ಬೆಂಗಳೂರು ಅ.2 NEWS DESK : ಸ್ವಾಭಿಮಾನ-ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು. ವಿಧಾನಸೌಧ ಮುಂದಿನ ಮೆಟ್ಟಿಲುಗಳ ಬಳಿ “ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಇವರು ಎಂದರು. ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ ಅಭಿವೃದ್ಧಿಗೆ ಸರ್ಕಾರ ಸಕಲ ನೆರವನ್ನು ನೀಡುತ್ತಿದೆ. ಅಗತ್ಯ ಅನುದಾನವನ್ನೂ ನೀಡುತ್ತಿದೆ. ಇಂದು ಮಹಾತ್ಮ ಗಾಂಧಿಯವರ ಜಯಂತಿ. ಜೊತೆಗೆ ಲಾಲ್ ಬಹದ್ದೂರು ಶಾಸ್ತ್ರಿ ಅವರ ಜನುಮದಿನವೂ ಹೌದು. ಗಾಂಧಿ ನಡಿಗೆ ಮೂಲಕ ಗಾಂಧಿ ತತ್ವಾದರ್ಶಗಳು ಇವತ್ತಿನ ಯುವ ಪೀಳಿಗೆಗೆ ತಲುಪಿಸುವ ಪ್ರಯತ್ನ ಮಾಡಿದ್ದೇವೆ ಎಂದರು.…
ಲೇಖಕ: admin
ಹುಣಸೂರು NEWS DESK ಅ.2 : ಜರ್ಸಿ ತಳಿಯ ಹಸುವೊಂದು ವಿಚಿತ್ರ ಕರುವಿಗೆ ಜನ್ಮ ನೀಡಿದೆ. ಹುಣಸೂರು ತಾಲ್ಲೂಕಿನ ಹನಗೋಡು ಹೆಗ್ಗಂದೂರು ಗ್ರಾಮದ ಚಂದ್ರು ಎಂಬುವವರಿಗೆ ಸೇರಿದ ಹಸುವಿನ ಕರು ದಪ್ಪ ತಲೆಯನ್ನು ಹೊಂದಿದ್ದು, ಬಾಲವಿಲ್ಲದೆ ಜನಿಸಿದೆ. ಕರು ಆರೋಗ್ಯವಾಗಿದೆ.
ಬೆಂಗಳೂರು ಅ.2 NEWS DESK : ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನ’ದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಂಧಿ ಭವನದಿಂದ ವಿಧಾನಸೌಧದ ವರೆಗಿನ ಪಾದಯಾತ್ರೆಗೆ ಚಾಲನೆ ನೀಡಿದರು. ಬಳಿಕ ವಿಧಾನಸೌಧದ ‘ಗಾಂಧೀಜಿ ಪ್ರತಿಮೆ ಬಳಿ ಭಾವಚಿತ್ರಕ್ಕೆ ಹಾಗೂ ‘ಭಾರತದ ಮಾಜಿ ಪ್ರಧಾನಿಗಳಾದ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120ನೇ ಜನ್ಮದಿನ’ದ ಅಂಗವಾಗಿ ಅವರ ‘ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ’ ಮಾಡಿ ಗೌರವ ಸಲ್ಲಿಸಿದರು.
ಸೋಮವಾರಪೇಟೆ NEWS DESK ಅ.2 : ಕೊಡಗು ವಿಮೆನ್ಸ್ ಕಾಫಿ ಅವೇರ್‌ನೆಸ್ ಸಂಸ್ಥೆ, ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್, ಬಿಗ್ ಕಪ್ ಮಡಿಕೇರಿ, ಬೆರಿಸ್ ಅಂಡ್ ಲೀಗ್ಸ್, ಬ್ಲಾಸಮ್ ಅಗ್ರಿ ಶಾವರ್ಸ್ ಮತ್ತು ಕಾಫಿ ಬೋರ್ಡ್ ಆಫ್ ಇಂಡಿಯಾ ಇವುಗಳ ಸಹಯೋಗದೊಂದಿಗೆ ಪಟ್ಟಣದಲ್ಲಿ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಇಲ್ಲಿನ ಚಿಕ್ಕಬಸಪ್ಪ ಕ್ಲಬ್ ಮುಂಭಾಗದಲ್ಲಿ ಸಂಸ್ಥೆಯ ಮಹಿಳಾ ಕಾಫಿ ಬೆಳೆಗಾರರು 900 ಕಪ್ ಕಾಫಿಯನ್ನು ಉಚಿತವಾಗಿ ವಿತರಿಸಿದರು. ಭಾರತದ ಕಾಫಿಗೆ ಮೊದಲು ಸ್ಥಳೀಯವಾಗಿ ಮನ್ನಣೆ ದೊರಕಿಸುವ ಮೂಲಕ ಬಳಕೆದಾರರನ್ನು ಹೆಚ್ಚಿಸುವ, ಕಾಫಿ ಸೇವನೆಯನ್ನು ಉತ್ತೇಜಿಸುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಅನಿತಾ ನಂದ ಅವರು ತಿಳಿಸಿದರು. ಈ ಸಂದರ್ಭ ಸಂಸ್ಥೆಯ ಜಂಟಿ ಕಾರ್ಯದರ್ಶಿ ರಾಣಿ ನರೇಂದ್ರ ಅನುರಾಧ ವಿಕ್ರಂ, ರಾಜ್‌ಶ್ರೀ ಸದಾನಂದ್, ಪೂರ್ಣಿಮಾ ವಿರೂಪಾಕ್ಷ, ಮಾಲಾ ಮಂಜುನಾಥ್, ತನ್ಮಯಿ ಪ್ರವೀಣ್, ಅಂಪು ಮಹೇಶ್, ಜ್ಯೋತಿ ಶುಭಾಕರ್, ನಳಿನಿ ಕಾಂತ್ ಇತರರು ಇದ್ದರು.
ಮಡಿಕೇರಿ ಅ.2 : ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು ಮತ್ತು ಬಾಯ್ಲರ್‍ಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ, ವೈದ್ಯಕೀಯ ಸೇವೆ, ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಉದ್ಯೋಗದಾತರಿಗೆ, ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ನಡೆಯಿತು. ನಗರದ ಕೊಡಗು ಜಿಲ್ಲಾ ಪಂಚಾಯತಿ ಕೆಡಿಪಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಕಾರ್ಮಿಕ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಅರ್ಹ ಕಾರ್ಮಿಕರು ನೋಂದಣಿ ಮಾಡಿಸಿಕೊಂಡು ಪಡೆದುಕೊಳ್ಳಬೇಕು. ಕಾನೂನು ಸೇವಾ ಪ್ರಾಧಿಕಾರವು ಜನಸಾಮಾನ್ಯರಿಗೆ ಉಚಿತವಾಗಿ ಕಾನೂನು ಸೇವೆಗಳನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು…
ವಿರಾಜಪೇಟೆ ಅ.2 NEWS DESK : ನಗರದ ಶುಚಿತ್ವಕ್ಕೆ ಹೆಚ್ಚು ಮಹತ್ವ ನೀಡಿ ವರ್ಷದ ಎಲ್ಲಾ ದಿನಗಳು ತಮ್ಮ ಸೇವೆಯಲ್ಲಿ ತೊಡಗಿಕೊಂಡು ಜನಸೇವೆಗೆ ತಮ್ಮ ಸೇವೆಯನ್ನು ನೀಡುತ್ತಿರುವುದು ಗಮನರ್ಹವಾಗಿದೆ ಎಂದು ವಿರಾಜಪೇಟೆ ಪುರಸಭೆಯ ನೂತನ ಅಧ್ಯಕ್ಷ ದೇಚಮ್ಮ ಕಾಳಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಪುರಸಭೆ ಪೌರಕಾರ್ಮಿಕ ಸೇವಾ ಸಮಿತಿ ವತಿಯಿಂದ ವಿರಾಜಪೇಟೆ ನಗರದ ಪುರಭವನದಲ್ಲಿ ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಪೌರಕಾರ್ಮಿಕರಿಗೆ ಸನ್ಮಾನ ಮತ್ತು ವಿವಿದ ವಿವಿಧ ಆಟೋಟ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೌರಕಾರ್ಮಿಕರು ಪುರಸಭೆಯ ಒಂದು ಅಂಗ, ಪುರಸಭೆಯ ಆಡಳಿತ ವರ್ಗ ಮತ್ತು ಪೌರಕಾರ್ಮಿಕರು ಒಂದು ನಾಣ್ಯದ ಎರಡು ಮುಖಗಳಂತೆ, ನಗರದ ಶುಚಿತ್ವಕ್ಕೆ ಮಹತ್ವ ನೀಡಿದಂತೆ ತಮ್ಮ ಆರೋಗ್ಯ ಮತ್ತು ಕುಟಂಬದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತಾಗಬೇಕು. ಪೌರಕಾರ್ಮಿಕರ ಅಭಿವೃದ್ದಿಗಾಗಿ ಸರ್ಕಾರದಿಂದ ಲಭಿಸುವ ಎಲ್ಲಾ ಸೌಲಭ್ಯಗಳನ್ನು ದೊರಕಿಸಕೊಡುವಲ್ಲಿ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಕರ್ತವ್ಯದ ವೇಳೆಯಲ್ಲಿ ಸಾರ್ವಜನಿಕರೊಂದಿಗೆ ಗುರುತಿಸುವ ಕೆಲಸವಾಗಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬಾರದ…
ಕುಶಾಲನಗರ ಅ.2 NEWS DESK : ಪ್ರತಿಯೊಬ್ಬರೂ ನಮ್ಮ ಸುತ್ತಲಿನ ಪರಿಸರ ಸ್ವಚ್ಚತೆಗೆ ಜತೆಗೆ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಿಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮನವಿ ಮಾಡಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಮಂಗಳವಾರ ( ಅ.1 ರಂದು ) ಶಾಲೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ( ಎಸ್.ಎಸ್.ಎಸ್.) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಘಟಕದ ವತಿಯಿಂದ ಸ್ವಚ್ಛತೆಯೇ ಸೇವೆ : “ಸ್ವಚ್ಛತಾ ಹೀ ಸೇವಾ” ಆಂದೋಲನದ ಅಂಗವಾಗಿ ಶಾಲಾ ಮಕ್ಕಳಿಗೆ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮನೆ…
ಮಡಿಕೇರಿ ಅ.1 NEWS DESK : ಕೂರ್ಗ್ ಕಾಫಿ ವುಡ್ ಮೂವಿಸ್‍ನ ಬ್ಯಾನರ್ ಅಡಿಯಲ್ಲಿ ತಯಾರಾದ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ಬೇರ್” (The Root) ಕೊಡವ ಸಿನಿಮಾ ಅ.4 ರಂದು ವಿಶ್ವ ವಿಖ್ಯಾತ ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ. ಈಗಾಗಲೇ ಬಾಂಗ್ಲಾ ದೇಶದ ಢಾಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಲ್ರ್ಡ್ ಪ್ರೀಮಿಯರ್ ಪ್ರದರ್ಶನ ಕಂಡು ಹೆಸರು ಮಾಡಿರುವ “ಬೇರ್” (The Root) ಕೊಡವ ಸಿನಿಮಾ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗುವ ಮೂಲಕ ಸಿನಿಮಾ ರಂಗದಲ್ಲಿ ಬಹುದೊಡ್ಡ ಸಾಧನೆ ಮಾಡಿದೆ. ಇದೀಗ “ಬೇರ್” ಕೊಡವ ಸಿನಿಮಾ ಮೈಸೂರಿನ ಇನಾಕ್ಸ್ ಚಿತ್ರಮಂದಿರದಲ್ಲಿ ಶುಕ್ರವಾರ ಮಧ್ಯಾಹ್ನ 1.15ಕ್ಕೆ ಪ್ರದರ್ಶನಗೊಳ್ಳಲಿದೆ. “ಬೇರ್” (The Root) ಪ್ರಪ್ರಥಮ ಬಾರಿಗೆ ಇಂಟಲೆಕ್ಚುವಲ್ ಕೊಡವ ಸಿನಿಮಾವಾಗಿದ್ದು, ಕೆಲವೇ ಪಾತ್ರದಾರಿಗಳ ನಟನೆ ಈ ಸಿನಿಮಾದಲ್ಲಿದೆ. ತಮ್ಮದಲ್ಲದ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಆಗುವ ಅನಾಹುತಗಳ ಬಗ್ಗೆ ಬೆಳಕು ಚೆಲ್ಲಲಾಗಿದೆ. ಯುವ ಪೀಳಿಗೆಗೆ ಸಂದೇಶವನ್ನು ನೀಡುವ ವಿಭಿನ್ನ ಕಥಾಹಂದರವನ್ನು ಹೊಂದಿದೆ. ಚಿತ್ರದಲ್ಲಿ ನಿರ್ದೇಶಕ ಕೊಟ್ಟುಕತ್ತೀರ…
ಮಡಿಕೇರಿ ಅ.1 NEWS DESK : ಯುವ ದಸರಾ ನೃತ್ಯ ಸ್ಪರ್ಧೆಗೆ ತಂಡಗಳನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿದೆ. ಆಯ್ಕೆಯಾದ ತಂಡಗಳ ದಸರಾ ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿದೆ. ಯುವ ದಸರಾ ನೃತ್ಯ ಸ್ಪರ್ಧೆಗೆ ನಿಯಮಗಳು ಇಂತಿವೆ. ಸ್ಪರ್ಧೆಯ ನೀತಿ ನಿಯಮಗಳನ್ನು ಎಲ್ಲಾ ತಂಡಗಳು ಕಡ್ಡಾಯವಾಗಿ ಪಾಲಿಸಬೇಕು. ಶಾಸ್ತ್ರೀಯ ನೃತ್ಯ ಪ್ರಕಾರ ಹೊರತುಪಡಿಸಿ ಇತರ ಯಾವುದೇ ಪ್ರಕಾರವನ್ನು ಆಯ್ದುಕೊಳ್ಳಬಹುದು. ಸ್ಪರ್ಧೆಗೆ ವಯೋಮಿತಿಯ ನಿಬರ್ಂಧವಿಲ್ಲ. ತಂಡದಲ್ಲಿ ಕನಿಷ್ಠ 10 ಮಂದಿ ಗರಿಷ್ಠ 30 ಮಂದಿ ಕಲಾವಿದರು ಇರಬೇಕು. ನೃತ್ಯಗಳು ಪರಿಕಲ್ಪನೆ/ ತೊಡುಗೆಗಳು ಸಭ್ಯವಾಗಿರಬೇಕು ಹಾಗೂ ಯಾರ ನಂಬಿಕೆಗಳಿಗೂ ನೋವನ್ನುಂಟು ಮಾಡುವಂತಿರಬಾರದು. ಕಾಲಾವಧಿ 8+2 ನಿಮಿಷಗಳು. ಬೆಂಕಿ ಬಣ್ಣ ನೀರು ಸೇರಿದಂತೆ ವೇದಿಕೆಗೆ ಹಾನಿ ಉಂಟು ಮಾಡುವ ಯಾವುದೇ ಪರಿಕರಗಳನ್ನು ಬಳಸುತ್ತಿಲ್ಲ. ತೀರ್ಪುಗಾರರ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕು.






