ಲೇಖಕ: admin

ಕುಶಾಲನಗರ, ಅ.2 NEWS DESK :  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ , ಕುಶಾಲನಗರ ಪುರಸಭೆಯ ಕಾರ್ಯಾಲಯ ಹಾಗೂ ಕುಶಾಲನಗರ ಫಾತಿಮ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ  ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಸಹಯೋಗದೊಂದಿಗೆ  ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ 155ನೇ ವರ್ಷದ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಮತ್ತು ಸ್ವಚ್ಚತಾ ಹೀ ಸೇವಾ ಶ್ರಮದಾನ ಕಾರ್ಯಕ್ರಮ ನಡೆಯಿತು. ಫಾತಿಮ ಶಾಲಾವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶಾಲಾವರಣದಲ್ಲಿ ಅಮ್ಮನ ಹೆಸರಿನಲ್ಲಿ ಗಿಡನೆಡುವ ಮೂಲಕ ಸ್ವಚ್ಚತಾ ಆಂದೋಲನಕ್ಕೆ ಚಾಲನೆ ನೀಡಲಾಯಿತು. ಸ್ವಚ್ಚತಾ ಶ್ರಮದಾನ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಸ್ಕೌಟ್ಸ್, ಗೈಡ್ಸ್ ನ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರವೀಣ್ ದೇವರಗುಂಡ ಸೋಮಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಮ್ಮನ್ನು ಸದಾಕಾಲ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. …

Read More

ವಿರಾಜಪೇಟೆ ಅ.2 NEWS DESK : ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಬೆನಾಡಿಕ್ ಆರ್.ಸಲ್ದಾನ ಮಹಾತ್ಮ ಗಾಂಧಿ ಹಾಗೂ ಭಾರತದ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಮಾತನಾಡಿ, ಗಾಂಧೀಜಿ ನಮ್ಮ ರಾಷ್ಟ್ರಪಿತ. ಅವರ ತತ್ವ ಆದರ್ಶಗಳು ಪ್ರಸ್ತುತ ಸಮಾಜಕ್ಕೆ ಬಹು ಮುಖ್ಯ. ಅವರ ಸರಳ ಜೀವನ, ರಾಮರಾಜ್ಯ, ಗ್ರಾಮ ಸ್ವರಾಜ್ಯ ಪರಿಕಲ್ಪನೆ ಅದ್ಭುತವಾದದ್ದು, ಅವರು ಬೋಧಿಸಿದ ಕೆಲವು ತತ್ವಗಳನ್ನಾದರೂ ಇಂದಿನ ಯುವ ಸಮಾಜ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸರಳತೆಯಿಂದ ಜೀವನ ನಡೆಸಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಬೇಕೆಂದರು. ಈ ಸಂದರ್ಭ ಕಾಲೇಜಿನ ಉಪನ್ಯಾಸಕರಾದ ನಾಗರಾಜು, ಸೋಮಣ್ಣ, ನಿರ್ಮಿತ, ಕಚೇರಿ ಸಿಬ್ಬಂದಿಗಳಾದ ಸೋಮನಾಥ್, ಜಯಮ್ಮ, ಶಶಿಕಲಾ, ಸೋಮಣ್ಣ , ಸುಮತಿ, ರೇಷ್ಮ , ಎನ್.ಸಿ.ಸಿ ಅಧಿಕಾರಿ ಭೋಜಮ್ಮ, ಎನ್.ಎಸ್ .ಎಸ್ ಯೋಜನಾಧಿಕಾರಿ ಸುನಿಲ್ ಕುಮಾರ್ ಹಾಗೂ ಸ್ವಯಂಸೇವಕರು ಹಾಜರಿದ್ದರು. ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ…

Read More

ಮಡಿಕೇರಿ ಅ.2 NEWS DESK : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧೀಜಿಯವರ ಕುರಿತು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲಾ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ಈ ಮೂರು ವಿಭಾಗದಲ್ಲಿ ವಿಜೇತರಾದ ತಲಾ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ಗಣ್ಯರು ವಿತರಿಸಿದರು.

Read More

ಮಡಿಕೇರಿ ಅ.2 NEWS DESK : ಮಹಾತ್ಮ ಗಾಂಧೀಜಿಯವರು ‘ನನ್ನ ಜೀವನವೇ, ನನ್ನ ಸಂದೇಶ’ ಎಂದು ಸಾರಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಬದುಕು ಜೀವನದ ಸಂದೇಶವಾಗುವಂತೆ ಬಾಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಪ್ರತಿಪಾದಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆ, ನಗರಸಭೆ, ಸರ್ವೋದಯ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು, ಸ್ಕೌಟ್ಸ್ ಮತ್ತು ಗೈಡ್ಸ್, ಜಾನಪದ ಪರಿಷತ್ತು ಹಾಗೂ ಭಾರತೀಯ ಸೇವಾದಳದ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 155ನೇ ಮತ್ತು ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120ನೇ ಜನ್ಮ ವರ್ಷಾಚರಣೆ ಪ್ರಯುಕ್ತ ನಗರದ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನುಡಿದಂತೆ ನಡೆಯುವ ಶಿಸ್ತನ್ನು ಮಹಾತ್ಮ ಗಾಂಧೀಜಿಯವರಂತೆ ಎಲ್ಲರೂ ಜೀವನದಲ್ಲಿ ಪಾಲಿಸಬೇಕು. ಹಾಗಾಗಿ ವಿಶ್ವಸಂಸ್ಥೆ ಸೇರಿದಂತೆ ದೇಶ ವಿದೇಶಗಳಲ್ಲಿಯೂ ಸಹ…

Read More

ಮಡಿಕೇರಿ ಅ.2 NEWS DESK :  ಚೇರಂಬಾಣೆ ಕುಲಾಲ ಸಂಘ ಆಶ್ರಯದಲ್ಲಿ ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘ ಲೋಗೋ ಬಿಡುಗಡೆ,  ಸದಸ್ಯತ್ವ ಅಭಿಯಾನ ಮತ್ತು ಜನಗಣತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಸ್ಥಾಪಕ ಅಧ್ಯಕ್ಷರಾದ ಮುತ್ತಮ್ಮ ಕೋಟಿ ಸಂಘದ ನೂತನ ಲೋಗೋವನ್ನು ಬಿಡುಗಡೆಗೊಳಿಸಿ, ಸದಸ್ಯತ್ವವನ್ನು ಪಡೆದುಕೊಳ್ಳುವ ಮೂಲಕ ಸದಸ್ಯತ್ವ ಅಭಿಯಾನ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕುಲಾಲ ಕುಂಬಾರ ಸಂಘವು ಜಿಲ್ಲೆಯಲ್ಲಿ ಸದೃಢಗೊಳ್ಳುತ್ತಿದ್ದು ಸಮಾಜ ಬಾಂಧವರು ಸಂಘಟನೆಗಾಗಿ ಉತ್ಸುಕರಾಗಿದ್ದಾರೆ. ಈಗಾಗಲೇ ಯುವ ಘಟಕ ಮತ್ತು ಮಹಿಳಾ ಘಟಕವು ರಚನೆಯಾಗಿ ಸಕ್ರಿಯವಾಗಿದ್ದು, ಜಿಲ್ಲೆಯ ಕುಲಾಲ ಕುಂಬಾರ ಸಂಘಕ್ಕೆ ಬಲಬಂದoತಾಗಿದೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯತ್ವ ಪಡೆದುಕೊಳ್ಳುವ ಮೂಲಕ ಸಂಘವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಮನವಿ ಮಾಡಿದರು. ಪ್ರಸ್ತಾವಿಕ ನುಡಿಯನ್ನಾಡಿದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್ ಪ್ರಸ್ತಾವಿಕ ಮಾತನಾಡಿ, ಜಿಲ್ಲೆಯಲ್ಲಿ ಕುಲಾಲ ಕುಂಬಾರ…

Read More

ಕುಶಾಲನಗರ ಅ.2 NEWS DESK :  ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆಯ ಪ್ರಯುಕ್ತ ಕೊಡಗಿನಸೈನಿಕ ಶಾಲೆಯ ಎನ್.ಸಿ.ಸಿ ಘಟಕದ ವತಿಯಿಂದ ಕೂಡಿಗೆಯಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಎನ್‌ಸಿಸಿ ಘಟಕದ ಎಲ್ಲಾ ಅಧಿಕಾರಿಗಳು ಹಾಗೂ ಶಾಲೆಯ 560ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೈನಿಕ ಶಾಲೆಯಿಂದ ಕೂಡಿಗೆ, ಹಳೆ ಕೂಡಿಗೆ ಹಾಗೂ ಕೂಡುಮಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ ಬದಿಯಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಚಗೊಳಿಸಿದರು. ಈ ಸಂದರ್ಭಕೂಡಿಗೆ ಮತ್ತು ಕೂಡುಮಗಳೂರು ಗ್ರಾ.ಪಂ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪಾಲ್ಗೊಂಡಿದ್ದರು.

Read More

ಮಡಿಕೇರಿ NEWS DESK ಅ.2 : ಥೈಲ್ಯಾಂಡ್‌ನಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಡ್ರಗ್ ಪೆಡ್ಲರ್‌ ನನ್ನು ಬಂಧಿಸಲಾಗಿದೆ. ಇದು ಕೊಡಗು ಪೊಲೀಸರ ಯಶಸ್ವೀ ಕಾರ್ಯಾಚರಣೆಯಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

Read More

ಬೆಂಗಳೂರು NEWS DESK ಅ.2 : ಮೈಸೂರು ದಸರಾ ಹಬ್ಬದ ಆಚರಣೆಯ ವೆಚ್ಚಗಳಿಗಾಗಿ ಜಿಲ್ಲಾಧಿಕಾರಿ, ಮೈಸೂರು ಜಿಲ್ಲೆ, ಮೈಸೂರು ಇವರಿಗೆ ಬಿಡುಗಡೆ ಮಾಡಿರುವ ಅನುದಾನದ ಮಿತಿಯಲ್ಲಿಯೇ 2024-25ನೇ ಸಾಲಿನ ಮಡಿಕೇರಿ ದಸರಾ ಉತ್ಸವಕ್ಕಾಗಿ ರೂ. 1.50ಕೋಟಿ (ಒಂದು ಕೋಟಿ ಐವತ್ತು ಲಕ್ಷ ರೂಪಾಯಿ ಮಾತ್ರ) ಮತ್ತು ವಿರಾಜಪೇಟೆ ಗೋಣಿಕೊಪ್ಪ ದಸರಾ ಉತ್ಸವಕ್ಕಾಗಿ ರೂ. 75 ಲಕ್ಷ (ಎಪ್ಪತ್ತೈದು ಲಕ್ಷ ರೂಪಾಯಿ ಮಾತ್ರ) ಅನುದಾನವನ್ನು ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಷರತ್ತುಗಳಿಗೊಳಪಟ್ಟು ಭರಿಸಲು ಸರ್ಕಾರದ ಮಂಜೂರಾತಿ ನೀಡಲಾಗಿದೆ. 2024-25ನೇ ಸಾಲಿನ ಮಡಿಕೇರಿ ದಸರಾ ಉತ್ಸವಕ್ಕಾಗಿ ರೂ. 1.50ಕೋಟಿ ಮತ್ತು ವಿರಾಜಪೇಟೆ ಗೋಣಿಕೊಪ್ಪ ದಸರಾ ಉತ್ಸವಕ್ಕಾಗಿ ರೂ. 75 ಲಕ್ಷ ಅನುದಾನವನ್ನು ಜಿಲ್ಲಾಧಿಕಾರಿ, ಮೈಸೂರು ಜಿಲ್ಲೆ, ಮೈಸೂರು ಇವರು ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ವರ್ಗಾಯಿಸಲು ಆದೇಶಿಸಿದೆ.

Read More

ವಿರಾಜಪೇಟೆ ಅ.2 NEWS DESK : ವಿರಾಜಪೇಟೆ ಪುರಸಭೆಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷೆ ದೇಚಮ್ಮ ಕಾಳಪ್ಪ ಮತ್ತು ಉಪಾಧ್ಯಕ್ಷೆ ಫಸಿಯಾ ತಬ್ಸುಂ ಅವರಿಗೆ ವಿರಾಜಪೇಟೆ ‌ನಗರ ಕಾಂಗ್ರೆಸ್ ನ ಯುವ ಘಟಕದಿಂದ ಅಭಿನಂದನೆ ಸಲ್ಲಿಸಲಾಯಿತು. ವಿರಾಜಪೇಟೆ ಪುರಸಭೆಯ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿರಾಜಪೇಟೆ ನಗರ ಯುವ ಕಾಂಗ್ರೆಸ್ ಘಟಕದ  ಪ್ರಮುಖರು ಹಾಗೂ ಪದಾಧಿಕಾರಿಗಳು ಹೂಗುಚ್ಛ ನೀಡಿ ಶುಭಹಾರೈಸಿದರು. ಈ ಸಂದರ್ಭ ನಗರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸೈಯದ್ ಶಭೀರ್, ಪ್ರಮುಖರಾದ ಪಟ್ಟಡ ರಕ್ಷಿತ್ ಚೆಂಗಪ್ಪ, ಅಫ್ರೀದ್ ಮತ್ತು ನವನೀತ್ ಹಾಗೂ ಪುರಸಭೆಯ ಸದಸ್ಯರು, ಸರ್ಕಾರದ ನಾಮ ನಿರ್ದೇಶಿತ ಸದಸ್ಯರು ಹಾಜರಿದ್ದರು.

Read More

ಸುಂಟಿಕೊಪ್ಪ ಅ.2 NEWS DESK : ಶಿಸ್ತು, ಸಂಯಮ ತಾಳ್ಮೆಯನ್ನು ಮೈಗೂಡಿಸಿಕೊಂಡಲ್ಲಿ ಮಾತ್ರ ವ್ಯಕ್ತಿಯು ಉತ್ತಮವಾಗಿ ಬೆಳೆಯಲು ಸಾಧ್ಯವೆಂದು ಸುಂಟಿಕೊಪ್ಪ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ವತಿಯಿಂದ ಸುಂಟಿಕೊಪ್ಪ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ 3ನೇ ದಿನದ ಶಿಬಿರದಲ್ಲಿ ವ್ಯಕ್ತಿತ್ವ ವಿಕಸನ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು, ಸಂಯಮ ಹಾಗೂ ತಾಳ್ಮೆ ಅಳವಡಿಸಿಕೊಂಡಲ್ಲಿ ಯಶಸ್ಸು ಸಾಧ್ಯವೆಂದು ಹೇಳಿದರು. ಸೋಮವಾರಪೇಟೆ ಪುಷ್ಪಗಿರಿ ತೋಟಗಾರಿಕ ರೈತ ಉತ್ಪಾದಕರ ಸಂಸ್ಥೆ ಅಧ್ಯಕ್ಷ ಬಿ.ಜಿ.ರಮೇಶ್ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಶಾಲೆಯಲ್ಲಿ ಕಲಿಯುವುದು ಮಾತ್ರವಲ್ಲದೆ. ಹಿಂದಿನ ಕಾಲದಲ್ಲಿ ಗುರುಕುಲ ಶಿಕ್ಷಣ ಪದ್ಧತಿಯ ಪರಿವರ್ತಿತ ರೀತಿಯೇ ರಾಷ್ಟ್ರೀಯ ಸೆವಾ ಯೋಜನೆಯಾಗಿದ್ದು ಇಲ್ಲಿ ವಿದ್ಯೆಯ ಜೊತೆಗೆ ವಿದ್ಯಾರ್ಥಿಗಳು ಜೀವನದಲ್ಲಿ ಹೇಗಿರಬೇಕು ಎಂಬುದನ್ನು ಸಾಮೂಹಿಕ ಜೀವನ ಶಿಕ್ಷಣದಿಂದ ಕಲಿತುಕೊಳ್ಳಬಹುದಾಗಿದೆ. ಇಂತಹ ಅವಶ್ಯಕತೆಗಳನ್ನು ಮಕ್ಕಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಸೋಮವಾರಪೇಟೆ ತಾಲ್ಲೂಕು ಸುಂಟಿಕೊಪ್ಪ…

Read More