ಲೇಖಕ: admin

ಸೋಮವಾರಪೇಟೆ ಸೆ.4 NEWS DESK :  ರೈತ ಹೋರಾಟ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಸ್ಥಳೀಯ ಶಾಸಕರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿದ ಸಮಿತಿ ಸಿ ಮತ್ತು ಡಿ ತೆರವು ಗೊಳಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ನಂತರ ಅರಣ್ಯ ಭವನದಲ್ಲಿ ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿ ಕೊಡಗು ಜಿಲ್ಲೆಯಲ್ಲಿ ಪೈಸಾರಿ ಜಮೀನುಗಳನ್ನು ಸಿ & ಡಿ ಜಮೀನುಗಳೆಂದು ಮಾಡಿ ಅರಣ್ಯ ಇಲಾಖೆಯ ಹೆಸರಿಗೆ ವರ್ಗಾಯಿಸಿದ್ದು, ಮೀಸಲು ಅರಣ್ಯ ಎಂದು ಉದ್ಯೋಷಣೆ ಮಾಡಲು ಆದೇಶ ಹೊರಡಿಸಿರುವುದನ್ನು ರದ್ದುಪಡಿಸಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು, ಸಾಗುವಳಿಗೆ ಯೋಗ್ಯವಾದ ಎಲ್ಲಾ ಜಮೀನುಗಳಿಗೆ ನಮೂನೆ 50,53 ಹಾಗೂ 57ರ ಅರ್ಜಿಯನ್ನು ಮಾನ್ಯ ಮಾಡಿ ಮಂಜೂರಾತಿ ಮಾಡಿ ಹಕ್ಕುಪತ್ರ ನೀಡಬೇಕು, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೇ ನಡೆಸಿ ರೈತರಿಗೆ ಅನುವು ಮಾಡಿಕೊಡಬೇಕು ಎಂದು…

Read More

ಮಡಿಕೇರಿ ಸೆ.4 NEWS DESK : ಪ್ರಸಕ್ತ(2024-25) ಸಾಲಿನಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ತಿಳಿಸಿದ್ದಾರೆ. ಈ ಸಂಬಂಧ ಸೆಪ್ಟೆಂಬರ್, 05 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹಾಜರಿದ್ದು, ಪ್ರಶಸ್ತಿಯನ್ನು ಸ್ವೀಕರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು ಕೋರಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರ ಹೆಸರು: ಸೋಮವಾರಪೇಟೆ ತಾಲ್ಲುಕು ಕುಶಾಲನಗರ ಜೇನುಕಲ್ಲು ಬೆಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಂ.ಎನ್.ರಾಮೇಗೌಡ, ವಿರಾಜಪೇಟೆ ತಾಲ್ಲೂಕಿನ ಪೊನ್ನಂಪೇಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎ.ಎಸ್.ವಾಸುವರ್ಮ, ಮಡಿಕೇರಿ ತಾಲ್ಲೂಕಿನ ಚೇರಂಡೇಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೆ.ಜಿ.ಚೈತ್ರ, ಹಿರಿಯ ಪ್ರಾಥಮಿಕ ಶಾಲಾ ವಿಭಾಗ: ಸೋಮವಾರಪೇಟೆ ತಾಲ್ಲೂಕಿನ ಗೋಣಿಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಆರ್.ಸುನೀತ, ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಸರ್ಕಾರಿ ಹಿರಿಯ…

Read More

ಮಡಿಕೇರಿ ಸೆ.4 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಸಂಯುಕ್ತಾಶ್ರಯದಲ್ಲಿ ಸೆ.5 ರಂದು ಬೆಳಗ್ಗೆ 10 ಗಂಟೆಗೆ ನಗರದ ಕೊಡಗು ಗೌಡ ಸಮಾಜದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಮೈಸೂರು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ನೀಲಗಿರಿ ಎಂ.ತಳವಾರ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ…

Read More

ಮಡಿಕೇರಿ ಸೆ.4 NEWS DESK : ಮಡಿಕೇರಿ ನಗರಸಭೆಯ ಕೌನ್ಸಿಲ್ ಸಾಮಾನ್ಯ ಸಭೆಯು ಜಿಲ್ಲಾಧಿಕಾರಿಯವರು ಹಾಗೂ ನಗರಸಭೆ ಆಡಳಿತಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಸೆ.6 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.4 NEWS DESK : “ಕೈಲ್ ಪೊಳ್ದ್” ಹಬ್ಬದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನಲ್ಲಿ ಹಿರಿಯರಿಗೆ ಮೀದಿ ಇಟ್ಟು ತೋಕ್ ಪೂ ಮೂಲಕ ನಮನ ಸಲ್ಲಿಸಿತು. ಹತ್ಯೆಗೀಡಾದ ಹಿರಿಯರಿಗೆ ನರಮೇಧದ ಸ್ಮಾರಕ ಸ್ಥಳದಲ್ಲಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಪ್ರಮುಖರು ಪುಷ್ಪ ನಮನ ಸಲ್ಲಿಸಿ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯನ್ನು ಸಾಧಿಸಲು ಶಕ್ತಿಯನ್ನು ನೀಡುವಂತೆ ಪ್ರಾರ್ಥಿಸಿದರು. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು ಮತ್ತು ಎಸ್‍ಟಿ ಟ್ಯಾಗ್ ನೀಡಬೇಕು. ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಕೊಡವ ಬುಡಕಟ್ಟಿನ ಮಾತೃ ಮಣ್ಣಿನಲ್ಲಿ ಐತಿಹಾಸಿಕ ನಿರಂತರತೆಗಾಗಿ ಸಾರ್ವತ್ರಿಕ ಮನ್ನಣೆಯನ್ನು ಕಲ್ಪಿಸಬೇಕು. ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಸಾಂವಿಧಾನಿಕ ಖಾತ್ರಿ ಒದಗಿಸಬೇಕು, ಸಂವಿಧಾನದ 25 ಮತ್ತು 26 ನೇ ವಿಧಿಗಳ ಅಡಿಯಲ್ಲಿ ಕೊಡವ ಸಾಂಪ್ರದಾಯಿಕ “ಸಂಸ್ಕಾರ ಗನ್” ಹಕ್ಕಿಗೆ ಸಾಂವಿಧಾನಿಕ ಭದ್ರತೆ ನೀಡಬೇಕು. ದೇವಟ್‍ಪರಂಬ್‍ನಲ್ಲಿ ಅಂತರಾಷ್ಟ್ರೀಯ ಕೊಡವ ನರಮೇಧದ ಸ್ಮಾರಕವನ್ನು…

Read More

ಮಡಿಕೇರಿ ಸೆ.4 NEWS DESK : ಅಸಂಘಟಿತ ಕಾರ್ಮಿಕ ವರ್ಗಕ್ಕೆ ಒಳಪಡುವ ಪತ್ರಿಕಾ ವಿತರಕರಿಗೆ ಸರ್ಕಾರದಿಂದ ಸಾಮಾಜಿಕ ಭದ್ರತೆ ನೀಡುವ ಕೆಲಸ ಆಗಬೇಕೆಂದು ಕಾರ್ಮಿಕ ಮುಖಂಡ ನಾಪಂಡ ಮುತ್ತಪ್ಪ ಹೇಳಿದ್ದಾರೆ. ಕೊಡಗು ಪತ್ರಕರ್ತರ ಸಂಘ ಹಾಗೂ ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 2018ರಲ್ಲಿ ಸರ್ಕಾರ ಬಜೆಟ್‍ನಲ್ಲಿ ಪತ್ರಿಕಾ ವಿತರಕರಿಗೆ ಸುಮಾರು ರೂ.10 ಕೋಟಿ ಕ್ಷೇಮಾಭಿವೃದ್ಧಿಗೆ ಘೋಷಣೆ ಮಾಡಿತ್ತು. ಆದರೆ, ಇದು ಇಲ್ಲಿಯವರೆಗೂ ಕಾರ್ಯರೂಪಕ್ಕೆ ಬಂದಿಲ್ಲ. ಆದ್ದರಿಂದ ಸರ್ಕಾರ ಆದಷ್ಟು ಕೂಡಲೇ ಅನುದಾನವನ್ನು ನೀಡಿ ಪತ್ರಿಕಾ ವಿತರಕರಿಗೆ ನೆರವಾಗಬೇಕೆಂದು ಒತ್ತಾಯಿಸಿ, ತಾನು ಕಾರ್ಮಿಕ ಮುಖಂಡನಾಗಿ ಪತ್ರಿಕಾ ವಿತರಕರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡುವುದಾಗಿ ತಿಳಿಸಿದರು. ಪತ್ರಿಕಾ ವಿತರಕರು ಮುಂಜಾನೆಯೇ ಗಾಳಿ, ಮಳೆ, ಚಳಿ ಎನ್ನದೆ ಪತ್ರಿಕಾ ವಿತರಣೆ ಕೆಲಸವನ್ನು ಮಾಡುತ್ತಾರೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ, ಮಳೆಗಾಲ…

Read More

ಮಡಿಕೇರಿ NEWS DESK ಸೆ.4 : ಬೆಳಗಾವಿ ಜಿಲ್ಲೆಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ನೂತನ ಸಿಂಡಿಕೇಟ್ ಸಮಿತಿಯ ಸದಸ್ಯರಾಗಿ ಕೊಡಗು ಜಿಲ್ಲೆಯ ಪಾಲಿಬೆಟ್ಟದ ಡಾ.ಕಾವೇರಿ ಹೆಚ್.ಎಂ ಅವರು ಆಯ್ಕೆಯಾಗಿದ್ದಾರೆ. ಇವರಿಗೆ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅಭಿನಂದನೆ ಸಲ್ಲಿಸಿದ್ದಾರೆ.  

Read More

ಮಡಿಕೇರಿ ಸೆ.4 NEWS DESK : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರದ ನಾಗೇಗೌಡ ಬಡಾವಣೆಯ ಕಾವೇರಿ ಸ್ವ ಸಹಾಯ ಸಂಘದ ವತಿಯಿಂದ “ವಚನಗಾರ್ತಿ ಅಕ್ಕಮಹಾದೇವಿ” ಚಿಂತನಾ ಗೋಷ್ಠಿ ನಡೆಯಿತು. ಕಾರ್ಯಕ್ರಮದಲ್ಲಿ ಕುಶಾಲನಗರದ ನಿವೃತ್ತ ಪ್ರಾಂಶುಪಾಲೆ ಡಾ.ಬಿ.ಆರ್.ಶಾಂತಲಕ್ಷ್ಮಿ ಮಾತನಾಡಿ, ಅಕ್ಕಾಮಹಾದೇವಿ ರಚಿಸಿರುವ 400ಕ್ಕೂ ಹೆಚ್ಚಿನ ವಚನಗಳು ಮನುಕುಲದ ದೀವಿಗೆಗಳಾಗಿವೆ ಎಂದು ವಿಶ್ಲೇಷಿಸಿದರು. ನಿವೃತ್ತ ಶಿಕ್ಷಕಿ ಪೊನ್ನಚ್ಚನ ಲತಾ ಅಪ್ಪಣ್ಣ ಹಾಗೂ ಮುಕ್ಕಾಟಿ ಧರಣಿ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿ ಶರಣರು ಸಾರಿ ಹೋಗಿರುವ ವಚನಗಳ ಸಂದೇಶಗಳನ್ನು ಶಾಲಾ ಮಕ್ಕಳಿಗೆ ವಿವರಿಸಿ ಕಲಿಸಿದಲ್ಲಿ ಮಾತ್ರ ಸಂಸ್ಕಾರವಂತ ಸಮಾಜ ಹಾಗೂ ಶರಣರು ಬಯಸಿದ ಆದರ್ಶ ಸಮಾಜ ಕಟ್ಟಲು ಸಾಧ್ಯವಾಗುತ್ತದೆ. ಮಕ್ಕಳಿಗೆ ಎಲ್ಲಾ ತಾಯಂದಿರು ವಚನಗಳನ್ನು ಕಲಿಸಲು ಮನವಿ ಮಾಡಿದರು. ಕುಶಾಲನಗರ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ಹೇಮಲತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕದಳಿ ವೇದಿಕೆಯ ಗೌರವಾಧ್ಯಕ್ಷೆ ವಿಜಯ ಪಾಲಾಕ್ಷ, ಕೋಶಾಧಿಕಾರಿ ಜಿ.ಎಸ್.ವೇದಾವತಿ, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಕೆ.ಎಸ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕಾವೇರಿ ಸ್ವಸಹಾಯ…

Read More

ಕುಶಾಲನಗರ ಸೆ.4 NEWS DESK : ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ಜನರು ಪಿಓಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ರಾಸಾಯನಿಕ ಬಣ್ಣ ಮುಕ್ತ ಪರಿಸರ ಸ್ನೇಹಿ, ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು  ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್‌ನ ಕೊಡಗು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮ ಕುಮಾರ್ ಮನವಿ ಮಾಡಿದರು. ಸೆ.6 ಮತ್ತು 7 ರಂದು ನಡೆಯಲಿರುವ ಗೌರಿ-ಗಣೇಶೋತ್ಸವ ಆಚರಣೆ ಅಂಗವಾಗಿ ‘ನಮ್ಮ ನಡೆ ಹಸಿರೆಡೆಗೆ’ ಅಭಿಯಾನದಡಿ ‘(ಗೋ ಗ್ರೀನ್ ಕ್ಯಾಂಪೈನ್) ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ-2024 ಕುರಿತು ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿಯ ಸಹಭಾಗಿತ್ವದಲ್ಲಿ ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ. ವತಿಯಿಂದ ಕುಶಾಲನಗರ ತಾಲ್ಲೂಕಿನ…

Read More

ಮಡಿಕೇರಿ ಸೆ.4 NEWS DESK : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡಗಿನ ರೈತರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು. ನಂತರ ಕಸ್ತೂರಿ ರಂಗನ್ ವರದಿ, ಸಿ ಮತ್ತು ಡಿ ಭೂಮಿ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಯ ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭ ಹಿರಿಯ ಮುಖಂಡ ಹಾಗೂ ವಕೀಲರಾದ ಚಂದ್ರಮೌಳಿ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಜಿಲ್ಲಾ ಮುಖಂಡರುಗಳು, ರೈತ ಸಂಘದ ಮುಖಂಡಗಳು ಹಾಜರಿದ್ದರು.

Read More