ಲೇಖಕ: admin

ಸೋಮವಾರಪೇಟೆ ಅ.4 NEWS DESK : ಸೋಮವಾರಪೇಟೆ ಶ್ರೀ ಸೋಮೇಶ್ವರ ದೇವಾಲಯಕ್ಕೆ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಕ್ತಿಪಾರ್ವತಿ ಉತ್ಸವ ಮೂರ್ತಿಯನ್ನು ಆನೆಕೆರೆಯಲ್ಲಿ ಗಂಗೆ ಪೂಜೆಯ ನಂತರ ಮೆರವಣಿಗೆಯಲ್ಲಿ ತಂದು ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ಅರ್ಚಕ ಚಿತ್ರಕುಮಾರ್ ಭಟ್ ನೇತೃತ್ವದಲ್ಲಿ ಪಾರ್ವತಿ ದೇವಿಗೆ ಪುಷ್ಪಾಲಂಕಾರ, ಮಹಾ ಮಂಗಳಾರತಿ ನಡೆಯಿತು.

Read More

ಮಡಿಕೇರಿ ಅ.4 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯು ಶರನ್ನವರಾತ್ರಿಯ ಎರಡನೇ ದಿನವಾದ ಇಂದು ಹೂವಿನ ಅಲಂಕಾರದಲ್ಲಿ ಗಮನ ಸೆಳೆಯುತ್ತಿದ್ದಾರೆ. ಅ.5 ರಂದು ಬೇವಿನ ಅಲಂಕಾರ ನಡೆಯಲಿದೆ.

Read More

ಸೋಮವಾರಪೇಟೆ ಅ.4 NEWS DESK : ಲಯನ್ಸ್ ಕ್ಲಬ್ ಸೋಮವಾರಪೇಟೆ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರೀಗಂಧ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ ಸೋಮಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್.ಎನ್.ಮಂಜುನಾಥ್, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ರತ್ನಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಟಿ.ಕೆ.ಬಸವರಾಜು ಹಾಗೂ ಹೊಸ ತೋಟ ಗ್ರಾಮದಲ್ಲಿ ಲಯನ್ಸ್ ಕ್ಲಬ್ ಸಂಸ್ಥೆಯಿಂದ ನಿರ್ಮಿಸಿದ ಪರಿಸರ ಸ್ನೇಹಿ ಚಿತಗಾರ ಕಟ್ಟಡವನ್ನು ನಿರ್ಮಿಸಿಕೊಟ್ಟ ರಾಘವೇಂದ್ರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸೋಮಾವಾರಪೇಟೆ ಲಯನ್ಸ್ ಕ್ಲಬ್ ಅಧ್ಯಕ್ಷ ಸಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಖಜಾಂಚಿ ಜಗತ್ ಪ್ರಧಾನ್, ಮಾಜಿ ಅಧ್ಯಕ್ಷ ಎ.ಎಸ್.ಮಹೇಶ್, ಹರೀಶ್, ರೋಹಿತ್, ಜೆ.ಸಿ.ಶೇಖರ್, ನಿರ್ವಾಣಿಶೆಟ್ಟಿ, ಸಿ.ಕೆ.ಮಲ್ಲಪ್ಪ ಇದ್ದರು.

Read More

ಸೋಮವಾರಪೇಟೆ ಅ.4 NEWS DESK : ಸೋಮವಾರಪೇಟೆ ತಾಲ್ಲೂಕಿನಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪರಿಸರ ಸಂರಕ್ಷಣಾ ಕ್ಷೇತ್ರದಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಕೆಲಸ ಮಾಡುತ್ತಿರುವ ‘ನಾವು ಪ್ರತಿಷ್ಠಾನ ’ ಎಂಬ ಸರ್ಕಾರೇತರ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಮಾಹಿತಿಯನ್ನೊಳಗೊಂಡ ವದ್ದಳ್ಳಿ ಪ್ರಕಾಶನದ ಕಿರು ಪುಸ್ತಕವನ್ನು ಸಾಮಾಜಿಕ ಕಾರ್ಯಕರ್ತೆ ಮೋನಿಕಾ ಬಿಡುಗಡೆಗೊಳಿಸಿದರು. ಸಂಸ್ಥೆಯ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಾವು ಪ್ರತಿಷ್ಠಾನದ ಸಂಸ್ಥಾಪಕ ಗೌತಮ್ ಕಿರಗಂದೂರು, ಕಾರ್ಯಕಾರಿ ನಿರ್ದೇಶಕಿ ಸುಮನ್ ಮ್ಯಾಥ್ಯೂ, ಸದಸ್ಯರುಗಳಾದ ಪೊನ್ನಪ್ಪ, ರವಿಕುಮಾರ್, ಪ್ರಜ್ವಲ್, ಕಾರ್ತಿಕ್ ಕಿರಗಂದೂರು ಇದ್ದರು.

Read More

ಸೋಮವಾರಪೇಟೆ ಅ.4 NEWS DESK : ಶಾಂತಳ್ಳಿ-ಬೆಟ್ಟದಳ್ಳಿಯಲ್ಲಿರುವ ಶ್ರೀ ಕುಮಾರಲಿಂಗೇಶ್ವರ ವಿದ್ಯಾಸಂಸ್ಥೆಯಲ್ಲಿ ಸೇವೆ ಸಲ್ಲಿಸಿ, ಬೇರೆಡೆಗೆ ವರ್ಗಾವಣೆಯಾದ ಶಿಕ್ಷಕರು ಹಾಗೂ ಸಿಬ್ಬಂದಿಗಳನ್ನು ಸಂಸ್ಥೆ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಕುಮಾರಲಿಂಗೇಶ್ವರ ಸರ್ಕಾರಿ ಶಾಲೆಯ ಸಭಾಂಗಣದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕೆ.ಕೆ.ಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ವಾರ್ಷಿಕ ಮಹಾಸಭೆಯಲ್ಲಿ, ಪ್ರೌಢಶಾಲೆಯಲ್ಲಿ ಶಿಕ್ಷಕರುಗಳಾಗಿ ಸೇವೆ ಸಲ್ಲಿಸಿದ ಉಷಾಕುಮಾರಿ, ಪರಶುರಾಮ, ಕುಶಾಲಪ್ಪ, ಸಿಬ್ಬಂದಿಗಳಾದ ದೀಪಕ್, ರಘು, ವಿಜಯ ಅವರುಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕಾರ್ಯಪ್ಪ, ಬಾತ್ಮೀದಾರ ಸಂಪತ್, ನಿರ್ದೇಶಕ ಅರುಣ್ ಕೊತ್ನಳ್ಳಿ, ಮಾಜಿ ಎಂ.ಎಲ್.ಸಿ. ಮೇದಪ್ಪ ಸೇರಿದಂತೆ ನಿರ್ದೇಶಕರುಗಳು ಇದ್ದರು. ಶ್ರೀಕುಮಾರಲಿಂಗೇಶ್ವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲೀಲಾವತಿ, ಶಿಕ್ಷಕರುಗಳಾದ ಭವ್ಯ, ಶ್ವೇತಾ, ನಿರ್ಮಲ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು.

Read More

ಮಡಿಕೇರಿ ಅ.3 NEWS DESK : ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದಿಂದ `ನೈತಿಕತೆಯೇ ಸ್ವಾತಂತ್ರ್ಯ’ ಎಂಬ ಶೀರ್ಷಿಕೆಯಡಿ ರಾಷ್ಟ್ರವ್ಯಾಪಿ ನಡೆದ ರಾಷ್ಟ್ರೀಯ ಅಭಿಯಾನದ ಸಮಾರೋಪ ಸಮಾರಂಭವು ಅ.6 ರಂದು ವಿರಾಜಪೇಟೆಯಲ್ಲಿ ನಡೆಯಲಿದೆ ಎಂದು ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಝೈನಬಾ ರೆಹಮಾನ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯ ಅರಮೇರಿ ಕಳಂಚೇರಿ ಮಠದಲ್ಲಿ ಅಪರಾಹ್ನ 3 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಡಾ.ಹೆಚ್.ಎಂ.ಕಾವೇರಿ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಜಿ ಗಣ್ಯ ಉಪಸ್ಥಿತರಿರಲಿದ್ದು, ಮಂಗಳೂರಿನ ಲುಬ್ನಾ ಝಕಿಯಾ `ನೈತಿಕತೆಯೇ ಸ್ವಾತಂತ್ರ್ಯದ ಭರವಸೆ’ ಎಂಬ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಮಾಜದಲ್ಲಿ ಜಾಗೃತಿ ಮೂಡಿಸಲು ಮತ್ತು ಪ್ರಸಕ್ತ ಸ್ಥಿತಿಯಲ್ಲಿ ಸುಧಾರಣೆ ತರಲು ಅಭಿಯಾನದ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಕೊಡಗಿನಲ್ಲಿ ಮಹಿಳಾ ಸಮಾವೇಶ, ಗಣ್ಯ ವ್ಯಕ್ತಿಗಳ ಭೇಟಿ-ಸಂದರ್ಶನ, ರಸಪ್ರಶ್ನೆ, ಪ್ರಬಂಧ ಸ್ಪರ್ಧೆ, ಮನೆ ಮನೆಗೆ…

Read More

ಮಡಿಕೇರಿ ಅ4 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮಾವಾದ) ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ.ರಾಜು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಈ ದೇಶದ ಮೂಲ ನಿವಾಸಿಗಳು, ಆದರೆ ನಮ್ಮನ್ನು ಆಳುವ ಸರ್ಕಾರ ಶೋಷಿತ ಸಮುದಾಯಗಳ ಅಭಿವೃದ್ಧಿ, ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಒತ್ತು ನೀಡುವುದನ್ನು ಬಿಟ್ಟು ಎಲ್ಲಾ ಸೌಲಭ್ಯಗಳನ್ನು ಕಸಿದುಕೊಳ್ಳುತ್ತಿದೆ. ದಲಿತರ ಹಿತ ಕಾಯುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾಗುತ್ತಿದೆ ಎಂದು ಆರೋಪಿಸಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿ ವೇತನ 5ಸಾವಿರ, ಹತ್ತನೇ ತರಗತಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ರೂ.25ಸಾವಿರ ನೀಡಬೇಕು, ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಅವಕಾಶ ನೀಡಬೇಕು, ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯಗಳನ್ನು ನೀಡಬೇಕು, ಸರ್ಕಾರಿ ಕಚೇರಿಯಲ್ಲಿ ದಲಿತ…

Read More

ಮಡಿಕೇರಿ NEWS DESK ಅ.3 : ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವದ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ಸಂಭ್ರಮ ಇಂದು ಆರಂಭಗೊ0ಡಿತು. ಇತಿಹಾಸ ಪ್ರಸಿದ್ಧ ನಾಲ್ಕು ಶಕ್ತಿ ದೇವತೆಗಳ ಕರಗಗಳಿಗೆ ನಗರದ ಪಂಪಿನ ಕೆರೆಯ ಬನ್ನಿ ಮಂಟಪದಲ್ಲಿ ಸಾಂಪ್ರದಾಯಿಕವಾಗಿ ವಿಶೇಷ ಪೂಜೆಯನ್ನು ಸಲ್ಲಿಸಿ ಕರಗೋತ್ಸವದ ನಗರ ಸಂಚಾರಕ್ಕೆ ಚಾಲನೆ ನೀಡಲಾಯಿತು. ಹಾಲೇರಿ ರಾಜವಂಶಸ್ಥರ ಆಳ್ವಿಕೆಯ ಕಾಲದಿಂದ ನಡೆದುಕೊಂಡು ಬಂದಿರುವ ಮಡಿಕೇರಿಯ ದಸರಾ ಉತ್ಸವಕ್ಕೆ ಒಂದೂವರೆ ಶತಮಾನದ ಭವ್ಯ ಇತಿಹಾಸವಿದೆ. ನಗರದ ನಾಲ್ಕು ಶಕ್ತಿ ದೇವತೆಗಳ ಕರಗಗಳಿಗೆ ದಸರಾ ಉತ್ಸವದಲ್ಲಿ ಅಗ್ರ ಸ್ಥಾನವನ್ನು ನೀಡಲಾಗಿದೆ. ನವರಾತ್ರಿಯ ವಿಶೇಷವಾಗಿ ಕರಗಗಳ ನಗರ ಪ್ರದಕ್ಷಿಣೆ ನಡೆಯಲಿದೆ.ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ನಗರದ ರಾಜಾಸೀಟು ಬಳಿಯ ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಕರಗವನ್ನು ಪಿ.ಪಿ.ಚಾಮಿ, ಗೌಳಿಬೀದಿಯ ಶ್ರೀಕಂಚಿಕಾಮಾಕ್ಷಿಯಮ್ಮ ದೇವಾಲಯದ ಕರಗವನ್ನು ಪಿ.ಸಿ.ಉಮೇಶ್, ಶ್ರೀದಂಡಿನ ಮಾರಿಯಮ್ಮ ದೇವಾಲಯದ ಕರಗವನ್ನು ಜಿ.ಎ.ಉಮೇಶ್ ಹಾಗೂ ಶ್ರೀಕೋಟೆ ಮಾರಿಯಮ್ಮ ದೇವಾಲಯದ ಕರಗವನ್ನು ಪಿ.ಬಿ.ಅನೀಶ್ ಕುಮಾರ್ ಹೊರುವ ಮೂಲಕ ನಗರ ಪ್ರದಕ್ಷಿಣೆಯನ್ನು ಆರಂಭಿಸಿದರು. ನವರಾತ್ರಿ ಉತ್ಸವದ ಆರಂಭದ ಹಿನ್ನೆಲೆಯಲ್ಲಿ…

Read More

ಮಡಿಕೇರಿ ಅ.3 NEWS DESK : ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) ಹಾಗೂ ವಿವಿಧ ಶಾಲಾ-ಕಾಲೇಜು ಸಹಯೋಗದೊಂದಿಗೆ ಗುರುವಾರ ಜಿಲ್ಲಾ ಕೇಂದ್ರವಾದ ಮಡಿಕೇರಿ ನಗರದಲ್ಲಿ ವನ್ಯಜೀವಿಗಳೊಂದಿಗೆ ಸಹಬಾಳ್ವೆ ಎಂಬ ಧ್ಯೇಯ ವಾಕ್ಯದೊಂದಿಗೆ 70ನೇ ವನ್ಯಜೀವಿ ಸಪ್ತಾಹ ಅಂಗವಾಗಿ ವನ್ಯಜೀವಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು “ವನ್ಯಜೀವಿ ಸಂರಕ್ಷಣೆಗಾಗಿ ಕಾಲ್ನಡಿಗೆ ಜಾಗೃತಿ ಜಾಥಾ ನಡೆಯಿತು. ಕಾಲ್ನಡಿಗೆ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ, ಪ್ರತಿಯೊಬ್ಬರೂ ನಿಸರ್ಗದ ನಿಯಮಗಳನ್ನು ಪರಿಪಾಲಿಸುವ ಮೂಲಕ ಭವಿಷ್ಯದ ದೃಷ್ಟಿಯಿಂದ ಪರಿಸರ, ಪ್ರಕೃತಿ, ಅರಣ್ಯ…

Read More

ಮಡಿಕೇರಿ ಅ.3 NEWS DESK : ಮಡಿಕೇರಿ ಕರಗ ಉತ್ಸವದೊಂದಿಗೆ ದಸರಾಗೆ ವಿದ್ಯುಕ್ತ ಚಾಲನೆ ದೊರೆಯಲಿದ್ದು, ಅ.4 ರಿಂದ 12 ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ನಡೆಯಲಿವೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಮಡಿಕೇರಿ ದಸರಾ ಸಮಿತಿ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ, ಮಡಿಕೇರಿ ದಸರಾ ಜನೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ವತಿಯಿಂದ ವಿವಿಧ ದಸರಾ ಕಾರ್ಯಕ್ರಮಗಳು ಜರುಗಲಿದೆ ಎಂದರು. ಅ.4 ರಂದು ಸಂಜೆ 6 ಗಂಟೆಗೆ ರಸಮಂಜರಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅ.5 ರಂದು ಬೆಳಗ್ಗೆ 9 ಗಂಟೆಗೆ ‘ಮಕ್ಕಳ ದಸರಾ’ ನಡೆಯಲಿದೆ. ಜೊತೆಗೆ ಸಂಜೆ 6 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಅ.6 ರಂದು ಬೆಳಗ್ಗೆ 10 ಗಂಟೆಗೆ ‘ಕಾಫಿ ದಸರಾ’ ನಡೆಯಲಿದ್ದು, ಕೃಷಿ ಸಂಬಂಧಿಸಿದ ಉಪಯುಕ್ತ ಮಾಹಿತಿ ಉಳ್ಳ ಪ್ರದರ್ಶನ ನಡೆಯಲಿದೆ. ಈ…

Read More