ಶನ ಮಳಿಗೆಗಳು, ಕಾಫಿ, ವಿವಿಧ ಕೃಷಿ ಸಂಬಂಧಿತ ವಿಚಾರ ಸಂಕಿರಣ ನಡೆಯಲಿದೆ ಎಂದು ದಸರಾ ಸಮಿತಿ ತಿಳಿಸಿದೆ.
ಮಡಿಕೇರಿ ಅ.5 NEWS DESK : ಪುಟಾಣಿ ಮಕ್ಕಳ ಸುಪ್ತ ಪ್ರತಿಭೆಯ ಅನಾವರಣದೊಂದಿಗೆ, ಸಾಮಾಜಿಕ ವ್ಯವಹಾರಗಳ ಕುರಿತು ಅವರಲ್ಲಿ ಅರಿವು ಮೂಡಿಸುವ ಮಕ್ಕಳ ಸಂತೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ‘ಮಕ್ಕಳ ದಸರಾ ಉತ್ಸವ’ದ ಸಂಭ್ರಮ ಗಾಂಧಿ ಮೈದಾನದ ಉದ್ದಗಲಕ್ಕೂ ವ್ಯಾಪಿಸಿ ಸಂತಸ ಮೂಡಿಸಿತು. ಎತ್ತ ನೋಡಿದರತ್ತ ಮಕ್ಕಳ ಕಲರವ, ಬನ್ನಿ ತರಕಾರಿ, ಸೊಪ್ಪು, ಹಣ್ಣು, ತಿಂಡಿ, ತಿನಿಸು ಪಡೆಯಿರಿ ಎಂಬುದು ಮಕ್ಕಳಿಂದ ಕೇಳಿ ಬರುತ್ತಿತ್ತು. ಇದು ನಗರದ ಗಾಂಧಿ ಮೈದಾನದಲ್ಲಿ ಶನಿವಾರ ನಡೆದ ಮಕ್ಕಳ ದಸರಾ ಸಂದರ್ಭದಲ್ಲಿ ಕೇಳಿ ಬಂದ ಕೂಗು. ಮಡಿಕೇರಿ ನಗರ ದಸರಾ ಸಮಿತಿ, ದಸರಾ ಜನೋತ್ಸವ ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಮಕ್ಕಳ ಸಂತೆ ನಡೆಯಿತು. ನಗರದ ಗಾಂಧಿ ಮೈದಾನದಲ್ಲಿ ನಡೆದ ಮಕ್ಕಳ ಸಂತೆಯಲ್ಲಿ ಮಕ್ಕಳ ವ್ಯಾಪಾರ, ವ್ಯವಹಾರ ವಹಿವಾಟು ಜೋರಾಗಿಯೇ ನಡೆಯಿತು. ಸುಮಾರು 680ಕ್ಕೂ ಹೆಚ್ಚು ವಿದ್ಯಾರ್ಥಿಗಳ ತಂಡವು ನೋಂದಣಿ ಮಾಡಿಕೊಂಡು ಮಕ್ಕಳ ಸಂತೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಪಾಲಕ್, ಮೆಂತೆ, ಸಬ್ಸಿಗೆ,…
ಮಡಿಕೇರಿ ಅ.5 NEWS DESK : ಯಾವುದೇ ಸಂದರ್ಭದಲ್ಲೂ ಶಿಕ್ಷಣದಿಂದ ವಂಚಿತರಾಗ ಬಾರದು. ಶಿಕ್ಷಣದ ಮೂಲಕವೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಹಲವಾರು ಯೋಜನೆಗಳನ್ನು ನೀಡಿದ್ದು, ಇದರ ಸದುಪಯೋಗಪಡಿಸಿಕೊಂಡು ಉನ್ನತ ಶಿಕ್ಷಣದೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಪೆರುಂಬಾಡಿ ಶಂಸುಲ್ ಉಲಮ ಕ್ಯಾಂಪಸ್ ಆವರಣದಲ್ಲಿ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿ ಟ್ರಸ್ಟ್ ಅನಾಥಾಶ್ರಮದಿಂದ ನಡೆದ ನಾಲ್ಕು ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸಂಶುಲ್ ಉಲಮ ಎಜುಕೇಶನಲ್ ಅಕಾಡೆಮಿ ಟ್ರಸ್ಟ್ ಕಳೆದ ಹಲವು ವರ್ಷಗಳಿಂದ ಬಡ ಹೆಣ್ಣು ಮಕ್ಕಳ ಭವಿಷ್ಯ ರೂಪಿಸಲು ಉನ್ನತ ಶಿಕ್ಷಣದೊಂದಿಗೆ ಉದ್ಯೋಗ ಕಲ್ಪಿಸಿ, ವಿವಾಹ ಕಾರ್ಯವು ಮಾಡುತ್ತಿರುವುದು ಮಾದರಿ ಕಾರ್ಯವಾಗಿದೆ ಎಂದು ಹೇಳಿದರು. ಎಲ್ಲಾ ವರ್ಗದ ಬಾಂಧವರು ತಮ್ಮ ಮಕ್ಕಳ ಭವಿಷ್ಯ ರೂಪಿಸಲು ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಲ್ಲಿ ಪ್ರತಿಭಾನ್ವಿತರಾಗಿ ಉನ್ನತ ಹುದ್ದೆಯೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ…
ಮಡಿಕೇರಿ ಅ.5 NEWS DESK : ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದಿಂದ `ನೈತಿಕತೆಯೇ ಸ್ವಾತಂತ್ರ್ಯ’ ಎಂಬ ಶೀರ್ಷಿಕೆಯಡಿ ರಾಷ್ಟ್ರವ್ಯಾಪಿ ನಡೆದ ರಾಷ್ಟ್ರೀಯ ಅಭಿಯಾನದ ಸಮಾರೋಪ ಸಮಾರಂಭವು ಅ.6 ರಂದು ವಿರಾಜಪೇಟೆಯಲ್ಲಿ ನಡೆಯಲಿದೆ. ವಿರಾಜಪೇಟೆಯ ಅರಮೇರಿ ಕಳಂಚೇರಿ ಮಠದಲ್ಲಿ ಅಪರಾಹ್ನ 3 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಡಾ.ಹೆಚ್.ಎಂ.ಕಾವೇರಿ ಉದ್ಘಾಟಿಸಲಿದ್ದಾರೆ. ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಜಿ ಗಣ್ಯ ಉಪಸ್ಥಿತರಿರಲಿದ್ದು, ಮಂಗಳೂರಿನ ಲುಬ್ನಾ ಝಕಿಯಾ `ನೈತಿಕತೆಯೇ ಸ್ವಾತಂತ್ರ್ಯದ ಭರವಸೆ’ ಎಂಬ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ.






