ಲೇಖಕ: admin

ಮಡಿಕೇರಿ NEWS DESK ಮೇ 8 : ಕೊಡ್ಲಿಪೇಟೆ ಬಳಿಯ ಕೋರಗಲ್ಲು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ವಿಗ್ರಹದ ಪುನರ್ ಪ್ರತಿಷ್ಠಾಪನೆ ಹಾಗೂ ದೇವಾಲಯದ ಉದ್ಘಾಟನೆ ಶುಕ್ರವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ್ದ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ ದೇವಾಲಯಗಳು ಭಾರತೀಯ ನಾಗರೀಕತೆಯ  ಸಾಂಸ್ಕ್ರತಿಕವಾದ ಕುರುಹುಗಳು. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶದಲ್ಲಿ ಸರ್ವರ ಸಹಭಾಗಿತ್ವ ಶ್ಲಾಘನೀಯವಾದುದು. ಮನುಷ್ಯನಿಂದಾಗಿರುವ ಪರಿಸರದ ಕಲುಷಿತ ವಾತಾವರಣವೇ ಇಂದಿನ ಹವಾಮಾನಗಳ ವೈರುಧ್ಯಗಳಿಗೆ ಕಾರಣವಾಗಿದೆ. ಹಾಗಾಗಿ ಇನ್ನಾದರೂ ಪರಿಸರವನ್ನು ಸಂರಕ್ಷಿಸುವ ಪಣ ತೊಡಬೇಕಿದೆ ಎಂದು ಶ್ರೀಗಳು ಕರೆಕೊಟ್ಟರು. ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಶೀರ್ವಚನದಲ್ಲಿ ಹಳ್ಳಿಗಳು ನಗರಗಳಾಗುತ್ತಿದ್ದು ಮೂಲ ಸಂಸ್ಕೃತಿ ಹಾಗೂ ಸಂಸ್ಕಾರಗಳು ನಾಶವಾಗದಂತೆ ನೋಡಿಕೊಳ್ಳಬೇಕಿದೆ. ಮಕ್ಕಳಿಗೆ ಇಂದು ಸಂಸ್ಕಾರ ತುಂಬಿದ ಶಿಕ್ಷಣ ತುಂಬಾ ಅಗತ್ಯವಿದೆ. ತಾಯಂದಿರು ಮನೆಗಳಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರಗಳನ್ನು ಕಲಿಸಲು ಕರೆಕೊಟ್ಟರು. ಸಿಡಿಗಳಲೆ ಮಠದ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಜಿಲ್ಲಾ ವೀರಶೈವ ಮಹಾಸಭಾದ ಪ್ರಧಾನ  ಕಾರ್ಯದರ್ಶಿ ಶಾಂಬಶಿವಯ್ಯ ಮಾತನಾಡಿದರು. ಗ್ರಾಮದ ದೇವಾಲಯ ಸಮಿತಿ ಅಧ್ಯಕ್ಷ ಕೆ.ಪಿ. ಮಲ್ಲಿಕಾರ್ಜುನ,…

Read More

ಮಡಿಕೇರಿ NEWS DESK ಮೇ 8 : ಹೃದಯಾಘಾತದಿಂದ ಖಾಸಗಿ ಬಸ್ ಚಾಲಕರೊಬ್ಬರು ಮೃತಪಟ್ಟಿರುವ ಘಟನೆ ಮಡಿಕೇರಿ ಸಮೀಪದ ತಾಳತ್ತಮನೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಶಿವಕುಮಾರ್ (50) ಎಂಬುವವರೇ ಮೃತ ದುರ್ದೈವಿ. ಇಂದು ಮುಂಜಾನೆ 4.45 ರ ಸುಮಾರಿಗೆ ಬಸ್ ಮಡಿಕೇರಿಯಿಂದ ಸುಳ್ಯ ಕಡೆಗೆ ಪ್ರಯಾಣ ಬೆಳೆಸಿತ್ತು. ಈ ಸಂದರ್ಭ ತಾಳತ್ತಮನೆ ಬಳಿ ಚಾಲಕ ಶಿವಕುಮಾರ್ ಗೆ ಹೃದಯಾಘಾತವಾಗಿದೆ. ನಿಯಂತ್ರಣ ಕಳೆದುಕೊಂಡ ಬಸ್ ಬಲ ಬದಿಯ ಬರೆಗೆ ವಾಲಿಕೊಂಡಿದೆ. ಬಸ್ ನಲ್ಲಿದ್ದ ಸುಮಾರು 20 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಚಾಲಕ ಶಿವಕುಮಾರ್ ಹೃದಯಾಘಾತವಾದ ಸ್ವಲ್ಪ ಹೊತ್ತಿನಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ. ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಮೇ 7 NEWSD DESK : ಹೊದ್ದೂರು ಗ್ರಾಮ ಪಂಚಾಯಿತಿಯಲ್ಲಿ ದಿಶಾ ಸಂಸ್ಥೆಯ ಸಹಯೋಗದಲ್ಲಿ ಗ್ರಾಮೀಣ ಮಕ್ಕಳಿಗೆ ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸುವ ಉದ್ದೇಶದಿಂದ ‘ಅರಿವು’ ಎಂಬ ಹೆಸರಿನಡಿ ಐದು ದಿನಗಳ ವಿಶೇಷ ಬೇಸಿಗೆ ಶಿಬಿರ ನಡೆಯಿತು. ಅರಿವು ಬೇಸಿಗೆ ಶಿಬಿರದ ಮೊದಲ ದಿನವನ್ನು “ಸಾಮಾಜಿಕ ಜವಾಬ್ದಾರಿ” ಎಂಬ ಮಹತ್ವದ ವಿಷಯದೊಂದಿಗೆ ಉತ್ಸಾಹಭರಿತವಾಗಿ ನಡೆಸಲಾಯಿತು. ಶಿಬಿರದ ಆರಂಭದಲ್ಲಿ ಮಕ್ಕಳಿಗೆ ಶಿಬಿರದ ಉದ್ದೇಶ, ನಿಯಮಗಳು ಹಾಗೂ ದಿನಚರಿಯ ಕುರಿತು ಪರಿಚಯ ನೀಡಲಾಯಿತು. ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ಬೆಳವಣಿಗೆಗೆ “ಆಲಿಸುವಿಕೆ ಮತ್ತು ಸಂವಹನದ ಮಹತ್ವ” ಕುರಿತು ಮಾರ್ಗದರ್ಶನ ನೀಡಲಾಯಿತು. ಇತರರ ಮಾತುಗಳನ್ನು ಗಮನದಿಂದ ಆಲಿಸುವುದು, ವಿನಯದಿಂದ ಮಾತನಾಡುವುದು, ಪರಸ್ಪರ ಗೌರವದಿಂದ ನಡೆದುಕೊಳ್ಳುವುದು ಎಂಬ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಲಾಯಿತು. ಗ್ರಾ.ಪಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ವಿ.ವತ್ಸಲಕುಮಾರಿ ಮಾತನಾಡಿ, ಸಾಮಾಜಿಕ ಜವಾಬ್ದಾರಿಗಳ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು. ಆಹಾರದ ಮೌಲ್ಯವನ್ನು ಅರಿತು ವ್ಯರ್ಥ ಮಾಡಬಾರದು, ನೀರನ್ನು ಸಂರಕ್ಷಿಸಬೇಕು, ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಕಾಪಾಡಬೇಕು ಹಾಗೂ ಎಲ್ಲರ ಮೇಲೂ ದಯೆ ಮತ್ತು…

Read More

ಮಡಿಕೇರಿ ಮೇ 7 NEWS DESK : ಹುಲಿ ದಾಳಿಗೆ ಹಸುವೊಂದು ಬಲಿಯಾದ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ ನಿವಾಸಿ ನಾಮೇರ ಜಯ ಎಂಬುವವರಿಗೆ ಸೇರಿದ ಹಸು ಹುಲಿ ದಾಳಿಯಿಂದ ಸಾವನ್ನಪ್ಪಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಕಾಡಾನೆ ಮತ್ತು ಹುಲಿ ದಾಳಿ ನಿರಂತರವಾಗಿದ್ದರೂ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read More

ವಿರಾಜಪೇಟೆ ಮೇ 7 NEWS DESK : ಡೊನೇಷನ್ ಹಾವಳಿ ವಿರೋಧಿಸಿ, ‘ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ’ವನ್ನು ರಚಿಸುವಂತೆ, ವಂತಿಗೆ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮಕೈಗೊಳ್ಳಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ಕರ್ನಾಟಕ ರಾಜ್ಯ ಸಮಿತಿ ರಾಜ್ಯಾದ್ಯಂತ ನೀಡಿದ ಕರೆಗೆ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಯಿತು. ವಿರಾಜಪೇಟೆ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿ ಉಪ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ಎಸ್‍ಎಫ್‍ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ಅವರು, 2026-27ನೇ ಸಾಲಿನಲ್ಲಿ ರಾಜ್ಯಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಈಗಾಗಲೇ ಪ್ರವೇಶಾತಿ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಪ್ರಾಧಿಕಾರ ಸಭೆ ಸೇರಿ, ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕಾಗಿತ್ತು. ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿಯು ಸಭೆ ಸೇರಿ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದಿರುವ ಕಾರಣ 1983ರ ಶಿಕ್ಷಣ ಕಾಯ್ದೆ ಮತ್ತು…

Read More

ವಿರಾಜಪೇಟೆ ಮೇ 7 NEWS DESK :  ಕೊಡಗಿನ ನುಡಿ ಉತ್ಸವ ಸಮಿತಿ, ಕೊಡಗು ವಿಶ್ವವಿದ್ಯಾಲಯ ಮತ್ತು ಕಾವೇರಿ ಕಾಲೇಜು ವಿರಾಜಪೇಟೆ ಇವರ ಸಹಭಾಗಿತ್ವದಲ್ಲಿ ಮೇ 26ರಂದು ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲೆ ಡಾ.ಕೆ.ಜಿ.ವೀಣಾ ಮಾಹಿತಿ ನೀಡಿದರು. ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು “ಗಡಿ ಪ್ರದೇಶಗಳ ಪಠ್ಯಕ್ರಮದಲ್ಲಿ ಕನ್ನಡ ಭಾಷಾ ಶಿಕ್ಷಣ ಸ್ವರೂಪ, ಭಾಷಾ ನೀತಿ ಹಾಗೂ ಬಹುಭಾಷಾ ವಾಸ್ತವಿಕತೆಗಳ ಮರುಚಿಂತನೆ” ಎಂಬ ಪರಿಕಲ್ಪನೆಯ ಕುರಿತು ಹಮ್ಮಿಕೊಂಡಿರುವ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದ ಉದ್ಘಾಟನೆಯನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಅಶೋಕ ಸಂಗಪ್ಪ ಆಲೂರ ರವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕಾವೇರಿ ಎಜುಕೇಷನ್ ಸೊಸೈಟಿ (ರಿ)ಯ ಅಧ್ಯಕ್ಷರಾದ ಎಂ. ಎಸ್. ಮುತ್ತಣ್ಣ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣರವರು ಭಾಗವಹಿಸಲಿದ್ದಾರೆ . ಈ ವಿಚಾರ ಸಂಕಿರಣದಲ್ಲಿ…

Read More

ಮಡಿಕೇರಿ ಮೇ 7 NEWS DESK : ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಅಧಿಕೃತ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ನೋಂದಣಿ ಪತ್ರ ಪಡೆಯದೇ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇ ಮಾಲೀಕರು ಪ್ರವಾಸೋದ್ಯಮ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ, ನೋಂದಣಿ ಪತ್ರ ಪಡೆದ ನಂತರವೇ ಹೋಂ-ಸ್ಟೇಗಳನ್ನು ನಡೆಸುವಂತೆ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಸೂಚಿಸಿದ್ದಾರೆ. ನೋಂದಣಿ ಮಾಡಿಸದೇ ಅನಧಿಕೃತವಾಗಿ ಹೋಂ-ಸ್ಟೇಗಳು ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದಲ್ಲಿ ಅಂತಹ ಹೋಂ-ಸ್ಟೇಗಳ ವಿರುದ್ಧ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ-2015ರಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೋಂ-ಸ್ಟೇ ನಡೆಸುವ ಮಾಲೀಕರು ಕಡ್ಡಾಯವಾಗಿ ಷರತ್ತು ಪಾಲಿಸುವುದು. ಎಲ್ಲಾ ಅಸ್ತಿತ್ವದಲ್ಲಿರುವ ಮತ್ತು ಹೊಸ ಹೋಂಸ್ಟೇಗಳು ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ನೋಂದಾಯಿತ ಹೋಂಸ್ಟೇಗಳ ಪಟ್ಟಿಯನ್ನು ಪ್ರವಾಸೋದ್ಯಮ ಇಲಾಖೆಯ ವೆಬ್‍ಸೈಟ್ ನಲ್ಲಿ ಪ್ರದರ್ಶಿಸಲಾಗುತ್ತದೆ. ಸಮಯದ ಹಂಚಿಕೆಯ ಆಧಾರದ ಮೇಲೆ ಯಾವುದೇ ಕೊಠಡಿಗಳನ್ನು ಬಾಡಿಗೆಗೆ ನೀಡುವಂತಿಲ್ಲ. ಹೋಂ-ಸ್ಟೇ ಪ್ರವೇಶಿಸುವ…

Read More

ಸುಂಟಿಕೊಪ್ಪ ಮೇ 6 NEWS DESK : ಸಂತ ಅಂತೋಣಿ ದೇವಾಲಯದ ವಾರ್ಷಿಕ ಮಹೋತ್ಸವವು ಮೇ 10 ರವರೆಗೆ ನಡೆಯಲಿದೆ ಎಂದು ಧರ್ಮಗುರುಗಳಾದ ವಿಜಯಕುಮಾರ್ ತಿಳಿಸಿದ್ದಾರೆ. ಧ್ವಜಾರೋಹಣ ನೇರವೇರಿಸುವ ಮೂಲಕ ವಾರ್ಷಿಕೋತ್ಸವಕ್ಕೆ ಮೈಸೂರು ಧರ್ಮಕ್ಷೇತ್ರದ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಯಾದ ರೇ.ಫಾ. ಎಡ್ವರ್ಡ್ ವಿಲಿಯಂ ಸಲ್ಡಾನಾ ಚಾಲನೆ ನೀಡಿದರು. ಬಲಿಪೂಜೆ ಹಾಗೂ ಆರಾಧನೆಯನ್ನು ಕೆ.ಆರ್.ಪೇಟೆಯ ಬಾಲ ಯೇಸುವಿನ ದೇವಾಲಯದ ಧರ್ಮಗುರುಗಳಾದ ಟಿ.ಪೌಲೂಸ್ ಹಾಗೂ ದೇವಾಲಯದ ಧರ್ಮಗುರುಗಳಾದ ವಿಜಯಕುಮಾರ್ ಅವರುಗಳು ನೆರವೇರಿಸಿದರು. ಮೇ 9 ರಂದು ಮಕ್ಕಳಿಗೆ ನೂತನ ಪರಮ ಪ್ರಸಾದ ಸಂಸ್ಕಾರ ಮತ್ತು ಅಡಂಬರ ದಿವ್ಯ ಬಲಿಪೂಜೆಯನ್ನು ಏಕಾರ್ಡ್ ಎಸ್ಟೇಟ್ ಸಹಾಯಕ ಧರ್ಮಗುರುಗಾಳದ ಚಾಲ್ರ್ಸ್ ಪೆರಿಯನಾಗಮ್ ಅವರು ನೇರವೇರಿಸಲಿದ್ದಾರೆ. ಮೇ 10 ರಂದು ಸಂಜೆ 5.30 ಗಂಟೆಗೆ ಸಂತ ಅಂತೋಣಿಯವರ ಹಬ್ಬದ ಅಂಗವಾಗಿ ಅಡಂಬರ ಗಾಯನ ಬಲಿಪೂಜೆಯನ್ನು ಮೈಸೂರು ಧರ್ಮಕ್ಷೇತ್ರ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ. ಎಸ್‍ಜೆ ಫ್ರಾನ್ಸಿಸ್ ಸೆರಾವೋ ನೇರವೇರಿಸಲಿದ್ದಾರೆ. ಪಾಲಕ ಸಂತ ಅಂತೋಣಿಯವರ ತೆರಿನ ಮೆರವಣಿಗೆಯ ನಂತರ ಪರಮ ಪ್ರಸಾದ ಆರಾಧನೆಯನ್ನು ಮೈಸೂರು…

Read More

ಮಡಿಕೇರಿ ಮೇ 8 NEWS  DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ ಹಿರಿಯ ಪತ್ರಕರ್ತರು, ಸಂಘದ ಮಾಜಿ ಅಧ್ಯಕ್ಷರಾದ ಚಿ.ನಾ.ಸೋಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದಲ್ಲಿ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿರುವ ಸೋಮೇಶ್ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸೋಮೇಶ್ ಅವರು, ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿದ ಕಾರ್ಯನಿರತ ಪತ್ರಕರ್ತರ ಸಂಘ ಇಂದಿಗೂ ಗಟ್ಟಿಯಾಗಿ ನೆಲೆಯೂರಿದೆ. ಈ ಸಂಘದ ಅಧ್ಯಕ್ಷನಾಗಿ ಕೆಲಸ ಮಾಡಲು ಅವಕಾಶ ದೊರೆತ್ತಿದ್ದು, ನನ್ನ ಸೌಭಾಗ್ಯವಾಗಿದೆ. ನಿವೃತ್ತಿ ನಂತರ ಸಂಘದವರು ಮನೆಗೆ ಬಂದು ಗೌರವಿಸುತ್ತಿರುವುದು ಹೆಮ್ಮೆ ಮೂಡಿಸುವುದರೊಂದಿಗೆ ಹಳೆಯ ನೆನೆಪುಗಳನ್ನು ಮೆಲುಕು ಹಾಕುವಂತೆ ಮಾಡಿದೆ ಎಂದರು. ಸಾಕಷ್ಟು ಏಳುಬೀಳುಗಳ ನಡುವೆ ಕಾರ್ಯನಿರತ ಪತ್ರಕರ್ತರ ಸಂಘ ಗಟ್ಟಿಯಾಗಿ ನಿಂತಿದೆ. 1982ರಲ್ಲಿ ಬೆಂಗಳೂರಿನಲ್ಲಿ ವಿಕ್ರಮ್ ಪತ್ರಿಕೆಯಿಂದ ವೃತ್ತಿ ಜೀವನ ಆರಂಭಿಸದ ನಾನು ನವಶಕ್ತಿ ಪತ್ರಿಕೆಯಲ್ಲಿ ಕೆಲಸ ಮಾಡಿದ…

Read More

ಗೋಣಿಕೊಪ್ಪ ಮೇ 7 NEWS DESK : ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಅವಭೃತ ಸ್ನಾನ, ಭಗಂಡೇಶ್ವರ ದೇವಸ್ಥಾನದಲ್ಲಿ ದೇವಿಯ ವಸಂತೋತ್ಸವದೂಂದಿಗೆ ತಾವೂರು ಮಹಿಷಾಸುರ ಮರ್ದಿನಿ ದೇವಿಯ ವಾರ್ಷಿಕ ಉತ್ಸವ ನೆರವೇರಿತು. 8 ದಿನಗಳು ನಡೆದ ಉತ್ಸವದಲ್ಲಿ ಅಂದಿ ಬೆಳಕು, ಮನೆಯಿಂದ ಭಂಡಾರತರುವುದು, ದೇವಿಬಲಿ ಉತ್ಸವ, ದೇವರ ದರ್ಶನ, ನೃತ್ಯಬಲಿ, ವಸಂತೋತ್ಸವ, ನೆರಪಿನ ಉತ್ಸವ, ಭಂಡಾರಕಾಣಿಕೆ, ಪ್ರಸಾದ ವಿತರಣೆ, ದೇವರ ಹರಕೆ ಸೇವೆಗಳು, ಅಂಬುಕಾಯಿ, ಎತ್ತು ಪೊರಾಟ, ಬೇಡುಕೋಲ, ಹರಕೆ ಸೇವೆಗಳು, ಶಯನೋತ್ಸವ, ಶುದ್ಧ ಕಲಸ, ಕಲಶಾಭಿಷೇಕ, ಮಂತ್ರಾಕ್ಷತೆ, ನಡೆಯಿತು. ಸಾವಿರಾರು ವರ್ಷಗಳ ಹಿಂದೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ರೈತಾಪಿ ಕುಟುಂಕ್ಕೆ ಬೆಳಕಿನ ಆಕಾರದ ಶಕ್ತಿಯೊಂದು ಗೋಚರಿಸಿದೆ. ಅ ಬೆಳಕನ್ನು ಹಿಂಬಾಲಿಸಿ ಹೋದಾಗ ಮಣ್ಣಿನಲ್ಲಿ ಹುದು ಹೋಗಿದ್ದದೇವಿಯ ಮೂರ್ತಿ ವಿಗ್ರಹಒಂದು ಕಾಣಿಸುತ್ತದೆ. ವಿಶೇಷವಾಗಿ ವಿಗ್ರಹದ ಪಾದದ ಅಡಿಯಲ್ಲಿ ಮಹಿಷಾಸುರ ಸಂಹಾರದದೃಶ್ಯವೂ ಅಡಗಿರುತ್ತದೆ. ಹೀಗಾಗಿ ಈ ವಿಗ್ರಹಕ್ಕೆ ಮಹಿಷಾಸುರ ಮರ್ದಿನಿ ಎಂಬ ಹೆಸರನ್ನ ನೀಡಿ, ವಿಗ್ರಹ ಸಿಕ್ಕಿದ ಸ್ಥಳದಲ್ಲಿ 4 ಮರದ ಕಂಬಗಳನ್ನು ನೆಟ್ಟು…

Read More